Author: kannadanewsnow09

ಬೆಂಗಳೂರು: ಕೆಇಎಯಿಂದ ಕರ್ನಾಟಕ ವಿದ್ಯುತ್ ನಿಗಮದಿಂದ 622 ಹುದ್ದೆಗಳ ನೇಮಕಾತಿಯ ತಾತ್ಕಾಲಿಕ ಅಂಕಪಟ್ಟಿ ಹಾಗೂ ಕರ್ನಾಟಕ ಹಣಕಾಸು ಸಂಸ್ಥೆಯಲ್ಲಿ ಖಾಲಿ ಇದ್ದಂತ 44 ಹುದ್ದೆಗಳ ಅಂತಿಮ ಅಂಕಪಟ್ಟಿಯನ್ನು ಪ್ರಕಟಿಸಲಾಗಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮಾಹಿತಿ ಬಿಡುಗಡೆ ಮಾಡಿದ್ದು, ಕರ್ನಾಟಕ ವಿದ್ಯುತ್ ನಿಗಮ ನಿಯಮಿತದಲ್ಲಿ ಖಾಲಿ ಇರುವ ಎಇ, ಜೆಇ (ವಿವಿಧ ವಿಭಾಗಗಳಲ್ಲಿನ), ಕೆಮಿಸ್ಟ್ ಮತ್ತು ಕೆಮಿಕಲ್ ಸೂಪರ್‌ವೈಸರ್‌ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪ್ರಾಧಿಕಾರದಿಂದ ಸ್ಪರ್ಧಾತ್ಮಕ ಪರೀಕ್ಷೆಯನ್ನು ಎರಡು ಅವಧಿಗಳಲ್ಲಿ ದಿನಾಂಕ 18-02-2024 ರಂದು ನಡೆಸಲಾಗಿದೆ ಎಂದಿದೆ. ಸದರಿ ಪರೀಕ್ಷೆಯ ಅಂತಿಮ ಉತ್ತರಗಳನ್ನು 17-04-2024 ರಂದು ಪ್ರಕಟಿಸಲಾಗಿದೆ. ಪ್ರಸ್ತುತ ಹುದ್ದೆವಾರು ತಾತ್ಕಾಲಿಕ ಅಂಕಪಟ್ಟಿಯನ್ನು ಪ್ರಾಧಿಕಾದ http://kea.kar.nic.in ವೆಬ್‌ಸೈಟಿನಲ್ಲಿ ದಿನಾಂಕ 08-05-2024 ರಂದು ಪ್ರಕಟಿಸಲಾಗಿದೆ. ಕಳೆದ ಬಾರಿ ನಡೆಸಿದ ಪರೀಕ್ಷೆಯಲ್ಲಿ ಕೆಪಿಸಿಎಲ್ ಸಂಸ್ಥೆಯು ಸೂಚಿಸಿರುವಂತೆ, ಪ್ರತಿ ತಪ್ಪು ಉತ್ತರಕ್ಕೆ 1/3 ರಷ್ಟು ನಕಾರಾತ್ಮಕ ಅಂಕವನ್ನು ಕಡಿತಗೊಳಿಸಲಾಗಿದೆ ಎಂದಿದೆ. ಪ್ರಚುರಪಡಿಸಿರುವ ಅಂಕಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ 15-05-2024 ರೊಳಗೆ ಇ-ಮೇಲ್ ವಿಳಾಸ kea2023exam@gmail.com…

Read More

ಬೆಂಗಳೂರು: ಸಾರ್ವಜನಿಕ ವಿಶ್ವವಿದ್ಯಾಲಯಗಳು ಮತ್ತು ಸಂಯೋಜಿತ ಕಾಲೇಜುಗಳಲ್ಲಿ ನಾಲ್ಕು ವರ್ಷಗಳ ಪದವಿ ಕಾರ್ಯಕ್ರಮವನ್ನು ಶಿಫಾರಸು ಮಾಡಿದ ಎನ್ಇಪಿ (National Education Policy-NEP) 2020 ಅನ್ನು ಕರ್ನಾಟಕ ಸರ್ಕಾರ ಬುಧವಾರ ರದ್ದುಗೊಳಿಸಿದೆ. 2024-25ರ ಶೈಕ್ಷಣಿಕ ವರ್ಷಕ್ಕೆ ಮೂರು ವರ್ಷಗಳ ಪದವಿ ಕಾರ್ಯಕ್ರಮವನ್ನು (ನಾಲ್ಕನೇ ವರ್ಷದ ಆಯ್ಕೆಯಿಲ್ಲದೆ) ಮತ್ತೆ ಪರಿಚಯಿಸಿದೆ. ಎನ್ಇಪಿ ಪ್ರಕಾರ ನಾಲ್ಕು ವರ್ಷಗಳ ಪದವಿ ಕಾರ್ಯಕ್ರಮವನ್ನು ಮುಂದುವರಿಸುವಲ್ಲಿ ಸ್ಪಷ್ಟತೆಯ ಕೊರತೆಯ ಬಗ್ಗೆ ವಿದ್ಯಾರ್ಥಿಗಳು ಮತ್ತು ಕಾಲೇಜುಗಳು ಕಳವಳ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಹೊಸ ಬದಲಾವಣೆ ಮಾಡಲಾಗಿದೆ. ಪ್ರೊಫೆಸರ್ ಸುಖದೇವ್ ಥೋರಟ್ ನೇತೃತ್ವದ ರಾಜ್ಯ ಶಿಕ್ಷಣ ನೀತಿ ಆಯೋಗ ಮಾಡಿದ ಶಿಫಾರಸುಗಳನ್ನು ಪರಿಗಣಿಸಿ ಬುಧವಾರ ರಾಜ್ಯ ಸರ್ಕಾರ ಆದೇಶ ಹೊರಡಿಸಲಾಗಿದೆ. ಆಯೋಗವು ಸರ್ಕಾರಕ್ಕೆ ಸಲ್ಲಿಸಿದ ತನ್ನ ಮೊದಲ ಮಧ್ಯಂತರ ವರದಿಯಲ್ಲಿ ಪದವಿ ಕಾರ್ಯಕ್ರಮದ ಅವಧಿ (ಮೂರು ವರ್ಷಗಳು ಅಥವಾ ನಾಲ್ಕು ವರ್ಷಗಳು), ಪಠ್ಯಕ್ರಮ ರಚನೆ ಮತ್ತು ಬಹುಶಿಸ್ತೀಯ ಪಠ್ಯಕ್ರಮ (2024-25 ಎವೈನಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ) ಮತ್ತು ಪ್ರಮಾಣಪತ್ರದೊಂದಿಗೆ ಬಹು ಪ್ರವೇಶ ಮತ್ತು ನಿರ್ಗಮನ…

Read More

ಪಾದಚಾರಿ ಮಾರ್ಗದಲ್ಲಿ ವಾಸಿಸುವ ವ್ಯಕ್ತಿಯಿಂದ ಹಿಡಿದು ಬಂಗಲೆಯಲ್ಲಿ ವಾಸಿಸುವ ಶ್ರೀಮಂತ ಉದ್ಯಮಿಯವರೆಗೆ ಎಲ್ಲರಿಗೂ ಸಾಲದ ಸಮಸ್ಯೆ ಇದೆ. ಆ ಸಾಲದ ಸಮಸ್ಯೆಯು ಪ್ರಮಾಣದಲ್ಲಿ ಬದಲಾಗುತ್ತದೆ ಆದರೆ ಪ್ರತಿಯೊಬ್ಬರಿಗೂ ಒಂದಲ್ಲ ಒಂದು ರೂಪದಲ್ಲಿ ಉಳಿಯುತ್ತದೆ. ಕೆಲವು ಜನರು ಪಾವತಿಸದ ಸಾಲಕ್ಕೆ ಬಡ್ಡಿಯನ್ನು ಪಾವತಿಸುವ ಮೂಲಕ ಬಳಲುತ್ತಿದ್ದಾರೆ. ಈ ಸಂಧರ್ಭದಲ್ಲಿ ಎಂತಹ ಸಾಲದ ಹೊರೆಯಿದ್ದರೂ ಆ ಋಣ ತೀರಿಸಲು ನಾವು ಮಾಡಬಹುದಾದ ಉಪಾಯವೇ ಇಳನೇರ್ ದೀಪಂ. ಈ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ, ಎಳನೀರನ್ನು ಬಳಸಿ ದೀಪವನ್ನು ಹೇಗೆ ಬೆಳಗಿಸಬೇಕು ಎಂದು ನಾವು ನೋಡಲಿದ್ದೇವೆ . ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ,…

Read More

ಬೆಂಗಳೂರು: ರಾಜ್ಯದಲ್ಲಿ ಬಿಸಿಲ ತಾಪಮಾನ ದಿನೇ ದಿನೇ ಹೆಚ್ಚಾಗುತ್ತಿದೆ. ಬೆಳಗಾವಿ, ಕಲಬುರ್ಗಿಯಲ್ಲದೇ ಇತರೆ ಜಿಲ್ಲೆಗಳಲ್ಲಿಯೂ ಅಷ್ಟೇ ಪ್ರಮಾಣದಲ್ಲಿ ತಾಪಮಾನ ದಾಖಲಾಗುತ್ತಿದೆ. ಈ ಹಿನ್ನಲೆಯಲ್ಲಿ ರಾಜ್ಯದ ಸರ್ಕಾರಿ ಕಚೇರಿ ಕೆಲಸದ ವೇಳೆಯನ್ನು ಬದಲಾವಣೆ ಮಾಡುವಂತೆ ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರದಲ್ಲಿ ಮನವಿ ಮಾಡಲಾಗಿದೆ. ಇಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಈ ವರ್ಷ ಬಿಸಿಲಿನ ತಾಪಮಾನ ತೀವ್ರತರವಾಗಿರುತ್ತದೆ. ರಾಜ್ಯದ ಬೆಳಗಾವಿ ಹಾಗೂ ಕಲಬುರಗಿ ವಿಭಾಗದ ಜಿಲ್ಲೆಗಳಿಗೆ ಸರ್ಕಾರವು ಈ ಹಿಂದೆ ಸರ್ಕಾರಿ ಕಛೇರಿ ಕೆಲಸದ ವೇಳೆಯನ್ನು ಬೆಳಿಗ್ಗೆ 08-00 ರಿಂದ ಮಧ್ಯಾಹ್ನ 01-30ರವರೆಗೆ ನಿಗಧಿಪಡಿಸಿತ್ತು ಎಂದಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ಮೇಲ್ಕಂಡ ವಿಭಾಗದ ಜಿಲ್ಲೆಗಳೂ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಬಿಸಿಲಿನ ತಾಪಮಾನ ಬೆಳಿಗ್ಗೆ 09.00 ಗಂಟೆಗೆ ತೀವ್ರತರವಾಗಿ 40-44 ಗಿಂತಲೂ ಹೆಚ್ಚಿನ ತಾಪಮಾನ ದಾಖಲಾಗುತ್ತಿದೆ. ಸರ್ಕಾರಿ ನೌಕರರು ಕಛೇರಿಗೆ ತೆರಳಲು ಮತ್ತು ಸಾರ್ವಜನಿಕರೂ ಸಹ ಸರ್ಕಾರಿ…

Read More

ಶಿವಮೊಗ್ಗ: ಇಂದು ನಗರದಲ್ಲಿ ಲೋಕಸಭಾ ಚುನಾವಣೆ ಬೆನ್ನಲ್ಲೇ ಹಳೇ ಶಿವಮೊಗ್ಗದಲ್ಲಿ ಮಾರಕಾಸ್ತ್ರಗಳು ಸದ್ದು ಮಾಡಿವೆ. ಹೆಳೆಯ ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ಇಬ್ಬರನ್ನು ನಡು ರಸ್ತೆಯಲ್ಲೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಶಿವಮೊಗ್ಗದ ಲಷ್ಕರ್ ಮೊಹಲ್ಲಾದ ಬಳಿಯಲ್ಲಿ ಇರುವಂತ ಮೀನು ಮಾರುಕಟ್ಟೆಯ ಬಳಿ, ಇಬ್ಬರನ್ನು ಗುಂಪೊಂದು ಹಾಡು ಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಲಾಗಿದೆ. ಹತ್ಯೆಯಾದವರನ್ನು ಶೋಯಬ್ ಆಲಿಯಾಸ್ ಸೆಬು ಎಂದು ಗುರುತಿಸಲಾಗಿದೆ. ಇನ್ನಬ್ಬರ ಗುರುತು ಪತ್ತೆಯಾಗಿಲ್ಲ. ವಿಷಯ ತಿಳಿದು ಸ್ಥಳಕ್ಕೆ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಭೇಟಿ ನೀಡಿ, ಪರಿಶೀಲಿಸಿದರು. ಈ ಸಂಬಂಧ ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/sslc-results-to-be-declared-tomorrow-at-10-30-am-heres-how-to-check-the-result-sslc-exam-results-2024/ https://kannadanewsnow.com/kannada/prajwal-video-case-minister-krishna-byre-gowda-challenges-hd-kumaraswamy/

Read More

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಇಂದು ಕಾಂಗ್ರೆಸ್ ನ ಸಚಿವದ್ವಯರು ಸುದ್ದಿಗೋಷ್ಠಿ ನಡೆಸಿ, ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಹರಿಹಾಯ್ದಿದ್ದಾರೆ. ಅದರಲ್ಲೂ ಸಚಿವ ಕೃಷ್ಣಭೈರೇಗೌಡ ಅವರು, ಹೆಚ್.ಡಿ ಕುಮಾರಸ್ವಾಮಿಗೆ ನೇರವಾಗಿ ಸವಾಲೊಂದನ್ನು ಹಾಕಿದ್ದಾರೆ. ಆ ಬಗ್ಗೆ ಮುಂದೆ ಓದಿ. ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಪ್ರಪಂಚದ ಅತಿದೊಡ್ಡ ಲೈಂಗಿಕ ದೌರ್ಜನ್ಯ ಪ್ರಕರಣದ ಬಗ್ಗೆ ನಾವು ಮಾತನಾಡುತ್ತಿದ್ದೇವೆ. ನೂರಾರು ಹಿಂದೂ ಮಹಿಳೆಯರ ಮಾಂಗಲ್ಯ ಹರಣ ಮಾಡಿರುವ ಪ್ರಕರಣ. ಮಾನಹರಣ, ಶೀಲ ಹರಣ, ಮನೆ ಹಾಳು ಮಾಡಿರುವ ಪ್ರಕರಣ ಇದಾಗಿದೆ ಎಂದರು. ಅನೇಕ ಹೆಣ್ಣು ಮಕ್ಕಳ ಭವಿಷ್ಯ ಮಂಕಾಗಿ ಹೋಗಿದೆ. ಅನೇಕರು ಊರು ಬಿಟ್ಟು ಹೋಗಿದ್ದಾರೆ. ಇಂತಹ ಹೆಣ್ಣು ಮಕ್ಕಳ ಮಾನ ಕಾಪಾಡುವುದು ಬಿಟ್ಟು ಪ್ರಕರಣದ ಹಾದಿ ತಪ್ಪಿಸುವುದು ನಿಲ್ಲಿಸಬೇಕು ಎಂದು ಎಚ್ಚರಿಸಿದರು. ಇಲ್ಲಿ ತಪ್ಪು ಮಾಡಿದವರಿಗೆ, ಮಾನ ಹಾನಿ ಮಾಡಿದವರಿಗೆ ಶಿಕ್ಷೆ ಆಗಬೇಕು. ಆದರೆ ಮಾನ, ಮನೆ, ಮಾಂಗಲ್ಯ ದೋಚಿದ್ದು…

Read More

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀವ ವೀಡಿಯೋ ಪ್ರಕರಣದಲ್ಲಿ ಪದೇ ಪೇದ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಹೆಸರನ್ನು ಎಳೆದು ತರಲಾಗುತ್ತಿದೆ. ಇದು ಸರಿಯಲ್ಲ. ಎಸ್ಐಟಿಯಿಂದ ಪ್ರಕರಣದ ತನಿಖೆ ನಡೆಯುತ್ತಿದೆ. ಪ್ರಜ್ವಲ್ ರೇವಣ್ಣ ಅವರದ್ದು ತಪ್ಪಿಲ್ಲ ಎಂದರೆ ಆಚೇ ಬರುತ್ತಾನೆ ಎಂಬುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, “ಇದು ಹೊಳೆನರಸೀಪುರಕ್ಕೆ ಸಂಬಂಧಿಸಿದ ವಿಚಾರ. ಕಾರ್ತಿಕ್, ದೇವರಾಜೇಗೌಡ, ಪ್ರಜ್ವಲ್ ರೇವಣ್ಣ ಅವರ ನಡುವೆ ನಡೆದ ಜಗಳದಿಂದ ಆಚೆ ಬಂದ ವಿಚಾರ. ಇಂತಹ ಸಂಧರ್ಭದಲ್ಲಿ ರೇವಣ್ಣ, ಕುಮಾರಸ್ವಾಮಿ ಅವರು ಪ್ರಜ್ವಲ್ ಗೆ ಬಂಧನಕ್ಕೆ ಒಳಗಾಗು ಎಂದು ಕಿವಿ ಮಾತು ಹೇಳಬೇಕಾಗಿತ್ತು ಎಂದರು. ದೇವರಾಜೇಗೌಡರು ಅನೇಕ ದಿನಗಳಿಂದ ವಿಡಿಯೋ ವಿಚಾರದಲ್ಲಿ ಆರೋಪ ಮಾಡುತ್ತಲೇ ಬಂದಿದ್ದರು. ಎಸ್ ಐಟಿಯನ್ನು ಅವರು ಸಹ ಸ್ವಾಗತ ಮಾಡಿದ್ದರು. ಆದರೆ ಇದ್ದಕ್ಕಿದ್ದಂತೆ ಡಿ.ಕೆ.ಶಿವಕುಮಾರ್ ಅವರ ಹೆಸರನ್ನು ಎಳೆದು ತಂದರೋ ಗೊತ್ತಿಲ್ಲ ಎಂದು ಹೇಳಿದರು. ಅಶೋಕ್ ಅವರು ಪದೇ,…

Read More

ಬೆಂಗಳೂರು : “ವಿಡಿಯೋ ಮಾಡಿಕೊಂಡವರ ಕೃತ್ಯದ ಬಗ್ಗೆ ಮಾತನಾಡುವುದು ಬಿಟ್ಟು, ವಿಡಿಯೋ ಹಂಚಿಕೆಯ ಬಗ್ಗೆ ಮಾತನಾಡಲಾಗುತ್ತಿದೆ. ಇದರಲ್ಲಿ ಡಿ.ಕೆ.ಶಿವಕುಮಾರ್ ಅವರ ಮಧ್ಯ ಪ್ರವೇಶವಾಗಿಲ್ಲ” ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ಕಿಡಿಕಾರಿದರು. ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, “ಈ ಹಗರಣದಲ್ಲಿ ಯಾವುದೇ ಕಾರಣಕ್ಕೂ ಡಿ.ಕೆ.ಶಿವಕುಮಾರ್ ಅವರು ಮಧ್ಯ ಪ್ರವೇಶ ಮಾಡಿಲ್ಲ. ನೂರಕ್ಕೆ ನೂರರಷ್ಟು ಈ ವಿಚಾರಕ್ಕೂ ಅವರಿಗೂ ಸಂಬಂಧವಿಲ್ಲ. ಅವರು ಟೀಕೆ ಮಾಡಿದ ಕಾರಣಕ್ಕೆ ಕೆಪಿಸಿಸಿ ಅಧ್ಯಕ್ಷರು ತಿರುಗೇಟು ನೀಡಿದ್ದಾರೆ. ಈ ವಿಚಾರಕ್ಕೂ ಮೊದಲೇ ಇಬ್ಬರ ನಡುವೆ ಟೀಕೆ, ಟಿಪ್ಪಣಿಗಳು ನಡೆದಿವೆ ಎಂದರು. ಈ ಅನಾಚಾರವನ್ನು ಯಾರೋ ವಿಡಿಯೋ ಮಾಡಿದ್ದಲ್ಲ. ಸ್ವತಃ ಅವರೇ ಮಾಡಿಕೊಂಡಿರುವುದು. ಇದು ಹಾಸನದಲ್ಲಿಯೇ ಎಲ್ಲರಿಗೂ ಹಂಚಿಕೆಯಾಗಿದೆ. ಸಾಮಾಜಿಕ ಜಾಲತಾಣಗಳಿಗೆ ಸೋರಿಕೆಯಾದ ನಂತರ ಯಾವುದೂ ಸಹ ಯಾರ ಹಿಡಿತಕ್ಕೂ ಸಿಗುವುದಿಲ್ಲ. ವಿಚಾರ ಗಾಳಿಗೆ ಹೋದ ಮೇಲೆ ಯಾವ ದಿಕ್ಕಿಗೆ ಹೋಗುತ್ತದೆ ಎನ್ನುವುದು ಯಾರಿಗೂ ತಿಳಿದಿಲ್ಲ ಎಂದರು. ಇಂತಹ ಸೂಕ್ಷ್ಮವಾದ ವಿಚಾರವನ್ನು ಜನತಾದಳದವರು ಬೀದಿ ರಂಪ ಮಾಡುತ್ತಿದ್ದಾರೆ.…

Read More

ದಕ್ಷಿಣ ಕನ್ನಡ: ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ವಸಂತ ಬಂಗೇರ(79) ಅವರು ಇಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಈ ಮೂಲಕ ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೆ. ವಸಂತ ಬಂಗೇರ ಇನ್ನಿಲ್ಲವಾಗಿದ್ದಾರೆ.  ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕುವೆಟ್ಟು ಗ್ರಾಮದಲ್ಲಿ ಕೇದೆ ಸುಬ್ಬ ಪೂಜಾರಿ ಹಾಗೂ ದೇವಕಿ ದಂಪತಿಯ ಪುತ್ರರಾಗಿ ವಸಂತ ಬಂಗೇರ ಅವರು ಜನವರಿ.15, 1946ರಲ್ಲಿ ಜನಿಸಿದ್ದರು. ಬೆಳ್ತಂಗಡಿಯ ಬೋರ್ಡ್ ಹೈಸ್ಕೂಲಿನಲ್ಲಿ ತಮ್ಮ ಎಸ್ ಎಸ್ ಎಲ್ ಸಿ ವ್ಯಾಸಂಗ ಮುಗಿಸಿದಂತ ಅವರು ಮುಲ್ಕಿ, ಉಜಿರೆಯ ಎಸ್ ಡಿಎಂ ಕಾಲೇಜಿನಲ್ಲಿ ಪಿಯುಸಿ ಮುಗಿಸಿದರು. 1972ರಲ್ಲೇ ಚುನಾವಣಾ ರಾಜಕೀಯಕ್ಕೆ ಧುಮುಕಿದಂತ ವಸಂತ ಬಂಗೇರ ಅವರು, ಕುವೆಟ್ಟು ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿ, ಸದಸ್ಯರಾಗಿ, ಆನಂತ್ರ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. 1983ರಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯ ಅಭ್ಯರ್ಥಿಯಾಗಿ ವಿಧಾನಸಭಾ ಚುನಾವಣೆಗೆ ಕಣಕ್ಕೆ ಇಳಿದರು. ಪ್ರಥಮ ಬಾರಿಗೆ ವಿಧಾನಸಭೆಯ ಸದಸ್ಯರಾಗಿಯೂ ಪ್ರವೇಶ ಮಾಡಿದ್ದರು.…

Read More

ಬೆಂಗಳೂರು: ಕುಮಾರಸ್ವಾಮಿ ಕಿಂಗ್ ಆಫ್ ಬ್ಲಾಕ್ ಮೇಲರ್ ಎಂದಿರುವ ಡಿಸಿಎಂ ಡಿಕೆಶಿಗೆ ತಿರುಗೇಟು ಕೊಟ್ಟಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಇಡೀ ಪ್ರಕರಣವನ್ನು ಸ್ವಾರ್ಥಕ್ಕಾಗಿ ಬಳಸಿಕೊಂಡ ವ್ಯಕ್ತಿ ನೀನು ಎಂದು ಕಿಡಿ ಕಾರಿದರು. ನಗರ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಬಳಿ ಮಾಧ್ಯಮಗಳ ಜತೆ ಮಾತನಾಡಿದರು ಅವರು, ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ತುಂಬಲಾಗಿದ್ದ ಪೆನ್ ಡ್ರೈವ್ ಗಳನ್ನು ಹಾದಿಬೀದಿಯಲ್ಲಿ ಸುರಿದಿರುವ ಕಿಡಿಗೇಡಿಗಳನ್ನು ರಾಜ್ಯ ಸರಕಾರ ರಕ್ಷಣೆ ಮಾಡುತ್ತಿದೆ ಎಂದು ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಡಿ.ಕೆ.ಶಿವಕುಮಾರ್ ಸಂಸ್ಕೃತಿ ಎಂಥದು ಎಂದು ಎಲ್ಲರಿಗೂ ಗೊತ್ತಿದೆ. ವಕೀಲರಾದ ದೇವರಾಜೇಗೌಡ ಜತೆ ಯಾಕಪ್ಪ ಮಾತಾನಾಡಿದೆ ನೀನು? ನಿನಗೇನಿತ್ತು ಅವರ ಹತ್ತಿರ ಕೆಲಸ ಡಿ.ಕೆ.ಶಿವಕುಮಾರ್? ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಕುಮಾರಸ್ವಾಮಿ ಬ್ಲಾಕ್ ಮೇಲರ್ ಅಲ್ಲ ಕುಮಾರಸ್ವಾಮಿ ಬ್ಲಾಕ್ ಮೇಲರ್ ಅಲ್ಲ. ಐದು ಜನರನ್ನು ಇಟ್ಟಕೊಂಡಿದ್ದೀನಿ ಅಂತ ಹೇಳಿದ್ದೀಯಾ ಅಲ್ಲವೇ ನೀನು? ನಿಮ್ಮ ಮುಖ್ಯಮಂತ್ರಿಗೆ ಮಾನ ಮರ್ಯಾದೆ ಇದೆಯಾ? ಡಾ.ಜಿ.ಪರಮೇಶ್ವರ ಅವರೇ ನಿಮಗೆ ಬೆನ್ನು ಮೂಳೆ ಇದೆಯಾ? ನನ್ನನ್ನು…

Read More