Author: kannadanewsnow09

ಬೆಂಗಳೂರು: ನಮ್ಮ ಮೆಟ್ರೋಗೆ “ಬಸವ ಮೆಟ್ರೋ” ಎಂದು ನಾಮಕರಣ ಮಾಡುವ ಬಗ್ಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತೇವೆ. ಇದು ಪೂರ್ಣವಾಗಿ ರಾಜ್ಯ ಸರ್ಕಾರದ ಯೋಜನೆ ಆಗಿದ್ದರೆ ಇವತ್ತೇ “ಬಸವ ಮೆಟ್ರೋ” ಎಂದು ಘೋಷಿಸಿ ಬಿಡುತ್ತಿದ್ದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ವಿಶ್ವಗುರು ಬಸವಣ್ಣ ಅವರನ್ನು “ಕರ್ನಾಟಕ ಸಾಂಸ್ಕೃತಿಕ ನಾಯಕ” ಎಂದು ಘೋಷಿಸಿದ ವರ್ಷಾಚರಣೆ ಸಂದರ್ಭದಲ್ಲಿ ಆಯೋಜಿಸಲಾಗಿದ್ದ ‘ಬಸವ ಸಂಸ್ಕೃತಿ ಅಭಿಯಾನ-2025’ ರ ಸಮಾರೋಪ ಸಮಾರಂಭದಲ್ಲಿ ಶರಣ ಸಂಸ್ಕೃತಿಯ 301 ಶರಣರು, ಗುರುಗಳು, ಸ್ವಾಮೀಜಿಗಳ ಸಾನಿದ್ಯದಲ್ಲಿ ಸಮುದಾಯದ ಸುಮಾರು 2 ಲಕ್ಷಕ್ಕೂ ಅಧಿಕ ಮಂದಿಯ ಸಮ್ಮುಖದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ನಾನು ಬಸವಣ್ಣನವರ ಅಭಿಮಾನಿ. ಬಸವ ತತ್ವದಲ್ಲಿ‌ ನಂಬಿಕೆ-ಬದ್ದತೆ ಇಟ್ಟುಕೊಂಡಿದ್ದೀನಿ. ಅಂದಿಗಲ್ಲ-ಇಂದಿಗಲ್ಲ-ಮುಂದೆ ಎಂದೆಂದಿಗೂ ಬಸವ ತತ್ವ ಶಾಶ್ವತ ಮತ್ತು ಪ್ರಸ್ತುತ ಎನ್ನುವುದು ನನ್ನ ನಂಬಿಕೆ. ಸಹಬಾಳ್ವೆ ಮತ್ತು ಸಹಿಷ್ಣತೆಯನ್ನು ಬಸವಣ್ಣನವರು ಬದುಕಿನುದ್ದಕ್ಕೂ ಸಾರಿದರು. ನಾನೂ ಇದನ್ನು ಪಾಲಿಸುತ್ತೇನೆ ಎಂದರು. ಬಸವ ಜಯಂತಿಯ ದಿನವೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಾನು ಅದೇ ದಿನ ಎಲ್ಲರಿಗೂ…

Read More

ಬೆಂಗಳೂರು: ನಗರದಲ್ಲಿ ಬೆಂಗಳೂರು ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ನಾಕಾ ಚೆಕ್ ಪಾಯಿಂಟ್ ನಿಂದಾಗಿ ನಿಯಮ ಉಲ್ಲಂಘನೆ ಹಾಗೂ ಸೂಕ್ತ ದಾಖಲೆಗಳಿಲ್ಲದ 250 ವಾಹನಗಳ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತಂತೆ ಬೆಂಗಳೂರು ನಗರ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಅಕ್ಟೋಬರ್ 3, 4ರಂದು ಬೆಂಗಳೂರು ನಗರದಾಧ್ಯಂತ ಪ್ರದೇಶ ಆದಿಪತ್ಯ ಕಾರ್ಯಾಚರಣೆ ಹಾಗೂ ನಾಕಾ ಚೆಕ್ ಪಾಯಿಂಟ್ ಗಳ ಕರ್ತವ್ಯಕ್ಕೆ ಸುಮಾರು 1000 ಅಧಿಕಾರಿಗಳು, ಸ್ಬಬಂದಿಗಳನ್ನು ನೇಮಿಸಲಾಗಿತ್ತು ಎಂದಿದೆ. ಎರಡು ದಿನ ವಿಶೇಷ ಕಾರ್ಯಾಚರಣೆ ನಡೆಸಿ ಸುಮಾರು 5000ಕ್ಕೂ ಹೆಚ್ಚು ವಾಹನಗಳ್ನು ತಪಾಸಣೆ ಮಾಡಿದ್ದಾರೆ. ಈ ವೇಳೆ ನಿಯಮ ಉಲ್ಲಂಘನೆ ಹಾಗೂ ಸೂಕ್ತ ದಾಖಲೆಗಳಿಲ್ಲದ ಕಾರಣ 250 ವಾಹನಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ ಎಂದು ಹೇಳಿದೆ. ಇನ್ನೂ ಈ ಕಾರ್ಯಾಚರಣೆಯಲ್ಲಿ ಒಟ್ಟು 11 ಕಳವು ವಾಹನಗಳನ್ನು ಪತ್ತೆ ಮಾಡಿ, ವಶಕ್ಕೆ ಪಡೆಯಲಾಗಿದೆ. ಅಲ್ಲದೇ ನಾರ್ಕೋಟಿಕ್ಸ್ ಸಂಬಂಧ 16 ಪ್ರಕರಣಗಳನ್ನು ದಾಖಲಿಸಲಾಗಿದೆ. ಮದ್ಯಪಾನ ಮಾಡಿ ವಾಹನ ಚಲಾಯಿಸಿದವರ ವಿರುದ್ಧ ಹಾಗೂ ಸಂಚಾರ ನಿಯಮ ಉಲ್ಲಂಘನೆ ಮಾಡಿದವರ…

Read More

ಹಿಮಾಚಲ ಪ್ರದೇಶ: ಡಾರ್ಜಿಲಿಂಗ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆ ಮತ್ತು ಭೂಕುಸಿತದ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ ಮತ್ತು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ. “ಡಾರ್ಜಿಲಿಂಗ್‌ನಲ್ಲಿ ಸೇತುವೆ ಅಪಘಾತದಿಂದ ಉಂಟಾದ ಜೀವಹಾನಿಯಿಂದ ತೀವ್ರ ನೋವುಂಟಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ” ಎಂದು ಮೋದಿ X ನಲ್ಲಿ ಹೇಳಿದ್ದಾರೆ. https://twitter.com/narendramodi/status/1974774223659749377 “ಡಾರ್ಜಿಲಿಂಗ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆ ಮತ್ತು ಭೂಕುಸಿತದ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲು ನಾವು ಬದ್ಧರಾಗಿದ್ದೇವೆ” ಎಂದು ಪ್ರಧಾನಿ ಹೇಳಿದರು. ಪಶ್ಚಿಮ ಬಂಗಾಳದ ಉತ್ತರ ಭಾಗದ ಡಾರ್ಜಿಲಿಂಗ್ ಬೆಟ್ಟಗಳಲ್ಲಿ ಶನಿವಾರ ನಿರಂತರ ಭಾರೀ ಮಳೆಯಿಂದಾಗಿ ಹಲವಾರು ಭೂಕುಸಿತಗಳು ಸಂಭವಿಸಿ, ಮನೆಗಳು ಕೊಚ್ಚಿಹೋಗಿವೆ, ರಸ್ತೆಗಳಿಗೆ ಹಾನಿಯಾಗಿದೆ ಮತ್ತು ಹಲವಾರು ದೂರದ ಹಳ್ಳಿಗಳು ಸಂಪರ್ಕ ಕಡಿತಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.…

Read More

ಬೆಂಗಳೂರು: ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಗೆ ತೆರಳಿದಂತ ವೇಳೆಯಲ್ಲಿ ಬೆಂಗಳೂರಲ್ಲಿ ಕುರಿ, ಕೋಳಿ, ಚಿನ್ನ, ವಾಚ್ ಎಷ್ಟು ಇದೆ ಎಂದು ಕೇಳಬಾರದು. ಬೆಂಗಳೂರಲ್ಲಿ ಆ ರೀತಿಯಾಗಿ ಯಾವುದೇ ಗಣತಿದಾರರು ಕೇಳಬಾರದು ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಮೌಖಿಕವಾಗಿ ಖಡಕ್ ಸೂಚನೆ ನೀಡಿದ್ದಾರೆ ಎನ್ನಲಾಗುತ್ತಿದೆ. ಇಂದು ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಜೊತೆಗೆ ಮಾತನಾಡಿದಂತ ಅವರು,  ಯಾರೇ ಏನೇ ಆಕ್ಷೇಪಣೆ ಮಾಡಿದರೂ ಸಮೀಕ್ಷೆ ನಡೆಯುತ್ತದೆ. ಇಷ್ಟವಿದ್ದ ಪ್ರಶ್ನೆಗೆ ಉತ್ತರಿಸಿ, ಇಲ್ಲದಿದ್ದರೆ ಬೇಡ ಎಂದು ನ್ಯಾಯಾಲಯವೇ ಹೇಳಿದೆ. ಸಮೀಕ್ಷೆಗೆ ವಿರೋಧ ಮಾಡುವುದು ಸರಿಯಲ್ಲ ಎಂದರು. “ಈ ಹಿಂದಿನ ಗಣತಿ ಸರಿಯಿಲ್ಲ ಎಂದರು. ಅದಕ್ಕೆ ಹೊಸದಾಗಿ ಗಣತಿ ಮಾಡಲಾಗುತ್ತಿದೆ. ಎಲ್ಲರೂ ಇದಕ್ಕೆ ಸಹಕರಿಸಬೇಕು ಎಂದು ಮನವಿ ಮಾಡುತ್ತೇನೆ” ಎಂದರು. ಎರಡು ಮೂರು ದಿನಗಳಲ್ಲಿ ಸಮೀಕ್ಷೆ ಮುಗಿಯಲಿದೆಯೇ ಎಂದು ಕೇಳಿದಾಗ, “ಇದರ ಬಗ್ಗೆ ಸಂಬಂಧ ಪಟ್ಟ ಆಯೋಗದವರು ಆಲೋಚನೆ ಮಾಡುತ್ತಾರೆ” ಎಂದು ಉತ್ತರಿಸಿದರು. ವೈಯಕ್ತಿಕ ಮಾಹಿತಿಗಳನ್ನು ಕೇಳಲು ಹೋಗಬೇಡಿ “ಬೆಂಗಳೂರಿನ ನಾಗರೀಕರ ಬಳಿ ಕೋಳಿ, ಕುರಿ,…

Read More

ಬೆಂಗಳೂರು: ನಾವೆಲ್ಲರೂ ಶೂದ್ರರು. ಜಾತಿ ಯಾವುದಾದರೂ ಶೂದ್ರರೆಲ್ಲರೂ ಒಂದೇ.‌ ಚಲನೆ ಇಲ್ಲದ ಜಾತಿ ವ್ಯವಸ್ಥೆಯನ್ನು ವಿರೋಧಿಸಿ ಬಸವಣ್ಣ ಹೊಸ ಧರ್ಮವನ್ನೇ ಸ್ಥಾಪಿಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ವಿಶ್ವಗುರು ಬಸವಣ್ಣ ಅವರನ್ನು “ಕರ್ನಾಟಕ ಸಾಂಸ್ಕೃತಿಕ ನಾಯಕ” ಎಂದು ಘೋಷಿಸಿದ ವರ್ಷಾಚರಣೆ ಸಂದರ್ಭದಲ್ಲಿ ಆಯೋಜಿಸಲಾಗಿದ್ದ ‘ಬಸವ ಸಂಸ್ಕೃತಿ ಅಭಿಯಾನ-2025’ ರ ಸಮಾರೋಪ ಸಮಾರಂಭದಲ್ಲಿ ಶರಣ ಸಂಸ್ಕೃತಿಯ 301 ಶರಣರು, ಗುರುಗಳು, ಸ್ವಾಮೀಜಿಗಳ ಸಾನಿದ್ಯದಲ್ಲಿ ಸಮುದಾಯದ ಸುಮಾರು 2 ಲಕ್ಷಕ್ಕೂ ಅಧಿಕ ಮಂದಿಯ ಸಮ್ಮುಖದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ನಾನು ಬಸವಣ್ಣನವರ ಅಭಿಮಾನಿ. ಬಸವ ತತ್ವದಲ್ಲಿ‌ ನಂಬಿಕೆ-ಬದ್ದತೆ ಇಟ್ಟುಕೊಂಡಿದ್ದೀನಿ. ಅಂದಿಗಲ್ಲ-ಇಂದಿಗಲ್ಲ-ಮುಂದೆ ಎಂದೆಂದಿಗೂ ಬಸವ ತತ್ವ ಶಾಶ್ವತ ಮತ್ತು ಪ್ರಸ್ತುತ ಎನ್ನುವುದು ನನ್ನ ನಂಬಿಕೆ. ಸಹಬಾಳ್ವೆ ಮತ್ತು ಸಹಿಷ್ಣತೆಯನ್ನು ಬಸವಣ್ಣನವರು ಬದುಕಿನುದ್ದಕ್ಕೂ ಸಾರಿದರು. ನಾನೂ ಇದನ್ನು ಪಾಲಿಸುತ್ತೇನೆ ಎಂದರು. ಬಸವ ಜಯಂತಿಯ ದಿನವೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಾನು ಅದೇ ದಿನ ಎಲ್ಲರಿಗೂ ಬದುಕುವ ಸಮಾನ ಅವಕಾಶಗಳನ್ನು ಕಲ್ಪಿಸುವ ಬಸವಣ್ಣನವರ ಆಶಯಗಳನ್ನು ಈಡೇರಿಸುವ…

Read More

ಶಿವಮೊಗ್ಗ: ಜಿಲ್ಲೆಯ ಸಾಗರದ ಪ್ರಸಿದ್ಧ ಅಂಗಡಿ ಮಾಲೀಕರಿಗೆ ಖಾಸಗಿ ವೀಡಿಯೋ ವೈರಲ್ ಮಾಡೋದಾಗಿ ಬ್ಲಾಕ್ ಮೇಲ್ ಮಾಡಿ ಬರೋಬ್ಬರಿ 36 ಲಕ್ಷ ಪೀಕಿರುವಂತ ಘಟನೆ ಸಾಗರ ಪಟ್ಟಣದಲ್ಲಿ ನಡೆದಿದೆ. ಈ ಸಂಬಂಧ ಇಬ್ಬರ ವಿರುದ್ಧ FIR ದಾಖಲಾಗಿದ್ದು, ಆರೋಪಿಗಳಾದಂತ ಓರ್ವ ಯುವತಿ, ಆಕೆಯ ಬಾಯ್ ಫ್ರೆಂಡ್ ಅನ್ನು ಪೊಲೀಸರು ಬಂಧಿಸಿದ್ದಾರೆ.  ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ರಾಜಶ್ರೀ ಎಲೆಕ್ಟ್ರಾನಿಕ್ಸ್ ಅಂದ್ರೆ ತುಂಬಾನೇ ಪ್ರಸಿದ್ಧಿ. ಇಂತಹ ಅಂಗಡಿ ಮಾಲೀಕರಿಗೆ ಬ್ಲಾಕ್ ಮೇಲ್ ಮಾಡಿ ಅಂಗಡಿಯಲ್ಲೇ ಕೆಲಸ ಮಾಡುತ್ತಿದ್ದಂತ ಯುವತಿ ಹಾಗೂ ಬಾಯ್ ಫ್ರೆಂಡ್ ಹಂತ ಹಂತವಾಗಿ 36 ಲಕ್ಷ ಹಣ ಪಡೆದಿದ್ದಾರೆ. ಈ ಸಂಬಂಧ ಅಂಗಡಿ ಮಾಲೀಕರು ನೀಡಿದಂತ ದೂರಿನ ಅನ್ವಯ ಸಾಗರ ಪೇಟೆ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ 2023ರ ಕಲಂ 329(4), 308(2), 351(2) ಹಾಗೂ 3(5) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ‘FIR’ನಲ್ಲಿ ಏನಿದೆ.? ದಿನಾಂಕ:-01/10/2025 ರಂದು 9-30.ಎ.ಎಂ ಗಂಟೆಗೆ ಪಿರ್ಯಾದಿದಾರರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೇನೆಂದರೆ, ಪಿರ್ಯಾದಿದಾರರು…

Read More

ಶಿವಮೊಗ್ಗ: ಕಳೆದ ಅಕ್ಟೋಬರ್.5, 2025ರಂದು ಶಿವಮೊಗ್ಗದ ಆರ್.ಎಂ.ಎಲ್ ನಗರದಲ್ಲಿ ದುಷ್ಕರ್ಮಿಗಳ ಗುಂಪೊಂದು ನಡೆಸಿದ ದಾಳಿಯಲ್ಲಿ, ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ, ಸ್ಕ್ರ್ಯಾಪ್ ವ್ಯಾಪಾರಿ ಅಮ್ಜದ್(34) ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಈ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಐವರನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದು, ಇವರಲ್ಲಿ ಕೆಲವರು ಅಪ್ರಾಪ್ತ ವಯಸ್ಸಿನವರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Read More

ಬೆಂಗಳೂರು : ಯಾರೇ ಏನೇ ಆಕ್ಷೇಪಣೆ ಮಾಡಿದರೂ ಸಮೀಕ್ಷೆ ನಡೆಯುತ್ತದೆ. ಇಷ್ಟವಿದ್ದ ಪ್ರಶ್ನೆಗೆ ಉತ್ತರಿಸಿ, ಇಲ್ಲದಿದ್ದರೆ ಬೇಡ ಎಂದು ನ್ಯಾಯಾಲಯವೇ ಹೇಳಿದೆ. ಸಮೀಕ್ಷೆಗೆ ವಿರೋಧ ಮಾಡುವುದು ಸರಿಯಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಭಾನುವಾರ ಬೆಳಿಗ್ಗೆ ಪ್ರತಿಕ್ರಿಯೆ ನೀಡಿದರು. “ಈ ಹಿಂದಿನ ಗಣತಿ ಸರಿಯಿಲ್ಲ ಎಂದರು. ಅದಕ್ಕೆ ಹೊಸದಾಗಿ ಗಣತಿ ಮಾಡಲಾಗುತ್ತಿದೆ. ಎಲ್ಲರೂ ಇದಕ್ಕೆ ಸಹಕರಿಸಬೇಕು ಎಂದು ಮನವಿ ಮಾಡುತ್ತೇನೆ” ಎಂದರು. ಎರಡು ಮೂರು ದಿನಗಳಲ್ಲಿ ಸಮೀಕ್ಷೆ ಮುಗಿಯಲಿದೆಯೇ ಎಂದು ಕೇಳಿದಾಗ, “ಇದರ ಬಗ್ಗೆ ಸಂಬಂಧ ಪಟ್ಟ ಆಯೋಗದವರು ಆಲೋಚನೆ ಮಾಡುತ್ತಾರೆ” ಎಂದು ಉತ್ತರಿಸಿದರು. ವೈಯಕ್ತಿಕ ಮಾಹಿತಿಗಳನ್ನು ಕೇಳಲು ಹೋಗಬೇಡಿ “ಬೆಂಗಳೂರಿನ ನಾಗರೀಕರ ಬಳಿ ಕೋಳಿ, ಕುರಿ, ಒಡವೆ, ವಾಷಿಂಗ್ ಮೆಷಿನ್, ಫ್ರಿಜ್ಡ್ ಹಾಗೂ ಇತರೇ ವೈಯಕ್ತಿಕ ಮಾಹಿತಿಗಳನ್ನ ಕೇಳಲು ಹೋಗಬೇಡಿ ಎಂದು ಅಧಿಕಾರಿಗಳಿಗೆ ತಿಳಿಸಿದ್ದೇನೆ. ಅವರುಗಳು ಏನು ಮಾಡುತ್ತಾರೋ ಗೊತ್ತಿಲ್ಲ” ಎಂದರು.

Read More

ಬೆಂಗಳೂರು: ವಿಧಾನಸೌಧವು ಪಾರಂಪರಿಕ ಹಾಗೂ ಶಕ್ತಿ ಸೌಧವಾಗಿದ್ದು, ಈ ಕಟ್ಟಡದ ಒಳ ಮತ್ತು ಹೊರ ಆವರಣವು ಅತೀ ಸೂಕ್ಷ್ಮ ಪ್ರದೇಶವಾಗಿದೆ. ಈ ಕಾರಣದಿಂದ ವಿಧಾನಸೌಧದ ಮುಂಭಾಗದಲ್ಲಿ ಬೃಹತ್ ಮೆಟ್ಟಿಲು ಹಾಗೂ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸರ್ಕಾರಿ ಕಾರ್ಯಕ್ರಮ ಆಯೋಜಿಸಲು ಇನ್ಮುಂದೆ ಕೆಲ ಮಾರ್ಗಸೂಚಿ ಅನುಸರಿಸುವುದು ಕಡ್ಡಾಯಗೊಳಿಸಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ವಿಧಾನ ಸೌಧವು ಪಾರಂಪರಿಕ ಹಾಗೂ ಶಕ್ತಿ ಸೌಧವಾಗಿದ್ದು, ಮಾನ್ಯ ಮುಖ್ಯ ಮಂತ್ರಿಯವರು, ಮಾನ್ಯ ಉಪ ಮುಖ್ಯ ಮಂತ್ರಿಯವರು, ಮಾನ್ಯ ಸಚಿವರು ಹಾಗೂ ಶಾಸಕಾಂಗ ಕಚೇರಿಗಳು / ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿರುವುದರಿಂದ, ವಿಧಾನಸೌಧ ಮತ್ತು ವಿಕಾಸಸೌಧ ಕಟ್ಟಡದ ಒಳ ಮತ್ತು ಹೊರ ಆವರಣವು ಅತಿ ಸೂಕ್ಷ್ಮ ಪ್ರದೇಶವಾಗಿದೆ. ಆದಕಾರಣ, ವಿಧಾನ ಸೌಧ ಮುಂಭಾಗದ ಬೃಹತ್‌ ಮೆಟ್ಟಿಲು ಹಾಗೂ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಸಚಿವಾಲಯ / ಸರ್ಕಾರಿ ಇಲಾಖೆಗಳು ರಾಜ್ಯ ಮಟ್ಟದ ಕಾರ್ಯಕ್ರಮಗಳನ್ನು ಏರ್ಪಡಿಸುವಾಗ…

Read More

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆಗೆ ಸಂಬಂಧಿಸಿದ ಮಹತ್ವದ ವಿಷಯಗಳನ್ನು ಕೇಂದ್ರೀಕರಿಸಿ, ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಟಾನದಲ್ಲಿ ಪಾರದರ್ಶಕತೆ, ಆಡಳಿತವನ್ನು ಜನಸ್ನೇಹಿಯಾಗಿಸುವ ಹಾಗೂ ಪ್ರಾಮಾಣಿಕ‌ ಪ್ರಯತ್ನದ ಭಾಗವಾಗಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಎಲ್ಲಾ ಸರ್ಕಾರಿ ಪತ್ರಗಳನ್ನು ಸಂಕ್ಷಿಪ್ತಗೊಳಿಸಿ, ಸರ್ಕಾರಿ ಪಾರಿಭಾಷಿಕ ಪದಗಳನ್ನು ಸರಳೀಕರಣ ಮಾಡಿ ಜನಸಾಮಾನ್ಯರಿಗೆ ಅರ್ಥೈಸುವ ನಿಟ್ಟಿನಲ್ಲಿ ‘ಗ್ರಾಮದನಿ’ ಪಾಡ್‌ಕಾಸ್ಟ್‌ ಕಾರ್ಯ ನಿರ್ವಹಿಸುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಕರ್ನಾಟಕದ ಅಬ್ದುಲ್‌ ನಜೀರ್‌ ಸಾಬ್‌ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಂಸ್ಥೆಯು (ANSSIRDPR) ಹೊಸಹೆಜ್ಜೆ ಇಡುವುದರೊಂದಿಗೆ ಆರಂಭಿಸಿರುವ  ಸಾಮಾಜಿಕ ಮಾಧ್ಯಮಗಳ ಮೂಲಕ ಜನರನ್ನು ತಲುಪಲಿರುವ ‘ಗ್ರಾಮದನಿ’ ಸರಣಿ ಪಾಡ್‌ಕಾಸ್ಟ್‌ ಲೋಕಾರ್ಪಣೆ ಮಾಡಿ ಸಚಿವರು ಮಾತನಾಡಿದರು. ಮಾಧ್ಯಮದ ಇಂದಿನ ಯುಗದಲ್ಲಿ, ಸಮುದಾಯಕ್ಕೆ ಮಾಹಿತಿ ಮತ್ತು ಅರಿವು ಮೂಡಿಸುವುದು, ಅತ್ಯಂತ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ,  ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಮಾಹಿತಿ ಕೊರತೆಯನ್ನು ನೀಗಿಸುವ…

Read More