Author: kannadanewsnow09

ಬೆಂಗಳೂರು : ಗಾಳಿ, ಮಳೆಗೆ ಮರ ಹಾಗೂ ಕೊಂಬೆಗಳು ಬಿದ್ದು ಪ್ರಾಣಹಾನಿ, ಆಸ್ತಿ ಹಾನಿ ಆಗುತ್ತಿದ್ದು, ಮಳೆಗಾಲಕ್ಕೆ ಮೊದಲೇ ಅಪಾಯಕಾರಿ ವೃಕ್ಷ ಗುರುತಿಸಿ ಕೊಂಬೆಗಳನ್ನು ಕತ್ತರಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅರಣ್ಯಾಧಿಕಾರಿಗಳಿಗೆ ಸೂಚಿಸಿದ್ದಾರೆ. ಬೆಂಗಳೂರಿನ ಕಂಟೋನ್ಮೆಂಟ್ ಬಳಿ ಇಂದು ರಸ್ತೆ ಬದಿಯ ಮರದ ಸುತ್ತಲೂ ಹಾಕಲಾಗಿದ್ದ ಕಾಂಕ್ರೀಟ್ ತೆರವು ಮಾಡುವ ಮೂಲಕ ವೃಕ್ಷಗಳ ಸಂರಕ್ಷಣಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮರದ ಕೊಂಬೆ ಬಿದ್ದು ಗಾಯಗೊಂಡಿದ್ದ 29 ವರ್ಷದ ಅಕ್ಷಯ್ ಮೃತಪಟ್ಟಿರುವ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿದರು. ಮಳೆ, ಗಾಳಿಗೆ ಟೊಳ್ಳು ಮರಗಳು ಮತ್ತು ಬೇರು ಕಚ್ಚದ ಮರಗಳು ಧರಾಶಾಯಿ ಆಗುತ್ತವೆ. ಇದಕ್ಕೆ ಕಾರಣ ಬೇರಿಗೆ ನೀರು ಇಳಿಯದಂತೆ ಹಾಕಲಾಗಿರುವ ಕಾಂಕ್ರೀಟ್, ಕಲ್ಲಿನ ಚಪ್ಪಡಿ, ಟೈಲ್ಸ್ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ಬಗ್ಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣವೂ ತೀರ್ಪು ನೀಡಿದ್ದು, ಸರ್ಕಾರ ಈ ಸಂಬಂಧ ಅಧಿಕೃತ ಆದೇಶವನ್ನೇ ಹೊರಡಿಸಿದೆ ಎಂದರು. ನಿನ್ನೆ ಬಿಬಿಎಂಪಿ…

Read More

ಬೆಂಗಳೂರು: ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನಕ್ಕೆ ದಿನಾಂಕ ನಿಗದಿ ಪಡಿಸಲಾಗಿದೆ. ಅದರಂತೆ ಆಗಸ್ಟ್.11ರಿಂದ ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭಗೊಳ್ಳಲಿದೆ. ಈ ಬಗ್ಗೆ ಸರ್ಕಾರ ಮಾಹಿತಿ ಹಂಚಿಕೊಂಡಿದ್ದು, ಆಗಸ್ಟ್.11ರಿಂದ ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭಗೊಳ್ಳಲಿದೆ. 2 ವಾರಗಳ ಕಾಲ ನಡೆಯಲಿದೆ ಎಂಬುದಾಗಿ ತಿಳಿಸಿದೆ. ರಾಜ್ಯ ಸರ್ಕಾರವು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದು, ಆಗಸ್ಟ್ 11, 2025 ರಿಂದ ಎರಡು ವಾರಗಳ ಕಾಲ ವಿಧಾನಸಭೆಯ ಕಲಾಪ ನಡೆಯಲಿದೆ. ಈ ಅಧಿವೇಶನದಲ್ಲಿ ರಾಜ್ಯದ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ.

Read More

ಬೆಂಗಳೂರು: ಕ್ರಿಮಿನಲ್ ಪ್ರಕರಣಗಳನ್ನು ಸಿಐಡಿಗೆ ತನಿಖೆಗಾಗಿ ವರ್ಗಾಯಿಸಿದಾಗ ಈ ಕ್ರಮಗಳನ್ನು ಕಡ್ಡಾಯವಾಗಿ ಅನುಸರಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಡೈರೆಕ್ಟರ್ ಜನರಲ್ ಮುತ್ತು ಇನ್ಸ್ ಪೆಕ್ಟರ್ ಜನರಲ್ ಆಫ್‌ ಪೊಲೀಸ್‌ ಅವರು ಆದೇಶ ಹೊರಡಿಸಿದ್ದು, ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಸಿಐಡಿಯು ಪ್ರಮುಖ ಅಪರಾಧ ತನಿಖಾ ಸಂಸ್ಥೆಯಾಗಿರುತ್ತದೆ. ಈ ಸಂಸ್ಥೆಯಿಂದ ಪ್ರಕರಣಗಳನ್ನು ತನಿಖೆಗಾಗಿ ಕರ್ನಾಟಕ ಸರ್ಕಾರ, ಸರ್ವೋಚ್ಛ ನ್ಯಾಯಾಲಯ ಅಥವಾ ಡಿಜಿ&ಐಜಿಪಿ ಕಛೇರಿಯಿಂದ ಆದೇಶವಾದ ಉಚ್ಛನ್ಯಾಯಾಲಯಗಳು ಅಥವಾ ಪರಿಣಾಮವಾಗಿ ವರ್ಗಾವಣೆಗೊಳ್ಳುತ್ತವೆ. ಈ ಹಿನ್ನಲೆಯಲ್ಲಿ ಸ್ಥಳೀಯ ಪೊಲೀಸ್ ಠಾಣೆಯಿಂದ ಸಿಐಡಿಗೆ ಪ್ರಕರಣದ ತನಿಖೆಯು ವರ್ಗಾವಣೆಯಾದಾಗ ಸ್ಥಳೀಯ ಹಾಗೂ ಸಿಐಡಿ ತನಿಖಾಧಿಕಾರಿಗಳು ಈ ಕೆಳಗಿನ ಕಾರ್ಯವಿಧಾನಗಳನ್ನು ತಪ್ಪದೇ ಅಳವಡಿಸಿಕೊಳ್ಳಬೇಕು ಎಂದಿದ್ದಾರೆ. ಸ್ಥಳೀಯ ತನಿಖಾಧಿಕಾರಿಗಳು ಕೈಗೊಳ್ಳಬೇಕಾದ ಕಾರ್ಯವಿಧಾನಗಳು:- 1) ತಮ್ಮ ಘಟಕದಲ್ಲಿ ದಾಖಲಾಗಿ ತನಿಖೆಯಲ್ಲಿರುವ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಿದ್ದರ ಬಗ್ಗೆ ಪೊಲೀಸ್‌ ಪ್ರಧಾನ ಕಛೇರಿಯಿಂದ ಸೂಚನೆ ಅಥವಾ ಆದೇಶ ಸ್ವೀಕರಿಸಿದ ಘಟಕದ ಮುಖ್ಯಸ್ಥರು, ಕೂಡಲೇ ಸಂಬಂಧಿಸಿದ ತನಿಖಾಧಿಕಾರಿಗಳಿಗೆ ಮಾಹಿತಿ ನೀಡತಕ್ಕದ್ದು. ಜೊತೆಗೆ ಆ ತನಿಖಾಧಿಕಾರಿಗೆ ತನಿಖೆಯಲ್ಲಿ…

Read More

ಬೆಂಗಳೂರು: ಜಿಲ್ಲೆಯಲ್ಲಿ ಅಧಿಕೃತ ಪರವಾನಿಗೆ ಪಡೆದಿರುವ ರಸಗೊಬ್ಬರ ಮಾರಾಟಗಾರರು ಯಾವುದೇ ಸಂದರ್ಭದಲ್ಲಿ ರಸಗೊಬ್ಬರಗಳ ಚೀಲದ ಮೇಲೆ ಮುದ್ರಿತವಾದ ಗರಿಷ್ಟ ಬೆಲೆಗಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರಗಳನ್ನು ಮಾರಾಟ ಮಾಡಬಾರದು. ಕಡ್ಡಾಯವಾಗಿ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ದರಪಟ್ಟಿ ಮತ್ತು ದೈನಂದಿನ ದಾಸ್ತಾನನ್ನು ತಮ್ಮ ಮಾರಾಟ ಮಳಿಗೆಗಳ ಮುಂದೆ ಸಾರ್ವಜನಿಕವಾಗಿ ಕಾಣುವಂತೆ ನಾಮಫಲಕ ಪ್ರದರ್ಶಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ ಸೂಚಿಸಿದ್ದಾರೆ. ಜಿಲ್ಲೆಯಲ್ಲಿ ಕಳೆದ 2-3 ವಾರಗಳಿಂದ ಉತ್ತಮವಾದ ಮಳೆಯಾಗುತ್ತಿದ್ದು, ರೈತರು ಬಿತ್ತನೆ ಬೀಜ ಮತ್ತು ವಿವಿಧ ರಸಗೊಬ್ಬರಗಳನ್ನು ಕೊಂಡು ಬಿತ್ತನೆ ಕಾರ್ಯದಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಚಿತ್ರದುರ್ಗ ಮತ್ತು ಹೊಳಲ್ಕೆರೆಯ ಹಲವು ಭಾಗಗಳಲ್ಲಿ ಮೆಕ್ಕೆಜೋಳ 10 ರಿಂದ 25 ದಿನಗಳ ಬೆಳವಣಿಗೆ ಹಂತವಿರುವ ಬೆಳೆ ಇರುತ್ತದೆ. ಇದಕ್ಕೆ ಯೂರಿಯಾ ರಸಗೊಬ್ಬರವನ್ನು ಮೇಲು ಗೊಬ್ಬರವಾಗಿ ರೈತರು ಬಳಸುತ್ತಿದ್ದಾರೆ. ಆದರೆ ಜಿಲ್ಲೆಯಲ್ಲಿ ಅಲ್ಲಲ್ಲಿ ರಸಗಗೊಬ್ಬರಗಳನ್ನು ರಸಗೊಬ್ಬರಗಳ ಚೀಲದ ಮೇಲೆ ಮುದ್ರಿತವಾದ ಗರಿಷ್ಠ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ ಎಂದು ರೈತರಿಂದ ಹಾಗೂ ವಿವಿಧ ರೈತ ಸಂಘಟನೆಗಳ…

Read More

ಬೆಂಗಳೂರು: ಭಾರತೀಯ ಅಂಚೆ ಇಲಾಖೆಯ ಆದೇಶದಂತೆ ಬಳ್ಳಾರಿ ಪ್ರಧಾನ ಕಚೇರಿ ವ್ಯಾಪ್ತಿಗೆ ಬರುವ ಎಲ್ಲಾ ಉಪ ಅಂಚೆ ಕಚೇರಿ ಹಾಗೂ ಶಾಖಾ ಅಂಚೆ ಕಚೇರಿಗಳಲ್ಲಿ ಹೊಸ ತಂತ್ರಾಂಶ (ಎಪಿಟಿ 2.0) ಅಳವಡಿಕೆ ಜಾರಿಯಾಗುತ್ತಿದ್ದು, ಈ ಹಿನ್ನಲೆಯಲ್ಲಿ ಜೂ. 20 ಮತ್ತು 21 ರಂದು ಎರಡು ದಿನಗಳ ಕಾಲ ಅಂಚೆ ಕಚೇರಿಗಳಲ್ಲಿ ವಹಿವಾಟು ಸ್ಥಗಿತಗೊಳಿಸಲಾಗುವುದು ಎಂದು ಅಂಚೆ ಇಲಾಖೆ ತಿಳಿಸಿದೆ. ಭಾರತೀಯ ಅಂಚೆ ಇಲಾಖೆಯು ಆಧುನಿಕ ಹಾಗೂ ಗ್ರಾಹಕ ಸ್ನೇಹಿ ತಂತ್ರಾಂಶವನ್ನು ಅಭಿವೃದ್ಧಿಪಡಿಸಿ, ಆಧುನಿಕ ತಂತ್ರಜ್ಞಾನದ ನೆಟ್ವರ್ಕ್ ಸಮಸ್ಯೆಯಂತಹ ತೊಡಕುಗಳಿಂದ ಗ್ರಾಹಕರ ಸೇವೆಗಳಿಗೆ ಚ್ಯುತಿ ಬರದಂತೆ ಗಮನಹರಿಸಿ (ಅಡ್ವನ್ಸ್ಡ್ ಪೋಸ್ಟಲ್ ಟೆಕ್ನಾಲಜಿ 2.0) ಯನ್ನು ದೇಶಾದ್ಯಂತ ಎಲ್ಲಾ ಅಂಚೆ ಕಚೇರಿಗಳಲ್ಲಿ ಅಳವಡಿಸಲು ಮುಂದಾಗಿದೆ. ಇದರ ಪ್ರಯುಕ್ತ ರಾಜ್ಯದ ಎಲ್ಲಾ ಅಂಚೆ ಕಚೇರಿಯಲ್ಲಿ ಹಾಗೂ ಅದರಡಿ ಬರುವ ಎಲ್ಲಾ ಉಪ ಅಂಚೆ ಕಚೇರಿಗಳು ಮತ್ತು ಶಾಖಾ ಅಂಚೆ ಕಚೇರಿಗಳಲ್ಲಿ ಎ.ಪಿ.ಟಿ 2.0 ತಂತ್ರಾಂಶವನ್ನು ಅಳವಡಿಕೆ ಕಾರಣ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ.

Read More

ಬೆಂಗಳೂರು: ಚಾಮರಾಜನಗರ ಜಿಲ್ಲೆ ಮಲೆಮಹದೇಶ್ವರ ಬೆಟ್ಟದಲ್ಲಿ ಜೂನ್ 21ರಂದು ಶನಿವಾರ ಪತ್ರಕರ್ತರ ಮಕ್ಕಳ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದ್ದು, ಅಂತಿಮ ಹಂತದ ಸಿದ್ಧತೆಗಳು ಪೂರ್ಣಗೊಂಡಿವೆ. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂೃಜೆ) ಆಯೋಜಿಸಿರುವ ಈ ಕಾರ್ಯಕ್ರಮಕ್ಕೆ ಚಾಮರಾಜನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಹನೂರು ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘ ಸಹಯೋಗ ನೀಡಿವೆ. 21ರಂದು ಬೆಳಿಗ್ಗೆ 11.30ಕ್ಕೆ ಬೆಟ್ಟದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಭಾಗವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎಂಎಸ್‌ಐಎಲ್ ಅಧ್ಯಕ್ಷ ಪುಟ್ಟರಂಗಶೆಟ್ಟಿ, ಹನೂರು ಶಾಸಕ ಎಂ.ಆರ್.ಮಂಜುನಾಥ್, ಕೊಳ್ಳೆಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ, ಗುಂಡ್ಲುಪೇಟೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್, ಸಂಸದ ಸುನೀಲ್ ಬೋಸ್ ಭಾಗವಹಿಸಲಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲಾಧಿಕಾರಿ ಶಿಲ್ಪನಾಗ್, ಎಸ್ಪಿ ಬಿ.ಟಿ.ಕವಿತಾ, ಜಿಪಂ ಸಿಇಒ ಮೋನಾ ರೋತ್,…

Read More

ಬೆಂಗಳೂರು: ಇಂದು ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅಶುತೋಷ್ ಕುಮಾರ್ ಸಿಂಗ್ ಸುದ್ದಿಗೋಷ್ಠಿ ನಡೆಸಿ, ಬೆಂಗಳೂರು ಪ್ರದೇಶದ ವಿವಿಧ ರೈಲ್ವೆ ಮೂಲಸೌಕರ್ಯ ಯೋಜನೆಗಳ ಕುರಿತು ಮಾಹಿತಿ ಹಂಚಿಕೊಂಡರು. ಆ ಸುದ್ದಿಗೋಷ್ಠಿಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಪತ್ರಿಕಾ ಗೋಷ್ಠಿಯಲ್ಲಿ , ಬೆಂಗಳೂರು ಪ್ರದೇಶದಲ್ಲಿ ಮತ್ತು ಸುತ್ತಮುತ್ತಲಿನ ವಿವಿಧ ನಡೆಯುತ್ತಿರುವ ರೈಲ್ವೆ ಮೂಲಸೌಕರ್ಯ ಯೋಜನೆಗಳು ಮತ್ತು ಅಂತಿಮ ಸ್ಥಳ ಸಮೀಕ್ಷೆಗೆ ಅನುಮೋದನೆ(Final Location Survey) ನೀಡಲಾದ ರೈಲ್ವೆ ಯೋಜನೆಗಳ ಕುರಿತು ವಿಭಾಗೀಯ ರೈಲ್ವೆ ವ್ಯವಸ್ಥಾಪಕರು ವಿವರ ನೀಡಿದರು. ಬೆಂಗಳೂರು ಕಂಟೋನ್ಮೆಂಟ್ ನಿಂದ ವೈಟ್‌ಫೀಲ್ಡ್ ಚತುಷ್ಪಥ ಹಳಿ ಯೋಜನೆಯು ಅಂದಾಜು ರೂ. 492.87 ಕೋಟಿ ರೂ ವೆಚ್ಚದಲ್ಲಿ ನಡೆಯುತ್ತಿದೆ. ಇದು 38 ಕಿಲೋಮೀಟರ್‌ ಒಳಗೊಂಡಿದೆ. ಇದರ ಸಂಪೂರ್ಣವನ್ನು ವೆಚ್ಚವನ್ನು ರೈಲ್ವೆ ಭರಿಸುತ್ತದೆ ಎಂದು ಅವರು ಮಾಹಿತಿ ನೀಡಿದರು. ಈ ಯೋಜನೆಯಲ್ಲಿ ಇದುವರೆಗೆ ಅರ್ಥ್ ವರ್ಕ್, ರೀಟೇನಿಂಗ್‌ ವಾಲ್ಸ್ ಮತ್ತು ಹಲವು ಸೇತುವೆ ವಿಸ್ತರಣೆ ಕಾಮಗಾರಿಗಳು ಸೇರಿದಂತೆ 75% ಕಾಮಗಾರಿಗಳು ಪೂರ್ಣಗೊಂಡಿವೆ. ಈ ಯೋಜನೆಯು ಈ…

Read More

ಬೆಂಗಳೂರು: ರಾಜ್ಯ ಸರ್ಕಾರವು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ನಡೆದಿದ್ದಂತ ಕಾಲ್ತುಳಿತ ದುರಂತದ ನಂತ್ರ ಎಚ್ಚೆತ್ತುಕೊಂಡಿದೆ. ಇಂತಹ ದುರಂತಗಳು ನಡೆಯದಂತೆ ಮುನ್ನೆಚ್ಚರಿಕೆಯ ಕ್ರಮವಾಗಿ ಹೊಸ ಕಾನೂನು ಜಾರಿಗೆ ತರಲು ಸಿದ್ಧವಾಗಿದೆ. ಈ ಕಾನೂನಿನ ಅನುಸಾರ ಕಾಲ್ತುಳಿತ ದುರಂತ ಸಂಭವಿದರೇ ಇನ್ಮುಂದೆ ಆಯೋಜಕರಿಗೆ 3 ವರ್ಷ ಜೈಲು, ಐದು ಲಕ್ಷದವರೆಗೆ ದಂಡ ವಿದಿಸುವಂತ ನಿಮಯವನ್ನು ಜಾರಿಗೆ ತರುತ್ತಿದೆ. ಜೂನ್ 4 ರಂದು ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತದ ನಂತರ ಕರ್ನಾಟಕ ಸರ್ಕಾರವು ಕರ್ನಾಟಕ ಜನಸಂದಣಿ ನಿಯಂತ್ರಣ ಮಸೂದೆ, 2025 ಎಂಬ ಹೊಸ ಶಾಸನವನ್ನು ಪ್ರಸ್ತಾಪಿಸಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ತೆಗೆದುಕೊಳ್ಳಲಾದ ಈ ಕರಡು ಮಸೂದೆಯು ದೊಡ್ಡ ಸಭೆಗಳನ್ನು ನಿಯಂತ್ರಿಸುವ ಮತ್ತು ಭವಿಷ್ಯದಲ್ಲಿ ಅಂತಹ ಯಾವುದೇ ಘಟನೆಗಳನ್ನು ತಡೆಯುವ ಗುರಿಯನ್ನು ಹೊಂದಿದೆ. ಕರಡು ಕಾನೂನು ಉಲ್ಲಂಘನೆಗಾಗಿ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 5 ಲಕ್ಷ ರೂ.ಗಳ ದಂಡ ಸೇರಿದಂತೆ ಕಠಿಣ ಶಿಕ್ಷೆಗಳನ್ನು ಪ್ರಸ್ತಾಪಿಸುತ್ತದೆ. ರಾಜಕೀಯ ರ್ಯಾಲಿಗಳು ಮತ್ತು ಸಮ್ಮೇಳನಗಳಂತಹ ಕರ್ನಾಟಕದಲ್ಲಿ “ಪ್ರಾಯೋಜಿತ…

Read More

ಶಿವಮೊಗ್ಗ:  ದಿನಾಂಕ:21-06-2025 ರಂದು 110/11ಕೆವಿ ಉಳವಿ ಸರಬರಾಜಾಗುವ ಕೇಂದ್ರದಿಂದ ವಿದ್ಯುತ್‌ ವಿದ್ಯುತ್‌ ಎಲ್ಲಾ ಫಿಡರ್‌ಗಳಿಗೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂಬುದಾಗಿ ಮೆಸ್ಕಾಂ ತಿಳಿಸಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಸೊರಬ ಮೆಸ್ಕಾಂ ಎಇಇ ಮಾಹಿತಿ ಹಂಚಿಕೊಂಡಿದ್ದು,  110/11ಕೆವಿ ಉಳವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕವಿಪ್ರನಿನಿ ಅವರಿಂದ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ನಡೆಸಲು ಉದ್ದೇಶಿಸಿರುವುದರಿಂದ, 110/11 ಕೆವಿ ವಿ.ವಿ ಕೇಂದ್ರ ಉಳವಿಯಿಂದ ವಿದ್ಯುತ್ ಸರಬರಾಜಾಗುವ ಎಫ್-1 ಬರಗಿ, ಎಫ್-2 ಕಾನಳ್ಳಿ, ಎಫ್-3 ಉಳವಿ, ಎಫ್-4 ಹೊಸಬಾಳ, ಎಫ್-5 ದೂಗೂರು ಫೀಡರ್‌ಗಳ ವ್ಯಾಪ್ತಿಗೊಳಪಡುವ ಎಲ್ಲಾ ಗ್ರಾಮಗಳಿಗೆ ಬೆಳಗ್ಗೆ 10:00 ರಿಂದ ಸಂಜೆ 6:00 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದ್ದಾರೆ. https://kannadanewsnow.com/kannada/grow-more-trees-to-eliminate-the-shortage-of-pure-air-in-bengaluru-former-mlc-h-m-ramesh-gowda/ https://kannadanewsnow.com/kannada/breaking-the-state-government-has-moved-to-increase-the-reservation-for-muslims-in-the-housing-scheme-by-15/

Read More

ಬೆಂಗಳೂರು: ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ‘ಗಿಡವನ್ನು ನೆಡೋಣ ಮರವಾಗಿ ಬೆಳೆಸೋಣ’ ಎನ್ನುವ ಘೋಷವಾಕ್ಯದೊಂದಿಗೆ ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರ ಜನತಾದಳ ಜಾತ್ಯತೀತ ಪಕ್ಷದ ವತಿಯಿಂದ ಸಸಿ ನೆಡುವ ಹಾಗೂ ಸಸಿಗಳನ್ನು ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಗರದ ಜಯನಗರ ಟಿ.ಬ್ಲಾಕ್ ನಲ್ಲಿರುವ ಚಾಮುಂಡಿ ಆಟದ ಮೈದಾನದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮಾಜಿ ಶಾಸಕ, ಬೆಂಗಳೂರು ಮಹಾನಗರ ಜೆಡಿಎಸ್ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ ಅವರು ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಲ್ಲದೆ, ಈ ಸಂದರ್ಭದಲ್ಲಿ ಸಾವಿರಾರು ಗಿಡಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ 2500ಕ್ಕೂ ಹೆಚ್ಚು ಸಸಿಗಳನ್ನು ನೆಟ್ಟು ಅವುಗಳನ್ನು ಆರು ತಿಂಗಳ ಕಾಲ ಪೋಷಿಸುವ ಜವಾಬ್ದಾರಿಯನ್ನು ಜನತಾದಳ ಜಾತ್ಯತೀತ ಪಕ್ಷದ ನಗರ ಘಟಕದ ಕಾರ್ಯಕರ್ತರುಗಳು ವಹಿಸಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ರಮೇಶ್ ಗೌಡ ಅವರು; ಸಂಚಾರ ವಾಹನ ದಟ್ಟಣೆ ಹಾಗೂ ವಾಯು ಮಾಲಿನ್ಯದಿಂದ ತೀವ್ರ ಒತ್ತಡಕ್ಕೆ ತುತ್ತಾಗಿರುವ ಬೆಂಗಳೂರು ಮಹಾನಗರದಲ್ಲಿ ಶುದ್ಧ ಗಾಳಿಯ ಕೊರತೆ ಕಾಣಿಸುತ್ತಿದೆ. ಮುಂದಿನ ದಿನಗಳಲ್ಲಿ…

Read More