Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಪುಸ್ತಕ ಪ್ರಿಯರಿಗೆ ಗುಡ್ ನ್ಯೂಸ್ ಎನ್ನುವಂತೆ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳ ಮೇಲೆ ಶೇ.50ರಷ್ಟು ರಿಯಾಯಿತಿಯನ್ನು ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ ಕಿರಣ್ ಸಿಂಗ್ ಅವರು ಮಾಹಿತಿ ನೀಡಿದ್ದು, ಕನ್ನಡ ರಾಜ್ಯೋತ್ಸವದ ಅಂಗವಾಗಿ 2025ರ ನವೆಂಬರ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಖಡಾ 50%ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಲು ಕೋರಿದ್ದಾರೆ. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ (ಸಂಪರ್ಕ ಸಂಖ್ಯೆ:080-22107705) ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್ ಲೈನ್ https://kpp.karnataka.gov.in (ಆನ್ಲೈನ್ ಪುಸ್ತಕ ಖರೀದಿಗೆ ವಿಭಾಗ ಇಲ್ಲಿ ವೀಕ್ಷಿಸಿ) ನಲ್ಲಿ…
ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ವಿಧಾನಸೌಧದ ಒಳಗೆ ಆಕ್ರೋಶ ವ್ಯಕ್ತವಾಗಿದೆ. ಇಂದು ವಿಧಾನಸೌಧದ ಒಳಗೆ ಸರ್ಕಾರದ ವಿರುದ್ಧ ಧಿಕ್ಕಾರವನ್ನು ಅಲೆಮಾರಿಗಳು ಕೂಗಿರುವುದಾಗಿ ತಿಳಿದು ಬಂದಿದೆ. ವಿಧಾನಸೌಧದ ಒಳಗೆ ಸರ್ಕಾರಕ್ಕೆ ಧಿಕ್ಕಾರವನ್ನು ಅಲೆಮಾರಿಗಳು ಕೂಗಿದ್ದಾರೆ. ಒಳಮೀಸಲಾತಿ ವಿಚಾರವಾಗಿ ಅಲೆಮಾರಿ ಮುಖಂಡರ ಜೊತೆಗೆ ಸಭೆ ನಡೆಸಿದ್ದರು. ಸಭೆ ಮುಗಿಸಿ ಸಿಎಂ ತೆರಳುತ್ತಿದ್ದಂತೆ ಅಲೆಮಾರಿಗಳ ಮುಖಂಡರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ವಿಧಾನಸೌಧದ ಒಳಗೆ ಸರ್ಕಾರಕ್ಕೆ ಧಿಕ್ಕಾರವನ್ನು ಅಲೆಮಾರಿ ಮುಖಂಡರು ಕೂಗಿದ್ದಾರೆ. ರಾಜ್ಯ ಸರ್ಕಾರದಿಂದ ನಮಗೆ ನ್ಯಾಯ ಸಿಗುತ್ತಿಲ್ಲವೆಂದು ಅಸಮಾಧಾನವನ್ನು ಹೊರ ಹಾಕಿದ್ದಾರೆ. ಅಲ್ಲದೇ ಸುಪ್ರೀಂ ಕೋರ್ಟ್ ಆದೇಶದಂತೆ ತಳಸಮುದಾಯಕ್ಕೆ ನ್ಯಾಯಬೇಕು ಎಂಬುದಾಗಿಯೂ ಆಗ್ರಹಿಸಿದ್ದಾರೆ. ಸಾಮಾಜಿಕ ನ್ಯಾಯದಂತೆ ಅಲೆಮಾರಿ ಸಮಾಜಕ್ಕೆ ಮೀಸಲಾತಿ ಕೊಡಿ. ಯಾವುದೇ ಪ್ಯಾಕೇಜ್ ಬೇಡವೆಂದು ಅಲೆಮಾರಿ ಮುಖಂಡರು ಆಕ್ರೋಶವನ್ನು ವಿಧಾನಸೌಧದ ಒಳಗೆ ಹೊರ ಹಾಕಿದ್ದಾರೆ. https://kannadanewsnow.com/kannada/narasapur-express-special-train-service-extended-up-to-kakinada-town/ https://kannadanewsnow.com/kannada/breaking-renukashwami-murder-case-actor-darshan-gang-scheduled-for-charge-framing-on-nov-3/
ಮೈಸೂರು: ದಕ್ಷಿಣ ಮಧ್ಯ ರೈಲ್ವೆಯು ರೈಲು ಸಂಖ್ಯೆ 07033/34 ನರಸಾಪುರ – ಮೈಸೂರು – ನರಸಾಪುರ ವಿಶೇಷ ಎಕ್ಸ್ಪ್ರೆಸ್ ರೈಲಿನ ಸಂಚಾರವನ್ನು ನವೆಂಬರ್ 3, 2025 ರಿಂದ ನವೆಂಬರ್ 29, 2025 ರವರೆಗೆ ಕಾಕಿನಾಡ ಟೌನ್ವರೆಗೆ ವಿಸ್ತರಿಸಲು ಸೂಚಿಸಿದೆ. ಈ ಮೊದಲು ನರಸಾಪುರ ಮತ್ತು ಮೈಸೂರು ನಡುವೆ ಸಂಚರಿಸುತ್ತಿದ್ದ ರೈಲು ಸಂಖ್ಯೆ 07033, ಈಗ ನವೆಂಬರ್ 3, 2025 ರಿಂದ ನವೆಂಬರ್ 28, 2025 ರವರೆಗೆ ಕಾಕಿನಾಡ ಟೌನ್ ಮತ್ತು ಮೈಸೂರು ನಡುವೆ ಕಾರ್ಯಾಚರಣೆ ಮಾಡಲಿದೆ. ಅದೇ ರೀತಿ, ಈ ಮೊದಲು ಮೈಸೂರು ಮತ್ತು ನರಸಾಪುರ ನಡುವೆ ಸಂಚರಿಸುತ್ತಿದ್ದ ರೈಲು ಸಂಖ್ಯೆ 07034, ಈಗ ನವೆಂಬರ್ 4, 2025 ರಿಂದ ನವೆಂಬರ್ 29, 2025 ರವರೆಗೆ ಮೈಸೂರು ಮತ್ತು ಕಾಕಿನಾಡ ಟೌನ್ ನಡುವೆ ಸಂಚರಿಸಲಿದೆ. ರೈಲು ಸಂಖ್ಯೆ 07033 ಕಾಕಿನಾಡ ಟೌನ್ – ಮೈಸೂರು ವಿಶೇಷ ಎಕ್ಸ್ಪ್ರೆಸ್ ರೈಲು ಕಾಕಿನಾಡ ಟೌನ್ನಿಂದ ಬೆಳಿಗ್ಗೆ 9 ಗಂಟೆಗೆ ಹೊರಟು, ಮರುದಿನ ಸಂಜೆ 4 ಗಂಟೆಗೆ…
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ನವೆಂಬರ್.1ರಿಂದ ಹೆಚ್ಚುವರಿಯಾಗಿ ಐದು ರೈಲುಗಳು ವಾಣಿಜ್ಯ ಸಂಚಾರ ಆರಂಭಿಸಲಿವೆ. ಹೀಗಾಗಿ ಪ್ರತಿ 15 ನಿಮಿಷಕ್ಕೊಂದು ರೈಲುಗಳು ಸಂಚರಿಸಲಿವೆ. ಈ ಕುರಿತಂತೆ ಬಿಎಂಆರ್ ಸಿ ಎಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ರಾಜ್ಯೋತ್ಸವದ ೭೦ನೇ ವರ್ಷದ ಆಚರಣೆಯ ಸಂದರ್ಭದಲ್ಲಿ, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (BMRCL), ದಿನಾಂಕ 1ನೇ ನವೆಂಬರ್ 2025ರಿಂದ ಹಳದಿ ಮಾರ್ಗದಲ್ಲಿ ಐದನೇ ಮೆಟ್ರೋ ರೈಲನ್ನು ವಾಣಿಜ್ಯ ಸೇವೆಗೆ ಒಳಪಡಿಸುತ್ತಿದೆ. ಈ ಹೊಸ ರೈಲಿನ ಚಾಲನೆಯಿಂದ, ಹಳದಿ ಮಾರ್ಗದಲ್ಲಿ ಪೀಕ್ ಅವಧಿಯಲ್ಲಿ ರೈಲುಗಳ ಆವರ್ತನವು ಪ್ರತಿ 15 ನಿಮಿಷಕ್ಕೊಮ್ಮೆ ರೈಲುಗಳು ಸಂಚರಿಸುತ್ತವೆ. (ಪ್ರಸಕ್ತ 19 ನಿಮಿಷಗಳ ಅಂತರದ ಬದಲಾಗಿ). ಇದರಿಂದ ಪ್ರಯಾಣಿಕರಿಗೆ ಕಡಿಮೆ ಅವಧಿಯಲ್ಲಿ ಸುಗಮ ಮತ್ತು ನಿರಂತರ ಸೇವೆ ನೀಡಲು ಸಹಾಯಕವಾಗಲಿದೆ. ಈ ಬದಲಾವಣೆ ಎಲ್ಲಾ ದಿನಗಳಿಗೆ ಅನ್ವಯವಾಗುತ್ತದೆ. ಆರ್.ವಿ. ರಸ್ತೆ ಮತ್ತು ಬೊಮ್ಮಸಂದ್ರ ಟರ್ ಮಿನಲ್ ನಿಲ್ದಾಣಗಳಿಂದ ಹೊರಡುವ ಮೊದಲ ಹಾಗೂ ಕೊನೆಯ ರೈಲುಗಳ ವೇಳಾಪಟ್ಟಿಯಲ್ಲಿ…
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತರ ಪತ್ರಕರ್ತರ ಸಂಘಕ್ಕೆ ನವೆಂಬರ್ 9ರಂದು ನಡೆಯಲಿರುವ ಚುನಾವಣೆಗೆ ಅಖಾಡ ಸಜ್ಜಾಗಿದ್ದು, ಉಮೇದುವಾರಿಕೆಯನ್ನು ಹಿಂಪಡೆಯಲು ಕೊನೆಯ ದಿನವಾದ ಇಂದು 41 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿ ಉಳಿದಿದ್ದಾರೆ. ಈ ಕುರಿತು ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ವಿ.ನಂಜುಂಡಪ್ಪ ಮಾಹಿತಿ ನೀಡಿದ್ದು, ಒಟ್ಟು 25 ಸ್ಥಾನಗಳ ಪೈಕಿ 3 ಕಾರ್ಯದರ್ಶಿ ಹುದ್ದೆಗಳಿಗೆ ಕೆ. ಹರೀಶ್, ಕೆ ಎಲ್ ಲೋಕೇಶ್, ಗೋದಾವರಿ ಡಿ ಎಸ್ ಅವರು ಕಣದಲ್ಲಿ ಉಳಿದಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಎಸ್.ಸೋಮಶೇಖರ್ (ಗಾಂಧಿ), ಮು. ವೆಂಕಟೇಶಯ್ಯ, ಎ. ಬಿ. ಶಿವರಾಜ್ ಅವರು ಸ್ಪರ್ಧೆಯಲ್ಲಿದ್ದಾರೆ. 3 ಉಪಾಧ್ಯಕ್ಷ ಸ್ಥಾನಗಳಿಗೆ ಡಾ. ಕೆ. ಎಸ್. ಸ್ವಾಮಿ, ಎಚ್ ಕೆ ಬಸವರಾಜ್, ಬಿ. ಟಿ ಶ್ರೀನಿವಾಸ್, ಪರಿಮಳ ಎಚ್ಎಸ್, ಕೆ ಎಂ. ಜಕ್ರಿಯ ಕಣದಲ್ಲಿದ್ದಾರೆ. ಪ್ರಧಾನ ಕಾರ್ಯ ದರ್ಶಿ ಸ್ಥಾನಕ್ಕೆ ಕೆ.ಸಿ. ವೇದಮೂರ್ತಿ, ಎನ್ ಶ್ರೀನಾಥ್, ಆರ್ ಜಯಕುಮಾರ್, ಖಜಾಂಚಿ ಸ್ಥಾನಕ್ಕೆ ಎಸ್ ಡಿ. ಚಿಕ್ಕಣ್ಣ, ಟಿ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇವರಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮತ್ತಿಬ್ಬರು ಸಾವು ಬದುಕಿನ ನಡುವೆ ಹೋರಾಡುತ್ತಿರುವುದಾಗಿ ತಿಳಿದು ಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಗ್ಗನಹಳ್ಳಿಯಲ್ಲಿ ವಿಷ ಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇವರಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮತ್ತಿಬ್ಬರ ಸ್ಥಿತಿ ಗಂಭೀರವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಹೆಗ್ಗನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಇಬ್ಬರು ಸಾವನ್ನಪ್ಪಿ, ಮತ್ತಿಬ್ಬರ ಸ್ಥಿತಿ ಗಂಭೀರಗೊಂಡಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/public-awareness-raised-through-garbage-dumping-festival-in-bengaluru-2-80-lakh-fines-collected/ https://kannadanewsnow.com/kannada/k-hanumantharayappa-elected-as-district-president-of-bangalore-rural-government-employees-association/
ಬೆಂಗಳೂರು: ಬೆಂಗಳೂರು ನಗರದಲ್ಲಿ “ಕಸ ಸುರಿಯುವ ಹಬ್ಬ” ದ ಮೂಲಕ 218 ಮನೆಗಳ ಮುಂದೆ ಕಸ ಸುರಿದು 2.80 ಲಕ್ಷ ರೂ. ಗಳ ದಂಡ ವಿಧಿಸಲಾಗಿದೆ ಎಂದು ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಕರೀಗೌಡ ರವರು ತಿಳಿಸಿದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಎಲ್ಲಾ 5 ನಗರ ಪಾಲಿಕೆಗಳಲ್ಲಿ ಪ್ರತಿ ಮನೆಗೆ ಬೆಳಿಗ್ಗೆ ಆಟೋ ಟಿಪ್ಪರ್ ಗಳಲ್ಲಿ ಹೋಗಿ ಕಸವನ್ನು ಸಂಗ್ರಹಿಸಲಾಗುತ್ತಿದೆ. ಆದರೂ ಕೆಲ ಸಾರ್ವಜನಿಕರು ಕಸವನ್ನು ರಸ್ತೆ ಬದಿ, ಪಾದಚಾರಿ ಮಾರ್ಗ ಹಾಗೂ ಖಾಲಿ ಜಾಗಗಳಲ್ಲಿ ಎಸೆಯುತ್ತಿದ್ದಾರೆ. ರಸ್ತೆ ಬದಿ ಕಸ ಸುರಿಯುವುದರಿಂದ ನಗರ ನೈರ್ಮಲ್ಯ ಹಾಳಾಗುತ್ತಿದೆ. ಇಂತಹ ಪ್ರಕರಣಗಳನ್ನು ತಪ್ಪಿಸುವ ಉದ್ದೇಶದಿಂದ ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದಿಂದ ರಸ್ತೆ ಬದಿ ಕಸ ಬಿಸಾಡುವವರನ್ನು ಗುರುತಿಸಿ ಅವರ ಮನೆ ಮುಂದೆ ಕಸ ಬಿಸಾಡುವಂತಹ ವಿನೂತನ ಜಾಗೃತಿ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಆಟೋ ಟಿಪ್ಪರ್ ಗಳಿಗೆ ಕಸ ಕೊಡದೆ ರಾತ್ರಿ ವೇಳೆ ರಸ್ತೆ…
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಕೆ.ಹನುಮಂತರಾಯಪ್ಪ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆಯಿತು. ಈ ವೇಳೆ ಅಧ್ಯಕ್ಷ ಸ್ಥಾನಕ್ಕೆ ಕಾರಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದಿಲೀಪ್ ಕುಮಾರ್ ಮತ್ತು ದೇವನಹಳ್ಳಿ ಕಸಬಾ ಹೋಬಳಿ ರಾಜಸ್ವ ನಿರೀಕ್ಷಕ ಕೆ.ಹನುಮಂತರಾಯಪ್ಪ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಪರಿಶೀಲನೆ ನಂತರ ಚುನಾವಣೆ ನಡೆಯಿತು. ಸಂಘದಲ್ಲಿ ಒಟ್ಟು 52 ಮತದಾರರಿದ್ದು, ಈ ಪೈಕಿ ದಿಲೀಪ್ ಕುಮಾರ್ 16 ಮತಗಳನ್ನು ಪಡೆದರೆ, ಕೆ.ಹನುಮಂತರಾಯಪ್ಪ 36 ಮತಗಳನ್ನು ಪಡೆದು ಗೆಲುವಿನ ನಗೆ ಬೀರಿದ್ದಾರೆ. ಚುನಾವಣಾ ಅಧಿಕಾರಿಯಾದ ಡಾ. ನೆಲ್ಕುದ್ರಿ ಸದಾನಂದ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಕೆ.ಹನುಮಂತರಾಯಪ್ಪ ಅವರಿಗೆ ಪ್ರಮಾಣಪತ್ರ ವಿತರಿಸಿದರು. ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಕೆ.ಹನುಮಂತರಾಯಪ್ಪ ಮಾತನಾಡಿ, ತಮ್ಮನ್ನು ಅತೀ ಹೆಚ್ಚು ಮತಗಳಿಂದ ಆಯ್ಕೆ ಮಾಡಲು ಹಗಲಿರುಳು ಶ್ರಮಿಸಿದ ಜಿಲ್ಲೆಯ ಎಲ್ಲ ಇಲಾಖೆಗಳ ಜಿಲ್ಲಾ ನಿರ್ದೇಶಕರು, ಸರ್ಕಾರಿ ನೌಕರರು ಮತ್ತು ಪದಾಧಿಕಾರಿಗಳಿಗೆ…
ಬೆಂಗಳೂರು: ಶೀಘ್ರದಲ್ಲೇ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆಯಾಗಲಿದೆ. ಅದರೊಟ್ಟಿಗೆ ಖಾಲಿಯಾಗಿರುವಂತ ಗ್ರಾಮ ಪಂಚಾಯ್ತಿ ಸ್ಥಾನಗಳಿಗೂ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ. ಹಾಗಾದ್ರೇ ಗ್ರಾಮ ಪಂಚಾಯ್ತಿ ಸಾರ್ವತ್ರಿಕ ಚುನಾವಣೆಗೆ ನಾಮ ಪತ್ರದೊಂದಿಗೆ ಸಲ್ಲಿಸಬೇಕಾದಂತ ಅಗತ್ಯ ದಾಖಲೆಗಳು ಯಾವುವು ಎನ್ನುವ ಬಗ್ಗೆ ಮುಂದಿವೆ ಓದಿ. ಸಾಮಾನ್ಯ ಕ್ಷೇತ್ರಕ್ಕೆ 1. ಉಮೇದುವಾರನಿಗೆ 21 ವರ್ಷ ಮೇಲ್ಪಟ್ಟು ವಯಸ್ಥಾಗಿರಬೇಕು. 2. ನಾಮಪತ್ರ ನಮೂನೆ –5ರಲ್ಲಿ ನೀಡಬೇಕು. 3. ಠೇವಣಿ ಹಣ 200/-ರೂಗಳನ್ನು ನೀಡಿ ಚುನಾವಣಾಧಿಕಾರಿಯಿಂದ ರಶೀದಿ ಪಡೆಯುವುದು, ಸಾಮಾನ್ಯ ಮಹಿಳೆ ಮೀಸಲು ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿದರೆ ಠೇವಣಿ ಹಣ 100/- ರೂಗಳನ್ನು ನೀಡುವುದು. 4. ಇಸ್ತಿ ಬಿವಧಣಿ ಘೋಷಣಾ ಪತ್ರ ವನ್ನು 3 ಪ್ರತಿಯಲ್ಲಿ ಲಗತ್ತಿಸುವುದು. 5. ಅಭ್ಯರ್ಥಿಯಿಂದ ಘೋಷಣೆ ಪತ್ರ 6. ಗ್ರಾಮ ಪಂಚಾಯಿತಿಗೆ ಯಾವುದೇ ರೀತಿಯ ಬಾಕಿ ಇಲ್ಲದಿರುವ ಬಗ್ಗೆ ‘ಬೇ-ಬಾಕಿಪತ್ರ’ ಅನುಸೂಚಿತ ಜಾತಿ/ಅ.ಪಂಗಡ ಮೀಸಲು ಕ್ಷೇತ್ರಕ್ಕೆ 1. ಉಮೇದುವಾರನಿಗೆ 21 ವರ್ಷ ಮೇಲ್ಪಟ್ಟು ವಯಸ್ಸಾಗಿರಬೇಕು. 2. ತಹಶಿಲ್ದಾರವರಿಂದ ಜಾತಿ ಪ್ರಮಾಣ ಪತ್ರ ಪಡೆದು…
BREAKING: ನಾಳೆ ರಾಜ್ಯದಲ್ಲಿ ‘ಜಾತಿಗಣತಿ ಸಮೀಕ್ಷೆ’ ಮುಕ್ತಾಯ: ನ.10ರವರೆಗೆ ‘ಆನ್ ಲೈನ್’ನಲ್ಲಿ ವಿವರ ದಾಖಲಿಸಲು ಅವಕಾಶ
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025 ನಾಳೆ ಕೊನೆಗೊಳ್ಳಲಿದೆ. ಆದರೇ ವಿವರ ದಾಖಲಿಸದೇ ಇರುವವರು ದಿನಾಂಕ 10-11-2025ರವರೆಗೆ ಆನ್ ಲೈನ್ ಮೂಲಕ ದಾಖಲಿಸಲು ಅವಕಾಶ ನೀಡಲಾಗಿದೆ. ಈ ಕುರಿತು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಕಾರ್ಯದರ್ಶಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸರ್ಕಾರದ ಆದೇಶ ಸಂಖ್ಯೆ: ಹಿಂವಕ 289 ಬಿಸಿಎ 2025, ದಿನಾಂಕ:13.08.2025 ರ ಅನ್ವಯ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಜನರ (ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ) ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ದಿನಾಂಕ: 22.09.2025 ರಿಂದ ಪ್ರಾರಂಭಿಸಲಾಗಿದ್ದು, ದಿನಾಂಕ:31.10.2025 ರಂದು ಮುಕ್ತಾಯಗೊಳ್ಳಲಿದೆ ಎಂದಿದ್ದಾರೆ. ಇನ್ನೂ ವಿವಿಧ ಕಾರಣಗಳಿಂದಾಗಿ ಸಮೀಕ್ಷೆಯಲ್ಲಿ ಭಾಗವಹಿಸಲು ಸಾಧ್ಯವಾಗದೇ ಅವಕಾಶ ನೀಡುವ ಹಿನ್ನೆಲೆಯಲ್ಲಿ Online ಮೂಲಕ https://kscbcselfdeclaration.karnataka.gov.in ಲಿಂಕ್ ಬಳಸಿಕೊಂಡು ಸಮೀಕ್ಷೆಯಲ್ಲಿ ಸ್ವಯಂ ಪಾಲ್ಗೊಳ್ಳುವ ಅವಧಿಯನ್ನು ದಿನಾಂಕ:10.11.2025 ರ ವರೆಗೆ ಅಂತಿಮವಾಗಿ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ. https://kannadanewsnow.com/kannada/bjps-internal-strife-is-the-reason-for-the-dharmasthala-incident-dcm-d-k-shivakumar/…














