Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಪತಿ ಉದ್ಧಾರವಾದಾಗ ಮಾತ್ರ, ಪತ್ನಿ ಮತ್ತು ಮಕ್ಕಳನ್ನು ಚೆನ್ನಾಗಿ ಸಾಕಲು ಸಾಧ್ಯವಾಗುತ್ತದೆ. ಅವರಿಗೆ ಬೇಕಾದ್ದನ್ನು ತೆಗೆದುಕೊಡಲು, ಒಳ್ಳೆಯ ಬಟ್ಟೆ, ಹೊಟ್ಟೆ ತುಂಬ ಊಟ ಹಾಕಲು ಸಾಧ್ಯವಾಗುತ್ತದೆ. ಇನ್ನು ಹಿಂದೂ ಧರ್ಮದ ಪ್ರಕಾರ, ಪತಿ ಉದ್ಧಾರವಾಗಬೇಕು, ಶ್ರೀಮಂತನಾಗಬೇಕು ಅಂದ್ರೆ, ಪತ್ನಿ ಕೆಲ ಕೆಲಸಗಳನ್ನು ಮಾಡಬೇಕಾಗುತ್ತದೆ. ಹಾಗಾದ್ರೆ ಏನು ಆ ಕೆಲಸ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ವಿದ್ವಾನ್ ವಿದ್ಯಾಧರ್ 9686268564 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಎಷ್ಟೇ ಪ್ರಯತ್ನ ಜೀವನದಲ್ಲಿ ಏಳಿಗೆ ಅಭಿವೃದ್ಧಿ ಆಗದೆ ನೋಂದಿದ್ದರೆ ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯುತ್ತಿದೆ. ಇನ್ನೇನು 14 ಲೋಕಸಭಾ ಕ್ಷೇತ್ರಗಳ ಮತದಾನಕ್ಕೆ ಒಂದು ಗಂಟೆ ಮಾತ್ರವೇ ಬಾಕಿ ಇದೇ. ಇದರ ನಡುವೆ 5 ಗಂಟೆಯವರೆಗೆ ಶೇ.63.90ರಷ್ಟು ಮತದಾನವಾಗಿದೆ. ಈ ಕುರಿತಂತೆ ಕೇಂದ್ರ ಚುನಾವಣಾ ಆಯೋಗದಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಇಂದು ಸಂಜೆ 5 ಗಂಟೆಯವರೆಗೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಶೇ.63.90ರಷ್ಟು ಮತದಾನವಾಗಿದೆ ಎಂದು ತಿಳಿಸಿದೆ. ಇಲ್ಲಿದೆ 14 ಲೋಕಸಭಾ ಕ್ಷೇತ್ರಗಳ ಮತದಾನ ಪ್ರಮಾಣ ಉಡುಪಿ-ಚಿಕ್ಕಮಗಳೂರು – ಶೇ.72.13 ಹಾಸನ- ಶೇ.72.13 ದಕ್ಷಿಣ ಕನ್ನಡ- ಶೇ.71.83 ಚಿತ್ರದುರ್ಗ- ಶೇ.67 ತುಮಕೂರು – ಶೇ.72.10 ಮಂಡ್ಯ- ಶೇ.74.87 ಮೈಸೂರು- ಶೇ.65.85 ಚಾಮರಾಜನಗರ- ಶೇ.69.60 ಬೆಂಗಳೂರು ಗ್ರಾಮಾಂತರ – ಶೇ.61.78 ಬೆಂಗಳೂರು ಉತ್ತರ- ಶೇ.50.84 ಬೆಂಗಳೂರು ಕೇಂದ್ರ – ಶೇ.48.61 ಬೆಂಗಳೂರು ದಕ್ಷಿಣ- ಶೇ.49.37 ಚಿಕ್ಕಬಳ್ಳಾಪುರ – ಶೇ.70.97 ಕೋಲಾರ- ಶೇ.71.26 https://kannadanewsnow.com/kannada/breaking-x-down-across-the-country-including-karnataka/ https://kannadanewsnow.com/kannada/congress-conspiring-to-take-away-sc-st-obc-rights-pm-modi/
ಚಿತ್ರದುರ್ಗ/ತುಮಕೂರು/ಮಂಡ್ಯ: ಲೋಕಸಭಾ ಚುನಾವಣೆಗೆ ಇಂದು ರಾಜ್ಯದಲ್ಲಿ ಮೊದಲ ಹಂತದಲ್ಲಿ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಇಂದಿನ ಲೋಕಸಭಾ ಚುನಾವಣೆಯ ಸಂದರ್ಭದಲ್ಲೇ ವೋಟ್ ಮಾಡಿ ಬಂದಂತ ಮೂವರು ದಾರುಣವಾಗಿ ಸಾವನ್ನಪ್ಪಿದಂತ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೊಟ್ಟಪ್ಪನಹಳ್ಳಿ ಮೇಗಳ ಗೊಲ್ಲರಹಟ್ಟಿಯಲ್ಲಿ 55 ವರ್ಷದ ಶಾಲಾ ಶಿಕ್ಷಕಿ ಯಶೋಧಮ್ಮ ಎಂಬುವರನ್ನು ಎಆರ್ ಓ ಆಗಿ ನೇಮಕ ಮಾಡಲಾಗಿತ್ತು. ಚುನಾವಣಾ ಕರ್ತವ್ಯ ನಿರತರಾಗಿದ್ದಂತ ಸಂದರ್ಭದಲ್ಲೇ ಲೋ ಬಿಪಿಯಾಗಿ ಹೃದಯಾಘಾತವಾಗಿತ್ತು. ಅವರನ್ನು ಆಸ್ಪತ್ರೆಗೆ ಸಾಗಿಸೋ ಮಾರ್ಗ ಮದ್ಯದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ತುಮಕೂರು ನಗರದ ಎಸ್ ಎಸ್ ಪುರಂನಲ್ಲಿ ಮತ ಚಲಾಯಿಸಿ ಮನೆಗೆ ಬಂದಂತ ರಮೇಶ್ ಎಂಬುವರು ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ. ರಮೇಶ್ ಅವರು ಬಟ್ಟೆ ಅಂಗಡಿ ವ್ಯಾಪಾರಿಯಾಗಿದ್ದರು. ಇಂದು ಬೆಳಿಗ್ಗೆ ಎಸ್ ಎಸ್ ಪುರಂ ಮತಗಟ್ಟೆಗೆ ತೆರಳಿ, ಪತ್ನಿಯೊಂದಿಗೆ ಮತಚಲಾಯಿಸಿ ಮನೆಗೆ ಬಂದಿದ್ದರು. ಈ ವೇಳೆಯಲ್ಲಿ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ. ಇನ್ನೂ ಮಂಡ್ಯದಲ್ಲಿ ಮತದಾನ ಮಾಡಿ ಬಂದು ವೃದ್ದ ಸಾವನ್ನಪ್ಪಿದ್ದಾರೆ. ಮದ್ದೂರು ತಾಲೂಕಿನ ಚನ್ನೇಗೌಡನ ದೊಡ್ಡಿ…
ನವದೆಹಲಿ: ಮಹಿಳಾ ಕುಸ್ತಿಪಟುಗಳು ತಮ್ಮ ವಿರುದ್ಧ ದಾಖಲಿಸಿರುವ ಲೈಂಗಿಕ ಕಿರುಕುಳ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಸುವಂತೆ ಕೋರಿ ಬಿಜೆಪಿ ಸಂಸದ ಮತ್ತು ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್ಐ) ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ನ್ಯಾಯಾಲಯ ತಿರಸ್ಕರಿಸಿದೆ. ರೂಸ್ ಅವೆನ್ಯೂ ನ್ಯಾಯಾಲಯದ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ಎಸಿಎಂಎಂ) ಪ್ರಿಯಾಂಕಾ ರಜಪೂತ್ ಅವರು ಮೇ 7 ರಂದು ಪ್ರಕರಣದಲ್ಲಿ ಆರೋಪಗಳನ್ನು ರೂಪಿಸುವ ಆದೇಶವನ್ನು ಪ್ರಕಟಿಸಲಿದ್ದಾರೆ. ಡಬ್ಲ್ಯುಎಫ್ಐ ಕಚೇರಿಯಲ್ಲಿ ತನಗೆ ಕಿರುಕುಳ ನೀಡಲಾಗಿದೆ ಎಂದು ದೂರುದಾರರೊಬ್ಬರು ಆರೋಪಿಸಿರುವ ಘಟನೆ ನಡೆದ ದಿನಾಂಕದಂದು ತಾನು ಭಾರತದಲ್ಲಿರಲಿಲ್ಲ ಎಂದು ಸಿಂಗ್ ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ. ದೂರುದಾರರೊಂದಿಗೆ ಬಂದಿದ್ದ ತರಬೇತುದಾರನ ಕರೆ ವಿವರ ದಾಖಲೆಗಳನ್ನು (ಸಿಡಿಆರ್) ದೆಹಲಿ ಪೊಲೀಸರು ಅವಲಂಬಿಸಿದ್ದಾರೆ ಮತ್ತು ಅವರು ಸೆಪ್ಟೆಂಬರ್ 7, 2022 ರಂದು ಡಬ್ಲ್ಯೂಎಫ್ಐಗೆ ಹೋಗಿದ್ದರು. ಅಲ್ಲಿ ಅವರು ಲೈಂಗಿಕ ಕಿರುಕುಳಕ್ಕೊಳಗಾಗಿದ್ದಾರೆ ಎಂದು ಸಿಂಗ್ ಅವರ ವಕೀಲರು ಹೇಳಿದ್ದಾರೆ. https://kannadanewsnow.com/kannada/pm-wont-discuss-price-rise-unemployment-farmers-organisations-siddaramaiah/ https://kannadanewsnow.com/kannada/breaking-x-down-across-the-country-including-karnataka/
ವಿಜಯಪುರ: ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ವಿಜಯಪುರ ನಗರ ದಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ -02 ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ತಮ್ಮ ಪಕ್ಷದ ಅಭ್ಯರ್ಥಿಯಾದ ರಾಜು ಹಲಗೂರು ರವರ ಪರವಾಗಿ ಮಾತಾಯಾಚನೆ ಮಾಡಿ ನಂತರ ಮತದಾರರನ್ನು ಉದ್ದೇಶಿಸಿ ಮಾತನಾಡಿದರು. ನರೇಂದ್ರ ಮೋದಿಯವರು ಹತ್ತು ವರ್ಷ ಪ್ರಧಾನಿಯಾಗಿ ಬಡವರು, ಯುವಕರು,ದಲಿತರು ಅಲ್ಪಸಂಖ್ಯಾತ ಪರವಾಗಿ ಕೆಲಸ ಮಾಡಿಲ್ಲ. ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆ ಮಾಡುವುದಿಲ್ಲ. ಅವರು ಸಾಧನೆಗಳನ್ನು ಹೇಳದೆ ಭಾವನೆಗಳನ್ನು ಕೆರಳಿಸಿ, ಧರ್ಮ ಧರ್ಮಗಳ ನಡುವೆ, ಜಾತಿಗಳ ನಡುವೆ ಬೆಂಕಿ ಇಡುವ ಕೆಲಸಗಳನ್ನು ಮಾಡಿದ್ದಾರೆ. ಇತ್ತೀಚಿನ ಅವರ ಭಾಷಣಗಳನ್ನು ಗಮನಿಸಿದರೆ ಮೊದಲಹಂತದ ಚುನಾವಣೆಯಲ್ಲಿ ಅವರು ನಿರೀಕ್ಷಿಸಿದ ಮತಗಳು ಬರುವುದಿಲ್ಲ ಎಂದು ಅವರು ಹತಾಶರಾಗಿದ್ದಾರೆ. ಸಂಬಂಧಪಡದ ಅನೇಕ ವಿಚಾರಗಳನ್ನು ಪ್ರಸ್ತಾಪಿಸುತ್ತಿದ್ದಾರೆ ಎಂದರು ಧೃವೀಕರಣ ಮಾಡುವ ಪ್ರಯತ್ನ ಸಂವಿಧಾನದ 15…
ಚಾಮರಾಜನಗರ: ಜಿಲ್ಲೆಯ ಲೋಕಸಭಾ ಕ್ಷೇತ್ರದ ಮಹದೇಶ್ವರಬೆಟ್ಟ ವ್ಯಾಪ್ತಿಯ ಐದು ಗ್ರಾಮಗಳಲ್ಲಿ ಮತದಾನವನ್ನು ಬಹಿಷ್ಕರಿಸಲಾಗಿದೆ. ಇದೇ ವೇಳೆ ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆಯನ್ನೇ ಧ್ವಂಸ ಮಾಡಲಾಗಿದೆ. ಯಾವುದೇ ಮೂಲ ಸೌಕರ್ಯವಿಲ್ಲವೆಂದು ರೊಚ್ಚಿಗೆದ್ದ ಇಂಡಿಗನತ್ತ ಗ್ರಾಮಸ್ಥರು ಮತಗಟ್ಟೆ ಮೇಲೆ ದಾಳಿ ಮಾಡಿ ಮತಯಂತ್ರಗಳನ್ನು ಪೀಸ್ ಪೀಸ್ ಮಾಡಿದ್ದಾರೆ. ಮತದಾನದಿಂದ ದೂರ ಉಳಿದ ಗ್ರಾಮಸ್ಥರಿಂದ ಈ ಕೃತ್ಯ ನಡೆದಿದೆ. ಈ ವೇಳೆ ಗ್ರಾಮಸ್ಥರ ಮನವೊಲಿಕೆಗೆ ತೆರಳಿದ್ದ ಅಧಿಕಾರಿಗಳ ಮೇಲೆಯೂ ಹಲ್ಲೆ ನಡೆಸಲಾಗಿದೆ. ಆಕ್ರೋಶಗೊಂಡ ಹಲವರು ಇವಿಎಂ, ಮೇಜು ಕುರ್ಚಿ ಮತಗಟ್ಟೆ ಸಾಮಗ್ರಿಗಳನ್ನು ಧ್ವಂಸ ಮಾಡಿದ್ದಾರೆ. ಬಳಿಕ ಸ್ಥಳದಲ್ಲಿ ಜನರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಇದೇ ವೇಳೆ ತಿರುಗಿಬಿದ್ದ ಜನರು ಸಹ ಪೊಲೀಸರ ಮೇಲೆ ಕಲ್ಲು ತೂರಿದ್ದಾರೆ. ಇನ್ನೂ ಮತಗಟ್ಟೆಯ ಮೇಲೆ ಗ್ರಾಮಸ್ಥರ ದಾಳಿಯಿಂದಾಗಿ ಮತಗಟ್ಟೆಯ ಕೆಲ ಅಧಿಕಾರಿಗಳು ಗಾಯಗೊಂಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಹನೂರು ತಹಶೀಲ್ದಾರ್ ಆಗಮಿಸಿ, ಪರಿಸ್ಥಿತಿ ನಿಯಂತ್ರಿಸೋಕ್ಕೆ ಕ್ರಮವಹಿಸಿದ್ದಾರೆ. https://kannadanewsnow.com/kannada/breaking-x-down-across-the-country-including-karnataka/ https://kannadanewsnow.com/kannada/congress-conspiring-to-take-away-sc-st-obc-rights-pm-modi/
ಬೆಂಗಳೂರು: ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನದ ವೇಳೆಯಲ್ಲಿ ಬೆಂಗಳೂರಲ್ಲಿ ಮತದಾನಕ್ಕೆ ತೆರಳಿದಂತ ಮಹಿಳೆಯೊಬ್ಬರಿಗೆ ಹೃದಯಾಘಾತ ಉಂಟಾಗಿದೆ. ಈ ವೇಳೆಯಲ್ಲಿ ಸ್ಥಳದಲ್ಲೇ ಇದ್ದಂತ ವೈದ್ಯರೊಬ್ಬರು ಪ್ರಾಥಮಿಕ ಚಿಕಿತ್ಸೆ ನೀಡಿ, ಪ್ರಾಣ ಉಳಿಸಿದಂತ ಘಟನೆ ನಡೆದಿದೆ. ಬೆಂಗಳೂರಿನ ಜೆಪಿ ನಗರದ 8ನೇ ಹಂತದ ಜಂಬೂ ಸವಾರಿ ದಿನ್ನೆಯಲ್ಲಿ ಇಂದು ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಮತಗಟ್ಟೆಯಲ್ಲಿ ಮತದಾನ ನಡೆಯುತ್ತಿತ್ತು. ಮತದಾರರು ಸರದಿ ಸಾಲಿನಲ್ಲಿ ನಿಂತು, ತಮ್ಮ ಹಕ್ಕನ್ನು ಚಲಾಯಿಸಿದರು. ಹೀಗೆ ಜಂಬೂ ಸವಾರಿ ದಿನ್ನೆಯ ಮತಗಟ್ಟೆಯಲ್ಲಿ ಮತ ಚಲಾಯಿಸೋದಕ್ಕೆ ಬಂದಂತ 50 ವರ್ಷದ ಮಹಿಳೆಯೊಬ್ಬರು ದಿಢೀರ್ ಹೃದಯಾಘಾತಕ್ಕೆ ಒಳಗಾದರು. ಕೂಡಲೇ ಬೊಮ್ಮಸಂದ್ರದ ನಾರಾಯಣ ಆರೋಗ್ಯ ಕೇಂದ್ರದ ತಜ್ಞ ವೈದ್ಯ ಡಾ.ಗಣೇಶ್ ಶ್ರೀನಿವಾಸ್ ಪ್ರಸಾದ್ ಅವರು, ಮಹಿಳೆಗೆ ಸ್ಥಳದಲ್ಲೇ ಪ್ರಾಥಮಿಕ ಚಿಕಿತ್ಸೆ ನೀಡಿ, ಪ್ರಾಣ ಉಳಿಸಿದ್ದಾರೆ. ಈ ಮೂಲಕ ವೃತ್ತಿ ಪ್ರಾವೀಣ್ಯತೆಯನ್ನು ಮೆರೆದಿದ್ದಾರೆ. https://twitter.com/thisis_drgsp/status/1783705404926788059 https://kannadanewsnow.com/kannada/breaking-x-down-across-the-country-including-karnataka/ https://kannadanewsnow.com/kannada/congress-conspiring-to-take-away-sc-st-obc-rights-pm-modi/
ಚಾಮರಾಜನಗರ: ಜಿಲ್ಲೆಯಲ್ಲಿ ಮತಗಟ್ಟೆಯ ಬಳಿಯಲ್ಲಿ ಜನರನ್ನು ಚದುರಿಸಲು ಪೊಲೀಸರು ನಡೆಸಿದಂತ ಲಾಠಿ ಚಾರ್ಜ್ ನಿಂದ ರೊಚ್ಚಿಗೆದ್ದಂತ ಗ್ರಾಮಸ್ಥರು, ಪೊಲೀಸರ ಮೇಲೆ ಪ್ರತಿದಾಳಿ ನಡೆಸಿ, ಮತಗಟ್ಟೆಯಲ್ಲಿನ ಮೇಜು, ಕುರ್ಚಿ, ಇವಿಎಂ ಮಿಷಿನ್ ಧ್ವಂಸಗೊಳಿಸಿರುವಂತ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಹನೂರು ಬಳಿಯ ಇಂಡಿಗನತ್ತ ಗ್ರಾಮದಲ್ಲಿ ಇಂದು ಲೋಕಸಭಾ ಚುನಾವಣೆಯ ಕಾರಣದಿಂದಾಗಿ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ಮತಕೇಂದ್ರದ ಬಳಿಯಲ್ಲಿ ಮೂಲಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಧರಣಿ, ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನಾ ಸ್ಥಳಕ್ಕೆ ಬಂದಂತ ಅಧಿಕಾರಿಗಳು ಗ್ರಾಮಸ್ಥರನ್ನು ಮನವೊಲಿಕೆಗೆ ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಜೊತೆಗೆ ಚುನಾವಣಾಧಿಕಾರಿಗಳು, ಗ್ರಾಮಸ್ಥರ ನಡುವೆ ವಾಗ್ವಾದಕ್ಕೂ ಕಾರಣವಾಗಿತ್ತು. ಈ ವೇಳೆಯಲ್ಲಿ ಪರಿಸ್ಥಿತಿಯನ್ನು ನಿಯಂತ್ರಿಸೋದಕ್ಕೆ ಪೊಲೀಸರು ಲಾಠಿ ಚಾರ್ಜ್ ನಡೆಸಿದರು. ಪೊಲೀಸರ ಲಾಠಿ ಚಾರ್ಜ್ ನಿಂದ ರೊಚ್ಚಿಗೆದ್ದಂತ ಗ್ರಾಮಸ್ಥರು ಇಂಡಿಗನತ್ತ ಮತಗಟ್ಟೆಯ ಮೇಲೆ ದಾಳಿ ನಡೆಸಿದರು. ಮತಕೇಂದ್ರದಲ್ಲಿನ ಮೇಜು, ಕುರ್ಚಿ, ಇವಿಎಂ ಯಂತ್ರವನ್ನು ಪುಡಿಪುಡಿ ಮಾಡಿದ್ದಾರೆ. ಈಗ ಸ್ಥಳದಲ್ಲಿ ಪರಿಸ್ಥಿತಿ ಬಿಗುವಿನಿಂದ ಕೂಡಿದ್ದು, ಬಿಗಿ ಪೊಲೀಸ್ ಬಂಧೋಬಸ್ತ್ ಕೈಗೊಳ್ಳಲಾಗಿದೆ. ಇನ್ನೂ ಮತಗಟ್ಟೆಯ ಮೇಲೆ…
ಹುಬ್ಬಳ್ಳಿ: ಜಿಲ್ಲೆಯಲ್ಲಿ ನಡೆದಿದ್ದಂತ ನೇಹಾ ಹಿರೇಮಠ ಹತ್ಯೆ ಹಿನ್ನಲೆಯಲ್ಲಿ ನಿನ್ನೆಯಷ್ಟೇ ಸಿಎಂ ಸಿದ್ಧರಾಮಯ್ಯ ನೇಹಾ ತಂದೆ ನಿರಂಜನ್ ಭೇಟಿಯಾಗಿ ಕುಟುಂಬಸ್ಥರಿಗೆ ಸಾತ್ವಾನ ಹೇಳಿದ್ದರು. ಅಲ್ಲದೇ ಬೆದರಿಕೆ ಇದ್ರೆ ಭದ್ರತೆ ಒದಗಿಸೋದಾಗಿಯೂ ತಿಳಿಸಿದ್ದರು. ಅದರಂತೆ ನೇಹಾ ತಂದೆಗೆ ಗನ್ ಮ್ಯಾನ್, ಮನೆಗೆ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ. ಹೌದು ನೇಹಾ ಹಿರೇಮಠ ಹತ್ಯೆ ನಡೆದ ಮೇಲೆ ನಮ್ಮ ಕುಟುಂಬಕ್ಕೆ ಬೆದರಿಕೆ ಇದೆ ಎಂದು ಸ್ವತ: ನೇಹಾ ತಂದೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಬಳಿಯಲ್ಲಿ ನಿನ್ನೆ ಅವರ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ರಾಜ್ಯ ಸರ್ಕಾರದಿಂದ ನೇಹಾ ಹಿರೇಮಠ ಅವರ ತಂದೆ ನಿರಂಜನ ಹಿರೇಮಠ ಮನೆಗೆ ಹಾಗೂ ಅವನಿಗೆ ಪೊಲೀಸ್ ಭದ್ರತೆಯನ್ನು ನೀಡಲಾಗಿದೆ. ಅಂದಹಾಗೇ ಏಪ್ರಿಲ್.18ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಂತ ನೇಹಾ ಹಿರೇಮಠ ಅವರನ್ನು ಫಾಗಲ್ ಪ್ರೇಮಿ ಫಯಾಜ್ ಎಂಬಾತ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದನು. ಆ ಬಳಿಕ ಆತನನ್ನು ಬಂಧಿಸಲಾಗಿತ್ತು. ಅಲ್ಲದೇ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ…
ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಗೆ 14 ಕ್ಷೇತ್ರಗಳಿಗೆ ಇಂದು ಮೊದಲ ಹಂತದಲ್ಲಿ ಮತದಾನ ನಡೆಯುತ್ತಿದೆ. ಬೆಂಗಳೂರು ಸೇರಿದಂತೆ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದ್ದೂ, 3 ಗಂಟೆಯವರೆಗೆ ಬೆಂಗಳೂರಲ್ಲಿ ಎಷ್ಟು ಪ್ರಮಾಣದಲ್ಲಿ ಮತದಾನ ಆಗಿದೆ ಅಂತ ಮುಂದೆ ಓದಿ. ಹೀಗಿದೆ ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ವ್ಯಾಪ್ತಿಯಲ್ಲಿ ಮಧ್ಯಾಹ್ನ 3 ಗಂಟೆಯವರೆಗೆ ಮತದಾನದ ಶೇಖಡಾವಾರು ಪ್ರಮಾಣ: ಮಧ್ಯಾಹ್ನ 03.00 ಗಂಟೆಯವರೆಗಿನ ವರದಿ ಬೆಂಗಳೂರು ಕೇಂದ್ರ: ಶೇ. 40.10 ಬೆಂಗಳೂರು ದಕ್ಷಿಣ: ಶೇ. 40.77 ಬೆಂಗಳೂರು ಉತ್ತರ: ಶೇ. 41.12 ಇಲ್ಲಿದೆ ಮಧ್ಯಾಹ್ನ ‘3 ಗಂಟೆ’ಯವರೆಗೆ ರಾಜ್ಯದ ’14 ಕ್ಷೇತ್ರ’ಗಳ ಶೇಕಡವಾರು ಮತದಾನದ ಪ್ರಮಾಣ ರಾಜ್ಯದಲ್ಲಿ ಇಂದು 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯುತ್ತಿದೆ. ಇಂದು ಮಧ್ಯಾಹ್ನ.1 ಗಂಟೆಯ ನಂತ್ರ, ಮಧ್ಯಾಹ್ನ 3 ಗಂಟೆಯವರೆಗೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದಲ್ಲಿ ಶೇ.50.93ರಷ್ಟು ಮತದಾನ ನಡೆದಿದೆ. ಈ ಕುರಿತಂತೆ ಚುನಾವಣಾ ಆಯೋಗದಿಂದ ಮಾಹಿತಿ ನೀಡಲಾಗಿದ್ದು, ಇಂದು ಮಧ್ಯಾಹ್ನ 3 ಗಂಟೆಯವರೆಗೆ…












