Author: kannadanewsnow09

ಕೊಡಗು: ನದಿಯ ಪ್ರವಾಹದಿಂದ ಮನೆಗಳನ್ನು ಕಳೆದುಕೊಂಡಿರುವಂತ ರಾಜ್ಯದ ಜನತೆಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅದೇ ರಾಜ್ಯ ಸರ್ಕಾರದಿಂದ ಪರಿಹಾರವಾಗಿ 2.5 ಲಕ್ಷ ಪರಿಹಾರ ವಿತರಿಸಲಿದೆ. ಅಲ್ಲದೇ ನೆರೆಯಿಂದ ಮನೆಯನ್ನು ಕಳೆದುಕೊಂಡವರಿಗೆ ಸರ್ಕಾರದಿಂದಲೇ ಹೊಸ ಮನೆಯನ್ನು ನಿರ್ಮಿಸಿಕೊಡಲಿದೆ. ಈ ಕುರಿತಂತೆ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ಹಂಚಿಕೊಂಡಿದ್ದು, ನದಿ ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ 2.5 ಲಕ್ಷ ಜೊತೆಗೆ ಹೊಸ ಮನೆ ಕಟ್ಟಿಸಿ ಕೊಡುವ ಕುರಿತು ಈ ಸಂಬಂಧ ಶೀಘ್ರವೇ ನಾವು ಆದೇಶವನ್ನು ಹೊರಡಿಸುತ್ತೇವೆ ಎಂದು ತಿಳಿಸಿದ್ದಾರೆ. ಇನ್ನೂ ವಯನಾಡು ದುರಂತಕ್ಕೆ ಸಚಿವ ಕೃಷ್ಣೇಗೌಡ ಪ್ರತಿಕ್ರಿಯೆ ನೀಡಿದ್ದು, ಪರಿಸರದ ಮೇಲೆ ಆಗುತ್ತಿರುವ ಹಾನಿ ನಾವು ಗಮನಿಸುತ್ತಿಲ್ಲ. ಸಿಕ್ಕ ಸಿಕ್ಕ ಕಡೆ ರಸ್ತೆ ಮಾಡುತ್ತಿದ್ದೇವೆ ಮರ ಕಡಿಯುತ್ತೇವೆ. ನಮ್ಮ ಕಾಲಿಗೆ ನಾವೇ ಕೊಡಲಿ ಹಾಕುತ್ತಿದ್ದೇವೆ. ಇವೆಲ್ಲದರ ಸಂಘಟಿತ ಪ್ರತಿಫಲವೇ ವಯನಾಡಲ್ಲಿ ಆಗಿದೆ. ನಮ್ಮ ಆಸೆ ದುರಾಸೆಗಳಿಗೆ ನಾವು ಇತಿಮಿತಿ ಆಗಬೇಕಿದೆ ಎಂದರು. ಎಲ್ಲಿ ದುರ್ಘಟನೆ ಆಗುತೆಂದು ಡಿಸಿಗಳು ಅಂದಾಜಿಸಬೇಕು ಅಂತಹ…

Read More

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ 2024 ರ ಆಗಸ್ಟ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50 ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ.ಕಿರಣ್ ಸಿಂಗ್ ಅವರು ತಿಳಿಸಿದ್ದಾರೆ. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೇ ಕನ್ನಡ ಪುಸ್ತಕ ಪ್ರಾಧಿಕಾರದ ಆನ್‌ಲೈನ್ https://kpp.karnataka.gov.in ವೆಬ್‌ಸೈಟ್ (ನಮ್ಮ ಪುಸ್ತಕಗಳ ವಿಭಾಗ) ನಲ್ಲಿ ಕೂಡ ಶೇ.50 ರಿಯಾಯಿತಿ ಲಭ್ಯವಿದೆ. ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬAಧಿಸಿದAತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು…

Read More

ಬೆಂಗಳೂರು: ರಾಜ್ಯದ ಮಾನ್ಯತೆ ಪಡೆದಂತ ಪತ್ರಕರ್ತರಿಗೆ ನೀಡಲಾಗುತ್ತಿರುವಂತ ಕೆ ಎಸ್ ಆರ್ ಟಿ ಸಿ ಸ್ಮಾರ್ಟ್ ಕಾರ್ಡ್ ಬಸ್ ಪಾಸ್ ( Journalist KSRTC Bus Pass ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಈ ಕುರಿತಂತೆ ಕೆ ಎಸ್ ಆರ್ ಟಿ ಸಿಟ ಮುಖ್ಯ ಸಂಚಾರ ವ್ಯವಸ್ಥಾಪಕರು ಮಾಹಿತಿ ನೀಡಿದ್ದು, ಮಾನ್ಯತೆ ಪಡೆದ ಪತ್ರಕರ್ತರಿಗೆ ವಿತರಿಸಲಾಗಿರುವ ಸ್ಮಾರ್ಟ್ ಕಾರ್ಡ್ ನ ಅವಧಿಯು ದಿನಾಂಕ 31-12-2023ಕ್ಕೆ ಕೊನೆಗೊಂಡಿತ್ತು, ಅದನ್ನು ದಿನಾಂಕ 31-07-2024ರವರೆಗೆ ವಿಸ್ತರಿಸಲಾಗಿತ್ತು ಎಂದಿದ್ದಾರೆ. ಆಡಳಿತಾತ್ಮಕ ಕಾರಣಗಳಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಾನ್ಯತೆ ಪಡೆದ ಪತ್ರಕರ್ತರಿಗೆ ಕೆಎಸ್ಆರ್ ಟಿಸಿಯಿಂದ ವಿತರಿಸಲಾಗಿರುವ ಸ್ಮಾರ್ಟ್ ಕಾರ್ಡ್ ಬಸ್ ಪಾಸ್ ಗಳ ಅವಧಿಯನ್ನು ದಿನಾಂಕ 10-08-2024ರವರೆಗೆ ವಿಸ್ತರಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ. ದಿನಾಂಕ 31-12-2023ರವರೆಗೆ ಚಾಲ್ತಿಯಲ್ಲಿರುವ ಸ್ಮಾರ್ಟ್ ಕಾರ್ಡ್ ಬಸ್ ಪಾಸ್ ಗಳನ್ನು ಹೊಂದಿರುವ ಪತ್ರಕರ್ತರುಗಳನ್ನು ದಿನಾಂಕ 10-08-2024ರವರೆಗೆ ಕೆ ಎಸ್ ಆರ್ ಟಿಸಿಯ ಬಸ್ಸುಗಳಲ್ಲಿ ಪ್ರಯಾಣಿಸಲು ಅನುಮತಿಸುವಂತೆ ನಿಗಮದ ಎಲ್ಲಾ ನಿರ್ವಾಹಕರಿಗೆ ಸೂಚಿಸಲಾಗಿದೆ. ಅಲ್ಲದೇ ಯಾವುದೇ…

Read More

ಬೆಂಗಳೂರು: ನಗರಕ್ಕೆ ರೈಲಿನ ಮೂಲಕ ಹೊರ ರಾಜ್ಯಗಳಿಂದ ನಾಯಿ ಮಾಂಸ ಸರಬರಾಜು ಮಾಡುತ್ತಿರುವಂತ ಗಂಭೀರ ಆರೋಪ ಕೇಳಿ ಬಂದಿತ್ತು. ಅಲ್ಲದೇ ರೈಲ್ವೇ ನಿಲ್ದಾಣದಲ್ಲೇ ಬಂದಂತ ಮಾಂಸವನ್ನು ಪ್ರಶ್ನಿಸಲಾಗಿತ್ತು. ಇದೀಗ ಆ ಮಾಂಸದ ಮಾದರಿಯನ್ನು ಸಂಗ್ರಹಿಸಿದ್ದಂತ ಆಹಾರ ಇಲಾಖೆಯು, ಬೆಂಗಳೂರಿಗೆ ರೈಲಿನ ಮೂಲಕ ಬಂದಿದ್ದು ನಾಯಿ ಮಾಂಸವಲ್ಲ, ಕುರಿ ಮಾಂಸ ಎಂಬುದಾಗಿ ಅಧಿಕೃತ ಮಾಹಿತಿಯನ್ನು ನೀಡಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಅಧಿಕೃತ ಮಾಹಿತಿಯನ್ನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ಹಂಚಿಕೊಂಡಿದೆ.  ದಿನಾಂಕ:26.07.2024 ರಂದು ಸಂಜೆಯ ವೇಳೆಗೆ ಮಾಧ್ಯಮಗಳಲ್ಲಿ ಬೆಂಗಳೂರು ನಗರಕ್ಕೆ ರೈಲುಗಳ ಮುಖಾಂತರ ರಾಜಸ್ಥಾನದಿಂದ ಮಾಂಸವು ಸರಬರಾಜು ಆಗುತ್ತಿರುವ ಕುರಿತಂತೆ ಸುದ್ದಿಗಳು ಭಿತ್ತರವಾಗಿರುತ್ತದೆ ಎಂದು ಹೇಳಿದೆ. ಈ ಕುರಿತಂತೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ವತಿಯಿಂದ ಈ ಕೆಳಕಂಡಂತೆ ಕ್ರಮಗಳನ್ನು ವಹಿಸಲಾಗಿರುತ್ತದೆ. ಬೆಂಗಳೂರು ನಗರಕ್ಕೆ ರೈಲುಗಳ ಮುಖಾಂತರ ಕುರಿ ಮತ್ತು ಇತರೆ ಪ್ರಾಣಿಗಳ ಮಾಂಸವು ಸರಬರಾಜು ಆಗುತ್ತಿರುವ ಕುರಿತಂತೆ ಪರಿಶೀಲಿಸಲು ಪೋಲಿಸ್ ಇಲಾಖೆ ಹಾಗೂ ಆಹಾರ ಸುರಕ್ಷತೆ ಮತ್ತು…

Read More

ಬೆಂಗಳೂರು: ರಾಜ್ಯದ ಜನತೆ ಪ್ರಶ್ನಿಸಬೇಕಾಗಿರುವುದು ದಲಿತ ವಿರೋಧಿ ಕೇಂದ್ರ ಸರ್ಕಾರವನ್ನು, ದಲಿತ ಪರ ರಾಜ್ಯ ಸರ್ಕಾರವನ್ನು ಅಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ದಲಿತ ವಿರೋಧಿ ಆರೋಪಕ್ಕೆ ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವಂತ ಅವರು,  ರಾಷ್ಟ್ರಮಟ್ಟದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪಹಂಚಿಕೆ (ಎಸ್ ಸಿಎಸ್ ಪಿ/ಟಿಎಸ್ ಪಿ) ಯೋಜನೆಯನ್ನು ಜಾರಿಗೊಳಿಸದೆ, ದಲಿತರ ಅಭಿವೃದ್ದಿಗೆ ನ್ಯಾಯಬದ್ಧವಾಗಿ ಸಲ್ಲಬೇಕಾಗಿರುವ ಬಜೆಟ್ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸಿ ಅನ್ಯಾಯ ಮಾಡುತ್ತಿರುವ ಕೇಂದ್ರ ಸರ್ಕಾರಕ್ಕೆ ನಮ್ಮ ಸರ್ಕಾರವನ್ನು ಪ್ರಶ್ನಿಸುವ ಯಾವ ನೈತಿಕ ಅಧಿಕಾರ ಇದೆ? ಎಂದು ಪ್ರಶ್ನಿಸಿದ್ದಾರೆ. ದಲಿತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎಸ್ ಸಿ/ಎಸ್ ಟಿ ಕಲ್ಯಾಣದ ಬಗ್ಗೆ ಕರ್ನಾಟಕ ಸರ್ಕಾರವನ್ನು ಪ್ರಶ್ನಿಸಬೇಕೆಂದು ಕರೆ ಕೊಟ್ಟಿದ್ದಾರೆ. ನಿರ್ಮಲಾ ಸೀತಾರಾಮನ್ ಅವರೇ, ನಿಮಗೆ ದಲಿತರ ಬಗ್ಗೆ ಅಷ್ಟೊಂದು ಕಾಳಜಿ ಇದ್ದರೆ ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಯನ್ನು ಜಾರಿಗೆ ತಂದು ಕೇಂದ್ರ ಬಜೆಟ್ ನಲ್ಲಿ…

Read More

ರಾಮನಗರ: ಭ್ರೂಣ ಹತ್ಯೆ ಮಾಡಿಸಿ ಪರಾರಿಯಾಗಿರುವಂತ ಪ್ರಿಯಕರನ ವಿರುದ್ಧ ಕಾನೂನು ಕ್ರಮ ಕೈಗೊಳ್ಳದಂತ ಪೊಲೀಸರ ವಿರುದ್ಧವೇ ಸಂತ್ರಸ್ತೆಯೊಬ್ಬರು ಸಿಡಿದೆದ್ದಿದ್ದಾರೆ. ಅಲ್ಲದೇ ರಾಮನಗರ ಪೊಲೀಸರ ವಿರುದ್ಧ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ. ರಾಮನಗರ ಜಿಲ್ಲೆಯ ಮಾಗಡಿ ಮೂಲದ ಮಹಿಳೆಯೊಬ್ಬರು ಭ್ರೂಣ ಹತ್ಯೆ ಮಾಡಿಸಿದಂತ ಪ್ರಿಯಕರನ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ. ತಮಗೆ ನ್ಯಾಯ ಕೊಡಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ಅಲ್ಲದೇ ನ್ಯಾಯ ಸಿಗದೇ ಹೋದ್ರೆ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಎದುರೇ ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಎಚ್ಚರಿಕೆ ನೀಡಿದ್ದಾರೆ. ಪ್ರಿಯಕರ ದಯಾನಂದ್ (24) ವಿರುದ್ಧ ರಾಮನಗರದ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದೂ ತೆಗೆದುಕೊಳ್ಳುತ್ತಿಲ್ಲ. ದಯಾನಂದ ಗೆಳೆಯ ದೂರು ಕೊಡಿಸುವುದಾಗಿ ನನ್ನಿಂದ 1.40 ಲಕ್ಷ ಹಣ ಲಂಚವನ್ನು ಪಡೆದಿದ್ದಾನೆ. ಆದರೂ ಸಿಪಿಐ ಕ್ರಮ ಕೈಗೊಳ್ಳುತ್ತಿಲ್ಲ. ಕಳೆದ ನಾಲ್ಕು ತಿಂಗಳಿನಿಂದ ಪೊಲೀಸ್ ಠಾಣೆಗೆ ಅಲೆದು, ಅಲೆದು ಸಾಕಾಗಿದೆ ಅಂತ ಅಳಲು ತೋಡಿಕೊಂಡಿದ್ದಾರೆ. ಅಂದಹಾಗೇ 5 ವರ್ಷಗಳ ಹಿಂದೆ…

Read More

ಪ್ಯಾರಿಸ್: ಪ್ಯಾರಿಸ್ ಒಲಂಪಿಕ್ಸ್ ನಲ್ಲಿ ಬಾಕ್ಸರ್ ಲೊವ್ಲಿನಾ ಬೊರ್ಗೊಹೈನ್ ಅವರು ಸುನ್ನಿವಾ ಹಾಪ್ ಸ್ಟಾಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿದ್ದಾರೆ. ಈ ಮೂಲಕ ಪ್ಯಾರಿಸ್ ಒಲಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕದ ಭರವಸೆಯನ್ನು ಮೂಡಿಸಿದ್ದಾರೆ. ಲೊವ್ಲಿನಾ ಬೊರ್ಗೊಹೈನ್ ಅವರು ಸುನ್ನಿವಾ ಹಾಫ್ ಸ್ಟಾಡ್ ವಿರುದ್ಧ ರೌಂಡ್ 2 ಕೂಡ ಮುಗಿಸಿದ ಬಳಿಕ, ರೌಂಡ್ 3 ನೊಂದಿಗೆ ಪಂದ್ಯಾವಳಿಯಲ್ಲಿ ಗೆಲ್ಲುವ ಮೂಲಕ ಫೈನಲ್ ಗೆ ಲಗ್ಗೆ ಇಟ್ಟಿದ್ದಾರೆ. ಸರ್ವಾನುಮತದ ನಿರ್ಧಾರದಿಂದ (5-0) ಲೊವ್ಲಿನಾ ಪಂದ್ಯವನ್ನು ಗೆದ್ದರು. ಈ ಮೂಲಕ ಕ್ವಾಟರ್ ಫೈನಲ್ ಗೆ ಪ್ರವೇಶ ಮಾಡಿದ್ದಾರೆ. https://kannadanewsnow.com/kannada/is-it-possible-to-share-dais-with-the-person-who-poisoned-deve-gowdas-family/ https://kannadanewsnow.com/kannada/paris-olympics-after-sindhu-lakshya-sen-enters-round-of-16-paris-olympic-2024/

Read More

ನವದೆಹಲಿ: ಹಾಸನದ ಮಾಜಿ ಶಾಸಕ ಪ್ರೀತಂಗೌಡರನ್ನು ಪಾದಯಾತ್ರೆ ಸಭೆಗೆ ಕರೆಸಿದ್ದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕೇಂದ್ರ ಸಚಿವರು, ಜೆಡಿಎಸ್ ರಾಜ್ಯಾಧ್ಯಕ್ಷರೂ ಆಗಿರುವ ಹೆಚ್.ಡಿ.ಕುಮಾರಸ್ವಾಮಿ ಅವರು, ದೇವೆಗೌಡರ ಕುಟುಂಬಕ್ಕೆ ವಿಷ ಇಟ್ಟವನೊಂದಿಗೆ ವೇದಿಕೆ ಹಂಚಿಕೊಳ್ಳಲು ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ. ನವದೆಹಲಿಯಲ್ಲಿ ಇಂದು ಬೆಳಗ್ಗೆ ಮಾಧ್ಯಮಗಳ ಜತೆ ಮಾತನಾಡುತ್ತಾ, ಪಾದಯಾತ್ರೆಯಲ್ಲಿ ಭಾಗಿಯಾಗಬಾರದು ಎಂದು ಜೆ‌.ಟಿ.ದೇವೇಗೌಡರ ಅಧ್ಯಕ್ಷತೆಯ ಕೋರ್ ಕಮಿಟಿ ಬೆಂಗಳೂರಿನಲ್ಲಿ ಮಂಗಳವಾರ ತೀರ್ಮಾನ ಮಾಡಿದೆ. ಬಿಜೆಪಿ ನಾಯಕರು ಪಾದಯಾತ್ರೆ ಮಾಡಬೇಕು ಎಂದು ನಿರ್ಧಾರ ಕೈಗೊಂಡು ಸಿದ್ಧತೆ ಮಾಡುತ್ತಿದ್ದಾರೆ. ಆದರೆ, ಪಾದಯಾತ್ರೆಗೆ ಇದು ಸೂಕ್ತ ಸಂದರ್ಭವಲ್ಲ ಎನ್ನುವ ಕಾರಣಕ್ಕೆ ನಾವು ಈ ಪದಯತ್ರೆಯಿಂದ ಹಿಂದೆ ಸರಿದಿದ್ದೇವೆ ಎಂದು ಕುಮಾರಸ್ವಾಮಿ ಅವರು ಹೇಳಿದರು. ಕೋರ್ ಕಮಿಟಿ ಸಭೆಯಲ್ಲಿ ಪಾದಯಾತ್ರೆ ಬಗ್ಗೆ ನಮ್ಮ ನಾಯಕರು ವಿಸ್ತೃತವಾಗಿ ಚರ್ಚೆ ನಡೆಸಿದ್ದಾರೆ. ಎಲ್ಲರ ಅಭಿಪ್ರಾಯವೂ ಪಾದಯಾತ್ರೆ ಸದ್ಯಕ್ಕೆ ಬೇಡ, ಸ್ವಲ್ಪ ದಿನದ ನಂತರ ಮಾಡೋಣ ಎನ್ನುವುದೇ ಆಗಿದೆ. ಕೊಡಗು ಜಿಲ್ಲೆಯ ಪಕ್ಕದಲ್ಲಿಯೇ ಇರುವ ಕೇರಳದ ವೈನಾಡಿನಲ್ಲಿ ಭಾರೀ ಭೂ ಕುಸಿತ ಉಂಟಾಗಿ…

Read More

ನವದೆಹಲಿ: ಮುಡಾ ಅಕ್ರಮ ಸೇರಿದಂತೆ ವಿವಿಧ ರಾಜ್ಯ ಸರ್ಕಾರದ ಹಗರಣ ಖಂಡಿಸಿ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸುವುದಾಗಿ ಬಿಜೆಪಿ ಘೋಷಿಸಿದೆ. ಈ ಬೆನ್ನಲ್ಲೇ ಜೆಡಿಎಸ್ ಯೂ ಟರ್ನ್ ಹೊಡೆದಿದ್ದು, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಅತೃಪ್ತಿಯನ್ನು ಹೊರಹಾಕಿದ್ದಾರೆ. ನವದೆಹಲಿಯಲ್ಲಿ ಇಂದು ಬೆಳಗ್ಗೆ ಮಾಧ್ಯಮಗಳ ಜತೆ ಮಾತನಾಡುತ್ತಾ, ಖಾರವಾಗಿ ಪ್ರತಿಕ್ರಿಯಿಸಿದ ಅವರು; ದೇವೇಗೌಡರ ಕುಟುಂಬವನ್ನು ನಾಶ ಮಾಡಲು ಹೊರಟ ಪ್ರೀತಂಗೌಡನನ್ನು ಸಭೆಯಲ್ಲಿ ಕೂರಿಸಿಕೊಂಡು, ನನ್ನನ್ನ ಸಭೆಗೆ ಕರೆಯುತ್ತೀರಾ? ಪೆನ್ ಡ್ರೈವ್ ಗಳನ್ನು ಹಂಚಿವರು ಯಾರು ಎಂದು ಗೊತ್ತಿಲ್ಲವೇ? ಚುನಾವಣಾ ಮೈತ್ರಿಯೇ ಬೇರೆ. ರಾಜಕೀಯವೇ ಬೇರೆ ಎಂದು ಕಿಡಿಕಾರಿದರು. ಇಡೀ ಮಳೆ, ನೆರೆ, ಭೂ ಕುಸಿತ, ಬೆಳೆನಾಶದಿಂದ ತತ್ತರಿಸಿದೆ. ಇಂತಹ ಸಂಕಷ್ಟ ಪರಿಸ್ಥಿತಿಯಲ್ಲಿ ಪಾದಯಾತ್ರೆ ಮಾಡಿದರೆ ಜನರಿಂದ ಟೀಕೆಗಳು ಬರುವ ಸಾಧ್ಯತೆ ಇದೆ. ಇದೇ ಕಾರಣದಿಂದ ನಾವು ಪಾದಯಾತ್ರೆಯಿಂದ ಹಿಂದೆ ಸರಿದಿದ್ದೇವೆ ಎಂದು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು. ಈ ಪಾದಯಾತ್ರೆಯಿಂದ ರಾಜ್ಯದ ಜನರಿಗೆ ಆಗುವ ಲಾಭವಾದರೂ ಏನು? ಇಲ್ಲಿ ಕಾನೂನು ಹೋರಾಟ…

Read More

ಬೆಂಗಳೂರು : ಕರ್ನಾಟಕದ ಜೈವಿಕ ಆರ್ಥಿಕತೆಯು 2020-22ರಲ್ಲಿ 28 ಬಿಲಿಯನ್ ಡಾಲರ್‌ ಇದ್ದುದು 2023ರಲ್ಲಿ 31 ಬಿಲಿಯನ್‌ ಡಾಲರ್‌ ತಲುಪಿದ್ದು ಸುಮಾರು ಶೇ. 10.7ರಷ್ಟು ಹೆಚ್ಚಳವಾಗಿದೆ, ಭಾರತದ ಪ್ರಮುಖ ಜೈವಿಕ ತಂತ್ರಜ್ಞಾನ ರಾಜ್ಯಗಳಲ್ಲಿ ಒಂದಾದ ಕರ್ನಾಟಕ 2023ರಲ್ಲಿ ರಾಷ್ಟ್ರೀಯ ಜೈವಿಕ ತಂತ್ರಜ್ಞಾನ ಹೂಡಿಕೆಗಳಲ್ಲಿ ಶೇ.30 ಕ್ಕಿಂತ ಹೆಚ್ಚು ಆಕರ್ಷಿಸಿದ್ದು, ಇದು ಭಾರತದ ಜೈವಿಕ ಆರ್ಥಿಕತೆಗೆ ಶೇ.21ರಷ್ಟು ಕೊಡುಗೆ ನೀಡುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು. ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ (ಕಿಟ್ಸ್)̧, ಕರ್ನಾಟಕ ಸರ್ಕಾರದ ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಅಸೋಸಿಯೇಷನ್ ಆಫ್ ಬಯೋಟೆಕ್ನಾಲಜಿ ಲೆಡ್ ಎಂಟರ್ಪ್ರೈಸಸ್ (ABLE) ಸಂಸ್ಥೆಯ ಸಹಯೋಗದೊಂದಿಗೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ʼಕರ್ನಾಟಕ ಜೈವಿಕ ಆರ್ಥಿಕ ವರದಿ-2024ʼ ಬಿಡುಗಡೆ ಮಾಡಿ ಸಚಿವರು ಮಾತನಾಡುತ್ತಿದ್ದರು. 2030 ರ ವೇಳೆಗೆ ಜೈವಿಕ ಆರ್ಥಿಕತೆಯನ್ನು ಮೂರು ಪಟ್ಟು ಹೆಚ್ಚಿಸುವ ಗುರಿಯೊಂದಿಗೆ ಜೈವಿಕ…

Read More