Subscribe to Updates
Get the latest creative news from FooBar about art, design and business.
Author: kannadanewsnow09
ಮಂಡ್ಯ : ಜುಲೈ 28 ರಂದು ಮದ್ದೂರು ಪಟ್ಟಣದಲ್ಲಿ ಹಮ್ಮಿಕೊಂಡಿರುವ ಸಾಧನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಭಾಗವಹಿಸಲಿದ್ದು, ಹೀಗಾಗಿ ತಾಲೂಕಿನ ಜನತೆ ನಿರೀಕ್ಷೆಗೂ ಮೀರಿ ಅಭೂತಪೂರ್ವ ಯಶಸ್ವಿಗೊಳಿಸಬೇಕೆಂದು ಶಾಸಕ ಕೆ.ಎಂ.ಉದಯ್ ಮನವಿ ಮಾಡಿದರು. ಮದ್ದೂರು ಪಟ್ಟಣದ ಶಿವಪುರದ ಶ್ರೀ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಸಮಾವೇಶದ ಹಿನ್ನೆಲೆಯಲ್ಲಿ ಕರೆಯಲಾಗಿದ್ದ ತಾಲೂಕು ಮಟ್ಟದ ಕಾರ್ಯಕರ್ತರ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಇತಿಹಾಸದಲ್ಲಿಯೇ ಮೊದಲನೇ ಬಾರಿಗೆ 1300 ಕೋಟಿ ರೂ ಗಳಿಗೂ ಹೆಚ್ಚು ಅನುದಾನವನ್ನು ತಂದಿದ್ದೇನೆ. ಅದಕ್ಕಾಗಿ ಸಾಧನಾ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ನೇತೃತ್ವದಲ್ಲಿ ಹಮ್ಮಿಕೊಂಡಿದ್ದು, ಇದು ನಮ್ಮ ತಾಲೂಕಿನ ಹೆಮ್ಮೆ ಎಂದರು. ಅಷ್ಟೇ ಅಲ್ಲದೇ ನೂತನ ನ್ಯಾಯಾಲಯದ ಕಟ್ಟಡ ನಿರ್ಮಾಣ ಕಾಮಗಾರಿ, ಸಾರ್ವಜನಿಕ ಆಸ್ಪತ್ರೆಯ ಉನ್ನತೀಕರಣ ಕಾಮಗಾರಿ ಸೇರಿದಂತೆ ಹಲವಾರು ಇನ್ನಿತರೆ ಕಾಮಗಾರಿಗಳು ಮುಂದಿನ ದಿನಗಳಲ್ಲಿ ನಡೆಯಲಿದ್ದು, ಇಂತಹ ಅಭೂತಪೂರ್ವ ಕಾರ್ಯಕ್ರಮವು ನಮ್ಮ ತಾಲೂಕಿನಲ್ಲಿ ನಡೆಯುತ್ತಿರುವುದು ನಮ್ಮ ಹೆಮ್ಮಯೆಂದು ಮನಗಂಡು ತಾಲೂಕಿನ ಸಾರ್ವಜನಿಕರು ಸ್ವ ಇಚ್ಛೆಯಿಂದ ಸಾಮಾವೇಶಕ್ಕೆ…
ನವದೆಹಲಿ: ದೆಹಲಿ-ಎನ್‌ಸಿಆರ್ ಭೂಕಂಪನಲ್ಲಿ ಎರಡು ದಿನಗಳಲ್ಲಿ ಎರಡನೇ ಭೂಕಂಪ ಸಂಭವಿಸಿದೆ. ಅದರ ಹತ್ತಿರದ ನಗರಗಳಲ್ಲಿ ಮತ್ತೆ ಕಂಪನದ ಅನುಭವವಾಗಿದೆ. ಗುರುವಾರದಂದು ಹರಿಯಾಣದ ಜಜ್ಜರ್ ಬಳಿ 4.4 ತೀವ್ರತೆಯ ಭೂಕಂಪ ಸಂಭವಿಸಿದ್ದು, ದೆಹಲಿ-ಎನ್‌ಸಿಆರ್ ಪ್ರದೇಶದಾದ್ಯಂತ ಕಂಪನ ಉಂಟಾಗಿದೆ. ಕೇಂದ್ರಬಿಂದು ಜಜ್ಜರ್‌ನಿಂದ ಈಶಾನ್ಯಕ್ಕೆ 3 ಕಿ.ಮೀ ಮತ್ತು ದೆಹಲಿಯಿಂದ ಪಶ್ಚಿಮಕ್ಕೆ 51 ಕಿ.ಮೀ ದೂರದಲ್ಲಿದೆ. ಬೆಳಿಗ್ಗೆ 9.04 ಕ್ಕೆ 10 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಈ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. https://kannadanewsnow.com/kannada/it-is-more-important-to-give-a-voice-power-to-speak-than-what-the-party-has-given-deputy-chief-minister-dk-shivakumar/ https://kannadanewsnow.com/kannada/good-news-for-state-workers-smart-cards-to-be-distributed-tomorrow/
ಕಲಬುರಗಿ: ಹಣ ನೀಡುವಂತೆ ಬೇಡಿಕೆ ಇಟ್ಟಿರುವ ಪರಿಣಾಮ ಪಿಎಸ್‌ಐ ಪರಶುರಾಮ ಆತ್ಮಹತ್ಯೆ ಪ್ರಕರಣ ಮಾಸುವ ಮುನ್ನವೇ ಯಾದಗಿರಿ ಡಿವೈಎಸ್ಪಿ ಹುದ್ದೆಗೆ ವರದಿ ಮಾಡಿಕೊಳ್ಳದಂತೆ ಅಡ್ಡಿಪಡಿಸಿರುವ ವಿರುದ್ಧ ಮಾಜಿ ಶಾಸಕ, ಬಿಜೆಪಿ ವಿಭಾಗೀಯ ಪ್ರಭಾರಿ ರಾಜಕುಮಾರ ಪಾಟೀಲ್ ತೇಲ್ಕೂರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿವೈಎಸ್ಪಿ ಹುದ್ದೆಯ ತರಬೇತಿ ಪೂರ್ಣಗೊಳಿಸಿ ಯಾದಗಿರಿಯಲ್ಲಿ ಡಿವೈಎಸ್ಪಿ ಹುದ್ದೆಯ ಕಾರ್ಯಭಾರದ ಕರ್ತವ್ಯದ ವರದಿ ಮಾಡಿಕೊಳ್ಳದಿರುವಂತೆ ಒತ್ತಡ ಹಾಕಿರುವುದನ್ನು ಗಂಭೀರವಾಗಿ ಪರಿಗಣನೆಗೆ ತೆಗೆದುಕೊಂಡು ಮತ್ತೊಂದು ದುರಂತಕ್ಕೆ ಅವಕಾಶ ಮಾಡಿಕೊಡದೇ ತಕ್ಷಣವೇ ಕರ್ತವ್ಯ ಹಾಜರಾಗುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಮಾಜಿ ಶಾಸಕರು ಆಗ್ರಹಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ಧರಾಮಯ್ಯ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ ಮೋಹನ್ ಅವರಿಗೆ ಪತ್ರ ಬರೆದಿರುವ ತೇಲ್ಕೂರ, ಜೇವರ್ಗಿ ತಾಲೂಕಿನ ವಿಜಯಕ್ರಾಂತಿ ಪ್ರತಿಭಾನ್ವಿತೆ. ಸ್ಪರ್ಧಾತ್ಮಕಾ ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲೇ ನೇರವಾಗಿ ಡಿವೈಎಸ್ಪಿಯಾಗಿದ್ದಾರೆ. ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದರಿಂದ ತೆರವು ಇದ್ದ ಯಾದಗಿರಿ ಡಿವೈಎಸ್ಪಿ ಹುದ್ದೆಯ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವಂತೆ ಮಹಾನಿರ್ದೇಶಕರು…
ಜೀವನದಲ್ಲಿ ವಿಪರೀತ ಕಷ್ಟವಿದ್ದರೆ ಆಂಜನೇಯ ಸ್ವಾಮಿಗೆ ಈ ವಸ್ತುಗಳನ್ನು ಕೊಡುತ್ತೇನೆ ಎಂದು ಹರಕೆ ಮಾಡಿಕೊಳ್ಳಿ ಮೂರು ವಾರಗಳಲ್ಲಿ ನಿಮ್ಮ ಕೆಲಸ ಆಗುತ್ತದೆ !!! ಇನ್ನು ಜೀವನದಲ್ಲಿ ಕಷ್ಟಗಳು ಇದ್ದರೆ,ಶ್ರೀ ಆಂಜನೇಯ ಸ್ವಾಮಿಗೆ ಈ ರೀತಿಯಾಗಿ ಹರಕೆ ಮಾಡಿಕೊಂಡರೆ ,ಜೀವನದಲ್ಲಿ ಇರುವಂತಹ ಇಂತಹ ಕಷ್ಟಗಳುಇದು ಯಾವ ರೀತಿಯ ಕಷ್ಟವೇ ಆದರೂ ಸರಿ ಆಂಜನೇಯಸ್ವಾಮಿ ಕೃಪೆಯಿಂದ ಎಲ್ಲಾ ಕಷ್ಟಗಳು ಜೀವನದಲ್ಲಿ ಪರಿಹಾರವಾಗುತ್ತದೆ. ಪಂಡಿತ್ ವಿದ್ಯಾಧರ್ ನಕ್ಷತ್ರಿ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಶ್ರೀ…
ಬೆಂಗಳೂರು: “ಪಕ್ಷ ನನಗೆ ಸಂಘಟನೆ ಹಾಗೂ ಡಿಸಿಎಂ ಹುದ್ದೆ ನೀಡಿದ್ದು, ನನ್ನ ಗಮನ ಪಕ್ಷ ಹಾಗೂ ಸರ್ಕಾರದ ಹಿತಾಸಕ್ತಿ ಕಾಪಾಡುವುದರತ್ತ ಮಾತ್ರ ಇದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ನಾಯಕತ್ವ ಬದಲಾವಣೆ ವಿಚಾರವಾಗಿ ಹೈಕಮಾಂಡ್ ಹೇಳುವ ಮುನ್ನ ಸಿದ್ದರಾಮಯ್ಯ ಅವರು ಹೇಳಿಕೆ ಕೊಟ್ಟಿರುವುದು ಎಷ್ಟು ಸರಿ ಎಂದು ಕೇಳಿದಾಗ, “ನೀವು ನನಗೆ ಹೇಗೆ ತಿರುಗಿಸಿ ಕೇಳಿದರೂ ನಾನಂತೂ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ನಿಮಗೆ ಬಲಿಯಾಗುವುದಿಲ್ಲ. ನಿಮ್ಮ ಪ್ರಶ್ನೆಗಳಲ್ಲೇ ಉತ್ತರವಿದೆ. ಪಕ್ಷ ಕೊಟ್ಟಿರುವ ಜವಾಬ್ದಾರಿ ಮುಂದುವರಿಸಿಕೊಂಡು ಹೋಗುತ್ತೇನೆ. ಮಲ್ಲಿಕಾರ್ಜುನ ಖರ್ಗೆ ಅವರು ನಮಗೆ ಧೀಕ್ಷೆ ನೀಡಿದ್ದು, ನಾವೆಲ್ಲರೂ ಅದನ್ನು ಸಂತೋಷವಾಗಿ ಸ್ವೀಕರಿಸಿದ್ದೇವೆ. ಇದರ ಹೊರತಾಗಿ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ” ಎಂದು ತಿಳಿಸಿದರು. ಹೈಕಮಾಂಡ್ ಭೇಟಿಯಾಗಿ ಯಾವೆಲ್ಲಾ ರಾಜಕೀಯ ಚರ್ಚೆ ನಡೆಯಿತು ಎಂದು ಕೇಳಿದಾಗ, “ನಾವು ಸುರ್ಜೆವಾಲ ಅವರ…
ನವದೆಹಲಿ: ಒಂದು ವೇಳೆ ನಿಮ್ಮ ಖಾಸಗಿ ಪೋಟೋ ಮತ್ತು ವೀಡಿಯೋ ಬಹಿರಂಗವಾದರೇ ಏನು ಮಾಡಬೇಕು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಮುಂದಿದೆ ಓದಿ.. ಮದ್ರಾಸ್ ಹೈಕೋರ್ಟ್‌ನಲ್ಲಿ, ನ್ಯಾಯಮೂರ್ತಿ ಎನ್ ಆನಂದ್ ವೆಂಕಟೇಶ್ ಅವರು ಮಹಿಳಾ ವಕೀಲರೊಬ್ಬರು ತಮ್ಮ ಒಪ್ಪಿಗೆಯಿಲ್ಲದೆ ತಮ್ಮ ಖಾಸಗಿ ವೀಡಿಯೊಗಳನ್ನು ಆನ್‌ಲೈನ್‌ನಲ್ಲಿ ಸೋರಿಕೆ ಮಾಡಲಾಗುತ್ತಿದೆ ಎಂಬ ಅರ್ಜಿಯನ್ನು ಆಲಿಸಿದರು. ಕಾಲೇಜಿನಲ್ಲಿದ್ದಾಗ ಮಾಜಿ ಸಂಗಾತಿಯೊಬ್ಬರು ರಹಸ್ಯವಾಗಿ ರೆಕಾರ್ಡ್ ಮಾಡಿದ ಈ ದೃಶ್ಯಗಳು ವರ್ಷಗಳ ನಂತರ ಮತ್ತೆ ಕಾಣಿಸಿಕೊಂಡವು ಮತ್ತು ಸಾಮಾಜಿಕ ಮಾಧ್ಯಮ ಮತ್ತು ಸಂದೇಶ ಅಪ್ಲಿಕೇಶನ್‌ಗಳಲ್ಲಿ ಪ್ರಸಾರವಾದವು. “ಮಹಿಳೆ ತೀವ್ರ ಮಾನಸಿಕ ಯಾತನೆಯನ್ನು ಅನುಭವಿಸುತ್ತಿದ್ದಾಳೆ” ಎಂದು ನ್ಯಾಯಾಧೀಶರು ಹೇಳಿದರು. ನ್ಯಾಯಮೂರ್ತಿಗಳು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ 48 ಗಂಟೆಗಳ ಒಳಗೆ ವಿಷಯವನ್ನು ಪತ್ತೆಹಚ್ಚಿ ತೆಗೆದುಹಾಕುವಂತೆ ಆದೇಶಿಸಿದರು. ಜುಲೈ 14 ರೊಳಗೆ ಅನುಸರಣಾ ವರದಿಯನ್ನು ಕೋರಿದರು. ಅವರು ತಮಿಳುನಾಡು ಪೊಲೀಸ್ ಮುಖ್ಯಸ್ಥರನ್ನು ಸಹ ಕರೆಸಿ, ಅಂತಹ ಡಿಜಿಟಲ್ ನಿಂದನೆಯ ವಿರುದ್ಧ ವ್ಯವಸ್ಥಿತ ಸುರಕ್ಷತೆಗಳ ತುರ್ತು ಅಗತ್ಯವನ್ನು ಒತ್ತಿ ಹೇಳಿದರು.…
ಬೆಂಗಳೂರು:“ವಕೀಲರ ಸಂಘಕ್ಕೆ ಪ್ರತಿ ವರ್ಷ ರೂ.5 ಲಕ್ಷವನ್ನು ಕೆಂಪೇಗೌಡ ಜಯಂತಿ ಆಚರಣೆಗೆ ನೀಡಲಾಗುವುದು. ಸಂಘದ ಉಪಯೋಗಕ್ಕಾಗಿ ರೂ.5 ಕೋಟಿಯನ್ನು ಜಿಬಿಎಯಿಂದ ನೀಡಲಾಗುವುದು. ಕೆಂಪೇಗೌಡ ಪ್ರಶಸ್ತಿಯನ್ನು ಕಡ್ಡಾಯವಾಗಿ ಇಬ್ಬರು ವಕೀಲರಿಗೆ ಪ್ರತಿವರ್ಷ ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಬೆಂಗಳೂರು ವಕೀಲರ ಸಂಘದಿಂದ ಶುಕ್ರವಾರ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಉದ್ಘಾಟಿಸಿ ಶಿವಕುಮಾರ್ ಅವರು ಮಾತನಾಡಿದರು. “ಒಂದು ವಾರದೊಳಗೆ ಸಂಘದ ಕಟ್ಟಡಕ್ಕೆ ಸೋಲರ್ ಗ್ರಿಡ್ ವ್ಯವಸ್ಥೆಗೆ ಪರಿಶೀಲನೆ ನಡೆಸಲಾಗುವುದು. ಇದರ ಬಗ್ಗೆ ಹಿಂದೆಯೇ ಮಾತುಕಥೆಯಾಗಿತ್ತು. ನೀವು ಅಧಿಕಾರಿಗಳ ಹಿಂದೆ ಬಿದ್ದು ಕೆಲಸ ಮಾಡಿಸಿಕೊಳ್ಳಬೇಕು. ಜೊತೆಗೆ ಈ ಸಂಸ್ಥೆಗೆ ಭೂಮಿ ಬೇಕು ಎಂದು ಹೇಳಿದ್ದೀರಿ. ಆದ ಕಾರಣಕ್ಕೆ 10 ಎಕರೆ ಕಂದಾಯ ಭೂಮಿಯನ್ನು ಲಭ್ಯತೆ ನೋಡಿಕೊಂಡು ನೀಡಲಾಗುವುದು. ನಗರದ 20 ಕಿಮೀ ವ್ಯಾಪ್ತಿಯಲ್ಲಿ ಭೂಮಿ ಇದ್ದರೆ ನೀವೆ ಹುಡುಕಿ. ನಾವು ನೀಡುವ ಹಣವನ್ನು ನಿಮಗೆ ಉಪಯೋಗವಾಗುವ ಉತ್ತಮ ಕೆಲಸಗಳಿಗೆ ವಿನಿಯೋಗಿಸಿ” ಎಂದರು. ಖುರ್ಚಿ ಸಿಗುವುದೇ ಕಷ್ಟ. ಖುರ್ಚಿ ಸಿಕ್ಕಾಗ ತೆಪ್ಪಗೆ ಬಂದು ಕುಳಿತುಕೊಳ್ಳಬೇಕು…
ಮೈಸೂರು: ರಾಜ್ಯ ರಾಜಕೀಯದಲ್ಲಿ ಸೆಪ್ಟೆಂಬರ್ ಬಳಿಕ ಯಾವುದೇ ಕ್ರಾಂತಿ ಇರುವುದಿಲ್ಲ. ಎಲ್ಲವೂ ಶಾಂತವಾಗಿರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಮೂರನೇ ಆಷಾಢ ಶುಕ್ರವಾರದ ಅಂಗವಾಗಿ ಕುಟುಂಬ ಸಮೇತ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಬಳಿಕ ಚಾಮುಂಡಿ ಬೆಟ್ಟದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಐದು ವರ್ಷಗಳ ಕಾಲ ನಾನೇ ಸಿಎಂ ಎಂದು ಹೇಳಿದ ಮೇಲೆ ಬೇರೆ ರೀತಿಯ ಚರ್ಚೆಗೆ ಅವಕಾಶವೇ ಇಲ್ಲ. ಈ ಬಗ್ಗೆ ಪದೆ ಪದೇ ಮಾತನಾಡುವುದು ಸರಿ ಇಲ್ಲ ಎಂದರು. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈಗಾಗಲೇ ಮಾತನಾಡಿದ್ದು, ಈ ಬಗ್ಗೆ ಮಾತನಾಡುವಷ್ಟು ದೊಡ್ಡವರು ನಾವಲ್ಲ. ನಮ್ಮದು ರಾಷ್ಟ್ರೀಯ ಪಕ್ಷ. ಏನೇ ಇದ್ದರೂ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಸಕಾಲಕ್ಕೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯ ಮೂರು ತಿಂಗಳಿಗೊಮ್ಮೆ ಗೃಹಲಕ್ಷ್ಮಿ ಯೋಜನೆಯ ಹಣ…
ನವದೆಹಲಿ: ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರನ್ನು ಒಳಗೊಂಡ ಆಕ್ಸಿಯಮ್ -4 (ಆಕ್ಸ್ -4) ಮಿಷನ್ ಜುಲೈ 14 ರಂದು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ (ಐಎಸ್ಎಸ್) ಹಿಂತಿರುಗಲಿದೆ ಎಂದು ಕಂಪನಿಯು ಸಾಮಾಜಿಕ ಮಾಧ್ಯಮದಲ್ಲಿ ಪ್ರಕಟಿಸಿದೆ. “ಅನುಕೂಲಕರ ಹವಾಮಾನ ಪರಿಸ್ಥಿತಿಗಳು ಬಾಕಿ ಇರುವುದರಿಂದ, ಆಕ್ಸಿಯಮ್ ಮಿಷನ್ 4 (ಆಕ್ಸ್-4) ಸಿಬ್ಬಂದಿ ಜುಲೈ 14, ಸೋಮವಾರ ಬೆಳಿಗ್ಗೆ 7:05 ET (ಸಂಜೆ 4.35 IST) ಕ್ಕೆ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಹೊರಹೋಗಲಿದ್ದಾರೆ” ಎಂದು ಆಕ್ಸಿಯಮ್ ಸ್ಪೇಸ್ ಇಂಕ್ X ನಲ್ಲಿ ತಿಳಿಸಿದೆ. ಕಮಾಂಡರ್ ಪೆಗ್ಗಿ ವಿಟ್ಸನ್, ಪೈಲಟ್ ಶುಭಾನ್ಶು “ಶುಕ್ಸ್” ಶುಕ್ಲಾ ಮತ್ತು ಮಿಷನ್ ಸ್ಪೆಷಲಿಸ್ಟ್‌ಗಳಾದ ಸ್ಲಾವೋಸ್ಜ್ “ಸುವೇವ್” ಉಜ್ನಾನ್ಸ್ಕಿ-ವಿಸ್ನಿವ್ಸ್ಕಿ ಮತ್ತು ಟಿಬೋರ್ ಕಪು “ಕಕ್ಷೆಯಲ್ಲಿ ತಮ್ಮ ಕೊನೆಯ ದಿನಗಳನ್ನು ಸದುಪಯೋಗಪಡಿಸಿಕೊಳ್ಳುತ್ತಿದ್ದಾರೆ, ಬಾಹ್ಯಾಕಾಶ ಪರಿಶೋಧನೆಯ ಭವಿಷ್ಯವನ್ನು ರೂಪಿಸುವ ಮತ್ತು ಭೂಮಿಯ ಮೇಲಿನ ಜೀವನವನ್ನು ಸುಧಾರಿಸುವ ವ್ಯಾಪಕ ಶ್ರೇಣಿಯ ಪ್ರಯೋಗಗಳನ್ನು ಮುಂದಕ್ಕೆ ತಳ್ಳುತ್ತಿದ್ದಾರೆ” ಎಂದು ಯುಎಸ್ ಮೂಲದ ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ. ಈ…
ಬೆಂಗಳೂರು: ಯಲಹಂಕ ವಲಯ ವ್ಯಾಪ್ತಿಯಲ್ಲಿ ಕಸದ ಸಮಸ್ಯೆ ನಿವಾರಣೆ ಮಾಡುವ ಉದ್ದೇಶದಿಂದ ಹೆಚ್ಚುವರಿಯಾಗಿ ವಾಹನಗಳ ವ್ಯವಸ್ಥೆ ಮಾಡಲಾಗುವುದೆಂದು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ತಿಳಿಸಿದರು. ಯಲಹಂಕ ವಲಯ ವ್ಯಾಪ್ತಿಯಲ್ಲಿ “ಮುಖ್ಯ ಆಯುಕ್ತರ ನಡೆ ವಲಯದ ಕಡೆ” ಕಾರ್ಯಕ್ರಮದ ಭಾಗವಾಗಿ ಮಿನಿ ವಿಧಾನಸೌಧದ ಪಾಲಿಕೆ ಸಭಾಂಗಣದಲ್ಲಿ ಇಂದು ಸಾರ್ವಜನಿಕರೊಂದಿಗೆ ಅಹವಾಲುಗಳನ್ನು ಸ್ವೀಕರಿಸುವ ವೇಳೆ ಮಾತನಾಡಿದ ಅವರು, ಯಲಹಂಕ ವಲಯ ವ್ಯಾಪ್ತಿಯಲ್ಲಿ ಕಸ ಸಂಗ್ರಹಿಸಲು 50 ಆಟೋ ಟಿಪ್ಪರ್‌ಗಳು ಹಾಗೂ 7 ಕಾಂಪ್ಯಾಕ್ಟರ್ ಗಳನ್ನು ಹೆಚ್ಚುವರಿಯಾಗಿ ನೀಡಲಾಗುವುದೆಂದು ತಿಳಿಸಿದರು. ಪಶು ಚಿಕಿತ್ಸಾಲಯ ಪ್ರಾರಂಭಿಸಿ: ಯಲಹಂಕ ವಲಯ ವ್ಯಾಪ್ತಿಯಲ್ಲಿ ಪ್ರಾಣಿಗಳ ಚಿಕಿತ್ಸೆಗಾಗಿ ದೊಡ್ಡ ಬೆಟ್ಟಹಳ್ಳಿಯಲ್ಲಿ ಪಶು ಚಿಕಿತ್ಸಾಲಯಕ್ಕಾಗಿ ಜಾಗ ಮೀಸಲಿರಿಸಿದ್ದು, ಚಿಕಿತ್ಸಾಲಯಕ್ಕಾಗಿ ಅಗತ್ಯ ಕಾಮಗಾರಿ ಕೈಗೊಂಡು, ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಿ ಪಶು ಚಿಕಿತ್ಸಾಲಯವನ್ನು ಪ್ರಾರಂಭಿಸಲು ತಿಳಿಸಿದರು. ನಿವಾಸಿ ಸಂಘಗಳ ಜೊತೆ ತಿಂಗಳಿಗೊಮ್ಮೆ ಸಭೆ ನಡೆಸಿ: ಸ್ಥಳೀಯ ಸಮಸ್ಯೆಗಳನ್ನು ನಿವಾರಿಸುವ ಉದ್ದೇಶದಿಂದ ತಿಂಗಳಿಗೊಮ್ಮೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳ ಜೊತೆ ಸಭೆ ನಡೆಸಿ, ಸ್ಥಳೀಯವಾಗಿ ಇರುವ ಸಮಸ್ಯೆಗಳನ್ನು…