Subscribe to Updates
Get the latest creative news from FooBar about art, design and business.
Author: kannadanewsnow09
ಹುಬ್ಬಳ್ಳಿ: ಪ್ರಮುಖ ಹಬ್ಬಗಳಲ್ಲಿ ಒಂದಾದ ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು ಒಂದು ಟ್ರಿಪ್ ಈ ಕೆಳಗಿನ ವಿಶೇಷ ರೈಲುಗಳನ್ನು ಓಡಿಸಲಿದೆ. ರೈಲುಗಳ ವಿವರಗಳು ಹೀಗಿವೆ: 1. ರೈಲು ಸಂಖ್ಯೆ 06249/06250 ಯಶವಂತಪುರ–ಮಡಗಾಂವ್–ಯಶವಂತಪುರ ಎಕ್ಸ್‌ಪ್ರೆಸ್ ವಿಶೇಷ ರೈಲು (1 ಟ್ರಿಪ್): ರೈಲು ಸಂಖ್ಯೆ 06249 ಯಶವಂತಪುರ–ಮಡಗಾಂವ್ ವಿಶೇಷ ಎಕ್ಸ್‌ಪ್ರೆಸ್ ರೈಲು ಸೆಪ್ಟೆಂಬರ್ 30, 2025 ರಂದು ಮಧ್ಯಾಹ್ನ 12:00 ಗಂಟೆಗೆ ಯಶವಂತಪುರದಿಂದ ಹೊರಟು, ಮರುದಿನ ಬೆಳಿಗ್ಗೆ 05:30 ಗಂಟೆಗೆ ಮಡಗಾಂವ್ ತಲುಪಲಿದೆ.ಮತ್ತೆ ಮರಳುವಾಗ, ರೈಲು ಸಂಖ್ಯೆ 06250 ಮಡಗಾಂವ್–ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ರೈಲು ಅಕ್ಟೋಬರ್ 1, 2025 ರಂದು ಬೆಳಿಗ್ಗೆ 06:30 ಗಂಟೆಗೆ ಮಡಗಾಂವ್‌ನಿಂದ ಹೊರಟು, ಅದೇ ದಿನ ರಾತ್ರಿ 11:40 ಗಂಟೆಗೆ ಯಶವಂತಪುರ ತಲುಪಲಿದೆ. ಈ ರೈಲು 16 ಬೋಗಿಗಳನ್ನು (10 ಸ್ಲೀಪರ್ ಕ್ಲಾಸ್, 4 ಜನರಲ್ ಸೆಕೆಂಡ್ ಕ್ಲಾಸ್ ಸಿಟ್ಟಿಂಗ್ ಮತ್ತು 2 ಎಸ್‌ಎಲ್‌ಆರ್/ಡಿ ಬೋಗಿಗಳು) ಒಳಗೊಂಡಿರಲಿದೆ. ಈ ರೈಲು ಎರಡೂ ಮಾರ್ಗಗಳಲ್ಲಿ ಚಿಕ್ಕಬಾಣಾವರ,…
ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ಇತರ ಯುಜಿಸಿಇಟಿ ಕೋರ್ಸ್‌ಗಳ ಮೂರನೇ ಹಾಗೂ ಅಂತಿಮ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಿದ್ದು, ಶುಲ್ಕ ಪಾವತಿಸಿ ಕಾಲೇಜಿಗೆ ವರದಿ ಮಾಡಿಕೊಳ್ಳಲು ಸೆ.13 ಕೊನೆ ದಿನ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಯುಜಿಸಿಇಟಿ ಕೋರ್ಸ್‌ಗಳಲ್ಲಿ ಸೀಟು ಹಂಚಿಕೆಯಾದವರು ಕಡ್ಡಾಯವಾಗಿ ಕಾಲೇಜುಗಳಲ್ಲಿ ಪ್ರವೇಶ ಪಡೆಯಬೇಕಾಗುತ್ತದೆ. ಅಂತಹವರಿಗೆ ಯಾವುದೇ ಛಾಯ್ಸ್ ಆಯ್ಕೆಗೂ ಅವಕಾಶ ಇರುವುದಿಲ್ಲ ಎಂದು ಅವರು ಹೇಳಿದ್ದಾರೆ. ಸೀಟು ಹಂಚಿಕೆಯಾದವರು ಇದುವರೆಗೂ ಶುಲ್ಕ ಪಾವತಿ ಮಾಡದೇ ಇದ್ದರೆ ಸೆ.13ರಂದು ಮಧ್ಯಾಹ್ನ 2.30ರೊಳಗೆ ಕಟ್ಟಬೇಕು. ಅದೇ ದಿನ ಸಂಜೆ 5.30ರೊಳಗೆ ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಂಡು ಕಾಲೇಜಿಗೆ ವರದಿ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದರು. ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್‌ಗಳ ಪ್ರವೇಶಕ್ಕೆ ಅಂತಿಮ ಫಲಿತಾಂಶವನ್ನು ಎಂಸಿಸಿ ಫಲಿತಾಂಶದ ನಂತರ ಪ್ರಕಟಿಸಲಾಗುತ್ತದೆ. ಅಲ್ಲಿಯವರೆಗೂ ಕಾದು ನೋಡಲು ಅವರು ಸಲಹೆ ನೀಡಿದ್ದಾರೆ. ಹಂಚಿಕೆಯಾಗದೆ ಉಳಿದಿರುವ 14,940 ಎಂಜಿನಿಯರಿಂಗ್ ಹಾಗೂ 413 ಆರ್ಕಿಟೆಕ್ಚರ್ ಕೋರ್ಸ್ ಗಳ…
ಬೆಂಗಳೂರು: ರಾಜ್ಯದ ಗ್ರಾಮ ಆಡಳಿತಾಧಿಕಾರಿಗಳಿಗೆ ಆನ್ ಲೈನ್ ಮೂಲಕ ಕಡತ ವಿಲೇವಾರಿಗೆ ಉಪಯೋಗ ಆಗುವ ನಿಟ್ಟಿನಲ್ಲಿ ಲ್ಯಾಪ್ ಟಾಪ್ ವಿತರಣೆಗೆ ಸಚಿವ ಸಂಪುಟ ಅನುಮೋದಿಸಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು, ಕಂದಾಯ ಇಲಾಖೆಯಲ್ಲಿ ಡಿಜಿಟಲೀಕರಣ ಮತ್ತು ಇ-ಆಡಳಿತ ನೀಡುವ ಉದ್ದೇಶದಿಂದ ನಮ್ಮ ಸರ್ಕಾರದಿಂದ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ದಿಶೆಯಲ್ಲಿ ಕರ್ನಾಟಕ ರಾಜ್ಯ ಮುಂಚೂಣಿಯಲ್ಲಿರುವುದು ಹೆಮ್ಮೆಯ ವಿಷಯವಾಗಿದೆ. ಇದರ ಮುಂದುವರೆದ ಭಾಗವಾಗಿ ಕಂದಾಯ ಇಲಾಖೆಯಲ್ಲಿ ಸಂಪೂರ್ಣ ಡಿಜಿಟಲೀಕರಣ ಆಡಳಿತ ಸಾಧಿಸಲು ಕೆಳಹಂತದಿಂದಲೇ ಎಲ್ಲರಿಗೂ ಆನ್ಲೈನ್ ಕಡತ ವಿಲೇವಾರಿ ಜಾರಿ ಮಾಡಲು ಎಲ್ಲಾ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ಟಾಪ್ ಒದಗಿಸಲು ಸಂಪುಟ ಮಂಜೂರಾತಿ ಮಾಡಿದೆ. ಈಗಾಗಲೇ 5000 ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ಟಾಪ್ ನೀಡಲಾಗುತ್ತಿದೆ. ಉಳಿದ ಗ್ರಾಮ ಆಡಳಿತಾಧಿಕಾರಿಗಳಿಗೆ ಮತ್ತು ಕಂದಾಯ ನಿರೀಕ್ಷಕರುಗಳಿಗೆ 3500 ಲ್ಯಾಪ್ಟಾಪ್ ನೀಡಲು 19.25 ಕೋಟಿ ಅನುದಾನ ಒದಗಿಸಲು ಇಂದಿನ ಸಭೆಯಲ್ಲಿ ಸಂಪುಟ ಅನುಮತಿ ನೀಡಿದೆ ಎಂದಿದ್ದಾರೆ. ಇದರಿಂದ ಈ ವರ್ಷದಿಂದಲೇ ಕಂದಾಯ ಇಲಾಖೆಯ ಎಲ್ಲಾ ಹಂತಗಳಲ್ಲಿ…
ಬೆಂಗಳೂರು: ಸ್ಯಾಂಡಲ್ ವುಡ್ ನಟ ವಿಷ್ಣುವರ್ಧನ್ ಗೆ ಹಾಗೂ ಬಿ.ಸರೋಜಾದೇವಿಗೂ ಕರ್ನಾಟಕರತ್ನ ಪ್ರಶಸ್ತಿ ನೀಡಲು ರಾಜ್ಯ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿದೆ. ಅಲ್ಲದೇ ಕುವೆಂಪು ಅವರಿಗೆ ಭಾರತ ರತ್ನಪ್ರಶಸ್ತಿ ನೀಡಬೇಕು. ಈ ಬಗ್ಗೆ ಕೇಂದ್ರಕ್ಕೆ ಶಿಫಾರಸುಮಾಡಲು ನಿರ್ಧರಿಸಲಾಗಿದೆ. ಆ ಎಲ್ಲಾ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಸಂಪುಟದ ನಿರ್ಧಾರಗಳನ್ನು ವಿವರಿಸಿದಂತ ಸಚಿವ ಹೆಚ್.ಕೆ ಪಾಟೀಲ್ ಅವರು, ಇಂದು 40 ವಿಷಯಗಳ ಬಗ್ಗೆ ಚರ್ಚೆಯಾಗಿದೆ. ಉಪಖನಿಜ ರಿಯಾಯ್ತಿ ತಿದ್ದುಪಡಿ ನಿಯಮಕ್ಕೆ ಒಪ್ಪಿಗೆ ನೀಡಲಾಗಿದೆ. ಜನರಿಗೆ ಅನುಕೂಲವಾಗುವಂತೆ ಸರಳೀಕರಣ ಮಾಡಲಾಗುತ್ತಿದೆ. ಮಣ್ಣು,ಮರಳು ತೆಗೆಯಲು ಅನುಕೂಲ ಆಗಲಿದೆ ಎಂದರು. ಪ್ರೋಟೋಕಾಲ್ ಮಾರ್ಗಸೂಚಿ ಪರಿಷ್ಕರಣೆ ಮಾಡಲಾಗುತ್ತಿದೆ. ಸರ್ಕಾರಿ ಕಾರ್ಯಕ್ರಮಗಳಿಗೆ ಅನ್ವಯವಾಗಲಿದೆ. ಆಹ್ವಾನ ಪತ್ರಿಕೆಗಳಲ್ಲಿ ಗಣ್ಯರ ಹೆಸರು ಸೇರಿಸಲು ಅವಕಾಶ ನೀಡಲಾಗುತ್ತದೆ. ಶಿಷ್ಟಾಚಾರ ಪಟ್ಟಿ ಬದಲಾವಣೆಗೆ ಕ್ಯಾಬಿನೆಟ್ ಒಪ್ಪಿಗೆ ಸೂಚಿಸಿದೆ. ಹೆಚ್ಚು ಮಂದಿ ಸೇರಿಸುವುದಕ್ಕೆ ಕಡಿವಾಣ ಬೀಳಲಿದೆ. 9 ಗಣ್ಯರಿಗಷ್ಟೇ ಇನ್ಮುಂದೆ ಆಹ್ವಾನಿಸಲು ಸಮ್ಮತಿ ನೀಡಲಾಗಿದೆ. ಈ ಮೊದಲು 20, 25…
ಬೆಂಗಳೂರು: ದಿವಂಗತ ನಟ ವಿಷ್ಣವರ್ಧನ್ ಹಾಗೂ ಬಿ ಸರೋಜಾ ದೇವಿ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಮೂಲಕ ಬಹು ದಿನಗಳ ಅಭಿಮಾನಿಗಳ ಬೇಡಿಕೆಯನ್ನು ಸರ್ಕಾರ ಈಡೇರಿಸಿದಂತೆ ಆಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಇಂದಿನ ಸಚಿವ ಸಂಪುಟ ಸಭೆಯಲ್ಲಿ ಮರಣೋತ್ತರವಾಗಿ ದಿವಂಗತ ನಟ ಡಾ.ವಿಷ್ಣುವರ್ಧನ್ ಹಾಗೂ ಬಿ.ಸರೋಜಾ ದೇವಿ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ. ಅಂದಹಾಗೇ ಕೆಲ ದಿನಗಳ ಹಿಂದೆಯಷ್ಟೇ ನಟ ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಸ್ಯಾಂಡಲ್ ವುಡ್ ಹಿರಿಯ ನಟಿಯರು ಮುಖ್ಯಮಂತ್ರಿ ಸಿದ್ಧರಾಮಯ್ಯ ಭೇಟಿಯಾಗಿ ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿರುವಂತ ಸಿಎಂ ಸಿದ್ಧರಾಮಯ್ಯ, ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮರಣೋತ್ತರವಾಗಿ ನಟ ವಿಷ್ಣುವರ್ಧನ್, ನಟಿ ಬಿ ಸರೋಜಾ ದೇವಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ನಿರ್ಧರಿಸಿದ್ದಾರೆ.
ಬೆಂಗಳೂರು: ದಿವಂಗತ ನಟ ವಿಷ್ಣವರ್ಧನ್ ಹಾಗೂ ಬಿ ಸರೋಜಾ ದೇವಿ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಮೂಲಕ ಬಹು ದಿನಗಳ ಅಭಿಮಾನಿಗಳ ಬೇಡಿಕೆಯನ್ನು ಸರ್ಕಾರ ಈಡೇರಿಸಿದಂತೆ ಆಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಇಂದಿನ ಸಚಿವ ಸಂಪುಟ ಸಭೆಯಲ್ಲಿ ಮರಣೋತ್ತರವಾಗಿ ದಿವಂಗತ ನಟ ಡಾ.ವಿಷ್ಣುವರ್ಧನ್ ಹಾಗೂ ಬಿ.ಸರೋಜಾ ದೇವಿ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ. ಅಂದಹಾಗೇ ಕೆಲ ದಿನಗಳ ಹಿಂದೆಯಷ್ಟೇ ನಟ ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಸ್ಯಾಂಡಲ್ ವುಡ್ ಹಿರಿಯ ನಟಿಯರು ಮುಖ್ಯಮಂತ್ರಿ ಸಿದ್ಧರಾಮಯ್ಯ ಭೇಟಿಯಾಗಿ ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿರುವಂತ ಸಿಎಂ ಸಿದ್ಧರಾಮಯ್ಯ, ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮರಣೋತ್ತರವಾಗಿ ನಟ ವಿಷ್ಣುವರ್ಧನ್, ನಟಿ ಬಿ ಸರೋಜಾ ದೇವಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ನಿರ್ಧರಿಸಿದ್ದಾರೆ.
ಬೆಂಗಳೂರು: ಅಕ್ರಮ ಆಸ್ತಿ ಪತ್ತೆ ಆರೋಪದಡಿ ಇಡಿ ಅಧಿಕಾರಿಗಳಿಂದ ಶಾಸಕ ಸತೀಶ್ ಸೈಲ್ ಬಂಧಿಸಲಾಗಿತ್ತು. ಇಂತಹ ಅವರಿಗೆ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಕಾರವಾರ ಶಾಸಕ ಸತೀಶ್ ಸೈಲ್ ಅವರನ್ನು ಅಕ್ರಮ ಆಸ್ತಿ ಪತ್ತೆ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಅವರು ಅನಾರೋಗ್ಯದ ಹಿನ್ನಲೆಯಲ್ಲಿ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಬೆಂಗಳಊರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು, ಶಾಸಕ ಸತೀಶ್ ಸೈಲ್ ಗೆ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.
ಮಂಡ್ಯ: ಜಿಲ್ಲೆಯ ಮದ್ದೂರಲ್ಲಿ ಗಣೇಶ ಮೂರ್ತಿ ಮೆರವಣಿಗೆ ವೇಳೆಯಲ್ಲಿ ಕಲ್ಲು ತೂರಾಟ ಘಟನೆ ಖಂಡಿಸಿ ಮದ್ದೂರು ಬಂದ್ ಮಾಡಲಾಗಿತ್ತು. ಈ ವೇಳೆಯಲ್ಲಿ ಪ್ರತಿಭಟನೆ ನಡೆಸಿದಂತ ಮಹಿಳೆ ಜ್ಯೋತಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದರು. ಇದೀಗ ಇಂತಹ ಮಹಿಳೆ ಜ್ಯೋತಿ ಮೇಲೂ ಎಫ್ಐಆರ್ ದಾಖಲಿಸಲಾಗಿದೆ. ಹೌದು. ಗಣೇಶನ ಗಲಾಟೆಯಲ್ಲಿ ಲಾಠಿ ಏಟು ತಿಂದ ಮಹಿಳೆ ಜ್ಯೋತಿ ಮೇಲೂ ಕೇಸ್ ಬಿದ್ದಿದೆ. ಪ್ರತಿಭಟನೆ ವೇಳೆ ಅವಹೇಳನಕಾರಿ ಹಾಗು ಪ್ರಚೋನಾದನಾಕಾರಿಯಾಗಿ ಘೋಷೆಣೆ ಕೂಗಿದ್ದಕ್ಕೆ FIR ದಾಖಲಿಸಲಾಗಿದೆ. ಮದ್ದೂರು ಪೊಲೀಸರು ಮಹಿಳೆ ಜ್ಯೋತಿ ವಿರುದ್ದ ಪ್ರಕರಣ ದಾಖಲಿಸಿದ್ದಾರೆ. BNS 196(1) ಎ ಹಾಗು,299 ರ ಕಾಯ್ದೆ ಅಡಿ ಮಹಿಳೆ ವಿರುದ್ದ ಪ್ರಕರಣ ದಾಖಲಾಗಿದೆ. ಸೆ.8 ರಂದು ಮದ್ದೂರಿನಲ್ಲಿ ಗಣೇಶನ ಮೆರವಣಿಗೆ ವೇಳೆ ಈ ಘಟನೆ ನಡೆದಿತ್ತು. ಮೆರವಣಿಗೆ ವೇಳೆ ಪೊಲೀಸರು ಈಕೆಯ ಮೇಲೆ ಲಾಠಿ ಚಾರ್ಜ್ ಮಾಡಿದ್ರು. ಮೆರವಣಿಗೆ ವೇಳ ಪ್ರಚೋದಾನಾಕಾರಿಯಾಗಿ ಮುಸ್ಲಿಂ ಸಮುದಾಯದ ವಿರುದ್ದ ಘೋಷಣೆ ಕೂಗಿದ್ದರು. ಅದಾದ ಬಳಿಕ ಮಾಧ್ಯಮಗಳಿಗೆ ಹೇಳಿಕೆ ಕೊಡುವಾಗ ಸಿ.ಎಂ.ವಿರುದ್ದ ಅಪೇಕ್ಷಾರ್ಹ ಪದ ಬಳಕೆ ಮಾಡಿದ್ದರು. ಈ ಸಂಬಂಧ ಮದ್ದೂರು…
ಆಂಜನೇಯನನ್ನು ಚಿರಂಜೀವಿ ಎಂದೂ ಪರಿಗಣಿಸಲಾಗುತ್ತದೆ. ಆಂಜನೇಯನನ್ನು ನಿಜವಾದ ಭಕ್ತ ಎಂದೂ ಪರಿಗಣಿಸಲಾಗುತ್ತದೆ. ಅಂತಹ ಆಂಜನೇಯನನ್ನು ನಾವು ಪೂರ್ಣ ಹೃದಯದಿಂದ ಮತ್ತು ಪ್ರಾಮಾಣಿಕವಾಗಿ ಪೂಜಿಸಿದರೆ, ಅವನು ನಮ್ಮ ಇಷ್ಟಾರ್ಥಗಳನ್ನು ಪೂರೈಸುತ್ತಾನೆ ಎಂದು ಹೇಳಲಾಗುತ್ತದೆ. ವಿಶೇಷವಾಗಿ ನಾವು ಶ್ರೀ ರಾಮಜಯಂ ಎಂದು ಹೇಳಿದರೆ, ನಮಗೆ ಆಂಜನೇಯನ ಅನುಗ್ರಹವು ಪೂರ್ಣವಾಗಿ ಸಿಗುತ್ತದೆ. ಅಂತಹ ಆಂಜನೇಯನನ್ನು ಪೂಜಿಸಲು ಹಲವು ಮಾರ್ಗಗಳಿದ್ದರೂ, ನಾವು ಹನ್ನೊಂದು ದಿನಗಳ ಕಾಲ ಮಾಡಬಹುದಾದ ಪೂಜೆ, ಅವನನ್ನು ಸ್ಮರಿಸುವುದು, ನಮ್ಮ ಇಷ್ಟಾರ್ಥಗಳನ್ನು ಪೂರೈಸುತ್ತದೆ. ಈ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ ನಾವು ಆ ಪೂಜೆಯನ್ನು ನೋಡಲಿದ್ದೇವೆ . ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ…
ಬೆಂಗಳೂರು: ನಗರದಲ್ಲಿ ಯುವತಿಯನ್ನು ಪ್ರೀತಿಸುವ ವಿಚಾರಕ್ಕೆ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೆಂಗಳೂರಲ್ಲಿ ಯುವತಿ ಪ್ರೀತಿಸುವ ವಿಚಾರಕ್ಕೆ ಚಾಕುವಿನಿಂದ ಇರಿದು ಕಿರಣ್(19) ಎಂಬಾತನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಜೀವನ್ ಎಂಬಾತ ಚಾಕುವಿನಿಂದ ಇರಿದು ಕೊಲೆಗೈದಿದ್ದಾನೆ. ಒಂದೇ ಕಡೆ ಮೃತ ಕಿರಣ್ ಹಾಗೂ ಆರೋಪಿ ಜೀವನ್ ಕೆಲಸ ಮಾಡುತ್ತಿದ್ದರು. ಅಲ್ಲಿಯೇ ಕೆಲಸ ಮಾಡುತ್ತಿದ್ದಂತ ಯುವತಿಯನ್ನು ಇಬ್ಬರೂ ಪ್ರೀತಿಸುತ್ತಿದ್ದರು. ಇದೇ ವಿಚಾರಕ್ಕೆ ನಿನ್ನೆ ರಾತ್ರಿ ಕಿರಣ್ ಹಾಗೂ ಜೀವನ್ ನಡುವೆ ಗಲಾಟೆಯಾಗಿತ್ತು. ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಗಲಾಟೆ ತೀವ್ರಗೊಂಡ ಸಂದರ್ಭದಲ್ಲಿ ಆರೋಪಿ ಜೀವನ್, ಕಿರಣ್ ಗೆ ಚಾಕುವಿನಿಂದ ಇರಿದು ಕೊಲೆಗೈದಿದ್ದಾನೆ. ಕೊಲೆ ಆರೋಪಿ ಜೀವನನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/shivamogga-a-7-month-old-leopard-cub-died-after-being-hit-by-an-unknown-vehicle-near-avalagodu-sorabada/ https://kannadanewsnow.com/kannada/the-bmtc-electric-bus-driver-who-assaulted-a-woman-has-been-dismissed-from-duty/












