Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಗರದಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಿಂದ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಬೆಂಗಳೂರಲ್ಲಿ 114 ಕಿಲೋಮೀಟರ್ ಎಲಿವೆಟೆಡ್ ಕಾರಿಡಾರ್ ನಿರ್ಮಾಣಕ್ಕೆ ನಿರ್ಧರಿಸಿದೆ. ಅಲ್ಲದೇ ಎರಡು ಹಂತದಲ್ಲಿ ಸುರಂಗ ರಸ್ತೆ ನಿರ್ಮಾಣಕ್ಕೂ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ. ಇಂದು ಈ ಬಗ್ಗೆ ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು, ಬೆಂಗಳೂರಲ್ಲಿ ಎಲಿವೆಟೆಡ್ ಕಾರಿಡಾರ್ ನಿರ್ಮಾಣಕ್ಕೆ ತೀರ್ಮಾನಿಸಿದ್ದೇವೆ. ಬೆಂಗಳೂರಿನಲ್ಲಿ 114 ಕಿಲೋಮೀಟರ್ ಎಲಿವೆಟೆಡ್ ಕಾರಿಡಾರ್ ನಿರ್ಮಿಸಲಾಗುತ್ತಿದೆ. ಈ ಯೋಜನೆ ಸಂಬಂಧ ಅಭಿಪ್ರಾಯ ಪಡೆಯಲಾಗಿದೆ. ಸಂಚಾರ ಪೊಲೀಸ್ ಅಧಿಕಾರಿಗಳ ಅಭಿಪ್ರಾಯ ಪಡೆದಿದ್ದೇವೆ ಎಂದರು. ಬೆಂಗಳೂರಿನಲ್ಲಿ 2 ಹಂತದ ಸುರಂಗ ರಸ್ತೆ ನಿರ್ಮಾಣಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ. ಮೊದಲ ಹಂತಕ್ಕೆ ಶೀಘ್ರವೇ ಟೆಂಡರ್ ಕರೆಯಲಾಗುವುದು. ಬೆಂಗಳೂರಿನ ಸುರಂಗ ರಸ್ತೆಯ ಪ್ರವೇಶ ಹಾಗೂ ನಿರ್ಗಮನದ ಭಾಗದಲ್ಲಿ ಸಂಚಾರ ದಟ್ಟಣೆ ಆಗಬಾರದು. ಈ ಉದ್ದೇಶದಿಂದ ಯೋಜನೆಗೆ ಟೆಂಡರ್ ಕರೆಯುವ ಮುನ್ನ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು, ಡಿಜಿ ಮತ್ತು ಐಜಿಪಿ, ಸಂಚಾರ ಪೊಲೀಸ್ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಾಗುತ್ತದೆ ಎಂದರು.…
ಬೆಂಗಳೂರು: ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಕಾರಣ, ರಾಜ್ಯದ ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಹೀಗಾಗಿ ರೆಡ್ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಿಸಿದೆ. ಇದಲ್ಲದೇ ರಾಜ್ಯದ ವಿವಿಧೆಡೆ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ. ಈ ಬಗ್ಗೆ ಹವಾಮಾನ ಇಲಾಖೆಯ ತಜ್ಞ ಸಿಎಸ್ ಪಾಟೀಲ್ ಮಾಹಿತಿ ನೀಡಿದ್ದು, ಮೇ.24ರಿಂದ ಮೇ.27ರವರೆಗೆ ರಾಜ್ಯದ ಆರು ಜಿಲ್ಲೆಗಳಲ್ಲಿ ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಭಾರೀ ಮಳೆಯಾಗಲಿದೆ. ಹೀಗಾಗಿ ರೆಡ್ ಅಲರ್ಟ್ ನೀಡಲಾಗಿದೆ ಎಂದಿದ್ದಾರೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಯಲ್ಲಿ ನಾಳೆಯಿಂದ ಮೇ.27ರವರೆಗೆ ಭಾರೀ ಮಳೆಯಾಗಲಿದೆ. ಹೀಗಾಗಿ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂಬುದಾಗಿ ತಿಳಿಸಿದ್ದಾರೆ. ಇನ್ನೂ ರಾಜ್ಯದ ಇತರೆಡೆ ಸಾಧಾರಣ ಮಳೆಯಾಗಲಿದೆ. ಹೀಗಾಗಿ ಜನರು ಮುಂಜಾಗ್ರತೆ ವಹಿಸುವಂತೆ ಹವಾಮಾನ ಇಲಾಖೆ ತಜ್ಞ ಮನವಿ ಮಾಡಿದ್ದಾರೆ. https://kannadanewsnow.com/kannada/rapid-action-by-mysore-railway-rescue-team-bag-left-by-a-woman-on-the-train-returned/ https://kannadanewsnow.com/kannada/a-heart-wrenching-incident-in-the-state-three-commit-suicide-over-daughter-leaving-home/
ಮೈಸೂರು: ನೈಋತ್ಯ ರೈಲ್ವೆ, ಮೈಸೂರು ವಿಭಾಗದ, ರೈಲ್ವೆ ರಕ್ಷಣಾ ಪಡೆ (ಆರ್ಪಿಎಫ್)ಯ ತ್ವರಿತ ಹಾಗೂ ಪ್ರಾಮಾಣಿಕ ಕಾರ್ಯಾಚರಣೆಯಿಂದ ಒಬ್ಬ ಮಹಿಳಾ ಪ್ರಯಾಣಿಕರಿಗೆ ₹1,49,465/- ಮೌಲ್ಯದ ಚಿನ್ನಾಭರಣ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಒಳಗೊಂಡ ವ್ಯಾನಿಟಿ ಬ್ಯಾಗ್ ಅನ್ನು ಯಶಸ್ವಿಯಾಗಿ ಮರಳಿಸಿದ್ದಾರೆ. ದಿನಾಂಕ 21 ಮೇ 2025 ರಂದು, ಕಡೂರು ನಿವಾಸಿ ತೇಜಾ ಅವರು ರೈಲು ಸಂಖ್ಯೆ 16589 ರಲ್ಲಿ ಕಡೂರು ರೈಲ್ವೆ ನಿಲ್ದಾಣದಲ್ಲಿ ಇಳಿಯುವಾಗ ತಮ್ಮ ಬ್ಯಾಗ್ ಅನ್ನು ಆಕಸ್ಮಿಕವಾಗಿ ಬಿಟ್ಟುಹೋಗಿದ್ದರು. ರೈಲ್ಮದದ್ ದೂರನ್ನು ಸ್ವೀಕರಿಸಿದ ತಕ್ಷಣ, ಆರ್ಪಿಎಫ್ ಎಸ್ಕಾರ್ಟ್ ತಂಡವು ತಕ್ಷಣವೇ ರೈಲಿನಲ್ಲಿ ಹುಡುಕಾಟ ನಡೆಸಿ ಬ್ಯಾಗ್ ಅನ್ನು ಪತ್ತೆಹಚ್ಚಿದ್ದು. ಆ ಬ್ಯಾಗ್ ಅನ್ನು ದಾವಣಗೆರೆಯ ಆರ್ಪಿಎಫ್ ಪೋಸ್ಟ್ಗೆ ಹಸ್ತಾಂತರಿಸಲಾಯಿತು. ಸೂಕ್ತ ಪರಿಶೀಲನೆಯ ನಂತರ, 15 ಗ್ರಾಂ ಚಿನ್ನಾಭರಣ ಮತ್ತು ಎರಡು ಐಫೋನ್ ಚಾರ್ಜರ್ಗಳನ್ನು ಒಳಗೊಂಡ ವಸ್ತುಗಳನ್ನು ದಿನಾಂಕ 22 ಮೇ 2025 ರಂದು ಮಾಲೀಕರಿಗೆ ಹಿಂದಿರುಗಿಸಲಾಯಿತು. ಮೈಸೂರು ವಿಭಾಗದ ಹಿರಿಯ ವಿಭಾಗೀಯ ಆಯುಕ್ತ, ಆರ್ಪಿಎಫ್, ಸ್ಯಾಮ್ ಪ್ರಸಾಂತ್ ಜೆ.ಆರ್, ಆಪರೇಷನ್…
ಶಿವಮೊಗ್ಗ: : ಇಂದು ನಿಗದಿಯಾಗಿದ್ದ ಕುವೆಂಪು ವಿವಿಯ ಬಿ. ಎ. ಆರನೇ ಸೆಮೆಸ್ಟರ್ ಕನ್ನಡ ಐಚ್ಛಿಕ ಪತ್ರಿಕೆಯ ಪರೀಕ್ಷೆ ಯನ್ನು ಪ್ರಶ್ನೆ ಪತ್ರಿಕೆಯ ಗೊಂದಲದಿಂದ ಮುಂದೂಡಲಾಗಿದ್ದು, ಪರೀಕ್ಷೆಯ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಪರೀಕ್ಷಾಂಗ ಕುಲಸಚಿವ ಪ್ರೊ. ಎಸ್. ಎಂ. ಗೋಪಿನಾಥ್, ಕನ್ನಡ ವಿಷಯದ ಪರೀಕ್ಷಾ ಮಂಡಳಿಯ ಅಧ್ಯಕ್ಷರನ್ನು ಕರೆಸಿ ಪರೀಕ್ಷಾ ವಿಭಾಗದಲ್ಲಿ ವಿಚಾರಣೆ ನಡೆಸಿದ್ದು, ಪ್ರಶ್ನೆ ಪತ್ರಿಕೆ ಸಿದ್ದಪಡಿಸಿ, ಪರಿಶೀಲನೆ ನಡೆಸಿದ ಅಧ್ಯಾಪಕರುಗಳು ಮತ್ತು ಅಧ್ಯಕ್ಷರು ಹೊಣೆಗಾರರಾಗಿರುತ್ತಾರೆ. ಈ ಕುರಿತು ಪರೀಕ್ಷಾ ಮಂಡಳಿಯ ಅಧ್ಯಕ್ಷರು ತಪ್ಪೊಪ್ಪಿಗೆಯ ಪತ್ರ ಸಲ್ಲಿಸಿದ್ದು, ಸಂಬಂಧಪಟ್ಟವರ ಮೇಲೆ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು. “ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು, ವಿಶ್ವವಿದ್ಯಾಲಯದ ಘನತೆಗೆ ಕುಂದು ತಂದಿರುವ ಮತ್ತು ವಿದ್ಯಾರ್ಥಿಗಳಿಗೆ ತೊಡಕು ಉಂಟು ಮಾಡಿರುವ ಈ ಪ್ರಕರಣಕ್ಕೆ ಸಂಬಂಧಪಟ್ಟವರ ಮೇಲೆ ಪರೀಕ್ಷಾ ಕಾಯ್ದೆಯ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ. https://kannadanewsnow.com/kannada/even-if-you-exercise-the-impact-of-sitting-too-much-on-the-brain-a-study/ https://kannadanewsnow.com/kannada/a-heart-wrenching-incident-in-the-state-three-commit-suicide-over-daughter-leaving-home/
ಕೆಎನ್ಎನ್ ಡಿಜಿಟಲ್ ಡೆಸ್ಕ್: ವ್ಯಾಂಡರ್ಬಿಲ್ಟ್ ವಿಶ್ವವಿದ್ಯಾಲಯದ ಸ್ಮೃತಿ ಮತ್ತು ಆಲ್ಝೈಮರ್ ಕೇಂದ್ರದ ಸಂಶೋಧಕರ ನೇತೃತ್ವದ ಇತ್ತೀಚಿನ ಅಧ್ಯಯನವು ದೀರ್ಘಕಾಲ ಕುಳಿತುಕೊಳ್ಳುವುದರಿಂದ ಮೆದುಳಿನ ಆರೋಗ್ಯದ ಮೇಲೆ ಉಂಟಾಗುವ ಆತಂಕಕಾರಿ ಪರಿಣಾಮಗಳ ಬಗ್ಗೆ ಬೆಳಕು ಚೆಲ್ಲಿದೆ. ನಿಯಮಿತ ವ್ಯಾಯಾಮದ ಹೊರತಾಗಿಯೂ, ದೀರ್ಘಕಾಲದವರೆಗೆ ಕುಳಿತುಕೊಳ್ಳುವ ವಯಸ್ಸಾದ ವಯಸ್ಕರು ವೇಗವಾಗಿ ಮೆದುಳು ಕುಗ್ಗುವಿಕೆ ಮತ್ತು ಸ್ಮರಣಶಕ್ತಿ ಕ್ಷೀಣಿಸುವ ಅಪಾಯವನ್ನು ಹೊಂದಿರುತ್ತಾರೆ. ಏಳು ವರ್ಷಗಳಲ್ಲಿ ಭಾಗವಹಿಸುವವರನ್ನು ಪತ್ತೆಹಚ್ಚಿದ ಅಧ್ಯಯನವು, ವಾರಕ್ಕೆ 150 ನಿಮಿಷಗಳ ಕಾಲ ವ್ಯಾಯಾಮ ಮಾಡಿದವರು ಸಹ ದೀರ್ಘ ಗಂಟೆಗಳ ಕಾಲ ಕುಳಿತುಕೊಳ್ಳುವುದರಿಂದ ಮೆದುಳಿನ ಕ್ಷೀಣತೆಯನ್ನು ಅನುಭವಿಸುತ್ತಾರೆ ಎಂದು ಕಂಡುಹಿಡಿದಿದೆ. ಮಣಿಕಟ್ಟಿನ ಮಾನಿಟರ್ಗಳನ್ನು ಧರಿಸಿದ ಭಾಗವಹಿಸುವವರನ್ನು ಒಳಗೊಂಡ ಸಂಶೋಧನೆಯು, ದಿನಕ್ಕೆ ಸರಾಸರಿ 13 ಗಂಟೆಗಳ ಕಾಲ ಕುಳಿತುಕೊಳ್ಳುವವರಲ್ಲಿ ಸ್ಮೃತಿ ಮತ್ತು ಆಲ್ಝೈಮರ್ ಕಾಯಿಲೆಗೆ ಸಂಬಂಧಿಸಿದ ಪ್ರದೇಶಗಳಲ್ಲಿ ಮೆದುಳು ತೆಳುವಾಗಿರುತ್ತದೆ ಎಂದು ಬಹಿರಂಗಪಡಿಸಿದೆ. ಆಲ್ಝೈಮರ್ ಅಪಾಯವನ್ನು ಹೆಚ್ಚಿಸುವ APOE-4 ಜೀನ್ ಅನ್ನು ಹೊಂದಿರುವ ವ್ಯಕ್ತಿಗಳು ಕುಳಿತುಕೊಳ್ಳುವುದರ ಋಣಾತ್ಮಕ ಪರಿಣಾಮಗಳಿಗೆ ಹೆಚ್ಚು ಒಳಗಾಗುತ್ತಾರೆ ಎಂದು ಅಧ್ಯಯನವು ಕಂಡುಹಿಡಿದಿದೆ. ಸಂಶೋಧಕರ ಪ್ರಕಾರ,…
ನವದೆಹಲಿ : ಕೇಂದ್ರ ಸರ್ಕಾರವು 2025ನೇ ಹಣಕಾಸು ವರ್ಷಕ್ಕೆ ನೌಕರರ ಭವಿಷ್ಯ ನಿಧಿಯ ಮೇಲಿನ ಬಡ್ಡಿದರವನ್ನು ಶೇಕಡಾ 8.25 ಕ್ಕೆ ಅನುಮೋದಿಸಿದೆ, ಇದರಿಂದಾಗಿ ನಿವೃತ್ತಿ ನಿಧಿ ಸಂಸ್ಥೆ ಇಪಿಎಫ್ಒ 7 ಕೋಟಿಗೂ ಹೆಚ್ಚು ಚಂದಾದಾರರ ನಿವೃತ್ತಿಯ ನಂತರದ ನಿಧಿಯಲ್ಲಿ ವಾರ್ಷಿಕ ಬಡ್ಡಿದರವನ್ನು ಠೇವಣಿ ಮಾಡಲು ಅನುವು ಮಾಡಿಕೊಡುತ್ತದೆ. ಫೆಬ್ರವರಿ 28 ರಂದು ಇಪಿಎಫ್ಒ, 2024-25ನೇ ಹಣಕಾಸು ವರ್ಷಕ್ಕೆ ನೌಕರರ ಭವಿಷ್ಯ ನಿಧಿ (ಇಪಿಎಫ್) ಠೇವಣಿಗಳ ಮೇಲಿನ ಶೇಕಡಾ 8.25 ರ ಬಡ್ಡಿದರವನ್ನು ಹಿಂದಿನ ಹಣಕಾಸು ವರ್ಷದಲ್ಲಿ ಒದಗಿಸಲಾದ ದರಕ್ಕೆ ಸಮನಾಗಿ ಉಳಿಸಿಕೊಳ್ಳಲು ನಿರ್ಧರಿಸಿತ್ತು. 2024-25 ರ ಅನುಮೋದಿತ ಬಡ್ಡಿದರವನ್ನು ಹಣಕಾಸು ಸಚಿವಾಲಯದ ಒಪ್ಪಿಗೆಗಾಗಿ ಕಳುಹಿಸಲಾಗಿದೆ. “2024-25ನೇ ಹಣಕಾಸು ವರ್ಷಕ್ಕೆ ಇಪಿಎಫ್ಒ ಮೇಲಿನ ಶೇಕಡಾ 8.25 ರ ಬಡ್ಡಿದರಕ್ಕೆ ಹಣಕಾಸು ಸಚಿವಾಲಯವು ಒಪ್ಪಿಗೆ ನೀಡಿದೆ ಮತ್ತು ಕಾರ್ಮಿಕ ಸಚಿವಾಲಯವು ಗುರುವಾರ ಇಪಿಎಫ್ಒಗೆ ಈ ಕುರಿತು ಸಂವಹನವನ್ನು ಕಳುಹಿಸಿದೆ ಎಂದು ಕಾರ್ಮಿಕ ಸಚಿವಾಲಯದ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ. ಈಗ FY25 ಕ್ಕೆ ಅನುಮೋದಿಸಲಾದ ದರದ…
ನವದೆಹಲಿ: ಜಾರ್ಖಂಡ್ನ ಚೈಬಾಸಾದಲ್ಲಿರುವ ಸಂಸದ-ಶಾಸಕ ನ್ಯಾಯಾಲಯವು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದೆ. ವರದಿಗಳ ಪ್ರಕಾರ, 2018 ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಬಿಜೆಪಿಯ ಮಾಜಿ ಅಧ್ಯಕ್ಷ ಅಮಿತ್ ಶಾ ವಿರುದ್ಧ ಮಾಡಿದ ಹೇಳಿಕೆಗಳಿಗೆ ಸಂಬಂಧಿಸಿದ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿದೆ. ಆಗ ಪಕ್ಷದ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಆರೋಪಿ ರಾಹುಲ್ ಗಾಂಧಿ, “ಕೊಲೆ ಆರೋಪ” ಎದುರಿಸುತ್ತಿರುವ ಅಧ್ಯಕ್ಷರನ್ನು ಬಿಜೆಪಿ ಆಯ್ಕೆ ಮಾಡಬಹುದು ಎಂದು ಸೂಚಿಸಿದರು. ಈ ಹೇಳಿಕೆಗಳು ಬಿಜೆಪಿ ನಾಯಕ ಪ್ರತಾಪ್ ಕಟಿಯಾರ್ ಜುಲೈ 9, 2018 ರಂದು ಕಾನೂನು ಸವಾಲನ್ನು ಪ್ರಾರಂಭಿಸಲು ಕಾರಣವಾಯಿತು. ಗಾಂಧಿಯವರು ಪಕ್ಷ ಮತ್ತು ಅದರ ಸದಸ್ಯರನ್ನು ಮಾನಹಾನಿ ಮಾಡಿದ್ದಾರೆ ಎಂದು ಆರೋಪಿಸಿದರು. ಕಟಿಯಾರ್ ಆರಂಭದಲ್ಲಿ ದಾಖಲಿಸಿದ ಪ್ರಕರಣವು ಪ್ರಾರಂಭದಿಂದಲೂ ವಿವಿಧ ನ್ಯಾಯಾಲಯದ ವಿಚಾರಣೆಗಳನ್ನು ಕಂಡಿದೆ. ಚೈಬಾಸಾದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಸಿಜೆಎಂ) ನ್ಯಾಯಾಲಯವು ಪರಿಶೀಲಿಸಿದ ನಂತರ, ಅದನ್ನು ಜಾರ್ಖಂಡ್ ಹೈಕೋರ್ಟ್ಗೆ ವರ್ಗಾಯಿಸಲಾಯಿತು, ನಂತರ ಅದು…
ಮೈಸೂರು: ಮಗಳು ಮನೆ ಬಿಟ್ಟು ಹೋಗಿದ್ದಕ್ಕೆ ಮನನೊಂದು ಒಂದೇ ಕುಟುಂಬದ ಮೂವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವಂತ ಹೃದಯ ವಿದ್ರಾವಕ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ಹೆಚ್ ಡಿ ಕೋಟೆ ತಾಲ್ಲೂಕಿನ ಬೂದನೂರು ಕೆರೆಗೆ ಹಾರಿ ಮಗಳು ಮನೆ ಬಿಟ್ಟು ಹೋಗಿದ್ದಕ್ಕೆ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಮಹದೇವಸ್ವಾಮಿ, ಪತ್ನಿ ಮಂಜುಳಾ, ಹರ್ಷಿತಾ ಎಂಬುವರಾಗಿದ್ದಾರೆ. ಹುಡುಗನೊಬ್ಬನನ್ನು ಪ್ರೀತಿಸಿದ್ದ ಅರ್ಪಿತಾ, ಕುಟುಂಬಸ್ಥರನ್ನು ತೊರೆದು, ಮನೆ ಬಿಟ್ಟು ಹೋಗಿದ್ದಳು. ಇದರಿಂದ ಮನನೊಂದು ತಂದೆ ಮಹದೇವಸ್ವಾಮಿ, ತಾಯಿ ಮಂಜುಳಾ ಹಾಗೂ ಸಹೋದರಿ ಹರ್ಷಿತಾ ಹಗ್ಗಕಟ್ಟಿಕೊಂಡು ಬೂದನೂರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಲಬುರ್ಗಿ: ಚಿತ್ತಾಪುರದಲ್ಲಿ ಪೊಲೀಸರು ನಾಟಕ ಆಡಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ದೌರ್ಜನ್ಯ, ಗೂಂಡಾಗಿರಿ ಮತ್ತು ಸಂವಿಧಾನ ವಿರೋಧಿ ನಡೆಯನ್ನು ವಿರೋಧಿಸಿ ಇಂದು ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ವೃತ್ತದ ಬಳಿ ಬಿಜೆಪಿ ಹಮ್ಮಿಕೊಂಡಿದ್ದ “ಕಲಬುರ್ಗಿ ಚಲೋ” ಬೃಹತ್ ಹೋರಾಟ ಸಮಾವೇಶದಲ್ಲಿ ಅವರು ಮಾತನಾಡಿದರು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಈ ಸಮಾವೇಶ ನಡೆಯಿತು. ನನ್ನ ಕಾರ್ಯಕ್ರಮ ಇತ್ತು. ಬೇಗ ಹೋದುದರಿಂದ ಚಿತ್ತಾಪುರ ಐ.ಬಿಗೆ ಹೋಗಿದ್ದೆ. ಆಗ ಗದ್ದಲ ಮಾಡಲು ಸಿದ್ಧತೆ ನಡೆದ ಸಂದೇಶ ಬಂತು ಎಂದು ವಿವರಿಸಿದರು. ಅಪ್ಪಟ ದಲಿತ ಯಾರಾದರೂ ಇದ್ದರೆ ಅದು ಛಲವಾದಿ ನಾರಾಯಣಸ್ವಾಮಿ. ಚಾಪೆ ಮೇಲೆ ಮಲಗಿದ್ದೇನೆ. ಚಾಪೆ ಇಲ್ಲದೆ ಮಣ್ಣಿನ ಮೇಲೆ ಮಲಗಿದ್ದೇನೆ. ಕೆರೆ ಕುಂಟೆಗಳ ನೀರು ಕುಡಿದಿದ್ದೇನೆ. ಕೊಟ್ಟ ತಂಗಳು ತಿಂದಿದ್ದೇನೆ. ನಾನು ಚಿನ್ನದ ಚಮಚ ಇಟ್ಟುಕೊಂಡು ಹುಟ್ಟಿದವನಲ್ಲ ಎಂದು ಸ್ಪಷ್ಟಪಡಿಸಿದರು. ಮಲ್ಲಿಕಾರ್ಜುನ ಖರ್ಗೆಯವರಿಗೆ ಹಿಂದೆ ಕಷ್ಟ ಇದ್ದಿರಬಹುದು…
ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವಾರದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ ಕೊಂಚ ಏರಿಕೆ ಕಂಡಿದ್ದು ಒಟ್ಟು 35 ಜನರು ಕೋವಿಡ್ ಪಾಸಿಟಿವ್ ಹೊಂದಿದ್ದಾರೆ. ಬೆಂಗಳೂರಿನಲ್ಲಿಯೇ 32 ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಕೋವಿಡ್ ಬಂದಿದೆ ಎಂದು ಜನರು ಆತಂಕ ಪಡುವ ಅಗತ್ಯವಿಲ್ಲ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಅಗತ್ಯ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ ಎಂದರು. ಕೋವಿಡ್ ತಾಂತ್ರಿಕ ಸಮಿತಿ ನಿನ್ನೆ ಸಭೆ ನಡೆಸಿ ರಾಜ್ಯದಲ್ಲಿ ಕಂಡುಬಂದಿರುವ ಕೋವಿಡ್ ಪ್ರಕರಣಗಳ ಕುರಿತಂತೆ ಚರ್ಚೆ ನಡೆಸಿದೆ. ನಾವು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದೇವೆ. ಕೇಂದ್ರ ಸರ್ಕಾರದ ಜೊತೆ ಕೂಡ ಸಂಪರ್ಕದಲ್ಲಿದ್ದೇವೆ. ದೇಶದಲ್ಲಿ ಒಟ್ಟು 257 ಪ್ರಕರಣ ದಾಖಲಾಗಿವೆ. ಕೋವಿಡ್ ಪಾಸಿಟಿವ್ ಹೊಂದಿದವರಿಗೆ ಮೈಲ್ಡ್ ಸಿಂಟಂಸ್ ಇದೆ ಬಿಟ್ಟರೆ ಗಂಭೀರವಾದ ಸಮಸ್ಯೆಗಳು ಕಂಡುಬಂದಿಲ್ಲ. ಉಸಿರಾಟದ ತೊಂದರೆ ಇರುವವರಿಗೆ, SARI ಪ್ರಕರಣಗಳಲ್ಲಿ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಲು ಸೂಚನೆ ನೀಡಲಾಗಿದೆ. ಉಸಿರಾಟ ಹಾಗೂ ಹೃದಯಸಂಬಂಧಿ ಕಾಯಿಲೆ…