Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ನ್ಯೂಯಾರ್ಕ್: ಎಂಸಿಎ ಅಧ್ಯಕ್ಷ ಅಮೋಲ್ ಕಾಳೆ ನ್ಯೂಯಾರ್ಕ್ನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಅವರು ಭಾನುವಾರ ಭಾರತ-ಪಾಕಿಸ್ತಾನ ಟಿ 20 ವಿಶ್ವಕಪ್ ಪಂದ್ಯವನ್ನು ವೀಕ್ಷಿಸಿದರು. ಅಮೋಲ್ 2022 ರಲ್ಲಿ ಎಂಸಿಎ ಅಧ್ಯಕ್ಷರಾಗಿ ಆಯ್ಕೆಯಾದರು. ಅವರು ಭಾರತದ ಮಾಜಿ ಬ್ಯಾಟ್ಸ್ಮನ್ ಸಂದೀಪ್ ಪಾಟೀಲ್ ಅವರನ್ನು ಸೋಲಿಸಿ ಎಂಸಿಎ ಅಧ್ಯಕ್ಷರಾದರು. ನ್ಯೂಯಾರ್ಕ್ನ ನಸ್ಸೌ ಕೌಂಟಿ ಕ್ರೀಡಾಂಗಣದಲ್ಲಿ ಭಾನುವಾರ ಎಂಸಿಎ ಕಾರ್ಯದರ್ಶಿ ಅಜಿಂಕ್ಯ ನಾಯಕ್ ಮತ್ತು ಪದಾಧಿಕಾರಿ ಸೂರಜ್ ಸಮತ್ ಅವರೊಂದಿಗೆ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಭಾರತ ಕ್ರಿಕೆಟ್ ತಂಡದ ಪಂದ್ಯವನ್ನು ಅವರು ವೀಕ್ಷಿಸಿದರು. ಅವರ ಅಧಿಕಾರಾವಧಿಯಲ್ಲಿ, ವಾಂಖೆಡೆ ವಿಶ್ವಕಪ್ 2023 ಪಂದ್ಯಗಳನ್ನು ಯಶಸ್ವಿಯಾಗಿ ಆಯೋಜಿಸಿತು, ಇದರಲ್ಲಿ ಭಾರತವು ನ್ಯೂಜಿಲೆಂಡ್ ವಿರುದ್ಧ ಮುಖಾಮುಖಿಯಾದ ಸೆಮಿಫೈನಲ್ ಕೂಡ ಸೇರಿದೆ. ಬಹುರಾಷ್ಟ್ರೀಯ ಈವೆಂಟ್ನಲ್ಲಿ ಅವರ ಪಾಪ್ಕಾರ್ನ್ ಉಪಕ್ರಮವು ದೊಡ್ಡ ಯಶಸ್ಸನ್ನು ಗಳಿಸಿತು. ಇತ್ತೀಚೆಗೆ ಮುಕ್ತಾಯಗೊಂಡ 2023-24ರ ಋತುವಿನಲ್ಲಿ ಮುಂಬೈ ರಣಜಿ ಟ್ರೋಫಿಯನ್ನು ಗೆದ್ದಿದ್ದರಿಂದ ದೇಶೀಯ ಕ್ರಿಕೆಟ್ ಸರ್ಕ್ಯೂಟ್ ಕೂಡ ಅವರ ಅಡಿಯಲ್ಲಿ ಭಾರಿ ಯಶಸ್ಸನ್ನು…
ಬೆಂಗಳೂರು : ಮಳೆ ಕೊರತೆ, ಜಲಾಶಯಗಳಲ್ಲಿ ಕಡಿಮೆಯಾದ ನೀರಿನ ಲಭ್ಯತೆ ಮಧ್ಯೆಯೂ ಕಳೆದ ಬೇಸಿಗೆಯಲ್ಲಿ ಯಾವುದೇ ಲೋಡ್ ಶೆಡ್ಡಿಂಗ್ ಇಲ್ಲದೆ, ರೈತರು, ವಿದ್ಯಾರ್ಥಿ ಸಮುದಾಯಕ್ಕೆ ಹೆಚ್ಚು ಸಮಸ್ಯೆಯಾಗದಂತೆ ಇಂಧನ ಇಲಾಖೆ ವಿದ್ಯುತ್ ಪೂರೈಸಿದೆ. ವಿದ್ಯುತ್ ಖರೀದಿಯಿಂದ ಹೆಚ್ಚು ಹೊರೆಯಾಗದಂತೆ ನೋಡಿಕೊಳ್ಳಲು ಅನ್ಯ ರಾಜ್ಯಗಳೊಂದಿಗೆ ವಿದ್ಯುತ್ ವಿನಿಮಯ ಮಾಡಿಕೊಳ್ಳಲಾಗಿತ್ತು. ಅಲ್ಲದೇ, ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ದಾಖಲೆಯ ವಿದ್ಯುತ್ ಉತ್ಪಾದನೆ, ವಿದ್ಯುತ್ ಕಾಯ್ದೆಯ ಸೆಕ್ಷನ್ 11 ಜಾರಿಗೊಳಿಸಿ ರಾಜ್ಯದಲ್ಲಿರುವ ಖಾಸಗಿ ವಿದ್ಯುತ್ ಉತ್ಪಾದಕರು ರಾಜ್ಯ ಗ್ರಿಡ್‌ಗೆ ವಿದ್ಯುತ್ ನೀಡುವಂತೆ ನೋಡಿಕೊಳ್ಳುವ ಮೂಲಕ ಬೇಸಿಗೆಯ ವಿದ್ಯುತ್ ಬೇಡಿಕೆಯನ್ನು ಪೂರೈಸಲಾಗಿದೆ. ಈ ಬಗ್ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಮಾಧ್ಯಮದವರೊಂದಿಗೆ ಇಲಾಖೆ ಕೈಗೊಂಡಿದ್ದ ಕ್ರಮಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. “ಈ ಬಾರಿ ವಿದ್ಯುತ್ ಬೇಡಿಕೆ ಹೆಚ್ಚಿದ್ದು, ಬೇಡಿಕೆಗೆ ಅನುಗುಣವಾಗಿ ವಿದ್ಯುತ್ ಒದಗಿಸುವುದು ನಮ್ಮ ಜವಾಬ್ದಾರಿ. ಅದರಂತೆ ಹೊರ ರಾಜ್ಯಗಳೊಂದಿಗೆ ವಿನಿಮಯ ಒಪ್ಪಂದ ಮಾಡಿಕೊಂಡೆವು, ಮಾರುಕಟ್ಟೆಯಿಂದ ಖರೀದಿಸಿದೆವು. ಒಟ್ಟಾರೆಯಾಗಿ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಬಿಕ್ಕಟ್ಟಿಲ್ಲದಂತೆ, ಜನರಿಗೆ ಯಾವುದೇ ತೊಂದರೆ…
ಸಿಕ್ಕಿಂ: ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ (ಎಸ್ಕೆಎಂ) ನಾಯಕ ಪ್ರೇಮ್ ಸಿಂಗ್ ತಮಾಂಗ್ ಸೋಮವಾರ ಎರಡನೇ ಅವಧಿಗೆ ಸಿಕ್ಕಿಂ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಗ್ಯಾಂಗ್ಟಾಕ್ನ ಪಾಲ್ಜೋರ್ ಕ್ರೀಡಾಂಗಣದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲ ಲಕ್ಷ್ಮಣ್ ಆಚಾರ್ಯ ಅವರು ತಮಾಂಗ್ ಮತ್ತು ಅವರ ಮಂತ್ರಿಮಂಡಲಕ್ಕೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. https://twitter.com/PTI_News/status/1800124818089775325 ತಮಾಂಗ್ ಹಿಮಾಲಯನ್ ರಾಜ್ಯದ ಮುಖ್ಯಮಂತ್ರಿಯಾಗಿ ಎರಡನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಿದರು. ಜೂನ್ 2 ರಂದು ನಡೆದ ಎಸ್ಕೆಎಂ ಸಭೆಯಲ್ಲಿ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಸಿಕ್ಕಿಂ ವಿಧಾನಸಭಾ ಚುನಾವಣೆಯಲ್ಲಿ ಎಸ್ಕೆಎಂ 32 ಸ್ಥಾನಗಳಲ್ಲಿ 31 ಸ್ಥಾನಗಳನ್ನು ಗೆದ್ದಿದೆ ಇತ್ತೀಚೆಗೆ ಮುಕ್ತಾಯಗೊಂಡ ಸಿಕ್ಕಿಂ ವಿಧಾನಸಭಾ ಚುನಾವಣೆಯಲ್ಲಿ, ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಎಸ್ಕೆಎಂ 32 ಸ್ಥಾನಗಳಲ್ಲಿ 31 ಸ್ಥಾನಗಳನ್ನು ಗೆದ್ದಿತ್ತು. ಪ್ರತಿಪಕ್ಷ ಎಸ್ಡಿಎಫ್ ಒಂದು ಸ್ಥಾನವನ್ನು ಗೆದ್ದಿತ್ತು. ಇಂದು ಸಿಕ್ಕೀಂ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಪ್ರೇಮ್ ಸಿಂಗ್ ತಮಾಂಗ್ ಪ್ರಮಾಣವಚನ…
ಬೆಂಗಳೂರು : “ಲೋಕಸಭೆ ಚುನಾವಣೆಯಲ್ಲಿನ ಜನರ ತೀರ್ಪು ನಮಗೆ ಎಚ್ಚರಿಕೆ ಗಂಟೆಯಾಗಿದ್ದು, ನಮ್ಮಿಂದ ಎಲ್ಲಿ ತಪ್ಪಾಗಿದೆ ಎಂದು ಪರಾಮರ್ಶೆ ನಡೆಸಿ ಅದನ್ನು ಸರಿಪಡಿಸಿಕೊಳ್ಳಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರಿನ ಕುಮಾರಪಾರ್ಕ್ ಸರಕಾರಿ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಉತ್ತರಿಸಿದರು. ಲೋಕಸಭೆ ಫಲಿತಾಂಶದ ಕುರಿತ ಪರಾಮರ್ಶೆ ಬಗ್ಗೆ ಪ್ರಶ್ನಿಸಿದಾಗ, “ಲೋಕಸಭಾ ಫಲಿತಾಂಶದ ಕುರಿತು ಮುಂದಿನ ದಿನಗಳಲ್ಲಿ ಎಲ್ಲಾ ನಾಯಕರ ಜೊತೆ ಪರಾಮರ್ಶನಾ ಸಭೆ ನಡೆಸಲಾಗುವುದು. ಸೋಲು ಸೋಲೇ. ಎಲ್ಲಿ ತಪ್ಪಾಗಿದೆ, ಏಕೆ ಹೆಚ್ಚುಕಮ್ಮಿಯಾಗಿದೆ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು” ಎಂದರು. ಬೇರೆ ಬೇರೆ ಜಿಲ್ಲೆಗಳ ಪರಾಮರ್ಶೆಗೆ ಶೀಘ್ರವೇ ದಿನಾಂಕ ನಿಗದಿ ಇಂದು (ಸೋಮವಾರ, ಜೂ.10) ಬೆಂಗಳೂರಿನ ಫಲಿತಾಂಶಗಳ ಬಗ್ಗೆ ಸಭೆ ಕರೆಯಲಾಗಿದೆ. ಮುಂದಿನ ದಿನಗಳಲ್ಲಿ ಬೇರೆ ಬೇರೆ ಜಿಲ್ಲೆಗಳ ಸಭೆ ನಡೆಸಲಾಗುವುದು. ಶೀಘ್ರವೇ ಇದಕ್ಕೆ ದಿನಾಂಕ ನಿಗದಿ ಮಾಡುತ್ತೇವೆ. ಎಲ್ಲೆಲ್ಲಿ ಏನಾಗಿದೆ ಎನ್ನುವ ಸತ್ಯಶೋಧನೆ ಹಾಗೂ ಪರಿಹಾರ ಹುಡುಕುವ ಕೆಲಸ ಆಗಬೇಕು” ಎಂದು ತಿಳಿಸಿದರು. ಕರ್ನಾಟಕ, ಹಿಮಾಚಲ ಪ್ರದೇಶದ ಚುನಾವಣೆಯ…
ಬೆಂಗಳೂರು : ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಪ್ರಾಣಿಗಳ ಆರೈಕೆ ಮತ್ತು ನಿರ್ವಹಣೆ (Animal Care and Management)ಯ 10 ತಿಂಗಳುಗಳ ಡಿಪ್ಲೊಮಾ ಕೋರ್ಸ್ ಆರಂಭಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಾತ್ವಿಕ ಅನುಮೋದನೆ ನೀಡಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ನಡೆದ ಮೃಗಾಲಯ ಪ್ರಾಧಿಕಾರದ 156ರ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಮೃಗಾಲಯಗಳಲ್ಲಿ ವನ್ಯಜೀವಿಗಳ ಆರೈಕೆಗೆ ನುರಿತ ಸಿಬ್ಬಂದಿಯ ಅಗತ್ಯವಿದ್ದು, ಬೆಂಗಳೂರು ವಿಶ್ವವಿದ್ಯಾಲಯದ ಮಾನ್ಯತೆಯೊಂದಿಗೆ ಬೆಂಗಳೂರಿನ ಲೈಫ್ ಸೈನ್ಸ್ ಎಡ್ಯುಕೇಷನ್ ಟ್ರಸ್ಟ್ ಸಹಯೋಗದಲ್ಲಿ ಈ ಕೋರ್ಸ್ ಆರಂಭಿಸಲು ತಾತ್ವಿಕ ಅನುಮೋದನೆ ನೀಡಿದ್ದಾರೆ. ಈ ಡಿಪ್ಲೊಮಾ ಪದವಿ ಪಡೆದವರಿಗೆ ಉದ್ಯೋಗಾವಕಾಶಗಳು ಲಭಿಸುವಂತಿರಬೇಕು. ದೀರ್ಘಕಾಲ ಈ ಕೋರ್ಸ್ ಪ್ರಾಮುಖ್ಯತೆ ಪಡೆಯುವಂತಿರಬೇಕು, ಈ ನಿಟ್ಟಿನಲ್ಲಿ ಪಠ್ಯಕ್ರಮ ಮತ್ತು ಪ್ರಾಯೋಗಿಕ ತರಬೇತಿ ಕಾರ್ಯಕ್ರಮ ರೂಪಿಸುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಸಾಧಕ ಬಾಧಕ ಚರ್ಚಿಸಿ ಮುಂದಿನ ಸಭೆಯಲ್ಲಿ ಪ್ರಸ್ತಾವನೆ ಮಂಡಿಸಲು ಸೂಚಿಸಿದರು. ಪ್ರಾಣಿಗಳ ಆರೈಕೆ ಹಾಗೂ ನಿರ್ವಹಣೆ ಮಾಡಲು ಆಸಕ್ತ ವಿದ್ಯಾರ್ಥಿಗಳಿಗೆ ವೈಜ್ಞಾನಿಕವಾಗಿ ವನ್ಯಜೀವಿ ಮತ್ತು…
ಶಿವಮೊಗ್ಗ: ಸಾಗರ ತಾಲೂಕಿನಲ್ಲಿ ಮಳೆಗಾಲದಲ್ಲಿ ಯಾವುದೇ ರಸ್ತೆ ಕಾಮಗಾರಿ ನಡೆಸಬಾರದು. ಇದು ಅವೈಜ್ಞಾನಿಕವಾದಂತ ಕಾಮಗಾರಿಯಾಗಲಿದೆ. ರಸ್ತೆ ಮಾಡಿದ್ರೂ ಹಾಳಾಗಿ ಹೋಗುತ್ತದೆ. ಯಾವುದೇ ರಸ್ತೆ ಕಾಮಗಾರಿ ಮಳೆಗಾಲ ಮುಗಿಯೋವರೆಗೆ ಮಾಡಬಾರದು. ಮಳೆಗಾಲದಲ್ಲಿ ನೈಸರ್ಗಿಕ ಅವಘಡಗಳನ್ನು ತುರ್ತಾಗಿ ಕೈಗೊಳ್ಳೋ ನಿಟ್ಟಿನಲ್ಲಿ ಯಾವುದೇ ಅಧಿಕಾರಿ ರಜೆ ಹಾಕುವಂತಿಲ್ಲ ಎಂಬುದಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ಖಡಕ್ ಸೂಚನೆ ನೀಡಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಪ್ರಗತಿ ಪರಿಶೀಲನೆ ಸಭೆಯನ್ನು ನಡೆಸಿದಂತ ಅವರು, ಇಲಾಖಾ ವಾರು ಅಧಿಕಾರಿಗಳಿಂದ ತಾಲೂಕಿನ ಪ್ರಗತಿಯ ಕುರಿತಂತೆ ಮಾಹಿತಿಯನ್ನು ಪಡೆದರು. ಮಳೆಗಾಲದಲ್ಲಿ ರಸ್ತೆ ಕಾಮಗಾರಿ ಮಾಡುವಂತಿಲ್ಲ. ಯಾವುದೇ ಕಾಮಗಾರಿ ನಡೆಸದಂತೆ ಖಡಕ್ ಸೂಚನೆ ನೀಡಿದರು. ಅಲ್ಲದೇ ಮಳೆಗಾಲದಲ್ಲಿ ಅಲ್ಲಲ್ಲಿ ಅವಘಡಗಳು ಉಂಟಾಗುತ್ತವೆ. ಇವುಗಳನ್ನು ಸಕಾಲದಲ್ಲಿ ಸಮರ್ಪಕವಾಗಿ ನಿರ್ವಹಣೆ ಮಾಡಬೇಕಿದೆ. ಈ ಹಿನ್ನಲೆಯಲ್ಲಿ ಯಾವುದೇ ಅಧಿಕಾರಿಗಳು ಮೂರು ತಿಂಗಳು ರಜೆ ಹಾಕುವಂತಿಲ್ಲ. ನಿಮ್ಮ ಕೆಲಸಗಳು ಏನೇ ಇದ್ರೂ ರಜಾ ದಿನಗಳಲ್ಲಿ ಮುಗಿಸಿಕೊಳ್ಳುವಂತೆ ತಿಳಿಸಿದರು. ಮಳೆಗಾಲದಲ್ಲಿ ಸಮಸ್ಯೆ ಪರಿಹರಿಸೋ ನಿಟ್ಟಿನಲ್ಲಿ ಪಿಡಿಓ, ವಿಎ ಕೆಲಸ ಮುಖ್ಯವಾಗಿದೆ.…
ಶಿವಮೊಗ್ಗ: ಜಿಲ್ಲೆಯ ಸಾಗರ ನಗರದಲ್ಲಿನ ಸಾರ್ವಜನಿಕರ ಅನುಕೂಲಕ್ಕಾಗಿ ಈಶ್ವರ ಡೆಕೋರೇಟರ್ ಬಳಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿ, ಲೋಕಾರ್ಪಣೆಗೊಳಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಮಾರ್ಕೆಟ್ ರಸ್ತೆಯ ಈಶ್ವರ ಡೆಕೋರೇಟರ್ಸ್ ಬಳಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟ ಸ್ಥಾಪನೆ ಮಾಡಲಾಗಿತ್ತು. ಈ ಘಟಕವನ್ನು ಇಂದು ನಗರದ ಸಭಾ ಸದಸ್ಯರಾದ ಸೈಯದ್ ಜಾಕೀರ್ ಅವರು ಉದ್ಘಾಟಿಸಿದರು. ಈ ಮೂಲಕ ಸಾರ್ಜಜನಿಕರ ಉಪಯೋಗಕ್ಕಾಗಿ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಸಾಗರ ನಗರಸಭೆಯ ಮಾಜಿ ಸದಸ್ಯರಾದ ಕವಿತಾ ಜಯಣ್ಣ, ಕೆ.ವಿ. ಗಂಗಾಧರ, ಕೆ.ವಿ. ಲಕ್ಷ್ಮಣ, ಕೆ.ವಿ. ಜಯರಾಮ, ರಾಮಚಂದ್ರ ಪಿ ನಾಯಕ್, ವಿ. ರಾಘವೇಂದ್ರ ಮೊದಲಾದವರು ಹಾಜರಿದ್ದರು. https://kannadanewsnow.com/kannada/prajwal-rape-case-sit-mahazar-at-basavanagudi-residence-crucial-evidence-found/ https://kannadanewsnow.com/kannada/breaking-actor-yuvaraj-kumar-files-for-divorce-in-court/
ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಇಂದು ಬೆಂಗಳೂರಿನ ಬಸವನಗುಡಿಯಲ್ಲಿರುವಂತ ನಿವಾಸದಲ್ಲಿ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ಕರೆದೊಯ್ದು ಸ್ಥಳ ಮಹಜರು ನಡೆಸುತ್ತಿದ್ದಾರೆ. ಈ ವೇಳೆಯಲ್ಲಿ ಮಹತ್ವದ ಸಾಕ್ಷ್ಯ ಪತ್ತೆಯಾಗಿದೆ ಎನ್ನಲಾಗುತ್ತಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಬಸವನಗುಡಿಯ ನಿವಾಸಕ್ಕೆ ಅವರನ್ನು ಕರೆದೊಯ್ದು ಸ್ಥಳ ಮಹಜರು ನಡೆಸುತ್ತಿದ್ದಾರೆ. ಈ ವೇಳೆಯಲ್ಲಿ ತಾಯಿ ಭವಾನಿ ರೇವಣ್ಣ ಮನೆಯ ಮೊದಲ ಮಹಡಿಯಲ್ಲಿರುವ ತುಳಸಿಕಟ್ಟೆಗೆ ಪೂಜೆ ಸಲ್ಲಿಸುತ್ತಿದ್ದರು ಎನ್ನಲಾಗಿದೆ. ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಬಸನಗುಡಿಯ ಹೆಚ್.ಡಿ ರೇವಣ್ಣ ಅವರ ಮನೆಯಲ್ಲಿದ್ದಂತ ಕಂಪ್ಯೂಟರ್ ಅನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳ ಮಹಜರು ಮಾಡಿದ ಬಳಿಕ ಆರೋಪಿಯ ಹೇಳಿಕೆಯನ್ನು ಅದೇ ಸಿಸ್ಟಂನಲ್ಲಿ ಟೈಪಿಂಗ್ ಮಾಡಿಕೊಂಡು, ಹೇಳಿಕೆ ದಾಖಲಿಸಿಕೊಂಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಮನೆಯ ಕೆಲ ಜಾಗಗಳನ್ನು ಎವಿಡೆನ್ಸ್ ಗಾಗಿ ಅಧಿಕಾರಿಗಳು ಪರಿಗಣಿಸಿದ್ದು, ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿರುವಂತ ಜಾಗ, ಅಶ್ಲೀಲ ವೀಡಿಯೋದಲ್ಲಿರುವ ಜಾಗಗಳ ಬಗ್ಗೆಯೂ ಎಸ್ಐಟಿ…
ಬೆಂಗಳೂರು: ಸಿಲಿಕಾನ್ ಸಿಟಿ ಜನತೆಗೆ ಮತ್ತೊಂದು ತೆರಿಗೆ ಶಾಕ್ ನೀಡೋದಕ್ಕೆ ಬಿಬಿಎಂಪಿ ಮುಂದಾಗಿದೆ.ಅದೇ ಆಸ್ತಿ ತೆರಿಗೆ ಜೊತೆಗೆ ಘನತ್ಯಾಜ್ಯ ಸಂಗ್ರಹಣ ಶುಲ್ಕ ಸಂಗ್ರಹಕ್ಕೂ ಬಿಬಿಎಂಪಿ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ. ಹೌದು ಬೆಂಗಳೂರಿನ ಜನತೆಗೆ ಶೀಘ್ರವೇ ಪ್ರತಿ ಮನೆಗೂ ಘನತ್ಯಾಜ್ಯ ಶುಲ್ಕ ಕಟ್ಟೋದು ಖಚಿತವಾಗಿದೆ. ರಾಜ್ಯ ಸರ್ಕಾರಕ್ಕೆ ಬಿಬಿಎಂಪಿಯಿಂದ ಪ್ರಸ್ತಾವನೆ ಸಲ್ಲಿಸಲಾಗಿದೆ. ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಸಲ್ಲಿಸಿದಂತ ಪ್ರಸ್ತಾವನೆಯಲ್ಲಿ ವಸತಿ ಕಟ್ಟಡಗಳಿಗೆ ಮಾಸಿಕ 100 ರೂ, ವಾಣಿಜ್ಯ ಕಟ್ಟಡಗಳಿಗೆ 200ರೂ ದರ ನಿಗದಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಒಂದು ಕಟ್ಟಡದಲ್ಲಿ 10 ಮನೆ ಇದ್ರೆ, ಪ್ರತಿ ಮನೆಗೂ ಆಸ್ತಿ ತೆರಿಗೆ ಮೂಲಕ ಮಾಸಿಕ 100 ರೂ. ಸಂಗ್ರಹ ಮಾಡಲು ಅನುಮತಿ ನೀಡುವಂತೆ ಕೋರಿದೆ. ಇದಲ್ಲದೇ ಆಸ್ತಿ ತೆರಿಗೆ ಮೂಲಕ ಸಂಗ್ರಹವಾದ ಹಣವನ್ನ ಬಿಬಿಎಂಪಿ ಕಂಪನಿಗೆ ವರ್ಗಾವಣೆ ಮಾಡಲು ತಯಾರಿ ನಡೆಯುತ್ತಿದೆ. ದರ ನಿಗದಿಯಾದ್ರೆ ವಾರ್ಷಿಕ 800 ಕೋಟಿ ಘನತ್ಯಾಜ್ಯ ಕಂಪನಿಗೆ ಆದಾಯ ಬರಲಿದೆ. ಅಂದುಕೊಂಡಂತೆ ಆದ್ರೆ ಮುಂದಿನ ದಿನಗಳಲ್ಲಿ ಘನತ್ಯಾಜ್ಯ ಸೇವಾ ಶುಲ್ಕ…
ಬೆಂಗಳೂರು: ಸ್ಯಾಂಡಲ್ ವುಡ್ ಯುವ ನಟ, ರಾಘವೇಂದ್ರ ರಾಜ್ ಕುಮಾರ್ ಅವರ 2ನೇ ಪುತ್ರ ಯುವ ರಾಜ್ ಕುಮಾರ್ ಅವರ ದಾಂಪತ್ಯದಲ್ಲಿ ಬಿರುಕು ಕಂಡಿದೆ. ಈ ಮೂಲಕ ದೊಡ್ಮನೆ ಮಗ ಗುರು ರಾಜ್ ಕುಮಾರ್ ಡಿವೋರ್ಸ್ ಗೆ ಮುಂದಾಗಿದ್ದು, ಪತ್ನಿ ಶ್ರೀ ದೇವಿ ಭೈರಪ್ಪ ಅವರಿಂದ ದೂರವಾಗೋದಕ್ಕೆ ಫ್ಯಾಮಿಲಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಸಂಬಂಧ ಕಳೆದ ನಾಲ್ಕು ದಿನಗಳ ಹಿಂದೆಯೇ ಯುವ ರಾಜ್ ಕುಮಾರ್ ಅವರು ಕೌಟುಂಬಿಕ ನ್ಯಾಯಾಲಯಕ್ಕೆ ವಿವಾಹ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿರೋದಾಗಿ ತಿಳಿದು ಬಂದಿದೆ. ಜೂನ್.6ರಂದು ಫ್ಯಾಮಿಲಿ ಕೋರ್ಟ್ ಗೆ ಎಂಸಿ ಆಕ್ಟ್ ನ ಸೆಕ್ಷನ್ 13 (1) (ia) ಅಡಿಯಲ್ಲಿ ಯುವ ರಾಜ್ ಕುಮಾರ್ ಹಾಗೂ ಪತ್ನಿ ಶ್ರೀದೇವಿ ಭೈರಪ್ಪ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಜುಲೈ.4ಕ್ಕೆ ಕೋರ್ಟ್ ನಿಗದಿ ಪಡಿಸಿದೆ. ಯುವ ರಾಜ್ ಕುಮಾರ್-ಶ್ರೀ ದೇವಿ ಭೈರಪ್ಪ ಡಿವೋರ್ಸ್ ಗೆ ಕಾರಣವೇನು? ಯುವ ರಾಜ್ ಕುಮಾರ್-ಶ್ರೀ ದೇವಿ ಭೈರಪ್ಪ ಡಿವೋರ್ಸ್…














