Author: kannadanewsnow09

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ಸಹಾಯಕ ಚುನಾವಣಾಧಿಕಾರಿಯಾಗಿ ಕೆ.ಆರ್.ದೇವರಾಜು ಅವರು ನೇಮಕಗೊಂಡಿದ್ದಾರೆ. ಕೆಯುಡಬ್ಲ್ಯೂಜೆ ಕಚೇರಿಯಲ್ಲಿ ಮುಖ್ಯ ಚುನಾವಣಾಧಿಕಾರಿ ಎನ್.ರವಿಕುಮಾರ್ (ಟೆಲೆಕ್ಸ್) ಅವರು ನೇಮಕಾತಿ ಆದೇಶ ನೀಡಿದರು. ದೇವರಾಜು ಅವರಿಗೆ ಕೆಯುಡಬ್ಲ್ಯೂಜೆ ಶುಭಾಶಯಗಳನ್ನು ತಿಳಿಸಿದೆ. https://twitter.com/kuwj_r/status/1977753355649692159?s=48&t=K__Bb-oISWk0C8ZNc8qCGw ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ)ಚುನಾವಣೆಗೆ ಅ.13ರಂದು ಮುಖ್ಯ ಚುನಾವಣಾಧಿಕಾರಿ ಎನ್.ರವಿಕುಮಾರ್ (ಟೆಲೆಕ್ಸ್ ) ಅವರು ಅಧಿಸೂಚನೆ ಹೊರಡಿಸಿದರು. ಸಹಾಯಕ ಚುನಾವಣಾಧಿಕಾರಿ ದೇವರಾಜು ಇದ್ದರು. ರಾಜ್ಯ ಮತ್ತು ಜಿಲ್ಲಾ ಸಂಘಗಳಿಗೆ ಏಕಕಾಲಕ್ಕೆ ಆರಂಭಗೊಂಡಿರುವ ಚುನಾವಣಾ ಪ್ರಕ್ರಿಯೆ ನ.9ಕ್ಕೆ ಮುಗಿಯಲಿದೆ. https://kannadanewsnow.com/kannada/dalit-sangharsh-samiti-in-sagar-condemns-shoe-hurled-at-supreme-court-cj-gavai-protests/ https://kannadanewsnow.com/kannada/cooperative-societies-also-come-under-the-ambit-of-anti-corruption-law-karnataka-high-court/

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ತಿಂಗಳಲ್ಲಿ ಒಂದು ದಿನ ಸರ್ಕಾರಿ, ಖಾಸಗಿ ಮಹಿಳಾ ಉದ್ಯೋಗಿಗಳಿಗೆ ವೇತನ ಸಹಿತ ಋತುಚಕ್ರ ರಜೆಯನ್ನು ಘೋಷಿಸಲಾಗಿತ್ತು. ಅದರಂತೆ ಶೀಘ್ರದಲ್ಲೇ ನೀತಿ ರೂಪಿಸಿ, ಆದೇಶ ಹೊರಡಿಸಲಿದೆ. ಈ ಕುರಿತಂತೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾಹಿತಿ ನೀಡಿದ್ದು, ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನದ ವೇತನಸಹಿತ ಮುಟ್ಟಿನ ರಜೆ ನೀಡುವುದನ್ನು ಜಾರಿ ಮಾಡಲು ನಿಯಮ ರೂಪಿಸಲಾಗುವುದು. ಸರ್ಕಾರ ಕಾನೂನು ಮಾಡಿದರೆ ಕಂಪನಿಗಳು ಪಾಲನೆ ಮಾಡಲೇಬೇಕು. ಈ ನೀತಿ ಜಾರಿ ಸಂಬಂಧ ಮಸೂದೆ ಮಂಡಿಸಲಾಗುವುದು ಅಥವಾ ಸುಗ್ರೀವಾಜ್ಞೆ ಹೊರಡಿಸಲಾಗುವುದು ಎಂದಿದ್ದಾರೆ. https://twitter.com/KarnatakaVarthe/status/1977719458069188925

Read More

ಬಾಗಲಕೋಟೆ : ನಮ್ಮ ಸಮಾಜ ಸರ್ವ ಜನಾಂಗದ ಶಾಂತಿಯ ತೋಟವಾಗಬೇಕು ಎಲ್ಲರ ಉದ್ಯಾನವಾಗಬೇಕು. ಜನರಲ್ಲಿ ಪರಸ್ಪರ ಪ್ರೀತಿಯಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾಸೋಹ ರತ್ನ ಚಕ್ರವರ್ತಿ ದಾನೇಶ್ವರರರು ಶ್ರೀ ಬಸವ ಗೋಪಾಲ ನೀಲಮಾಣಿಕ ಮಠ ,ಇವರ ನೇತೃತ್ವದಲ್ಲಿ ರಬಕವಿ ಬನಹಟ್ಟಿಯ ಸುಕ್ಷೇತ್ರ ಬಂಡಿಗಾಣಿ ಮಠದಲ್ಲಿ ಆಯೋಜಿಸಲಾಗಿದ್ದ ವಿಶ್ವಶಾಂತಿಗಾಗಿ ಸರ್ವಧರ್ಮ ಮಹಾಸಂಗಮ 2025 ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತಾಡಿದರು. ಸರ್ವ ಧರ್ಮ ಮಹಾಸಂಗಮ ನಡೆಯುತ್ತಿರುವುದು ಇಂದಿನ ಪರಿಸ್ಥಿತಿಯಲ್ಲಿ ಸಮಂಜಸವಾಗಿದೆ. ದೇಶದಲ್ಲಿ ಹಾಗೂ ಜಗತ್ತಿನಲ್ಲಿ ಅನೇಕ ಧರ್ಮ, ಜಾತಿಗಳಿವೆ. ಜಾತಿ ಧರ್ಮಗಳನ್ನು ನಾವು ಮಾಡಿಲ್ಲ, ಮೊದಲಿನಿಂದ ನಮ್ಮಲ್ಲಿ ಬೆಳೆದುಕೊಂಡು ಬಂದಿದೆ. ನಾವು ಯಾವುದೇ ಧರ್ಮ, ಜಾತಿಗೆ ಸೇರಿದ್ದರೂ ಬೇರೆ ಜಾತಿಯವರನ್ನು ಪ್ರೀತಿಸಬೇಕೇ ಹೊರತು ದ್ವೇಷಿಸಬಾರದು. ಯಾವುದೇ ಜಾತಿ, ಧರ್ಮಕ್ಕೆ ಸೇರಿದ್ದರೂ ನಾವು ಮನುಷ್ಯರು ಎನ್ನುವುದನ್ನು ಅರ್ಥಮಾಡಿಕೊಳ್ಳಬೇಕು ಎಂದರು. ಕಂದಾಚಾರ, ಮೌಢ್ಯ ಪಾಲಿಸಿದರೆ ವಿದ್ಯಾವಂತರಾಗಿಯೂ ಪ್ರಯೋಜನವಿಲ್ಲ ಖಾಯಿಲೆ ಬಂದರೆ ಶರೀರಕ್ಕೆ ಯಾರ ರಕ್ತವಾದರೂ ಕೊಡಿ. ಪ್ರಾಣ ಉಳಿದರೆ ಸಾಕು ಎನ್ನುತ್ತೇವೆ. ಇಂಥವರದ್ದೇ ರಕ್ತ…

Read More

ಶಿವಮೊಗ್ಗ : ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆಯಲು ಪ್ರಯತ್ನದಿಸಿದ ನ್ಯಾಯವಾದಿ ರಾಕೇಶ್ ಕಿಶೋರ್ ಅವರನ್ನು ಗಡಿಪಾರು ಅಥವಾ ಕಠಿಣ ಶಿಕ್ಷೆ ವಿಧಿಸುವ ಜೊತೆಗೆ ಇವರ ಹಿಂದೆ ಯಾರು ಯಾರು ಇದ್ದಾರೆ ಎನ್ನುವುದನ್ನು ತನಿಖೆ ನಡೆಸಿ ಉಗ್ರ ಶಿಕ್ಷೆ ನೀಡುವಂತೆ ಒತ್ತಾಯಿಸಿ ಇಂದು ಸಾಗರದಲ್ಲಿ ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಉಪವಿಭಾಗಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಭಾರತದ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಆರ್.ಗವಾಯಿ ದಲಿತ ಸಮುದಾಯಕ್ಕೆ ಸೇರಿದ್ದು ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವಸಿದ್ದಾಂತದ ಆಧಾರದ ಮೇಲೆ ಅತ್ಯಂತ ಘನತೆಯಿಂದ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರ ಮೇಲೆ ಅ.6ರಂದು ನ್ಯಾಯಾಲಯಕ್ಕೆ ಸಂಬಂಧಿಸಿದ ವಿಚಾರಣೆ ಸಂದರ್ಭದಲ್ಲಿ 71 ವರ್ಷದ ರಾಕೇಶ್ ಕಿಶೋರ್ ಎಂಬ ವಕೀಲರು ತನ್ನ ಕಾಲಿನ ಶೂ ಅನ್ನು ತೆಗೆದು ಎಸೆದಿರುವ ಆಘಾತಕಾರಿ ಘಟನೆ ನಡೆದಿದೆ. ಇದು ಭಾರತದ ನ್ಯಾಯಾಂಗ ವ್ಯವಸ್ಥೆಗೆ ಕರಾಳ ದಿನವಾಗಿದೆ. ಪ್ರಜ್ಞಾವಂತ ನಾಗರೀಕರು ಈ…

Read More

ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ನಡೆಯುತ್ತಿದೆ. ಈ ಜಾತಿಗಣತಿಯಲ್ಲಿ ತೊಡಗಿರುವಂತ ಸಮೀಕ್ಷಾದಾರರು, ಮೇಲ್ವಿಚಾರಕರಿಗೆ ಸರ್ಕಾರ ಸಿಹಿಸುದ್ದಿ ನೀಡಿದೆ. ಅದೇ ಗೌರವಧನವನ್ನು ನಿಗದಿ ಪಡಿಸಿ ಆದೇಶಿಸಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಕಾರ್ಯದರ್ಶಿ ಅವರು ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಪಾಲ್ಗೊಂಡಿರುವ ಸಮೀಕ್ಷಾದಾರರು ಮತ್ತು ಮೇಲ್ವಿಚಾರಕರಿಗೆ ಈ ಕೆಳಕಂಡಂತೆ ಗೌರವಧನವನ್ನು ನಿಗದಿ ಪಡಿಸಲಾಗಿದೆ ಎಂದಿದೆ. ರಾಜ್ಯ ಸರ್ಕಾರದಿಂದ ಜಾತಿಗಣತಿಯಲ್ಲಿ ತೊಡಗಿರುವಂತ ಸಮೀಕ್ಷಾದಾರರಿಗೆ ಲಮ್ ಸಂ ರೂ.5,000 ಹಾಗೂ ಪ್ರತಿ ಮನೆ ಸಮೀಕ್ಷೆಗೆ ರೂ.100 ರಂತೆ ಗೌರವಧನವನ್ನು ನಿಗದಿ ಪಡಿಸಲಾಗಿದೆ. ಮೇಲ್ವಿಚಾರಕರಿಗೆ ರೂ.10,000 ಗೌರವಧನ ನಿಗದಿ ಪಡಿಸಲಾಗಿದೆ. ಮೊದಲ ಕಂತಿನಲ್ಲಿ ತಲಾ ರೂ.5,000ದಂತೆ ಸಮೀಕ್ಷಾದಾರರಿಗೆ ಗೌರವಧನ ಪಾವತಿಸಲು ಅನುದಾನ ಬಿಡುಗಡೆ ಮಾಡಲಾಗಿದೆ. ಸಮೀಕ್ಷಾದಾರರಿಗೆ ಬಾಕಿ ಮೊತ್ತ ಹಾಗೂ ಮೇಲ್ವಿಚಾರಕರಿಗೆ ನಿಗದಿಪಡಿಸಿದ ಗೌರವಧನವನ್ನು ಬಿಡುಗಡೆ ಮಾಡಬೇಕಾಗಿದ್ದು, ಒಂದು…

Read More

ಉಡುಪಿ: ಕನ್ನಡ ಖ್ಯಾತ ನಟ, ರಂಗಕರ್ಮಿ ರಾಜು ತಾಳಿಕೋಟೆ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಮೂಲಕ ಖ್ಯಾತ ನಟ, ರಂಗ ಕರ್ಮಿ ರಾಜು ತಾಳಿಕೋಟೆ ಅವರು ಇನ್ನಿಲ್ಲವಾಗಿದ್ದಾರೆ. ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಅವರು ಇನ್ನಿಲ್ಲವಾಗಿದ್ದಾರೆ. ಅವರು ಖಾಸ್ಗತೇಶ್ವರ ನಾಟಕ ಮಂಡಳಿಯ ಮಾಲೀಕರಾಗಿದ್ದರು. ರಾಜು ತಾಳಿಕೋಟೆ ಅವರ ಪೂರ್ಣ ಹೆಸರು ರಾಜೇಸಾಬ್ ಮುಕ್ತುಮ್ ಸಾಬ್ ತಾಳಿಕೋಟೆಯಾಗಿತ್ತು. ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿಯ ನಿವಾಸಿ ರಾಜು ತಾಳಿಕೋಟೆ ಆಗಿದ್ದರು. ಪ್ರಸ್ತುತ ವಿಜಯಪುರ ಜಿಲ್ಲೆಯ ತಾಳಿಕೋಟೆಯಲ್ಲಿ ವಾಸವಿದ್ದರು. ಅವರ ಪ್ರಮುಖ ನಾಟಕಗಳೆಂದರೇ ಕಲಿಯುಗದ ಕುಡುಕ, ಕುಡುಕರ ಸಾಮ್ರಾಜ್ಯದ ಅಸಲಿ ಕುಡುಕ ಆಗಿದ್ದವು. ಪ್ರಮುಖ ನಾಟಕಗಳ ಆಡಿಯೋ ಕ್ಯಾಸೆಟ್ ಜನಪ್ರಿಯವಾಗಿದ್ದವು. ಪ್ರಸ್ತುತ ಅವರು ಧಾರವಾಡದ ರಂಗಾಯಣದ ನಿರ್ದೇಶಕರಾಗಿದ್ದರು. ಇಂತಹ ರಾಜು ತಾಳಿಕೋಟೆ ಹೃದಯಾಘಾತದಿಂದ ನಿಧನರಾಗುವ ಮೂಲಕ ಇನ್ನಿಲ್ಲವಾಗಿದ್ದಾರೆ.

Read More

ಬೆಂಗಳೂರು: ದೀಪಾವಳಿ ಹಬ್ಬಕ್ಕೆದ ಪ್ರಯುಕ್ತ ಬರೋಬ್ಬರಿ ಕೆ ಎಸ್ ಆರ್ ಟಿ ಸಿಯಿಂದ 2,500 ಹೆಚ್ಚುವರಿ ವಿಶೇಷ ಬಸ್ ವ್ಯವಸ್ಥೆಯನ್ನು ಮಾಡಿದೆ. ಈ ಕುರಿತಂತೆ ಕೆ ಎಸ್ ಆರ್ ಟಿ ಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ: 20.10.2025ರಂದು ನರಕ ಚತುರ್ದಶಿ, ದಿನಾಂಕ 22.10.2025ರಂದು ಬಲಿಪಾಡ್ಯಮಿ ಹಬ್ಬವಿರುವುದರಿಂದ ಕರಾರಸಾ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ:17.10.2025 ರಿಂದ 20.10.2025 ರವರೆಗೆ ಬೆಂಗಳೂರಿನಿಂದ ಈ ಕೆಳಕಂಡ ಸ್ಥಳಗಳಿಗೆ 2500 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿರುತ್ತದೆ. ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ದಿನಾಂಕ:22.10.2025 ಹಾಗೂ 26.10.2025ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದಿದೆ. • ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ…

Read More

ಶಿವಮೊಗ್ಗ: ಜಿಲ್ಲೆಯ ಸಾಗರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಬಿ ಸಿ ಟ್ರಸ್ಟ್ (ರಿ ), ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ (ರಿ )ಶಿರಸಿ ಜಿಲ್ಲೆ, ಸ್ವಸಹಾಯ ಸಂಘಗಳ ಒಕ್ಕೂಟ, ಸಾಗರ, ನವ ಜೀವನ ಸಮಿತಿ ಸಾಗರ ಇದರ ಸಹಯೋಗದೊಂದಿಗೆ ಗಾಂಧಿ ಸ್ಮರಣೆ ಹಾಗೂ ಬೃಹತ್ ವ್ಯಸನ ಮುಕ್ತ ಸಮಾವೇಶ ಯಶಸ್ವಿಯಾಗಿ ನಡೆಯಿತು. ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ಬೃಹತ್ ಜನಜಾಗೃತಿ ಜಾಥಾ ಗಾಂಧಿ ಸ್ಮರಣೆ, ಬ್ರಹತ್ ವ್ಯಸನ ಮುಕ್ತರ ಸಮಾವೇಶವನ್ನು ನಗರ ಸಭೆ ಸಾಗರ ಇದರ ಅಧ್ಯಕ್ಷರಾದ ಶ್ರೀಮತಿ ಮೈತ್ರಿ ಪಾಟೀಲ್ ಉದ್ಘಾಟಿಸಿದರು. ಈ ಬಳಿಕ ಮಾತನಾಡಿದಂತ ಅವರು, ಈ ಯೋಜನೆಯ ಕಾರ್ಯಕ್ರಮಗಳ ಮೂಲಕ ಲಕ್ಷಾಂತರ ಕುಟುಂಬಗಳು ಬದುಕನ್ನು ಕಟ್ಟಿಕೊಂಡಿವೆ. ಗಾಂಧೀಜಿಯ ತತ್ವಗಳನ್ನು ಸುವಿಚಾರಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು. ಮದ್ಯ ವರ್ಜನಾ ಶಿಬಿರಗಳಲ್ಲಿ ಭಾಗವಹಿಸಿದ ಕುಟುಂಬಗಳು ಅಭಿವೃದ್ಧಿ ಹೊಂದಿವೆ. ನಮ್ಮ ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಎಲ್ಲರೂ ಪಣ ತೊಡಬೇಕು ಎಂದು ತಿಳಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಶ್ರೀ ಕ್ಷೇತ್ರ…

Read More

ಶಿವಮೊಗ್ಗ : ಶರಾವತಿ ಪಂಪ್ಡ್ ಸ್ಟೋರೇಜ್ ಆಘಾತಕಾರಿ ಯೋಜನೆ. ಇದರ ಶವ ದಹನವಾಗಲೇಬೇಕು. ಯೋಜನೆ ಬೇಡ ಎಂದು ಪ್ರತಿಯೊಂದು ಮನೆಯಿಂದಲೂ ಪ್ರತಿಭಟನೆ ಧ್ವನಿ ಬರಬೇಕು ಎಂದು ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಕರೆ ನೀಡಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಉಪವಿಭಾಗಾಧಿಕಾರಿಗಳ ಕಚೇರಿ ಎದುರು ಸೋಮವಾರ ಶಿವಮೊಗ್ಗ ಜಿಲ್ಲಾ ರೈತ ಸಂಘ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಹಮ್ಮಿಕೊಂಡಿರುವ 10ನೇ ದಿನದ ಹೋರಾಟದಲ್ಲಿ ಪಾಲ್ಗೊಂಡು ಮಾತನಾಡಿದಂತ ಅವರು, ಸುರಂಗ ಮಾರ್ಗ ತೋಡಿ ಯೋಜನೆ ಅನುಷ್ಟಾನಕ್ಕೆ ತಂದರೆ ಪರಿಸರದ ಮೇಲಾಗುವ ದುಷ್ಟರಿಣಾಮದ ಬಗ್ಗೆ ಸರ್ಕಾರ ಯೋಜನೆ ಮಾಡುತ್ತಿಲ್ಲ ಎಂದು ಕಿಡಿಕಾರಿದರು. ವಿದ್ಯುತ್ ದೊಡ್ಡದೋ, ಮನುಷ್ಯ, ಜೀವವೈವಿಧ್ಯದ ಬದುಕು ದೊಡ್ಡದೋ ಎನ್ನುವುದನ್ನು ಸರ್ಕಾರ ಮೊದಲು ನಿರ್ಧಾರ ಕೈಗೊಳ್ಳಬೇಕು. ಸಸ್ಯ ಸಂಪತ್ತು, ಪ್ರಾಣಿ ಪಕ್ಷಿ ಸಂಕುಲ. ಮನುಷ್ಯ ಬದುಕು ನಾಶ ಮಾಡುವ ಯೋಜನೆ ನಮಗೆ ಬೇಡ. ಪಶ್ಚಿಮಘಟ್ಟ ಇಷ್ಟು ದೊಡ್ಡ ಯೋಜನೆಯನ್ನು ಹೊರುವ ಶಕ್ತಿ ಹೊಂದಿಲ್ಲ. ಈ ನಿಟ್ಟಿನಲ್ಲಿ ರೈತ ಸಂಘ ಹಮ್ಮಿಕೊಂಡಿರುವ ಅನಿರ್ಧಿಷ್ಟಾವಧಿ…

Read More

ಬೆಂಗಳೂರು : ಮೆಡಿಕಲ್ ಕೌನ್ಸೆಲಿಂಗ್ ಕಮಿಟಿ (ಎಂಸಿಸಿ) ರಾಜ್ಯದ ನಾಲ್ಕು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ತಲಾ 50 ಸೀಟುಗಳಂತೆ ಒಟ್ಟು 200 ಸೀಟು ಹೆಚ್ಚುವರಿಯಾಗಿ ಮಂಜೂರು ಮಾಡಿದ್ದು, ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಅ.15ರಂದು ಬೆಳಿಗ್ಗೆ 8 ಗಂಟೆವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. 3ನೇ ಸುತ್ತಿಗೆ 377 ವೈದ್ಯಕೀಯ ಸೀಟು ಲಭ್ಯ ಇದ್ದು, ಅದರ ಜತೆಗೆ ಹೆಚ್ಚುವರಿಯಾಗಿ 200 ಸೀಟು ಸೇರ್ಪಡೆ ಆಗಿದೆ. ಒಟ್ಟಾರೆ ಪ್ರಸಕ್ತ ಸಾಲಿನಲ್ಲಿ 10,216 ವೈದ್ಯಕೀಯ ಸೀಟು ಲಭ್ಯವಾದಂತಾಗಲಿದೆ. ಇದಲ್ಲದೆ, ಈ ಸುತ್ತಿಗೆ 180 ದಂತ ವೈದ್ಯಕೀಯ ಸೀಟುಗಳು ಹಂಚಿಕೆಗೆ ಲಭ್ಯ ಇವೆ ಎಂದು ಅವರು ತಿಳಿಸಿದ್ದಾರೆ. ಶಿವಮೊಗ್ಗದ ಸುಬ್ಬಯ್ಯ, ಬೆಂಗಳೂರು ನಾಗರೂರಿನ ಬಿಜಿಎಸ್, ತುಮಕೂರಿನ ಶ್ರೀದೇವಿ, ಮಂಗಳೂರಿನ ಎ.ಜೆ. ವೈದ್ಯಕೀಯ ಕಾಲೇಜುಗಳಿಗೆ ಹೆಚ್ಚುವರಿ ಸೀಟು ಹಂಚಿಕೆ ಮಾಡಿದ್ದು, ಅವುಗಳ ಪ್ರವೇಶಕ್ಕೆ ಹೊಸದಾಗಿ ಆಪ್ಷನ್ಸ್ ದಾಖಲಿಸಲು ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳು ಈ ಕಾಲೇಜುಗಳ ಶುಲ್ಕವನ್ನು ಗಮನಿಸಿ ಆಪ್ಷನ್ಸ್ ದಾಖಲಿಸಬೇಕು ಎಂದು ಅವರು…

Read More