Author: kannadanewsnow09

ಮೈಸೂರು: ಮಗಳು ಮನೆ ಬಿಟ್ಟು ಹೋಗಿದ್ದಕ್ಕೆ ಮನನೊಂದು ಒಂದೇ ಕುಟುಂಬದ ಮೂವರು ಕೆರೆಗೆ ಹಾರಿ  ಆತ್ಮಹತ್ಯೆ ಮಾಡಿಕೊಂಡಿರುವಂತ ಹೃದಯ ವಿದ್ರಾವಕ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ಹೆಚ್ ಡಿ ಕೋಟೆ ತಾಲ್ಲೂಕಿನ ಬೂದನೂರು ಕೆರೆಗೆ ಹಾರಿ ಮಗಳು ಮನೆ ಬಿಟ್ಟು ಹೋಗಿದ್ದಕ್ಕೆ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಮಹದೇವಸ್ವಾಮಿ, ಪತ್ನಿ ಮಂಜುಳಾ, ಹರ್ಷಿತಾ ಎಂಬುವರಾಗಿದ್ದಾರೆ. ಹುಡುಗನೊಬ್ಬನನ್ನು ಪ್ರೀತಿಸಿದ್ದ ಅರ್ಪಿತಾ, ಕುಟುಂಬಸ್ಥರನ್ನು ತೊರೆದು, ಮನೆ ಬಿಟ್ಟು ಹೋಗಿದ್ದಳು. ಇದರಿಂದ ಮನನೊಂದು ತಂದೆ ಮಹದೇವಸ್ವಾಮಿ, ತಾಯಿ ಮಂಜುಳಾ ಹಾಗೂ ಸಹೋದರಿ ಹರ್ಷಿತಾ ಹಗ್ಗಕಟ್ಟಿಕೊಂಡು ಬೂದನೂರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Read More

ಕಲಬುರ್ಗಿ: ಚಿತ್ತಾಪುರದಲ್ಲಿ ಪೊಲೀಸರು ನಾಟಕ ಆಡಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ದೌರ್ಜನ್ಯ, ಗೂಂಡಾಗಿರಿ ಮತ್ತು ಸಂವಿಧಾನ ವಿರೋಧಿ ನಡೆಯನ್ನು ವಿರೋಧಿಸಿ ಇಂದು ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ವೃತ್ತದ ಬಳಿ ಬಿಜೆಪಿ ಹಮ್ಮಿಕೊಂಡಿದ್ದ “ಕಲಬುರ್ಗಿ ಚಲೋ” ಬೃಹತ್ ಹೋರಾಟ ಸಮಾವೇಶದಲ್ಲಿ ಅವರು ಮಾತನಾಡಿದರು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಈ ಸಮಾವೇಶ ನಡೆಯಿತು. ನನ್ನ ಕಾರ್ಯಕ್ರಮ ಇತ್ತು. ಬೇಗ ಹೋದುದರಿಂದ ಚಿತ್ತಾಪುರ ಐ.ಬಿಗೆ ಹೋಗಿದ್ದೆ. ಆಗ ಗದ್ದಲ ಮಾಡಲು ಸಿದ್ಧತೆ ನಡೆದ ಸಂದೇಶ ಬಂತು ಎಂದು ವಿವರಿಸಿದರು. ಅಪ್ಪಟ ದಲಿತ ಯಾರಾದರೂ ಇದ್ದರೆ ಅದು ಛಲವಾದಿ ನಾರಾಯಣಸ್ವಾಮಿ. ಚಾಪೆ ಮೇಲೆ ಮಲಗಿದ್ದೇನೆ. ಚಾಪೆ ಇಲ್ಲದೆ ಮಣ್ಣಿನ ಮೇಲೆ ಮಲಗಿದ್ದೇನೆ. ಕೆರೆ ಕುಂಟೆಗಳ ನೀರು ಕುಡಿದಿದ್ದೇನೆ. ಕೊಟ್ಟ ತಂಗಳು ತಿಂದಿದ್ದೇನೆ. ನಾನು ಚಿನ್ನದ ಚಮಚ ಇಟ್ಟುಕೊಂಡು ಹುಟ್ಟಿದವನಲ್ಲ ಎಂದು ಸ್ಪಷ್ಟಪಡಿಸಿದರು. ಮಲ್ಲಿಕಾರ್ಜುನ ಖರ್ಗೆಯವರಿಗೆ ಹಿಂದೆ ಕಷ್ಟ ಇದ್ದಿರಬಹುದು…

Read More

ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವಾರದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ ಕೊಂಚ ಏರಿಕೆ ಕಂಡಿದ್ದು ಒಟ್ಟು 35 ಜನರು ಕೋವಿಡ್ ಪಾಸಿಟಿವ್ ಹೊಂದಿದ್ದಾರೆ‌. ಬೆಂಗಳೂರಿನಲ್ಲಿಯೇ 32 ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಕೋವಿಡ್ ಬಂದಿದೆ ಎಂದು ಜನರು ಆತಂಕ ಪಡುವ ಅಗತ್ಯವಿಲ್ಲ.‌ ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಅಗತ್ಯ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ ಎಂದರು. ಕೋವಿಡ್ ತಾಂತ್ರಿಕ ಸಮಿತಿ ನಿನ್ನೆ ಸಭೆ ನಡೆಸಿ ರಾಜ್ಯದಲ್ಲಿ ಕಂಡುಬಂದಿರುವ ಕೋವಿಡ್ ಪ್ರಕರಣಗಳ ಕುರಿತಂತೆ ಚರ್ಚೆ ನಡೆಸಿದೆ. ನಾವು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದೇವೆ. ಕೇಂದ್ರ ಸರ್ಕಾರದ ಜೊತೆ ಕೂಡ ಸಂಪರ್ಕದಲ್ಲಿದ್ದೇವೆ. ದೇಶದಲ್ಲಿ ಒಟ್ಟು 257 ಪ್ರಕರಣ ದಾಖಲಾಗಿವೆ. ಕೋವಿಡ್ ಪಾಸಿಟಿವ್ ಹೊಂದಿದವರಿಗೆ ಮೈಲ್ಡ್ ಸಿಂಟಂಸ್ ಇದೆ ಬಿಟ್ಟರೆ ಗಂಭೀರವಾದ ಸಮಸ್ಯೆಗಳು ಕಂಡುಬಂದಿಲ್ಲ. ಉಸಿರಾಟದ ತೊಂದರೆ ಇರುವವರಿಗೆ, SARI ಪ್ರಕರಣಗಳಲ್ಲಿ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಲು ಸೂಚನೆ ನೀಡಲಾಗಿದೆ. ಉಸಿರಾಟ ಹಾಗೂ ಹೃದಯಸಂಬಂಧಿ ಕಾಯಿಲೆ…

Read More

ಮೈಸೂರು: ರೈಲ್ವೆ ಕಾಮಗಾರಿ ಹಿನ್ನಲೆಯಲ್ಲಿ  ಜೂ.8, 2025ರಂದು ಅರಸೀಕೆರೆ-ಮೈಸೂರು ಪ್ಯಾಸೆಂಜರ್ ರೈಲು ಹಾಗೂ ಮೈಸೂರು-ಶಿವಮೊಗ್ಗ ಟೌನ್ ಎಕ್ಸ್ ಪ್ರೆಸ್ ರೈಲು ಸಂಚಾರವನ್ನು ರದ್ದು ಗೊಳಿಸಲಾಗಿದೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ನೈರುತ್ಯ ರೈಲ್ವೆಯ ಮೈಸೂರು ವಿಭಾಗದ ಹಿರಿಯ ಕಾನೂನು ಅಧಿಕಾರಿ ಹಾಗೂ ಸಾರ್ವಜನಿಕ ಸಂಪರ್ಕ ಅಧಿಕಾರಿ ಎಸ್.ಶ್ರೀಧರ್ ಅವರು ಮೈಸೂರು ರೈಲ್ವೆ ವಿಭಾಗದ ಕೃಷ್ಣರಾಜನಗರ ಮತ್ತು ಹೊಸ ಅಗ್ರಹಾರ ರೈಲು ನಿಲ್ದಾಣಗಳ ನಡುವೆ ನಡೆಯಲಿರುವ ಸೇತುವೆ ನಿರ್ವಹಣಾ ಕಾರ್ಯದ ಕಾರಣ, ಕೆಳಗಿನ ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ ಎಂದಿದ್ದಾರೆ. ಸಂಪೂರ್ಣ ರದ್ದು ರೈಲು ಸಂಖ್ಯೆ 56267 ಅರಸೀಕೆರೆ–ಮೈಸೂರು ಪ್ಯಾಸೆಂಜರ್ ರೈಲು ಜೂನ್ 8, 2025 ರಂದು ಸಂಪೂರ್ಣವಾಗಿ ರದ್ದಾಗಲಿದೆ. ಭಾಗಶಃ ರದ್ದು ರೈಲು ಸಂಖ್ಯೆ 16225 ಮೈಸೂರು–ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ ರೈಲು ಜೂನ್ 8, 2025 ರಂದು ಮೈಸೂರು ಮತ್ತು ಅರಸೀಕೆರೆ ನಡುವೆ ಭಾಗಶಃ ರದ್ದಾಗಲಿದೆ. ಈ ರೈಲು ಅರಸೀಕೆರೆಯಿಂದ ಶಿವಮೊಗ್ಗ ಟೌನ್‌ವರೆಗೆ ಮಾತ್ರ ಸಂಚರಿಸಲಿದೆ.

Read More

ಹಿಂದೂ ಧರ್ಮದಲ್ಲಿ ಹಲವಾರು ಸಂಪ್ರದಾಯ ಕಟ್ಟುಪಾಡುಗಳನ್ನು ಅನುಸರಿಸಲಾಗುತ್ತದೆ. ಇದರಲ್ಲೊಂದಾಗ ಪೂಜೆಯಲ್ಲಿ ದೇವರಿಗೆ ಕೆಲವು ಕಾಣಿಕೆಗಳನ್ನು ಅರ್ಪಿಸುವುದು, ಪವಿತ್ರ ಮಂತ್ರಗಳನ್ನು ಪಠಿಸುವುದು ಮೊದಲಾದವು ಸಾವಿರಾರು ವರ್ಷಗಳ ಸಂಪ್ರದಾಯವನ್ನು ಇನ್ನಷ್ಟು ಉಜ್ವಲಗೊಳಿಸುತ್ತವೆ. ದೇವರಿಗೆ ಕಾಣಿಕೆಯಾಗಿ ನಾವು ಹಲವು ವಸ್ತುಗಳನ್ನು ಅರ್ಪಿಸುತ್ತೇವೆ, ಇದರಿಂದ ದೇವರ ಅನುಗ್ರಹಕ್ಕೆ ಪಾತ್ರರಾಗಿ ನಮ್ಮ ಬಯಕೆಗಳು ಶೀಘ್ರವಾಗಿ ಪೂರ್ಣಗೊಳ್ಳುತ್ತವೆ ಎಂದು ನಾವು ನಂಬುತ್ತೇವೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ…

Read More

ಬೆಂಗಳೂರು: ಶಿಕ್ಷಕರ ಕೊರತೆಯನ್ನು ನೀಗಿಸುವ ಸಲುವಾಗಿ, ರಾಜ್ಯ ಸರ್ಕಾರ 2025–26 ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ 51,000 ಅತಿಥಿ ಶಿಕ್ಷಕರನ್ನು ನೇಮಿಸುವ ಆದೇಶ ನೀಡಿದೆ. ಮೇ 29, 2025 ರಂದು ಶಾಲೆಗಳು ಪುನರಾರಂಭವಾಗಲಿರುವ ಹಿನ್ನೆಲೆಯಲ್ಲಿ ಶೈಕ್ಷಣಿಕ ಚಟುವಟಿಕೆಗಳು ನಿರಂತರವಾಗಿ ಹಾಗೂ ಸಮಯಕ್ಕೆ ಸರಿಯಾಗಿ ಆರಂಭವಾಗಲಿ ಎಂಬ ಉದ್ದೇಶ ಈ ತಾತ್ಕಾಲಿಕ ನೇಮಕಾತಿಗೆ ಆದೇಶ ಹೊರಡಿಸಿದೆ. 2025-26 ನೇ ಶೈಕ್ಷಣಿಕ ಸಾಲಿಗೆ ಖಾಲಿಯಿರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಶಿಕ್ಷಕರುಗಳ ಹುದ್ದೆಗಳಿಗೆದುರಾಗಿ ಶೈಕ್ಷಣಿಕ ಹಿತದೃಷ್ಟಿಯಿಂದ ಅತಿಥಿ ಶಿಕ್ಷಕರುಗಳನ್ನು ತಾತ್ಕಾಲಿಕವಾಗಿ ನೇರ ನೇಮಕಾತಿ ಮೂಲಕ ಶಿಕ್ಷಕರನ್ನು ಭರ್ತಿ ಮಾಡುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಎಂಬ ಷರತ್ತಿಗೊಳಪಟ್ಟು ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಸರ್ಕಾರವು ಮಂಜೂರಾತಿ ನೀಡಿ ಆದೇಶಿಸಿದೆ. ರಾಜ್ಯ ಸರ್ಕಾರದ ಈ ತ್ವರಿತ ಕ್ರಮವು ವಿದ್ಯಾರ್ಥಿಗಳ ಶಿಕ್ಷಣ ನಿರಂತರವಾಗಿರಿಸಲು ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸುತ್ತದೆ. 51,000 ಅತಿಥಿ ಶಿಕ್ಷಕರ ಪೈಕಿ 40,000ರನ್ನು ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಹಾಗೂ…

Read More

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸರ್ಕಾರದ ನಿರ್ದೇಶನದಂತೆ ಉಚಿತ/ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸುಗಳನ್ನು ವಿತರಣೆ ಮಾಡುತ್ತಿದೆ. ಅದರಂತೆ 2025-26 ನೇ ಸಾಲಿನ ವಿದ್ಯಾರ್ಥಿ ಪಾಸಿಗಾಗಿ ದಿನಾಂಕ 26.05.2025 ರಿಂದ ಆನ್ಲೈನ್ ಮೂಲಕ ಅರ್ಜಿ ಸ್ವೀಕರಿಸಿ, ದಿನಾಂಕ 01.06.2025 ರಿಂದ ವಿದ್ಯಾರ್ಥಿ ಪಾಸುಗಳನ್ನು ಬೆಂಗಳೂರು ಒನ್ ಕೇಂದ್ರಗಳ ಮೂಲಕ ವಿತರಣೆ ಮಾಡಲಾಗುವುದು. 2025-26ನೇ ಸಾಲಿನ ವಿದ್ಯಾರ್ಥಿ ರಿಯಾಯಿತಿ ಪಾಸಿನ ಆನ್ಲೈನ್ ಅರ್ಜಿಯು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಲಭ್ಯವಿರುತ್ತದೆ. ವಿದ್ಯಾರ್ಥಿಗಳು ಬೆಂಗಳೂರು ಒನ್ ಕೇಂದ್ರಗಳ ಮೂಲಕವು ವಿದ್ಯಾರ್ಥಿ ಪಾಸಿಗಾಗಿ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿ ಪಾಸುಗಳನ್ನು ಬೆಂಗಳೂರು ಒನ್ ಕೇಂದ್ರಗಳಲ್ಲಿ ಹಾಗೂ ಬೆಂ.ಮ.ಸಾ.ಸಂಸ್ಥೆಯ ಕೆಂಪೇಗೌಡ ಬಸ್ನಿಲ್ದಾಣ, ಕೆಂಗೇರಿ ಟಿಟಿಎಂಸಿ, ಹೊಸಕೋಟೆ, ಎಲೆಕ್ಟ್ರಾನಿಕ್ ಸಿಟಿ ಘಟಕ -19, ಶಾಂತಿನಗರ ಟಿಟಿಎಂಸಿ, ಕರಾರಸಾ ನಿಗಮದ ಆನೇಕಲ್ ಬಸ್ ನಿಲ್ದಾಣದಲ್ಲಿ ವಿತರಿಸಲಾಗುವುದು. ಮುಂದುವರೆದು, ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯದ ವಿದ್ಯಾರ್ಥಿನಿಯರಿಗೆ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿದ್ದು, ಅದರಂತೆ ಕರ್ನಾಟಕ ರಾಜ್ಯದ…

Read More

ಬೆಂಗಳೂರು: ಇಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾದಂತ ಕೆಇಟಿ-2025ರ ಪರೀಕ್ಷೆಯ ಫಲಿತಾಂಶ ( KCET-2025 Exam Results) ಪ್ರಕಟವಾಗಲಿದೆ. ಈ ಬಗ್ಗೆ ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಅವರು ಮಾಹಿತಿ ಬಿಡುಗಡೆ ಮಾಡಿದ್ದು, ಇಂದು ಬೆಳಗ್ಗೆ 11.30ಕ್ಕೆ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಲಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ. ಇಂದು ಮಧ್ಯಾಹ್ನ 2 ಗಂಟೆಗೆ ಸಿಇಟಿ-2025ರ ಪರೀಕ್ಷೆಯ ( CET-2025 ) ಫಲಿತಾಂಶವನ್ನು ವಿದ್ಯಾರ್ಥಿಗಳು ವೀಕ್ಷಿಸಬಹುದಾಗಿದೆ. ಫಲಿತಾಂಶ ವೀಕ್ಷಿಸಲು ವಿದ್ಯಾರ್ಥಿಗಳು cetonline.karnataka.gov.in ಅಥವಾ kea.kar.nic.in ಜಾಲತಾಣಕ್ಕೆ ಭೇಟಿ ನೀಡುವಂತೆ ಸೂಚಿಸಿದೆ. https://twitter.com/KEA_karnataka/status/1925880959242588459 ಸಿಇಟಿ ಪರೀಕ್ಷೆ ( CET Exam 2025) ಫಲಿತಾಂಶ ಈ ರೀತಿ ಚೆಕ್ ಮಾಡಿ -ವಿದ್ಯಾರ್ಥಿಗಳು ಅಧಿಕೃತ ಜಾಲತಾಣ cetonline.karnataka.gov.in ಜಾಲತಾಣಕ್ಕೆ ಭೇಟಿ ನೀಡಬೇಕು. -ಕೆಸಿಇಟಿ ಫಲಿತಾಂಶ 2024 ಎಂಬಲ್ಲಿ ಕ್ಲಿಕ್ ಮಾಡಬೇಕು. -ನಿಮ್ಮ ನೋಂದಣಿ ಸಂಖ್ಯೆ ಸೇರಿದಂತೆ ಇತರೆ ಮಾಹಿತಿ ನಮೂದಿಸಿ. -ಈ ಬಳಿಕ ಸಬ್ ಮಿಟ್ ಬಟಲ್ ಕ್ಲಿಕ್ ಮಾಡಿದರೇ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂಬುದಾಗಿ ಮರುನಾಮಕರಣ ಮಾಡಿ ಅಧಿಕೃತ ಆದೇಶ ಹೊರಡಿಸಲಾಗಿದೆ. ಹೀಗಾಗಿ ಇನ್ಮುಂದೆ ರಾಮನಗರ ಜಿಲ್ಲೆಯು ಬೆಂಗಳೂರು ದಕ್ಷಿಣ ಜಿಲ್ಲೆ ಎಂಬುದಾಗಿ ಕರೆಯಲಾಗುತ್ತದೆ. ಈ ಕುರಿತಂತೆ ಕಂದಾಯ ಇಲಾಖೆಯ ಸರ್ಕಾರ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಅವರು ಅಧಿಸೂಚನೆ ಹೊರಡಿಸಿದ್ದಾರೆ. ಕರ್ನಾಟಕ ಭೂ ಕಂದಾಯ ಅಧಿನಿಯಮ 1946ರ ಕಲಂ 4(4ಎ)ರಲ್ಲಿ ಕಲ್ಪಿಸಿರುವ ಅವಕಾಶದಂತೆ ರಾಮನಗರವನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಿ, ರಾಮನಗರ ಜಿಲ್ಲೆ ಅನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿ ಆದೇಶಿಸಿದ್ದಾರೆ. ದೇವನಾಗರಿ, ರೋನ್ ಲಿಪಿ ಮತ್ತು ಪ್ರಾದೇಶಿಕ ಭಾಷೆ ಕನ್ನಡ ಉಚ್ಚಾರಣೆಯಂತೆ ಹೊಸ ಹೆಸರನ್ನು ರಾಮನಗರ ಜಿಲ್ಲೆಯನ್ನು ಬೆಂಗಳೂರು ಸೌತ್ ಡಿಸ್ಟಿಕ್, ಬೆಂಗಳೂರು ದಕ್ಷಿಣ ಜಿಲ್ಲೆ ಎಂಬುದಾಗಿ ಮರುನಾಮಕರಣ ಮಾಡಿರುವುದಾಗಿ ತಿಳಿಸಿದ್ದಾರೆ.

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಬಂದೋಬಸ್ತ್ ಕರ್ತವ್ಯಗಳಿಗೆ ನಿಯೋಜಿಸುವಂತ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಪಾವತಿಸುತ್ತಿರುವ ಆಹಾರ ಭತ್ಯೆಯ ದರಗಳನ್ನು ಪರಿಷ್ಕರಿಸಿ ಆದೇಶಿಸಿದೆ. ಈ ಕುರಿತಂತೆ ಎಐಜಿಪಿ ಡಾ.ಸಂಜೀವ ಎಂ ಪಾಟೀಲ ಅವರು ಆದೇಶ ಹೊರಡಿಸಿದ್ದು, ಗುಣಮಟ್ಟದ ಆರೋಗ್ಯಕರ ಆಹಾರವನ್ನು ಪೂರೈಸುವ ದೃಷ್ಠಿಯಿಂದ ಹಬ್ಬಹರಿ ದಿನಗಳು, ವಿಶೇಷ ಹಾಗೂ ಚುನಾವಣಾ ಸಂದರ್ಭಗಳಲ್ಲಿ ಬಂದೋಬಸ್ತ್ ಕರ್ತವ್ಯ ನಿರ್ವಹಿಸುವ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ಪ್ರಸ್ತುತ ಪಾವತಿಸುತ್ತಿರುವ ಆಹಾರ ಭತ್ಯೆ( Food Allowance) ದರವನ್ನು ರೂ.200ರಿಂದ ರೂ.300ಗಳಿಗೆ ಹೆಚ್ಚಿಸಿ ಆದೇಶಿಸಿದ್ದಾರೆ.

Read More