Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೌಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಇಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಹೊಳೆನರಸೀಪುರ ನಿವಾಸದಲ್ಲಿ ಸಂತ್ರಸ್ತೆಯೊಂದಿಗೆ ತೆರಳಿದ್ದಂತ ಎಸ್ಐಟಿ ಅಧಿಕಾರಿಗಳು, ಸ್ಥಳ ಮಹಜರು ನಡೆಸಿದ್ದರು. ಈಗ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ನಿವಾಸಕ್ಕೂ ಆಗಮಿಸಿದ್ದಾರೆ. ಕಾರಣ ಹೆಚ್.ಡಿ ರೇವಣ್ಣ ಅವರು ದೇವೇಗೌಡ ನಿವಾಸದಲ್ಲಿ ಇರೋ ಬಗ್ಗೆ ಎಸ್ಐಟಿ ಅಧಿಕಾರಿಗಳಿಗೆ ಮಾಹಿತಿ ದೊರೆತಿರೋದಾಗಿದೆ. ಹೀಗಾಗಿ ಹುಡುಕಾಡೋದಕ್ಕಾಗಿ ಆಗಮಿಸಿದ್ದಾರೆ. ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ಮಹಿಳೆಯೊಬ್ಬರನ್ನು ಕಿಡ್ನಾಪ್ ಮಾಡಿದಂತ ಆರೋಪ ಕೇಳಿ ಬಂದಿತ್ತು. ಈ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಆದ್ರೇ ಕೋರ್ಟ್ ವಾದ ಪ್ರತಿವಾದವನ್ನು ಆಲಿಸಿದ ನಂತ್ರ, ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ನೀಡುವುದಕ್ಕೆ ನಕಾರ ವ್ಯಕ್ತ ಪಡಿಸಿತ್ತು. ಈ ಹಿನ್ನಲೆಯಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ಬಂಧನದ ಭೀತಿ ಎದುರಾಗಿತ್ತು. ಈ ಹಿನ್ನಲೆಯಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರು ಮಾಜಿ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ಮಾಹಿತಿ ಆಯೋಗದ ಹಂಗಾಮಿ ಮುಖ್ಯ ಮಾಹಿತಿ ಆಯುಕ್ತರಾಗಿ ಡಾ.ಹೆಚ್.ಸಿ ಸತ್ಯನ್ ಅವರನ್ನು  ನೇಮಿಸಿ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದ್ದು, ಕರ್ನಾಟಕ ಮಾಹಿತಿ ಹಕ್ಕು ನಿಯಮಗಳು, 2005 ರ ನಿಯಮ 12 ಎ ಅಡಿಯಲ್ಲಿ, ಕರ್ನಾಟಕ ರಾಜ್ಯಪಾಲ ಐ.ಥಾವರ್ ಚಂದ್ ಗೆಹ್ಲೋಟ್ ಅವರು 06.05.2024 ರಿಂದ ಜಾರಿಗೆ ಬರುವಂತೆ ಹೊಸ ರಾಜ್ಯ ಮುಖ್ಯ ಮಾಹಿತಿ ಆಯುಕ್ತರನ್ನು ನೇಮಕ ಮಾಡುವವರೆಗೆ ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮುಖ್ಯ ಮಾಹಿತಿ ಆಯುಕ್ತರ ಹುದ್ದೆಯ ಉಸ್ತುವಾರಿ ರಾಜ್ಯ ಮಾಹಿತಿ ಆಯುಕ್ತ ಡಾ.ಎಚ್.ಸಿ.ಸತ್ಯನ್ ಅವರನ್ನು ನೇಮಕ ಮಾಡಲಾಗಿದೆ ಎಂದಿದೆ. https://kannadanewsnow.com/kannada/state-government-issues-advisory-for-pre-monsoon-and-pre-monsoon-preparations-for-2024/ https://kannadanewsnow.com/kannada/good-news-for-job-seekers-application-deadline-for-1000-va-recruitment-extended-till-may-15/

Read More

ಬೆಂಗಳೂರು: ರಾಜ್ಯ ಸರ್ಕಾರದಿದಂ 2024ನೇ ಸಾಲಿನ ಮುಂಗಾರು, ಪೂರ್ವ ಮುಂಗಾರು ಮಳೆ ಅವಧಿಯ ಪೂರ್ವ ಸಿದ್ಧತೆ ಕುರಿತು ಸಲಹೆ ಸೂಚನೆಗಳನ್ನು ಪ್ರಕಟಿಸಲಾಗಿದೆ. ಇಂದು ರಾಜ್ಯ ಸರ್ಕಾರದಿಂದ ಸುತ್ತೋಲೆಯನ್ನು ಹೊರಡಿಸಲಾಗಿದೆ. ಅದರಲ್ಲಿ ಏಪ್ರಿಲ್.15, 2024ರಂದು ಭಾರತೀಯ ಹವಾಮಾನ ಇಲಾಖೆಯು ಹೊರಡಿಸಿರ ನೈರುತ್ಯ ಮಾನ್ಸೂನ್-2024ರ ಮೊದಲ ಹಂತದ ಕಾರ್ಯಾಚರಣೆಯ ದೀರ್ಘ ವ್ಯಾಪ್ತಿಯ ಮುನ್ಸೂಚನೆಯ ಪ್ರಕಾರಣ ಒಟ್ಟಾರೆಯಾಗಿ ದೇಶಾದ್ಯಂತ ಮಳೆಯು ಸಾಮಾನ್ಯಕ್ಕಿಂತ ಹೆಚ್ಚಾಗಿ ಇರುತ್ತದೆ ಎಂದಿದೆ ಎಂದು ತಿಳಿಸಿದೆ. ಮಾನ್ಸೂನ್ ಮನೆ ದೀರ್ಘಾವಧಿ ಸರಾಸರಿಯು ಶೇ.104ಕ್ಕಿಂತ ಹೆಚ್ಚು ಇದೆ. ಪ್ರಾದೇಶಿಕ ವಿತರಣೆಯು ಕರ್ನಾಟಕ ಸೇರಿದಂತೆ ಭಾರತದ ಪರ್ಯಾಯ ಪ್ರೇದಶದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯ ಸಾಧ್ಯತೆಯನ್ನು ಸೂಚಿಸುತ್ತದೆ ಎಂದಿದೆ. ಮುಂಗಾರು ಅವಧಿಯಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ ಉಂಟಾದಲ್ಲಿ ಸಂಭವಿಸಬಹುದಾದ ದುಷ್ಪರಿಣಾಮಗಳನ್ನು ಸಮರ್ಥವಾಗಿ ಎದುರಿಸಲು ಹಾಗೂ ಹಾನಿಯನ್ನು ತಗ್ಗಿಸಲು ಮುಂಗಾರು ಪೂರ್ವದಲ್ಲಿ ಪೂರ್ವ ಸಿದ್ಧತೆ, ಸನ್ನದ್ದತೆ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಹೀಗಾಗಿ ಕೆಲ ಸಲಹೆ ಸೂಚನೆಗಳನ್ನು ಹೊರಡಿಸಿದೆ. ಆ ಸಲೆಹೆ ಸೂಚನೆಗಳು ಈ ಕೆಳಗಿನ ಆದೇಶದಲ್ಲಿದೆ ಓದಿ. https://kannadanewsnow.com/kannada/if-bjp-comes-to-power-for-the-third-time-they-will-finish-off-minorities-zameer-ahmed/ https://kannadanewsnow.com/kannada/court-reserves-order-on-anticipatory-bail-plea-of-former-minister-hd-revanna/

Read More

ಬಾಗಲಕೋಟೆ: ಈಗ ನಡೆಯುತ್ತಿರುವಂತ ಲೋಕಸಭಾ ಚುನಾವಣೆ ದೇಶ ಬಚಾವ್ ಎಲೆಕ್ಷನ್ ಆಗಿದೆ. ಈಗಾಗಲೇ ಎರಡು ಬಾರಿ ಬಿಜೆಪಿ ಆಡಳಿತ ಮಾಡಿದೆ. ಮೂರನೇ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಅವರು ಅಲ್ಪ ಸಂಖ್ಯಾತರನ್ನು ಮುಗಿಸುತ್ತಾರೆ ಎಂಬುದಾಗಿ ಸಚಿವ ಜಮೀರ್ ಅಹ್ಮದ್ ಖಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬಾಗಲಕೋಟೆಯಲ್ಲಿ ಅಲ್ಪ ಸಂಖ್ಯಾತರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ಬಿಜೆಪಿ ಒಳಗೆ ಒಂದು ರೋಗವಿದೆ. ಅದೇ ಬಿಜೆಪಿ ಅಂದ್ರೆ ಕ್ಯಾನ್ಸರ್ ಇದ್ದಂತೆ. ಫಸ್ಟ್ ಟೈಮ್ ಕ್ಯಾನ್ಸರ್ ಎಂಬುದು ಗೊತ್ತಾದ್ರೆ ಉಳಿಯುತ್ತಾರೆ. ಸೆಕೆಂಡ್ ಸ್ಟೇಚ್ ಇದ್ದಾಗಲೂ ಉಳಿಸಬಹುದು. ಆದ್ರೇ ಮೂರನೇ ಬಾರಿ ಬಂದ್ರೆ ನಿಮ್ಮನ್ನೇ ತಗೊಂಡು ಹೋಗುತ್ತೆ ಎಂದರು. ಬಾಗಲಕೋಟೆ ಕಾಂಗ್ರೆಸ್ ಭ್ಯರ್ಥಿ ಸಂಯುಕ್ತಾ ಶಿವಾನಂದ ಪಾಟೀಲ್ ನನ್ನ ಪುತ್ರಿ ಇದದಂತೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅವರನ್ನು ಗೆಲ್ಲಿಸಿ. ಈ ಬಾರಿ ದೇಶವನ್ನು ಬಿಜೆಪಿಯಿಂದ ಬಚಾವ್ ಮಾಡೋದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿ ಎಂದು ಕರೆ ನೀಡಿದರು. https://kannadanewsnow.com/kannada/bjp-will-take-out-bike-rallies-padayatras-in-all-14-constituencies-sunil-kumar/ https://kannadanewsnow.com/kannada/court-reserves-order-on-anticipatory-bail-plea-of-former-minister-hd-revanna/

Read More

ಬೆಂಗಳೂರು: ಕರ್ನಾಟಕದ ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳ ಚುನಾವಣೆಯ ಪ್ರಚಾರ ಕಾರ್ಯವು ನಾಳೆ (ಮೇ 5) ಕೊನೆಗೊಳ್ಳಲಿದೆ. ಇದೇ 7ರಂದು ಮತದಾನ ನಡೆಯಲಿದ್ದು, ಎಲ್ಲ ಪ್ರಮುಖರು, ಕಾರ್ಯಕರ್ತರು ಜನರ ಮನೆ- ಮನಗಳನ್ನು ತಲುಪಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ವಿ.ಸುನೀಲ್ ಕುಮಾರ್ ಅವರು ತಿಳಿಸಿದ್ದಾರೆ. ಮತ್ತೊಮ್ಮೆ ವಿಶ್ವವಂದ್ಯ ನಾಯಕರಾದ ನರೇಂದ್ರ ಮೋದಿಜೀ ಅವರನ್ನು ಪ್ರಧಾನಮಂತ್ರಿಯನ್ನಾಗಿ ಮಾಡುವ ನಿಟ್ಟಿನಲ್ಲಿ ಈ ಪ್ರಚಾರ ಕಾರ್ಯಗಳಲ್ಲಿ ಮುಖಂಡರು ಮತ್ತು ಕಾರ್ಯಕರ್ತರು ಸ್ವಯಂಸ್ಫೂರ್ತಿಯಿಂದ ಭಾಗವಹಿಸುತ್ತಾರೆ ಎಂದು ಅವರು ತಿಳಿಸಿದ್ದಾರೆ. ಮೇ 5ರ ಬೆಳಿಗ್ಗೆ ಪ್ರಚಾರ ಪ್ರಮುಖರು ಸಾಮಾಜಿಕ ಕಾರ್ಯಕರ್ತರ ಮನೆಯಲ್ಲಿ ಉಪಾಹಾರ ಮಾಡಲಿದ್ದಾರೆ. ಬಳಿಕ ಸ್ಥಳೀಯ ಪ್ರಮುಖ ಮಹನೀಯರ ಪುತ್ಥಳಿಗೆ ಮಾಲಾರ್ಪಣೆ ನೆರವೇರಿಸುವರು. ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪತ್ರಿಕಾಗೋಷ್ಠಿಗಳನ್ನು ಆಯೋಜಿಸಲಾಗುವುದು. ಮನೆ ಮನೆಗಳ ಸಂಪರ್ಕ, ಬೈಕ್ ರ್ಯಾಲಿ ಮತ್ತು ಪಾದಯಾತ್ರೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಅವರು ವಿವರ ನೀಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು…

Read More

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಪ್ರಭಾ ಮಲ್ಲಿಕಾರ್ಜುನ್ ಗೆದ್ದರೆ ನಾನೇ ಗೆದ್ದ ಹಾಗೆ ಎಂದು ಸಿ.ಎಂ.ಸಿದ್ದರಾಮಯ್ಯ ಘೋಷಿಸಿದರು. ದಾವಣಗೆರೆಯಲ್ಲಿ ನಡೆದ ಪ್ರಜಾಧ್ವನಿ ಜನಸಮಾವೇಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಅವರ ಗೆಲುವಿಗೆ ಕರೆ ನೀಡಿ ಮಾತನಾಡಿದರು. ಹತ್ತತ್ತು ವರ್ಷ ಪ್ರಧಾನಿಯಾಗಿ ಮೋದಿ ಮಾಡಿದ್ದೇನು ಎನ್ನುವುದನ್ನು ಭಾರತೀಯರಿಗೆ ತಿಳಿಸಿ ಮತ ಕೇಳುತ್ತಿಲ್ಲ. ಬದಲಿಗೆ ಹೊಸ ಹೊಸ ಸುಳ್ಳುಗಳನ್ನು ಹೊತ್ತುಕೊಂಡು ಬಂದಿದ್ದಾರೆ ಎಂದರು. ಇಂಥಾ ಬಿಜೆಪಿಗೆ ಅನುಕೂಲ ಮಾಡಿಕೊಡಲು ಪಕ್ಷೇತರ ಅಭ್ಯರ್ಥಿಯಾಗಿ ವಿನಯ್ ಸ್ಪರ್ಧಿಸುತ್ತಿದ್ದಾರೆ. ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ವಿನಯ್ ಗೆ ಓಟು ಹಾಕಿದರೆ,ಬಿಜೆಪಿಗೆ ಓಟು ಹಾಕಿದಂತೆ. ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ನೀವುಗಳು ಹಾಕುವ ಪ್ರತೀ ಓಟು ನನಗೇ ಹಾಕಿದಂತೆ. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾನೇ ಕಣದಲ್ಲಿ ಇದ್ದೇನೆ ಎಂದುಕೊಂಡು ಮತ ಹಾಕಿ ಭರ್ಜರಿ ಬಹುಮತದಿಂದ ಕಾಂಗ್ರೆಸ್ ಗೆಲ್ಲಿಸಿ ಎಂದು ಕರೆ ನೀಡಿದರು. 15 ಲಕ್ಷ ರೂಪಾಯಿ ಪ್ರತಿಯೊಬ್ಬ ಭಾರತೀಯರ ಖಾತೆಗೆ ಹಾಕ್ತೀನಿ ಎಂದು ನಂಬಿಸಿದ ಮೋದಿ ಈ ಹತ್ತು ವರ್ಷದಲ್ಲಿ…

Read More

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣದ ಬೆನ್ನಲ್ಲೇ, ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ಮಹಿಳೆಯೊಬ್ಬರ ಪುತ್ರ ಕಿಡ್ನ್ಯಾಪ್ ಆರೋಪದಲ್ಲಿ ದೂರು ನೀಡಿದ್ದರು. ಇದೀಗ ಕಿಡ್ನ್ಯಾಪ್ ಆಗಿರೋ ಸಂತ್ರಸ್ತೆ ಮಡಿಕೇರಿಯ ತೋಟದ ಮನೆಯೊಂದರಲ್ಲಿ ಅಡಗಿಸಿಟ್ಟಿರೋ ಶಂಕೆ ವ್ಯಕ್ತವಾಗಿದೆ. ಹೌದು, ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರು ಕಿಡ್ನ್ಯಾಪ್ ಮಾಡಿದ್ದಾರೆ ಎನ್ನಲಾಗಿರುವಂತ ಸಂತ್ರಸ್ತೆ ಮಡಿಕೇರಿಯಲ್ಲಿರುವ ಅನುಮಾನ ಈಗ ವ್ಯಕ್ತವಾಗಿದೆ. ಮಡಿಕೇರಿಯ ತೋಟದ ಮನೆಯೊಂದರಲ್ಲಿ ಅಡಗಿಸಿ ಇಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಇತ್ತ ಮಹಿಳೆಯನ್ನು ಜೆಡಿಎಸ್ ನಾಯಕರೊಬ್ಬರ ಮಡಿಕೇರಿಯ ತೋಟದ ಮನೆಯಲ್ಲಿ ಅಡಗಿಸಿ ಇಟ್ಟಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಮಡಿಕೇರಿಯ ಫಾರ್ಮ್‍ಹೌಸ್ ನ ಮಾಹಿತಿ ಮೇರೆಗೆ ಮಡಿಕೇರಿಯಲ್ಲಿ ಪೊಲೀಸರು ತಲಾಶ್ ನಡೆಸುತ್ತಿದ್ದಾರೆ. ಮತ್ತೊಂದೆಡೆ ರೇವಣ್ಣ ವಿರುದ್ಧ ದಾಖಲಾಗಿದ್ದಂತ ಕಿಡ್ನ್ಯಾಪ್ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಎಸ್ಐಟಿ ಪರ ಎಸ್ ಪಿಪಿಯ ವಾದ, ಹೆಚ್ ಡಿ ರೇವಣ್ಣ ಪರ ವಕೀಲರ…

Read More

ಶಿವಮೊಗ್ಗ : 2024-25ನೇ ಸಾಲಿಗೆ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ 3 ವರ್ಷಗಳ ಡಿಪ್ಲೊಮಾ (ಡಿ.ಹೆಚ್.ಟಿ.ಟಿ) ಕೋರ್ಸ್ ಕಲಿಕೆಗಾಗಿ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಗದಗ-ಬೆಟಗೇರಿ-22 ಅಭ್ಯರ್ಥಿಗಳು, ತಮಿಳುನಾಡಿನ ಸೇಲಂ-17 ಅಭ್ಯರ್ಥಿಗಳು, ಆಂದ್ರಪ್ರದೇಶದ ನಲ್ಲೂರು ಜಿಲ್ಲೆಯ ಎಸ್.ಪಿ.ಕೆ.ಎಂ.-03 ಅಭ್ಯರ್ಥಿಗಳು, ಹಾಗೂ ಕೇರಳದ ಕಣ್ಣೂರು -02 ಅಭ್ಯರ್ಥಿಗಳಿಗೆ ಅವಕಾಶವಿದ್ದು,  ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾ ಡಿಪ್ಲೊಮಾ ಸಂಸ್ಥೆಗಳಲ್ಲಿ ಕೋರ್ಸ್ ಪ್ರವೇಶ ಕುರಿತಂತೆ ಕೌನ್ಸಿಲಿಂಗ್‍ಗಾಗಿ ಕರೆಯಲಾಗುವುದು.  ಆಯ್ಕೆಯಾದ ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ರೂ. 2,500/- ರಂತೆ ಶಿಷ್ಯವೇತನ ಹಾಗೂ ಪುರುಷ ಅಭ್ಯರ್ಥಿಗಳಿಗೆ ವಸತಿನಿಲಯದ ವ್ಯವಸ್ಥೆಯನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು. ಆಸಕ್ತರು ನಿಗಧಿತ ನಮೂನೆ ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ  ಸಂಸ್ಥೆ, ನರಸಾಪುರ, ಗದಗ-ಬೆಟಗೇರಿ-08372-297221, ಮೊ.ಸಂ.: 9449162822 ಅಥವಾ ಆಯಾ ಜಿಲ್ಲೆಯ ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್,…

Read More

ಬಾಗಲಕೋಟೆ: ಜಿಲ್ಲೆಯಲ್ಲಿ ಇಂದು ನಡೆದಂತ ಭೀಕರ ಕಾರು ಅಪಘಾತದಲ್ಲಿ ಸಿದ್ದನಕೊಳ್ಳ ಮಠದ ಶಿವಕುಮಾರ ಸ್ವಾಮೀಜಿ ಅವರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಸ್ಥಿತಿ ಚಿಂತಾಜನಕ ಎಂಬುದಾಗಿ ಹೇಳಲಾಗುತ್ತಿದೆ. ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಸುಕ್ಷೇತ್ರ ಸಿದ್ದನಕೊಳ್ಳ ಮಠದ ಶಿವಕುಮಾರಸ್ವಾಮೀಜಿ ಅವರ ಕಾರು, ಅಮಿನಗಢ ಬಳಿಯಲ್ಲಿ ಇಂದು ಟಿಪ್ಪರ್ ವಾಹನಕ್ಕೆ ಡಿಕ್ಕಿಯಾದ ಪರಿಣಾಮ, ಗಂಭೀರವಾಗಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಶಿವಕುಮಾರಸ್ವಾಮೀಜಿಯವರ ತಲೆಗೆ ಗಂಭೀರವಾಗಿ ಪೆಟ್ಟುಬಿದ್ದಿದ್ದು, ಕೋಮಾದಲ್ಲಿ ಇದ್ದಾರೆ ಎನ್ನಲಾಗುತ್ತಿದೆ. ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವಂತ ಸಿದ್ಧನಕೊಳ್ಳ ಮಠದ ಶಿವಕುಮಾರ ಸ್ವಾಮೀಜಿಯವರನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈ ಅಪಘಾತದಲ್ಲಿ ಶಿವಕುಮಾರಸ್ವಾಮೀಜಿಯವರ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/anticipatory-bail-plea-of-former-minister-hd-revanna-adjourned-for-some-time/ https://kannadanewsnow.com/kannada/good-news-for-job-seekers-application-deadline-for-1000-va-recruitment-extended-till-may-15/

Read More

ಬೆಂಗಳೂರು: ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ವಿರುದ್ಧ ದಾಖಲಾಗಿದ್ದಂತ ಕಿಡ್ನ್ಯಾಪ್ ಕೇಸ್ ಪ್ರಕರಣದಲ್ಲಿ ಸಲ್ಲಿಕೆಯಾಗಿದ್ದಂತ ನಿರೀಕ್ಷಣಾ ಜಾಮೀನು ಅರ್ಜಿಯ ತೀರ್ಪನ್ನು ಕೋರ್ಟ್ ಕಾಯ್ದಿರಿಸಿದೆ. ಈ ಮೂಲಕ ಇಂದು ಕೂಡ ನಿರೀಕ್ಷಣಾ ಜಾಮೀನು ಸಿಗೋದು ಡೌಟ್ ಎನ್ನಲಾಗುತ್ತಿದೆ. ಶಾಸಕ ಹೆಚ್.ಡಿ ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದಂತ ಸಂತೋಷ ಗಜಾನನ ಭಟ್ ನಿನ್ನೆ ನಡೆಸಿದರು. ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆಯ ವೇಳೆಯಲ್ಲಿ ರೇವಣ್ಣ ಪರವಾಗಿ ಹಿರಿಯ ವಕೀಲ ಮೂರ್ತಿ ಡಿ ನಾಯಕ್ 15 ನಿಮಿಷಗಳ ಕಾಲ ವಾದ ಮಂಡಿಸಿದ್ದರು. ಈ ವೇಳೆ ಮತ್ತೊಂದು ಎಫ್ಐಆರ್ ನಲ್ಲಿ ಮಹಿಳೆಯ ಹೆಸರು ಕಾಣಿಸುತ್ತಿಲ್ಲ. ಆದ್ದರಿಂದ ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡುವಂತೆ ನಿನ್ನೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಈ ವಾದ ಆಲಿಸಿದಂತ ನ್ಯಾಯಪೀಠವು, ಈ ಪ್ರಕರಣವೂ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಹೊಂದಿಕೊಂಡ ಪ್ರಕರಣವೇ ಆಗಿರುವುದರಿಂದ ಇಂದಿಗೆ ಮುಖ್ಯ ಪ್ರಕರಣದ ಮೇಲೆಯೇ ಸಂಪೂರ್ಣ ವಾದ…

Read More