Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಈಗಾಗಲೇ ಜಾಮೀನಿಗಾಗಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ನಿನ್ನೆಯಷ್ಟೇ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ಇಂದಿಗೆ ಕೋರ್ಟ್ ಮುಂದೂಡಿಕೆ ಮಾಡಿತ್ತು. ಈಗ ಬಂಧನದ ಭೀತಿಯನ್ನು ಎದುರಿಸುತ್ತಿರುವಂತ ಅವರು, ಮತ್ತೆ ಕೋರ್ಟ್ ಗೆ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಸಂಬಂಧ ಇಂದು ಕೆಆರ್ ನಗರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ದೂರು ದಾಖಲಾಗಿತ್ತು. ಈ ದೂರಿನ ಸಂಬಂಧ ಪ್ರಜ್ವಲ್ ರೇವಣ್ಣ ಹಾಗೂ ಹೆಚ್.ಡಿ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇಂದು ಎಸ್ಐಟಿ ವಿಚಾರಣೆಗೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಹಾಜರಾಗಬೇಕಿತ್ತು. ಆದ್ರೇ ಕೊನೆಯ ಗಳಿಗೆಯಲ್ಲಿ ಮತ್ತೊಂದು ದೂರು, ಆ ಬಳಿಕ ಎಫ್ಐಆರ್ ದಾಖಲಾಗುತ್ತಿದ್ದಂತೆ, ವಿಚಾರಣೆಯಿಂದ ಹಿಂದೆ ಸರಿದು, ಗೈರಾಗಿದ್ದಾರೆ. ನೇರವಾಗಿ ಕೋರ್ಟ್ ಗೆ ಹಾಜರಾಗಿ ನಿರೀಕ್ಷಣಾ ಜಾಮೀನು ನಿರೀಕ್ಷೆಯಲ್ಲಿದ್ದಂತ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರು, ಅದು ಸಿಗೋದು ಡೌಟ್ ಎಂಬುದಾಗಿ ಅರಿತು, ಇಂದು ಮತ್ತೆ ಬೆಂಗಳೂರಿನ…
ಬೆಂಗಳೂರು: ಬಿರು ಬಿಸಿನಿಂದ ಕಂಗೆಟ್ಟಿದ್ದಂತ ಸಿಲಿಕಾನ್ ಸಿಟಿಯಲ್ಲಿ ಇದೀಗ ವರುಣಾಗಮನವಾಗಿದೆ. ಗುಡುಗು ಸಹಿತ ಮಳೆಯಾಗುತ್ತಿದ್ದು, ವಾಹನ ಸವಾರರು ಪರದಾಡುವಂತೆ ಆಗಿದೆ. ಬೆಂಗಳೂರಿನಲ್ಲಿ ನಿನ್ನೆಯಷ್ಟೇ ಕೆಲ ಪ್ರದೇಶಗಳಲ್ಲಿ ಮಳೆಯಾಗಿತ್ತು. ಇಂದು ಮತ್ತೆ ಮಳೆ ಆರಂಭಗೊಂಡಿದೆ. ಬೆಂಗಳೂರಿನ ಕೇಂದ್ರ ಸ್ಥಾನವಾಗಿರುವಂತ ಮೆಜೆಸ್ಟಿಕ್ ಸುತ್ತಾಮುತ್ತ ಗುಡುಗು ಸಹಿತ ಮಳೆ ಸುರಿಯುತ್ತಿದೆ. ರೇಸ್ ಕೋರ್ಸ್, ಶಿವಾನಂದ ಸರ್ಕಲ್, ಚಾಲುಕ್ಯ ಸರ್ಕಲ್, ಮೈಸೂರು ಬ್ಯಾಂಕ್ ವೃತ್ತ, ಮಾರ್ಕೆಟ್, ಹೊಸಕೇಟೆ, ಕೆ ಆರ್ ಪುರಂ, ವೈಟ್ ಫೀಲ್ಡ್ ಸೇರಿದಂತೆ ವಿವಿಧೆಡೆ ಮಳೆಯಾಗುತ್ತಿದೆ. ದಿಢೀರ್ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯದ ರಾಜಧಾನಿ ಜನತೆಯನ್ನು ತಂಪು ಮಾಡಿದ್ದರೇ, ವಾಹನ ಸವಾರರು ರಸ್ತೆಯಲ್ಲಿ ನೀರು ಹರಿದು ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ. ಕಳೆದ ಕೆಲ ಗಂಟೆಯಿಂದ ಮಳೆಯಾಗುತ್ತಿದ್ದು, ಗುಡುಗು ಸಹಿತ ಧಾರಾಕಾರ ಮಳೆ ಬೆಂಗಳೂರಿನ ವಿವಿಧೆಡೆಯಾಗುತ್ತಿದೆ. ಈ ಮೂಲಕ ಬಿಸಿನಿಂದ ತತ್ತರಿಸಿದ್ದಂತ ಬೆಂಗಳೂರು ಜನತೆಗೆ ವರುಣ ತಂಪೆರೆದಿದ್ದಾನೆ. https://kannadanewsnow.com/kannada/union-home-minister-amit-shah-demands-cbi-probe-into-neha-hiremath-murder-case/ https://kannadanewsnow.com/kannada/breaking-up-lok-sabha-elections-rahul-gandhi-files-nomination-from-rae-bareli/
ದೇವರು ನಮಗೆ ನೀಡಿದ ಪ್ರತಿ ದಿನವೂ ಒಳ್ಳೆಯ ದಿನ ಎಂದು ಹೇಳಲಾಗುತ್ತದೆ. ಕೆಲವು ದಿನಗಳು ನಮಗೆ ಹೆಚ್ಚು ಹೆಚ್ಚು ಅದೃಷ್ಟವನ್ನು ತರುತ್ತವೆ. ಆ ರೀತಿಯಲ್ಲಿ, 5-5-2024 ಭಾನುವಾರವು ಕುಬೇರನಿಗೆ ಸೇರಿದ ಐದನೇ ಸಂಖ್ಯೆಯನ್ನು ಆಧರಿಸಿದೆ. ನಮ್ಮ ಎಲ್ಲಾ ಆರ್ಥಿಕ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು, ಆ ದಿನ ಮಾಡಬೇಕಾದ ಸೂಕ್ಷ್ಮ ಆಧ್ಯಾತ್ಮಿಕ ಪರಿಹಾರವನ್ನು ನಾವು ಈ ಪೋಸ್ಟ್ ಮೂಲಕ ತಿಳಿಯಲಿದ್ದೇವೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ…
ಮುಂಡಗೋಡು: ಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣ ಅವರನ್ನು ರಕ್ಷಣೆ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬಾಗಲಕೋಟೆ ಹೆಲಿಪ್ಯಾಡಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಯಾರಾದರೂ ಅಂತರರಾಷ್ಟ್ರೀಯ ಪ್ರಯಾಣ ಮಾಡುವಾಗ ಪಾಸ್ ಪೋರ್ಟ್, ವೀಸಾ ಚೆಕ್ ಆಗುತ್ತದೆ. ಕೇಂದ್ರ ಸರ್ಕಾರಕ್ಕೆ ತಿಳಿಯದಂತೆ ಯಾರೂ ದೇಶದ ಹೊರಗೆ ಹೋಗಲು ಸಾಧ್ಯವಿಲ್ಲ ಎಂದರು. ರೇವಣ್ಣ ದುಬೈಗೆ ತೆರಳಿರುವ ಬಗ್ಗೆ ಮಾತನಾಡಿದ ಅವರು ಯಾವ ದೇಶದಲ್ಲಿದ್ದರೂ ಕರೆತರುತ್ತೇವೆ. ಅವರು ದೇಶಕ್ಕೆ ಬರಲೇಬೇಕು. ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ನ್ನು ರದ್ದು ಮಾಡಲು ಪ್ರಧಾನಿಗಳಿಗೆ ಪತ್ರ ಬರೆದಿದ್ದೇನೆ ಎಂದರು. ಪ್ರಜ್ವಲ್ ರೇವಣ್ಣ ಅವರ ಮೇಲೆ ಬಲಾತ್ಕಾರ ಮಾಡಿರುವ ಆರೋಪವಿದೆ ಪ್ರಜ್ವಲ್ ರೇವಣ್ಣ ಅವರ ಮೇಲೆ ಬಲಾತ್ಕಾರ ಮತ್ತು ಲೈಂಗಿಕ ಶೋಷಣೆ ಮಾಡಿರುವ ಆರೋಪವಿದೆ. ಪ್ರಜ್ವಲ್ ರೇವಣ್ಣ ಅವರ ಬಗ್ಗೆ ತಿಳಿದೂ ಬಿಜೆಪಿ ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಂಡಿದೆ ಎಂದರು. ಸಂತ್ರಸ್ತ ಮಹಿಳೆಗೆ ರಕ್ಷಣೆ ಪ್ರಜ್ವಲ್ ರೇವಣ್ಣ ಅವರ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ರಕ್ಷಣೆ ನೀಡಲು…
ಬೆಂಗಳೂರು: ನಿನ್ನೆಯಷ್ಟೇ ಬೆಂಗಳೂರಲ್ಲಿ ಮಳೆಯಾಗಿತ್ತು. ಬಿಸಿಲಿನಿಂದ ಕಂಗೆಟ್ಟಿದ್ದಂತ ಜನತೆಗೆ ತಂಪೆರೆದಿತ್ತು. ಈಗ ಮುಂದಿನ ಮೂರು ಗಂಟೆಯಲ್ಲಿ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತಂತೆ ಮಾಹಿತಿ ನೀಡಿರುವಂತ ರಾಜ್ಯ ಹವಾಮಾನ ಇಲಾಖೆಯು ಬೆಂಗಳೂರಲ್ಲಿ ಮುಂದಿನ 3 ಗಂಟೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರು ಸೇರಿದಂತೆ ಬೆಂಗಳೂರು ಗ್ರಾಮಾಂತರದಲ್ಲಿ ಮಳೆ ಸಾಧ್ಯತೆಯಿದೆ ಎಂದು ತಿಳಿಸಿದೆ. ಇನ್ನು, ಒಂದು ಅಥವಾ ಎರಡು ಸ್ಥಳಗಳಲ್ಲಿ ಬಲವಾದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆಯ ಹಿನ್ನೆಲೆಯಲ್ಲಿ ಹಲವು ಪ್ರದೇಶಗಳಲ್ಲಿ ತಾತ್ಕಾಲಿಕ ವಿದ್ಯುತ್ ವ್ಯತ್ಯಯ, ಸಣ್ಣಪುಟ್ಟ ಸಂಚಾರ ದಟ್ಟನೆ. ದುರ್ಬಲ ಮರದ ಕೊಂಬೆಗಳು ಕಿತ್ತು ಬರುವ ಎಚ್ಚರಿಕೆಯನ್ನು ನೀಡಲಾಗಿದೆ. https://kannadanewsnow.com/kannada/union-home-minister-amit-shah-demands-cbi-probe-into-neha-hiremath-murder-case/ https://kannadanewsnow.com/kannada/congress-is-not-a-party-that-takes-away-the-taali-but-gives-thali-bhagya-h-k-patil/
ನಮ್ಮಲ್ಲಿ ಪ್ರತಿಯೊಬ್ಬರೂ ಕೂಡ ಹಣವನ್ನು ಸಂಪಾದನೆ ಮಾಡಬೇಕು ನಮ್ಮ ಆಸೆಗಳನ್ನು ಈಡೇರಿಸಿಕೊಳ್ಳಬೇಕು ಎಂಬ ಕನಸನ್ನು ಇಟ್ಟು ಕೊಂಡಿರುತ್ತಾರೆ. ಆದರೆ ಕೆಲವೊಂದಷ್ಟು ಜನರಿಗೆ ಇದು ಸಾಧ್ಯವಾಗುವುದಿಲ್ಲ ಎಷ್ಟೇ ಕಷ್ಟಪಟ್ಟು ಸಂಪಾದನೆ ಮಾಡಿದರು ಒಂದಲ ಒಂದು ರೀತಿಯಾಗಿ ಹಣ ಖರ್ಚಾಗುತ್ತಿರುತ್ತದೆ ಹಾಗೂ ಇನ್ನೂ ಕೆಲವೊಂದಷ್ಟು ಜನರು ಎಷ್ಟೇ ಪ್ರಯತ್ನ ಪಟ್ಟರು ಅತಿ ಹೆಚ್ಚಿನ ಹಣವನ್ನು ಸಂಪಾದನೆ ಮಾಡಲು ಸಾಧ್ಯವಾಗುವುದಿಲ್ಲ. ಹಾಗಾಗಿ ಇಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರು ಈ ಒಂದು ಪರಿಹಾರವನ್ನು ಮಾಡಿಕೊಳ್ಳುವು ದರಿಂದ ಈ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು ಅದೇನೆಂದು ನೋಡುವುದಾದರೆ 2 ರಿಂದ 4 ಲವಂಗವನ್ನು ಮಲ್ಲಿಗೆ ಎಣ್ಣೆಯಲ್ಲಿ ಹಾಕಿ ಆಂಜನೇಯನ ಮುಂದೆ ದೀಪವನ್ನು ಹಚ್ಚುವುದರಿಂದ ಅಲ್ಲಿ ನಿಮ್ಮ ಕೋರಿಕೆಗಳನ್ನು ಹೇಳಿಕೊಳ್ಳುವುದರ ಮೂಲಕ ದೀಪ ಹಚ್ಚಬೇಕು ಈ ರೀತಿ ಮಾಡುವುದರಿಂದ ನೀವು ಅಂತಹ ಒಂದು ಸಂಕಷ್ಟದಿಂದ ಪಾರಾಗಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್…
ಶಿವಮೊಗ್ಗ: ಬಿಜೆಪಿ, ಬಡವರು, ರೈತರ, ಮಹಿಳೆಯರ ವಿರುದ್ಧವಾಗಿರುವ ಸರ್ಕಾರ. ಆದ್ದರಿಂದಲೇ ಅವರ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಿಲ್ಲ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಗುಡುಗಿದ್ದಾರೆ. ಇಂದು ಶಿವಮೊಗ್ಗದಲ್ಲಿನ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದಂತ ಅವರು, 10 ವರ್ಷಗಳಲ್ಲಿ ಮೋದಿ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ. 15 ಲಕ್ಷ ಕಪ್ಪು ಹಣ ತರಲಿಲ್ಲ, 2 ಕೋಟಿ ಉದ್ಯೋಗ ಸೃಷ್ಟಿಸಲಿಲ್ಲ, ಅಗತ್ಯ ವಸ್ತುಗಳ ಬೆಲೆ ಕಡಿಮೆ ಮಾಡಲಿಲ್ಲ. ಅಚ್ಚೇ ದಿನ್ ಬರಲಿಲ್ಲ. ದೇಶ ಹಾಗೂ ರಾಜ್ಯದ ಜನ ಬೆಲೆಯೇರಿಕೆ, ಹಣದುಬ್ಬರ ಜಾಸ್ತಿಯಾದ್ದರಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರು ಸಾಲ ಮನ್ನಾ ಮಾಡಿ, ನ್ಯಾಯಯುತ ಬೆಲೆ ಕೊಡಿ, ಎಂ.ಎಸ್.ಪಿ ಗೆ ಕಾನೂನು ರೂಪಿಸಿ ಎಂದು ಹೋರಾಟ ಮಾಡಿದರೂ ನರೇಂದ್ರ ಮೋದಿ ಜಗ್ಗಲಿಲ್ಲ ಎಂದರು. ಶಕ್ತಿ, ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳನ್ನು ಎಂಟು ತಿಂಗಳೊಳಗೆ ಜಾರಿಗೆ ತಂದಿದ್ದೇವೆ. ಶಕ್ತಿ ಯೋಜನೆಯಡಿ ಪ್ರಯಾಣಿಸಿದ್ದ ಅರಸೀಕೆರೆಯ ಹೆಣ್ಣುಮಗಳೊಬ್ಬಳು ಟಿಕೆಟ್‍ಗಳ ಹಾರ ಹಾಕಿದ್ದನ್ನು ಮುಖ್ಯಮಂತ್ರಿಗಳು ಸ್ಮರಿಸಿದರು. ಅಂತೆಯೇ ಕೊಪ್ಪಳದ ಮಹಿಳೆಯೊಬ್ಬಳು ಗೃಹಲಕ್ಷ್ಮೀ ಯೋಜನೆಯ ಹಣ ಹಾಗೂ…
ಗದಗ: ಯೋಗ್ಯತೆ ಇದ್ದರೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡಿ, ಇಲ್ಲದಿದ್ದರೆ ಬೀದಿಗಿಳಿದು ಹೋರಾಟ ಮಾಡಲಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಗಜೇಂದ್ರಘಡದಲ್ಲಿ ಇಂದು ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರ ಪರ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು. ಮೋದಿಯವರು ಕಳೆದ ಹತ್ತು ವರ್ಷದಲ್ಲಿ ಒಂದು ದಿನವೂ ರಜೆ ತೆಗೆದುಕೊಳ್ಳದೇ ಕೆಲಸ ಮಾಡಿದ್ದಾರೆ. ತಮ್ಮ ತಾಯಿ ತಿರಿಕೊಂಡಾಗ ಅಂತ್ಯ ಸಂಸ್ಕಾರ ಮಾಡಿ ಮತ್ತೆ ಕರ್ತವ್ಯಕ್ಕೆ ಹಾಜರಿಯಾಗಿದ್ದರು. ದೇಶಕ್ಕೆ ಸ್ವಾತಂತ್ರ್ಯ ಬಂದ ಸಂದದರ್ಭದಲ್ಲಿ ಕಾಂಗ್ರೆಸ್ ನ್ನು ವಿಸರ್ಜಿಸುವಂತೆ ಮಹಾತ್ಮಾ ಗಾಂಧಿಜಿ ಸೂಚಿಸಿದ್ಸರು. ಆಗ ಕಾಂಗ್ರೆಸ್ ವಿಸರ್ಜಿಸಲಿಲ್ಲ. ಈಗ ಜನರು ಮಹಾತ್ಮಾ ಗಾಂಧಿ ಯವರ ಆದೇಶ ಪಾಲನೆ ಮಾಡಿ ಕಾಂಗ್ರೆಸ್ ನ್ನು ನಿರ್ಮೂಲನೆ ಮಾಡುತ್ತಿದ್ದಾರೆ ಎಂದರು. ರಾಜ್ಯದಲಿ ನರೇಂದ್ರ ಮೋದಿಯವರ ಆಶೀರ್ವಾದಿಂದ 28 ಕ್ಕೆ 28 ಸ್ಥಾನ ಗೆಲ್ಲುತ್ತೇವೆ. ನಾನು ರೈತರಿಗೆ ನಾಲ್ಕು ಸಾವಿರ ಕೊಡುವುದನ್ನು ಯಾಕೆ ನ್ಲಿಲ್ಲಿಸಿದಿರಿ. ಭಾಗ್ಯಲಕ್ಷ್ಮೀ ಯಾಕೆ ನಿಲ್ಲಿಸಿದಿರಿ, ಸರ್ಕಾರ ದಿವಾಳಿಯಾಗಿದೆ.…
ಬೆಂಗಳೂರು: ರಾಜ್ಯದಲ್ಲಿ ಬಿಸಿಲ ತಾಪ ದಿನೇ ದಿನೇ ಹೆಚ್ಚಾಗುತ್ತಿದೆ. ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ತಾಪಮಾನ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ. ಅದರಲ್ಲೂ ಇಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದಾಖಲಾದ ತಾಪಮಾನ ಮಾತ್ರ ನಿಮ್ಮನ್ನು ಬೆಚ್ಚಿ ಬೀಳಿಸುತ್ತೆ. ಅದೆಷ್ಟು ಅಂತ ಮುಂದೆ ಓದಿ. ಈ ಕುರಿತಂತೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಮಾಹಿತಿ ನೀಡಿದ್ದು, ರಾಜ್ಯದ ಜಿಲ್ಲಾವಾರು ಗರಿಷ್ಠ ಹಾಗೂ ಕನಿಷ್ಠ ತಾಪಮಾನ ಈ ಕೆಳಗಿನಂತೆ ದಾಖಲಾಗಿದೆ. ಇಂದು ಕೊಪ್ಪಳದಲ್ಲಿ 46.7 ಡಿಗ್ರಿ ಸೆಲ್ಸಿಯರ್ ನಷ್ಟು ದಾಖಲೆಯ ತಾಪಮಾನ ದಾಖಲಾಗಿದೆ ಎಂದಿದೆ. ಇಂದು ಕೆಲ ಜಿಲ್ಲೆಗಳನ್ನು ಹೊರತು ಪಡಿಸಿದ್ರೇ ಬರುತೇಕ ರಾಜ್ಯದ ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ ಮೇಲೆ ತಾಪಮಾನ ದಾಖಲಾಗಿದೆ. ಈ ಮೂಲಕ ರಾಜ್ಯದ ಜನರು ಬಿಸಿಲ ತಾಪಕ್ಕೆ ಕಂಗೆಡುವಂತೆ ಮಾಡಿದೆ. ಹೀಗಿದೆ ಜಿಲ್ಲಾವಾರು ತಾಪಮಾನದ ವಿವರ ಬೆಂಗಳೂರು ನಗರ- 41.1 ಡಿಗ್ರಿ ಸೆಲ್ಸಿಯಸ್ ಬೆಂಗಳೂರು ಗ್ರಾಮಾಂತರ- 40.6 ರಾಮನಗರ-42.2 ಕೋಲಾರ-43.5 ಚಿಕ್ಕಬಳ್ಳಾಪುರ- 41.2 ತುಮಕೂರು-…
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಎ.1 ಆರೋಪಿಯಾಗಿದ್ದಾರೆ. ಪ್ರಕರಣದ ಗಂಭೀರತೆಯನ್ನು ಅರಿತಂತ ಪುತ್ರ ಹಾಗೂ ತಂದೆ ಇಬ್ಬರೂ ನಿರೀಕ್ಷಣಾ ಜಾಮೀನು ಕೋರಿ, ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ನಡುವೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಮೇಲೆ ನಾನ್ ಬೇಲೆಬಲ್ ಕೇಸ್ ಬುಕ್ ಆಗೋ ಸಾಧ್ಯತೆ ಇದೆ. ಹೀಗಾಗಿ ಅವರು ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ನಾಳೆಯೇ ಬಂಧನಕ್ಕೆ ಒಳಗಾಗೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇಂದು ಪ್ರಜ್ವಲ್ ರಾಸಲೀಲೆ ಕೇಸ್ ತನಿಖೆ ನಡೆಸುತ್ತಿರುವಂತ ಎಸ್ಐಟಿ ಅಧಿಕಾರಿಗಳು ಸಂತ್ರಸ್ತೆಯನ್ನು ಹೊಳೆನರಸೀಪುರ ಜೆಎಂಎಫ್ ಸಿ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ಸಂತ್ರಸ್ತ ಮಹಿಳೆಯಿಂದ ಜಡ್ಜ್ ಮುಂದೆ 164ರ ಅಡಿಯಲ್ಲಿ ಹೇಳಿಕೆ ದಾಖಲಿಸಿದ್ದಾರೆ. ಇನ್ನೂ ಸಂತ್ರಸ್ತ ಮಹಿಳೆಯು ನ್ಯಾಯಾಧೀಶರ ಮುಂದೆ ಪೊಲೀಸರು ಪ್ರಕರಣದಲ್ಲಿ ದಾಖಲಿಸಿರುವಂತ ಎಫ್ಐಆರ್ ನಲ್ಲಿ ಸರಿಯಾದ ಸೆಕ್ಷನ್ ಹಾಕಿಲ್ಲ. ಹೀಗಾಗಿ ಎಫ್ಐಆರ್ ನಲ್ಲಿ 376 ಸೆಕ್ಷನ್ ಸೇರಿಸುವಂತೆ ಮನವಿ ಮಾಡಲಾಗಿದೆ. ಒಂದು ವೇಳೆ ನ್ಯಾಯಾಲಯವು…












