Author: kannadanewsnow09

ಬೆಂಗಳೂರು: ಮುಖ್ಯಮಂತ್ರಿಗಳು ದೆಹಲಿಯಲ್ಲಿ ನಡೆಯುವ ನೀತಿ ಆಯೋಗದ ಸಭೆಗೆ ಬಹಿಷ್ಕಾರ ಹಾಕಿದ್ದಾರೆ. ನೀತಿ ಆಯೋಗದ ಸಭೆಗೆ ಹಾಜರಾಗುವುದಿಲ್ಲ ಎಂದು ಸ್ವತಃ ಮುಖ್ಯಮಂತ್ರಿಗಳು ಬಹಿಷ್ಕಾರ ಹಾಕುವ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು. ವಿಧಾನಸಭೆಯಲ್ಲಿ ಸದನದ ಕಲಾಪದಲ್ಲಿ ಇಂದು ಭಾಗವಹಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳು. ಅವರು ಆರೂವರೆ ಕೋಟಿ ಕನ್ನಡಿಗರನ್ನು ಪ್ರತಿನಿಧಿಸುವ ಮುಖ್ಯಮಂತ್ರಿಗಳು. ಅವರು ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿಗಳಲ್ಲ ಎಂದು ವಿವರಿಸಿದರು. ಮುಖ್ಯಮಂತ್ರಿಗಳು ನೀತಿ ಆಯೋಗದ ಸಭೆಗೆ ಬಹಿಷ್ಕಾರ ಹಾಕುವ ಬದಲಾಗಿ ಸಭೆಗೆ ಹಾಜರಾಗಿ ರಾಜ್ಯದ ಹಿತಾಸಕ್ತಿ ಕಾಪಾಡಬೇಕು. ರಾಜ್ಯದ ಮುಖ್ಯಮಂತ್ರಿ ಅವರೆಂಬುದನ್ನು ನೆನಪು ಮಾಡಿಕೊಡಲು ಬಯಸುವುದಾಗಿ ಹೇಳಿದರು. ನೀತಿ ಆಯೋಗದ ಸಭೆ ವಿಚಾರದಲ್ಲಿ ರಾಜಕಾರಣ ಮಾಡುವುದನ್ನು ಬಿಟ್ಟು, ಸಭೆಯಲ್ಲಿ ಭಾಗವಹಿಸಬೇಕು ಎಂದು ಅವರು ಆಗ್ರಹಿಸಿದರು. https://kannadanewsnow.com/kannada/muda-scam-echoes-in-both-houses-of-state-slogan-enough-is-enough-loot-is-enough/ https://kannadanewsnow.com/kannada/congress-will-not-use-anyone-dk-shivakumar-on-complaint-against-ed/

Read More

ಬೆಂಗಳೂರು: ರಾಜ್ಯದಲ್ಲಿ ವಿಧಾನ ಮಂಡಲದ ಅಧಿವೇಶನ ನಡೆಯುತ್ತಿದೆ. ಇಂದಿನ ಉಭಯ ಸದನಗಳಲ್ಲೂ ಮುಡಾ ಹಗರಣವು ಪ್ರತಿಧ್ವನಿಸಿದೆ. ಆಡಳಿತ, ವಿಪಕ್ಷಗಳ ನಡುವೆ ವಾಗ್ವಾದವೇ ನಡೆದಿದೆ. ಮುಡಾ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಸಭಾಧ್ಯಕ್ಷರನ್ನು ಕೋರಿದರೂ ಅವಕಾಶ ನೀಡಿಲ್ಲ. ಈ ಹಿನ್ನಲೆಯಲ್ಲೇ ಸಾಕು ಸಾಕು ಲೂಟಿ ಸಾಕು ಅಂತ ಸದನದಲ್ಲೇ ಸದಸ್ಯರು ಘೋಷಣೆ ಕೂಗಿದ್ದಾರೆ. ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನ ಎರಡೂ ಸದನದಲ್ಲಿ ಇಂದು ಮುಡಾ ಹಗರಣ ಪ್ರತಿಧ್ವನಿಸಿದೆ. ವಿಧಾನಸಭೆ, ಪರಿಷತ್ತಿನಲ್ಲಿ ಬಿಜೆಪಿಯ ನಾಯಕರು ಮುಡಾ ಹಗರಣದ ಬಗ್ಗೆ ಚರ್ಚೆ ನಡೆಸೋದಕ್ಕೆ ಅವಕಾಶ ನೀಡುವಂತೆ ಕೋರಿದರು. ಆದರೇ ಇದಕ್ಕೆ ಅವಕಾಶವನ್ನು ನೀಡಲಾಗಿಲ್ಲ. ಇದೇ ಕಾರಣಕ್ಕೆ ಸಿಡಿದೆದ್ದಂತ ಬಿಜೆಪಿ ಸದಸ್ಯ ಸಿಟಿ ರವಿ ಅವರು, ಭ್ರಷ್ಟ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪರವಾಗಿ ಕಾಂಗ್ರೆಸ್ ನವರು ನಿಂತಿದ್ದಾರೆ. ಭ್ರಷ್ಟಾಚಾರದ ಪಿತಾಮಹ ಸಿಎಂ ಸಿದ್ಧರಾಮಯ್ಯ ಅಂತ ಕಿಡಿಕಾರಿದರು. ಇದೇ ಸಂದರ್ಭದಲ್ಲಿ ಉಭಯ ಸದನಗಳಲ್ಲೂ ಪರಸ್ಪರ ಆಡಳಿತ, ವಿಪಕ್ಷದ ನಾಯಕರಿಂದ ಗದ್ದಲವನ್ನೇ ಏಳಿಸಲಾಯಿತು. ಬಿಜೆಪಿಯ ಸದಸ್ಯರು ಸೈಟು ಸೈಟು…

Read More

ಬೆಂಗಳೂರು: ಇಡಿ ವಿರುದ್ಧ ದೂರು ನೀಡಿರುವ ಅಧಿಕಾರಿ ಕಲ್ಲೇಶ್ ಅವರು ಅಮಾನತ್ತು ಆಗಿದ್ದ ಅಧಿಕಾರಿ. ಅವರನ್ನು ಬಳಸಿಕೊಂಡು ಕಾಂಗ್ರೆಸ್ ದೂರು ನೀಡಿದೆ ಎಂಬ ಆರೋಪದ ಬಗ್ಗೆ ಕೇಳಿದಾಗ “ಕಾಂಗ್ರೆಸ್ ಪಕ್ಷ ಯಾರನ್ನೂ ಬಳಸಿಕೊಳ್ಳುವ ಅವಶ್ಯಕತೆಯಿಲ್ಲ. ಆತ ದೂರು ಕೊಟ್ಟಿದ್ದಾನೆ. ಎಫ್ ಐಆರ್ ದಾಖಲಾಗಿದೆ, ಅದಕ್ಕೆ ನ್ಯಾಯಲಯ ತಡೆ ನೀಡಿದೆ ಎಂದು ಮಾಧ್ಯಮಗಳ ಮೂಲಕ ತಿಳಿದುಕೊಂಡೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಲ್ಲೇಶ್ ಅವರ ಮೇಲೆ ಭ್ರಷ್ಟಾಚಾರದ ಆರೋಪದಿಂದ ಅಮಾನತು ಮಾಡಲಾಗಿತ್ತು ಎಂದಾಗ “ಆತ ತಪ್ಪು ಮಾಡಿದ್ದರೆ ಒಳಗೆ ಹಾಕುತ್ತಾರೆ. ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತಾರೆ” ಎಂದು ಹೇಳಿದರು. ನಮ್ಮದು, ನಿಮ್ಮದು, ಬೇರೆಯವರದು ಬಿಚ್ಚಿಕೊಳ್ಳಲಿ ಕಾಂಗ್ರೆಸ್ ಮತ್ತು ಬಿಜೆಪಿಯವರು ಶಾಮೀಲಾಗಿ ನಮ್ಮನ್ನು ಮುಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ನಾನು ಜೈಲಿನಿಂದ ಹೊರಗಡೆ ಬಂದು ಎಲ್ಲಾ ಬಿಚ್ಚಿಡುತ್ತೇನೆ ಎನ್ನುವ ಜೆಡಿಎಸ್ ನಾಯಕ ಸೂರಜ್ ರೇವಣ್ಣ ಅವರ ಹೇಳಿಕೆಯ ಬಗ್ಗೆ ಕೇಳಿದಾಗ “ಅವರ ಹಕ್ಕನ್ನು ನಾವು ತಡೆಯಲು ಆಗುತ್ತದೆಯೇ? ನಿಮ್ಮದು, ನಮ್ಮದು, ಬೇರೆಯವರದು…

Read More

ನವದೆಹಲಿ: ಕರ್ನಾಟಕ ಸರ್ಕಾರವು ನೀಟ್ ವಿರುದ್ಧದ ನಿರ್ಣಯವನ್ನು ಅಂಗೀಕರಿಸಲಾಗಿದೆ. ಈ ಬೆನ್ನಲ್ಲೇ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲೂ ನೀಟ್ ವಿರುದ್ಧದ ನಿರ್ಣಯವನ್ನು ಅಂಗೀಕರಿಸಲಾಗಿದೆ. ನ್ಯಾಷನಲ್ ಟೆಸ್ಟ್ ಏಜೆನ್ಸಿ ನಡೆಸುವಂತ ನೀಟ್ ಪಿಜಿ ಪರೀಕ್ಷೆಯಲ್ಲಿ ಅಕ್ರಮ ನಡೆದಿತ್ತು. ಪ್ರಶ್ನೆಪತ್ರಿಕೆ ಸೋರಿಯ ನಂತ್ರ, ಕೇಂದ್ರ ಸರ್ಕಾರದಿಂದ ಸಿಬಿಐ ತನಿಖೆಗೆ ಪ್ರಕರಣವನ್ನು ವಹಿಸಲಾಗಿತ್ತು. ಕೇಂದ್ರ ಸರ್ಕಾರದ ಬಹು ದೊಡ್ಡ ಪರೀಕ್ಷಾ ಹಗರಣವೆಂದೇ ಕರೆಯುತ್ತಿರುವಂತ ನೀಟ್ ಉತ್ತರ ಪತ್ರಿಕೆ ಬಹಿರಂಗ ಪ್ರಕರಣದ ಸಂಬಂಧ ರಾಜ್ಯ ಸರ್ಕಾರಗಳು ಸಿಡಿದೆದ್ದಿದ್ದವು. ಈ ಪರೀಕ್ಷೆಯನ್ನೇ ವಿರೋಧಿಸುವಂತ ನಡೆಯುನ್ನು ತೋರಿದ್ದವು. ಕರ್ನಾಟಕ ಮೊದಲ ಬಾರಿಗೆ ನೀಟ್ ವಿರುದ್ಧದ ನಿರ್ಣಯವನ್ನು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿತ್ತು. ಈಗ ಪಶ್ಚಿಮ ಬಂಗಾಳದಲ್ಲೂ ವಿಧಾನಸಭೆಯಲ್ಲೇ ನೀಟ್ ವಿರುದ್ಧದ ನಿರ್ಣಯಕ್ಕೆ ಅಂಗೀಕಾರವನ್ನು ಪಡೆಯಲಾಗಿದೆ. ಒಟ್ಟಾರೆಯಾಗಿ ಕರ್ನಾಟಕದ ನಂತರ, ಪಶ್ಚಿಮ ಬಂಗಾಳ ವಿಧಾನಸಭೆಯು ರಾಜ್ಯದಲ್ಲಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (National Eligibility-cum-Entrance Test -NEET) ಅನ್ನು ರದ್ದುಗೊಳಿಸುವ ನಿರ್ಣಯವನ್ನು ಅಂಗೀಕರಿಸಿತು. ಅದರ ಬದಲಿಗೆ ವೈದ್ಯಕೀಯ ಅಧ್ಯಯನವನ್ನು…

Read More

ಬೆಂಗಳೂರು: ನಟ ದರ್ಶನ್ ಪ್ರಕರಣವನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ನ್ಯಾಯ ಪ್ರಕ್ರಿಯೆ ಕೂಡ ನಡೆಯುತ್ತಿದೆ. ಹೀಗಾಗಿ ನಾನು ಯಾವುದೇ ಕಾರಣಕ್ಕೂ ನಟ ದರ್ಶನ್ ಪ್ರಕರಣದಲ್ಲಿ ಹಸ್ತ ಕ್ಷೇಪ ಮಾಡುವುದಿಲ್ಲ. ಕಾನೂನಿನ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟ ಪಡಿಸಿದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಟ ದರ್ಶನ್ ಗೆ ಅನ್ಯಾಯ ಆಗಿದ್ದರೆ ನ್ಯಾಯ ಕೊಡಿಸಲಾಗುವುದು ಎಂದು ರಾಮನಗರದಲ್ಲಿ ನೀಡಿದ ಹೇಳಿಕೆಯ ಬಗ್ಗೆ ಮಾಧ್ಯಮದವರು ಕೇಳಿದಾಗ, “ನಿನ್ನೆ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗ, ವಿಜಯಲಕ್ಷ್ಮಿ ಅವರು ನನ್ನನ್ನು ಭೇಟಿ ಮಾಡಲು ಬಂದಿದ್ದರು. ಎಲ್ಲೆಂದರಲ್ಲಿ ಭೇಟಿ ಮಾಡಲು ಸಾಧ್ಯವಿಲ್ಲ. ಮನೆಗೆ ಬಂದು ಭೇಟಿ ಮಾಡಿ ಎಂದು ಇಂದು ಬೆಳಗ್ಗೆ ಸಮಯಾವಕಾಶ ನೀಡಿದ್ದೆ. ಅವರು ನಿನ್ನೆ ಭೇಟಿಗೆ ಯತ್ನಿಸಿದಾಗ ಬಹುಶಹ ದರ್ಶನ್ ಪ್ರಕರಣದ ವಿಚಾರವಾಗಿ ಮಾತನಾಡಲು ಬರುತ್ತಾರೆ ಎಂದು ಭಾವಿಸಿದ್ದೆ” ಎಂದರು. “ಮಂಗಳವಾರ ರಾತ್ರಿ ರಾಮನಗರದಲ್ಲಿ ನಡೆದ ಚಾಮುಂಡೇಶ್ವರಿ ಕರಗ ಸಮಾರಂಭದಲ್ಲಿ ನೆರೆದಿದ್ದ ಯುವಕರು ದರ್ಶನ್ ಮೇಲಿನ ಅಭಿಮಾನದಿಂದ ನ್ಯಾಯ ಕೊಡಿಸಿ ಎಂದು…

Read More

ಬೆಂಗಳೂರು : “ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ನಮ್ಮ ಶಾಲೆಯಲ್ಲಿ ಮಗನಿಗೆ ಸೀಟು ಸಂಬಂಧ ನನ್ನನ್ನು ಭೇಟಿ ಮಾಡಿದ್ದರು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರದ ತಮ್ಮ ನಿವಾಸಕ್ಕೆ ವಿಜಯಲಕ್ಷ್ಮಿ ಅವರು ಬಂದ ಕಾರಣ ಕುರಿತು ಮಾಧ್ಯಮಗಳ ಪ್ರಶ್ನೆಗಳಿಗೆ ಬುಧವಾರ ಉತ್ತರಿಸಿದ ಶಿವಕುಮಾರ್ ಅವರು “ದರ್ಶನ್, ವಿಜಯಲಕ್ಷ್ಮೀ ಪುತ್ರ ಈ ಮೊದಲು ನಮ್ಮ ಶಾಲೆಯಲ್ಲಿ ಓದುತ್ತಿದ್ದರು. ಕಾರಣಾಂತರಗಳಿಂದ ನಮ್ಮ ಶಾಲೆ ತೊರೆದು ಬೇರೆ ಶಾಲೆ ಸೇರಿದ್ದರು. ಈಗ ಮತ್ತೆ ಮರಳಿ ನಮ್ಮ ಶಾಲೆಗೆ ಸೇರಿಸಿಕೊಳ್ಳುವಂತೆ ಮನವಿ ಮಾಡಲು ಬಂದಿದ್ದರು. ನಮ್ಮ ಶಾಲೆಯ ಪ್ರಾಂಶುಪಾಲರು ಪ್ರವೇಶ ಅವಕಾಶ ನಿರಾಕರಿಸಿದ್ದರಿಂದ ನನ್ನ ಬಳಿ ಸೀಟು ಕೇಳಲು ಬಂದಿದ್ದರು” ಎಂದು ಹೇಳಿದರು. “ಶಾಲೆಯ ದಾಖಲಾತಿಗೆ ಒಂದಷ್ಟು ನಿಯಮಾವಳಿಗಳಿವೆ. ನಾನು ಶಾಲೆಗೆ ಅಷ್ಟಾಗಿ ಭೇಟಿ ನೀಡುತ್ತಿಲ್ಲ. ಶಾಲೆಯ ಆಡಳಿತ ಜವಾಬ್ದಾರಿಯನ್ನು ಸಂಪೂರ್ಣವಾಗಿ ಮಕ್ಕಳಿಗೆ ವಹಿಸಿದ್ದೇನೆ. ವಿಜಯಲಕ್ಷ್ಮಿ ಅವರು ಮಗನ ಭವಿಷ್ಯದ ದೃಷ್ಟಿಯಿಂದ ಬಂದಿದ್ದರು. ಜತೆಗೆ ನಮ್ಮ ಶಾಲೆಯ ಪಕ್ಕದಲ್ಲೇ ಅವರ ನಿವಾಸವಿದೆ. ನಾನು…

Read More

ನವದೆಹಲಿ : ಲೋಕಸಭೆ ಚುನಾವಣೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಪಿಎಂ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆಯನ್ನು ಘೋಷಿಸಿದ್ದರು, ಇದರ ಅಡಿಯಲ್ಲಿ 75,000 ಕೋಟಿ ರೂ.ಸಬ್ಸಿಡಿಯೊಂದಿಗೆ 300 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ಒದಗಿಸುವ ಗುರಿಯನ್ನು ನಿಗದಿಪಡಿಸಲಾಗಿದೆ. ಇದರ ಅಡಿಯಲ್ಲಿ, 1 ಕೋಟಿ ಕುಟುಂಬಗಳಿಗೆ ಪ್ರಯೋಜನವಾಗುವ ಯೋಜನೆ ಇದೆ. ಅಲ್ಲದೆ, ಉಳಿದ ವಿದ್ಯುತ್ತನ್ನು ಮಾರಾಟ ಮಾಡುವ ಮೂಲಕ ನೀವು ಪ್ರಯೋಜನ ಪಡೆಯಬಹುದು. ಇದಲ್ಲದೆ, ಕೇಂದ್ರ ಸರ್ಕಾರವು ಈ ಯೋಜನೆಯಡಿ ಸಬ್ಸಿಡಿಯನ್ನು ಸಹ ನೀಡುತ್ತದೆ. ನೀವು ಸಹ ಪಿಎಂ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆಯ ಲಾಭವನ್ನು ಪಡೆಯಲು ಬಯಸಿದರೆ, ನೀವು ಸೌರ ಫಲಕಗಳನ್ನು ಸ್ಥಾಪಿಸಬೇಕು. ಆದಾಗ್ಯೂ, ಸೌರ ಫಲಕವನ್ನು ಸ್ಥಾಪಿಸುವ ಮೊದಲು, ಕೆಲವು ವಿಶೇಷ ವಿಷಯಗಳನ್ನು ವಿವರವಾಗಿ ತಿಳಿದುಕೊಳ್ಳಬೇಕು. ಇದರಿಂದ ಯೋಜನೆಯ ಲಾಭವನ್ನು ಪಡೆಯುವಲ್ಲಿ ನೀವು ಯಾವುದೇ ರೀತಿಯ ಸಮಸ್ಯೆಯನ್ನು ಎದುರಿಸುವುದಿಲ್ಲ. ಸಂಪೂರ್ಣ ವಿವರಗಳನ್ನು ತಿಳಿದುಕೊಳ್ಳೋಣ… ಇದಕ್ಕೆ ಎಷ್ಟು ವೆಚ್ಚವಾಗುತ್ತದೆ? ನೀವು ಸೌರ ಫಲಕಗಳನ್ನು ಸ್ಥಾಪಿಸಲು ಹೊರಟರೆ, ಅದರ ವೆಚ್ಚವು…

Read More

ಶಿವಮೊಗ್ಗ: ಜಿಲ್ಲೆಯಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈಗಾಗಲೇ ಲ್ಯಾಬ್ ಟೆಕ್ನೀಷಿಯನ್ ಒಬ್ಬರು ಶಂಕಿತ ಡೆಂಗ್ಯೂಗೆ ಬಲಿಯಾಗಿದ್ದರು. ಈ ಬೆನ್ನಲ್ಲೇ ಸರ್ಕಾರಿ ಆಸ್ಪತ್ರೆಯ ಸ್ಟಾಫ್ ನರ್ಸ್ ಒಬ್ಬರು ಇಂದು ಬಲಿಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಂತ ಹೇಮಾ(45) ಎಂಬುವರು ಕಳೆದ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದಂತ ಅವರಿಗೆ ಡೆಂಗ್ಯೂ ಪಾಸಿಟಿವ್ ಅಂತ ಪರೀಕ್ಷೆಯಲ್ಲಿ ತಿಳಿದು ಬಂದಿತ್ತು. ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಹೇಮಾ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂತಹ ಮೆಗ್ಗಾನ್ ಆಸ್ಪತ್ರೆಯ ಸ್ಟಾಫ್ ನರ್ಸ್ ಹೇಮಾ ಅವರು ಇಂದು ಶಂಕಿತ ಡೆಂಗ್ಯೂವಿನಿಂದ ಕೊನೆಯುಸಿರೆಳೆದಿದ್ದಾರೆ. ಈ ಮೂಲಕ ಶಂಕಿತ ಡೆಂಗ್ಯೂಗೆ ಶಿವಮೊಗ್ಗ ಜಿಲ್ಲೆಯಲ್ಲಿ ಸ್ಟಾಫ್ ನರ್ಸ್ ಬಲಿಯಾದಂತೆ ಆಗಿದೆ. https://kannadanewsnow.com/kannada/good-news-for-anganwadi-workers-honorarium-to-be-hiked-soon/ https://kannadanewsnow.com/kannada/breaking-bengaluru-man-kills-girlfriend-by-entering-pg/

Read More

ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (Central Board of Secondary Education -CBSE) ಜುಲೈ 2024 ರ ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆ ( Central Teacher Eligibility Test -CTET) ಯ ಕೀ ಉತ್ತರಗಳನ್ನು ಬಿಡುಗಡೆ ಮಾಡಿದೆ. ತನ್ನ ಅಧಿಕೃತ ವೆಬ್ಸೈಟ್ನಲ್ಲಿ, ctet.nic.in, ಪರೀಕ್ಷೆ ತೆಗೆದುಕೊಂಡ ಅಭ್ಯರ್ಥಿಗಳು ಉತ್ತರ ಕೀಯನ್ನು ಡೌನ್ಲೋಡ್ ಮಾಡಬಹುದು ಮತ್ತು ಅಗತ್ಯವಿದ್ದರೆ ಆಕ್ಷೇಪಣೆಗಳನ್ನು ಸಲ್ಲಿಸಬಹುದು. ಸಿಬಿಎಸ್ಇ ಸಿಟಿಇಟಿ ಉತ್ತರ ಕೀ 2024 ( CBSE CTET answer key 2024 ) ಪಡೆಯಲು ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಪ್ರವೇಶಿಸಲು ತಮ್ಮ ಹುಟ್ಟಿದ ದಿನಾಂಕ ಮತ್ತು ರೋಲ್ ಸಂಖ್ಯೆಯನ್ನು ನಮೂದಿಸಬೇಕು. ಸಿಟಿಇಟಿ 2024 ಜುಲೈ 7 ರಂದು ದೇಶಾದ್ಯಂತ 136 ನಗರಗಳಲ್ಲಿ ಇಪ್ಪತ್ತು ಭಾಷೆಗಳಲ್ಲಿ ಎರಡು ಪಾಳಿಗಳಲ್ಲಿ ನಡೆಯಿತು. ಪ್ರತಿ ಪ್ರಶ್ನೆಗೆ 1000 ರೂ.ಗಳ ಸಂಸ್ಕರಣಾ ಶುಲ್ಕವನ್ನು (ಮರುಪಾವತಿಸಲಾಗದ) ಉತ್ತರಗಳನ್ನು ವಾದಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಪಾವತಿಸಬೇಕು. ಶುಲ್ಕವಿಲ್ಲದೆ ಅಥವಾ ಇತರ ಯಾವುದೇ ವಿಧಾನದಿಂದ…

Read More

ಬೆಂಗಳೂರು : “ಕೇಂದ್ರ ಸರ್ಕಾರದ ಬಳಿ ನೀತಿಯೇ ಇಲ್ಲದಿರುವಾಗ, ನೀತಿ ಆಯೋಗದ ಸಭೆಗೆ ಹೋಗಿ ಏನು ಪ್ರಯೋಜನ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೇಂದ್ರದ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿರುವ ಬಗ್ಗೆ ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಬುಧವಾರ ಉತ್ತರಿಸಿದ ಶಿವಕುಮಾರ್ ಅವರು, “ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಕರ್ನಾಟಕಕ್ಕೆ ನ್ಯಾಯ ಸಿಕ್ಕಿಲ್ಲ. ಇಲ್ಲಿ ನೀತಿಯೇ ಇಲ್ಲ. ರಾಜ್ಯಕ್ಕೆ ಯಾವುದೇ ಯೋಜನೆ ಸಿಕ್ಕಿಲ್ಲ. ರಾಜ್ಯಕ್ಕೆ ಬಜೆಟ್ ನಲ್ಲಿ ಸರಿಯಾದ ಪ್ರಾತಿನಿದ್ಯ ಸಿಕ್ಕಿಲ್ಲದ ಕಾರಣ, ಪಕ್ಷದ ನಾಯಕರು ಸಭೆಯನ್ನು ಬಹಿಷ್ಕರಿಸಿ ಪ್ರತಿಭಟನೆ ಮಾಡಲು ತೀರ್ಮಾನಿಸಿದ್ದಾರೆ” ಎಂದು ತಿಳಿಸಿದರು. ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಬಿಜೆಪಿಯಿಂದ ತೀವ್ರ ವಿರೋಧ ವ್ಯಕ್ತವಾಗಿರುವ ಬಗ್ಗೆ ಕೇಳಿದಾಗ, “ಈ ವಿಚಾರದಲ್ಲಿ ಅವರು ರಾಜಕೀಯ ಮಾಡುತ್ತಿದ್ದಾರೆ. ನಾನು ಯಾವುದನ್ನೂ ಆತುರದಲ್ಲಿ ಮಾಡುವುದಿಲ್ಲ. ನಾನು ವಿಧೇಯಕ ಮಂಡನೆ ಮಾಡಿದ್ದೇನೆ. ಅವರು ಅದನ್ನು ಸಂಪೂರ್ಣವಾಗಿ ಪರಾಮರ್ಶಿಸಿ ಚರ್ಚೆ ಮಾಡಲಿ. ಬೆಂಗಳೂರು ಅನಿಯಂತ್ರಿತವಾಗಿ ಬೆಳೆಯುತ್ತಿದ್ದು, 1.40 ಕೋಟಿ ಜನಸಂಖ್ಯೆ ಇದೆ.…

Read More