Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: “ನಮ್ಮ ಪಕ್ಷದ ನಾಯಕರ ಜತೆಗಿನ ಮಾತುಕತೆ ಬಗ್ಗೆ ಬಹಿರಂಗವಾಗಿ ಚರ್ಚೆ ಮಾಡುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. “ನಾನು ಕೆಪಿಸಿಸಿ ಅಧ್ಯಕ್ಷ, ರಾಹುಲ್ ಗಾಂಧಿ ಅವರು ಲೋಕಸಭೆ ವಿರೋಧ ಪಕ್ಷದ ನಾಯಕ. ಶಿಷ್ಟಾಚಾರದ ಮೂಲಕ ಅವರನ್ನು ನಾನು ಸ್ವಾಗತಿಸಿ, ಭೇಟಿ ಮಾಡಿದ ವಿಚಾರವನ್ನು ಸಾರ್ವಜನಿಕವಾಗಿ ಚರ್ಚೆ ಮಾಡಲು ಸಾಧ್ಯವೇ? ನೀವುಗಳು ನಿಮಗೆ ಇಚ್ಛೆ ಬಂದಂತೆ ಗೊಂದಲ ಸೃಷ್ಟಿಸಿಕೊಳ್ಳುತ್ತಿದ್ದೀರಿ. ನಾವು ಯಾವ ಸಂದೇಶವನ್ನು ಕೊಟ್ಟಿಲ್ಲ. ನಮಗೂ ಯಾವ ಸಂದೇಶವನ್ನೂ ಕೊಟ್ಟಿಲ್ಲ. ಚೆನ್ನಾಗಿ ಕೆಲಸ ಮಾಡುತ್ತಿದ್ದೀರಿ, ಇದನ್ನೇ ಮುಂದುವರಿಸಿಕೊಂಡು ಹೋಗಿ ಎಂದು ನಮ್ಮ ನಾಯಕರು ಹೇಳಿದ್ದಾರೆ. ನರೇಗಾ ವಿಚಾರವಾಗಿ ನಾವು ಮಾಡುತ್ತಿರುವ ಕಾರ್ಯಕ್ರಮಗಳ ಬಗ್ಗೆ ತಿಳಿಸಿದ್ದೇನೆ. ರಾಜ್ಯ ಬಿಜೆಪಿಯಲ್ಲಿ ಆಗುತ್ತಿರುವ ರಾಜಕಾರಣ ಚರ್ಚೆ ಮಾಡಿದ್ದೇವೆ. “ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗುವುದಿಲ್ಲ” ಎಂಬ ಟ್ವೀಟ್ ವಿಚಾರವಾಗಿ ಕೇಳಿದಾಗ, “ನಾನು ಹೊಸದಾಗಿ ಈ ಮಾತನ್ನು ಹೇಳುತ್ತಿಲ್ಲ. ಒಕ್ಕಲಿಗ ಉದ್ಯಮಿ ಕಾರ್ಯಕ್ರಮಕ್ಕೆ ಹೋಗಿದ್ದಾಗ…
ಬೆಂಗಳೂರು: ನ್ಯೂಜಿಲ್ಯಾಂಡ್ ಪ್ರಧಾನ ಮಂತ್ರಿಗಳ ಏಷ್ಯಾ ವಿದ್ಯಾರ್ಥಿವೇತನ (PMSA) ಕಾರ್ಯಕ್ರಮದ ಭಾಗವಾಗಿರುವ ನ್ಯೂಜಿಲೆಂಡ್ನ ನಾವೀನ್ಯತೆ ಪರಿಸರ ವ್ಯವಸ್ಥೆಯ ನಿಯೋಗವು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಇಲಾಖೆ ಅಧಿಕಾರಿಗಳನ್ನು ಭೇಟಿ ಮಾಡಿ ತಂತ್ರಜ್ಞಾನ, ಶಿಕ್ಷಣ, ಸಂಶೋಧನೆ ಮತ್ತು ಉದಯೋನ್ಮುಖ ವಲಯಗಳಲ್ಲಿ ಸಹಯೋಗದ ಅವಕಾಶಗಳನ್ನು ಅನ್ವೇಷಿಸಿತು. ಜನರಿಂದ ಜನರಿಗೆ ಸಂಪರ್ಕಗಳನ್ನು ಬಲಪಡಿಸುವುದು ಮತ್ತು ಕರ್ನಾಟಕ ಮತ್ತು ನ್ಯೂಜಿಲೆಂಡ್ ನಡುವೆ ದೀರ್ಘಕಾಲೀನ ಸಾಂಸ್ಥಿಕ ಸಂಪರ್ಕಗಳನ್ನು ನಿರ್ಮಿಸುವ ಮೇಲೆ ಈ ಸಂವಾದ ಕೇಂದ್ರೀಕರಿಸಿತ್ತು. ಏಷ್ಯಾಕ್ಕಾಗಿ ಪ್ರಧಾನ ಮಂತ್ರಿಗಳ ವಿದ್ಯಾರ್ಥಿವೇತನ (PMSA) ನ್ಯೂಜಿಲೆಂಡ್ ಸರ್ಕಾರದ ಅನುದಾನಿತ ಕಾರ್ಯಕ್ರಮವಾಗಿದ್ದು, ಇದನ್ನು ಶಿಕ್ಷಣ ನ್ಯೂಜಿಲೆಂಡ್ (ENZ) ನಿರ್ವಹಿಸುತ್ತದೆ; ಇದು ನಾವೀನ್ಯತೆ, ಶಿಕ್ಷಣ ಮತ್ತು ನಾಯಕತ್ವದಲ್ಲಿ ಜಾಗತಿಕ ಸಾಮರ್ಥ್ಯಗಳನ್ನು ನಿರ್ಮಿಸುವಾಗ ಏಷ್ಯಾದಾದ್ಯಂತ ಪಾಲುದಾರಿಕೆಗಳನ್ನು ಗಾಢವಾಗಿಸುವ ಗುರಿಯನ್ನು ಹೊಂದಿದೆ ಎಂದು ತಿಳಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, ನಿಯೋಗವು ನ್ಯೂಜಿಲೆಂಡ್ನ ಸಂಶೋಧನೆ, ತಂತ್ರಜ್ಞಾನ, ಶಿಕ್ಷಣ ಮತ್ತು ನಾವೀನ್ಯತೆ ಪರಿಸರ ವ್ಯವಸ್ಥೆಯ ಪ್ರತಿನಿಧಿಗಳನ್ನು ಒಳಗೊಂಡಿತ್ತು ಎಂಬ…
ಬೆಂಗಳೂರು: ತುಮಕೂರಿನಲ್ಲಿ ಮಹಾತ್ಮ ಗಾಂಧಿ ಕ್ರಿಡಾಂಗಣ ಹೆಸರು ಬದಲಿಸುವ ದುಸ್ಸಾಹಸಕ್ಕೆ ಕೈ ಹಾಕಿ ರಾಜ್ಯ ಸರ್ಕಾರ ಪರಮೇಶ್ವರ ಹೆಸರು ಇಡುತ್ತಿರುವುದು ಅಕ್ಷಮ್ಯ ಅಪರಾಧ ಕಾಂಗ್ರೆಸ್ ನ ಒಂದು ಮುಖವಾಡ ಕಳಚಿ ಬಿದ್ದಿದೆ. ಕರ್ನಾಟಕದಲ್ಲಿ ರಾಜಿವ್ ಗಾಂಧಿ ಯುನಿವರ್ಸಿಟಿ, ಸಂಜಯ ಗಾಂಧಿ ಆಸ್ಪತ್ರೆಗೆ ಮಹಾತ್ಮಾಗಾಂಧಿ ಹೆಸರಿಡಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮನರೇಗಾ ಹೆಸರು ಬದಲಿಸಿರುವುದಕ್ಕೆ ಕಾಂಗ್ರೆಸ್ ನವರು ದೊಡ್ಡದಾಗಿ ವಿರೋಧ ಮಾಡಿದ್ದಾರೆ. ಅವರು ಮಾತಾಡವುದೊಂದು ಮಾಡೊದಂದು ಇಷ್ಟೆಲ್ಲ ನಡೆಯುತ್ತಿರುವ ಸಂದರ್ಭದಲ್ಲಿ ಮಹಾತ್ಮಾ ಗಾಂಧಿ ಕ್ರೀಡಾಂಗಣದ ಹೆಸರು ಬದಲಿಸಿ ದುಸ್ಸಾಹಸ ಮಾಡಿರುವುದು ಗಾಂಧಿಗೆ ಮಾಡಿರುವ ಅಪಮಾನ. ಪರಮೇಶ್ವರ ಅವರು ತಮ್ಮ ಕಾಲೇಜಿನ ಯಾವುದಾದರೂ ಗ್ರೌಂಡ್ ಗೆ ತಮ್ಮ ಹೆಸರು ಇಡಬೇಕಿತ್ತು. ನಮ್ಮ ಕಾಲದಲ್ಲಿ ತುಮಕೂರು ಜಿಲ್ಲಾ ಕ್ರೀಡಾಂಗಣ ಅಭಿವೃದ್ದಿ ಮಾಡಿದ್ದೇವೆ. ನಾನೇ ಉದ್ಘಾಟನೆ ಮಾಡಿದ್ದೇನೆ ಎಂದು ಹೇಳಿದರು. ಕರ್ನಾಕದಲ್ಲಿ ರಾಜೀವ್ ಗಾಂದಿ ಯುನಿವರ್ಸಿಟಿ ಇದೆ ಅದನ್ನು…
ಮೈಸೂರು: ರಾಜ್ಯ ಬಜೆಟ್ ಅನ್ನು ಮಾರ್ಚ್ ಮೊದಲು ಅಥವಾ 2ನೇ ವಾರದಲ್ಲಿ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಮೈಸೂರಿನ ಏರ್ ಪೋರ್ಟ್ ಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮಾರ್ಚ್ ಮೊದಲ ಅಥವಾ ಎರಡನೇ ವಾರದಲ್ಲಿ ರಾಜ್ಯ ಬಜೆಟ್ ಮಂಡಿಸಲಾಗುತ್ತದೆ. ಈ ಬಗ್ಗೆ ಚರ್ಚಿಸಿ ದಿನಾಂಕ ಪ್ರಕಟಿಸುವುದಾಗಿ ತಿಳಿಸಿದರು. ರಾಜ್ಯ ಬಜೆಟ್ ಗೆ ಮುನ್ನವೇ ಸರ್ಕಾರದ ಸಾಧನಾ ಸಮಾವೇಶ ಮಾಡಲಾಗುತ್ತದೆ. ಫೆ.13ರಂದು ಹಾವೇರಿಯಲ್ಲಿ ಸಾಧನಾ ಸಮಾವೇಶ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದರು.
ಶಿವಮೊಗ್ಗ: ಮಾರಿಕಾಂಬ ಜಾತ್ರೆಯ ಪ್ರಯುಕ್ತ ಅಮ್ಯೂಸ್ ಮೆಂಟ್ ಪಾರ್ಕ್ ನಿರ್ಮಾಣ ಕಾರ್ಯವು ನೆಹರು ಮೈದಾನದಲ್ಲಿ ನಡೆಯುತ್ತಿದೆ. ಟೆಂಡರ್ ಪಡೆದಿರೋದು ದುಬಾರಿ ದರವಾದರೂ, ಅಮ್ಯೂಸ್ಮೆಂಟ್ ಆಟಕ್ಕೆ ಯಾವುದೇ ದುಬಾರಿ ದರ ನಿಗದಿ ಪಡಿಸೋದಿಲ್ಲ ಎಂಬುದಾಗಿ ಅಮ್ಯೂಸ್ ಮೆಂಟ್ ಪಾರ್ಕ್ ಕಮಿಟಿಯ ಅಧ್ಯಕ್ಷ, ಉದ್ಯಮಿ ಹಾಗೂ ಟೆಂಡರ್ ಪಡೆದ ಲಿಂಗರಾಜು ಸ್ಪಷ್ಟ ಪಡಿಸಿದ್ದಾರೆ. ಇಂದು ಸಾಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಗಣರಾಜ್ಯೋತ್ಸವವನ್ನು ನೆಹರೂ ಮೈದಾನದಲ್ಲಿ ಮಾಡುವುದಾಗಿ ಸಾಗರ ತಾಲ್ಲೂಕು ಆಡಳಿತ ತಿಳಿಸಿದೆ. ಅದಕ್ಕೆ ಅಮ್ಯೂಸ್ ಮೆಂಟ್ ಪಾರ್ಕ್ ನಿರ್ಮಾಣದ ತಯಾರಿ ಅಡ್ಡಿಯಾಗಬಾರದು ಎನ್ನುವ ಕಾರಣಕ್ಕೆ ಬಿಡಲು ಒಪ್ಪಿಕೊಳ್ಳಲಾಗಿದೆ. ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ನೆಹರೂ ಮೈದಾನದಲ್ಲಿ ನಡೆಸಲು ನಮ್ಮ ಯಾವುದೇ ಅಭ್ಯಂತರವಿಲ್ಲ ಎಂದರು. ಸಾಗರದ ಮಾರಿಕಾಂಬ ದೇವಿ ಜಾತ್ರೆಯ ಪ್ರಯುಕ್ತ ಅಮ್ಯೂಸ್ ಮೆಂಟ್ ಟೆಂಡರ್ ಅನ್ನು ತಾನು ಪಡೆದಿದ್ದೇನೆ. ಅದು ದುಬಾರಿಯಾಗಿದೆ. ಅದರಂತೆ ದುಬಾರಿ ಬೆಲೆಯನ್ನು ನಿಗದಿ ಪಡಿಸಲಾಗುತ್ತಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಆದರೇ ಅದು ಸತ್ಯಕ್ಕೆ ದೂರವಾದದ್ದು. ಸುಳ್ಳು ಮಾತ್ರವೇ. ಸಾಗರದ ಜನರು ಯಾರು…
ಶಿವಮೊಗ್ಗ: ನಾಗರಾಜ್ ಗುಡ್ಡೇಮನೆ ಅವರ ಅರಮನೆ ವೃದ್ಧಾಶ್ರಮದಿಂದ ಹೊರ ತಂದಿರುವಂತ 2026ರ ಕ್ಯಾಲೆಂಡರ್ ಅನ್ನು ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ತಮ್ಮ ಸ್ವಗೃಹದಲ್ಲಿ ಬಿಡುಗಡೆ ಮಾಡಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿರುವಂತ ಶಾಸಕ ಗೋಪಾಲಕೃಷ್ಣ ನಿವಾಸದಲ್ಲಿ ನಾಗರಾಜ್ ಗುಡ್ಡೇಮನೆ ನಡೆಸುತ್ತಿರುವಂತ ಅರಮನೆ ವೃದ್ಧಾಶ್ರಮದ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದಂತ ಅವರು, ಇಂದು ಕುಟುಂಬಗಳು ಹೊಡೆದು ಹೋಗುತ್ತಿವೆ. ಸಿಂಗಲ್ ಫ್ಯಾಮಿಲಿ ಲೈಫ್ ಹೆಚ್ಚಾಗಿದೆ. ಮಕ್ಕಳೊಂದಿಗೆ, ಸೊಸೆಯೊಂದಿಗೆ ಹಿರಿಯ ನಾಗರೀಕರು ಹೊಂದಾಣಿಕೆ ಮಾಡಿಕೊಳ್ಳುವುದೇ ಕಷ್ಟವಾಗಿದೆ. ಹೀಗಾಗಿ ವೃದ್ಧಾಶ್ರಮಗಳು ಹೆಚ್ಚಾಗುತ್ತಿವೆ. ಇದು ಖೇದಕರ ಸಂಗತಿಯಾಗಿದೆ ಎಂದರು. ಅರಮನೆ ವೃದ್ಧಾಶ್ರಮದ ಎಲ್ಲಿದೆ? ಏನೆಲ್ಲಾ ಸೌಲಭ್ಯಗಳಿವೆ? ಸಾಮಾಜಿಕ ಸೇವಕರಾದಂತ ನಾಗರಾಜ್ ಗುಡ್ಡೇಮನೆ ಅವರು ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ತಾಲ್ಲೂಕಿನ ಮೂಸವಳ್ಳಿ ಬಳಿಯಲ್ಲಿ ಅರಮನೆ ಎನ್ನುವಂತ ವೃದ್ಧಾಶ್ರಮವನ್ನು ಆರಂಭಿಸಿದ್ದಾರೆ. ಮಕ್ಕಳಿಂದ ದೂರವಾಗಿ ತಮ್ಮ ವಯೋಕಾಲದಲ್ಲಿ ಬದುಕುವಂತ ವೃದ್ಧರಿಗಾಗಿ ಈ ಆಶ್ರಮವನ್ನು ನಿರ್ಮಿಸಲಾಗಿದೆ. ಎಲ್ಲಾ ರೀತಿಯ ಸೌಲಭ್ಯವನ್ನು ಅರಮನೆ ವೃದ್ಧಾಶ್ರಮ ಒಳಗೊಂಡಿದೆ. ಮಕ್ಕಳು ವಿವಿಧ ಕಾರಣದಿಂದಾಗಿ ತಮ್ಮ…
ಶಿವಮೊಗ್ಗ: ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ಸನ್ನಿಧಿಯಲ್ಲಿ ನಾಳೆಯಿಂದ ಎರಡು ದಿನಗಳ ಕಾಲ ಸಿಗಂದೂರು ಜಾತ್ರಾ ಮಹೋತ್ಸವ ನಡೆಯಲಿದೆ. ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಜಾತ್ರೆಗೆ ಚಾಲನೆ ನೀಡಲಿದ್ದಾರೆ. ಮೂಲಸ್ಥಾನದಲ್ಲಿ ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನೆರವೇರಲಿವೆ. ಜಾತ್ರೆಯ ಪ್ರಯುಕ್ತ ಸಿಗಂದೂರು ಸೇತುವೆ, ದೇವಸ್ಥಾನವನ್ನು ತಳಿರು ತೋರಣ, ಬಗೆ ಬಗೆಯ ಹೂಗಳಿಂದ ಸಿಂಗರಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಸಿಗಂದೂರಿನಲ್ಲಿ ಚೌಡೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ತೂಗು ಸೇತುವೆಯ ಬಳಿಕ ಮೊದಲ ಮಕರ ಸಂಕ್ರಾಂತಿ ಜಾತ್ರೆ ನಾಳೆ ನಡೆಯಲಿದೆ. ರಾಜ್ಯ ಸೇರಿದಂತೆ ಹೊರ ರಾಜ್ಯಗಳಿಂದಲೂ ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ಸನ್ನಿಧಿಗೆ ಲಕ್ಷಾಂತರ ಭಕ್ತರ ದಂಡೇ ಹರಿದು ಬರುವ ನಿರೀಕ್ಷೆಯಲ್ಲಿ ದೇವಸ್ಥಾನ ಆಡಳಿತ ಮಂಡಳಿ ಇದೆ. ಮಕರ ಸಂಕ್ರಾಂತಿಯ ಪ್ರಯುಕ್ತ ನಡೆಯುವಂತ ಜಾತ್ರಾ ಮಹೋತ್ಸವಕ್ಕೆ ಸಿಗಂದೂರು ತೂಗುಸೇತುವೆಯನ್ನು ಮಾವಿನ ತೋರಣದಿಂದ ಅಲಂಕರಿಸಲಾಗಿದೆ. ದಾರಿಯುದ್ಧಕ್ಕೂ ಭಕ್ತರನ್ನು ತಳಿರು ತೋರಣಗಳು ಸ್ವಾಗತಿಸುತ್ತವೆ. ದೇವಸ್ಥಾನದ ಆವರಣದಲ್ಲಿ ವಿಶೇಷ ರೀತಿಯಲ್ಲಿ ಬಗೆ ಬಗೆಯ ಹೂವುಗಳಿಂದ ಸಿಂಗರಿಸಲಾಗಿದೆ.…
ನವದೆಹಲಿ: ಭಾರತ ಸೇರಿದಂತೆ ವಿಶ್ವದಾದ್ಯಂತ ಎಕ್ಸ್ ಡೌನ್ ಆಗಿದೆ. ಹೀಗಾಗಿ ಬಳಕೆದಾರರು ಪೋಸ್ಟ್, ವೀಡಿಯೋ, ಪೋಟೋ ಮಾಡೋದಕ್ಕೆ ಪರದಾಡುವಂತೆ ಆಗಿದೆ ಎಂಬುದಾಗಿ ತಿಳಿದು ಬಂದಿದೆ. Downdetector.com ಪ್ರಕಾರ, ಮಂಗಳವಾರ ಪ್ರಪಂಚದಾದ್ಯಂತ ಸಾವಿರಾರು ಬಳಕೆದಾರರಿಗೆ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ X ಕಾರ್ಯನಿರ್ವಹಿಸಲಿಲ್ಲ, ಅವರು ಸ್ಥಗಿತಗೊಂಡಿದ್ದಾರೆ ಎಂದು ವರದಿ ಮಾಡಿದ್ದಾರೆ.
ಬೆಂಗಳೂರು: ಕಾಲೇಜುಗಳು ಹಾಗೂ ವಿವಿಯಲ್ಲಿ ವಿದ್ಯಾರ್ಥಿ ಚುನಾವಣೆಗಳನ್ನು ನಡೆಸುವ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಅವರು ರಚಿಸಿದ ಸಮಿತಿಯು ಮಂಗಳವಾರ *ವೈದ್ಯಕೀಯ ಶಿಕ್ಷಣ ಹಾಗೂ ಕೌಶಲಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅಧ್ಯಕ್ಷತೆಯಲ್ಲಿ ಮೊದಲ ಸಭೆ ನಡೆಸಿತು. ಬೆಂಗಳೂರಿನ ಕೆಪಿಸಿಸಿ ಭವನದಲ್ಲಿ ನಡೆದ ಸಭೆಯಲ್ಲಿ ಸಮಿತಿಯು, ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಚುನಾವಣೆ ನಡೆಸುವ ಕುರಿತು ಸಾಧಕ ಬಾಧಕಗಳ ಬಗ್ಗೆ ಸುಧೀರ್ಘ ಚರ್ಚೆ ನಡೆಸಿತು. ಕಾಲೇಜುಗಳು ಹಾಗೂ ವಿಶ್ವವಿದ್ಯಾನಿಲಯಗಳಲ್ಲಿ ವಿದ್ಯಾರ್ಥಿ ಚುನಾವಣೆಗಳನ್ನು ನಡೆಸುವ ಅಗತ್ಯತೆ, ಪ್ರಸ್ತುತತೆ, ಹಾಗೂ ಕೈಗೊಳ್ಳಬೇಕಾದ ಮುಂಜಾಗ್ರತೆ ಕ್ರಮಗಳು, ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಸಮಿತಿಯು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡಿತು. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸಬೇಕಾದರೆ ಚುನಾವಣೆ ನಡೆಸುವುದು ಅತ್ಯಗತ್ಯ ಎಂಬ ಅಭಿಪ್ರಾಯವನ್ನು ಸಮಿತಿಯ ಸದಸ್ಯರು ಸಭೆಯಲ್ಲಿ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳ ಚುನಾವಣೆಗಳನ್ನು ಪ್ರಜಾಪ್ರಭುತ್ವ ವ್ಯವಸ್ಥೆ ಬಲಪಡಿಸುವುದು, ಶೈಕ್ಷಣಿಕ ಮತ್ತು ಸಾಮಾಜಿಕ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಂಡು ನಡೆಸಬೇಕು.ಯಾವುದೇ ಕಾರಣಕ್ಕೂ ಏಕಪಕ್ಷಿಯಾಗಿ ನಿರ್ಧಾರ ತೆಗೆದುಕೊಳ್ಳುದೆ, ಎಲ್ಲರ ಅಭಿಪ್ರಾಯವನ್ನು ಕ್ರೋಢಿಕರಿಸಿಕೊಂಡು ಅಂತಿಮ…
ಬೆಂಗಳೂರು: ಗಣರಾಜ್ಯೋತ್ಸವದ ಪ್ರಯುಕ್ತ ನಾಳೆಯಿಂದ ಲಾಲ್ ಬಾಗ್ ಫಲ ಪುಷ್ಪ ಪ್ರದರ್ಶನ ನಡೆಯಲಿದೆ. ಜನವರಿ 14ರ ನಾಳೆಯಿಂದ ಜನವರಿ.26ರವರೆಗೆ ನಡೆಯಲಿದೆ. ಈ ಕುರಿತಂತೆ ತೋಟಗಾರಿಕಾ ಇಲಾಖೆಯಿಂದ ಮಾಹಿತಿ ನೀಡಿದ್ದು, ಜನವರಿ.14ರಿಂದ 26ರವರೆಗೆ ಲಾಲ್ ಬಾಗ್ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ. 3.2 ಕೋಟಿದಿಂದ ಆಯೋಜಿಸಲಾಗಿದೆ. 35 ಲಕ್ಷಕ್ಕೂ ಹೆಚ್ಚು ಪ್ರದರ್ಶನಕ್ಕೆ ಹೂವುಗಳನ್ನು ಬಳಕೆ ಮಾಡಲಾಗಿದೆ. 136 ಉದ್ಯಾನದಲ್ಲಿ ಸಿಸಿಟಿವಿ ಸುರಕ್ಷತೆಗಾಗಿ ಅಳವಡಿಸಲಾಗಿದೆ ಎಂದಿದೆ. ಲಾಲ್ ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ವಯಸ್ಕರಿಗೆ 80 ರೂಪಾಯಿ, ರಜಾ ದಿನಗಳಲ್ಲಿ 100 ರುಪಾಯಿ ಹಾಗೂ ಮಕ್ಕಳಿಗೆ 30 ರೂಪಾಯಿ ನಿಗದಿ ಪಡಿಸಲಾಗಿದೆ. ಸಮವಸ್ತ್ರ ಧರಿಸಿ ಬರುವ ಎಲ್ಲಾ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ ಇರಲಿದೆ ಎಂದು ತಿಳಿಸಿದೆ. ನಾಳೆಯಿಂದ ಆರಂಭಗೊಳ್ಳುತ್ತಿರುವಂತ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನವು ಬೆಳಗ್ಗೆ 6ರಿಂದ ಸಂಜೆ 7ರವರೆಗೆ ಇರಲಿದೆ. ಟಿಕೆಟ್ ಗಳನ್ನು ಲಾಲ್ ಬಾಗ್ ಗೇಟ್ ನಲ್ಲಿನ ಟಿಕೆಟ್ ಕೌಂಟರ್ ನಲ್ಲಿ ಖರೀದಿಸಬಹುದಾಗಿ ಎಂದಿದೆ. https://twitter.com/KarnatakaVarthe/status/2011009341835657249














