Author: kannadanewsnow09

ಬೆಂಗಳೂರು: ಹನಿಟ್ರ್ಯಾಪ್ ಯತ್ನ ಆರೋಪ ಸಂಬಂಧ ಇಂದು ಸಂಜೆ 4.30ಕ್ಕೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರನ್ನು ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರು ತಿಳಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಇಂದು ಸಂಜೆ 4.30ಕ್ಕೆ ಭೇಟಿಯಾಗುವಂತೆ ಸಮಯ ನೀಡಿದ್ದಾರೆ. ಅವರನ್ನು ಭೇಟಿಯಾಗಿ ಹನಿಟ್ರ್ಯಾಪ್ ಯತ್ನ ಆರೋಪದ ಬಗ್ಗೆ ಚರ್ಚಿಸುವುದಾಗಿ ತಿಳಿಸಿದರು. ಇಂದು ಸಂಜೆ 4.30ಕ್ಕೆ ಸದಾಶಿವನಗರದಲ್ಲಿರುವಂತ ಗೃಹ ಸಚಿವರ ನಿವಾಸದಲ್ಲಿ ಅವರನ್ನು ಭೇಟಿಯಾಗಿ ಚರ್ಚಿಸಿ, ದೂರು ನೀಡುತ್ತೇನೆ. ಆ ಬಳಿಕ ದೂರಿನ ಪ್ರತಿಯನ್ನು ಮಾಧ್ಯಮಗಳಿಗೆ ನೀಡುವುದಾಗಿ ಹೇಳಿದರು. ಹನಿಟ್ರ್ಯಾಪ್ ಯತ್ನ ಆರೋಪ ಸಂಬಂಧ ನನಗೆ ಯಾವುದೇ ರೀತಿಯ ಒತ್ತಡ ಇಲ್ಲ. ಒತ್ತಡ ಹೇರುವ ಪ್ರಯತ್ನವೂ ಆಗಿಲ್ಲ. ನನ್ನ ತಪ್ಪಿದೆ ಅನ್ನಿಸುತ್ತೆ ಎಂದರು. ಸದನದಲ್ಲಿ ವಿಷಯ ಪ್ರಸ್ತಾಪಿಸಿದ ಬಳಿಕ ನಾನು ಬ್ಯುಸಿಯಾಗಿದ್ದೆ. ಬಿಡುವಿಲ್ಲದ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದೆ. ಹೀಗಾಗಿ ಗೃಹ ಸಚಿವರನ್ನು ಭೇಟಿ ಮಾಡಲು ಸಾಧ್ಯವಾಗಿರಲಿಲ್ಲ. ಇಂದು ಸಂಜೆ ಭೇಟಿಯಾಗಿ ದೂರು ನೀಡುವುದಾಗಿ…

Read More

ಹುಬ್ಬಳ್ಳಿ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬುದಾಗಿ ಸೋಷಿಯಲ್ ಮೀಡಿಯಾದಲ್ಲಿ ರಾಜೀನಾಮೆ ಪತ್ರ ವೈರಲ್ ಆಗಿತ್ತು. ಆ ಬಗ್ಗೆ ಅಂದೇ ತಿಳಿಸಿದ್ದಂತ ಬಸವರಾಜ ಹೊರಟ್ಟಿ ಅವರು ನನ್ನ ಪಿಎ ವೈರಲ್ ಮಾಡಿದ್ದಾರೆ. ಸಹಿ ಮಾಡಿದಂತ ಪತ್ರ ನನ್ನ ಡ್ರಾನಲ್ಲೇ ಇದೆ ಎಂದಿದ್ದರು. ಇದೀಗ ರಾಜೀನಾಮೆ ನೀಡುವುದಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನನ್ನ ಜೊತೆಗೆ ಗವರ್ನರ್, ಸಚಿವರು, ಶಾಸಕರು ಇದ್ದಾರೆ. ಮಾರ್ಚ್.27ರಂದು ಕುಳಿತು ಚರ್ಚಿಸೋಣ. ಅಲ್ಲಿಯವರೆಗೆ ಯಾವುದೇ ನಿರ್ಧಾರ ಕೈಗೊಳ್ಳದಂತೆ ಹೇಳಿದ್ದಾರೆ. ಹೀಗಾಗಿ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದೇನೆ. ನಾನು ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಅಂತ ಘೋಷಿಸಿದರು. ಅಂದಹಾಗೇ ಕೆಲ ದಿನಗಳ ಹಿಂದೆ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ರಾಜೀನಾಮೆ ನೀಡಲಿದ್ದಾರೆ ಎನ್ನುವಂತ ರಾಜೀನಾಮೆ ಪತ್ರ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಆ ರಾಜೀನಾಮೆ ಪತ್ರದಲ್ಲಿ ಸಹಿ ಇರಲಿಲ್ಲ.…

Read More

ಹುಬ್ಬಳ್ಳಿ: ವಿಧಾನಸಭೆಯಲ್ಲಿ 18 ಶಾಸಕರ ಅಮಾನತು ಕ್ರಮದಿಂದ ಬೇಸರಗೊಂಡಿದ್ದಂತ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ರಾಜೀನಾಮೆ ನೀಡುವಂತ ನಿರ್ಧಾರಕ್ಕೆ ಬಂದಿದ್ದರು. ಆದರೇ ಈಗ ತಮ್ಮ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿಯುತ್ತಿರುವಂತ ಘೋಷಣೆ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ನನ್ನ ಜೊತೆಗೆ ಗವರ್ನರ್, ಸಚಿವರು, ಸಾಹಿತಿಗಳು ಮಾತನಾಡಿದ್ದಾರೆ. ಮಾರ್ಚ್.27ರಂದು ಕುಳಿತು ಚರ್ಚೆ ಮಾಡಿ ನಿರ್ಧಾರಿಸೋಣ ಅಂತ ಹೇಳಿದ್ದಾರೆ. ಹೀಗಾಗಿ ರಾಜೀನಾಮೆ ವಿಚಾರವನ್ನು ಇಲ್ಲಿಗೆ ಕೈಬಿಟ್ಟುಬಿಡಿ ಎಂದರು. ಅಂದಹಾಗೇ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ನೀಡುತ್ತಿರುವಂತ ಪತ್ರ ವೈರಲ್ ಆಗಿತ್ತು. ಸೋಷಿಯಲ್ ಮೀಡಿಯಾದಲ್ಲಿ ಅವರ ಸಹಿ ಇರದಂತ ರಾಜೀನಾಮೆ ಪತ್ರ ಹರಿದಾಡಿತ್ತು. ಈಗ ಅವರು ರಾಜೀನಾಮೆ ನೀಡುವ ನಿರ್ಧಾರದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ. https://kannadanewsnow.com/kannada/big-news-important-step-taken-by-the-state-government-to-prevent-illegality-from-now-on-ai-technology-will-be-used-in-kea-recruitment-exams/ https://kannadanewsnow.com/kannada/shivamogga-taluk-panchayat-invites-applications-under-beneficiary-oriented-programme/

Read More

ಶಿವಮೊಗ್ಗ : 2024-25 ನೇ ಸಾಲಿನಲ್ಲಿ ತಾಲ್ಲೂಕು ಪಂಚಾಯತ್ ಫಲಾನುಭವಿ ಆಧಾರಿತ ಕಾರ್ಯಕ್ರಮದಡಿಯಲ್ಲಿ ಹಾಲು ಕರೆಯುವ ಯಂತ್ರ, ರಬ್ಬರ್ ನೆಲಹಾಸು ಹಾಗೂ ಸೈಲೇಜ್ ಬ್ಯಾಗ್‌ಗಳನ್ನು ವಿತರಿಸಲು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ. ಹಾಲು ಕರೆಯುವ ಯಂತ್ರ 2 ಫಲಾನುಭವಿಗಳಿಗೆ ತಲಾ 1 ರಂತೆ, ರಬ್ಬರ್ ನೆಲಹಾಸು 11 ಫಲಾನುಭವಿಗಳಿಗೆ ತಲಾ 2 ರಂತೆ ಹಾಗೂ ಸೈಲೇಜ್ ಬ್ಯಾಗ್ 45 ಫಲಾನುಭವಿಗಳಿಗೆ ತಲಾ 100 ಕೆಜಿ ಸಾಮರ್ಥ್ಯದ 1 ಹಾಗೂ 500 ಕೆಜಿ ಸಾಮರ್ಥ್ಯದ 1 ಬ್ಯಾಗ್ ಅನ್ನು ನೀಡಲಾಗುತ್ತದೆ. ಸದರಿ ಫಲಾನುಭವಿಗಳ ಆಯ್ಕೆಯಲ್ಲಿ ರೋಸ್ಟರ್ ನಿಯಾಮಾನುಸಾರದ ಕ್ರಮ ವಹಿಸಲಿದ್ದಾರೆ. ಆಸಕ್ತರು ತಮ್ಮ ಸ್ಥಳೀಯ ಪಶುವೈದ್ಯಾಧಿಕಾರಿಗಳಿಂದ/ಮುಖ್ಯ ಪಶುವೈದ್ಯಾಧಿಕಾರಿಗಳು ಇವರಿಂದ ಅರ್ಜಿ ನಮೂನೆಯನ್ನು ಪಡೆದು ಎಲ್ಲಾ ದಾಖಲಾತಿಗಳೊಂದಿಗೆ ಏ.17 ರೊಳಗೆ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಮುಖ್ಯ ಪಶು ವೈದ್ಯಾಧಿಕಾರಿಗಳ ಕಚೇರಿ, ಎಪಿಎಂಸಿ ಆವರಣ ಶಿವಮೊಗ್ಗ ಈ ಕಚೇರಿಗೆ ಅರ್ಜಿ ಸಲ್ಲಿಸಬೇಕು ಎಂದು ಇಲಾಖೆಯ ಮುಖ್ಯ…

Read More

ಬೆಂಗಳೂರು: ಕರ್ನಾಟಕ ರಾಜ್ಯವನ್ನು ಕ್ಷಯ ರೋಗ ಮುಕ್ತ ರಾಜ್ಯವನ್ನಾಗಿ ರೂಪಿಸುವತ್ತ ಹಲವು ಕಾರ್ಯಕ್ರಮಗಳನ್ನ ಹಾಕಿಕೊಂಡಿರುವ ಆರೋಗ್ಯ ಇಲಾಖೆ, ಇದೀಗ BCG ಲಸಿಕೆ ಹಾಕುವ ಬೃಹತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದೆ. ವಿಶ್ವ ಕ್ಷಯರೋಗ ದಿನವಾದ ಇಂದು ಬಸಿಜಿ ಲಸಿಕಾ ಕಾರ್ಯಕ್ರಮಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.‌ ಬಳಿಕ ಮಾತನಾಡಿದ ಸಚಿವರು, ರಾಜ್ಯದಲ್ಲಿ 16 ಜಿಲ್ಲೆಗಳಲ್ಲಿ ಬಸಿಜಿ ಲಸಿಕೆ ಹಾಕುವ ಕಾರ್ಯಕ್ರಮ ಕೈಗೆತ್ತಿಕೊಳ್ಳಲಾಗಿದ್ದು, ಕ್ಷಯ ರೋಗ ಬರದಂತೆ ತಡೆಯುವಲ್ಲಿ ಈ ಕಾರ್ಯಕ್ರಮ ಮಹತ್ವದ ಪಾತ್ರ ವಹಿಸಲಿದೆ ಎಂದರು. ಈಗಾಗಲೇ ರಾಜ್ಯದಲ್ಲಿ 1060 ಗ್ರಾಮ ಪಂಚಾಯತಿಗಳನ್ನ ಕ್ಷಯ ರೋಗ ಮುಕ್ತ ಪಂಚಾಯತಿಗಳನ್ನಾಗಿ ರೂಪಿಸಲಾಗಿದೆ. ಅಲ್ಲದೇ ಕ್ಷಯ ನಿರ್ಮೂಲನಾ ಕಾರ್ಯಕ್ರಮದ ಅಡಿಯಲ್ಲಿ ಕ್ಷಯ ರೋಗಿಗಳಿಗೆ 98721 ಪೌಷ್ಠಿಕ ಆಹಾರದ ಕಿಟ್ ಗಳನ್ನ ವಿತರಿಸಲಾಗಿದೆ. ಸಾರ್ವಜನಿಕರು ಕ್ಷಯ ರೋಗ ಬರದಂತೆ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಬಿಸಿಜಿ ಲಸಿಕಾ ಕಾರ್ಯಕ್ರಮದ ಲಾಭ ಪಡೆಯಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಬಿಸಿಜಿ ಲಸಿಕೆ ಸುರಕ್ಷಿತ ಲಸಿಕೆಯಾಗಿದ್ದು, ಸಾರ್ವಜನಿಕರು…

Read More

ಬೆಂಗಳೂರು: ನಗರದ ಬೀದಿ ಬದಿಯ ವ್ಯಾಪಾರಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಡಿ.ಕೆ ಶಿವಕುಮಾರ್ ಅವರು ವಿವಿಧ ಯೋಜನೆಯಡಿ ನೋಂದಣಿಗೆ ಏಪ್ರಿಲ್ ವರೆಗೆ ವಿಸ್ತರಣೆ ಮಾಡುವುದಾಗಿ ಘೋಷಿಸಿದ್ದಾರೆ. 2025- 26 ನೇ ಸಾಲಿನ ಬಿಬಿಎಂಪಿ ಬಜೆಟ್ ಕುರಿತು ಬೆಂಗಳೂರು ನಗರದ ಶಾಸಕರ ಜತೆ ಸಭೆ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. ಬೀದಿ ಬದಿ ವ್ಯಾಪಾರಿಗಳಿಗೆ ರಸ್ತೆಬದಿ ಮಳಿಗೆ ನಿರ್ಮಾಣಕ್ಕೆ ಮುಂದಿನ ದಿನಗಳಲ್ಲಿ ಅವಕಾಶವಿಲ್ಲ. ಈ ಬಗ್ಗೆ ನ್ಯಾಯಲಯದ ನಿರ್ದೇಶನವೂ ಇದೆ. ಈಗ ಸುಮಾರು 3,778 ಜನ ತಳ್ಳುವ ಗಾಡಿ ನೀಡಿ ಎಂದು ಅರ್ಜಿ ಹಾಕಿದ್ದಾರೆ. ನಾವು ಈ ವರ್ಷ ಪಾಲಿಕೆಯಿಂದ ಸುಮಾರು 10 ಸಾವಿರ ತಳ್ಳುವ ಗಾಡಿಗಳನ್ನು ನೀಡಲು ತಯಾರಿದ್ದೇವೆ. ಗಾಡಿ ಬೇಕಾದವರು ನೋಂದಣಿ ಮಾಡಿಕೊಳ್ಳಬೇಕು. ಗಾಡಿಯನ್ನು ಸುಮ್ಮನೆ ನಿಲ್ಲಿಸಿಕೊಳ್ಳುವಂತಿಲ್ಲ. ಪ್ರತಿದಿನ ಎಲ್ಲಿ, ಯಾವ ಜಾಗದಲ್ಲಿ ವಹಿವಾಟು ನಡೆಸಲಾಯಿತು ಎನ್ನುವ ಮಾಹಿತಿ ತಿಳಿದುಕೊಳ್ಳುವ ವ್ಯವಸ್ಥೆ ಜಾರಿಗೆ ತರಲಿದ್ದೇವೆ. ಗಾಡಿಯನ್ನು ಮನೆಯಲ್ಲಿ ನಿಲ್ಲಿಸಿಕೊಳ್ಳುವುದು, ಮತ್ತೊಬ್ಬರಿಗೆ ಮಾರುವುದಕ್ಕೆ ಅವಕಾಶವಿಲ್ಲ ಎಂದರು.…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಅಕ್ರಮ ಕಟ್ಟಡ ನಿರ್ಮಾಣ ತಡೆಗೆ ಮಹತ್ವದ ಕ್ರಮ ವಹಿಸಲಾಗುತ್ತಿದೆ. ಅಕ್ರಮ ನಿರ್ಮಾಣಗಳ ಪತ್ತೆಗೆ ‘ಎಐʼ ತಂತ್ರಜ್ಞಾನದ ಬಳಕೆ ಮಾಡಲಾಗುವುದು ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ನಗರದಲ್ಲಿ ಉತ್ತಮ ತೆರಿಗೆ ಸಂಗ್ರಹವಾಗಬೇಕು. ನೀರು, ರಸ್ತೆ ಸೇರಿದಂತೆ ಅನೇಕ ಮೂಲಸೌಕರ್ಯಗಳನ್ನು ನೀಡಿದ್ದೇವೆ. ಆದರೆ ಅನೇಕರು ಇದಕ್ಕೆ ತಕ್ಕಂತೆ ತೆರಿಗೆ ಪಾವತಿ ಮಾಡುತ್ತಿಲ್ಲ. ಅನುಮತಿ ನೀಡಿದ್ದಕ್ಕಿಂತ ಹೆಚ್ಚು ವಿಸ್ತೀರ್ಣದ ಹಾಗೂ ಮಹಡಿಗಳನ್ನು ಅಕ್ರಮವಾಗಿ ಕಟ್ಟಿಕೊಂಡಿದ್ದಾರೆ. ಇಂತಹ ಅಕ್ರಮಗಳನ್ನು ʼಎಐʼ ತಂತ್ರಜ್ಞಾನದ ಮೂಲಕ ಪತ್ತೆ ಮಾಡುವ ವ್ಯವಸ್ಥೆ ಜಾರಿಗೆ ತರಲಾಗುವುದು. ಇದರಿಂದ ಕಟ್ಟಡವನ್ನು ಎಷ್ಟು ವಿಸ್ತೀರ್ಣ, ಎತ್ತರ ಕಟ್ಟಿದ್ದಾರೆ ಎಂಬುದು ತಿಳಿಯುತ್ತದೆ. ಜತೆಗೆ ಪ್ರತಿಯೊಂದು ಮನೆಯ ದಾಖಲೆಯೂ ಸಿಗುತ್ತದೆ ಎಂದು ವಿವರಿಸಿದರು. ಅಧಿಕಾರಿಗಳ ಅಕ್ರಮ; ಗಮನಕ್ಕೆ ತರದೆಯೂ ಅಮಾನತು ಮಾಡಿ “ಮನೆ, ನಿವೇಶನ ಮಾಲೀಕರ ಜೊತೆ ಒಳ ಒಪ್ಪಂದ ಮಾಡಿಕೊಂಡು ಕಂದಾಯ ಬಡಾವಣೆ ಅಕ್ರಮಗಳಲ್ಲಿ ಅಧಿಕಾರಿಗಳು ಭಾಗಿಯಾಗಿದ್ದರೆ ಅಂತಹವರನ್ನು ನನ್ನ ಗಮನಕ್ಕೆ ತರದೆಯೂ ಕೂಡಲೇ ಅಮಾನತು ಮಾಡಿ ಎಂದು ಉನ್ನತ ಅಧಿಕಾರಿಗಳಿಗೆ…

Read More

ಬೆಂಗಳೂರು : “ಮನೆ ಬಾಗಿಲಿಗೆ ಉಚಿತವಾಗಿ ಖಾತೆ ವಿತರಣೆ, ಬೀದಿಬದಿ ವ್ಯಾಪಾರಿಗಳಿಗೆ ತಳ್ಳುವ ಗಾಡಿ ವಿತರಣೆ, ಅಕ್ರಮ ನಿರ್ಮಾಣಗಳ ಪತ್ತೆಗೆ ‘ಎಐʼ ತಂತ್ರಜ್ಞಾನದ ಬಳಕೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. 2025- 26 ನೇ ಸಾಲಿನ ಬಿಬಿಎಂಪಿ ಬಜೆಟ್ ಕುರಿತು ಬೆಂಗಳೂರು ನಗರದ ಶಾಸಕರ ಜತೆ ಸಭೆ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. “ನಗರದ ಸುಮಾರು 7 ಲಕ್ಷ ಮನೆಗಳು ತೆರಿಗೆ ಕಟ್ಟಿರಲಿಲ್ಲ, ಇವುಗಳಲ್ಲಿ 1 ಲಕ್ಷ ಮನೆಗಳು ತೆರಿಗೆ ವ್ಯಾಪ್ತಿಗೆ ಬಂದಿದ್ದು, ಇನ್ನೂ 6 ಲಕ್ಷ ಮನೆಗಳನ್ನು ತೆರಿಗೆ ವ್ಯಾಪ್ತಿಗೆ ತರಬೇಕಿದೆ. ಆದ ಕಾರಣ ಒಂದು ಬಾರಿ ಪಾವತಿಗೆ ಅವಕಾಶ (ಓಟಿಎಸ್) ಮಾಡಿಕೊಡಲಾಯಿತು. ಅಕ್ರಮ ನಿರ್ಮಾಣಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶ ಪಾಲಿಕೆಗೆ ಇರಲಿಲ್ಲ. ಕಳೆದ ವಾರ ಸದನದಲ್ಲಿ ಈ ಬಗ್ಗೆ ವಿಧೇಯಕ ಅಂಗೀಕಾರ ವಾಗಿದೆ. ಜೊತೆಗೆ ಕಂದಾಯ ಬಡಾವಣೆಗಳಲ್ಲಿ ಇರುವ ಖಾಸಗಿ ರಸ್ತೆಗಳನ್ನೂ ಸಹ ಸರ್ಕಾರಿ ರಸ್ತೆಗಳು ಎಂದು ಘೋಷಣೆ ಮಾಡಲಾಗುವುದು”…

Read More

ಬೆಂಗಳೂರು: ರಾಜ್ಯದ ನಾಲ್ಕು ವಿಭಾಗಗಳಲ್ಲಿ ಹೈಟೆಕ್ ಪಂಚಕರ್ಮ ಚಿಕಿತ್ಸೆ ಕಲ್ಪಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಆಯುರ್ವೇದಿಕ್ ಕಾಲೇಜಿನಲ್ಲಿ ನೂತನ ಹೈಟೆಕ್ ಪಂಚಕರ್ಮ ಕೊಠಿಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ‌ ಪಾಲ್ಗೊಂಡು ಸಚಿವರು ಮಾತನಾಡುತ್ತಿದ್ದರು. ಆಯುರ್ವೇದ ಪದ್ದತಿ ಅನುಸರಿಸುವುದರಿಂದ ಕಾಯಿಲೆಗಳು ಬರದಂತೆ ಮುಂಚಿತವಾಗಿಯೇ ಮುನ್ನೆಚ್ಚರಿಕೆ ವಹಿಸಬಹುದು. ಆಯುರ್ವೇದವನ್ನ ನಮ್ಮ ಆಹಾರ ಪದ್ದತಿಯಲ್ಲಿ ಅಳವಡಿಸಿಕೊಳ್ಳುವುದು ಬಹುಮುಖ್ಯ. ಇದರಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದರು. ಈ ನಿಟ್ಟಿನಲ್ಲಿ ಆಯುರ್ವೇದ ಜಿಕಿತ್ಸಾ ಪದ್ದತಿಗಳನ್ನ ಜನರಿಗೆ ಸುಲಲಿತವಾಗಿ ಒದಗಿಸುವ ನಿಟ್ಟಿನಲ್ಲಿ ತಾಲೂಕು ಆಸ್ಪತ್ರೆಗಳಲ್ಲಿ 5 ಬೆಡ್ ಹಾಗೂ ಜಿಲ್ಲಾಸ್ಪತ್ರೆಗಳಲ್ಲಿ 10 ಬೆಡ್ ಗಳ ಆಯುರ್ವೇದಿಕ್ ಚಿಕಿತ್ಸಾ ಪದ್ದತಿಗಳನ್ನ ಅಳವಡಿಸಲು ಯೋಜನೆ ರೂಪಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ನೂತನ ಪುರುಷ ವಸತಿಗೃಹ ಮತ್ತು ಹೈಟೆಕ್ ಪಂಚಕರ್ಮ ಕೊಠಡಿಗಳ ಲೋಕಾರ್ಪಣೆಗೊಳಿಸಿ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್ ಆರೋಗ್ಯ ಇಲಾಖೆಯಲ್ಲಿ ಸಾಕಷ್ಟು ಪ್ರಗತಿ ಸಾಧಿಸಲಾಗುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಅವರ…

Read More

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ ಎನ್ನುವಂತೆ, ನಿಮ್ಮ ಉಳಿತಾಯ ಖಾತೆಯನ್ನು ವೇತನ ಖಾತೆಯಾಗಿ ಬದಲಾವಣೆ ಮಾಡಲು ಕೆಲ ದಾಖಲೆಗಳು ಕಡ್ಡಾಯಗೊಳಿಸಲಾಗಿದೆ. ಅವು ಏನು ಅಂತ ಮುಂದೆ ಓದಿ. ಈ ಸಂಬಂಧ ಬ್ಯಾಂಕ್ ನಿಂದ ಮಾಹಿತಿ ನೀಡಲಾಗಿದ್ದು, ಇದಕ್ಕಾಗಿ ಸರ್ಕಾರಿ ನೌಕರರು ಬ್ಯಾಂಕಿಗೆ ಒಂದು ಅರ್ಜಿಯನ್ನು ಸಲ್ಲಿಸಬೇಕಿದೆ. ಅದರಲ್ಲಿ ಹೆಸರು, ಹುದ್ದೆ, ಶಾಖೆಯ ಹೆಸರು, ಬ್ಯಾಂಕ್ ಖಾತೆಯ ವಿವರವನ್ನು ನಮೂದಿಸಬೇಕು. ಇದಲ್ಲದೇ ನಾನು ಉಳಿತಾಯ ಖಾತೆಯನ್ನು ಈ ಬ್ಯಾಂಕ್ ನಲ್ಲಿ ಹೊಂದಿದ್ದೇನೆ. ಈ ಖಾತೆಯನ್ನು ವೇತನ ಖಾತೆಯಾಗಿ ಬದಲಾಯಿಸೋದಕ್ಕೆ, ತಮ್ಮ ಬ್ಯಾಂಕಿನ ಮೂಲಕ ಸಿಗುವ ವಿವಿಧ ಪ್ರಯೋಜನ ಪಡೆಯಲು ಇಚ್ಚಿಸುತ್ತೇನೆ ಎಂಬುದಾಗಿಯೂ ತಿಳಿಸಬೇಕು. ಪ್ರಸ್ತುತ ರಾಜ್ಯ ಸರ್ಕಾರಿ ನೌಕರರೆಲ್ಲರೂ ತಮ್ಮ ಉಳಿತಾಯ ಖಾತೆಯನ್ನು ವೇತನ ಖಾತೆಯಾಗಿ ಬದಲಾಯಿಸಿಕೊಂಡು, ಸಂಬಂಳ ಪ್ಯಾಕೇಜ್ ಗಳ ಅಡಿಯಲ್ಲಿನ ಸೌಲಭ್ಯ ಪಡೆಯಲು ರಾಜ್ಯ ಸರ್ಕಾರ ಆದೇಶಿಸಿರುತ್ತದೆ. ಹೀಗಾಗಿ ನನ್ನ ವೇತನ ಖಾತೆಯಾಗಿ ಬದಲಾಯಿಸೋದಕ್ಕೆ ಮನವಿಯನ್ನು ಮಾಡಬೇಕು. ಉಳಿತಾಯ ಖಾತೆ, ವೇತನ ಖಾತೆಯಾಗಿ ಬದಲಾಯಿಸಲು ಈ ದಾಖಲೆ…

Read More