Author: kannadanewsnow09

ಬೆಂಗಳೂರು: ನಗರದ ಹಲವು ಶಾಲೆಗಳಿಗೆ ಈಗಾಗಲೇ ಬಾಂಬ್ ಬೆದರಿಕೆ ಹಾಕಲಾಗಿತ್ತು. ಈಗ ಬೆಂಗಳೂರಿನ ಪ್ರತಿಸ್ಠಿತ ಆಸ್ಪತ್ರೆಯೊಂದಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿರುವಂತದ್ದು ಬೆಳಕಿಗೆ ಬಂದಿದೆ. ಬೆಂಗಳೂರಿನ ಹತ್ತಾರು ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಗಳಿಂದ ರಾಜ್ಯದ ರಾಜಧಾನಿ ಜನರು, ಶಾಲಾ ಮಕ್ಕಳ ಪೋಷಕರು ಬೆಚ್ಚಿ ಬಿದ್ದಿದ್ದರು. ಈ ಘಟನೆ ಮಾಸೋ ಮುನ್ನವೇ ನಗರದ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಒಂದಾಗಿರುವಂತ ಸೇಂಟ್ ಫಿಲೋಮಿನಾ ಆಸ್ಪತ್ರೆಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಬೆಂಗಳೂರಿನ ನಾಗಾವಾರದಲ್ಲಿರುವಂತ ಸೇಂಟ್ ಫಿಲೋಮಿನಾ ಆಸ್ಪತ್ರೆಯಲ್ಲಿ ಬಾಂಬ್ ಇಟ್ಟಿರುವುದಾಗಿ ಬೆಂಗಳೂರು ಪೊಲೀಸರ ಅಕೌಂಟ್ ಖಾತೆಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಪೊಲೀಸ್ ಇಲಾಖೆಯ ಸಿಟಿ ಎಸ್ ಬಿಗೆ ಬಂದಿದ್ದಂತ ಇ-ಮೇಲ್ ನಿಂದಾಗಿ ತಕ್ಷಣವೇ ಕಾರ್ಯಪ್ರವೃತ್ತರಾದರು. ನಾಗವಾರದ ಸೇಂಟ್ ಫಿಲೋಮಿನಾ ಆಸ್ಪತ್ರೆಗೆ ಶ್ವಾನದಳ, ಬಾಂಬ್ ನಿಷ್ಕ್ರೀಯ ದಳದ ಅಧಿಕಾರಿಗಳು ಭೇಟಿ ನೀಡಿ, ಇಡೀ ಆಸ್ಪತ್ರೆಯನ್ನು ಪರಿಶೀಲನೆ ನಡೆಸಿದರು. ಆದ್ರೇ ಯಾವುದೇ ಬಾಂಬ್ ಪತ್ತೆಯಾಗಿಲ್ಲ. ಹೀಗಾಗಿ ಇದೊಂದು ಹುಸಿ ಬಾಂಬ್ ಬೆದರಿಕೆ…

Read More

ಕೆಎನ್ಎನ್ ಸಿನಿಮಾ ಡೆಸ್ಕ್. ನಿಂತ ನಿಲುವಿನಲ್ಲೇ ಆವರಿಸಿಕೊಳ್ಳಬಲ್ಲ ಹಾಡೊಂದಕ್ಕಾಗಿ ಅನುಕ್ಷಣವೂ ಹಾತೊರೆಯುವ ದೊಡ್ಡದೊಂದು ಸಂಗೀತ ಪ್ರೇಮಿಗಳ ದಂಡು ನಮ್ಮ ನಡುವಲ್ಲಿದೆ. ಯಾವ ಸುಳಿವೂ ಕೊಡದೆ ಚೆಂದದ್ದೊಂದು ಹಾಡು ಅಚಾನಕ್ಕಾಗಿ ಕಿವಿ ಸೋಕಿದರೆ ಅವರಿಗೆಲ್ಲ ಅಕ್ಷರಶಃ ರೋಮಾಂಚನ. ಬೃಂದಾ ಆಚಾರ್ಯ ಮತ್ತು ಭರತ್ ಬೋಪಣ್ಣ ನಟಿಸಿರುವ ಆಲ್ಬಂ ಸಾಂಗ್ ಇದೀಗ ಅಂಥಾದ್ದೊಂದು ಅನುಭೂತಿಯನ್ನು ಬೇಷರತ್ತಾಗಿ ಕೊಡಮಾಡಿದೆ. ಸಾಹಿತ್ಯ, ಸಂಗೀತ, ಪರಿಕಲ್ಪನೆ, ನಟನೆ ಸೇರಿದಂತೆ ಎಲ್ಲದರಲ್ಲಿಯೂ ವಿಶೇಷವಾಗಿರುವ `ಸಾವಿರ ಗುಂಗಲ್ಲಿ’ ಆಲ್ಬಂ ಸಾಂಗ್ ಈಗ ಟ್ರೆಂಡಿಂಗಿನತ್ತ ದಾಪುಗಾಲಿಡುತ್ತಿದೆ. ಇತ್ತೀಚಿನ ದಿನಮಾನದಲ್ಲಿ ಸಿನಿಮಾಗಳಾಚೆಗೆ ಹಾಡುಗಳು ರೂಪುಗೊಳ್ಳೋದೇ ಅಪರೂಪ. ಆಲ್ಬಂ ಸಾಂಗ್ ಅನ್ನೋ ರೋಮಾಂಚಕ ಪರಿಕಲ್ಪನೆ ಅದೇಕೋ ಬರಬರುತ್ತಾ ನೇಪಥ್ಯಕ್ಕೆ ಸರಿದುಬಿಟ್ಟಿದೆ. ಇಂಥಾ ಹೊತ್ತಲ್ಲಿ `ಸಾವಿರ ಗುಂಗಲ್ಲಿ’ ಎಂಬ ಆಲ್ಬಂ ಸಾಂಗ್ ತನ್ನ ನವಿರು ಶೈಲಿಯೊಂದಿಗೆ ಕೇಳುಗರನ್ನೆಲ್ಲ ಸೋಕುತ್ತಿದೆ. ಮತ್ತಷ್ಟು ಮನಸುಗಳನ್ನು ಆವರಿಸಿಕೊಳ್ಳುತ್ತಾ ಮುಂದುವರೆಯುತ್ತಿದೆ. ಅಂದಹಾಗೆ, ಕೃಷ್ಣ ನಂಜುಂಡಯ್ಯನವರ ಪರಿಕಲ್ಪನೆ, ನಿರ್ದೇಶನದಲ್ಲಿ ಮೂಡಿ ಬಂದಿದೆ. ಬೃಂದಾ ಆಚಾರ್ಯ, ಭರತ್ ಬೋಪಣ್ಣ, ಮಯೂರ್ ಸಾಗರ್, ಕೃತಿಕಾ ಗೌಡ, ಮಾನಿನಿ…

Read More

ಮಂಡ್ಯ :- ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬದ ವಿರುದ್ಧ ಕಾಂಗ್ರೆಸ್ ಪಕ್ಷದ ನಾಯಕರು ನಡೆಸುತ್ತಿರುವ ವ್ಯವಸ್ಥಿತ ಷಡ್ಯಂತ್ರವನ್ನು ಖಂಡಿಸಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ವತಿಯಿಂದ ಮದ್ದೂರು ಪಟ್ಟಣದ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ರಸ್ತೆ ಸಂಚಾರ ತಡೆದು ಭಾನುವಾರ ಬೃಹತ್ ಪ್ರತಿಭಟನೆ ಮಾಡಲಾಯಿತು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡರ ಪ್ರತಿಕೃತಿ ದಹಿಸಿ ಅವರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿ, ಹೆದ್ದಾರಿ ಸಂಚಾರ ತಡೆದ ಪರಿಣಾಮ ಕೆಲಕಾಲ ಸಂಚಾರದಲ್ಲಿ ಅಸ್ತವ್ಯಸ್ತಗೊಂಡಿತ್ತು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಅವರು ಮಾತನಾಡಿ, ಪೆನ್ ಡ್ರೈವ್ ವಿಚಾರದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಅಣಿಯಲು ಕಾಂಗ್ರೆಸ್ ಪಕ್ಷದ ನಾಯಕರು ಮುಂದಾಗಿರುವುದು ಸರಿಯಲ್ಲ. ಕಾಂಗ್ರೆಸ್ ಪಕ್ಷದ ನಾಯಕರು ನಾಲಿಗೆ ಇದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಲಘುವಾಗಿ ಮಾತನಾಡುವುದು ಸರಿಯಲ್ಲ ಎಂದು ಎಚ್ಚರಿಕೆ ನೀಡಿದರು. ಹೆಣ್ಣು ಮಕ್ಕಳ ಬಗ್ಗೆ ಕಾಳಜಿ…

Read More

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಅದೇ ಪೆನ್ ಡ್ರೈವ್ ವೈರಲ್ ಮಾಡಿದಂತ ಆರೋಪಿಗಳಾದಂತ ಚೇತನ್, ಲಿಖಿತ್ ಹೆಸರಿನ ಇಬ್ಬರು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಇದೇ ಸಂದರ್ಭದಲ್ಲಿ ಪೆನ್ ಡ್ರೈವ್ ಹಂಚಿಕೆ ಆರೋಪ ಎದುರಿಸುತ್ತಿರೋ ನವೀನ್ ಗೌಡ ಎಂಬಾತ ನನಗೆ ದಾರಿಯಲ್ಲಿ ಸಿಕ್ಕಿದ್ದಂತ ಪೆನ್ ಡ್ರೈವ್ ಅನ್ನು ಎ ಮಂಜುಗೆ ಕೊಟ್ಟಿದ್ದೆ ಎಂಬುದಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಈ ಕುರಿತಂತೆ ಫೆಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವಂತ ನವೀನ್ ಗೌಡ, ಏಪ್ರಿಲ್ 20ರಂದು ನನಗೆ ರಸ್ತೆಯಲ್ಲಿ ಸಿಕ್ಕಿದ್ದಂತ ಪೆನ್ ಡ್ರೈವ್ ಅನ್ನು ಅರಕಲಗೂಡು ಶಾಸಕರಾದಂತ ಎ ಮಂಜು ಅವರಿಗೆ ಏಪ್ರಿಲ್.21ರಂದು ನೀಡಿದ್ದೇನೆ. ಏಪ್ರಿಲ್.21ರಂದು ಅರಕಲಗೂಡಿನ ಮಾರುತಿ ಕಲ್ಯಾಣ ಮಂಟಪದಲ್ಲಿ ನೀಡಿದ್ದೇನೆ ಎಂದಿದ್ದಾರೆ. ಇನ್ನೂ ಮುಂದುವರೆದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಹೇಳಿದ ಹಾಗೆ ವೀಡಿಯೋ ವೈರಲ್ ಹಿಂದೆ ಇರುವ ಮಹಾ ನಾಯಕ ಅರಕಲಗೂಡು ಶಾಸಕರೇ ಆಗಿರಬಹುದು ಎಂಬುದಾಗಿ ತಿಳಿಸಿದ್ದಾರೆ. https://kannadanewsnow.com/kannada/breaking-big-twist-to-kidnapping-case-against-revanna-missing-victim-releases-video-statement/ https://kannadanewsnow.com/kannada/conspiracy-is-being-hatched-to-finish-jds-but-no-one-can-do-it-mla-a-manju/

Read More

ಬೆಂಗಳೂರು: ಮಂಡ್ಯದ ಕೆರಗೋಡಿನಲ್ಲಿ ಹನುಮಧ್ವಜ ಘಟನೆಯ ಸಂಬಂಧ ಪ್ರತಿಭಟನೆ ನಡೆಸಿದವರ ವಿರುದ್ಧ ಪೊಲೀಸರು ರೌಡಿ ಶೀಟರ್ ತೆರೆಯುತ್ತಿದ್ದಾರೆ ಎನ್ನಲಾಗುತ್ತಿದೆ. ಒಂದು ವೇಳೆ ಹೀಗೆ ಮಾಡಿದ್ದೇ ಆದಲ್ಲಿ ಉಗ್ರ ಹೋರಾಟ ಮಾಡಲಾಗುತ್ತದೆ ಎಂಬುದಾಗಿ ಬಿವೈ ವಿಜಯೇಂದ್ರ ಖಡಕ್ ಎಚ್ಚರಿಕೆ ನೀಡಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜಕ್ಕೆ ಆದ ಅಪಮಾನ ಖಂಡಿಸಿ ಪ್ರತಿಭಟನೆ ನಡೆಸಿದ್ದ ಹನುಮಭಕ್ತರ ವಿರುದ್ಧ ರೌಡಿಶೀಟರ್ ಪಟ್ಟಿಗೆ ಸೇರ್ಪಡೆ ಮಾಡಲು ಪೊಲೀಸರು ವಹಿಸಿರುವ ಕ್ರಮ ಕಾಂಗ್ರೆಸ್ ಸರ್ಕಾರದ ದ್ವೇಷ ರಾಜಕಾರಣಕ್ಕೆ ದುರ್ಬಳಕೆಯಾಗುತ್ತಿರುವ ಕಾನೂನು ಅಸ್ತ್ರವಾಗಿದೆ ಎಂದಿದ್ದಾರೆ. ಗ್ರಾಮೀಣ ಭಾಗದ ಹನುಮ ಭಕ್ತರು ತಮ್ಮ ಭಾವನೆಗಳನ್ನು ಘಾಸಿಗೊಳಿಸಿದ ಆಡಳಿತ ವ್ಯವಸ್ಥೆಯ ವಿರುದ್ಧ ಪ್ರತಿಭಟನೆ ನಡೆಸಿದ್ದು ನಿರೀಕ್ಷಿತ ಘಟನೆಯಾಗಿದೆ. ಆದರೆ ಹಿಂದೂ ಶ್ರದ್ಧೆಯ ಭಕ್ತರು ಹಾಗೂ ಸಂಘಟನೆಗಳ ಕಾರ್ಯಕರ್ತರುಗಳಿಗೆ ಗೂಂಡಾಗಿರಿ ಹಣೆಪಟ್ಟಿ ಕಟ್ಟಲು ಪೊಲೀಸರು ನೋಟೀಸ್ ನೀಡಿರುವುದು ಅತ್ಯಂತ ಖಂಡನೀಯ ಎಂಬುದಾಗಿ ಹೇಳಿದ್ದಾರೆ. ಹನುಮಧ್ವಜ ಘಟನೆಯಲ್ಲಿ ಪ್ರತಿಭಟಿಸಿದವರ ಮೇಲೆ ರೌಡಿಶೀಟರ್ ತೆರೆದದ್ದೇ ಆದಲ್ಲಿ…

Read More

ಬ್ರೆಜಿಲ್: ಇಲ್ಲಿನ ರಿಯೊ ಗ್ರಾಂಡೆ ಡೊ ಸುಲ್ ರಾಜ್ಯದಲ್ಲಿ ಸುರಿಯುತ್ತಿರುವಂತ ಭಾರೀ ಮಳೆಯಿಂದಾಗಿ ಇದುವರೆಗೆ 136 ಜನರು ಸಾವನ್ನಪ್ಪಿದ್ದಾರೆ. ಅಲ್ಲದೇ 125 ಮಂದಿ ನಾಪತ್ತೆಯಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಬಿರುಗಾಳಿ ಹಾಗೂ ಪ್ರವಾಹದ ಪರಿಣಾಮವಾಗಿ ಬ್ರೆಜಿಲ್ ನ 446 ನಗರಗಳಿಗೆ ಹಾನಿಯಾಗಿದೆ. ರಾಜ್ಯದ 20 ಲಕ್ಷಕ್ಕೂ ಹೆಚ್ಚು ಜನರು ಪ್ರವಾಹದಿಂದ ನೆರೆ ಸಂತ್ರಸ್ತರಾಗಿದ್ದಾರೆ. ಸದ್ಯ ಪ್ರವಾಹ ಪೀಡಿತ ಪ್ರದೇಶದಲ್ಲಿ ಸಿಲುಕಿದ್ದಂತ 5,37,000 ಜನರನ್ನು ಸ್ಥಳಾಂತರಿಸಲಾಗಿದೆ. https://kannadanewsnow.com/kannada/breaking-congress-releases-list-of-6-candidates-for-karnataka-legislative-council-elections/ https://kannadanewsnow.com/kannada/lok-sabha-elections-2024-no-reservation-on-the-basis-of-religion-says-pm-modi/

Read More

ಕಲಬುರ್ಗಿ: ಜಿಲ್ಲೆಯಲ್ಲಿ ಇಂದು ಯುವಕನೊಬ್ಬನನ್ನು ಹಾಡ ಹಗಲೇ ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿರುವಂತ ಘಟನೆ ನಡೆದಿದೆ. ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ಪ್ರೀತಿಯ ವಿಚಾರಕ್ಕೆ ರಮಜಾನ್ ಮಹೆಬೂಬ್ ತಾರಾ(24) ಎಂಬಾತನನ್ನು ಹಾಡ ಹಗಲೇ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಈ ವಿಷಯ ತಿಳಿದು ಘಟನಾ ಸ್ಥಳಕ್ಕೆ ಅಫಜಲಪುರ ಸಿಪಿಐ ಹಾಗೂ ಪಿಎಸ್ಐ ಭೇಟಿ ನೀಡಿ, ಪರಿಶೀಲನೆ ನಡೆಸಿ, ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. https://kannadanewsnow.com/kannada/bjp-announces-list-of-candidates-for-karnataka-legislative-council-elections/ https://kannadanewsnow.com/kannada/england-pacer-james-anderson-announces-retirement-from-test-cricket/

Read More

ಬೆಂಗಳೂರು: ಕರ್ನಾಟ ವಿಧಾನ ಪರಿಷತ್ತಿನ ಮೂರು ಪದವೀಧರರ ಕ್ಷೇತ್ರ ಹಾಗೂ ಎರಡು ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿಯಿಂದ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಇಂದು ಬಿಜೆಪಿಯಿಂದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು ನಾರ್ಥ್ ಈಸ್ಟ್ ಪದವೀಧರ ಕ್ಷೇತ್ರಕ್ಕೆ ಅಮರನಾಥ ಪಾಟೀಲ್ ಗೆ ಟಿಕೆಟ್ ನೀಡಲಾಗಿದೆ. ಸೌತ್ ವೆಸ್ಟ್ ಪದವೀಧರರ ಕ್ಷೇತ್ರಕ್ಕೆ ಡಾ.ದನಂಜಯ ಸರ್ಜಿಗೆ ಟಿಕೆಟ್ ನೀಡಲಾಗಿದೆ. ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ ಎ ದೇವೇಗೌಡ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಇನ್ನೂ ಸೌತ್ ಈಸ್ಟ್ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ವೈ ಎ ನಾರಾಯಣಸ್ವಾಮಿ, ಸೌತ್ ಶಿಕ್ಷಕರ ಕ್ಷೇತ್ರಕ್ಕೆ ಇಸಿ ನಿಂಗರಾಜುಗೆ ಬಿಜೆಪಿಯಿಂದ ಟಿಕೆಟ್ ನೀಡಲಾಗಿದೆ. https://kannadanewsnow.com/kannada/former-cm-sm-krishnas-health-condition-stable-manipal-hospital-doctors/

Read More

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಆರೋಗ್ಯ ಚಿಂತಾಜನಕವಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ. ಇನ್ನೇನು ಇನ್ನಿಲ್ಲ ಎಂದೆಲ್ಲ ಹೇಳಲಾಗುತ್ತಿತ್ತು. ಆದ್ರೇ ಮಾಜಿ ಸಿಎಂ ಎಸ್ ಎಂ ಕೃಷ್ಣ ಆರೋಗ್ಯ ಸ್ಥಿರವಾಗಿದೆ ಎಂಬುದಾಗಿ ಮಣಿಪಾಲ್ ಆಸ್ಪತ್ರೆಯ ವೈದ್ಯರು ಸ್ಪಷ್ಟ ಪಡಿಸಿದ್ದಾರೆ. ಇಂದು ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರ ಆರೋಗ್ಯದ ಬಗ್ಗೆ ಮಣಿಪಾಲ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ. ಅವರ ಆರೋಗ್ಯ ಸ್ಥಿರವಾಗಿದೆ. ಯಾವುದೇ ಗಂಭೀರ ಸ್ಥಿತಿಯನ್ನು ತಲುಪಿಲ್ಲ ಎಂಬುದಾಗಿ ತಿಳಿಸಿದೆ. ಮಣಿಪಾಲ್ ಆಸ್ಪತ್ರೆಯ ಡಾ.ಸತ್ಯನಾರಾಯಣ, ಡಾ.ಸುನೀಲ್ ಕಾರಂತ್ ಅವರ ನೇೃತ್ವದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯದ ಬಗ್ಗೆಯೂ ನಿಗಾ ವಹಿಸಲಾಗಿದೆ. ಅವರು ಆರೋಗ್ಯ ಸ್ಥಿತಿಯಲ್ಲಿ ಗಂಭೀರವಾಗಿ ಎಂಬುದು ಸುಳ್ಳು. ಅವರು ಇನ್ನಿಲ್ಲ ಎಂಬುದು ಸತ್ಯಕ್ಕೆ ದೂರವಾದದ್ದು ಆಗಿದೆ. ಆ ಬಗ್ಗೆ ಯಾರು ಆತಂಕಕ್ಕೆ ಒಳಗಾಗಬಾರದು ಎಂಬುದಾಗಿ ಸ್ಪಷ್ಟ ಪಡಿಸಿದೆ. https://kannadanewsnow.com/kannada/tree-felling-team-formed-in-bengaluru-to-work-actively-during-monsoon/ https://kannadanewsnow.com/kannada/england-pacer-james-anderson-announces-retirement-from-test-cricket/

Read More

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆಗಾಲದ ವೇಳೆ ಧರೆಗುರುಳುವ ಮರ, ಮರದ ರೆಂಬೆ/ಕೊಂಬೆಗಳನ್ನು ತೆರವುಗೊಳಿಸುವ ಸಲುವಾಗಿ “ಮರ ಕಟಾವು ತಂಡಗಳು” ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, ಧರಗುರುಳಿದ ಮರಗಳನ್ನು ಕಾಲಮಿತಿಯೊಳಗಾಗಿ ತೆರವುಗೊಳಿಸಲಾಗುತ್ತಿದೆ ಎಂಬುದಾಗಿ ಬಿಬಿಎಂಪಿ ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ನಗರಲ್ಲಿ ಮಳೆಗಾಲ ಪ್ರಾರಂಭವಾಗಿದ್ದು, ಮಳೆಯಾಗುವ ವೇಳೆ ಮರಗಳು, ಮರದ ರೆಂಬೆ/ಕೊಂಬೆಗಳು ಧರೆಗುರುಳಲಿವೆ. ಇದರಿಂದ ನಾಗರೀಕರಿಗೆ ಹಾಗೂ ವಾಹನ ಸವಾರರಿಗೆ ಸಾಕಷ್ಟು ಸಮಸ್ಯೆಯಾಗಲಿದೆ. ಈ ನಿಟ್ಟಿನಲ್ಲಿ ಪಾಲಿಕೆಯ ಅರಣ್ಯ ವಿಭಾಗವು ಮರ ಕಟಾವು ತಂಡಗಳನ್ನು ನಿಯೋಜಿಸಿದೆ ಎಂದಿದೆ. ಪಾಲಿಕೆಯ ನಿಯಂತ್ರಣ ಕೊಠಡಿಗಳಿಗೆ ಮರ, ಮರದ ರೆಂಬೆ/ಕೊಂಬೆಗಳು ಬಿದ್ದಂತಹ ದೂರುಗಳು ಬಂದ ಕೂಡಲೆ, ಆ ದೂರುಗಳನ್ನು ಆಯಾ ವಲಯದ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲಿದ್ದಾರೆ. ಅನಂತರ ಅಧಿಕಾರಿಗಳು ಮರ, ಮರದ ರೆಂಬೆ/ಕೊಂಬೆ ಬಿದ್ದಿರುವ ಸ್ಥಳಕ್ಕೆ ಮರ ಕಟಾವು ತಂಡಗಳನ್ನು ಕಳುಹಿಸಿ ಧರೆಗುರುಳಿದ ಮರಗಳನ್ನು ಕಟಾವು ಮಾಡಿ ನಾಗರೀಕರು/ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಿದ್ದಾರೆ ಎಂದು ತಿಳಿಸಿದೆ. 39 ಮರ ಕಟಾವು ತಂಡಗಳ ನಿಯೋಜನೆ ಪಾಲಿಕೆ ವ್ಯಾಪ್ತಿಯಲ್ಲಿ 28…

Read More