Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಈಗಾಗಲೇ ಅನೇಕರು ಅರ್ಜಿಯನ್ನು ಸಲ್ಲಿಸಿದ್ದೀರಿ. ಅರ್ಜಿ ಸಲ್ಲಿಸಿದ ನಂತ್ರ ಶುಲ್ಕ ಪಾವತಿಸಿದಂತ ಅನೇಕರು ಕೆಲ ಸಮಸ್ಯೆ ಎದುರಿಸುತ್ತಿದ್ದಾರೆ. ಅದಕ್ಕೆ ಕೆಇಎ ಪರಿಹಾರ ನೀಡಿದ್ದು, ಆ ಬಗ್ಗೆ ಮುಂದೆ ಓದಿ. ಈ ಕುರಿತಂತೆ ಇಂದು ಎಕ್ಸ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, VAO ಶುಲ್ಕ ಪಾವತಿಗೆ ಪರಿಹಾರ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸಿದ ನಂತರವೂ ಪಾವತಿ ಬಗ್ಗೆ ಅಪ್ ಡೇಟ್ ಆಗದಿದ್ದರೆ ಈ ವಿಳಾಸಕ್ಕೆ ಇ-ಮೇಲ್ (vaopayment@gmail.com) ಮಾಡುವುದು. ಅದಾದ ಎರಡು ದಿನಗಳ ನಂತರ ಆಪ್ ಡೇಟ್ ಆಗಲಿದೆ. ಬಳಿಕ ಅದರ ಪ್ರಿಂಟ್ ತೆಗೆದುಕೊಳ್ಳಬಹುದು ಎಂದಿದೆ. https://twitter.com/KEA_karnataka/status/1785237109680537712 ಅಂದಹಾಗೆ ದಿನಾಂಕ 05-04-2024ರ ಇಂದಿನಿಂದ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭಗೊಂಡಿದೆ. ದಿನಾಂಕ 04-05-2024 ಅರ್ಜಿ ಸಲ್ಲಿಸಲು…
ಮೈಸೂರು: ದಲಿತ ನಾಯಕ, ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅನಾರೋಗ್ಯದ ಕಾರಣ ನಿನ್ನೆ ಮೃತಪಟ್ಟಿದ್ದರು. ಅವರ ಪಾರ್ಥೀವ ಶರೀರದ ಅಂತಿಮ ದರ್ಶನದ ಬಳಿಕ, ಇಂದು ಮೈಸೂರಿನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು. ನಿನ್ನೆ ಸಾರ್ವಜನಿಕರ ದರ್ಶನಕ್ಕೆ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರ ಪಾರ್ಥೀವ ಶರೀರವನ್ನು ಇಡಲಾಗಿತ್ತು. ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಹಲವು ರಾಜಕೀಯ ಗಣ್ಯರು, ಕುಟುಂಬಸ್ಥರು ಅವರ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಪಡೆದು, ಅಂತಿಮ ನಮನವನ್ನು ಸಲ್ಲಿಸಿದ್ದರು. ಇಂದು ಮೈಸೂರಿನ ಅಶೋಕಪುರಂನಲ್ಲಿರುವಂತ ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಗಾಗಿ ಮೆರವಣಿಗೆ ಮೂಲಕ ಕೊಂಡೊಯ್ಯಲಾಯಿತು. ಟ್ರಸ್ಟ್ ಆವರಣದಲ್ಲಿ ಬೌದ್ಧ ಬಿಕ್ಷುಗಳ ಸಮ್ಮುಖದಲ್ಲಿ ಸಂಸದ ವಿ.ಶ್ರೀನಿವಾಸ್ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ನೆರವೇರಿತು. ಈ ಮೂಲಕ ದಲಿತ ನಾಯಕ, ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಮಣ್ಣಲ್ಲಿ ಮಣ್ಣಾಗಿದ್ದಾರೆ. https://kannadanewsnow.com/kannada/multiple-people-stabbed-at-london-tube-station-video-of-man-with-sword-goes-viral/ https://kannadanewsnow.com/kannada/prajwal-case-pm-modi-deve-gowdas-family-directly-responsible-dk-suresh/
ಲಂಡನ್: ಈಶಾನ್ಯ ಲಂಡನ್ನ ಹೈನಾಲ್ಟ್ ಟ್ಯೂಬ್ ನಿಲ್ದಾಣದ ಬಳಿ ಹಲವಾರು ಪಾದಚಾರಿಗಳು ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಇರಿದ ಆರೋಪದ ಮೇಲೆ ಅಮನ್ ಅವರನ್ನು ಬಂಧಿಸಲಾಗಿದೆ. ಅಂತರರಾಷ್ಟ್ರೀಯ ಮಾಧ್ಯಮ ವರದಿಗಳ ಪ್ರಕಾರ, ವ್ಯಕ್ತಿಯೊಬ್ಬರು ಸಿಕ್ಕ ಸಿಕ್ಕವರ ಮೇಲೆ ಚೂರಿಯಿಂದ ದಾಳಿ ಮಾಡಿದ್ದಾರೆ. ಹಲ್ಲೆಗೊಳಗಾದಂತವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಒಬ್ಬ ಪುರುಷನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ತಿಳಇದು ಬಂದಿದೆ. https://twitter.com/wesstreeting/status/1785216136566460423 ಈ ಹಿಂದೆ ಟ್ವಿಟರ್ ಎಂದು ಕರೆಯಲ್ಪಡುತ್ತಿದ್ದ ಸಾಮಾಜಿಕ ಮಾಧ್ಯಮ ಸೈಟ್ ಎಕ್ಸ್ನಲ್ಲಿನ ಪೋಸ್ಟ್ನಲ್ಲಿ, ಇಲ್ಫೋರ್ಡ್ ಉತ್ತರದ ಲೇಬರ್ ಸಂಸದ ವೆಸ್ ಸ್ಟ್ರೀಟಿಂಗ್, “ಹೈನಾಲ್ಟ್ನಲ್ಲಿ ನಿರ್ಣಾಯಕ ಘಟನೆಯನ್ನು ಘೋಷಿಸಲಾಗಿದೆ. ನಿಲ್ದಾಣ ಮತ್ತು ರಸ್ತೆ ಮುಚ್ಚುವಿಕೆಗಳು ಜಾರಿಯಲ್ಲಿವೆ. ಪೊಲೀಸರು, ಆಂಬ್ಯುಲೆನ್ಸ್ ಸೇವೆ ಮತ್ತು ಅಗ್ನಿಶಾಮಕ ದಳ ಸ್ಪಂದಿಸುತ್ತಿದೆ. ಒಬ್ಬ ಪುರುಷನನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ. https://twitter.com/BNONews/status/1785227494452322370 https://kannadanewsnow.com/kannada/pornographic-video-case-prajwal-revannas-driver-reveals-explosive-details/ https://kannadanewsnow.com/kannada/prajwal-case-pm-modi-deve-gowdas-family-directly-responsible-dk-suresh/
ಹಾಸನ: ನಾನು ಕಾಂಗ್ರೆಸ್ ನಾಯಕರಿಗೆ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಪೆನ್ ಡ್ರೈವ್ ಕೊಟ್ಟಿಲ್ಲ. ನಾನು ಕೊಟ್ಟಿದ್ದು ಕೇವಲ ದೇವರಾಜೇಗೌಡ ಬಳಿ ಮಾತ್ರವೇ ಎಂಬುದಾಗಿ ಪ್ರಜ್ವಲ್ ಕಾರು ಚಾಲಕ ಕಾರ್ತಿಕ್ ಸ್ಪಷ್ಟ ಪಡಿಸಿದ್ದಾರೆ. ಈ ಬಗ್ಗೆ ಅಜ್ಞಾತ ಸ್ಥಳದಿಂದ ವೀಡಿಯೋ ಬಿಡುಗಡೆ ಮಾಡಿರುವಂತ ಅವರು, ನಾನು ಹದಿನೈದು ವರ್ಷಗಳಿಂದ ಪ್ರಜ್ವಲ್ ರೇವಣ್ಣ ಹಾಗೂ ಅವರ ಫ್ಯಾಮಿಲಿಗೆ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದೇನೆ. ಒಂದು ವರ್ಷದ ಹಿಂದೆ ಕೆಲಸ ಬಿಟ್ಟಿದ್ದು, ನನ್ನ ಜಮೀನು ಬರೆಸಿಕೊಂಡು, ನನ್ನ ಪತ್ನಿ ಮೇಲೆ ಹಲ್ಲೆ ಮಾಡಿದ್ರು. ಹಿಂಸೆ ಕೊಟ್ಟು ಹಲ್ಲೆ ಮಾಡಿದ್ರು. ಆ ಕಾರಣಕ್ಕೆ ನಾನು ಅವರ ಮನೆಯಲ್ಲಿ ಕಾರು ಚಾಲಕನ ಕೆಲಸ ಬಿಟ್ಟು ಹೊರ ಬಂದೆ ಎಂಬುದಾಗಿ ತಿಳಿಸಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಫ್ಯಾಮಿಲಿ ವಿರುದ್ಧ ದೇವರಾಜೇಗೌಡ ಹೋರಾಟ ಮಾಡುತ್ತಿದ್ದಾರೆ. ಹೀಗಾಗಿ ನನಗೆ ದೇವೇಗೌಡಕ ಫ್ಯಾಮಿಲಿಯಿಂದ ಅನ್ಯಾಯವಾಗಿತ್ತು. ಯಾರಿಂದಲೂ ನ್ಯಾಯ ಸಿಗದೇ ಇದ್ದಾಗ, ದೇವರಾಜೇಗೌಡ ಬಳಿ ಹೋಗಿದ್ದೆ ಎಂದರು. ನನ್ನ ಬಳಿಯಿದ್ದಂತ…
ಕಲಬುರಗಿ: ಸೋಲಿನ ಭೀತಿಯಿಂದಾಗಿ ಖರ್ಗೆ ಕಲಬುರಗಿಗೆ ಪದೇ ಪದೇ ಬರುತ್ತಿದ್ದಾರೆ ಎನ್ನುವ ಸಂಸದ ಉಮೇಶ್ ಜಾಧವ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಲ್ಲಿಕಾರ್ಜುನ ಖರ್ಗೆ ಅವರು ಎರಡು ಸಲ ಕಲಬುರಗಿ ಯಿಂದ ಲೋಕಸಭೆ ಸದಸ್ಯರಾಗಿದ್ದವರು. ಈಗ ರಾಜ್ಯಸಭೆ ವಿರೋಧ ಪಕ್ಷದ ನಾಯಕರು. ಅವರು ಕಲಬುರಗಿಗೆ ಬರಲು ಚಿಂಚೋಳಿ ಎಂಪಿ ಅವರ ಅನುಮತಿ ಬೇಕಿಲ್ಲ ಎಂದು ತಿರುಗೇಟು ನೀಡಿದರು. ಕಲಬುರಗಿ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ತುರ್ತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಚಿಂಚೋಳಿ ಎಂಪಿ ಯವರೇ ನೀವು ಕೂಡಾ ಮೋದಿ, ಅಮಿತ್ ಶಾ, ಯಡಿಯೂರಪ್ಪ, ವಿಜಯೇಂದ್ರ, ಸಿ.ಟಿ.ರವಿ ಸೇರಿದಂತೆ ಹಲವಾರು ನಾಯಕರನ್ನು ಕರೆಸಿದ್ದೀರಲ್ಲ ಯಾಕೆ? ನಿಮಗೂ ಸೋಲಿನ ಭೀತಿ ಆವರಿಸಿದೆಯಾ? ಎಂದು ಪ್ರಶ್ನಿಸಿದರು. “ಬಿಜೆಪಿಯವರು ಹತಾಶೆರಾಗಿದ್ದಾರೆ, ಖರ್ಗೆ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು ಕಲಬುರಗಿಗೆ ಬರುತ್ತಿದ್ದಾರೆ. ಪ್ರಿಯಾಂಕ್ ಹಾಗೂ ಶರಣಪ್ರಕಾಶ ಪಾಟೀಲ್ ಗ್ರಾಮಪಂಚಾಯತಗಳಿಗೆ ಹೋಗಿ ಪ್ರಚಾರ ಮಾಡುತ್ತಿದ್ದಾರೆ ಎಂದು ಜಾಧವ ಹೇಳುತ್ತಾರೆ. ಹೌದು,…
ಕುಮಾರಸ್ವಾಮಿಯವರೇ ನಿಮ್ಗೆ ಹೆಣ್ಣುಮಕ್ಕಳ ಬಗ್ಗೆ ಕಾಳಜಿ ಇದ್ದರೇ ಪ್ರಜ್ವಲ್ ರೇವಣ್ಣ ಉಚ್ಚಾಟನೆ ಮಾಡಿ- ಕಾಂಗ್ರೆಸ್ ಆಗ್ರಹ
ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರಿಗೆ ನಿಜಕ್ಕೂ ಹೆಣ್ಣುಮಕ್ಕಳ ಬಗ್ಗೆ ಕಾಳಜಿ ಇದ್ದರೇ, ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಭಾಗಿಯಾಗಿರುವಂತ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಅಮಾನತುಗೊಳಿಸೋದಲ್ಲ, ಉಚ್ಚಾಟನೆ ಮಾಡಿ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ಆಗ್ರಹಿಸಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಕರ್ನಾಟಕ ಕಾಂಗ್ರೆಸ್ ಪಕ್ಷವು, ಜ್ವಲ್ ರೇವಣ್ಣನ ಕೃತ್ಯಗಳನ್ನು ಒಪ್ಪಿಕೊಳ್ಳುತ್ತಲೇ ಜೆಡಿಎಸ್ “ಪ್ರಜ್ವಲ್ ಅಮಾನತು“ ಎಂಬ ನಾಟಕವಾಡುತ್ತಿದೆ. ಹೆಚ್.ಡಿ ಕುಮಾರಸ್ವಾಮಿ ಅವರಿಗೆ ನಿಜಕ್ಕೂ ಮಹಿಳೆಯರ ಬಗ್ಗೆ ಕಾಳಜಿ ಇದ್ದಿದ್ದೇ ಆದರೆ ಅಮಾನತು ಮಾಡುತ್ತಿರಲಿಲ್ಲ, ಉಚ್ಚಾಟನೆ ಮಾಡುತ್ತಿದ್ದರು. ಪಕ್ಷದಿಂದ ಉಚ್ಚಾಟನೆ ಮಾಡಬೇಕಿತ್ತು, ವಜಾ ಮಾಡಬೇಕಿತ್ತು ಎಂದು ಹೇಳಿದೆ. ಇದ್ಯಾವುದನ್ನೂ ಮಾಡದೆ ಕೇವಲ ಅಮಾನತು ಎನ್ನುವುದು ಕಣ್ಣೋರೆಸುವ ತಂತ್ರವಷ್ಟೇ, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಪ್ರಜ್ವಲ್ ರೇವಣ್ಣನ ಹೀನ ಕೃತ್ಯವನ್ನು ಒಪ್ಪಿಕೊಳ್ಳಲು ಇನ್ನೂ ತಾಯಾರಿಲ್ಲವೇ ಅಥವಾ ಆತನ ಕೃತ್ಯವನ್ನು ಸಾಧನೆ ಎನ್ನುವಂತೆ ನೋಡುತ್ತಿವೆಯೇ? ಎ2 ಆರೋಪಿಯನ್ನು ಅಮಾನತು ಮಾಡುತ್ತೇವೆ ಎನ್ನುವ ಕುಮಾರಸ್ವಾಮಿಯವರು ಇಷ್ಟಕ್ಕೂ ಎ1 ಆರೋಪಿಯಾಗಿರುವ ರೇವಣ್ಣರ ಬಗ್ಗೆ ಮಾತೇ…
ನವದೆಹಲಿ: ಕೋವಿಡ್ ಸಂದರ್ಭದಲ್ಲಿ ಕೊರೋನಾದಿಂದ ರಕ್ಷಣೆಗಾಗಿ ಅಸ್ಟ್ರಾಜೆನೆಕಾ ಮತ್ತು ಆಕ್ಸ್ ಫರ್ಡ್ ವಿವಿ ಅಭಿವೃದ್ಧಿ ಪಡಿಸಿದಂತ ಕೋವಿಶೀಲ್ಡ್ ಲಸಿಕೆಯನ್ನು ನೀಡಲಾಗಿತ್ತು. ಆದ್ರೇ ಈ ಲಸಿಕೆ ಪಡೆದವರಿಗೆ ಅಪರೂಪವಾಗಿ ಅಡ್ಡ ಪರಿಣಾಮದಿಂದ ಕಾಯಿಲೆ ಬರೋದನ್ನು ಕಂಪನಿ ಒಪ್ಪಿಕೊಂಡಿದೆ. ಈ ಬಗ್ಗೆ ಸ್ವತಹ ಅಸ್ಟ್ರಾಜೆನೆಕಾ ತಪ್ಪು ಒಪ್ಪಿಕೊಂಡಿದ್ದು, ಕೋವಿಶೀಲ್ಡ್ ಅಪರೂಪದ ಸಂದರ್ಭಗಳಲ್ಲಿ ರಕ್ತ ಹೆಪ್ಪುಗಟ್ಟೋ ಕಾಯಿಲೆಗೆ ಕಾರಣವಾಗಲಿದೆ. ಅಲ್ಲದೇ ಪ್ಲೇಟ್ ಲೆಟ್ ಕಡಿಮೆಯಾಗೋದಕ್ಕೂ ಕಾರಣವಾಗಬಹುದು ಎಂಬುದಾಗಿ ನ್ಯಾಯಾಲಯಕ್ಕೆ ಸಲ್ಲಿಸಿರುವಂತ ದಾಖಲೆಗಳಲ್ಲಿ ಸ್ಪಷ್ಟ ಪಡಿದೆ. ಇನ್ನೂ ಯುಕೆಯಲ್ಲಿ ಲಸಿಕೆಯನ್ನು ಪಡೆದಂತ ಅನೇಕರು ಸಾವು, ತೀವ್ರತರವಾದ ಗಾಯಗಳಿಗೆ ಒಳಗಾಗಿದ್ದಾರೆ. ಹೀಗಾಗಿ ಅಸ್ಟ್ರಾಜೆನೆಕಾ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ನ್ಯಾಯಾಲಯದ ಮೆಟ್ಟಿಲೇರಿದ್ದರು. ಯುಕೆ ಹೈಕೋರ್ಟ್ ನಲ್ಲಿ 51 ಪ್ರಕರಣಗಳು ಈ ಸಂಬಂಧ ದಾಖಲಾಗಿದ್ದವು. ಅಲ್ಲದೇ 100 ಮಿಲಿಯನ್ ಪೌಂಡ್ ಗಳವರೆಗೆ ಪರಿಹಾರ ಕೋರಿದ್ದರು. ಯುಕೆ ನ್ಯಾಯಾಲಯಕ್ಕೆ ಕೋವಿಶೀಲ್ಡ್ ಅಡ್ಡ ಪರಿಣಾಮಗಳ ಬಗ್ಗೆ ಅಸ್ಟ್ರಾಜೆನೆಕಾ ಕಂಪನಿ ದಾಖಲೆಯನ್ನು ಸಲ್ಲಿಸಿದ್ದು, ಅದರಲ್ಲಿ ಲಸಿಕೆಯು ಅಪರೂಪದ ಅಡ್ಡ ಪರಿಣಾಮಗಳಿಗೆ ಕಾರಣವಾಗಲಿದೆ ಎಂದು ಒಪ್ಪಿಕೊಂಡಿದೆ.…
ಬೆಂಗಳೂರು: “ಪ್ರಜ್ವಲ್ ರೇವಣ್ಣ ಅವರ ಪ್ರಕರಣ ದೇಶದ ಅತಿದೊಡ್ಡ ಮಾನಹಾನಿ ಹಾಗೂ ಮಹಿಳಾ ದೌರ್ಜನ್ಯ ಪ್ರಕರಣ. ಇದಕ್ಕೆ ಪ್ರಧಾನಿ ಮೋದಿ ಹಾಗೂ ದೇವೇಗೌಡರ ಕುಟುಂಬವೇ ನೇರ ಹೊಣೆ” ಎಂದು ಸಂಸದ ಡಿ.ಕೆ.ಸುರೇಶ್ ಅವರು ನೇರ ವಾಗ್ದಾಳಿ ನಡೆಸಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಡಿ.ಕೆ. ಸುರೇಶ್ ಅವರು ಮಂಗಳವಾರ ಮಾತನಾಡಿದರು. ಪ್ರಜ್ವಲ್ ಪೆನ್ ಡ್ರೈವ್ ವಿಚಾರ ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್ ಅವರಿಗೆ ಮೊದಲೇ ಗೊತ್ತಿತ್ತು ಎನ್ನುವ ಆರೋಪದ ಬಗ್ಗೆ ಕೇಳಿದಾಗ ಅವರು ಉತ್ತರಿಸಿದ್ದು ಹೀಗೆ: “ನಮಗೆ ವಿಷಯ ಗೊತ್ತಿದ್ದರೇ ಈ ವಿಚಾರ ಇನ್ನು ಮುಂಚೆಯೇ ವಿಷಯ ಹೊರ ಬರುತ್ತಿತ್ತು. ಆರೋಪ ಮಾಡುವುದಕ್ಕಾಗಿ ನಮ್ಮ ಹೆಸರುಗಳನ್ನು ತರಲಾಗುತ್ತಿದೆ. ಗುಸು ಗುಸು ಸುದ್ದಿ ಹಾಸನದಲ್ಲಿ ಇತ್ತು, ಸೂಕ್ತ ದಾಖಲೆಗಳು ಇಲ್ಲದೇ ಮಾತನಾಡುವುದು ಸೂಕ್ತವಲ್ಲ. ಹಾಸನದ ಬಿಜೆಪಿ ನಾಯಕ ದೇವರಾಜೇಗೌಡ ಉನ್ನತ ನಾಯಕರಿಗೆ ಪತ್ರ ಬರೆದಿದ್ದರು. ಪ್ರಕರಣದ ಬಗ್ಗೆ ಪ್ರಧಾನಿಗಳು ಹಾಗೂ ಅವರ ಕಾರ್ಯಾಲಯ ಮತ್ತು ಕುಟುಂಬಕ್ಕೆ ಗೊತ್ತಿದ್ದರೂ ಉದ್ದೇಶಪೂರ್ವಕವಾಗಿ ಮುಚ್ಚಿಟ್ಟು ಎನ್ ಡಿಎ ಅಭ್ಯರ್ಥಿಯನ್ನಾಗಿ ಮಾಡಿ.…
ಜಮ್ಮು ಮತ್ತು ಕಾಶ್ಮೀರ: ಇಲ್ಲಿನ ಕುಪ್ವಾರಾದಲ್ಲಿ ಭೂಕುಸಿತ ಮತ್ತು ಪ್ರವಾಹದಲ್ಲಿ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ. ಹಲವಾರು ಮನೆಗಳಿಗೆ ಹಾನಿಯಾಗಿದೆ ಮತ್ತು ನೂರಾರು ನಿವಾಸಿಗಳು ಬಾಧಿತರಾಗಿದ್ದಾರೆ. ಜಮ್ಮು ಪ್ರದೇಶದ ದೋಡಾ, ರಿಯಾಸಿ, ಕಿಶ್ತ್ವಾರ್ ಮತ್ತು ರಂಬನ್ ಮತ್ತು ಕಾಶ್ಮೀರದ ಕಿಶ್ತ್ವಾರ್ ಸೇರಿದಂತೆ ಹಲವಾರು ಗುಡ್ಡಗಾಡು ಜಿಲ್ಲೆಗಳಲ್ಲಿ ಭಾರಿ ಮಳೆ ಮತ್ತು ಭೂಕುಸಿತ ಸಂಭವಿಸಿದೆ. ನಿನ್ನೆ, ರಂಬನ್ ಜಿಲ್ಲೆಯ ಅನೇಕ ಸ್ಥಳಗಳಲ್ಲಿ ಭೂಕುಸಿತ ಸಂಭವಿಸಿದ ನಂತರ ಶ್ರೀನಗರ-ಜಮ್ಮು ಮಾರ್ಗವನ್ನು ಮುಚ್ಚಲಾಯಿತು. ಕುಪ್ವಾರಾದಲ್ಲಿ, ಪರಿಸ್ಥಿತಿ ಸುಧಾರಿಸಲು ಪ್ರಾರಂಭಿಸಿದೆ. ನೀರಿನ ಮಟ್ಟವು ಕಡಿಮೆಯಾಗುತ್ತಿದೆ ಮತ್ತು ಜನರು ತಮ್ಮ ಹಾನಿಗೊಳಗಾದ ಮನೆಗಳಿಗೆ ಮರಳುತ್ತಿದ್ದಾರೆ. ನಿನ್ನೆಯ ದೃಶ್ಯಗಳಲ್ಲಿ ಕಂಡುಬರುವಂತೆ, ಪ್ರವಾಹದಿಂದಾಗಿ ರಸ್ತೆಯ ಒಂದು ಭಾಗವು ಕೊಚ್ಚಿಹೋಗಿದೆ ಮತ್ತು ಹಲವಾರು ಮನೆಗಳು ಮೊಣಕಾಲು ಆಳದ ನೀರಿನಲ್ಲಿ ಮುಳುಗಿವೆ. ನದಿಗೆ ಎದುರಾಗಿರುವ ಮನೆಯ ಒಂದು ಭಾಗ ಕೊಚ್ಚಿ ಹೋಗಿದೆ. ನಿನ್ನೆ, ಅಧಿಕಾರಿಗಳು ಕುಪ್ವಾರಾದ ಪೊಹ್ರು ನಲ್ಲಾಗೆ ಅಪಾಯದ ಎಚ್ಚರಿಕೆ ನೀಡಿದ್ದಾರೆ. ಸಮಯೋಚಿತ ತಂಡದ ಸ್ಥಳಾಂತರವು ಪ್ರವಾಹ ಪೀಡಿತ…
ಮನುಷ್ಯನು ಹುಟ್ಟಿದ ನಂತರ ಶ್ರೀಮಂತನಾಗಲು ಮಹಾಲಕ್ಷ್ಮಿ ಅನುಗ್ರಹ ಖಂಡಿತವಾಗಿ ಬೇಕು. ತಾಯಿ ಲಕ್ಷ್ಮೀದೇವಿಗೆ ಶುಭ್ರತೆ ಎಂದರೆ ಬಹಳ ಇಷ್ಟ , ಆದ್ದರಿಂದ ಸದಾಕಾಲದಲ್ಲೂ ಮನೆಯನ್ನು ಯಾವಾಗಲೂ ಸ್ವಚ್ಛವಾಗಿಟ್ಟುಕೊಳ್ಳಬೇಕು. ಲಕ್ಷ್ಮಿ ದೇವಿಗೆ ಸಂಬಂಧಪಟ್ಟ ವಸ್ತುಗಳನ್ನು ಯಾವಾಗಲೂ ಸ್ವಚ್ಛವಾಗಿಟ್ಟುಕೊಳ್ಳಬೇಕು ಉದಾಹರಣೆಗೆ ಕಸಗುಡಿಸುವ ಪೊರಕೆ, ರುಬ್ಬುವ ಕಲ್ಲು, ಮನೆಯ ಮುಖ್ಯದ್ವಾರದ ಹೊಸ್ತಿಲು. ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ 9686268564 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ.…














