Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಕೊಲೆ ಪ್ರಕರಣ ಸಂಬಂಧಿಸಿದಂತೆ ತನಿಖೆಯನ್ನು ಇಂದು ಸಂಜೆ ಅಥವಾ ನಾಳೆ ಸಿಐಡಿಗೆ ಹಸ್ತಾಂತರಿಸಲಾಗುತ್ತದೆ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಘೋಷಣೆ ಮಾಡಿದ್ದಾರೆ. ಹುಬ್ಬಳ್ಳಿಯ ವೀರಾಪುರ ಕಾಲೋಜಿನಿಯಲ್ಲಿರುವಂತ ಮೃತ ಅಂಜಲಿ ಅಂಬಿಗೇರ ಅವರ ನಿವಾಸಕ್ಕೆ ಇಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಭೇಟಿಯಾಗಿ, ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಈ ವೇಳೆಯಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರಿಗೆ, ತನ್ನ ಮಗಳನ್ನು ಕೊಲೆಗೈದ ಆರೋಪಿಗೆ ಗಲ್ಲು ಶಿಕ್ಷೆ ಕೊಡಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದಂತ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು, ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣವನ್ನು ಇಂದು ಸಂಜೆ ಅಥವಾ ನಾಳೆ ತನಿಖೆಗಾಗಿ ಸಿಐಡಿಗೆ ಹಸ್ತಾಂತರಿಸಲಾಗುತ್ತದೆ ಎಂದು ತಿಳಿಸಿದರು. https://kannadanewsnow.com/kannada/hassan-pen-drive-viral-case-advocate-devarajegowda-sent-to-judicial-custody/ https://kannadanewsnow.com/kannada/breaking-four-isis-terrorists-arrested-in-gujarat-after-major-terror-attack-plot-foiled/
ಹಾಸನ: ಹಾಸನ ಪೆನ್ ಡ್ರೈವ್ ವೈರಲ್ ಪ್ರಕರಮ ಸಂಬಂಧ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಅವರಿಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ. ಎರಡು ದಿನಗಳ ಹಿಂದೆ ಹಾಸನದ 5 ನೇ ಸಿವಿಲ್ ಕೋರ್ಟ್ ನಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಧೀಶರು, ಬಿಜೆಪಿ ಮುಖಂಡ ದೇವರಾಜೆಗೌಡಗೆ ಮತ್ತೆ ಎರಡು ದಿನ ಎಸ್ಐಟಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದರು. ಪೆನ್ ಡ್ರೈವ್ ಕೇಸ್ ನಲ್ಲಿ ದೇವರಾಜೇಗೌಡ ಎಂಟನೇ ಆರೋಪಿಯಾಗಿದ್ದಾರೆ. ಮತ್ತೆ 2 ದಿನ SIT ಕಸ್ಟಡಿಗೆ ನೀಡಿ ಮೇ 20ರ ಸಂಜೆ 5 ಗಂಟೆಗೆ ಕೋರ್ಟಿಗೆ ಹಾಜರುಪಡಿಸುವಂತೆ ಕೋರ್ಟ್ ಆದೇಶಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ದೇವರಾಜೇಗೌಡ ನನ್ನು ಒಂದು ದಿನ ಎಸ್ಐಟಿ ವಶಕ್ಕೆ ಕೋರ್ಟ್ ನೀಡಿತ್ತು. ಇದೀಗ ಎಸ್ಐಟಿ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಅಧಿಕಾರಿಗಳು ದೇವರಾಜೆಗೌಡನನ್ನು ಕೋರ್ಟಿಗೆ ಕರೆತಂದಿದ್ದರು. ಹಾಸನದ 5ನೇ ಹೆಚ್ಚುವರಿ ಸಿವಿಲ್ ಕೋರ್ಟ್ ನಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಮತ್ತೆ…
ಬೆಂಗಳೂರು: ರಾಜ್ಯ ಸರ್ಕಾರ ವರ್ಷದ ಸಂಭ್ರಮದಲ್ಲಿದೆ. ಆದರೆ, ಕೇಂದ್ರ ಸರ್ಕಾರ ನೀಡಿರುವ ಬೆಳೆ ಪರಿಹಾರ ಹಣವು ಸಾಲಕ್ಕೆ ಜಮೆ ಆಗುತ್ತಿದೆ. ಇದು ಈ ಸರ್ಕಾರದ ವೈಖರಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು. ಸರ್ಕಾರ ಎಲ್ಲಾ ಸಾಧನೆಗಳನ್ನು ಹೇಳಿಕೊಳ್ಳುತ್ತಿದೆ. ಆದರೆ, ಪೆನ್ ಡ್ರೈವ್ ಸಾಧನೆ ಮಾತ್ರ ಇವರು ಹೇಳಿಕೊಳ್ಳುತ್ತಿಲ್ಲ. ವಿದ್ಯುತ್ ಸಂಚಲನ ಉಂಟು ಮಾಡಿದ, ವಿಶ್ವದಾದ್ಯಂತ ಸಂಚಲನ ಮೂಡಿಸಿದ ವಿಷಯವನ್ನು ಇವರು ಹೇಳೇ ಇಲ್ಲ. ಇದು ನನಗೆ ಆಶ್ಚರ್ಯ ಉಂಟು ಮಾಡಿದೆ ಎಂದು ಅವರು ತೀಕ್ಷ್ಣವಾಗಿ ಕುಟುಕಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು; ರೈತರು ಬರದಿಂದ ಕಂಗೆಟ್ಟು ಸಂಕಷ್ಟದಲ್ಲಿದ್ದಾರೆ. ರೈತರಿಗೆ ಈ ಸರ್ಕಾರದ ಕೊಡುಗೆ ಏನೂ ಇಲ್ಲ. ರಾಜ್ಯದಲ್ಲಿ ರೈತರ ಆತ್ಮಹತ್ಯೆಗಳು ಆರಂಭ ಆಗಿವೆ. ಬರ ಪರಿಹಾರ ಹಣವನ್ನು ಸಾಲಕ್ಕೆ ವಜಾ ಮಾಡ್ತಿದ್ದಾರೆ. ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡಿಲ್ಲ. ಹಲವು ಇಲಾಖೆಗಳಲ್ಲಿ ವೇತನ ನೀಡಿಲ್ಲ ಎಂದು ತರಾಟೆಗೆ ತೆಗೆದುಕೊಂಡರು. ಕಳೆದ ಒಂದು…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಒಂದು ವರ್ಷದಲ್ಲಿ ಖಜಾನೆಯನ್ನು ಸಂಪೂರ್ಣ ಖಾಲಿ ಮಾಡಿದೆ. ರಾಜ್ಯ ಕೊಲೆಗಡುಕರ ಸ್ವರ್ಗವಾಗಿ ಬದಲಾಗಿದೆ. ಇಂತಹ ಶೂನ್ಯ ಸಾಧನೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ರಾಜ್ಯಪಾಲರು ಈ ಸರ್ಕಾರವನ್ನು ವಜಾ ಮಾಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರ್ಕಾರದ ಅವಧಿ ಮುಗಿಯತೆಂಬ ಕಾರಣಕ್ಕೆ ಜನರಿಗೆ ಧನ್ಯವಾದ ತಿಳಿಸಿದ್ದಾರೆಯೋ ಅಥವಾ ಕಾನೂನು ಸುವ್ಯವಸ್ಥೆ ಹಾಳು ಮಾಡಿರುವ ಕೊಲೆಗಾರರಿಗೆ ಧನ್ಯವಾದ ಹೇಳಿದ್ದಾರೆಯೋ ಗೊತ್ತಿಲ್ಲ. ನೇಹಾ, ಅಂಜಲಿ ಕೊಲೆಯಾದರು. ಇನ್ನು ಯಾವ ಹೆಣ್ಣುಮಕ್ಕಳು ಕೊಲೆಯಾಗುತ್ತಾರೆ ಎಂಬ ಆತಂಕವಿದೆ. ಹೆಣ್ಣುಮಕ್ಕಳು ಕಾಲೇಜಿಗೆ ಹೋದರೆ ಗ್ಯಾರಂಟಿ ಇಲ್ಲ, ಮನೆಯಿಂದ ಆಚೆಬಂದರೆ ಗ್ಯಾರಂಟಿ ಇಲ್ಲ. ಸರ್ಕಾರ ಎಷ್ಟು ಉಚಿತ ನೀಡಿದರೂ ಬದುಕುವ ಗ್ಯಾರಂಟಿಯೇ ಇಲ್ಲ ಎಂದು ಟೀಕಿಸಿದರು. ಅಂಜಲಿಯ ಕೊಲೆಯ ಹಿಂದೆ ಪೊಲೀಸರ ಲೋಪವಿದೆ ಎಂದು ಗೃಹ ಸಚಿವರೇ ಹೇಳಿದ್ದಾರೆ ಎಂದ ಮೇಲೆ ಸರ್ಕಾರ ಯಾಕೆ ಬದುಕಿರಬೇಕು? ಹಿಂದೂಗಳ ಮಾರಣಹೋಮವಾದರೂ ಇಲ್ಲಿ ಕೇಳುವವರಿಲ್ಲ. ಬೆಂಗಳೂರಿನಲ್ಲಿ…
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀವ ವೀಡಿಯೋ ಪ್ರಕರಣದ ಬಳಿಕ, ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದಾರೆ. ಈ ಪ್ರಕರಣ ಬೆಳಕಿಗೆ ಬಂದ ನಂತ್ರ ಮನನೊಂದಿದ್ದಂತ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು, ತಮ್ಮ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರು ಎಂಬ ಸ್ಪೋಟ ಮಾಹಿತಿಯನ್ನು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಬಹಿರಂಗ ಪಡಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ನಮ್ಮ ಕುಟುಂಬವನ್ನು ಉದ್ದೇಶ ಪೂರ್ವಕವಾಗಿ ಟಾರ್ಗೆಟ್ ಮಾಡಲಾಗುತ್ತಿದೆ. ನಮ್ಮ ಕುಟುಂಬವನ್ನು ಮುಗಿಸೋದಕ್ಕೆ ಈ ರೀತಿ ಷಡ್ಯಂತ್ರ ನಡೆಸಲಾಗುತ್ತಿದೆ. ಪ್ರಜ್ವಲ್ ರೇವಣ್ಣ ಪ್ರಕರಣದಿಂದ ಮನನೊಂದು, ಹೆಚ್.ಡಿ ದೇವೇಗೌಡರು ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಲು ಹೊರಟಿದ್ದರು ಎಂಬ ಅಂಶವನ್ನು ಬಿಚ್ಚಿಟ್ಟಿದರು. ನಮ್ಮ ಕುಟುಂಬದವರ ಎಲ್ಲಾ ಪೋನ್ ಕದ್ದಾಲಿಕೆ ಮಾಡಲಾಗುತ್ತಿದೆ. ನಾನು ಅಕ್ರಮದ ಬಗ್ಗೆ ಮಾತನಾಡುತ್ತೇನೆ ಎಂಬುದಾಗಿ ನನ್ನ ಮೇಲೂ ಷಡ್ಯಂತ್ರ ರೂಪಿಸಲಾಗಿದೆ. ನನ್ನ ಜೊತೆಗೆ ಇದ್ದಂತ ಸುಮಾರು 45 ಜನರ ಪೋನ್ ಕದ್ದಾಲಿಕೆ ಮಾಡಲಾಗುತ್ತಿದೆ ಎಂದರು. ಈ ಎಲ್ಲಾ ಘಟನೆ, ಪ್ರಕರಣಗಳಿಂದ ಮಾಜಿ…
ಬೆಂಗಳೂರು: ದಿನಾಂಕ 17-06-2024ರಂದು ಅವಧಿ ಮುಕ್ತಾಯಗೊಳ್ಳುತ್ತಿರುವಂತ ಕರ್ನಾಟಕ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ಕೇಂದ್ರ ಚುನಾವಣಾ ಆಯೋಗದಿಂದ ಚುನಾವಣೆ ಘೋಷಣೆ ಮಾಡಲಾಗಿದೆ. ಜೂನ್.13ರಂದು ಮತದಾನ ನಡೆದು, ಅಂದೇ ಮತಏಣಿಕೆ ಕಾರ್ಯ ನಡೆಸಿ, ಫಲಿತಾಂಶ ಘೋಷಣೆ ಮಾಡಲಾಗುತ್ತಿದೆ. ಈ ಕುರಿತಂತೆ ಕೇಂದ್ರ ಚುನಾವಣಾ ಆಯೋಗದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ವಿಧಾನ ಪರಿಷತ್ತಿನ 11 ಸದಸ್ಯರ ಅಧಿಕಾರಾವಧಿಯು 17.06.2024 ರಂದು ನಿವೃತ್ತಿಯಾಗಲಿದ್ದು, ಈ ಕೆಳಗಿನ ವಿವರಗಳ ಪ್ರಕಾರ ದಿನಾಂಕ 17.06.2024 ರಂದು ಕೊನೆಗೊಳ್ಳಲಿದೆ ಎಂದು ತಿಳಿಸಿದೆ. ದಿನಾಂಕ 17-06-2024ರಂದು ವಿಧಾನ ಪರಿಷತ್ತಿನ ಸದಸ್ಯರಾದಂತ ಅರವಿಂದ್ ಕುಮಾರ್ ಅರಳಿ, ಎನ್ ಎಸ್ ಬೋಸರಾಜು, ಕೆ ಗೋವಿಂದರಾಜ್, ಡಾ.ತೇಜಸ್ವಿನಿ ಗೌಡ, ಮುನಿರಾಜು ಗೌಡ ಪಿಎಂ, ಕೆ.ಪಿ ನಂಜುಂಡಿ, ಬಿಎಂ ಫಾರೂಕ್, ರಘುನಾಥ್ ಮಲ್ಕಾಪುರೆ, ಎನ್ ರವಿಕುಮಾರ್, ಎಸ್ ರುದ್ರೇಗೌಡ ಹಾಗೂ ಕೆ ಹರೀಶ್ ಕುಮಾರ್ ಅವರ ಅವಧಿ ಮುಗಿಯಲಿದೆ. ಈ 11 ಕರ್ನಾಟಕ ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆಗಾಗಿ ಅಧಿಸೂಚನೆ ದಿನಾಂಕ 27-04-2024ರಂದು ಹೊರಡಿಸಲಾಗುತ್ತದೆ.…
ಬೆಂಗಳೂರು: ವಿವಾದಾದತ್ಮಕ ಒಪ್ಪಂದಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮರುಜೀವ ನೀಡಲು ಮುಂದಾಗಿದ್ದು, ಏಳು ಬಿಡಿಎ ಕಾಂಪ್ಲೆಕ್ಸ್‌ಗಳನ್ನು ಶಾಪಿಂಗ್ ಮಾಲ್‌ಗಳನ್ನಾಗಿ ಪರಿವರ್ತಿಸಲು ಮುಂದಾಗಿದೆ. ಬಿಡಿಎ ವಾಣಿಜ್ಯ ಸಂಕೀರ್ಣಗಳನ್ನು ಹೊಡೆದು ಮಾಲ್ ಕಟ್ಟುವ ಬಿಡಿಎ ನೀತಿಯ ವಿರುದ್ಧ ಆಮ್ ಆದ್ಮಿ ಪಾರ್ಟಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ವೀಣಾ ಸೆರಾವು ನೇತೃತ್ವದಲ್ಲಿ ಕೋರಮಂಗಲದ ಬಿಡಿಎ ಕಾಂಪ್ಲೆಕ್ಸ್‌ಗೆ ಭೇಟಿ ನೀಡಿದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಬಿಡಿಎ ನಿರ್ಧಾರದ ವಿರುದ್ಧ ತೀವ್ರ ವಿರೋಧ ವ್ಯಕ್ತಪಡಿಸಿದರು. ಬಳಿಕ ಮಾತನಾಡಿದ ವೀಣಾ ಸೆರಾವು, ಒಂದು ಪ್ರದೇಶಕ್ಕೆ ಒಂದು ಮಾಲ್ ಸಾಕು. ಯಶಸ್ವಿಯಾಗಿ ನಡೆಯುತ್ತಿರುವ ಬಿಡಿಎ ಕಾಂಪ್ಲೆಕ್ಸ್ ಅನ್ನು ಒಡೆಯುವುದು ಸರಿಯಲ್ಲ. ಈಗಾಗಲೇ ಸಾಕಷ್ಟು ಸಂಚಾರ ದಟ್ಟಣೆಯಿಂದ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗಿದೆ. ಈ ಪ್ರದೇಶಕ್ಕೆ ಸರಿಯಾದ ಫ್ಲೈಓವರ್ ಮತ್ತು ಮೆಟ್ರೋ ಸಂಪರ್ಕವಿಲ್ಲ. ಹೀಗಿರುವಾಗ ಸರ್ಕಾರಿ ಆಸ್ತಿಯನ್ನು ಖಾಸಗೀಕರಣ ಮಾಡುತ್ತಿರುವ ನಿರ್ಧಾರ ಸರಿಯಲ್ಲ. ಮರಗಳನ್ನೆಲ್ಲ ಕಡಿಯಲಾಗಿದೆ. ಇವತ್ತು ಕಾಂಕ್ರೀಟ್ ಕಾಡಾಗಿ ಬೆಂಗಳೂರು ಮಾರ್ಪಟ್ಟಿದೆ ಎಂದರು. ಬ್ರಾಂಡ್…
ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ಕೇಂದ್ರ ಚುನಾವಣಾ ಆಯೋಗದಿಂದ ಚುನಾವಣೆ ಘೋಷಣೆ ಮಾಡಲಾಗಿದೆ. ಜೂನ್.13ರಂದು ಮತದಾನ ನಡೆದು, ಅಂದೇ ಮತಏಣಿಕೆ ಕಾರ್ಯ ನಡೆಸಿ, ಫಲಿತಾಂಶ ಘೋಷಣೆ ಮಾಡಲಾಗುತ್ತಿದೆ. ಈ ಕುರಿತಂತೆ ಕೇಂದ್ರ ಚುನಾವಣಾ ಆಯೋಗದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ವಿಧಾನ ಪರಿಷತ್ತಿನ 11 ಸದಸ್ಯರ ಅಧಿಕಾರಾವಧಿಯು 17.06.2024 ರಂದು ನಿವೃತ್ತಿಯಾಗಲಿದ್ದು, ಈ ಕೆಳಗಿನ ವಿವರಗಳ ಪ್ರಕಾರ ದಿನಾಂಕ 17.06.2024 ರಂದು ಕೊನೆಗೊಳ್ಳಲಿದೆ ಎಂದಿದೆ. ದಿನಾಂಕ 17-06-2024ರಂದು ವಿಧಾನ ಪರಿಷತ್ತಿನ ಸದಸ್ಯರಾದಂತ ಅರವಿಂದ್ ಕುಮಾರ್ ಅರಳಿ, ಎನ್ ಎಸ್ ಬೋಸರಾಜು, ಕೆ ಗೋವಿಂದರಾಜ್, ಡಾ.ತೇಜಸ್ವಿನಿ ಗೌಡ, ಮುನಿರಾಜು ಗೌಡ ಪಿಎಂ, ಕೆ.ಪಿ ನಂಜುಂಡಿ, ಬಿಎಂ ಫಾರೂಕ್, ರಘುನಾಥ್ ಮಲ್ಕಾಪುರೆ, ಎನ್ ರವಿಕುಮಾರ್, ಎಸ್ ರುದ್ರೇಗೌಡ ಹಾಗೂ ಕೆ ಹರೀಶ್ ಕುಮಾರ್ ಅವರ ಅವಧಿ ಮುಗಿಯಲಿದೆ ಎಂದಿದೆ. ಈ 11 ಕರ್ನಾಟಕ ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆಗಾಗಿ ಅಧಿಸೂಚನೆ ದಿನಾಂಕ 27-04-2024ರಂದು ಹೊರಡಿಸಲಾಗುತ್ತದೆ. ದಿನಾಂಕ 03-06-2024 ನಾಮಪತ್ರ ಸಲ್ಲಿಸಲು…
ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣ ಸಂಬಂಧ ವಿದೇಶದಿಂದ ಪ್ರಜ್ವಲ್ ಬಂದು ತನಿಖೆಗೆ ಸಹಕಾರ ನೀಡಬೇಕು. ಪ್ರಜ್ವಲ್ ರೇವಣ್ಣ ವಿದೇಶದಿಂದ ಬಂದು ಪೊಲೀಸರಿಗೆ ಶರಣಾಗಬೇಕು. ಎಷ್ಟು ದಿನ ಕಳ್ಳ ಪೊಲೀಸ್ ಆಟ ಆಡ್ತೀಯಾ? ಬಂದು ಶರಣಾಗು ಎಂಬುದಾಗಿ ಪ್ರಜ್ವಲ್ ರೇವಣ್ಣಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮನವಿ ಮಾಡಿದರು. ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಅಶ್ಲೀಲ ವೀಡಿಯೋ ಸಂಬಂಧ ಪ್ರಜ್ವಲ್ ರೇವಣ್ಣ ವಿದೇಶದಿಂದ ತನಿಖೆಗೆ ಸಹಕಾರ ನೀಡಬೇಕು. ನಾನು ಮಾಧ್ಯಮಗಳ ಮೂಲಕ ಮನವಿ ಮಾಡುತ್ತೇನೆ. ಈ ನೆಲದ ಕಾನೂನು ಇದೆ. ಯಾಕೆ ವಿದೇಶದಲ್ಲಿ ಇರಬೇಕು? ಎಷ್ಟು ದಿನ ಕಳ್ಳ ಪೋಲೀಸ್ ಆಟ ಆಡ್ತೀಯಾ ಎಂದರು. ಕೈ ಮುಗಿದು ಮನವಿ ಮಾಡುತ್ತೇನೆ. ನನ್ನ ಹಾಗೂ ಹೆಚ್.ಡಿ ದೇವೇಗೌಡರ ಮೇಲೆ ಗೌರವ ಇದ್ದರೇ 24-48 ಗಂಟೆ ಒಳಗೆ ಬೆಂಗಳೂರಿಗೆ ಬಂದು, ಪೊಲೀಸರಿಗೆ ಶರಣಾಗುವಂತೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮನವಿ ಮಾಡಿದರು. ಅಂದಹಾಗೇ ಅಶ್ಲೀಲ ವೀಡಿಯೋ ಬೆಳಕಿಗೆ ಬರುತ್ತಿದ್ದಂತ ಸಂಸದ ಪ್ರಜ್ವಲ್…
ಬೆಂಗಳೂರು: ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಲಿ. ತನ್ನ ಕಳೆದ ಹಣಕಾಸು ವರ್ಷದ ಮತ್ತು ಮಾರ್ಚ್ 31, 2024ಕ್ಕೆ ಅಂತ್ಯಗೊಂಡ 4ನೇ ತ್ರೈಮಾಸಿಕ ಅವಧಿಯ ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಬ್ಯಾಂಕ್ ಮಾರ್ಚ್ 31ಕ್ಕೆ ಕೊನೆಯಾದ ತ್ರೈಮಾಸಿಕ ಅವಧಿಯಲ್ಲಿ 6,681 ಕೋಟಿ ರೂ. ಸಾಲವನ್ನು ವಿತರಿಸಿದ್ದು, ಕಳೆದ ಹಣಕಾಸು ವರ್ಷದ ಇದೇ ಅವಧಿಗೆ ಹೋಲಿಸಿದರೆ ಸಾಲ ವಿತರಣೆಯಲ್ಲಿ ಶೇ.11ರಷ್ಟು ಬೆಳವಣಿಗೆ ಸಾಧಿಸಲಾಗಿದೆ. ಅದೇ ರೀತಿ, 2023-2024ನೇ ಹಣಕಾಸು ವರ್ಷದಲ್ಲಿ ಬ್ಯಾಂಕ್ ಒಟ್ಟಾರೆ 23,389 ಕೋಟಿ ರೂ. ಸಾಲ ವಿತರಿಸಿದ್ದು, ಕಳೆದ ವಿತ್ತೀಯ ವರ್ಷಕ್ಕೆ ಹೋಲಿಸಿದರೆ ಶೇ.17ರಷ್ಟು ಹೆಚ್ಚಳವಾಗಿದೆ. ಮಾ.31ಕ್ಕೆ ಅಂತ್ಯಗೊಂಡ ತ್ರೈಮಾಸಿಕದಲ್ಲಿ ಕೈಗೆಟಕುವ ದರದಲ್ಲಿ ಒಟ್ಟು730 ಕೋಟಿ ರೂ.ಗಳ ಗೃಹ ಸಾಲ ನೀಡಲಾಗಿದ್ದು, ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಈ ಬಾರಿ ಶೇ.66ರಷ್ಟು ಹೆಚ್ಚು ಸಾಲ ವಿತರಣೆಯಾಗಿದೆ. 2023-2024ನೇ ಹಣಕಾಸು ವರ್ಷದಲ್ಲಿ 2,284 ಕೋಟಿ ರೂ. ಗೃಹ ಸಾಲ ವಿತರಿಸಲಾಗಿದ್ದು, ಕಳೆದ ವಿತ್ತ ವರ್ಷಕ್ಕೆ ಹೋಲಿಸಿದರೆ ಶೇ.64ರಷ್ಟು ಹೆಚ್ಚಳ ಕಂಡಿದೆ. 23-24ರ…














