Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯದಲ್ಲಿ ಸಂಪೂರ್ಣವಾಗಿ ಜನೌಷಧಿ ಕೇಂದ್ರಗಳನ್ನ ಸ್ಥಗಿತಗೊಳಿಸಿಲ್ಲ. ಒಟ್ಟು 1400 ಜನೌಷಧಿ ಕೇಂದ್ರಗಳಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿರುವ 180 ಕೇಂದ್ರಗಳನ್ನ ಮಾತ್ರ ತೆರವುಗೊಳಿಸಲು ಬಗ್ಗೆ ಚರ್ಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಮಾರಾಟಕ್ಕೆ ಅವಕಾಶ ಕೊಡುವುದು ಸರಿಯಲ್ಲ. ಸರ್ಕಾರವೇ ಉಚಿತವಾಗಿ ಔಷಧಿಗಳನ್ನ ನೀಡುವಾಗ, ಆಸ್ಪತ್ರೆಗಳಲ್ಲಿ ಔಷಧಿಗಳ ಮಾರಾಟ ಮಾಡುವ ಮೆಡಿಕಲ್ ಶಾಪ್ ಗಳು ಏಕೆ ಬೇಕು ಎಂದರು. ಜನೌಷಧಿ ಕೇಂದ್ರಗಳ ವಿಚಾರದಲ್ಲಿ ಬಿಜೆಪಿ ನಾಯಕರು ರಾಜಕೀಯ ಬೇರಸುವುದು ಸರಿಯಲ್ಲಿ. ಸರ್ಕಾರಿ ಆಸ್ಪತ್ರೆಗಳಲ್ಲಿರುವ 180 ಕೇಂದ್ರಗಳ ಹೊರತಾಗಿ ರಾಜ್ಯದಲ್ಲಿ ಇನ್ನು 1220 ಜನೌಷಧಿ ಕೇಂದ್ರಗಳಿವೆ. ಅಲ್ಲದೇ ತಕ್ಷಣಕ್ಕೆ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಎಲ್ಲ ಜನೌಷಧಿ ಕೇಂದ್ರಗಳನ್ನ ಮುಚ್ಚಿಸಿ ಎಂದು ಹೇಳಿಲ್ಲ.. ಹೊಸದಾಗಿ ಸಲ್ಲಿಕೆಯಾಗಿದ್ದ 31 ಪ್ರಸ್ತಾವನೆಗಳನ್ನ ತಿರಸ್ಕರಿಸಲಾಗಿದೆ.. ಹಾಲಿ ಆಸ್ಪತ್ರೆಗಳ ಆವರಣದಲ್ಲಿರುವ ಕೇಂದ್ರಗಳು ಇಲಾಖೆ, ಆಸ್ಪತ್ರೆಗಳೊಂದಿಗೆ ಮಾಡಿಕೊಂಡಿರುವ ಒಪ್ಪಂದಗಳನ್ನ ಪರಿಶೀಲಿಸಿ ಕ್ರಮ ಜರುಗಿಸಲು ಸೂಚಿಸಲಾಗಿದೆ. ಹಲವು ಜನೌಷಧಿ ಕೇಂದ್ರಗಳದ್ದು ಒಪ್ಪಂದಗಳು ನವೀಕರಣವಾಗಿಲ್ಲ.…
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಬಗ್ಗೆ ಭಯ ಪಡಬೇಕಾದಂತ ಪರಿಸ್ಥಿತಿ ಇಲ್ಲ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಮೂಲಕ ಕೋವಿಡ್ ಆತಂಕದಲ್ಲಿದ್ದಂತ ಜನರಿಗೆ ನೆಮ್ಮದಿಯ ಸುದ್ದಿ ನೀಡಿದ್ದಾರೆ. ಬೇರೆ ದೇಶಗಳಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ. ಆದರೆ ನಮ್ಮಲ್ಲಿ ಅಂತಹ ಯಾವುದೇ ಲಕ್ಷಣಗಳು ಪತ್ತೆಯಾಗಿಲ್ಲ. ಹೀಗಾಗಿ ಅನಗತ್ಯವಾಗಿ ಆತಂಕಪಡುವುದು ಬೇಡ. ಕೋವಿಡ್ಗೆ ಸಂಬಂಧಿಸಿದಂತೆ ಕೆಂದ್ರ ಸರ್ಕಾರದ ಜತೆಗೆ ಸಂಪರ್ಕದಲ್ಲಿದ್ದೇವೆ ಎಂದು ಹೇಳಿದ್ದಾರೆ. ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು ಕೂಡ ಚರ್ಚೆ ಮಾಡುತ್ತಿದ್ದಾರೆ. ಈ ಋತುವಿನಲ್ಲಿ ಜ್ವರ ಸಂಬಂಧಿ ಅನಾರೋಗ್ಯ ಸಮಸ್ಯೆಗಳು ಸಹಜವಾಗಿ ಕಾಣಿಸಿಕೊಳ್ಳುತ್ತವೆ. ಇಂತಹ ಸಂದರ್ಭದಲ್ಲಿ ಮಾಸ್ಕ್ ಧರಿಸುವಿಕೆಯಂತಹ ಮುನ್ನೆಚ್ಚರಿಕೆ ವಹಿಸುವುದು ಉತ್ತಮ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ. https://twitter.com/KarnatakaVarthe/status/1925512416143511571 https://kannadanewsnow.com/kannada/i-will-not-tolerate-the-system-that-brings-a-bad-name-to-the-taluk-gopalakrishna-belors-warning-to-the-authorities/ https://kannadanewsnow.com/kannada/good-news-for-cancer-patients-in-the-state-chemotherapy-centers-started-in-16-district-hospitals/
ಶಿವಮೊಗ್ಗ: ನಾನು ಸಾಗರ ತಾಲ್ಲೂಕಿಗೆ ಕೆಟ್ಟ ಹೆಸರು ತರುವ ವ್ಯವಸ್ಥೆಯನ್ನು ಸಹಿಸುವುದಿಲ್ಲ. ಕೆಲಸ ಮಾಡೋದಕ್ಕೆ ಆಗಲ್ಲ ಅಂದ್ರೆ ವರ್ಗಾವಣೆ ಮಾಡಿಸಿಕೊಂಡು ಹೋಗಿ ಎಂಬುದಾಗಿ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಖಡಕ್ ವಾರ್ನಿಂಗ್ ನೀಡಿದ್ದಾರೆ. ಇಂದು ಸಾಗರ ನಗರದ ಪ್ರವಾಸಿ ಮಂದಿರದಲ್ಲಿ ಮುಂಗಾರು ಪೂರ್ವವಾಗಿ ಪಿಡಿಓಗಳ ಜೊತೆಗೆ ಸಭೆ ನಡೆಸಿದರು. ಅಲ್ಲದೇ ಗ್ರಾಮ ಲೆಕ್ಕಾಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಇನ್ನೇನು ಜೂನ್ ಸಮೀಪಿಸುತ್ತಿದೆ. ಶಾಲಾ-ಕಾಲೇಜು ಆರಂಭವಾಗುತ್ತಿವೆ. ಮಕ್ಕಳಿಗೆ ಆದಾಯ ಮತ್ತು ಜಾತಿ ಪ್ರಮಾಣ ಪತ್ರದ ತುರ್ತು ಅವಶ್ಯಕತೆ ಇರುತ್ತದೆ. ಅವರಿಗೆ ಸತಾಯಿಸಬೇಡಿ ಎಂಬುದಾಗಿ ಎಚ್ಚರಿಸಿದರು. ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಜನರು ನನ್ನ ಮೇಲೆ ನಿರೀಕ್ಷೆಯಿಟ್ಟು ನನ್ನನ್ನು ಗೆಲ್ಲಿಸಿದ್ದಾರೆ. ಆದರೇ ಅದನ್ನು ವ್ಯವಸ್ಥಿತವಾಗಿ ನಿರ್ವಹಿಸಬೇಕಾದದ್ದೂ ನನ್ನ ಜವಾಬ್ದಾರಿಯಾಗಿದೆ. ತಾಲ್ಲೂಕು ಕಚೇರಿಯ ವ್ಯವಸ್ಥೆ ಸರಿಯಾಗಿಲ್ಲ ಎನ್ನುವ ಬಗ್ಗೆ ಸಾರ್ವಜನಿಕರಿಂದ ಪದೇ ಪದೇ ದೂರು ಕೇಳಿ ಬರುತ್ತಿದೆ. ಸರ್ಕಾರಿ ಸೇವೆಯಲ್ಲಿ ವ್ಯವಸ್ಥಿತವಾಗಿ ತೊಡಗಿಸಿಕೊಳ್ಳಿ ಎಂದರು. ಸಾಗರ ತಾಲ್ಲೂಕಿನಲ್ಲಿ ಭೂಮಿ ಒತ್ತುವರಿ…
ಶಿವಮೊಗ್ಗ: ಜಿಲ್ಲೆಯ ಸೊರಬದಲ್ಲಿ ಕಳೆದ ನಾಲ್ಕು ದಶಕಗಳ ನಂತರ ಇಸ್ಪೀಟ್ ಕ್ಲಬ್ ಪ್ರಾರಂಭವಾಗಿದೆ. ಊರಿಗೆ ಬುದ್ಧಿ ಹೇಳುವ ಜಾಗದಲ್ಲಿರುವ ಶಿಕ್ಷಣ ಸಚಿವರ ಕ್ಷೇತ್ರದಲ್ಲಿಯೇ ಇಸ್ಪೀಟ್ ಕ್ಲಬ್ ನಡೆಯುತ್ತಿದೆ. ತಮ್ಮ ತಂದೆ ಎಸ್.ಬಂಗಾರಪ್ಪ ಹೆಸರು ಉಳಿಸುವ ಉದ್ದೇಶವಿದ್ದರೇ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮೊದಲು ಇಸ್ಪೀಟ್ ಕ್ಲಬ್ ಬಂದ್ ಮಾಡಿಸಲಿ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ವಾಗ್ಧಾಳಿ ನಡೆಸಿದ್ದಾರೆ. ಇಂದು ಸಾಗರದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ರಾಜ್ಯದ ಮುಖ್ಯಮಂತ್ರಿಯಾಗಿದ್ದ ಎಸ್.ಬಂಗಾರಪ್ಪ ಅವರ ಕಾಲದಲ್ಲಿ, ಅವರ ಅಣ್ಣ ಕುಮಾರ ಬಂಗಾರಪ್ಪ ಸಚಿವರಾಗಿದ್ದ ಸಂದರ್ಭದಲ್ಲಿ ಸೊರಬದಲ್ಲಿ ಇಸ್ಪೀಟ್ ಕ್ಲಬ್ನಂತಹ ಜೂಜಾಟಕ್ಕೆ ಅವಕಾಶ ಇರಲಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಿಲ್ಲೆಯ ಸಮಗ್ರ ಅಭಿವೃದ್ದಿ ಬಗ್ಗೆ ಕಿಂಚಿತ್ ಗಮನ ಹರಿಸದೆ ಇರುವುದೇ ಸಚಿವರ ಎರಡು ವರ್ಷದ ಸಚಿವರ ಸಾಧನೆಯಾಗಿದೆ ಎಂದು ಹೇಳಿದರು. ಸಾಗರ ಕ್ಷೇತ್ರವ್ಯಾಪ್ತಿಯಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಎರಡು ವರ್ಷದಲ್ಲಿ ರೈತರ ಮೇಲಿನ ಶೋಷಣೆ ಹೊರತುಪಡಿಸಿದರೆ…
ಬೆಂಗಳೂರು: ಮೇ.26ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-2 ಆರಂಭಗೊಳ್ಳಲಿದೆ. ಈ ಪರೀಕ್ಷೆಗೆ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಆದೇಶ ಹೊರಡಿಸಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದಿನಾಂಕ: 26.05.2025 ರಿಂದ ಕರ್ನಾಟಕದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗಳು ಪ್ರಾರಂಭವಾಗಲಿವೆ. ಈ ಸಂಬಂಧ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ, ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸುವಂತೆ ಉಲ್ಲೇಖಿತ-1 ರ ಪತ್ರದಲ್ಲಿ ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ರವರು ಕೋರಿರುತ್ತಾರೆ ಎಂದಿದ್ದಾರೆ. ಅದರನ್ವಯ ಕ.ರಾ.ರ.ಸಾ.ನಿಗಮವು, ಎಸ್ಎಸ್ಎಲ್ಸಿ ಪರೀಕ್ಷೆ-2 ನಡೆಯುವ ದಿನಾಂಕಗಳಂದು ಅಂದರೆ, ದಿನಾಂಕ 26.05.2025 ರಿಂದ 02.06.2025 ರವರೆಗೆ, ಪರೀಕ್ಷೆಗೆ ಹಾಜರಾಗುವ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ…
ನವದೆಹಲಿ: ನಟಿ ಐಶ್ವರ್ಯಾ ಅವರ ಕ್ಯಾನೆಸ್ ಲುಕ್ ಆಪರೇಷನ್ ಸಿಂಧೂರ್ ಚಿತ್ರಗಳು ವೈರಲ್ ಆದ ನಂತರ ಅದಕ್ಕೆ ಗೌರವ ಎಂದು ಅಭಿಮಾನಿಗಳು ಊಹಿಸಿದ್ದಾರೆ. ಐಶ್ವರ್ಯಾ ರೈ ಅವರ ಕ್ಯಾನೆಸ್ 2025 ಆಪರೇಷನ್ ಸಿಂದೂರನ್ನು ಸಾಂಕೇತಿಕವಾಗಿ ಸ್ವಾಗತಿಸಿತೇ? ಎಂಬುದಾಗಿಯೂ ಪ್ರಶ್ನೆ ಉದ್ಭವಿಸಿದೆ. 2025ರ ಕೇನ್ಸ್ ಚಲನಚಿತ್ರೋತ್ಸವದಲ್ಲಿ ಐಶ್ವರ್ಯಾ ರೈ ಬಚ್ಚನ್ ಅವರ ರಾಜಮನೆತನದ ನೋಟವು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯ ಅಲೆಯನ್ನು ಎಬ್ಬಿಸಿದೆ. ಹಣೆಯ ಮೇಲೆ ದಪ್ಪ ಕೆಂಪು ಸಿಂಧೂರದೊಂದಿಗೆ ಪ್ರಾಚೀನ ಬಿಳಿ ಸೀರೆಯನ್ನು ಧರಿಸಿದ್ದ ನಟಿಯ ನೋಟವು ಅದರ ಸೊಬಗಿಗಾಗಿ ಮಾತ್ರವಲ್ಲದೆ, ಅನೇಕರು ಆಳವಾದ ಸಂದೇಶವೆಂದು ನಂಬುವ ಕಾರಣಕ್ಕೂ ಗಮನ ಸೆಳೆಯಿತು. ಮಿಲಿಟರಿ ಪ್ರತಿಕ್ರಿಯೆಯ ಕೆಲವೇ ದಿನಗಳ ನಂತರ ಕೇನ್ಸ್ನಲ್ಲಿ ಕಾಣಿಸಿಕೊಂಡಿದ್ದು, ವೀಕ್ಷಕರು ಅವರ ಸಾಂಪ್ರದಾಯಿಕ ಉಡುಗೆ ಮತ್ತು ಸಿಂದೂರವನ್ನು ಕೇವಲ ಫ್ಯಾಷನ್ಗಿಂತ ಹೆಚ್ಚಿನದಾಗಿ ಅರ್ಥೈಸಿಕೊಳ್ಳಲು ಪ್ರೇರೇಪಿಸಿತು. “ಆಪರೇಷನ್ ಸಿಂದೂರವನ್ನು ಪ್ರತಿನಿಧಿಸುತ್ತಿದ್ದಾರೆ” ಎಂದು ಒಬ್ಬ ಬಳಕೆದಾರರು ಬರೆದಿದ್ದಾರೆ. ಮತ್ತೊಬ್ಬರು ಕಾಮೆಂಟ್ ಮಾಡಿದ್ದಾರೆ, “ಅವರು ಇದನ್ನು ಆಪರೇಷನ್ ಸಿಂದೂರಕ್ಕೆ ಅರ್ಪಿಸಿದ್ದಾರೆ. https://twitter.com/QueenAishwarya1/status/1925229425513414755 ಅಂತಹ ಸುಂದರ ಮಹಿಳೆ.”…
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಶದಲ್ಲಿ 183 ಕೆರೆಗಳಿದ್ದು, ಕಳೆದ ಒಂದು ವಾರದಿಂದ ಸುರಿದ ಮಳೆಯಿಂದಾಗಿ ನೀರಿನ ಮಟ್ಟವು ಗಣನೀಯವಾಗಿ ಹೆಚ್ಚಾಗಿದ್ದು, 63 ಕೆರೆಗಳು ಸಂಪೂರ್ಣವಾಗಿ ಭರ್ತಿಯಾಗಿವೆ ಎಂದು ಅರಣ್ಯ, ಪರಿಸರ ಮತ್ತು ಹವಾಮಾನ ವೈಪರಿತ್ಯ ನಿರ್ವಹಣೆ ವಿಭಾಗದ ವಿಶೇಷ ಆಯುಕ್ತರಾದ ಪ್ರೀತಿ ಗೆಹ್ಲೋಟ್ ತಿಳಿಸಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಕೆರೆಗಳ ಒಟ್ಟು ಸಂಗ್ರಹಣಾ ಸಾಮರ್ಥ್ಯವು 32,514 ದಶಲಕ್ಷ ಲೀಟರ್ ಗಳಾಗಿದೆ. ಕಳೆದ ಏಪ್ರೀಲ್-2025 ರಲ್ಲಿ ಕೆರೆಗಳ ಒಟ್ಟು ನೀರಿನ ಸಂಗ್ರಹಣೆಯ ಪ್ರಮಾಣವು 10,595 ದಶಲಕ್ಷ ಲೀಟರ್ ಗಳಿಗೆ ಕುಸಿದು ಕೇವಲ 3 ಕೆರೆಗಳಲ್ಲಿ ಮಾತ್ರ ಪೂರ್ಣ ಪ್ರಮಾಣದಲ್ಲಿ ನೀರು ತುಂಬಿತ್ತು. ಸುಮಾರು 63 ಕೆರೆಗಳಲ್ಲಿ ನೀರಿಲ್ಲದೆ ಒಣಗುವ ಹಂತದಲ್ಲಿತ್ತು. ಇದೀಗ ನಗರದಲ್ಲಿ ಕಳೆದ ಒಂದು ವಾರದಿಂದ ಸುರಿದ ಮಳೆಯಿಂದಾಗಿ ಒಟ್ಟು 26,056 ದಶಲಕ್ಷ ಲೀಟರ್ ನಷ್ಟು ನೀರು ಕೆರೆಗಳಲ್ಲಿ ಸಂಗ್ರಹವಾಗಿದ್ದು, ಏಪ್ರೀಲ್-2025ಕ್ಕೆ ಹೋಲಿಸಿದರೆ ನೀರಿನ ಪ್ರಮಾಣ ಸಾಕಷ್ಟು ಹೆಚ್ಚಾಗಿದೆ. ಇದೀಗ ಪಾಲಿಕೆ ವ್ಯಾಪ್ತಿಯ 63 ಕೆರೆಗಳು ಸಂಪೂರ್ಣವಾಗಿ ಭರ್ತಿಯಾಗಿರುತ್ತವೆ. ತುಂಬಿರುವ ಎಲ್ಲಾ…
ಮೈಸೂರು: ನೈಋತ್ಯ ರೈಲ್ವೆ ಮೈಸೂರು ವಿಭಾಗವು ವಿಶ್ವ ಪರಿಸರ ದಿನಾಚರಣೆ (ಜೂನ್ 5, 2025) ಪ್ರಯುಕ್ತ “ಪ್ಲಾಸ್ಟಿಕ್ ಮಾಲಿನ್ಯ ಅಂತ್ಯಗೊಳಿಸೋಣ” ಎಂಬ ಜಾಗತಿಕ ವಾಕ್ಯದೊಂದಿಗೆ ಮೇ 22 ರಿಂದ ಜೂನ್ 5ರ ವರೆಗೆ ಎರಡು ವಾರಗಳ ಸುದೀರ್ಘ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಮೈಸೂರು, ದಾವಣಗೆರೆ, ಶಿವಮೊಗ್ಗ, ಅರಸೀಕೆರೆ ಸೇರಿದಂತೆ ಪ್ರಮುಖ ರೈಲು ನಿಲ್ದಾಣಗಳಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಜಾಗೃತಿ ಅಭಿಯಾನ, ಸ್ವಚ್ಛತಾ ಚಟುವಟಿಕೆ, ಕಾರ್ಯಾಗಾರ, ಪ್ಲಾಸ್ಟಿಕ್ ಬಾಟಲ್ ಕ್ರಶಿಂಗ್ ಯಂತ್ರಗಳ ಸ್ಥಾಪನೆ, ಬಯಲು ನಾಟಕಗಳು, ಶಾಲಾ ಸಂವಹನಗಳು ಮತ್ತು ಪರಿಸರ ಸ್ನೇಹಿ ಉತ್ಪನ್ನಗಳ ಪ್ರಚಾರವನ್ನು ಒಳಗೊಂಡಿವೆ. ಜೂನ್ 5, 2025 ರಂದು ಮೈಸೂರು – ಒಂಟಿ ಕೊಪ್ಪಲು ರೈಲ್ವೆ ಕಾಲೊನಿಯಲ್ಲಿ ಈ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಲಿದೆ. ವಿಭಾಗೀಯ ರೈಲ್ವೆ ಮ್ಯಾನೇಜರ್ ಮುದಿತ್ ಮಿತ್ತಲ್ ಮುಖ್ಯ ಅತಿಥಿಯಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ರೈಲ್ವೆ ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ಗಿಡಗಳ ವಿತರಣೆ ಮಾಡಲಿದ್ದು, “ಅತ್ಯುತ್ತಮ ಸಂರಕ್ಷಿತ ಗಿಡ” ಸ್ಪರ್ಧೆ ಘೋಷಿಸಲಾಗುವುದು. ಸ್ಪರ್ಧೆಯಲ್ಲಿ ವಿಜೇತರನ್ನು ಮುಂದಿನ…
ಬೆಂಗಳೂರು: ಗೃಹಲಕ್ಷ್ಮೀ ಯಜಮಾನಿಯರನ್ನು ಆರ್ಥಿಕವಾಗಿ ಮತ್ತಷ್ಟು ಸದೃಢರನ್ನಾಗಿ ಮಾಡುವ ಉದ್ದೇಶದಿಂದ “ಗೃಹಲಕ್ಷ್ಮೀ ಸಂಘ” ಗಳನ್ನು ರಚಿಸಲು ಕಾರ್ಯಯೋಜನೆ ರೂಪಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಗುರುವಾರ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರಿಂದ ಸ್ವಸಹಾಯ/ಸ್ತ್ರೀ ಶಕ್ತಿ ಗುಂಪುಗಳನ್ನು ರಚಿಸುವ ಸಂಬಂಧ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಸಚಿವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಕ ‘ಗೃಹಲಕ್ಷ್ಮಿ’ ಸಂಘವನ್ನು ರಚಿಸಲಾಗುವುದು ಎಂದರು. ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 1.25 ಕೋಟಿ ಫಲಾನುಭವಿಗಳಿದ್ದಾರೆ. ಪ್ರತಿ ತಿಂಗಳು ಸಂದಾಯ ಆಗುತ್ತಿರುವ 2 ಸಾವಿರ ರೂಪಾಯಿ ಹಣವನ್ನು ಇನ್ನಷ್ಟು ಸದುಪಯೋಗ ಪಡಿಸಿಕೊಳ್ಳುವ ನಿಟ್ಟಿನಲ್ಲಿ ಗೃಹಲಕ್ಷ್ಮಿ ಸಂಘಗಳನ್ನು ರಚಿಸಲಾಗುವುದು. ಈ ಮೂಲಕ ಗೃಹಲಕ್ಷ್ಮಿ ಯಜಮಾನಿಯರನ್ನು ಆರ್ಥಿಕವಾಗಿ ಮತ್ತಷ್ಟು ಸದೃಢರನ್ನಾಗಿ ಮಾಡುವುದೇ ಉದ್ದೇಶವಾಗಿದೆ ಎಂದು ಹೇಳಿದರು. ರಾಜ್ಯದಲ್ಲಿ ಈ ಹಿಂದೆ ಮೋಟಮ್ಮನವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾಗಿದ್ದಾಗ ಸ್ತ್ರೀಶಕ್ತಿ ಸಂಘಗಳನ್ನು ಹುಟ್ಟುಹಾಕಿ, ಮಹಿಳೆಯರಲ್ಲಿ ಆರ್ಥಿಕ ಕ್ರಾಂತಿಕಾರಿ ಬದಲಾವಣೆಗಳನ್ನು ತಂದಿದ್ದರು. ಅದೇ…
ಬೆಂಗಳೂರು: ವಿಲ್ಸನ್ ಗಾರ್ಡನ್ ವಿದ್ಯುತ್ ಚಿತಾಗಾರದ 1 ಫರ್ನೆಸ್ ಅನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುತ್ತಿರುವುದಾಗಿ ಬಿಬಿಎಂಪಿ ತಿಳಿಸಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ದಕ್ಷಿಣ ವಲಯ ವ್ಯಾಪ್ತಿಯ ವಿಲ್ಸನ್ ಗಾರ್ಡನ್ ವಿದ್ಯುತ್ ಚಿತಾಗಾರದಲ್ಲಿ ಹೊಸದಾಗಿ ಚಿಮಣಿ ಹಾಗೂ ಇತರೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಮುಂದುವರಿದು, 2 ಫರ್ನೆಸ್ ಗಳ ಪೈಕಿ 1 ಫರ್ನೆಸ್ ಅನ್ನು ದಿನಾಂಕ: 26-05-2025 ರಿಂದ 02-09-2025 ರವರೆಗೆ ಸುಮಾರು 3 ತಿಂಗಳುಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದ್ದು, 1 ಫರ್ನೆಸ್ ಮಾತ್ರ ಕಾರ್ಯನಿರ್ವಹಿಸಲಿದೆ. ಈ ಸಂಬಂಧ ಸಾರ್ವಜನಿಕರು ಸಹಕರಿಸಬೇಕೆಂದು ದಕ್ಷಿಣ ವಲಯ ವಿದ್ಯುತ್ ವಿಭಾಗದ ಕಾರ್ಯಪಾಲಕ ಅಭಿಯಂತರರು ಸಾರ್ವಜನಿಕ ಪ್ರಕಟಣೆ ಮೂಲಕ ಕೋರಿರುತ್ತಾರೆ. https://kannadanewsnow.com/kannada/pose-like-women-use-nude-pictures-to-deceive-millions-accused-arrested/ https://kannadanewsnow.com/kannada/good-news-for-cancer-patients-in-the-state-chemotherapy-centers-started-in-16-district-hospitals/ https://kannadanewsnow.com/kannada/abuse-pregnancy-twice-abortion-artist-manu-reveals-the-face-of-the-victim/