Author: kannadanewsnow09

ಶಿವಮೊಗ್ಗ: ಜಿಲ್ಲೆಯಲ್ಲಿ ರಾಜ್ಯದಲ್ಲೇ ನರೇಗಾ ಉದ್ಯೋಗ ಖಾತ್ರಿ ಯೋಜನೆಯಡಿ ಬಹುದೊಡ್ಡ ಹಗರಣ ಎನ್ನುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ನಡೆದಿದೆ. ಈ ಗ್ರಾಮ ಪಂಚಾಯ್ತಿಯಲ್ಲಿ ಸತ್ತವರು, ಅನಾರೋಗ್ಯ ಪೀಡಿತರು, ಕೈ-ಕಾಲು ಮುರಿದುಕೊಂಡು ಕೆಲಸಕ್ಕೇ ಬಾರದವರ ಹೆಸರಿಗೂ ನರೇಗಾ ಕೂಲಿ ಹಣವನ್ನು ಜಮಾ ಮಾಡಲಾಗಿದೆ.  ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಕಲ್ಮನೆ ಗ್ರಾಮ ಪಂಚಾಯ್ತಿಯಲ್ಲಿ ಇಂತದ್ದೊಂದು ಬಹುದೊಡ್ಡ ಹಗರಣ, ಗೋಲ್ಮಾಲ್ ನಡೆದಿರುವ ಆರೋಪ ಕೇಳಿ ಬಂದಿದೆ. ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಅಡಿಯಲ್ಲಿ ಗ್ರಾಮೀಣ ಜನರಿಗೆ ಉದ್ಯೋಗ ಖಾತ್ರಿ ಜಾಬ್ ಕಾರ್ಡ್ ನೀಡುವುದು ಸೇರಿದಂತೆ, ಕೆಲಸ ಮಾಡದವರೂ, ಕೆಲಸಕ್ಕೆ ಬಾರದವರಿಗೂ ಹಣವನ್ನು ಜಮಾ ಮಾಡಿರುವಂತ ಆರೋಪವಿದೆ. ಕಲ್ಮನೆ ಗ್ರಾಮ ಪಂಚಾಯ್ತಿಯಲ್ಲಿ ಉದ್ಯೋಗ ಖಾತ್ರಿಯಲ್ಲಿ ಬಹುದೊಡ್ಡ ಗೋಲ್ಮಾಲ್ ಸಾಗರ ತಾಲ್ಲೂಕಿನ ಕಲ್ಮನೆ ಗ್ರಾಮ ಪಂಚಾಯ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅನರ್ಹರು, ಖಾಯಿಲೆ ಬಿದ್ದು ಮನೆಯಲ್ಲಿ ಮಲಗಿದ್ದವರ ಹೆಸರಿಗೂ ಜಾಬ್ ಕಾರ್ಡ್ ನೀಡಿ, ಉದ್ಯೋಗ ಖಾತ್ರಿಯ ಹಣವನ್ನು ಸಂದಾಯ ಮಾಡಿರುವಂತ ಆರೋಪ ಕೇಳಿ…

Read More

ಬೆಂಗಳೂರು: ಕರ್ನಾಟಕವು ಭಾರತದ ಜಾಗತಿಕ ಸಾಮರ್ಥ್ಯ ಕೇಂದ್ರದ (ಜಿಸಿಸಿ) ಭೂದೃಶ್ಯವನ್ನು ಸತತವಾಗಿ ಮುನ್ನಡೆಸುತ್ತಲೇ ಇದ್ದು, ಕರ್ನಾಟಕವು ದೇಶದ ಜಿಸಿಸಿಗಳಲ್ಲಿ ಶೇ.30ಕ್ಕಿಂತ ಹೆಚ್ಚು ಉದ್ಯಮಗಳಿಗೆ ನೆಲೆಯಾಗಿದೆ, ಬೆಂಗಳೂರು ನಗರವೊಂದೇ ಈ ವಲಯದಲ್ಲಿ 600,000 ಕ್ಕೂ ಹೆಚ್ಚು ವೃತ್ತಿಪರರಿಗೆ ಉದ್ಯೋಗ ನೀಡಿವೆ, ಕಳೆದ ಮೂರು ವರ್ಷಗಳಲ್ಲಿ, ಭಾರತದಲ್ಲಿ ಸ್ಥಾಪಿಸಲಾದ ಎಲ್ಲಾ ಹೊಸ ಜಿಸಿಸಿಗಳಲ್ಲಿ ಶೇ.43 ಉದ್ಯಮಗಳು ಕರ್ನಾಟಕವನ್ನು ಆಯ್ಕೆ ಮಾಡಿಕೊಂಡಿವೆ, ಇದು ಜಾಗತಿಕ ಉದ್ಯಮಗಳು ರಾಜ್ಯದ ಪರಿಸರ ವ್ಯವಸ್ಥೆಯ ಮೇಲೆ ಇರಿಸಿರುವ ನಂಬಿಕೆಯನ್ನು ಒತ್ತಿಹೇಳುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು. ಕರ್ನಾಟಕ ಸರ್ಕಾರದ ಮಾಹಿತಿ ಹಾಗೂ ತಂತ್ರಜ್ಞಾನ ಇಲಾಖೆ ಹೊರ ತಂದ ಕ್ಯಾಟಲಿಸ್ಟ್ ಕೈಪಿಡಿಯನ್ನು ಅನಾವರಣಗೊಳಿಸಿದ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಹೊಸ ಮಧ್ಯಮ-ಮಾರುಕಟ್ಟೆ ವರದಿಯೊಂದಿಗೆ ಜಿಸಿಸಿ ಪ್ರಾಬಲ್ಯವನ್ನು ಎತ್ತಿ ತೋರಿಸುತ್ತದೆ ಎಂದು ಪ್ರಶಂಸಿಸದರು. ಕರ್ನಾಟಕದ ಮಧ್ಯಮ-ಮಾರುಕಟ್ಟೆ ಜಿಸಿಸಿಗಳು ತಮ್ಮ ರಾಷ್ಟ್ರೀಯ ಸಮಾನಸ್ಥ ಕಂಪನಿಗಳಿಗಿಂತ 1.4 ಪಟ್ಟು ವೇಗವಾಗಿ ಪಕ್ವವಾಗುತ್ತಿವೆ. ಇದು…

Read More

ಬೆಂಗಳೂರು: ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೇಂದ್ರ ಸಚಿವರ ಹೆಸರಿನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿದ್ದನು. ಆದರೇ ಅವರು ಕೇಂದ್ರ ಸಚಿವರು ಅಲ್ಲ ಎಂಬುದಾಗಿ ತನಿಖೆಯಲ್ಲಿ ದೃಢಪಟ್ಟಿತ್ತು. ಹೀಗಾಗಿ ಅಪರಿಚಿತ ವ್ಯಕ್ತಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಎಂಬುದಾಗಿ ಹೇಳಿ ಭಾನುವಾರ ಮಧ್ಯಾಹ್ನ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ 2 ಬಾರಿ ಕರೆ ಮಾಡಲಾಗಿತ್ತು. ಮೊದಲ ಬಾರಿಗೆ ಕರೆ ಮಾಡಿದ್ದಂತ ಅಪರಿಚಿತ ರಾಜ್ಯಪಾಲರ ಆರೋಗ್ಯವನ್ನು ವಿಚಾರಿಸಿದ್ದರೇ, ಕೇಂದ್ರ ಸಚಿವರ ಆರೋಗ್ಯವನ್ನು ರಾಜ್ಯಪಾಲರು ವಿಚಾರಿಸಿದ್ದರು. ಆರ್ಧ ಗಂಟೆಯ ನಂತ್ರ ಮತ್ತೆ ರಾಜ್ಯಪಾಲರಿಗೆ ಕರೆ ಮಾಡಿದ್ದಂತ ಅಪರಿಚಿತ ವ್ಯಕ್ತಿ, ಅದೇ ರೀತಿ ಮಾತನಾಡಿದ್ದನು. ಈ ವೇಳೆ ಅನುಮಾನಗೊಂಡಂತ ರಾಜ್ಯಪಾಲರು ಆತನ ಬಗ್ಗೆ ವಿಚಾರಿಸಿದಾಗ ಏಕಾಏಕಿ ಕರೆ ಕಡಿತವಾಗಿತ್ತು. ಈ ಬಗ್ಗೆ ಪರಿಶೀಲಿಸಿದಾಗ ಆತ ಕೇಂದ್ರ ಸಚಿವ ಅಲ್ಲ ನಕಲಿ ವ್ಯಕ್ತಿ ಅನ್ನೋದು ತಿಳಿದು ಬಂದಿತ್ತು. ಹೀಗಾಗಿ ಆತನ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದ್ದು, ಎಫ್ಐಆರ್…

Read More

ಬೆಂಗಳೂರು: ನೇಪಾಳದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಈ ಹಿಂಸಾಚಾರ ಪೀಡಿತ ಪ್ರದೇಶದಲ್ಲಿ ಸಿಲುಕಿರುವಂತ ಕರ್ನಾಟಕದ 39 ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ನೇಪಾಳದಲ್ಲಿ ವಿದ್ಯಾರ್ಥಿ – ಯುವಜನರ ಕ್ಷಿಪ್ರ ಬೃಹತ್ ಪ್ರತಿಭಟನೆ ಕಾರಣಕ್ಕೆ ದೇಶಾದ್ಯಂತ ಪ್ರಕ್ಷುಬ್ದ ವಾತಾವರಣ ಸೃಷ್ಟಿಯಾಗಿದೆ. ಪರಿಣಾಮವಾಗಿ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ 39 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರಿಗೆ ಸೂಚನೆ ನೀಡಿದ್ದಾರೆ. ಮುಖ್ಯ ಕಾರ್ಯದರ್ಶಿ ಅವರು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಅಗತ್ಯ ಕ್ರಮ ವಹಿಸಿದ್ದಾರೆ. ನೇಪಾಳದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಪ್ರತಿಯೊಬ್ಬ ಕನ್ನಡಿಗನನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ. https://twitter.com/CMofKarnataka/status/1965441973436948805 https://kannadanewsnow.com/kannada/starting-from-22nd-a-social-and-educational-survey-will-be-conducted-across-the-state-cm-siddaramaiah-made-this-appeal-to-the-people/ https://kannadanewsnow.com/kannada/fir-registered-against-organizers-for-bursting-colored-paper-firecrackers-during-ganesh-procession-in-chitradurga/

Read More

ಬೆಂಗಳೂರು: ಸೆಪ್ಟೆಂಬರ್.22ರಿಂದ ರಾಜ್ಯಾಧ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭಗೊಳ್ಳಲಿದೆ. ಈ ಸಮೀಕ್ಷೆಯ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜನತೆಗೆ ಈ ಕೆಳಗಿನಂತೆ ಮನವಿ ಮಾಡಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕರ್ನಾಟಕ ರಾಜ್ಯ ಹಿಂದುಳಿದ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆಪ್ಟೆಂಬರ್‌ 22 ರಿಂದ ಅಕ್ಟೋಬರ್‌ 7ರ ವರೆಗೆ ಕೈಗೊಳ್ಳಲಿದೆ ಎಂದಿದ್ದಾರೆ. ರಾಜ್ಯದ ಪ್ರತಿ ಮನೆಗೆ ಆಯೋಗದ ಸಿಬ್ಬಂದಿಗಳು ಭೇಟಿ ನೀಡಿ ಸ್ಟಿಕ್ಕರ್ ಅಂಟಿಸಿದ ಬಳಿಕ ಶಿಕ್ಷಕರು ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ. ಈ ವೇಳೆ ಅವರಿಗೆ ಅಗತ್ಯ ದಾಖಲೆಗಳ ಜೊತೆಗೆ ಸೂಕ್ತ ಮಾಹಿತಿ ಒದಗಿಸಿ ಸಹಕರಿಸುವ ಮೂಲಕ ಈ ಸಮೀಕ್ಷೆಯನ್ನು ಯಶಸ್ವಿಗೊಳಿಸಿಕೊಡಬೇಕು ಎಂದು ಕೋರಿದ್ದಾರೆ. https://twitter.com/CMofKarnataka/status/1965410150032048578 https://kannadanewsnow.com/kannada/mla-satish-sail-arrested-by-ed-officials-in-bangalore/ https://kannadanewsnow.com/kannada/breaking-nepal-president-ramachandra-poudel-resigns-nepals-president-resigns/

Read More

ಬೆಂಗಳೂರು: ಇಡಿ ಅಧಿಕಾರಿಗಳು ಶಾಸಕ ಸತೀಶ್ ಸೈಲ್ ಅವರನ್ನು ಅಕ್ರಮ ಆಸ್ತಿ ಪತ್ರೆ ಪ್ರಕರಣದಲ್ಲಿ ಬಂಧಿಸಿದ್ದಾರೆ. ಇಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಂತ ಕಾರವಾರ ಶಾಸಕ ಸತೀಶ್ ಸೈಲ್ ಅವರನ್ನು ಬಂಧಿಸಲಾಗಿದೆ. ಆಗಸ್ಟ್.13, 14ರಂದು ಇಡಿ ಅಧಿಕಾರಿಗಳಿಂದ ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ನಿವಾಸದ ಮೇಲೆ ದಾಳಿ ನಡೆಸಿದ್ದರು. ಈ ದಾಳಿಯ ವೇಳೆಯಲ್ಲಿ ಅಕ್ರಮ ಆಸ್ತಿ ಪಾಸ್ತಿ ಪತ್ತೆಯಾಗಿತ್ತು. ಈ ಹಿನ್ನಲೆಯಲ್ಲಿ ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಈ ವೇಳೆಯಲ್ಲಿ ಅವರನ್ನು ಬಂಧಿಸಲಾಗಿದೆ.

Read More

ಬೆಂಗಳೂರು: ಮದ್ದೂರು ಗಲಭೆ ಘಟನೆಗೆ ಸಂಬಂಧಿಸಿ ಸತ್ಯ ಸಂಶೋಧನಾ ತಂಡವನ್ನು ನಾವು ಈಗಾಗಲೇ ಪ್ರಕಟಿಸಿದ್ದೇವೆ. ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರ ನೇತೃತ್ವದಲ್ಲಿ ತಂಡ ರಚಿಸಿದ್ದೇವೆ. ಮದ್ದೂರಿನಲ್ಲಿ ಪೊಲೀಸ್ ಇಲಾಖೆಯ ಸಂಪೂರ್ಣ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರ ಕೊಟ್ಟರು. ಸತ್ಯಾಸತ್ಯತೆ ಪರಿಶೀಲಿಸಿ ವರದಿ ಕೊಡಲು ತಿಳಿಸಿದ್ದೇವೆ ಎಂದು ಹೇಳಿದರು. ರಾಜ್ಯದಲ್ಲಿ ಒಂದು ರೀತಿ ತುಘಲಕ್ ದರ್ಬಾರ್ ಇದೆ. ಇವರು ನಿಜಾಮರ ಆಡಳಿತವನ್ನು ನೆನಪು ಮಾಡಿ ಕೊಡುತ್ತಿದ್ದಾರೆ ಎಂದರು. ಮುಖ್ಯಮಂತ್ರಿಗಳು, ಗೃಹ ಸಚಿವರು ತಮ್ಮ ಧೋರಣೆ ಸರಿಪಡಿಸಿಕೊಳ್ಳದಿದ್ದರೆ ಖಂಡಿತವಾಗಿ ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಹದಗೆಡಲಿದೆ. ಇದಕ್ಕೆ ರಾಜ್ಯ ಸರಕಾರವೇ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಸಿದರು. ಗಣಪತಿ ಮೆರವಣಿಗೆಯಲ್ಲಿ ಕೇಸರಿ ಶಾಲು ಹಾಕಿ ಡ್ಯಾನ್ಸ್ ಮಾಡಿದ ಪಿಎಸ್‍ಐ ಒಬ್ಬರನ್ನು ಅಮಾನತು ಮಾಡುವ ಮಾಹಿತಿ ನನಗೆ ಬಂದಿದೆ. ನಾವೇನು ಪಾಕಿಸ್ತಾನದಲ್ಲಿದ್ದೇವಾ?…

Read More

ನವದೆಹಲಿ: ಮಂಗಳವಾರ ನಡೆದ ಉಪಾಧ್ಯಕ್ಷ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ ಪಿ ರಾಧಾಕೃಷ್ಣನ್ ಅವರು ಗೆಲುವು ಸಾಧಿಸಿದ್ದು, ವಿರೋಧ ಪಕ್ಷದ ಬಿ ಸುದರ್ಶನ್ ರೆಡ್ಡಿ ಅವರನ್ನು ಸೋಲಿಸಿದ್ದಾರೆ. ಜಗದೀಪ್ ಧಂಖರ್ ಅವರ ಹಠಾತ್ ರಾಜೀನಾಮೆಯಿಂದಾಗಿ ಅನಿವಾರ್ಯವಾದ ಚುನಾವಣೆಯಲ್ಲಿ 427 ಶಾಸಕರು ರಾಧಾಕೃಷ್ಣನ್ ಅವರಿಗೆ ಮತ ಚಲಾಯಿಸಿದ್ದಾರೆ. ಈ ಮೂಲಕ ಭಾರತದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣ ಅವರು ಆಯ್ಕೆಯಾಗಿದ್ದಾರೆ. ಬಿಜು ಜನತಾದಳ (ಬಿಜೆಡಿ), ಭಾರತೀಯ ರಾಷ್ಟ್ರ ಸಮಿತಿ (ಬಿಆರ್‌ಎಸ್), ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಮತ್ತು ಸ್ವತಂತ್ರರು ಚುನಾವಣೆಯಿಂದ ದೂರ ಉಳಿದ 13 ಶಾಸಕರಲ್ಲಿ ಒಬ್ಬರು. ವಿರೋಧ ಪಕ್ಷದ ಎಲ್ಲಾ 315 ಸಂಸದರು ಮತದಾನಕ್ಕೆ ಹಾಜರಾಗಿದ್ದಾರೆ ಎಂದು ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಹೇಳಿದರು. https://twitter.com/ANI/status/1965414148030038218 “ವಿರೋಧ ಪಕ್ಷಗಳು ಒಗ್ಗಟ್ಟಾಗಿ ನಿಂತಿವೆ. ಅದರ 315 ಸಂಸದರಲ್ಲಿ ಎಲ್ಲರೂ ಮತದಾನಕ್ಕೆ ಹಾಜರಾಗಿದ್ದಾರೆ. ಇದು ಅಭೂತಪೂರ್ವ 100% ಮತದಾನವಾಗಿದೆ” ಎಂದು ಅವರು X ನಲ್ಲಿ ಬರೆದಿದ್ದಾರೆ. ತಮಿಳುನಾಡಿನ ಬಿಜೆಪಿಯ ಹಿರಿಯ ರಾಧಾಕೃಷ್ಣನ್ ಪ್ರಸ್ತುತ ಮಹಾರಾಷ್ಟ್ರದ…

Read More

ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರ ಮನೆಯ ಮೇಲೆ ಇಡಿ ಆನ್ ಲೈನ್, ಆಫ್ ಲೈನ್ ಬೆಟ್ಟಿಂಗ್ ಸಂಬಂಧ ದಾಳಿ ನಡೆಸಿತ್ತು. ಈ ಇಡಿ ದಾಳಿಯ ಸಂದರ್ಭದಲ್ಲಿ ಬರೋಬ್ಬರಿ 21.43 ಕೆಜಿ ಚಿನ್ನದ ಬಿಸ್ಕೆಟ್ ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಜಾರಿ ನಿರ್ದೇಶನಾಲಯವು, ಕೆ.ಸಿ. ವೀರೇಂದ್ರ ಮತ್ತು ಇತರರ ವಿರುದ್ಧ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ಸಾರ್ವಜನಿಕರನ್ನು ವಂಚಿಸಿದ ಪ್ರಕರಣದಲ್ಲಿ, 2002 ರ ಪಿಎಂಎಲ್‌ಎ ನಿಬಂಧನೆಗಳ ಅಡಿಯಲ್ಲಿ ಬೆಂಗಳೂರಿನ ಇಡಿ, ಚಳ್ಳೇಕೆರೆಯಲ್ಲಿ 06.09.2025 ರಂದು ದಾಳಿ ನಡೆಸಲಾಗಿತ್ತು ಎಂದಿದೆ. ಈ ದಾಳಿಯ ಸಮಯದಲ್ಲಿ, 21.43 ಕೆಜಿ ತೂಕದ 24 ಕ್ಯಾರೆಟ್ ಚಿನ್ನದ ಗಟ್ಟಿ, 10.985 ಕೆಜಿ ತೂಕದ 11 ಯೂನಿಟ್ ಚಿನ್ನದ ಲೇಪಿತ ಬೆಳ್ಳಿ ಗಟ್ಟಿಗಳು ಮತ್ತು ಸುಮಾರು 1 ಕೆಜಿ (ಅಂದಾಜು) ಚಿನ್ನದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ, ಇದರ ಮೌಲ್ಯ ಸುಮಾರು 24 ಕೋಟಿ ರೂ.ಗಳು. ಈ ವಶಪಡಿಸಿಕೊಳ್ಳುವಿಕೆಯನ್ನು ಪರಿಗಣಿಸಿದ…

Read More

ಬೀದರ್: ಜಿಲ್ಲೆಯಲ್ಲೊಂದು ಬೆಚ್ಚಿ ಬೀಳಿಸೋ ಘಟನೆ ನಡೆದಿದೆ. ಕಾಲುವೆಗೆ ಜಿಗಿದು ಒಂದೇ ಕುಟುಂಬದ ಆರು ಜನರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇವರಲ್ಲಿ ನಾಲ್ವರು ಸಾವನ್ನಪ್ಪಿದ್ದರೇ, ಮತ್ತಿಬ್ಬರು ಪ್ರಣಾಪಾಯದಿಂದ ಪಾರಾಗಿದ್ದಾರೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಮರೂರು ಬಳಿಯಲ್ಲಿ ಕಾಲುವೆಗೆ ಜಿಗಿದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಳ್ಳೋದಕ್ಕೆ ಕಾರಣ ಏನು ಎಂಬುದು ತಿಳಿದು ಬಂದಿದೆ. ಕಾಲುವೆಗೆ ಹಾರಿ ಒಂದೇ ಕುಟುಂಬದ ಆರು ಜನರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕಾರಂಜ ಡ್ಯಾಮ್ ನ ಕಾಲುವೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕಾಲುವೆಗೆ ಜಿಗಿದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದರೇ, ಆರು ಜನರ ಪೈಕಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Read More