Author: kannadanewsnow09

ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಆ ಸಭೆಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ.. 2025-26ನೇ ಸಾಲಿನ ರಸಗೊಬ್ಬರ ಕಾಪು ದಾಸ್ತಾನು ಮಾಡಲು ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ ಮತ್ತು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿರವರು ಪಡೆಯುವ ತಲಾ 200 ಕೋಟಿಗಳ ಬಂಡವಾಳ ಸಾಲಕ್ಕೆ ಸರ್ಕಾರ ಖಾತ್ರಿ ನೀಡಲು ಒಪ್ಪಿಗೆ ನೀಡಲಾಗಿದೆ. “ಜಲಾನಯನ ಅಭಿವೃದ್ಧಿ ಘಟಕ-ಪ್ರಧಾನ ಮಂತ್ರಿ ಕೃಷಿ ಸಿಂಚಯಿ ಯೋಜನೆ 2.0 (PMKSY-WDC 2.0) ಯೋಜನೆಯಡಿ ಹೆಚ್ಚುವರಿ 15 ಯೋಜನೆಗಳನ್ನು ರಾಜ್ಯದ 15 ತಾಲ್ಲೂಕುಗಳಲ್ಲಿ 39413 ಹೆಕ್ಟೇರ್ ಪ್ರದೇಶದಲ್ಲಿ ಯೋಜನಾ ಮೊತ್ತ ರೂ.90.07 ಕೋಟಿಗಳಲ್ಲಿ (ಕೇಂದ್ರ ಮತ್ತು ರಾಜ್ಯ ಸರ್ಕಾರ -ಶೇ.60:40) ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲು ಒಪ್ಪಿಗೆ ಸೂಚಿಸಿದೆ. ರಾಜ್ಯ ಸಿವಿಲ್ ಸೇವೆ ಹುದ್ದೆಗಳ ನೇರ ನೇಮಕಾತಿಯಲ್ಲಿ ಎಲ್ಲಾ ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳನ್ನು ಸಡಿಲಿಸಿ ದಿನಾಂಕ: 29.09.2025 ರಂದು ಹೊರಡಿಸಿರುವ ಆದೇಶಕ್ಕೆ ಘಟನೋತ್ತರ ಅನುಮೋದನೆ…

Read More

ಬೆಂಗಳೂರು: ಉತ್ತರ ಕರ್ನಾಟಕ ಭಾಗದಲ್ಲಿ ಉಂಟಾದ ಪ್ರವಾಹಕ್ಕೆ ರಾಜ್ಯ ಸರ್ಕಾರ ತಕ್ಷಣವೇ ಕೇಂದ್ರ ಸರ್ಕಾರ ನೀಡುವ ಎರಡು ಪಟ್ಟು ಪರಿಹಾರ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಉತ್ತರ ಕರ್ನಾಟಕ ಭಾಗದಲ್ಲಿ ಉಂಟಾದ ಪ್ರವಾಹಕ್ಕೆ ಸರಿಯಾದ ಪರಿಹಾರ ನೀಡದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಯಡಿಯೂರಪ್ಪ ಅವರ ಕಾಲದಲ್ಲಿ ಪ್ರವಾಹ ಆದಾಗ 63 ಹೊಸ ಗ್ರಾಮಗಳನ್ನೆ ಕಟ್ಟಿಸಿದರು. ಎರಡನೇ ಸಾರಿ ಪ್ರವಾಹ ಆದಾಗ ಸುಮಾರು ಮೂರು ಲಕ್ಷ ಮನೆಗಳನ್ನು ಐದು ಲಕ್ಷ ಪರಿಹಾರ ನೀಡಿದ್ದೇವೆ. ನಾನು ಸಿಎಂ ಆಗಿದ್ದಾಗ ಕೇಂದ್ರ ಸರ್ಕಾರ ನೀಡುವ ಎರಡು ಪಟ್ಟು ಪರಿಹಾರ ನೀಡಿದ್ದೇವು. ಒಣ ಬೇಸಾಯಕ್ಕೆ 13 ಸಾವಿರ, ನೀರಾವರಿಗೆ 18 ಸಾವಿರ, ತೋಟಗಾರಿಗೆ ಬೆಳೆಗಳಿಗೆ  25 ಸಾವಿರ ರೂ. ಪ್ರತಿ ಎಕರೆಗೆ ಪರಿಹಾರ ನೀಡಿದ್ದೇವು. ಸುಮಾರು ಏಳು ಲಕ್ಷ ರೈತರಿಗೆ ಪರಿಹಾರ ನೀಡಿದ್ದೇವೆ. ರಾಜ್ಯ ಸರ್ಕಾರ ಕೂಡಲೇ ರೈತರಿಗೆ ಎರಡು ಪಟ್ಟು…

Read More

ಬೆಂಗಳೂರು: ಬೆಂಗಳೂರು ಹೆಚ್ಚು ದಟ್ಟಣೆ ಇರುವ ನಗರಗಳ ಸಾಲಿನಲ್ಲಿ ಸೇರಿರುವುದು ಗೊತ್ತೇ ಇದೆ, ಇದೀಗ ಬೆಂಗಳೂರು ಪದೇ ಪದೇ ಸಂಚಾರ ನಿಯಮ ಉಲ್ಲಂಘಟನೆ ಮಾಡುವವರ ಪಟ್ಟಿಯಲ್ಲೂ ಸಹ ಅಗ್ರಸ್ಥಾನ ಪಡೆದುಕೊಂಡಿದೆ. ಹೌದು, ಭಾರತದ ಸುರಕ್ಷತೆ ಮತ್ತು ರಕ್ಷಣೆಯ ಕ್ಷೇತ್ರದ ಅಗ್ರ ಕಂಪನಿಗಳಲ್ಲಿ ಒಂದಾದ ACKO, ಇತ್ತೀಚಿಗೆ ನಡೆಸಿದ ಸಮೀಕ್ಷಾ ವರದಿಯಲ್ಲಿ ದೇಶದಲ್ಲೇ ಅತಿ ಹೆಚ್ಚು ಪುನಾವರ್ತಿತ ಸಂಚಾರ ನಿಯಮ ಉಲ್ಲಂಘನೆ ಮಾಡುವವರೂ ಬೆಂಗಳೂರಿಗರೇ ಎಂಬುದು ಬಹಿರಂಗವಾಗಿದೆ. ACKO ಸಂಸ್ಥೆ ಇತ್ತೀಚೆಗೆ ಡಿಸೆಂಬರ್ 2024 ರಿಂದ ಜೂನ್ 2025 ರವರೆಗೆ ಸಮೀಕ್ಷೆ ನಡೆಸಿದೆ. ಇದರ ಪ್ರಕಾರ, ಬೆಂಗಳೂರಿನ ವಾಹನ ಸವಾರರ ಪೈಕಿ ಶೇ. 10.8 ರಷ್ಟು ಜನರು 10 ಕ್ಕೂ ಹೆಚ್ಚು ದಂಡ ಬಾಕಿ ಉಳಿಸಿಕೊಂಡಿದ್ದಾರೆ ಎಂದು ವರದಿ ಹೇಳುತ್ತದೆ, ಇದು ಭಾರತೀಯ ಮಹಾನಗರಗಳಲ್ಲಿಯೇ ಅತ್ಯಧಿಕವಾಗಿದೆ. ಅಧ್ಯಯನದ ಸಮಯದಲ್ಲಿ, ನಗರದಲ್ಲಿ 14.5 ಲಕ್ಷಕ್ಕೂ ಹೆಚ್ಚು ಸಂಚಾರ ತಪಾಸಣೆಗಳನ್ನು ನಡೆಸಲಾಗಿದ್ದು, ಸುಮಾರು ಶೇ. 61 ಮಂದಿ ಅಂದರೆ, ಪ್ರತಿ 10 ಜನರಲ್ಲಿ ಸುಮಾರು 6…

Read More

ಶಿವಮೊಗ್ಗ: ಸಾಗರದ ಬುಲೆಟ್ ಬೈಕ್ ಪ್ರಿಯರ ಆಸೆ ಈಡೇರಿಸಲು ಆರ್ ಬಿ ಡಿ ಮೋಟಾರ್ಸ್ ಅಣಿಯಾಗಿದೆ. ಹೊಸ ಹೊಸ ವಿನೂತನ ಮಾದರಿಯ ರಾಯಲ್ ಎನ್‌ಫೀಲ್ಡ್ ಮೋಟಾರ್ ಬೈಕ್ ಗಳೊಂದಿಗೆ ನಾಳೆ ಸಾಗರದಲ್ಲಿ ಹೊಸ ಶೋ ರೂಂ ಗ್ರಾಂಡ್ ಓಪನ್ ಆಗಲಿದೆ.  ಈ ಕುರಿತಂತೆ ಮಾಹಿತಿಯನ್ನು ಹಂಚಿಕೊಂಡಿರುವಂತ ಆರ್ ಬಿ ಡಿ ಮೋಟಾರ್ಸ್ ನ RBD ಮಹೇಶ್ ಅವರು, ಸಾಗರದಲ್ಲಿ ರಾಯಲ್ ಎನ್‌ಫೀಲ್ಡ್ ಮೋಟಾರ್ ಶೋ ರೂಂ ತೆರೆಯಬೇಕು ಎಂಬುದು ಬಹು ದಿನದ ಕನಸಾಗಿತ್ತು. ಆ ಮೂಲಕ ಸ್ಥಳೀಯರಿಗೆ ಉದ್ಯೋಗ ನೀಡುವ ಗುರಿ ಹೊಂದಲಾಗಿತ್ತು. ಅದು ನನಸಾಗಿದೆ. ಬುಲೆಟ್ ಬೈಕ್ ಪ್ರಿಯರ ಆಸೆ ಈಡೇರಿಸಲು, ಸ್ಥಳೀಯರಿಗೆ ಉದ್ಯೋಗ ಅವಕಾಶ ನೀಡಲು ಆರ್ ಬಿ ಡಿ ಮೋಟಾರ್ಸ್ ನಿಂದ ನಾಳೆ ರಾಯಲ್ ಎನ್‌ಫೀಲ್ಡ್ ಬೈಕ್ ಮಾರಾಟ ಮಳಿಗೆ ಆರಂಭಗೊಳ್ಳುತ್ತಿದೆ ಎಂದರು. ಸಾಗರದ ಲೋಹಿಯಾ ನಗರ, ವಾರ್ಡ್ ನಂ.9, ಬಿಹೆಚ್ ರಸ್ತೆ, ರಾಷ್ಟ್ರೀಯ ಹೆದ್ದಾರಿ 69ರಲ್ಲಿ ರಾಯಲ್ ಎನ್ ಫೀಲ್ಡ್ ಶೋ ರೂಂ ಗ್ರ್ಯಾಂಡ್ ಓಪನಿಂಗ್…

Read More

ಬೆಂಗಳೂರು: ರಾಜ್ಯದ 15 ಜಿಲ್ಲೆಗಳ, 27 ತಾಲೂಕುಗಳಲ್ಲಿನ ಅಂತರ್ಜಲ ಅತಿಬಳಕೆಯ ಪಟ್ಟಿಯಲ್ಲಿರುವ 252 ಗ್ರಾಮ ಪಂಚಾಯಿತಿಗಳಲ್ಲಿ ʼನೀರಿದ್ದರೆ ನಾಳೆʼ ಯೋಜನೆಯನ್ನು ಮೊದಲ ಹಂತದಲ್ಲಿ ಅನುಷ್ಠಾನಗೊಳಿಸಲಾಗುವುದು. ಈ ಮಹತ್ವಾಕಾಂಕ್ಷಿ ಯೋಜನೆಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹಾಗೂ ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್‌ ಅವರು ನಾಳೆ ಚಾಲನೆ ನೀಡಲಿದ್ದಾರೆ ಎಂದು ಸಣ್ಣ ನೀರಾವರಿ ಸಚಿವರಾದ ಎನ್ ಎಸ್ ಭೋಸರಾಜು ಅವರು ತಿಳಿಸಿದ್ದಾರೆ. ವಿಕಾಸಸೌಧದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿಗಳನ್ನು ಹಂಚಿಕೊಂಡರು. ಪ್ರಕೃತಿಯಿಂದ ವರದಾನವಾಗಿ ಬಂದಿರುವ ನೈಸರ್ಗಿಕ ಹಾಗೂ ನಮ್ಮ ಪೂರ್ವಜರು ನಿರ್ಮಿಸಿದ ಜಲಮೂಲಗಳನ್ನು ಸಂರಕ್ಷಿಸುವ ಮೂಲಕ ಅಂತರ್ಜಲ ಮಟ್ಟ ವೃದ್ಧಿಸಿ ಸಮೃದ್ಧ ಕರ್ನಾಟಕ ನಿರ್ಮಾಣಕ್ಕೆ ಭದ್ರ ಅಡಿಪಾಯ ಹಾಕುವ ಉದ್ದೇಶದಿಂದ “ನೀರಿದ್ದರೆ ನಾಳೆ” ಎನ್ನುವ ವಿನೂತನ ಕಾರ್ಯಕ್ರಮವನ್ನು ರೂಪಿಸಲಾಗಿದೆ. “ನೀರಿದ್ದರೆ ನಾಳೆ” ಎನ್ನುವ ವಿಶೇಷ ಪರಿಕಲ್ಪನೆಯ ಕಾರ್ಯಕ್ರಮದ ಮೂಲಕ ನೀರಿನ ಮಹತ್ವವನ್ನು ತಿಳಿಸುವುದು, ರಾಜ್ಯದ ಜಲ ಮೂಲಗಳ ಸಂರಕ್ಷಣೆಗೆ ಯೋಜನೆ ರೂಪಿಸುವುದು, ನಾಗರಿಕರನ್ನು ನೀರಿನ ಸಂರಕ್ಷಣೆಯ ಅಭಿಯಾನದಲ್ಲಿ ಪಾಲುದಾರರನ್ನಾಗಿ ಮಾಡುವುದು ಮುಖ್ಯ ಉದ್ದೇಶವಾಗಿದೆ ಎಂದರು. https://twitter.com/KarnatakaVarthe/status/1975903098028884211…

Read More

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಪದವಿ / ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಂಡು ಅರ್ಜಿ ಸಲ್ಲಿಸುವ ಕೊನೆ ದಿನಾಂಕವನ್ನು ಅ.15ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಾರ್ಯನಿರ್ವಾಹಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಎದುರಾಗಿರುವ ಕೆಲ ತಾಂತ್ರಿಕ ಸಮಸ್ಯೆಗಳ ಕಾರಣಕ್ಕೆ ದಿನಾಂಕ ವಿಸ್ತರಿಸಲಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅ.15ರಂದು ಬೆಳಿಗ್ಗೆ 11ಗಂಟೆ ಒಳಗೆ ಅರ್ಜಿ ಸಲ್ಲಿಸಬೇಕು ಎಂದು ಅವರು ಸೂಚಿಸಿದ್ದಾರೆ. https://kannadanewsnow.com/kannada/throwing-shoes-at-supreme-court-judges-is-part-of-a-conspiracy-by-supporters-of-manuwad-mlc-ramesh-babu/ https://kannadanewsnow.com/kannada/from-now-on-there-will-be-50-women-corporators-in-gba-corporations-dcm-d-k-shivakumar/

Read More

ಬೆಂಗಳೂರು: ಸುಪ್ರೀಂಕೋರ್ಟ್ ನ್ಯಾಯಾಧೀಶರ ಮೇಲೆ ಶೂ ಎಸೆದಿರುವುದು ಮನುವಾದದ ಬೆಂಬಲಿಗರ ಷಡ್ಯಂತ್ರದ ಭಾಗವಾಗಿದೆ. ದೇಶದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಪ್ರಜಾಪ್ರಭುತ್ವವಾದಿಗಳು, ಸಂವಿಧಾನವಾದಿಗಳು ತಲೆ ತಗ್ಗಿಸುವ ವಿಚಾರ ಇದಾಗಿದೆ. ಈ ಷಡ್ಯಂತ್ರದ ಹಿಂದಿರುವ ಕೈಗಳು ಹೊರಬರಬೇಕು ಅದಕ್ಕಾಗಿ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಹೇಳಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಶೂ ಎಸೆತ ಸಣ್ಣ ಪ್ರಮಾಣದ ಕೃತ್ಯವಲ್ಲ. ಇದರ ಹಿಂದಿರುವ ಕುತಂತ್ರ ಬಹಿರಂಗಗೊಳ್ಳಬೇಕು ಎಂದರೆ ಉನ್ನತ ಮಟ್ಟದ ನ್ಯಾಯಾಂಗ ತನಿಖೆಯಾಗಬೇಕು. ದಲಿತರ ಮೇಲೆ ಆಗುತ್ತಿರುವ ದೌರ್ಜನ್ಯಕ್ಕೆ ಬಿಜೆಪಿ ಮನಸ್ಥಿತಿ ಕಾರಣ. ಹಿಂದುಳಿದ ವರ್ಗಗಳ, ದಲಿತರ ನಾಯಕರು, ಅಧಿಕಾರಿಗಳನ್ನು ಗುರಿ ಮಾಡಿ ಟೀಕೆ ಮಾಡಲಾಗುತ್ತಿದೆ ಎಂದರು. ದೇಶದ ಇತಿಹಾಸದಲ್ಲಿ ಇಬ್ಬರು ದಲಿತರು ಮಾತ್ರ ಮುಖ್ಯನ್ಯಾಯಧೀಶರಾಗಿ ಕೆಲಸ ಮಾಡಿದ್ದಾರೆ. ಮೊದಲನೆಯದಾಗಿ ಜಸ್ಟೀಸ್ ಬಾಲಕೃಷ್ಣ ಅವರು ಎರಡನೇ ವ್ಯಕ್ತಿಯಾಗಿ ಗವಾಯಿ ಅವರು. ಇವರು ಇಂತಹ ಉನ್ನತ ಸ್ಥಾನಕ್ಕೆ ದಲಿತರು ಹೋಗಿದ್ದಾರೆ…

Read More

ಬೆಂಗಳೂರು : “ಜಿಬಿಎ ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆಯಲ್ಲಿ ಶೇ.50ರಷ್ಟು ಟಿಕೆಟ್ ಅನ್ನು ಮಹಿಳೆಯರಿಗೆ ನೀಡಲಾಗುವುದು. ಆಮೂಲಕ ಮುಂದಿನ ದಿನಗಳಲ್ಲಿ ಬೆಂಗಳೂರಿನ ಪಾಲಿಕೆಗಳಲ್ಲಿ ಅರ್ಧದಷ್ಟು ಮಹಿಳಾ ಕಾರ್ಪೊರೇಟರ್ ಗಳು ಇರುತ್ತಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಹಾಗೂ ಬೆಂಗಳೂರು ರಾಜಕೀಯ ಕ್ರಿಯಾ ಸಮಿತಿಯು (B.PAC) ಮೌಂಟ್ ಕಾರ್ಮೆಲ್ ಕಾಲೇಜು ಸಹಯೋಗದಲ್ಲಿ ಕಾಲೇಜು ಆವರಣದಲ್ಲಿ ಬುಧವಾರ ಬೆಂಗಳೂರು ಅಭಿವೃದ್ಧಿ, ಪರಿವರ್ತನೆ ಕುರಿತು ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು. ಹಲವಾರು ದಶಕಗಳಿಂದ ಬೆಂಗಳೂರಿನಲ್ಲಿ ಅನೇಕ ಸವಾಲುಗಳಿವೆ. ಜಿಬಿಎಯನ್ನು ಪರಿಚಯಿಸಲು ಇದು ಸೂಕ್ತ ಸಮಯ ಎಂದು ಅನಿಸಿದ್ದೇಕೆ ಎಂದು ಕೇಳಿದಾಗ, “ನಾವೆಲ್ಲರೂ ಬೆಂಗಳೂರಿನ ನಾಗರಿಕರು. ನಗರೀಕರಣ ಯಾವುದೇ ದೇಶ ಅಥವಾ ನಗರಕ್ಕೆ ದೊಡ್ಡ ಸವಾಲು. ಜನ ಬೆಂಗಳೂರಿಗೆ ವಲಸೆ ಬರುವುದು ಶಿಕ್ಷಣ, ಉದ್ಯೋಗ ಹಾಗೂ ಉತ್ತಮ ಜೀವನ ಕಟ್ಟಿಕೊಳ್ಳುವ ಆಸೆಯಿಂದ. ಯಾವುದೇ ನಗರದ ಜನಸಂಖ್ಯೆ ಹೆಚ್ಚಿದಾಗ…

Read More

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆನ್ ಲೈನ್ ಮೂಲಕ ಅರ್ಜಿ ಕರೆಯುವ ಪ್ರಕ್ರಿಯೆಯನ್ನು ಕೈ ಬಿಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್.ಎಸ್.ತಂಗಡಗಿ ಹೇಳಿದ್ದಾರೆ. ಪ್ರಶಸ್ತಿಗೆ ಅರ್ಹ ವ್ಯಕ್ತಿಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಚಿಸಲಾಗುವ ಸಲಹಾ ಸಮಿತಿ ಹಾಗೂ ಉನ್ನತ ಆಯ್ಕೆ ಸಮಿತಿಗಳು ಅಂತಿಮಗೊಳಿಸಲಿದೆ. ಈ ವರ್ಷ 70 ಜನ ಅರ್ಹ ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುವುದು ಎಂದು ತಿಳಿಸಿದ್ದಾರೆ. ಈಗಾಗಲೇ ಇಲಾಖೆಗೆ ಸಲ್ಲಿಕೆಯಾಗಿರುವ ಸ್ವಯಂ ಅರ್ಜಿಗಳನ್ನು ಸಹ ಪ್ರಶಸ್ತಿ ಸಲಹಾ ಸಮಿತಿ ಮುಂದೆ ಮಂಡಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ. https://kannadanewsnow.com/kannada/if-there-is-water-in-252-gram-panchayats-of-15-districts-of-the-state-the-project-will-be-implemented-tomorrow/ https://kannadanewsnow.com/kannada/good-news-for-owners-who-built-houses-without-obtaining-cc-oc-from-the-state-government-electricity-water-connection-from-the-government/

Read More

ಬೆಂಗಳೂರು: ಕರ್ನಾಟಕ ಸರ್ಕಾರವು ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನೀತಿ 2025–32ಕ್ಕೆ ಅನುಮೋದನೆ ನೀಡಿದ್ದು, ಇದು ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ ಇಲಾಖೆಯ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ ‘ನಿಪುಣ’ ದೃಷ್ಟಿಕೋನಕ್ಕೆ ಪೂರಕವಾಗಿ, ಅತಿದೊಡ್ಡ ಕೌಶಲ್ಯ, ಉನ್ನತೀಕರಣ ಮತ್ತು ಮರುಕೌಶಲ್ಯ ಯೋಜನೆಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಏಳು ವರ್ಷಗಳ ಮಾರ್ಗಸೂಚಿ ಮತ್ತು 4,432.5 ಕೋಟಿ ರೂ. ವೆಚ್ಚದೊಂದಿಗೆ, ಈ ನೀತಿಯು ಕರ್ನಾಟಕವನ್ನು ಕೌಶಲ್ಯಪೂರ್ಣ ಕಾರ್ಯಪಡೆಯ ಪ್ರಮುಖ ಕೇಂದ್ರವನ್ನಾಗಿ ಮಾಡುವುದು ಹಾಗೂ 2032ರ ವೇಳೆಗೆ ರಾಜ್ಯದ 1 ಟ್ರಿಲಿಯನ್ ಡಾಲರ್‌ ಆರ್ಥಿಕ ಲಕ್ಷ್ಯವನ್ನು ಸಾಧಿಸುವ ಗುರಿಯನ್ನು ಹೊಂದಿದೆ ಎಂದೂ ಸಚಿವರು ಮಾಹಿತಿ ನೀಡಿದ್ದಾರೆ. ಕರ್ನಾಟಕವು ಭಾರತದ ತಂತ್ರಜ್ಞಾನ ಮತ್ತು ಹೂಡಿಕೆ ರಾಜಧಾನಿ ಮಾತ್ರವಲ್ಲ, ಇದು ಕೌಶಲ್ಯ ಮತ್ತು ಜ್ಞಾನ ರಾಜಧಾನಿಯೂ ಆಗಿದೆ ಹಾಗೂ ನಮ್ಮ ಜನರನ್ನು ದೊಡ್ಡ ಮಟ್ಟದಲ್ಲಿ ಬೆಂಬಲಿಸುವ ಮೂಲಕ ಈ ನಾಯಕತ್ವವನ್ನು ಮುಂದುವರಿಸಲು ನಾವು ಉದ್ದೇಶಿಸಿದ್ದೇವೆ ಎಂದು…

Read More