Author: kannadanewsnow09

ಶಿವಮೊಗ್ಗ :  ಶಿವಮೊಗ್ಗ ಎಂ.ಆರ್.ಎಸ್. ವಿದ್ಯುತ್ ಕೇಂದ್ರದಲ್ಲಿ ನ.22 ರಂದು ಬೆಳಗ್ಗೆ 9.00 ರಿಂದ ಸಂಜೆ 5.00ರವರೆಗೆ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಇರುವುದರಿಂದ ಈ ಮಾರ್ಗಗಳಿಂದ ವಿದ್ಯುತ್ ಸರಬರಾಜಾಗುವ ಈ ಕೆಳಕಂಡ ಪ್ರದೇಶದಲ್ಲಿ ಪವರ್ ಕಟ್ ಆಗಲಿದೆ ಎಂದು ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ನ.22ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್‌ರಸ್ತೆ, ಎಂ.ಆರ್.ಎಸ್. ವಾಟರ್ ಸಪ್ಲೈ, ಎಂಆರ್‌ಎಸ್. ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿ.ಹೆಚ್.ರಸ್ತೆ (ಗಾಯತ್ರಿ ಕಲ್ಯಾಣ ಮಂದಿರದಿಂದ ಅಮೀರ್ ಅಹ್ಮದ್ ವೃತ್ತ), ನೆಹರು ರಸ್ತೆ, ದುರ್ಗಿಗುಡಿ ಮುಖ್ಯರಸ್ತೆ, ಪಾರ್ಕ್ ಬಡಾವಣೆ, ಸರ್.ಎಂ.ವಿ.ರಸ್ತೆ (ಮಹಾವೀರ್ ವೃತ್ತದಿಂದ ಗೋಪಿ ವೃತ್ತದವರೆಗೆ), ಗಾಂಧಿ ಪಾರ್ಕ್, ಲೂರ್ದೂನಗರ, ಕಾನ್ವೆಂಟ್ ರಸ್ತೆ, ಬಾಪೂಜಿನಗರ, ಚರ್ಚ್ ಕಾಂಪೌಂಡ್ ನಲ್ಲಿ ವಿದ್ಯುತ್ ವ್ಯತ್ತಯ ಆಗಲಿದೆ. , ಟಿ.ಜಿ.ಎನ್.ಬಡಾವಣೆ, ಜೋಸೆಫ್ ನಗರ, ಟ್ಯಾಂಕ್‌ಬೌಂಡ್ ರಸ್ತೆ, ಕುವೆಂಪು ರಂಗಮಂದಿರ ಮತ್ತು ಮಹಾನಗರ…

Read More

ಮಂಡ್ಯ: ನಗರದಲ್ಲಿ ಡಿಸೆಂಬರ್.20, 21, 22ರಂದು ಮಂಡ್ಯದಲ್ಲಿ ಮೂರು ದಿನಗಳ ಕಾಲ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಈ ಸಮ್ಮೇಳನಾಧ್ಯಕ್ಷರಾಗಿ ಗೊ.ರು.ಚನ್ನಬಸಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. 2024ರ ಡಿಸೆಂಬರ್ 20. 21, 22ರಂದು ಮಂಡ್ಯದಲ್ಲಿ ಜರುಗಲಿರುವ  87ನೇಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಗೊ.ರು.ಚನ್ನಬಸಪ್ಪ ಅವರು ಆಯ್ಕೆಯಾಗಿರುತ್ತಾರೆ. ಕಳೆದ ಎರಡು ದಿನಗಳ ಹಿಂದೆ ಮಂಡ್ಯ ನಗರದ ಹೊರವಲಯದಲ್ಲಿರುವ ಖಾಸಗಿ ಹೋಟೆಲ್ ನಲ್ಲಿ ಹಮ್ಮಿಕೊಂಡಿದ್ದ ಮಂಡ್ಯ ಜಿಲ್ಲೆಯ ಸಾಹಿತಿಗಳ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ಮಂಡ್ಯದ ಆತಿಥ್ಯ, ಸತ್ಕಾರವನ್ನು ಎಲ್ಲರೂ ನೆನೆಯಬೇಕು. ಆ ನಿಟ್ಟಿನಲ್ಲಿ ಸಮ್ಮೇಳನ ಯಶಸ್ವಿಗೊಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು. ಮಂಡ್ಯಕ್ಕೆ ತನ್ನದೇ ಆದ ಸೊಗಡಿದೆ. ವೈಶಿಷ್ಟ್ಯ ಇದೆ. ನೂರಕ್ಕೆ ನೂರು ಈ ಸಮ್ಮೇಳನ ಯಶಸ್ವಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಸಚಿವರು, ಎಲ್ಲರ ಸಲಹೆ, ಮಾರ್ಗದರ್ಶನ, ಅಭಿಪ್ರಾಯ ಪಡೆಯಲಾಗುತ್ತಿದೆ. ಜನಸಾಮಾನ್ಯರಾದಿಯಾಗಿ ಎಲ್ಲರ ಸಲಹೆಗಳನ್ನು ಸ್ವೀಕರಿಸಿ, ಸಮಿತಿಯೊಂದಿಗೆ ಚರ್ಚಿಸಿ ಕಾರ್ಯರೂಪಕ್ಕೆ ತರುವ ಪ್ರಾಮಾಣಿಕ…

Read More

ಬೆಂಗಳೂರು : ರಾಜ್ಯ ಸರ್ಕಾರ ಬಡವರಿಗೆ ಮರಳಿ ಬಿಪಿಎಲ್‌ ಕಾರ್ಡ್‌ ನೀಡಬೇಕು. ಕಾರ್ಡ್‌ ರದ್ದು ಪ್ರಕ್ರಿಯೆ ನಿಲ್ಲಿಸದಿದ್ದರೆ ರಾಜ್ಯಾದ್ಯಂತ ಸರ್ಕಾರಿ ಕಚೇರಿಗಳಿಗೆ ಬೀಗ ಹಾಕಿ ಪ್ರತಿಭಟಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಎಚ್ಚರಿಕೆ ನೀಡಿದ್ದಾರೆ. ಮಹಾಲಕ್ಷ್ಮಿ ಲೇಔಟ್‌ ವಿಧಾನಸಭಾ ಕ್ಷೇತ್ರದ ವೃಷಭಾವತಿ ನಗರ, ನಂದಿನಿ ಲೇಔಟ್ ಗಳಲ್ಲಿ ಬಿಪಿಎಲ್‌ ಕಾರ್ಡ್‌ ರದ್ದುಗೊಂಡ ಕುಟುಂಬದವರನ್ನು ಶಾಸಕರಾದ ಡಾ. ಅಶ್ವತ್ಥನಾರಾಯಣ ಮತ್ತು ಕೆ. ಗೋಪಾಲಯ್ಯ ಅವರೊಂದಿಗೆ ಭೇಟಿ ಮಾಡಿ ಸಮಸ್ಯೆ ಆಲಿಸಿದರು. ನಂತರ ಮಾತನಾಡಿ, ಜನರಿಗೆ ಅನ್ನ ಕೊಡಬೇಕಿದ್ದ ಸರ್ಕಾರ ಅನ್ನಕ್ಕೆ ಕನ್ನ ಹಾಕುವ ಕೆಲಸ ಮಾಡುತ್ತಿದೆ. ಯಾರೂ ಹಸಿವಿನಿಂದ ಸಾಯಬಾರದು ಎಂಬ ಪ್ರಜ್ಞೆ ಸರ್ಕಾರಕ್ಕೆ ಇರಬೇಕು. ಬಿಪಿಎಲ್‌ ಕಾರ್ಡ್‌ ಕಳೆದುಕೊಂಡವರು ಯಾರೂ ಶ್ರೀಮಂತರಲ್ಲ, ಕಾರಿನಲ್ಲಿ ಓಡಾಡುವುದಿಲ್ಲ. 2 ವರ್ಷದ ಮಗು ಇರುವ ಮಹಿಳೆ ಗಾರ್ಮೆಂಟ್‌ ಕೆಲಸಕ್ಕೆ ಹೋಗಲು ಆಗುತ್ತಿಲ್ಲ. ಅಂಗವಿಕಲ ವ್ಯಕ್ತಿಯೊಬ್ಬರು ರಸ್ತೆ ಬದಿಯಲ್ಲಿ ಬಜ್ಜಿ ಮಾರಾಟ ಮಾಡುತ್ತಿದ್ದು, ಅನಾರೋಗ್ಯದಿಂದಾಗಿ ಕೆಲಸಕ್ಕೆ ಹೋಗುತ್ತಿಲ್ಲ. ಇಂತಹ ಬಡ ಕುಟುಂಬದ ಜನರ ಮನೆಗೆ ಸಿಎಂ ಸಿದ್ದರಾಮಯ್ಯ ಕನ್ನ…

Read More

ಬೆಂಗಳೂರು : “ನಮ್ಮ ಸರ್ಕಾರ ಇರುವುದೇ ಬಡವರಿಗಾಗಿ. ಬಡವರ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಅವರಿಗೆ ಮತ್ತೆ ನೀಡುತ್ತೇವೆ. ಅರ್ಹರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅಭಯ ನೀಡಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. ಆರ್ಹರ ಬಿಪಿಎಲ್ ಕಾರ್ಡ್ ಗಳು ಕೂಡ ರದ್ದಾಗುತ್ತಿವೆ ಎಂದು ಮಾಧ್ಯಮಗಳು ಕೇಳಿದಾಗ, “ಬಿಪಿಎಲ್ ಕಾರ್ಡ್ ವಿತರಣೆಗೆ ಕೇಂದ್ರ ಸರ್ಕಾರ ಕೆಲವು ಮಾನದಂಡ ನಿಗದಿಪಡಿಸಿದೆ. ಅದರಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಅರ್ಹರ ಕಾರ್ಡ್ ರದ್ದಾಗಿದ್ದರೆ ಅವರಿಂದ ಮತ್ತೆ ಅರ್ಜಿ ಪಡೆದು ಮತ್ತೆ ಬಿಪಿಎಲ್ ಕಾರ್ಡ್ ನೀಡಲಾಗುವುದು. ಯಾರೂ ಗಾಬರಿಯಾಗುವ ಅಗತ್ಯವಿಲ್ಲ. ಕೆಲವು ಕಡೆ ಹೆಚ್ಚುಕಮ್ಮಿಯಾಗಿದ್ದು, ಎಲ್ಲವನ್ನು ಬಗೆಹರಿಸುತ್ತೇವೆ. ದಯಮಾಡಿ ಸಹಕಾರ ನೀಡಿ. ಸರ್ಕಾರಿ ನೌಕರರು, ಸಹಕಾರಿ ಸಂಘಗಳ ಅಧಿಕಾರಿಗಳು, ಆದಾಯ ತೆರಿಗೆ ಪಾವತಿದಾರರು ಬಿಪಿಎಲ್ ಕಾರ್ಡ್ ಹೊಂದಿರುವ ಹಿನ್ನೆಲೆಯಲ್ಲಿ ಈ ಪರಿಷ್ಕರಣೆ ಮಾಡಲಾಗುತ್ತಿದೆ” ಎಂದರು. ಕಾರ್ಡ್ ನೀಡುವಾಗ ಮನೆಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಾರೆ, ಅದೇ ರೀತಿ ಕಾರ್ಡ್…

Read More

ಬೆಂಗಳೂರು : ವಿಕ್ರಂಗೌಡ ಹಲವು ನಕ್ಸಲ್ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾದವನಾಗಿದ್ದು, ನಕ್ಸಲ್ ಚಟುವಟಿಕೆಯನ್ನು ನಿಗ್ರಹಿಸಲು ಆತನನ್ನು ಎನ್ ಕೌಂಟರ್ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ನಕ್ಸಲ್ ಚಟುವಟಿಕೆಯಲ್ಲಿ ಪ್ರಮುಖವಾಗಿ ಭಾಗಿಯಾಗಿದ್ದ ವಿಕ್ರಂಗೌಡ ಅವರು ಎನ್ ಕೌಂಟರ್ ನಲ್ಲಿ ಹತನಾಗಿರುವ ಬಗ್ಗೆ ಪ್ರಗತಿಪರ ಚಿಂತಕರು ಅನುಮಾನಗಳನ್ನು ವ್ಯಕ್ತಪಡಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ವಿಕ್ರಂಗೌಡ ಅವರಿಗೆ ಶರಣಾಗುವಂತೆ ಆದೇಶ ನೀಡಲಾಗಿತ್ತು. ಆದರೆ ಅವರು ಶರಣಾಗಿರಲಿಲ್ಲ. ವಿಕ್ರಂಗೌಡ ಅವರನ್ನು ಹಿಡಿದವರಿಗೆ ಕೇರಳಸರ್ಕಾರ 25 ಲಕ್ಷ ಹಾಗೂ ಕರ್ನಾಟಕ ಸರ್ಕಾರ 5 ಲಕ್ಷ ಬಹುಮಾನವನ್ನು ಘೋಷಿಸಿತ್ತು ಎಂದು ವಿವರಿಸಿದರು. ನಬಾರ್ಡ್ ಸಾಲದ ಮೊತ್ತ ಹೆಚ್ಚಿಸುವಂತೆ ಕೇಂದ್ರ ಸಚಿವರಿಗೆ ಮನವಿ ನವದೆಹಲಿ ಪ್ರವಾಸದ ವಿವರ ನೀಡಿದ ಮುಖ್ಯಮಂತ್ರಿಗಳು, ನಾಳೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಲು ಸಮಯ ಕೋರಲಾಗಿದೆ. ರಾಜ್ಯಕ್ಕೆ ನಬಾರ್ಡ್ ನಿಂದ ರಾಜ್ಯಕ್ಕೆ ನೀಡಲಾಗುವ ಸಾಲದ ಮೊತ್ತವನ್ನು ಕಳೆದ ವರ್ಷದ 5600 ಕೋಟಿ ರೂ.ಗಳಿಂದ ,…

Read More

ಬೆಂಗಳೂರು : ಕೈಗಾರಿಕಾ ಕ್ಷೇತ್ರದ ಬಂಡವಾಳ ಹೂಡಿಕೆಯಲ್ಲಿ ರಾಜ್ಯವು ಸದ್ಯಕ್ಕೆ ದೇಶದಲ್ಲಿ ಮೂರನೇ ಸ್ಥಾನದಲ್ಲಿದ್ದು, 2025ರ ಜೂನ್ ವೇಳೆಗೆ ದ್ವಿತೀಯ ಸ್ಥಾನಕ್ಕೆ ಏರಲಿದೆ. ಈಗ ಆಗಿರುವ 54,427 ಕೋಟಿ ರೂ. ಹೂಡಿಕೆಯ ಜತೆಗೆ ಮುಂದಿನ ಆರೇಳು ತಿಂಗಳಲ್ಲಿ ಇನ್ನೂ 19,059 ಸಾವಿರ ಕೋಟಿ ರೂ. ಬಂಡವಾಳ ಹರಿದು ಬರುವುದು ಖಾತ್ರಿಯಾಗಿದೆ. ಈ ಮೂಲಕ ರಾಜ್ಯವು 73 ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ಹೂಡಿಕೆಯನ್ನು ಕಾಣಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಹೇಳಿದ್ದಾರೆ. ಅವರು ಜಿಕೆವಿಕೆ ಆವರಣದಲ್ಲಿ ಆಯೋಜನೆಗೊಂಡಿರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮೆಟಲ್ಸ್ ಸಂಸ್ಥೆಯ 78ನೇ ವಾರ್ಷಿಕ ತಾಂತ್ರಿಕ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯವು ಈ ವರ್ಷ ಈಗಾಗಲೇ 21 ವಿವಿಧ ಉದ್ಯಮಗಳೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ. ಇದರಿಂದ 46,375 ಕೋಟಿ ರೂ. ಬಂಡವಾಳ ಹರಿದು ಬರಲಿದ್ದು, 27 ಸಾವಿರಕ್ಕೂ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಲಿವೆ. ರಾಜ್ಯ ಮಟ್ಟದ ಏಕಗವಾಕ್ಷಿ ಸಮಿತಿಗಳ ಮೂಲಕ 90 ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ಹೂಡಿಕೆ ಆಗಲಿರುವಂತಹ ಒಟ್ಟು 669…

Read More

ಬೆಂಗಳೂರು: ರಾಜ್ಯದಲ್ಲಿ ಭೂ ಪರಿವರ್ತನೆ ಮಾಡುವ ಸಂದರ್ಭದಲ್ಲಿ ತಹಶೀಲ್ದಾರರು, ಕಂದಾಯ ನಿರೀಕ್ಷಕರು ಯಾವೆಲ್ಲ ಅಂಶ ಪರಿಗಣನೆ ಮಾಡಬೇಕು ಎನ್ನುವಂತ ಸಂಪೂರ್ಣ ಮಾಹಿತಿ ಮುಂದಿದೆ ಓದಿ. ರಾಜ್ಯದಲ್ಲಿ ಕೃಷಿ ಭೂಮಿಯನ್ನು ಕೃಷಿಯೇತರಕ್ಕೆ ಬಳಕೆ ಮಾಡುವ ಸಂದರ್ಭದಲ್ಲಿ ಭೂ ಪರಿವರ್ತನೆಗೆ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಆಗ ತಹಶೀಲ್ದಾಳರು, ಕಂದಾಯ ನಿರೀಕ್ಷಕರು ಕೆಲ ಅಂಶಗಳನ್ನು ಪರಿಗಣಿಸಿ ಅದಕ್ಕೆ ಅನುಮತಿಯನ್ನು ನೀಡಲಾಗುತ್ತದೆ. ಅವು ಯಾವುವು ಅಂತ ಈ ಕೆಳಗಿವೆ. ಭೂಪರಿವರ್ತನೆ ಕೋರಿ ಸಲ್ಲಿಸಿದ ಅರ್ಜಿಗಳ ಕುರಿತು ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸುವಾಗ ತಹಶೀಲದಾರರು/ಕಂದಾಯ ನಿರೀಕ್ಷಕರು ಈ ಕೆಳ ಕಾಣಿಸಿದ ಅಂಶಗಳನ್ನು ಪರಿಶೀಲಿಸುವುದು. 1. ಸರ್ಕಾರದ ಸುತ್ತೋಲೆ ದಿನಾಂಕ:7-6-1999ಕ್ಕೆ ಲಗತ್ತಿಸಿದ ಅನುಬಂಧ-1ರಲ್ಲಿ ಅರ್ಜಿಗಳನ್ನು ತಹಶೀಲದಾರರು ದ್ವಿಪ್ರತಿಗಳಲ್ಲಿ ಸ್ವೀಕರಿಸುವುದು. 2. ತಹಶೀಲದಾರರು ಮಂಜೂರಾತಿ ಪ್ರಾಧಿಕಾರಿಗೆ ಕೂಡಲೇ ಅರ್ಜಿಯ ಒಂದು ಪ್ರತಿಯನ್ನು ಕಳುಹಿಸುವುದು. 3. ಹೆಚ್ಚಿನ ಮಾಹಿತಿ ಅವಶ್ಯವಿದ್ದಲ್ಲಿ ಅದನ್ನು ಸಲ್ಲಿಸಲು ಅರ್ಜಿ ಸ್ವೀಕರಿಸಿದ ಒಂದು ವಾರದೊಳಗಾಗಿ ಅರ್ಜಿದಾರರಿಗೆ ತಿಳಿಸುವುದು. 4. ಜಮೀನಿನ ಒಡೆತನ ಹೊಂದಿದ ವ್ಯಕ್ತಿಯು ಮಾತ್ರ ಅರ್ಜಿ ಸಲ್ಲಿಸಿರುವ ಬಗ್ಗೆ…

Read More

ಬೆಂಗಳೂರು: ರಾಜ್ಯದಲ್ಲಿ ಅನೇಕರು ಸರ್ಕಾರಿ ಭೂಮಿಯಲ್ಲಿ ವಾಸದ ಮನೆ ನಿರ್ಮಿಸಿಕೊಂಡು ಜೀವನ ನಡೆಸುತ್ತಿದ್ದಾರೆ. ಇಂತಹ ಜನರು ಸಕ್ರಮಕ್ಕಾಗಿ, ತಾವು ವಾಸಿಸುತ್ತಿರುವಂತ ಮನೆಯ ಭೂಮಿ ಸರ್ಕಾರಿ ಜಾಗವಾಗಿದ್ದರೂ, ತಮ್ಮ ಹೆಸರಿಗೆ ಮಂಜೂರಾತಿ ಪಡೆಯಲು ನಿಯಮಗಳ ಅಡಿಯಲ್ಲಿ ಅವಕಾಶವಿದೆ. ಅದು ಹೇಗೆ ಎನ್ನುವ ಬಗ್ಗೆ ಮಾಹಿತಿ ಮುಂದೆ ಓದಿ. ಈ ಕುರಿತಂತೆ ತಹಶೀಲ್ದಾರರ ಕೈಪಿಡಿ ಪುಸ್ತಕದಲ್ಲಿ ಮಾಹಿತಿಯನ್ನು ನೀಡಲಾಗಿದೆ. ರಾಜ್ಯದಲ್ಲಿ ಸರ್ಕಾರಿ ಭೂಮಿಯಲ್ಲಿ ಅತಿಕ್ರಮವಾಗಿ ವಾಸದ ಮನೆಯನ್ನು ದಿನಾಂಕ 14-04-1998ರ ಪೂರ್ವಭಾವಿಯಾಗಿ ನಿರ್ಮಿಸಿದ್ದರೇ, ನಿಗದಿತ ನಮೂನೆ 1ರಲ್ಲಿ ಸಕ್ಷಮ ಪ್ರಾಧಿಕಾರಿಗೆ, ವಾಸದ ಮನೆಯ ಕಟ್ಟಡ ನಿರ್ಮಿಸಿರುವ ವಿಸ್ತೀರ್ಣದ ಭೂಮಿಯನ್ನು ಸಕ್ರಮೀಕರಣಕ್ಕಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕರ್ನಾಟಕ ( ವಾಸದ ಮನೆ ನಿಯಮ) ಭೂ ಮಂಜೂರಾತಿ ನಿಯಮಗಳು 1999ರ ಕಲಂ 94 (ಸಿ) ಅಡಿಯಲ್ಲಿ ಸಕ್ರಮೀಕರಣಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿದೆ ಅಂತ ನಿಯಮದಲ್ಲೇ ಹೇಳಲಾಗಿದೆ. ಯಾರು ಸಕ್ಷಮ ಪ್ರಾಧಿಕಾರಿ.? ಬೆಂಗಳೂರು ಮಹಾನಗರ ಪಾಲಿಕೆಗಳ ವ್ಯಾಪ್ತಿಯ 18 ಕಿಲೋ ಮೀಟರ್ ವ್ಯಾಪ್ತಿಯ ಸರಹದ್ದಿನ ಸರ್ಕಾರಿ ಜಮೀನುಗಳಲ್ಲಿ ನೀವು ವಾಸದ…

Read More

ನವದೆಹಲಿ: ಎ.ಆರ್.ರೆಹಮಾನ್ ಪತ್ನಿ ಸೈರಾ ಪತಿಯಿಂದ ಬೇರ್ಪಡುವುದಾಗಿ ಘೋಷಿಸಿದ್ದಾರೆ. ಈ ಮೂಲಕ ಖ್ಯಾತ ಸಂಗೀತ ನಿರ್ದೇಶಕ ಎಆರ್ ರೆಹಮಾನ್ ಹಾಗೂ ಪತ್ನಿ ಸೈರಾ ದೂರಾಗೋ ವಿಷಯ ಬಹಿರಂಗಗೊಂಡಂತೆ ಆಗಿದೆ. ಸಂಗೀತ ಮಾಂತ್ರಿಕ ಎ.ಆರ್.ರೆಹಮಾನ್ ಮತ್ತು ಅವರ ಪತ್ನಿ ಸೈರಾ ತಮ್ಮ ಪ್ರತ್ಯೇಕತೆಯನ್ನು ಘೋಷಿಸಿದ್ದಾರೆ. ವಂದನಾ ಶಾ ಮತ್ತು ಅಸೋಸಿಯೇಟ್ಸ್ ದಂಪತಿಗಳ ಪ್ರತ್ಯೇಕತೆಯ ನಿರ್ಧಾರದ ಬಗ್ಗೆ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿದೆ. “ಮದುವೆಯಾದ ಹಲವು ವರ್ಷಗಳ ನಂತರ, ಶ್ರೀಮತಿ ಸೈರಾ ತನ್ನ ಪತಿ ಎ ಆರ್ ರೆಹಮಾನ್ ಅವರಿಂದ ಬೇರ್ಪಡುವ ಕಠಿಣ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಅವರ ಸಂಬಂಧದಲ್ಲಿ ಗಮನಾರ್ಹ ಭಾವನಾತ್ಮಕ ಒತ್ತಡದ ನಂತರ ಈ ನಿರ್ಧಾರ ಬಂದಿದೆ. ಪರಸ್ಪರರ ಬಗ್ಗೆ ಆಳವಾದ ಪ್ರೀತಿಯ ಹೊರತಾಗಿಯೂ, ದಂಪತಿಗಳು ಉದ್ವಿಗ್ನತೆ ಮತ್ತು ತೊಂದರೆಗಳು ತಮ್ಮ ನಡುವೆ ಪರಿಹರಿಸಲಾಗದ ಅಂತರವನ್ನು ಸೃಷ್ಟಿಸಿವೆ ಎಂದು ಕಂಡುಕೊಂಡಿದ್ದಾರೆ, ಈ ಸಮಯದಲ್ಲಿ ಎರಡೂ ಪಕ್ಷಗಳು ಅದನ್ನು ನಿವಾರಿಸಲು ಸಾಧ್ಯವಾಗುವುದಿಲ್ಲ. ಶ್ರೀಮತಿ ಸೈರಾ ಅವರು ನೋವು ಮತ್ತು ಯಾತನೆಯಿಂದ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ…

Read More

ಬೆಂಗಳೂರು: ವಕ್ಫ್ ಆಸ್ತಿ ಒತ್ತುವರಿ ಸಮಸ್ಯೆ ವಿರುದ್ಧ ‘ನಮ್ಮ ಭೂಮಿ ನಮ್ಮ ಹಕ್ಕು’ ಶೀರ್ಷಿಕೆಯ ಅಡಿಯಲ್ಲಿ ಜನಾಂದೋಲನ ಮಾಡಲು ನಿರ್ಧರಿಸಿದ್ದೇವೆ. ನವೆಂಬರ್ 21 ಮತ್ತು 22ರಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಕಚೇರಿ ಮತ್ತು ತಾಲ್ಲೂಕು ತಹಸೀಲ್ದಾರರ ಕಚೇರಿಗಳ ಮುಂದೆ ದಿನವಿಡೀ ಪ್ರತಿಭಟನೆ ನಡೆಸಲಿದ್ದೇವೆ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು ತಿಳಿಸಿದ್ದಾರೆ. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಭಟನೆಯ ಜೊತೆಗೆ ಎಲ್ಲ ಸಂತ್ರಸ್ತರಿಂದ ಅರ್ಜಿಗಳ ಸ್ವೀಕಾರ, ವಕ್ಫ್ ಅಧಿಕಾರ ದುರ್ಬಳಕೆಯಿಂದ ಸಮಸ್ಯೆ -ಶೋಷಣೆಗೆ ಒಳಗಾದವರ ಮಾಹಿತಿ ಸಂಗ್ರಹಿಸಲಾಗುತ್ತದೆ ಎಂದು ವಿವರಿಸಿದರು. ಬೆಂಗಳೂರಿನ ಫ್ರೀಡಂ ಪಾಕ್ರ್Àನಲ್ಲಿ ಪ್ರತಿಭಟನೆ ನಡೆಸಲಿದ್ದೇವೆ. ಜೊತೆಗೆ 3 ತಂಡಗಳನ್ನು ರಚಿಸಿದ್ದೇವೆ. ಕೇಂದ್ರದ ಸಚಿವರು, ಮಾಜಿ ಮುಖ್ಯಮಂತ್ರಿಗಳು, ಹಿರಿಯರು, ವರಿಷ್ಠರು ಸೇರಿ 3 ತಂಡಗಳು ಕಾರ್ಯ ನಿರ್ವಹಿಸುತ್ತಿವೆ. ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷದ ನಾಯಕ ಆರ್.ಅಶೋಕ್, ವಿಧಾನಪರಿಷತ್ತಿನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಈ 3 ತಂಡಗಳ…

Read More