Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಮೈಸೂರು: ರಾಜ್ಯದಲ್ಲಿ ಶೀಘ್ರವೇ ಜಮೀನಿನ ಮಾಲೀಕತ್ವಕ್ಕೆ ನೆಮ್ಮದಿಯ ಗ್ಯಾರಂಟಿ ನೀಡಲಾಗುತ್ತದೆ. ಪೋಡಿ ಮುಕ್ತ ಗ್ರಾಮ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತದೆ ಅಂತ ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಇಂದು ಮೈಸೂರಲ್ಲಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದಂತ ಅವರು, ರಾಜ್ಯದಾದ್ಯಂತ ಸುಮಾರು 4 ಕೋಟಿ ಆರ್‌ಟಿಸಿ ಮಾಲೀಕರಿದ್ದಾರೆ. ಈ ಪೈಕಿ 1.92 ಕೋಟಿ ಆರ್‌ಟಿಸಿದಾರರನ್ನು ಸಂಪರ್ಕಿಸಿ ಆ ಪೈಕಿ 1.20 ಕೋಟಿ ಆರ್‌ಟಿಸಿಗಳ್ನು ಒಟಿಪಿ (One Time Password) ಮೂಲಕ ಇಕೆವೈಸಿ ಮಾಡಲಾಗಿದೆ. ಇನ್ನೂ ಮೈಸೂರು ವಿಭಾಗದಲ್ಲಿ 1.37 ಕೋಟಿ ಆರ್‌ಟಿಸಿ ಮಾಲೀಕರಿದ್ದು ಈ ಪೈಕಿ 36 ಲಕ್ಷ ಆರ್‌ಟಿಸಿಗಳನ್ನು ಮಾತ್ರ ಆಧಾರ್ ಜೊತೆಗೆ ಜೋಡಿಸಲಾಗಿದೆ. ಅಂದರೆ ಶೇ. 35 ರಷ್ಟು ಕೆಲಸ ಮಾತ್ರ ಆಗಿದ್ದು, ಇದು ಸಾಲದು. ಇದೇ ಜುಲೈ ತಿಂಗಳ ಒಳಗಾಗಿ ಆಧಾರ್ ಸೀಡಿಂಗ್ ವಿಚಾರದಲ್ಲಿ ಶೇ. 90 ರಷ್ಟು ಪ್ರಗತಿ ಸಾಧಿಸಬೇಕು” ಎಂದು ಅಧಿಕಾರಿಗಳಿಗೆ ತಾಕೀತು ಮಾಡಲಾಗಿದೆ ಎಂದು ತಿಳಿಸಿದರು. ಆರ್‌ಟಿಸಿಗಳನ್ನು ಆಧಾರ್‌ಗೆ ಲಿಂಕ್ ಮಾಡುವ ಮೂಲಕ…
ಬೆಂಗಳೂರು: ರಾಜ್ಯ ಸರ್ಕಾರದಿಂದ ವಾರ್ತಾ ಇಲಾಖೆಯ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಹೇಮಂತ್ ಎಂ ನಿಂಬಾಳ್ಕರ್ ( ips hemant nimbalkar ) ಅವರನ್ನು ನೇಮಕ ಮಾಡಿ ಆದೇಶಿಸಿದೆ. ಇಂದು ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಹೇಮಂತ್ ಎಂ.ನಿಂಬಾಳ್ಕರ್, ಐಪಿಎಸ್ (ಕೆಎನ್:1998), ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು (ಪೋಸ್ಟಿಂಗ್ಗಾಗಿ ಕಾಯುತ್ತಿರುವವರು) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ಮತ್ತು ಆಯುಕ್ತರಾಗಿ ನೇಮಿಸಲಾಗಿದೆ ಅಂತ ತಿಳಿಸಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಬೆಂಗಳೂರು ಬಿ.ಬಿ.ಎಂ.ಪಿ.ಯ ವಿಶೇಷ ಆಯುಕ್ತರಾಗಿ (ಆರೋಗ್ಯ) ನೇಮಿಸಲಾಗಿದೆ. https://kannadanewsnow.com/kannada/task-force-to-be-set-up-at-panchayat-level-to-prevent-heavy-rains-across-the-state-minister-krishna-byre-gowda/ https://kannadanewsnow.com/kannada/it-is-mandatory-to-give-one-day-off-in-a-week-to-pourakarmikas-state-govt/
BIG NEWS: ರಾಜ್ಯಾದ್ಯಂತ ‘ಅತಿವೃಷ್ಟಿ ತಡೆ’ಗೆ ಪಂಚಾಯತ್ ಮಟ್ಟದಲ್ಲೇ ‘ಟಾಸ್ಕ್‌ಫೋರ್ಸ್’ ರಚನೆ: ಸಚಿವ ಕೃಷ್ಣ ಬೈರೇಗೌಡ
ಮೈಸೂರು : ಈ ವರ್ಷದ ಮಾನ್ಸೂನ್ ಚುರುಕಾಗಿದ್ದು, ರಾಜ್ಯದ 1763 ಗ್ರಾಮಗಳಲ್ಲಿ ಅತಿವೃಷ್ಟಿ ಉಂಟಾಗುವ ಸಾಧ್ಯತೆ ಇದೆ ಎಂದು ಗುರುತಿಸಲಾಗಿದೆ. ಅಲ್ಲದೆ, ಪ್ರವಾಹ ಪರಿಸ್ಥಿತಿ ನಿಯಂತ್ರಿಸಲು ಪ್ರತಿಯೊಂದು ಸಮಸ್ಯಾತ್ಮಕ ಪಂಚಾಯತ್ ಮಟ್ಟದಲ್ಲಿ ಟಾಸ್ಕ್‌ಫೋರ್ಸ್ ರಚಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಮಂಗಳವಾರ ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಮೈಸೂರು ವಿಭಾಗದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ ಈ ವರ್ಷದ ಮಾನ್ಸೂನ್‌ನಲ್ಲಿ ರಾಜ್ಯದ 1763 ಗ್ರಾಮಗಳಲ್ಲಿ ಅತಿವೃಷ್ಟಿ ಉಂಟಾಗುವ ಸಾಧ್ಯತೆ ಇದೆ ಎಂದು ಗುರುತಿಸಲಾಗಿದೆ. ಎಲ್ಲಾ ಜಿಲ್ಲಾಧಿಕಾರಿಗಳಿಗೂ ಅವರ ಜಿಲ್ಲೆಯ ಯಾವ ಭಾಗದ ಯಾವ ಗ್ರಾಮದಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆ ಇದೆ ಎಂದು ಈಗಾಗಲೇ ಸಮಸ್ಯಾತ್ಮಕ ಗ್ರಾಮ ಪಂಚಾಯಿತಿಗಳ ಸಂಭವನೀಯ ಪಟ್ಟಿ ನೀಡಲಾಗಿದೆ. ಅಲ್ಲದೆ, ಪ್ರತಿಯೊಂದು ವಾರವೂ ಅವರಿಗೆ ಮುಂದಿನ 7 ರಿಂದ 9 ದಿನಗಳ ವರೆಗಿನ ಹವಾಮಾನ ವರದಿಯನ್ನೂ ಒದಗಿಸುವ ವ್ಯವಸ್ಥೆ ಮಾಡಲಾಗಿದೆ. ಈ ಮಾಹಿತಿಯ ಆಧಾರದಲ್ಲಿ ಜಿಲ್ಲಾಧಿಕಾರಿಗಳು ಪ್ರತಿಯೊಂದು ಸಮಸ್ಯಾತ್ಮಕ…
ನವದೆಹಲಿ: ಉತ್ತರ ಪ್ರದೇಶದ ಹತ್ರಾಸ್ನಲ್ಲಿ ಮಂಗಳವಾರ (ಜುಲೈ 2) ನಡೆದ ಧಾರ್ಮಿಕ ಸಭೆಯಲ್ಲಿ ದುರಂತ ಕಾಲ್ತುಳಿತ ಸಂಭವಿಸಿದ್ದು, ಮಕ್ಕಳು ಸೇರಿದಂತೆ 100 ಜನರು ಸಾವನ್ನಪ್ಪಿದ್ದಾರೆ. ಮಾನವ್ ಮಂಗಲ್ ಮಿಲನ್ ಸದ್ಭಾವನಾ ಸಮಾಗಮ್ ಸಮಿತಿಯು ಶಿವನಿಗಾಗಿ ಆಯೋಜಿಸಿದ್ದ ಸತ್ಸಂಗದ ನಂತರ ಈ ಘಟನೆ ಸಂಭವಿಸಿದೆ. ಘಟನೆಯನ್ನು ದೃಢಪಡಿಸಿದ ಮುಖ್ಯ ವೈದ್ಯಕೀಯ ಅಧಿಕಾರಿ ರಾಜ್ಕುಮಾರ್ ಅಗರ್ವಾಲ್, “ನಾವು ಇಲ್ಲಿಯವರೆಗೆ 27 ಶವಗಳನ್ನು ಸ್ವೀಕರಿಸಿದ್ದೇವೆ” ಎಂದು ಹೇಳಿದರು. ಇಟಾ ಎಸ್ಎಸ್ಪಿ ರಾಜೇಶ್ ಕುಮಾರ್ ಸಿಂಗ್ ವಿವರಗಳನ್ನು ವಿವರಿಸಿ, “ಹತ್ರಾಸ್ ಜಿಲ್ಲೆಯ ಗ್ರಾಮವೊಂದರಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದಾಗ ಕಾಲ್ತುಳಿತ ಸಂಭವಿಸಿದೆ. ಇಟಾ ಆಸ್ಪತ್ರೆಯಲ್ಲಿ 23 ಮಹಿಳೆಯರು, ಮೂವರು ಮಕ್ಕಳು ಮತ್ತು ಒಬ್ಬ ಪುರುಷ ಸೇರಿದಂತೆ 27 ಶವಗಳನ್ನು ಸ್ವೀಕರಿಸಲಾಗಿದೆ. ಗಾಯಗೊಂಡವರು ಇನ್ನೂ ಆಸ್ಪತ್ರೆಗೆ ತಲುಪಿಲ್ಲ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಅವರು ಹೇಳಿದರು. ದುರಂತಕ್ಕೆ ಪ್ರತಿಕ್ರಿಯಿಸಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪರಿಹಾರ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ತ್ವರಿತವಾಗಿ ನಿರ್ದೇಶನ ನೀಡಿದರು. ಗಾಯಗೊಂಡವರಿಗೆ…
ಬೆಂಗಳೂರು: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ವಾರದಲ್ಲಿ ಪೂರ್ತಿ ಒಂದು ದಿನ ರಜೆ ನೀಡುವುದು ಕಡ್ಡಾಗೊಳಿಸಿ, ರಾಜ್ಯ ಸರ್ಕಾರ ಆದೇಶಿಸಿದೆ. ಈ ಸಂಬಂಧ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಪಸ್ತುತ ವಾರಕ್ಕೆ ಎರಡು ಭಾರಿ ಅರ್ಧ ದಿನ ರಜೆ ನೀಡುತ್ತಿದ್ದು, ಮುಂದಿನ ದಿನಗಳಲ್ಲಿ ಈ ಕೆಳಕಂಡ ಷರತ್ತುಗಳನ್ನು ಪೂರೈಸಿಕೊಂಡು, ವಾರದಲ್ಲಿ ಪೂರ್ತಿ ಒಂದು ದಿನ ರಜೆ ಘೋಷಿಸಲು ಸರ್ಕಾರದ ಅನುಮೋದನೆ ನೀಡಿದೆ ಎಂದು ತಮಗೆ ತಿಳಿಸಲು ನಿರ್ದೇಶಿಸಿದ್ದಾರೆ. 1. ದಿನನಿತ್ಯದ ಸ್ವಚ್ಛತಾ ಕೆಲಸ ಕಾರ್ಯಗಳಿಗೆ ತೊಂದರೆಯಾಗದಂತೆ ಶೇ.85% ರಷ್ಟು ಹಾಜರಾತಿ ಖಚಿತಪಡಿಸಿಕೊಂಡು ಒಂದು ರಜೆ ನೀಡಲು; 2. ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯ ಸ್ವಚ್ಛತಾ ಕಾರ್ಯಕ್ಕೆ ಈಗಾಗಲೇ ನೇಮಿಸಿರುವ ಸಿಬ್ಬಂದಿಗೆ ವಾರದ ರಜೆ ನೀಡುವ ಸಂದರ್ಭದಲ್ಲಿ ಬೇರೊಬ್ಬ ನೌಕರರನ್ನು ಸದರಿ ಕಾರ್ಯಕ್ಕೆ ನಿಯೋಜಿಸುವ ಮೇರೆಗೆ ರಜೆಯ ಅವಶ್ಯಕತೆಯಿರುವ ಪೌರಕಾರ್ಮಿಕರಿಗೆ…
ಮೈಸೂರು: ರಾಜ್ಯದ ಸಾವಿರಾರು ಬಗರ್ ಹುಕುಂ ಸಾಗುವಳಿದಾರ ರೈತರು ಸಾಗುವಳಿ ಪತ್ರವನ್ನು ನಿರೀಕ್ಷೆಯಲ್ಲಿದ್ದಾರೆ. ಇವರಿಗೆ ಗುಡ್ ನ್ಯೂಸ್ ಎನ್ನುವಂತೆ ರೈತರು ಸಾಗುವಳಿ ಚೀಟಿಗಾಗಿ ಸಲ್ಲಿಸಿರುವಂತ ಅರ್ಜಿಯನ್ನು 8 ತಿಂಗಳಲ್ಲಿ ಕ್ಲಿಯರ್ ಮಾಡುವಂತೆ ಕಂದಾಯ ಸಚಿವ ಕೃಷ್ಣಭೈರೇಗೌಡ ಡೆಡ್ ಲೈನ್ ನೀಡಿದ್ದಾರೆ. ಇಂದು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಬಗರ್ ಹುಕುಂ ಅರ್ಜಿಗಳ ವಿಲೇವಾರಿಗೆ ತಹಶೀಲ್ದಾರರಿಗೆ 8 ತಿಂಗಳ ಗಡುವು ನೀಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದರು. ಬಡ ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಅಕ್ರಮ ಸಾಗುವಳಿಯ ಸಕ್ರಮೀಕರಣಕ್ಕಾಗಿ ಬಗರ್‌ಹುಕುಂ ಅಡಿ ರಾಜ್ಯ ಸರ್ಕಾರ ಅರ್ಜಿ ಸ್ವೀಕರಿಸಿದೆ. ಲಕ್ಷಾಂತರ ಅರ್ಜಿಗಳು ಈಗಾಗಲೇ ಸಲ್ಲಿಕೆಯಾಗಿದ್ದು, ಈ ಎಲ್ಲಾ ಅರ್ಜಿಗಳನ್ನು ಮುಂದಿನ 8 ತಿಂಗಳಲ್ಲಿ ವಿಲೇವಾರಿ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಸಚಿವರು ತಿಳಿಸಿದರು. ರಾಜ್ಯಾದ್ಯಂತ 163 ಕ್ಷೇತ್ರಗಳಲ್ಲಿ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ರಚಿಸಲಾಗಿದೆ. ಜುಲೈ ತಿಂಗಳಿಂದ ಆರಂಭಿಸಿ ಪ್ರತಿ ತಿಂಗಳೂ ತಾಲೂಕವಾರು ತಿಂಗಳಿಗೆ ಇಷ್ಟು ಅರ್ಜಿ ವಿಲೇಗೆ…
ಬೆಂಗಳೂರು: ಡೆಂಘೀ ಪ್ರಕರಣಗಳ ಟೆಸ್ಟಿಂಗ್ ಗೆ ಖಾಸಗಿ ಆಸ್ಪತ್ರೆಗಳಿಗೂ ದರ ನಿಗದಿ ಮಾಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನ ವಿಧಾನ ಸೌಧದಲ್ಲಿ ಇಂದು ಡೆಂಘೀ ನಿಯಂತ್ರಣ ಕುರಿತು ಬಿಬಿಎಂಪಿ, ಗ್ರಾಮೀಣಾಭಿವೃದ್ಧಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಬುಧವಾರವೇ ದರ ನಿಗದಿ ಕುರಿತು ಸುತ್ತೋಲೆ ಹೊರಡಿಸುವುದಾಗಿ ಮಾಧ್ಯಮಗಳಿಗೆ ತಿಳಿಸಿದರು. ಅಲ್ಲದೇ ಖಾಸಗಿ ಆಸ್ಪತ್ರೆಗಳು ಕಡ್ಡಾಯವಗಿ ಡೆಂಘೀ ಪಾಸಿಟಿವ್ ಪ್ರಕರಣಗಳ ಕುರಿತು ಸರ್ಕಾರಕ್ಕೆ ಮಾಹಿತಿ ನೀಡುವಂತೆ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಕಳೆದ ಸಾಲಿಗೆ ಹೊಲಿಸಿದರೆ ಈ ಬಾರಿ ಡೆಂಘೀ ಪ್ರಕರಣಗಳ ಟೆಸ್ಟಿಂಗ್ ನಲ್ಲಿ ಶೇ 42 ರಷ್ಟು ಹೆಚ್ಚಳವಾಗಿದೆ. ಸಾಧ್ಯವಾದಷ್ಟು ಮುಂಚಿತವಾಗಿ ಡೆಂಘೀ ಪಾಸಿಟಿವ್ ಪ್ರಕರಣಗಳನ್ನ ಪತ್ತೆ ಹಚ್ಚಿದಾಗ ಮಾತ್ರ ಸಾವುಗಳನ್ನ ತಡೆಯಲು ಸಾಧ್ಯ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಬಿಬಿಎಂಪಿ ಅಧಿಕಾರಿಗಳು ಹೆಚ್ಚು ನಿಗಾ ವಹಿಸುವಂತೆ ಸಚಿವ ದಿನೇಶ್ ಗುಂಡೂರಾವ್ ಸಭೆಯಲ್ಲಿ ಸೂಚನೆ ನೀಡಿದರು. ಸಭೆ ಬಳಿಕ ಮಾಧ್ಯಮಗಳಿಗೆ…
ಮಂಗಳೂರು: ಜುಲೈ 3ನೇ ವಾರದಲ್ಲಿ ರಾಜ್ಯದ ವಿವಿಧ ಚಾರಣ ಪಥಗಳಿಗೆ ಆನ್ ಲೈನ್ ಮೂಲಕ ಟಿಕೆಟ್ ಬುಕ್ಕಿಂಗ್ ಮಾಡುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಮಂಗಳೂರಿನ ಪಡೀಲ್ ನಲ್ಲಿರುವ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಜನವರಿ 26ರಂದು ಕುಮಾರಪರ್ವತಕ್ಕೆ ಸಾವಿರಾರು ಚಾರಣಿಗರು ಒಂದೇ ದಿನ ಲಗ್ಗೆ ಇಟ್ಟು ಗೊಂದಲ ಉಂಟಾದ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾದ ಚಾರಣಕ್ಕೆ ಈ ಆಗಸ್ಟ್ ನಿಂದ ಮರು ಚಾಲನೆ ನೀಡಲಾಗುವುದು ಎಂದು ತಿಳಿಸಿದರು. ಸಾಮಾನ್ಯವಾಗಿ ಮಳೆಗಾಲದಲ್ಲಿ ಯಾವುದೇ ಚಾರಣ ಪಥಕ್ಕೆ ಪ್ರವೇಶ ನಿರಾಕರಿಸಲಾಗುತ್ತದೆ. ಕಾರಣ ಚಾರಣಿಗರು ಅಪಾಯಕ್ಕೆ ಈಡಾಗುವ ಸಂಭವ ಹೆಚ್ಚಾಗಿರುತ್ತದೆ, ಜೊತೆಗೆ ಇಲ್ಲಿನ ಜೀವರಾಶಿ ಮತ್ತು ಮೊಳಕೆಯೊಡೆಯುವ ಸಸ್ಯರಾಶಿಗೂ ತೊಂದರೆ ಆಗುತ್ತದೆ ಹೀಗಾಗಿ ಆಗಸ್ಟ್ ನಿಂದ ಚಾರಣಕ್ಕೆ ಮರು ಚಾಲನೆ ನೀಡುವುದಾಗಿ ತಿಳಿಸಿದರು. ಈಗಾಗಲೇ ರಾಜ್ಯದ ಹಲವು ಚಾರಣ ಪಥಗಳನ್ನು ಪರಿಸರ ಪ್ರವಾಸೋದ್ಯಮ ವಿಭಾಗ ನಿರ್ವಹಿಸುತ್ತಿದ್ದು, ಆನ್ ಲೈನ್ ಟಿಕೆಟ್ ವ್ಯವಸ್ಥೆ…
ನವದೆಹಲಿ: ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಸಿಕಂದ ರಾವ್ ತಹಸಿಲ್ನಲ್ಲಿ ಮಂಗಳವಾರ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಕಾಲ್ತುಳಿತ ಘಟನೆಯಲ್ಲಿ ಕನಿಷ್ಠ 50 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ದೃಢಪಡಿಸಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಮತ್ತು ಗಾಯಗೊಂಡವರಿಗೆ ತಲಾ 50,000 ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ. ಈ ದುರಂತದ ಕಾರಣಗಳನ್ನು ತನಿಖೆ ಮಾಡಲು ಮುಖ್ಯಮಂತ್ರಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಮತ್ತು ಅಲಿಗಢ ಪೊಲೀಸ್ ಆಯುಕ್ತರನ್ನು ಒಳಗೊಂಡ ತಂಡವನ್ನು ರಚಿಸಿದ್ದಾರೆ. “ಈವರೆಗೆ 23 ಮಹಿಳೆಯರು, 3 ಮಕ್ಕಳು ಮತ್ತು 1 ಪುರುಷ ಸೇರಿದಂತೆ 27 ಮೃತ ದೇಹಗಳನ್ನು ಇಟಾ ಆಸ್ಪತ್ರೆಯಲ್ಲಿ ಸ್ವೀಕರಿಸಲಾಗಿದೆ. ಗಾಯಾಳುಗಳು ಆಸ್ಪತ್ರೆಗೆ ತಲುಪಿಲ್ಲ ಎಂದು ಇಟಾದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು, 27 ಶವಗಳನ್ನು ಗುರುತಿಸಲಾಗುತ್ತಿದೆ ಎಂದು ಹೇಳಿದರು. ಈ ಕಾರ್ಯಕ್ರಮಕ್ಕೆ ಜನರು ಹೆಚ್ಚಿನ…
ಹಾಸನ : ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲುಪಾಲಾಗಿದ್ದಂತ ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡ ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಲಾಗಿತ್ತು. ಇಂದು ಅವರು ಜೈಲಿನಿಂದ ರಿಲೀಸ್ ಆಗಿದ್ದಾರೆ. ಜೂನ್.5ರಂದು ಹಾಸನ ಜಿಲ್ಲಾ ನ್ಯಾಯಾಲಯವು ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿತ್ತು. ಆ ಬಳಿಕ ಜಾಮೀನು ನೀಡೋದಕ್ಕೆ ನಿರಾಕರಿಸಿತ್ತು. ಈ ಹಿನ್ನಲೆಯಲ್ಲಿ ವಕೀಲ ದೇವರಾಜೇಗೌಡ ಅವರು ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜಾಮೀನಿಗಾಗಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ್ದಂತ ನ್ಯಾಯಪೀಠವು, ಜಾಮೀನು ಮಂಜೂರು ಮಾಡಲಾಗಿತ್ತು. ಇಂದು ಅತ್ಯಾಚಾರ ಆರೋಪ ಕೇಸಲ್ಲಿ ಹಾಸನ ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಂತ ವಕೀಲ ದೇವಾರಾಜೇಗೌಡ ಅವರನ್ನು, ಕೋರ್ಟ್ ಜಾಮೀನಿನ ಹಿನ್ನಲೆಯಲ್ಲಿ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. https://kannadanewsnow.com/kannada/anant-ambanis-mass-wedding-to-be-held-ahead-of-his-wedding-rs-1-lakh-each-distributed-to-bride/ https://kannadanewsnow.com/kannada/actress-harshika-ponacha-and-bhuvan-ponnanna-expecting-their-first-child/













