Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಗರದಲ್ಲಿ ಯುವತಿಯನ್ನು ಪ್ರೀತಿಸುವ ವಿಚಾರಕ್ಕೆ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೆಂಗಳೂರಲ್ಲಿ ಯುವತಿ ಪ್ರೀತಿಸುವ ವಿಚಾರಕ್ಕೆ ಚಾಕುವಿನಿಂದ ಇರಿದು ಕಿರಣ್(19) ಎಂಬಾತನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಜೀವನ್ ಎಂಬಾತ ಚಾಕುವಿನಿಂದ ಇರಿದು ಕೊಲೆಗೈದಿದ್ದಾನೆ. ಒಂದೇ ಕಡೆ ಮೃತ ಕಿರಣ್ ಹಾಗೂ ಆರೋಪಿ ಜೀವನ್ ಕೆಲಸ ಮಾಡುತ್ತಿದ್ದರು. ಅಲ್ಲಿಯೇ ಕೆಲಸ ಮಾಡುತ್ತಿದ್ದಂತ ಯುವತಿಯನ್ನು ಇಬ್ಬರೂ ಪ್ರೀತಿಸುತ್ತಿದ್ದರು. ಇದೇ ವಿಚಾರಕ್ಕೆ ನಿನ್ನೆ ರಾತ್ರಿ ಕಿರಣ್ ಹಾಗೂ ಜೀವನ್ ನಡುವೆ ಗಲಾಟೆಯಾಗಿತ್ತು. ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಗಲಾಟೆ ತೀವ್ರಗೊಂಡ ಸಂದರ್ಭದಲ್ಲಿ ಆರೋಪಿ ಜೀವನ್, ಕಿರಣ್ ಗೆ ಚಾಕುವಿನಿಂದ ಇರಿದು ಕೊಲೆಗೈದಿದ್ದಾನೆ. ಕೊಲೆ ಆರೋಪಿ ಜೀವನನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/shivamogga-a-7-month-old-leopard-cub-died-after-being-hit-by-an-unknown-vehicle-near-avalagodu-sorabada/ https://kannadanewsnow.com/kannada/the-bmtc-electric-bus-driver-who-assaulted-a-woman-has-been-dismissed-from-duty/
ಶಿವಮೊಗ್ಗ: ಸೊರಬ ಮತ್ತು ಸಾಗರ ಮುಖ್ಯರಸ್ತೆಯ ಅವಲಗೋಡು ಬಳಿಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆಯೊಂದು ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಸೊರಬ-ಸಾಗರ ಮುಖ್ಯ ರಸ್ತೆಯ ಅವಲಗೋಡು ಬಳಿಯಲ್ಲಿ ಸೆ.10ರ ಬುಧವಾರ ರಾತ್ರಿ ಸುಮಾರು 7.30ರ ಹಾಗೆ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ 7 ತಿಂಗಳ ಹೆಣ್ಣು ಚಿರತೆ ಮರಿಯೊಂದು ಸ್ಥಳದಲ್ಲೇ ಸಾವನ್ನಪ್ಪಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಅವಲಗೋಡು ಉಪ ವಲಯ ಅರಣ್ಯಾಧಿಕಾರಿ ಭದ್ರೇಶ್ ಅವರು ಭೇಟಿ ನೀಡಿ, ಪರಿಶೀಲಿಸಿದರು. ಎಸಿಎಫ್ ಸುರೇಶ್ ಕುಳ್ಳಳ್ಳಿ ಹಾಗೂ ಆರ್ ಎಫ್ ಓ ಶ್ರೀಪಾದ್ ಈರಾನಾಯ್ಕ್ ಅವರ ಗಮನಕ್ಕೆ ತಂದಿದ್ದಾರೆ. ಹುಲಿ ಮರಿಯ ಮರಣೋತ್ತರ ಪರೀಕ್ಷೆಯನ್ನು ಉಳವಿ ಪಶುವೈದ್ಯಾಧಿಕಾರಿ ಡಾ.ಶೈಲೇಶ್ ನಡೆಸಿದರು. ಈ ವೇಳೆ ಉಪ ವಲಯ ಅರಣ್ಯಾಧಿಕಾರಿ ಪರಶುರಾಮ್, ಶ್ರೀಶೈಲ್ ಕೇಂದಿ, ಯೋಗರಾಜ್, ಮುತ್ತಣ್ಣ, ಗಾರ್ಡ್ ಆನಂದ್, ಶಿಲ್ಪ, ಮೌನೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು. ಇನ್ನೂ ಹಿರಿಯ ಅಧಿಕಾರಿಗಳ ಮುನ್ಸೂಚನೆಯಂತೆ ಕೋರ್ಟ್ ನಿಂದ ಅನುಮತಿ ಪಡೆದು, ಸುಮಾರು 7 ತಿಂಗಳ ಹೆಣ್ಣು…
ಬೆಂಗಳೂರು: ಬಿಜೆಪಿಯ ಮುಖಂಡ ಸಿ.ಟಿ ರವಿ ದ್ವೇಷ ಭಾಷಣ ಮಾಡಿದ್ದಕ್ಕೆ ಅವರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ. ಅದರ ಹೊರತಾಗಿ ಬೇರೇನೂ ಇಲ್ಲ ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಸಮರ್ಥನೆ ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು ಸಿ.ಟಿ ರವಿ ಅವರ ಮಾತು ಕೇಳಿದ್ದೇನೆ. ತೊಡೆ ಮುರಿಯೋ, ತಲೆ ತೆಗೆಯೋದು ಅಂತೆಲ್ಲ ಮಾತನಾಡಿದ್ದಾರೆ. ಸಿ.ಟಿ ರವಿ ಅವರು ಸಚಿವರಾಗಿದ್ದವರು, ಶಾಸಕರು. ಅಂತವರ ಬಾಯಿಯಲ್ಲಿ ಇಂತಹ ಪದ ಬಳಕೆ ಸರಿನಾ ಎಂದು ಪ್ರಶ್ನಿಸಿದರು. ಸಿ.ಟಿ ರವಿ ಅವರ ಮಾತುಗಳ ಬಗ್ಗೆ ಜನರೇ ತೀರ್ಮಾನ ಮಾಡಲಿ. ಹಾಗೆ ದ್ವೇಷ ಭಾಷಣ ಮಾಡಿದ್ದಕ್ಕೆ ಕೇಸ್ ಹಾಕಿದ್ದಾರೆ. ಅದರಲ್ಲಿ ತಪ್ಪೇನು ಎಂಬುದಾಗಿ ಎಫ್ಐಆರ್ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಸಮರ್ಥಿಸಿಕೊಂಡರು. https://kannadanewsnow.com/kannada/the-bmtc-electric-bus-driver-who-assaulted-a-woman-has-been-dismissed-from-duty/ https://kannadanewsnow.com/kannada/tumakuru-the-conflict-that-started-over-water-ends-in-a-grave-incident-horrific-murder-of-a-person-after-a-goods-vehicle-was-overturned/
ಬೆಂಗಳೂರು: ನಗರದಲ್ಲಿ ಮಹಿಳೆಯೊಬ್ಬರ ಮೇಲೆ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಡ್ರೈವರ್ ಕೈ ಮಾಡಿದ್ದರು. ಈ ವೀಡಿಯೋ ವೈರಲ್ ಕೂಡ ಆಗಿತ್ತು. ಈ ಹಿನ್ನಲೆಯಲ್ಲಿ ಮಹಿಳೆಯ ಮೇಲೆ ಕೈ ಮಾಡಿದ್ದಂತ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಡ್ರೈವರ್ ಅನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಬೆಂಗಳೂರಲ್ಲಿ ಕೆಎ 51, ಎಕೆ 4276 ಸಂಖ್ಯೆಯ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಚಾಲಕನೊಬ್ಬ ಮಹಿಳೆಯ ಮೇಲೆ ಕೈ ಮಾಡಿದ್ದರು. ಸೆಪ್ಟೆಂಬರ್.8ರಂದು ಪೀಣ್ಯದಿಂದ ಬಾಣಾವರಕ್ಕೆ ತೆರಳುತ್ತಿದ್ದ ಬಸ್ ನಲ್ಲಿ ಗಲಾಟೆ ನಡೆದಾಗ ಈ ಘಟನೆ ಸಂಭವಿಸಿತ್ತು. ಈ ಗಲಾಟೆಯ ಸಂದರ್ಭದಲ್ಲಿ ಮಹಿಳಾ ಪ್ರಯಾಣಿಕರು ಡ್ರೈವರ್ ಮೇಲೆ ಹಲ್ಲೆ ಮಾಡಿದ್ದರು. ಆ ಬಳಿಕ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಚಾಲಕ ಕೂಡ ಕೈ ಮಾಡಿದ್ದನು. ಹೀಗೆ ಹಲ್ಲೆ ಮಾಡಿದ್ದಂತ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಚಾಲಕನನ್ನು ಕೆಲಸದಿಂದ ತಾತ್ಕಾಲಿಕವಾಗಿ ವಜಾ ಮಾಡಿ ಬಿಎಂಟಿಸಿ ಆದೇಶಿಸಿದೆ.
ಬೆಂಗಳೂರು: ಚಿಂಚನಸೂರು ಗ್ರಾಮದ ಸುತ್ತಮುತ್ತ ಲಘು ಭೂಕಂಪನ ಉಂಟಾಗಿದೆ. ಹೀಗಾಗಿ ಗ್ರಾಮದ ಜನರು ಆತಂಕಕ್ಕೀಡಾಗದಿರಲು ಸಚಿವ ಪ್ರಿಯಾಂಕ್ ಖರ್ಗೆ ಮನವಿ ಮಾಡಿದ್ದಾರೆ. ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರು ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಇಂದು ಬೆಳಗ್ಗೆ 8. 17 ಗಂಟೆಯ ಸುಮಾರಿಗೆ ಸಣ್ಣ ಪ್ರಮಾಣದ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 2.3 ತೀವ್ರತೆ ದಾಖಲಾಗಿರುತ್ತದೆ. ಈ ಘಟನೆ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದೊಂದಿಗೆ ತಾವು ಸಂಪರ್ಕದಲ್ಲಿದ್ದು ಸ್ಥಳಕ್ಕೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು, ತಹಸೀಲ್ದಾರ, ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಭೂಕಂಪನವು ಸಣ್ಣ ಪ್ರಮಾಣದ್ದಾಗಿದ್ದು ಸಾರ್ವಜನಿಕರು ಹಾಗೂ ಚಿಂಚನಸೂರು ಸೇರಿದಂತೆ ಸುತ್ತಮುತ್ತಲಿನ ವ್ಯಾಪ್ತಿಯ ಗ್ರಾಮಸ್ಥರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ವಿನಂತಿ ಮಾಡಿದ್ದಾರೆ. https://kannadanewsnow.com/kannada/earthquake-of-magnitude-2-3-in-kalaburagi-people-were-shaken/
ಕಲಬುರ್ಗಿ: ಜಿಲ್ಲೆಯ ಚಿಂಚನಸೂರಿನಲ್ಲಿ 2.3 ತೀವ್ರತೆಯಲ್ಲಿ ಭೂಕಂಪನ ಉಂಟಾಗಿದೆ. ಭೂಮಿ ಕಂಪಿಸಿದ್ದರಿಂದ ಮನೆಯಿಂದ ಓಡಿ ಬಂದಂತ ಜನರು ಕೆಲ ಕಾಲ ಬಯಲಲ್ಲೇ ಆತಂಕದಲ್ಲಿ ಕಳೆದಿದ್ದಾರೆ. ಕಲಬುರ್ಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಚಿಂಚನಸೂರು ಗ್ರಾಮದಲ್ಲಿ ಇಂದು ಭೂಕಂಪನದ ಅನುಭವ ಉಂಟಾಗಿದೆ. ಈ ಬಗ್ಗೆ ಕೆ ಎಸ್ ಡಿ ಎಂ ಸಿ ಮಾಹಿತಿ ನೀಡಿದ್ದು, ರಿಕ್ಟರ್ ಮಾಪಕದಲ್ಲಿ 2.3 ತೀವ್ರತೆಯಲ್ಲಿ ಭೂಕಂಪನ ಉಂಟಾಗಿರುವುದಾಗಿ ತಿಳಿಸಿದೆ. ಇಂದು ಬೆಳಗ್ಗೆ 8.30ರ ಸುಮಾರಿಗೆ ಈ ಭೂಕಂಪನ ಸಂಭವಿಸಿದೆ. ಭೂಕಂಪನದಿಂದಾಗಿ ಗ್ರಾಮದ ಜನರು ಬೆಚ್ಚಿ ಬಿದ್ದಿದ್ದಾರೆ. https://kannadanewsnow.com/kannada/human-50-lakh-compensation-for-the-victims-during-the-conflict-between-humans-and-animals-minister-eshwar-khandre-announced/
ಬೆಂಗಳೂರು: ಮಾನವ ಮತ್ತು ಪ್ರಾಣಿ ಸಂಘರ್ಷದ ವೇಳೆ ಹುತಾತ್ಮರಾದಂತ ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ 50 ಲಕ್ಷ ಪರಿಹಾರ ನೀಡುವುದಾಗಿ ಸಚಿವ ಈಶ್ವರ್ ಖಂಡ್ರೆ ಘೋಷಿಸಿದ್ದಾರೆ. ಇಂದು ಅರಣ್ಯ ಭವನದಲ್ಲಿ ಹುತಾತ್ಮರ ದಿನಾಚರಣೆ ವೇಳೆಯಲ್ಲಿ ಮಾತನಾಡಿದಂತ ಅವರು, ರಾಜ್ಯದಲ್ಲಿ ಈವರೆಗೆ 62 ಮಂದಿ ಹುತಾತ್ಮರಾಗಿದ್ದಾರೆ. ವೀರಪ್ಪನ್ ವಿರುದ್ಧದ ಕಾರ್ಯಾಚರಣೆ, ಕಳ್ಳಬೇಟೆಗಾರರನ್ನು ಹತ್ತಿಕ್ಕುವ ವೇಳೆ, ಕಾಡ್ಗಿಚ್ಚು ನಂದಿಸುವ ಸಂದರ್ಭದಲ್ಲಿ, ಮಾನವ ಮತ್ತು ಪ್ರಾಣಿ ಸಂಘರ್ಷದ ವೇಳೆಯಲ್ಲಿ ಇವರೆಲ್ಲ ಬಲಿಯಾಗಿದ್ದಾರೆ ಎಂದರು. ರಾಜ್ಯದಲ್ಲಿ ಮಾನವ ಮತ್ತು ಪ್ರಾಣಿ ಸಂಘರ್ಷದಲ್ಲಿ ಹುತಾತ್ಮರಾದಂತ ಅರಣ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳಿಗೆ 50 ಲಕ್ಷ ಪರಿಹಾರವನ್ನು ನೀಡುವುದಾಗಿ ಇದೇ ಸಂದರ್ಭದಲ್ಲಿ ಘೋಷಿಸಿದರು.
ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ನೆರವಿಗೆ ಅಕ್ಕ ಪಡೆ ಸಿದ್ಧವಾಗಿದೆ. ಈ ಅಕ್ಕ ಪಡೆಯನ್ನು ಬೆಂಗಳೂರಲ್ಲಿ ನವೆಂಬರ್.19ರಂದು ಚಾಲನೆ ನೀಡಲಾಗುತ್ತದೆ. ಈ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದು, ಸಂಕಷ್ಟದಲ್ಲಿ ಇರುವ ಮಕ್ಕಳು ಮತ್ತು ಮಹಿಳೆಯರಿಗೆ ನೆರವಾಗಲು ʼಅಕ್ಕ ಪಡೆʼಗಳನ್ನು ಸ್ಥಾಪಿಸುತ್ತಿದ್ದೇವೆ. ಬೆಂಗಳೂರಿನಲ್ಲಿ ನವೆಂಬರ್ 19 ರಂದು ಚಾಲನೆ ನೀಡಲಾಗುವುದು. ಮೈಸೂರು, ಉಡುಪಿ ಮತ್ತು ಬೆಳಗಾವಿಯಲ್ಲೂ ಅಕ್ಕ ಪಡೆಗಳು ಪ್ರಾಯೋಗಿಕವಾಗಿ ಜಾರಿಗೆ ಬರಲಿದೆ ಎಂದಿದ್ದಾರೆ. 10 ರಿಂದ 15 ಜನರ ತಂಡ ಇರಲಿದ್ದು, ಎನ್‌ಸಿಸಿ ಹಿರಿಯ ಕೆಡೆಟ್‌ಗಳು ಮತ್ತು ಮಹಿಳಾ ಪೊಲೀಸ್ ಸಿಬ್ಬಂದಿಗಳನ್ನು ಒಳಗೊಂಡಿರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ. https://twitter.com/KarnatakaVarthe/status/1965759195095212407 https://kannadanewsnow.com/kannada/all-8-squads-of-icc-womens-world-cup-2025-revealed/ https://kannadanewsnow.com/kannada/women-should-be-careful-now-if-they-sleep-wearing-a-bra-at-night/
ಬೆಂಗಳೂರು: ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಶೀಘ್ರದಲ್ಲೇ ಮೈಸೂರು ವಲಯ ಮಟ್ಟದಲ್ಲಿ ಉದ್ಯೋಗ ಮೇಳ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ 120ಕ್ಕೂ ಹೆಚ್ಚು ಕಂಪನಿಗಳು ಭಾಗಿಯಾಗಲಿದ್ದಾವೆ. ಈ ಬಗ್ಗೆ ರಾಜ್ಯ ಸರ್ಕಾರದಿಂದ ಮಾಹಿತಿ ಹಂಚಿಕೊಂಡಿದ್ದು, ಶೀಘ್ರದಲ್ಲೇ ಮೈಸೂರಿನಲ್ಲಿ ವಲಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದೆ. 120ಕ್ಕೂ ಹೆಚ್ಚು ಕಂಪನಿಗಳು ಭಾಗಿಯಾಗಲಿದೆ. ಆಸಕ್ತರು ಈ ಕೂಡಲೇ https://udyogamela.ksdckarnataka.com ಲಿಂಕ್ ನಲ್ಲಿ ನೋಂದಾಯಿಸಿಕೊಳ್ಳುವಂತೆ ಮನವಿ ಮಾಡಿದೆ. ರಾಜ್ಯದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ಈ ಉದ್ಯೋಗ ಮೇಳೆವನ್ನು ಆಯೋಜಿಸಲಾಗುತ್ತಿದೆ. https://twitter.com/KarnatakaVarthe/status/1965766651565187286
ಬೆಂಗಳೂರು: ನಗರದ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನೂತನ ನಿರ್ದೇಶಕರಾಗಿ ಡಾ.ಬಿ.ದಿನೇಶ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ರಾಜ್ಯ ಸರ್ಕಾರದಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಯ ನೂತನ ನಿರ್ದೇಶಕರಾಗಿ ಡಾ.ಬಿ.ದಿನೇಶ್ ನೇಮಕ ಮಾಡಲಾಗಿತ್ತು. ಅವರು ಇಂದು ಸಂಜೆ ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ನಿರ್ದೇಶಕರಾಗಿ ಕರ್ತವ್ಯಕ್ಕೆ ವರದಿ ಮಾಡಿಕೊಂಡಿದ್ದಾರೆ. ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನೂತನ ನಿರ್ದೇಶಕರನ್ನು ಆಸ್ಪತ್ರೆಯ ಹಿಂದಿನ ನಿರ್ದೇಶಕ ಡಾ.ಕೆಎಸ್ ರವೀಂದ್ರ ನಾಥ್ ಹಾಗೂ ಸಿಬ್ಬಂದಿಗಳು ಹೂಗುಚ್ಚ ನೀಡಿ ಸ್ವಾಗತಿಸಿದರು. https://kannadanewsnow.com/kannada/hindu-activist-puneeth-kerehalli-arrested-by-police-in-bengaluru/ https://kannadanewsnow.com/kannada/nrega-scam-in-kalmane-gram-panchayat-of-sagar-minister-priyank-kharge-instructed-to-conduct-an-investigation-and-submit-a-report/













