Author: kannadanewsnow09

ನವದೆಹಲಿ: ನೀಟ್ ಮರು ಪರೀಕ್ಷಎ ಇಲ್ಲ. ನೀಟ್ ಮರು ಪರೀಕ್ಷೆ ನಡೆಸುವುದಿಲ್ಲ ಎಂಬುದಾಗಿ ಸುಪ್ರೀಂ ಕೋರ್ಟ್ ಪ್ರಶಅನೆ ಪತ್ರಿಕೆ ಸೋರಿಕೆ ಪ್ರಕರಣದ ಬಗ್ಗೆ ಮಹತ್ವದ ತೀರ್ಪು ನೀಡಿದೆ. ನೀಟ್-ಯುಜಿ 2024 ಪರೀಕ್ಷೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಜುಲೈ 23 ರಂದು ಪರೀಕ್ಷೆಯ ಮರು ಪರೀಕ್ಷೆಯ ಮನವಿಯನ್ನು ತಿರಸ್ಕರಿಸಿತು. ಮರು ಪರೀಕ್ಷೆಗೆ ಕರೆ ನೀಡಲು ಯಾವುದೇ ನಿರ್ಣಾಯಕ ಪುರಾವೆಗಳಿಲ್ಲ ಎಂದು ನ್ಯಾಯಾಲಯ ಗಮನಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ.ಪರ್ಡಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠ ಈ ಪ್ರಕರಣದ ವಿಚಾರಣೆ ನಡೆಸಿತು. ವ್ಯವಸ್ಥಿತ ನ್ಯೂನತೆಗಳಿವೆ ಎಂದು ನ್ಯಾಯಪೀಠ ಗಮನಿಸಿದೆ. ತೀರ್ಪನ್ನು ಓದಿದ ಸಿಜೆಐ, ಈ ಪ್ರಕರಣದ ಕೇಂದ್ರ ವಿಷಯವೆಂದರೆ ಈ ನ್ಯಾಯಾಲಯದ ಮುಂದೆ ಎತ್ತಲಾಗುತ್ತಿರುವ ಕೇಂದ್ರ ವಿಷಯವೆಂದರೆ 1 ರ ಆಧಾರದ ಮೇಲೆ ಮರು ಪರೀಕ್ಷೆ ನಡೆಸಲು ನಿರ್ದೇಶನ ನೀಡಬೇಕು. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಪರೀಕ್ಷೆಯ ನಿರ್ವಹಣೆಯಲ್ಲಿ ವ್ಯವಸ್ಥಿತ ನ್ಯೂನತೆಗಳಿವೆ. ನೀಟ್-ಯುಜಿ ಪರೀಕ್ಷೆಯನ್ನು 571 ನಗರಗಳಲ್ಲಿ…

Read More

ಬೆಂಗಳೂರು: ಇಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ 2024-25 ಅನ್ನು ಸಂಸತ್ತಿನಲ್ಲಿ ಮಂಡಿಸಿದರು. ಈ ಕೇಂದ್ರ ಬಜೆಟ್ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏನು ಹೇಳಿದ್ರು ಅಂತ ಪತ್ರಿಕಾಗೋಷ್ಠಿಯ ಹೈಲೈಟ್ಸ್ ಮುಂದೆ ಓದಿ. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಕೇಂದ್ರ ಬಜೆಟ್ ನಲ್ಲಿ ನಿರ್ಮಲಾ ಸೀತಾರಾಮನ್ ರಾಜ್ಯಕ್ಕೆ ಚೊಂಬು ಕೊಟ್ಟಿದ್ದಾರೆ.  ಪ್ರಧಾನ ಮಂತ್ರಿಗಳ ಕುರ್ಚಿ ಉಳಿಸೋಕೆ ಆಂಧ್ರ ಮತ್ತು ಬಿಹಾರಕ್ಕೆ ವಿಶೇಷ ಅನುದಾನ ಕೊಟ್ಟಿದ್ದಾರೆ. ಕರ್ನಾಟಕದಿಂದ ಆರಿಸಿ ಹೋಗಿರುವ ನಿರ್ಮಲಾ ಸೀತರಾಮನ್ ರಾಜ್ಯದ ನಿರೀಕ್ಷೆ ಸುಳ್ಳು ಮಾಡಿ ಅನ್ಯಾಯ ಎಸಗಿದ್ದಾರೆ ಎಂದರು. ರಾಜ್ಯದಿಂದ ನಾವು ಇಟ್ಟ ಬೇಡಿಕೆಗಳು, ಅವರೇ ಕೊಟ್ಟ ಭರವಸೆಗಳು ಎರಡನ್ನೂ ಈಡೇರಿಸಿಲ್ಲ. ಕಲ್ಯಾಣ ಕರ್ನಾಟಕಕ್ಕೆ ನಾವು 5000 ಕೋಟಿ ಕೊಟ್ಡಿದ್ದೇವೆ. ಇದಕ್ಕೆ ಹೊಂದಾಣಿಕೆ ಅನುದಾನ ಕೇಳಿದ್ದೆವು. ಇದನ್ನೂ ಕೊಡಲಿಲ್ಲ ಎಂದಿದ್ದಾರೆ. ಈ ಬಜೆಟ್ ನಲ್ಲಿ ರೈತರಿಗೆ ದೊಡ್ಡ ಅನ್ಯಾಯ ಮಾಡಿದ್ದಾರೆ. ರೈತರು 5 ವರ್ಷಗಳಿಂದ MSP ಗೆ ಕಾಯ್ದೆ ಮಾಡಬೇಕು ಎನ್ನುವ ಡಿಮ್ಯಾಂಡ್ ಇಟ್ಟಿದ್ದರು. ಈ…

Read More

ಬೆಂಗಳೂರು: ತಮಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ. ಬೆದರಿಕೆ ಹಾಕುತ್ತಿದ್ದಾರೆ ಎಂಬುದಾಗಿ ಪರಿಶಿಷ್ಟ ನಿಗಮದ ಹಿಂದಿನ ಎಂಡಿ ನೀಡಿದಂತ ದೂರಿನ ಹಿನ್ನಲೆಯಲ್ಲಿ ಇಬ್ಬರು ಇಡಿ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಎಫ್ಐಆರ್ ಗೆ ಇಂದು ಹೈಕೋರ್ಟ್ ತಡೆ ನೀಡಿದೆ. ವಾಲ್ಮೀಕಿ ನಿಗಮದಲ್ಲಿನ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ವೇಳೆ ಮಾಜಿ ಸಚಿವ ನಾಗೇಂದ್ರ ಅವರ ಹೆಸರು ಹೇಳುವಂತೆ ಒತ್ತಡ ಹೇರಿರುವ ಆರೋಪದ ಮೇಲೆ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ತಮ್ಮ ವಿರುದ್ಧ ಎಫ್​​​ಐಆರ್ ದಾಖಲಿಸಿರುವುದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯದ (ED) ಇಬ್ಬರು ಅಧಿಕಾರಿಗಳು ಹೈಕೋರ್ಟ್ ಮೊರೆ ಹೋಗಿದ್ದರು. ಹೌದು ನಿನ್ನೆ ಮಾಜಿ ಸಚಿವ ಬಿ.ನಾಗೇಂದ್ರ ಒತ್ತಡದಿಂದ ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವುದಾಗಿ ಒಪ್ಪಿಕೊಳ್ಳುವಂತೆ ತಮ್ಮ ಮೇಲೆ ಇಡಿ ಅಧಿಕಾರಿಗಳು ಒತ್ತಡ ಹಾಕಿದ್ದಾರೆ ಹಾಗೂ, ಮಾನಸಿಕವಾಗಿ ಹಿಂಸೆ ನೀಡಿದ್ದಾರೆ ಎಂದು ಆರೋಪಿಸಿ ನಿಗಮದ ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಕಲ್ಲೇಶ್.ಬಿ ದೂರು ನೀಡಿದ್ದರು. ಈ ವೇಳೆ ಇಡಿ ಅಧಿಕಾರಿಗಳ ಪರ ಹಾಜರಾದ ಹಿರಿಯ ವಕೀಲ ಮಧುಕರ್…

Read More

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ರೈತ ಸ್ನೇಹಿ, ತೆರಿಗೆ ಹೊರೆ ರಹಿತ, ಸರ್ವ ಜನಕೇಂದ್ರಿತ ಹಾಗೂ ದೇಶದ ಭವಿಷ್ಯ ಬರೆಯುವ ಸುಭದ್ರ ಬಜೆಟ್‌ ನೀಡಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಶ್ಲಾಘಿಸಿದ್ದಾರೆ. ಇಂದು ಕೇಂದ್ರ ಸರ್ಕಾರದ ಬಜೆಟ್‌ ಕುರಿತು ಅವರು ಪ್ರತಿಕ್ರಿಯಿಸಿದಂತ ಅವರು, ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿರುವ ಈ ಆಯವ್ಯಯವು ಭಾರತ ಜಗತ್ತಿನಲ್ಲೇ ಮೂರನೇ ಅತಿ ದೊಡ್ಡ ಆರ್ಥಿಕ ಶಕ್ತಿಯಾಗಿ ಬೆಳೆಯಲು ಸಹಕಾರಿಯಾಗಲಿದೆ. ರೈತರು, ಮಹಿಳೆಯರು, ಯುವಜನರು, ತೆರಿಗೆ ಪಾವತಿಸುವವರ ಬದುಕನ್ನು ವಿಶ್ಲೇಷಿಸಿ ಅವರ ಅನುಕೂಲಕ್ಕೆ ತಕ್ಕಂತಹ ಬಜೆಟ್‌ ನೀಡಲಾಗಿದೆ. ಇದಕ್ಕಾಗಿ ಆರ್ಥಿಕ ಸಚಿವರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಅವರು ಹೇಳಿದ್ದಾರೆ. ಕಾಂಗ್ರೆಸ್‌ ಸರ್ಕಾರ ಯಾವಾಗಲೂ ಅನುದಾನ ತಾರತಮ್ಯದ ಬಗ್ಗೆ ಹೇಳುತ್ತದೆ. 50 ವರ್ಷಗಳ ಅವಧಿಗೆ ಬಡ್ಡಿ ರಹಿತ ಸಾಲ ನೀಡುವ ಪಿಎಂ ಗತಿಶಕ್ತಿ ಮಾಸ್ಟರ್‌ ಪ್ಲಾನ್‌ ಅನ್ನು ಕೇಂದ್ರ ಸರ್ಕಾರ ಇನ್ನೂ 1 ವರ್ಷ ಮುಂದುವರಿಸಲಿದೆ. ಇದಕ್ಕಾಗಿ 1.5 ಲಕ್ಷ ಕೋಟಿ ರೂ. ಮೀಸಲಿಟ್ಟಿದ್ದು, ಖಾಲಿ…

Read More

ಶಿವಮೊಗ್ಗ: ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ಜುಲೈ.25ರಂದು ಶಿವಮೊಗ್ಗ ಜಿಲ್ಲೆಯ ಕೆಲವೆಡೆ ಪವರ್ ಕಟ್ ಆಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಮನವಿ ಮಾಡಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಶಿವಮೊಗ್ಗ ನಗರ ಉಪವಿಭಾಗ-2ರ ಮಂಡ್ಲಿ ಘಟಕ-6ರ ವ್ಯಾಪ್ತಿಯಲ್ಲಿ ಹೊಸ 11 ಕೆವಿ ಮಾರ್ಗದ ಕಾಮಗಾರಿ ಹಮ್ಮಿಕೊಂಡಿದ್ದು, ಜು.25ರ ಬೆಳಗ್ಗೆ 9.00 ರಿಂದ ಸಂಜೆ 6.00 ರವರೆಗೆ ವಿದ್ಯುತ್ ವ್ಯತ್ಯಯ ಆಗಲಿದೆ ಅಂತ ಹೇಳಿದೆ. ಈ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ ಪೇಪರ್ ಪ್ಯಾಕೇಜ್, ಸೀಗೆಹಟ್ಟಿ, ರವಿವರ್ಮ ಬೀದಿ, ಬಿ.ಬಿ.ರಸ್ತೆ, ಓ.ಟಿ.ರಸ್ತೆ, ಮಾಕಮ್ಮಬೀದಿ, ಕೆರೆದುರ್ಗಮ್ಮನ ಬೀದಿ, ಪುಟ್ಟನಂಜಪ್ಪಕೇರಿ, ಅಜಾದ್ ನಗರ, ಕಲಾರ್ ಪೇಟೆ, ಸಿದ್ದಯ್ಯ ರಸ್ತೆ, ಇಮಾಮ್ ಬಡಾ, ಮುರಾದ್‍ನಗರ, ಕ್ರೌನ್ ಪ್ಯಾಲೇಸ್ ಶಾದಿಮಹಲ್, ತಾಹಾ ಶಾದಿಮಹಲ್, ಮಂಡಕ್ಕಿಭಟ್ಟಿ ಏರಿಯಾ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಕೆ.ಆರ್. ಕುಡಿಯುವ ನೀರಿನ ಸ್ಥಾವರ, ನ್ಯೂಮಂಡ್ಲಿ, ಮಂಜುನಾಥ ಪೆಟ್ರೋಲ್ ಬಂಕ್, ವಿಜಯವಾಣಿ ಪ್ರೆಸ್ ಹತ್ತಿರ, ಎನ್.ಟಿ.ರಸ್ತೆ, ಹರಕೆರೆ, ಹಳೇ ಮಂಡ್ಲಿ, ಗಂಧರ್ವನಗರ, ಶಂಕರ ಕಣ್ಣಿನ ಆಸ್ಪತ್ರೆ,…

Read More

ಬೆಂಗಳೂರು: ರಾಜ್ಯದಲ್ಲಿ ಟಿಕೆಟ್ ಇಲ್ಲದೇ ಸಾರಿಗೆ ಬಸ್ಸುಗಳಲ್ಲಿ ಪ್ರಯಾಣಿಸಿದಂತ ಪ್ರಯಾಣಿಕರಿಗೆ ಕೆ ಎಸ್ ಆರ್ ಟಿಸಿ ಬಿಗ್ ಶಾಕ್ ನೀಡಿದೆ. ಟಿಕೇಟ್ ಇಲ್ಲದೆ ಪ್ರಯಾಣಿಸಿದ 3610 ಪ್ರಯಾಣಿಕರಿಗೆ ದಂಡ ವಿಧಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕೆ ಎಸ್ ಆರ್ ಟಿಸಿ ಮಾಹಿತಿ ನೀಡಿದ್ದು, ಜೂನ್ -2024 ರ ಮಾಹೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತನ್ನ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿ ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 43126 ವಾಹನಗಳನ್ನು ತನಿಖೆಗೊಳಪಡಿಸಿ 3522 ಪ್ರಕರಣಗಳನ್ನು ಪತ್ತೆಹಚ್ಚಿ, 3610 ಟಿಕೇಟ್ ರಹಿತ ಪ್ರಯಾಣಿಕರಿಂದ 5,97,517/-ರೂ ಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಿರುತ್ತಾರೆ ಎಂದು ಹೇಳಿದೆ. ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 82,946/- ರೂ ಗಳನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ, ಹಾಗೂ ತಪ್ಪಿತಸ್ಥರ ವಿರುದ್ದ ಇಲಾಖಾ ರೀತ್ಯಾ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಾಗಿದೆ ಅಂತ ತಿಳಿಸಿದೆ. ಆದ್ದರಿಂದ ಸಾರ್ವಜನಿಕ ಪ್ರಯಾಣಿಕರು, ಬಸ್ಸಿನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೇಟ್/ ಪಾಸ್ ಪಡೆದು ಪ್ರಯಾಣ ಮಾಡುವಂತೆ, ನಿಗಮವು…

Read More

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಬಜೆಟ್ ಮಂಡಿಸುವಾಗ ಚಿನ್ನ ಮತ್ತು ಬೆಳ್ಳಿಯ ಮೇಲಿನ ಕಸ್ಟಮ್ಸ್ ಸುಂಕವನ್ನು ಗಣನೀಯವಾಗಿ ಕಡಿತಗೊಳಿಸುವುದಾಗಿ ಘೋಷಿಸಿದರು. ಈ ಬೆನ್ನಲ್ಲೇ ಆಭರಣ ಪ್ರಿಯರಿಗೆ ಸಂತಸದ ಸುದ್ದಿ ಎನ್ನುವಂತೆ ಚಿನ್ನ, ಬೆಳ್ಳಿಯ ಬೆಲೆಯಲ್ಲಿ 4000 ರೂವರೆಗೆ ಇಳಿಕೆಯನ್ನು ಕಂಡಿದೆ. ಈ ಕಡಿತವು ಬೆಲೆಗಳಲ್ಲಿ ತೀವ್ರ ಕುಸಿತಕ್ಕೆ ಕಾರಣವಾಗಿದೆ, ಗ್ರಾಹಕರಿಗೆ ಪ್ರಯೋಜನವನ್ನು ನೀಡುತ್ತದೆ ಮತ್ತು ಮಾರುಕಟ್ಟೆಯಲ್ಲಿ ಬೇಡಿಕೆಯನ್ನು ಹೆಚ್ಚಿಸುತ್ತದೆ. ಆದಾಗ್ಯೂ, ವಿಶಾಲ ಮಾರುಕಟ್ಟೆ ಪರಿಸ್ಥಿತಿಗಳು ಮತ್ತು ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಭವಿಷ್ಯದ ಪ್ರವೃತ್ತಿಗಳ ಮೇಲೆ ಪ್ರಭಾವ ಬೀರಬಹುದು. ಹಣಕಾಸು ಸಚಿವರು ಚಿನ್ನ ಮತ್ತು ಬೆಳ್ಳಿಯ ಮೇಲಿನ ಆಮದು ಸುಂಕವನ್ನು ಶೇಕಡಾ 15 ರಿಂದ 6 ಕ್ಕೆ ಇಳಿಸಿದ್ದಾರೆ. ಇದರಲ್ಲಿ ಮೂಲ ಕಸ್ಟಮ್ಸ್ ಸುಂಕ (ಬಿಸಿಡಿ) ಶೇ.10ರಿಂದ ಶೇ.5ಕ್ಕೆ ಮತ್ತು ಕೃಷಿ ಮೂಲಸೌಕರ್ಯ ಅಭಿವೃದ್ಧಿ ಸೆಸ್ (ಎಐಡಿಸಿ) ಶೇ.5ರಿಂದ ಶೇ.1ಕ್ಕೆ ಇಳಿಕೆಯಾಗಿದೆ. ಜಿಯೋಜಿತ್ ಫೈನಾನ್ಷಿಯಲ್ ಸರ್ವೀಸಸ್ನ ಸರಕುಗಳ ಮುಖ್ಯಸ್ಥ ಹರೀಶ್ ವಿ ಮಾತನಾಡಿ, ಕಸ್ಟಮ್ಸ್ ಸುಂಕವನ್ನು ಶೇಕಡಾ…

Read More

ಬೆಂಗಳೂರು: ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಜಾಮೀನು ನೀಡಿತ್ತು. ಈ ಬೆನ್ನಲ್ಲೇ ಇಂದು ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರು ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ನಿನ್ನೆ ಈ ಅರ್ಜಿಯ ವಿಚಾರಣೆ ನಡೆಸಿದ್ದಂತ ಕೋರ್ಟ್, ಕೆಲ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿತ್ತು. ಈ ಹಿನ್ನಲೆಯಲ್ಲಿ ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಸೂರಜ್ ರೇವಣ್ಣ ಅವರು ಬಿಡುಗಡೆಯಾಗಿದ್ದಾರೆ. ಹೀಗಿದೆ ಬಿಡುಗಡೆಯ ನಂತ್ರ ಸೂರಜ್ ರೇವಣ್ಣ ಮೊದಲ ರಿಯಾಕ್ಷನ್ ಕುಟುಂಬದ ವಿರುದ್ಧ ಷಡ್ಯಂತ್ರ ಮಾಡಿ ತೇಜೋವಧೆ ಮಾಡಿದ್ದಾರೆ. ಜೈಲಿನಿಂದ ಬಿಡುಗಡೆ ಬಳಿಕ ಎಂಎಲ್ಸಿ ಸೂರಜ್ ರೇವಣ್ಣ ಹೇಳಿಕೆ ನೀಡಿದ್ದು, ತೇಜೋವಧೆ ಮಾಡುವ ದುರುದ್ದೇಶದಿಂದ ಕೇಸ್ ದಾಖಲಿಸಿದ್ದಾರೆ. ನಾವು ಯಾವುದಕ್ಕೂ ಹೆದರಿಕೊಂಡು ಎಲ್ಲಿಗೂ ಓಡಿ ಹೋಗಲ್ಲ.ಎರಡು ಮೂರು ದಿನದಲ್ಲಿ ಎಲ್ಲದಕ್ಕೂ ಸ್ಪಷ್ಟನೆ ಕೊಡುತ್ತೇನೆ. ತನಿಖಾಧಿಕಾರಿಗಳಿಗೆ ಸಹಕಾರ…

Read More

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಕೇಂದ್ರ ಬಜೆಟ್ 2024 ಅನ್ನು ಘೋಷಿಸಿದ್ದು, ತೆರಿಗೆದಾರರಿಗೆ ಹಲವಾರು ಪ್ರಮುಖ ಬದಲಾವಣೆಗಳು ಮತ್ತು ಪರಿಹಾರ ಕ್ರಮಗಳನ್ನು ತಂದಿದ್ದಾರೆ. ಕೇಂದ್ರ ಬಜೆಟ್ 2024 ರ ಹತ್ತು ಪ್ರಮುಖ ಮುಖ್ಯಾಂಶಗಳು ಇಲ್ಲಿವೆ: – ಹೊಸ ಆದಾಯ ತೆರಿಗೆ ಆಡಳಿತವು ದೊಡ್ಡ ಪರಿಹಾರವನ್ನು ಕಾಣಲಿದೆ. ಈ ಆಡಳಿತದಲ್ಲಿ ಸಂಬಳ ಪಡೆಯುವ ಉದ್ಯೋಗಿಗಳಿಗೆ ಸ್ಟ್ಯಾಂಡರ್ಡ್ ಡಿಡಕ್ಷನ್ 50,000 ರೂ.ಗಳಿಂದ 75,000 ರೂ.ಗೆ ಹೆಚ್ಚಾಗುತ್ತದೆ. – ಹೊಸ ಆಡಳಿತದ ಅಡಿಯಲ್ಲಿ ಹೊಸ ತೆರಿಗೆ ದರಗಳು ಈ ಕೆಳಗಿನಂತಿವೆ: – 0-3 ಲಕ್ಷ ರೂ: ಶೂನ್ಯ 3-7 ಲಕ್ಷ ರೂ.: 5% 7-10 ಲಕ್ಷ ರೂ.: 10% 10-12 ಲಕ್ಷ ರೂ.: 15% 12-15 ಲಕ್ಷ ರೂ.: 20% 15 ಲಕ್ಷ ರೂ.ಗಿಂತ ಹೆಚ್ಚು: 30% -ಬದಲಾವಣೆಗಳಿಂದಾಗಿ, ಸಂಬಳ ಪಡೆಯುವ ಉದ್ಯೋಗಿಗಳು ವಾರ್ಷಿಕವಾಗಿ 17,500 ರೂ.ಗಳವರೆಗೆ ತೆರಿಗೆ ಉಳಿಸುತ್ತಾರೆ. – ಕುಟುಂಬ ಪಿಂಚಣಿಯ ಮೇಲಿನ ಕಡಿತವನ್ನು 15,000 ರೂ.ಗಳಿಂದ…

Read More

ಬೆಂಗಳೂರು : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಸಂಸತ್ತಿನಲ್ಲಿ ಮಂಡಿಸಿರುವ ಕೇಂದ್ರ ಬಜೆಟ್ ಗೆ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ಪೂರ್ತಿಯಾಗಿದೆ ಎಂದು ಅರಣ್ಯ,ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಕೇಂದ್ರ ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಲೋಕಸಭೆ ಚುನಾವಣೆ ಫಲಿತಾಂಶದಲ್ಲಿ ತೀವ್ರ ಹಿನ್ನೆಡೆ ಅನುಭವಿಸಿದ ಬಳಿಕ ಬಿಜೆಪಿ ಮತ್ತು ಎನ್.ಡಿ.ಎ.ಗೆ ಬುದ್ಧಿ ಬಂದಿದೆ. ಕಾಂಗ್ರೆಸ್ ಪಕ್ಷ ತನ್ನ ಲೋಕಸಭಾ ಪ್ರಣಾಳಿಕೆಯಲ್ಲಿ ಪ್ರಕಟಿಸಿದ್ದ ಯುವಕರಿಗೆ ಅಪ್ರೆಂಟಿಷಿಪ್ ನೀಡುವ ಯೋಜನೆ ಸೇರಿದಂತೆ ಹಲವು ಅಂಶಗಳನ್ನು ಅಳವಡಿಸಿಕೊಂಡಿರುವುದು ಇದಕ್ಕೆ ಸಾಕ್ಷಿಯಾಗಿದೆ ಎಂದು ತಿಳಿಸಿದ್ದಾರೆ. ಬಿಜೆಪಿಯ ಕೆಟ್ಟ ನೀತಿಗಳಿಂದಾಗಿ ದೇಶದಲ್ಲಿ 45 ವರ್ಷದಲ್ಲೇ ಕಂಡು ಕೇಳರಿಯದ ನಿರುದ್ಯೋಗ ಸಮಸ್ಯೆ ಉಂಟಾಗಿತ್ತು. ಕಳೆದ 10 ವರ್ಷಗಳ ಕಾಲ ನಿರುದ್ಯೋಗ ಸಮಸ್ಯೆ ಬಗ್ಗೆ ಗಮನವನ್ನೇ ಹರಿಸದಿದ್ದ ಕೇಂದ್ರ ಸರ್ಕಾರ ಈ ಬಜೆಟ್ ನಲ್ಲಿ ತನ್ನ ತಪ್ಪನ್ನು ಒಪ್ಪಿಕೊಂಡಿದೆ ಎಂದು ತಿಳಿಸಿದ್ದಾರೆ. ತಾರತಮ್ಯದ ಬಜೆಟ್: ಒಂದು ಕಣ್ಣಿಗೆ ಸುಣ್ಣ ಮತ್ತೊಂದು ಕಣ್ಣಿಗೆ ಬೆಣ್ಣೆ…

Read More