Author: kannadanewsnow09

ನವದೆಹಲಿ: ಇಂದು ಬಳಕೆದಾರರು twitter.com ಭೇಟಿ ನೀಡಿದಾಗ, ಅವರನ್ನು x.com ಗೆ ಮರುನಿರ್ದೇಶಿಸಲಾಯಿತು. ಪಾಪ್-ಅಪ್ ಅಧಿಸೂಚನೆಯು ಬ್ರೌಸರ್ಗಳ ಮೂಲಕ ಮೈಕ್ರೋಬ್ಲಾಗಿಂಗ್ ಸೈಟ್ ಅನ್ನು ಪ್ರವೇಶಿಸುವವರನ್ನು ಸ್ವಾಗತಿಸಿತು. “x.com ಗೆ ಸ್ವಾಗತ! ನಾವು ನಮ್ಮ URL ಅನ್ನು ಬದಲಾಯಿಸುತ್ತಿದ್ದೇವೆ ಎಂದು ನಾವು ನಿಮಗೆ ತಿಳಿಸುತ್ತಿದ್ದೇವೆ. ಆದರೆ ನಿಮ್ಮ ಗೌಪ್ಯತೆ ಮತ್ತು ಡೇಟಾ ಸಂರಕ್ಷಣಾ ಸೆಟ್ಟಿಂಗ್ ಗಳು ಒಂದೇ ಆಗಿರುತ್ತವೆ ಎಂದಿತು. ಟೆಸ್ಲಾ ಸಿಇಒ ಎಲೋನ್ ಮಸ್ಕ್ ಮತ್ತು ಅವರ ಭದ್ರತಾ ವಿವರಗಳು ಜನವರಿ 27, 2023 ರಂದು ಯುಎಸ್ನ ವಾಷಿಂಗ್ಟನ್ನಲ್ಲಿರುವ ಕಂಪನಿಯ ಸ್ಥಳೀಯ ಕಚೇರಿಯಿಂದ ಹೊರಹೋಗುತ್ತವೆ. ಮೂರು ಗಂಟೆಗಳ ಹಿಂದೆ ಎಕ್ಸ್ನಲ್ಲಿ ಪೋಸ್ಟ್ ಮಾಡಿದ ಎಲೋನ್ ಮಸ್ಕ್, ಈ ಹಿಂದೆ ಟ್ವಿಟರ್ ಎಂದು ಕರೆಯಲ್ಪಡುತ್ತಿದ್ದ ಸಾಮಾಜಿಕ ನೆಟ್ವರ್ಕ್ ಸಂಪೂರ್ಣವಾಗಿ X.com ಬದಲಾಗಿದೆ ಎಂದು ಹಂಚಿಕೊಂಡಿದ್ದಾರೆ. “ಎಲ್ಲಾ ಪ್ರಮುಖ ವ್ಯವಸ್ಥೆಗಳು ಈಗ X.com ನಲ್ಲಿವೆ” ಎಂದು ಅವರು ಬರೆದಿದ್ದಾರೆ. https://x.com/elonmusk/status/1791351500217754008 ಟೆಸ್ಲಾ, ಸ್ಪೇಸ್ಎಕ್ಸ್ ಮತ್ತು ಇತರ ಕಂಪನಿಗಳ ಬಿಲಿಯನೇರ್ ಮುಖ್ಯಸ್ಥರು 2022 ರ ಕೊನೆಯಲ್ಲಿ…

Read More

ಬೆಂಗಳೂರು: ಅತ್ಯಂತ ವೈಜ್ಞಾನಿಕವಾಗಿ ರೂಪುಗೊಂಡ ರಾಷ್ಟ್ರೀಯ ಶಿಕ್ಷಣ ನೀತಿಗೆ (ಎನ್‍ಇಪಿ) ರಾಜಕೀಯ ಮೇಲಾಟದ ಕಾರಣ ತಿಲಾಂಜಲಿ ಕೊಟ್ಟು, ರಾಜ್ಯ ಶಿಕ್ಷಣ ನೀತಿ ಜಾರಿಗೊಳಿಸುವುದಾಗಿ ತಿಳಿಸಿದ ಈ ರಾಜ್ಯ ಸರಕಾರ ಇವತ್ತಿನವರೆಗೂ ಯಾವುದೇ ಪ್ರಗತಿಯನ್ನು ಮಾಡದೆ ಇರುವುದು ಒಂದು ಸಾಧನೆ ಎಂದು ಶಾಸಕ ಎಸ್. ಸುರೇಶ್ ಕುಮಾರ್ ಅವರು ವಿಶ್ಲೇಷಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಸರಕಾರವು ಕಳೆದ ಒಂದು ವರ್ಷದ ಅವಧಿಯಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ನೀಡಿದ ಕೊಡುಗೆಗಳನ್ನು ಮುಂದಿಡುವುದಾಗಿ ತಿಳಿಸಿದರು. ಈ ಸರಕಾರವು ವಿಶೇಷವಾಗಿ ಪದವಿ ತರಗತಿಗಳಲ್ಲಿ, ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಜೊತೆ ಚೆಲ್ಲಾಟ ಆಡುತ್ತಿದೆ ಎಂದು ಆಕ್ಷೇಪಿಸಿದರು. ಪ್ರಾಥಮಿಕ, ಪ್ರೌಢ ಶಾಲಾ ವಿದ್ಯಾರ್ಥಿಗಳ ಭವಿಷ್ಯವನ್ನೇ ಮಸಕು ಮಾಡುತ್ತಿದೆ ಈ ಸರಕಾರ ಎಂದು ಟೀಕಿಸಿದ ಅವರು, ನಮ್ಮಲ್ಲಿ ಸಿಬಿಎಸ್‍ಇ, ಐಸಿಎಸ್‍ಇ ಸೇರಿದಂತೆ ಕೇಂದ್ರ ಪಠ್ಯಕ್ರಮದ ಶಾಲೆಗಳು, ಜೊತೆಗೆ ಸ್ವಾಯತ್ತ ವಿಶ್ವವಿದ್ಯಾಲಯಗಳು ಇವೆ. ಆ ವಿದ್ಯಾರ್ಥಿಗಳಿಗೆ ಒಂದು ನೀತಿಯಾದರೆ, ಸರಕಾರಿ ಶಾಲೆಗೆ…

Read More

ಶಿವಮೊಗ್ಗ: ಜಿಲ್ಲೆಯಲ್ಲಿ ವಿವಿಧ ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ, ಮೇ.18ರ ನಾಳೆ, ಮೇ.19ರ ನಾಡಿದ್ದು, ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಮೇ.18ರ ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಈ ಬಗ್ಗೆ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕುಂಸಿ ಮೆಸ್ಕಾಂ ಶಾಖಾ ವ್ಯಾಪ್ತಿಯಲ್ಲಿ ಕಂಬಗಳನ್ನು ಅಳವಡಿಸುವ ಕಾಮಗಾರಿ ಇರುವುದರಿಂದ ಮೇ 18 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಈ ವ್ಯಾಪ್ತಿಯ ರೈಲ್ವೇ ಸ್ಟೇಷನ್ ಪರಿವರ್ತಕ, ಶನೇಶ್ವರ ಪರಿವರ್ತಕ, ಸೋಮಶೆಟ್ಟಿ ಕೊಪ್ಪ, ದೊಡ್ಡಕೇರಿ, ಚೆಲವಾದಿಕೇರಿ, ಮೇಕನಹಳ್ಳಿ ದಿಬ್ಬ, ಶುಭರಕೇರಿ, ಮಾವಿನಕೇರಿ, ಏಕೆ ಕಾಲೋನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಮೇ.19ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಎಂ.ಆರ್.ಎಸ್. ಶಿವಮೊಗ್ಗದ 110/11 ಕೆವಿ ವಿವಿ ಕೇಂದ್ರದಲ್ಲಿ ಹೆಚ್ಚುವರಿ ಪರಿವರ್ತಕ ಅಳವಡಿಸುವ ಕಾಮಗಾರಿ ಇರುವುದರಿಂದ ಮೇ 19 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಎಂ.ಆರ್.ಎಸ್. ಎಫ್-3 ಫೀಡರ್ ಚಿಕ್ಕಲ್ಲು,…

Read More

ಬೆಂಗಳೂರು: ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ನೀಡುತ್ತಿರುವಂತ ಗ್ರೇಸ್ ಮಾರ್ಕ್ ಅನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ರದ್ದು ಮಾಡುವಂತೆ ಸಿಎಂ ಸಿದ್ಧರಾಮಯ್ಯ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆಗೆ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ 20 ಗ್ರೇಸ್ ಮಾರ್ಕ್ಸ್ ನೀಡಿದ್ದರ ಬಗ್ಗೆ ಆಕ್ಷೇಪ ವ್ಯಕ್ತವಾಗಿರುವ ಬಗ್ಗೆ ಚರ್ಚೆ ನಡೆಯಿತು. ಈ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಯಾವ ಕಾರಣ ಮತ್ತು ಉದ್ದೇಶದಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ 20 ಗ್ರೇಸ್ ಮಾರ್ಕ್ಸ್ ನೀಡಿದ್ದೀರಿ? ಗ್ರೇಸ್ ಮಾರ್ಕ್ಸ್ ನೀಡಲು ಯಾರು ಹೇಳಿದ್ದು ಎಂಬುದಾಗಿ ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಡಿಸಿಎಂ ಮಾತಿಗೆ ಸಿಎಂ ಸಿದ್ಧರಾಮಯ್ಯ ಕೂಡ ಸಹಮತ ವ್ಯಕ್ತ ಪಡಿಸಿದರು. ವಿದ್ಯಾರ್ಥಿಗಳು ಅವರ ಅರ್ಹತೆ ಆಧಾರದಲ್ಲಿ ಪ್ರಗತಿ ಸಾಧಿಸಬೇಕು. ಗ್ರೇಸ್…

Read More

ಮೈಸೂರು: ವಿಧಾನಪರಿಷತ್ತಿನ ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕೆ.ಕೆ ಮಂಜುನಾಥ್ ಅವರು ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ. ವಿಧಾನ ಪರಿಷತ್ತಿನ ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಜೂನ್.3ರಂದು ಮತದಾನ ನಡೆಯಲಿದೆ. ಈ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಕೆ.ಕೆ ಮಂಜುನಾಥ್ ಕುಮಾರ್ ಗುರುವಾರದಂದು ಮೈಸೂರಿನ ಪ್ರಾದೇಶಿಕ ಕಚೇರಿಯಲ್ಲಿ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ಈ ವೇಳೆ ಮಾತನಾಡಿದಂತ ಅವರು ಶಿಕ್ಷಕರ ಕ್ಷೇತ್ರಕ್ಕೆ ಶಿಕ್ಷಕರೇ ಆಯ್ಕೆಯಾಗುವ ಮೂಲಕ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಬೇಕಿದೆ. ಕಳೆದ ಅವಧಿಯಲ್ಲಿ ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಜನಪ್ರತಿನಿಧಿಗಳು ಶಿಕ್ಷಕರ ಹಿತ ಕಾಯದೇ ಸ್ವಹಿತ ಮೆರೆದಿದ್ದಾರೆ. ಈ ಬಾರಿ ಕ್ಷೇತ್ರದ ಶಿಕ್ಷಕರು ನನ್ನನ್ನು ಚುನಾಯಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತ ಪಡಿಸಿದರು. ಈ ಸಂದರ್ಭದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಚಿಕ್ಕಮಗಳೂರು ಶಾಸಕ ಡಿ.ಸಿ ತಮ್ಮಯ್ಯ, ಹೊನ್ನಾಳಿ ಶಾಸಕ ಶಾಂತಗೌಡ, ಎಂಎಲ್ಸಿ ಮಂಜುನಾಥ ಭಂಡಾರಿ, ಮಾಜಿ ಎಂಎಲ್ಸಿ ಪ್ರಸನ್ನ ಕುಮಾರ್ ಹಾಗೂ ಪಕ್ಷದ ಇತರೆ ಕಾರ್ಯಕರ್ತರು ಹಾಜರಿದ್ದರು.…

Read More

ಈ ಜಗತ್ತಿನಲ್ಲಿ ಹುಟ್ಟಿದ ಪ್ರತಿಯೊಂದು ಜೀವಿಯೂ ಒಳ್ಳೆಯದಾಗಬೇಕೆಂದು ಬಯಸುತ್ತದೆ. ಅರೆ-ಭಾವದಿಂದ ಅರೆ-ಚೇತನದವರೆಗೆ ಎಲ್ಲಾ ಜೀವಿಗಳಿಗೂ ಇದು ಸಾಮಾನ್ಯವಾಗಿದೆ. ಇದರಲ್ಲಿ ಮನುಷ್ಯರಾಗಿ ಹುಟ್ಟಿದವರು ತಾವು ಮಾತ್ರವಲ್ಲ ತಮ್ಮ ಕುಟುಂಬವೂ ಚೆನ್ನಾಗಿರಲಿ ಎಂದು ಹಾರೈಸುತ್ತಾರೆ. ಆ ಆಸೆಯಿಂದ ಶಕ್ತಿ ಮೀರಿ ಸಾಲ ಮಾಡಿ ಸಂಕಷ್ಟಕ್ಕೆ ಸಿಲುಕುತ್ತಾರೆ. ಇಂತಹ ಸಮಸ್ಯೆ ಇರುವವರು ಯಾವುದೇ ಪೂಜಾ ಪದ್ಧತಿಯನ್ನು ಅನುಸರಿಸಿದರೆ ಸಾಲದ ಸಮಸ್ಯೆಯಿಂದ ಹೊರಬರಬಹುದು ಎಂಬುದನ್ನು ನಾವು ಈ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ ನೋಡಲಿದ್ದೇವೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ,…

Read More

ಬೆಂಗಳೂರು: ಶಿಕ್ಷಣ ಇಲಾಖೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-1ರಲ್ಲಿ ವಿದ್ಯಾರ್ಥಿಗಳಿಗೆ 20 ಗ್ರೇಸ್ ಮಾರ್ಕ್ಸ್ ಕೊಡಲಾಗಿತ್ತು. ಈ ಮೂಲಕ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗಿತ್ತು. ಇದಕ್ಕೆ ಆಕ್ಷೇಪ ವ್ಯಕ್ತವಾದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ನಿರ್ಧಾರವನ್ನು ಹಿಂಪಡೆದಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆಗೆ ವಿಧಾನಸೌಧದಲ್ಲಿ ಮಹತ್ವದ ಸಭೆ ನಡೆಯಿತು. ಇಂದಿನ ಸಿಎಂ ನೇತೃತ್ವದ ಸಭೆಯಲ್ಲಿ 20 ಗ್ರೇಸ್ ಮಾರ್ಕ್ಸ್ ಅನ್ನು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನೀಡಿರುವುದಕ್ಕೆ ಆಕ್ಷೇಪ ವ್ಯಕ್ತ ಪಡಿಸಿದರು. ಅಲ್ಲದೇ ಇದರಿಂದ ವಿದ್ಯಾರ್ಥಿಗಳ ಸ್ಪರ್ಧಾ ಸಾಮರ್ಥ್ಯ ಕಡಿಮೆ ಆಗುತ್ತದೆ. ಈ ನಿರ್ಧಾರದಿಂದ ಅನೇಕ ವಿದ್ಯಾರ್ಥಿಗಳ ಭವಿಷ್ಯಕ್ಕೂ ತೊಂದರೆ ಆಗಲಿದೆ ಎಂಬುದರ ಬಗ್ಗೆ ಚರ್ಚೆ ನಡೆಸಲಾಯಿತು. ಅಂತಿಮವಾಗಿ ಇಂದಿನ ಸಿಎಂ ಸಿದ್ಧರಾಮಯ್ಯ ನೇತೃತ್ವದ ಶಿಕ್ಷಣ ಇಲಾಖೆಯ ಸಭೆಯಲ್ಲಿ ಮುಂದಿನ ವರ್ಷದಿಂದ ಎಸ್…

Read More

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ೋಷಣೆ ಮಾಡುವ ಮೂಲಕ ಬೇಡಿಕೆ ಈಡೇರಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲೂೃಜೆ ಅಭಿನಂದನೆ ಸಲ್ಲಿಸಿದೆ. ಗುರುವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರ ನೇತೃತ್ವದಲ್ಲಿ ವಿವಿಧ ಜಿಲ್ಲೆಗಳ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯ ಕಾರ್ಯಕಾರಿಣಿ ಸದಸ್ಯರುಗಳನ್ನೊಳಗೊಂಡ ನಿಯೋಗ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಭೇಟಿ ಮಾಡಿ ಧನ್ಯವಾದ ತಿಳಿಸಿತು. ಬಹು ವರ್ಷಗಳ ಬೇಡಿಕೆಯಾಗಿದ್ದ ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ನೀಡುವ ಸಂಬಂಧ ಇತ್ತಿಚೆಗೆ ದಾವಣಗೆರೆಯಲ್ಲಿ ನಡೆದ 38ನೇ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಾತು ಕೊಟ್ಟಂತೆ ನಡೆದುಕೊಂಡಿರುವುದನ್ನು ನೆನಪಿಸಿದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ರಾಜ್ಯದ ಸಾವಿರಾರು ಗ್ರಾಮೀಣ ಪತ್ರಕರ್ತರಿಗೆ ಇದರಿಂದ ಅನುಕುಲ ಆಗಲಿದ್ದು, ನಿಮ್ಮ ಈ ಉದಾರತೆಗೆ ಪತ್ರಕರ್ತರ ಸಂಘ ಸದಾ ಚಿರರುಣಿಯಾಗಿರುತ್ತದೆ ಎಂದರು. ಇದಕ್ಕೆ ಮುಖ್ಯಮಂತ್ರಿಗಳು ನಗುತ್ತಲೇ ಕೈ…

Read More

ಚಿತ್ರದುರ್ಗ: ರಾಜ್ಯದ ಜನರೇ ಬೆಚ್ಚಿ ಬೀಳುವಂತ ಘಟನೆ ಜಿಲ್ಲೆಯಲ್ಲಿ ನಡೆದಿತ್ತು. ಅದೇ ಪಾಳು ಬಿದ್ದ ಮನೆಯಲ್ಲಿ ಒಂದೇ ಕುಟುಂಬದ ಐವರು ಅಸ್ಥಿಪಂಜರದ ರೂಪದಲ್ಲಿ ಪತ್ತೆಯಾಗಿದ್ದರು. ಈ ಕೇಸ್ ಗೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಎಫ್ಎಸ್ಎಲ್ ವರದಿಯಲ್ಲಿ ಸಾವಿನ ರಹಸ್ಯ ಬಯಲಾಗಿದೆ. ಅದು ಏನು ಅಂತ ಮುಂದೆ ಓದಿ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಗೇಟ್ ಬಳಿಯ ಪಾಳು ಬಿದ್ದ ಮನೆಯಲ್ಲಿ 2023 ಡಿಸೆಂಬರ್ 28ರಂದು ಒಂದೇ ಕುಟುಂಬದ ಐವರು ಅಸ್ತಿಪಂಜರದ ರೂಪದಲ್ಲಿ ಪತ್ತೆಯಾಗಿದ್ದರು. ಜಗನ್ನಾಥರೆಡ್ಡಿ ಕುಟುಂಬದ ಐವರ ಮೃತದೇಹ ಹಿಂದೆ ಹಲವು ಅನುಮಾನಗಳು ಕಾಡುತ್ತಿದ್ದವು. ಈಗ ಆ ಅನುಮಾನಗಳಿಗೆ ತೆರೆ ಬಿದ್ದಿದೆ. ಪೊಲೀಸರಿಗೆ ಎಫ್ಎಸ್ಎಲ್ ವರದಿಯು ಕೈ ಸೇರಿದೆ. ಈ ಬಗ್ಗೆ ಮಾಹಿತಿ ನೀಡಿದಂತ ಚಿತ್ರದುರ್ಗ ಎಸ್ಪಿ ಧರ್ಮೇಂದ್ರ ಕುಮಾರ್ ಮೀನಾ ಚಳ್ಳಕೆರೆ ಗೇಟ್ ಬಳಿಯ ಪಾಳುಮನೆಯಲ್ಲಿ ಸಿಕ್ಕಂತ ಒಂದೇ ಕುಟುಂಬದ ಐವರು ಅಸ್ತಿಪಂಜರಗಳನ್ನು ಎಫ್ಎಸ್ಎಲ್ ತನಿಖೆಗೆ ಕಳುಹಿಸಲಾಗಿತ್ತು. ಐವರ ಮೃತದೇಹದಲ್ಲಿ ಬಹುತೇಕ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರೋದಾಗಿ ತಿಳಿದು ಬಂದಿದೆ.…

Read More

ಬೆಳಗಾವಿ: ಜಿಲ್ಲೆಯಲ್ಲಿ ಚಾಲುಕ್ಯ ಎಕ್ಸ್ ಪ್ರೆಸ್ ರೈಲಿನಲ್ಲಿ ಟಿಕೆಟ್ ತೋರಿಸಿ ಅಂತ ಕೇಳಿದ್ದಕ್ಕೆ ಮುಸುಕುಧಾರಿಯೊಬ್ಬ ಚಾಕುವಿನಿಂದ ಐವರಿಗೆ ಇರಿದು ಪರಾರಿಯಾಗಿದ್ದಾನೆ. ಈ ಘಟನೆಯಲ್ಲಿ ಓರ್ವ ಸಾನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳಗಾವಿಯ ಖಾನಾಪುರ ತಾಲೂಕಿನ ಲೊಂಡ ಬಳಿಯಲ್ಲಿ ಪಾಂಡಿಚೇರಿ-ಮುಂಬೈ ಎಕ್ಸ್ ಪ್ರೆಸ್ ರೈಲಿನಲ್ಲಿ ಈ ಘಟನೆ ನಡೆದಿದೆ. ಟಿಕೆಟ್ ಕೇಳಿದಂತ ಟಿಸಿ ಮೇಲೆ ಚಾಕುವಿನಿಂದ ಹಲ್ಲೆಗೆ ಮುಸುಕುಧಾರಿಯೊಬ್ಬ ಮುಂದಾದನು. ಇದನ್ನು ತಡೆಯೋದಕ್ಕೆ ಟ್ರೇನ್ ಅಟೆಂಡರ್ ದೇವಋಷಿ ವರ್ಮಾ ಮುಂದಾಗಿದ್ದಾನೆ. ಈ ವೇಳೆ ಮುಸುಕುಧಾರಿಯೊಬ್ಬ ಆತನ ಮೇಲೆ ಚಾಕುವಿನಿಂದ ಇರಿದಿದ್ದಾನೆ. ಇದಲ್ಲದೇ ರೈಲಿನಲ್ಲಿದ್ದಂತ ನಾಲ್ವರು ಪ್ರಯಾಣಿಕರು ಈ ಘಟನೆಯಿಂದ ಮುಸುಕುಧಾರಿಯನ್ನು ಹಿಡಿಯೋದಕ್ಕೆ ಹೋದಾಗ ಅವರ ಮೇಲೂ ಚಾಕುವಿನಿಂದ ದಾಳಿ ನಡೆಸಿ, ಪರಾರಿಯಾಗಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದಂತ ಟ್ರೈನ್ ಅಟೆಂಡರ್ ದೇವಋಷಿ ವರ್ಮಾ(23) ತೀವ್ರ ರಕ್ತ ಸ್ತ್ರಾವದಿಂದ ಸಾವನ್ನಪ್ಪಿದ್ದಾನೆ. ಈ ಘಟನೆಯಲ್ಲಿ ಗಾಯಗೊಂಡಿದ್ದಂತ ನಾಲ್ವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಾಲುಕ್ಯ ರೈಲು ಧಾರವಾಡದಿಂದ ಬೆಳಗಾವಿಯತ್ತ ಬರುತ್ತಿದ್ದ ವೇಳೆ ಘಟನೆ ನಡೆದಿದೆ. ಚಿಂತಾಜನಕ ಸ್ಥಿತಿಯಲ್ಲಿರುವ ನಾಲ್ವರಿಗೆ ತೀವ್ರ…

Read More