Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಕಳೆದ ಅಕ್ಟೋಬರ್.5, 2025ರಂದು ಶಿವಮೊಗ್ಗದ ಆರ್.ಎಂ.ಎಲ್ ನಗರದಲ್ಲಿ ದುಷ್ಕರ್ಮಿಗಳ ಗುಂಪೊಂದು ನಡೆಸಿದ ದಾಳಿಯಲ್ಲಿ, ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ, ಸ್ಕ್ರ್ಯಾಪ್ ವ್ಯಾಪಾರಿ ಅಮ್ಜದ್(34) ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಈ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಐವರನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದು, ಇವರಲ್ಲಿ ಕೆಲವರು ಅಪ್ರಾಪ್ತ ವಯಸ್ಸಿನವರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು : ಯಾರೇ ಏನೇ ಆಕ್ಷೇಪಣೆ ಮಾಡಿದರೂ ಸಮೀಕ್ಷೆ ನಡೆಯುತ್ತದೆ. ಇಷ್ಟವಿದ್ದ ಪ್ರಶ್ನೆಗೆ ಉತ್ತರಿಸಿ, ಇಲ್ಲದಿದ್ದರೆ ಬೇಡ ಎಂದು ನ್ಯಾಯಾಲಯವೇ ಹೇಳಿದೆ. ಸಮೀಕ್ಷೆಗೆ ವಿರೋಧ ಮಾಡುವುದು ಸರಿಯಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಭಾನುವಾರ ಬೆಳಿಗ್ಗೆ ಪ್ರತಿಕ್ರಿಯೆ ನೀಡಿದರು. “ಈ ಹಿಂದಿನ ಗಣತಿ ಸರಿಯಿಲ್ಲ ಎಂದರು. ಅದಕ್ಕೆ ಹೊಸದಾಗಿ ಗಣತಿ ಮಾಡಲಾಗುತ್ತಿದೆ. ಎಲ್ಲರೂ ಇದಕ್ಕೆ ಸಹಕರಿಸಬೇಕು ಎಂದು ಮನವಿ ಮಾಡುತ್ತೇನೆ” ಎಂದರು. ಎರಡು ಮೂರು ದಿನಗಳಲ್ಲಿ ಸಮೀಕ್ಷೆ ಮುಗಿಯಲಿದೆಯೇ ಎಂದು ಕೇಳಿದಾಗ, “ಇದರ ಬಗ್ಗೆ ಸಂಬಂಧ ಪಟ್ಟ ಆಯೋಗದವರು ಆಲೋಚನೆ ಮಾಡುತ್ತಾರೆ” ಎಂದು ಉತ್ತರಿಸಿದರು. ವೈಯಕ್ತಿಕ ಮಾಹಿತಿಗಳನ್ನು ಕೇಳಲು ಹೋಗಬೇಡಿ “ಬೆಂಗಳೂರಿನ ನಾಗರೀಕರ ಬಳಿ ಕೋಳಿ, ಕುರಿ, ಒಡವೆ, ವಾಷಿಂಗ್ ಮೆಷಿನ್, ಫ್ರಿಜ್ಡ್ ಹಾಗೂ ಇತರೇ ವೈಯಕ್ತಿಕ ಮಾಹಿತಿಗಳನ್ನ ಕೇಳಲು ಹೋಗಬೇಡಿ ಎಂದು ಅಧಿಕಾರಿಗಳಿಗೆ ತಿಳಿಸಿದ್ದೇನೆ. ಅವರುಗಳು ಏನು ಮಾಡುತ್ತಾರೋ ಗೊತ್ತಿಲ್ಲ” ಎಂದರು.
ಬೆಂಗಳೂರು: ವಿಧಾನಸೌಧವು ಪಾರಂಪರಿಕ ಹಾಗೂ ಶಕ್ತಿ ಸೌಧವಾಗಿದ್ದು, ಈ ಕಟ್ಟಡದ ಒಳ ಮತ್ತು ಹೊರ ಆವರಣವು ಅತೀ ಸೂಕ್ಷ್ಮ ಪ್ರದೇಶವಾಗಿದೆ. ಈ ಕಾರಣದಿಂದ ವಿಧಾನಸೌಧದ ಮುಂಭಾಗದಲ್ಲಿ ಬೃಹತ್ ಮೆಟ್ಟಿಲು ಹಾಗೂ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸರ್ಕಾರಿ ಕಾರ್ಯಕ್ರಮ ಆಯೋಜಿಸಲು ಇನ್ಮುಂದೆ ಕೆಲ ಮಾರ್ಗಸೂಚಿ ಅನುಸರಿಸುವುದು ಕಡ್ಡಾಯಗೊಳಿಸಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ವಿಧಾನ ಸೌಧವು ಪಾರಂಪರಿಕ ಹಾಗೂ ಶಕ್ತಿ ಸೌಧವಾಗಿದ್ದು, ಮಾನ್ಯ ಮುಖ್ಯ ಮಂತ್ರಿಯವರು, ಮಾನ್ಯ ಉಪ ಮುಖ್ಯ ಮಂತ್ರಿಯವರು, ಮಾನ್ಯ ಸಚಿವರು ಹಾಗೂ ಶಾಸಕಾಂಗ ಕಚೇರಿಗಳು / ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿರುವುದರಿಂದ, ವಿಧಾನಸೌಧ ಮತ್ತು ವಿಕಾಸಸೌಧ ಕಟ್ಟಡದ ಒಳ ಮತ್ತು ಹೊರ ಆವರಣವು ಅತಿ ಸೂಕ್ಷ್ಮ ಪ್ರದೇಶವಾಗಿದೆ. ಆದಕಾರಣ, ವಿಧಾನ ಸೌಧ ಮುಂಭಾಗದ ಬೃಹತ್ ಮೆಟ್ಟಿಲು ಹಾಗೂ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಸಚಿವಾಲಯ / ಸರ್ಕಾರಿ ಇಲಾಖೆಗಳು ರಾಜ್ಯ ಮಟ್ಟದ ಕಾರ್ಯಕ್ರಮಗಳನ್ನು ಏರ್ಪಡಿಸುವಾಗ…
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದ ಮಹತ್ವದ ವಿಷಯಗಳನ್ನು ಕೇಂದ್ರೀಕರಿಸಿ, ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಟಾನದಲ್ಲಿ ಪಾರದರ್ಶಕತೆ, ಆಡಳಿತವನ್ನು ಜನಸ್ನೇಹಿಯಾಗಿಸುವ ಹಾಗೂ ಪ್ರಾಮಾಣಿಕ ಪ್ರಯತ್ನದ ಭಾಗವಾಗಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ಸರ್ಕಾರಿ ಪತ್ರಗಳನ್ನು ಸಂಕ್ಷಿಪ್ತಗೊಳಿಸಿ, ಸರ್ಕಾರಿ ಪಾರಿಭಾಷಿಕ ಪದಗಳನ್ನು ಸರಳೀಕರಣ ಮಾಡಿ ಜನಸಾಮಾನ್ಯರಿಗೆ ಅರ್ಥೈಸುವ ನಿಟ್ಟಿನಲ್ಲಿ ‘ಗ್ರಾಮದನಿ’ ಪಾಡ್ಕಾಸ್ಟ್ ಕಾರ್ಯ ನಿರ್ವಹಿಸುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕರ್ನಾಟಕದ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯು (ANSSIRDPR) ಹೊಸಹೆಜ್ಜೆ ಇಡುವುದರೊಂದಿಗೆ ಆರಂಭಿಸಿರುವ ಸಾಮಾಜಿಕ ಮಾಧ್ಯಮಗಳ ಮೂಲಕ ಜನರನ್ನು ತಲುಪಲಿರುವ ‘ಗ್ರಾಮದನಿ’ ಸರಣಿ ಪಾಡ್ಕಾಸ್ಟ್ ಲೋಕಾರ್ಪಣೆ ಮಾಡಿ ಸಚಿವರು ಮಾತನಾಡಿದರು. ಮಾಧ್ಯಮದ ಇಂದಿನ ಯುಗದಲ್ಲಿ, ಸಮುದಾಯಕ್ಕೆ ಮಾಹಿತಿ ಮತ್ತು ಅರಿವು ಮೂಡಿಸುವುದು, ಅತ್ಯಂತ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ, ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಮಾಹಿತಿ ಕೊರತೆಯನ್ನು ನೀಗಿಸುವ…
ಶಿವಮೊಗ್ಗ : ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಕೈಬಿಡುವಂತೆ ಒತ್ತಾಯಿಸಿ ಶಿವಮೊಗ್ಗ ಜಿಲ್ಲಾ ರೈತ ಸಂಘದ ವತಿಯಿಂದ ಸಾಗರದ ಉಪವಿಭಾಗಾಧಿಕಾರಿಗಳ ಕಚೇರಿ ಎದುರು ಅನಿರ್ಧಿಷ್ಟಾವಧಿ ಪ್ರತಿಭಟನೆಯನ್ನು ಪಂಪ್ಡ್ ಸ್ಟೋರೇಜ್ ಅಣುಕು ಶವಯಾತ್ರೆ ನಡೆಸುವ ಮೂಲಕ ಶನಿವಾರದಿಂದ ಪ್ರಾರಂಭಿಸಲಾಗಿದೆ. ಮಾಜಿ ಶಾಸಕ ಬಿ.ಸ್ವಾಮಿರಾವ್ ಹಸಿರು ನಿಶಾನೆ ತೋರಿಸಿ, ಯೋಜನೆ ಕೈಬಿಡುವ ಹಕ್ಕೊತ್ತಾಯದ ಪತ್ರಕ್ಕೆ ಸಹಿ ಹಾಕುವ ಮೂಲಕ ಚಾಲನೆ ನೀಡಿದರು. ಶಿವಮೊಗ್ಗ ಜಿಲ್ಲೆಯ ಸಾಗರದ ಎಸಿ ಕಚೇರಿ ಮುಂದೆ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಮಾಜಿ ಶಾಸಕ ಬಿ.ಸ್ವಾಮಿರಾವ್, ಶರಾವತಿ ಪಂಪ್ಡ್ ಸ್ಟೋರೇಜ್ ಅತ್ಯಂತ ಅವೈಜ್ಞಾನಿಕ ಪರಿಸರಕ್ಕೆ ಮಾರಕವಾದ ಯೋಜನೆಯಾಗಿದೆ. ಮಲೆನಾಡಿಗರ ಮೇಲೆ ಪದೇಪದೇ ಒಂದಿಲ್ಲೊAದು ಅವೈಜ್ಞಾನಿಕ ಯೋಜನೆ ಹೇರುವ ಕೆಲಸ ಮಾಡಲಾಗುತ್ತಿದೆ. ಶರಾವತಿ ನದಿ ನೀರಿನ ಮೇಲಿನ ದೌರ್ಜನ್ಯ ಹೆಚ್ಚುತ್ತಿದೆ. ಸಾಗರ ಹೋರಾಟದ ನೆಲೆಯಾಗಿದ್ದು ಕಾಗೋಡು ಸತ್ಯಾಗ್ರಹದ ಮೂಲಕ ಗೇಣಿ ರೈತರಿಗೆ ಭೂಮಿ ದೊರಕಿಸಿ ಕೊಟ್ಟ ಹೆಗ್ಗಳಿಕೆ ಹೊಂದಿದೆ. ತಕ್ಷಣ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ನಿಲ್ಲಿಸಬೇಕು. ಕಾಗೋಡು ಚಳುವಳಿಯಲ್ಲಿ ಭಾಗವಹಿಸಿದ…
ಶಿವಮೊಗ್ಗ : ರಾಜ್ಯ ಸರ್ಕಾರ ಬ್ರಾಹ್ಮಣ ಅಭಿವೃದ್ದಿ ಮಂಡಳಿ ಮೂಲಕ ಬ್ರಾಹ್ಮಣ ಸಮುದಾಯಕ್ಕೆ ಅನೇಕ ಸೌಲಭ್ಯಗಳನ್ನು ನೀಡುತ್ತಿದೆ. ಸಮುದಾಯದವರು ಸೌಲಭ್ಯ ಪಡೆಯಲು ಹಿಂದೇಟು ಹಾಕಬಾರದು ಎಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ದಿ ಮಂಡಳಿ ನಿರ್ದೇಶಕ ಪಿ.ಎಂ.ಮಾಲತೇಶ್ ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಂಡಳಿ ಮೂಲಕ ಸರ್ಕಾರ ಜಾರಿಗೆ ತಂದಿರುವ ಯೋಜನೆ ಪಡೆಯಲು ಸಮುಚಿತ ಮಾರ್ಗದಲ್ಲಿ ಅರ್ಜಿ ಸಲ್ಲಿಸಲು ಮನವಿ ಮಾಡಿದರು. ಪ್ರಮುಖವಾಗಿ ಪಿಯುಸಿಯಿಂದ ಪದವಿವರೆಗೆ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಸಾಂದೀಪಿನಿ ಶಿಷ್ಯ ವೇತನ ಯೋಜನೆಯಡಿ 15ಸಾವಿರ ರೂ. ನಿರ್ವಹಣಾ ವೆಚ್ಚ ನೀಡುತ್ತಿದ್ದು, ಅರ್ಹ ವಿಪ್ರ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬಹುದು. ವಿದ್ಯಾರ್ಥಿಗಳು ಅರ್ಜಿಯ ಜೊತೆಗೆ ಆಧಾರ್ ಕಾರ್ಡ್ ಮತ್ತು ಇಡಬ್ಲೂö್ಯಎಸ್ ಸಂಖ್ಯೆಯನ್ನು ನಮೂದಿಸಬೇಕು. ಮೆಡಿಕಲ್ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಸಹ ಧನ ಸಹಾಯ ನೀಡಲಾಗುತ್ತದೆ. ವಿದ್ಯಾರ್ಥಿಗಳು ದಿನಾಂಕ 30-11-2025ರೊಳಗೆ ಅರ್ಜಿಯನ್ನು ಸಲ್ಲಿಸಬಹುದು ಎಂದರು. ಯೋಜನೆಯಡಿ 450 ವಿದ್ಯಾರ್ಥಿಗಳು…
ತುಮಕೂರು: ಜಿಲ್ಲೆಯ ಕೊರಟಗೆರೆಯಲ್ಲಿ ಖಾಸಗಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ತುಮಕೂರು ತಾಲೂಕಿನ ಬೆಳಧರ ಗ್ರಾಮದ ಬಳಿ ಖಾಸಗಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಕಾರಿನಲ್ಲಿ ತೆರಳುತ್ತಿದ್ದಂತ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರೇ, ಮತ್ತಿಬ್ಬರ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದು ಬಂದಿದೆ. ತುಮಕೂರು ಕೂರಿನಿಂದ ಪಾವಗಡದತ್ತ ಖಾಸಗಿ ಬಸ್ ತೆರಳುತ್ತಿತ್ತು. ಕೊರಟಗೆರೆಯಿಂದ ಧರ್ಮಸ್ಥಳಕ್ಕೆ ಕಾರು ತೆರಳುತ್ತಿತ್ತು. ಈ ಅಪಘಾತದಲ್ಲಿ ಕಾರಿನಲ್ಲಿ ತೆರಳುತ್ತಿದ್ದ ಭೈಚಾರಪುರ ಗ್ರಾಮದ ಶಿವಶಂಕರ್(30), ಕೊರಟಗೆರೆಯ ಶಿವಕುಮಾರ್(27) ಹಾಗೂ ಗೋವಿಂದಪ್ಪ(50) ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಈ ಅಪಘಾತದಲ್ಲಿ ಗಾಯಗೊಂಡಿರುವಂತ ರೆಡ್ಡಿಹಳ್ಳಿಯ ಶಂಕರ್(28) ಎಂಬಾತನನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಿತ್ತಿನಾಗೇನಹಳ್ಳಿಯ ವೇಣುಗೋಪಾಲ್ ಗೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ನಂತ್ರ ಸ್ಥಳದಿಂದ ಖಾಸಗಿ ಬಸ್ ಚಾಲಕ ಪರಾರಿಯಾಗಿದ್ದಾನೆ. ಈ ಸಂಬಂಧ ತುಮಕೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವದೆಹಲಿ: ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರವು ಮಕ್ಕಳಿಗೆ ಆಧಾರ್ ಕಡ್ಡಾಯ ಬಯೋಮೆಟ್ರಿಕ್ ನವೀಕರಣಕ್ಕಾಗಿ ಎಲ್ಲಾ ಶುಲ್ಕಗಳನ್ನು ಮನ್ನಾ ಮಾಡಿದೆ ಎಂದು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಶನಿವಾರ ಹೇಳಿಕೆಯಲ್ಲಿ ತಿಳಿಸಿದೆ. ಶುಲ್ಕ ವಿನಾಯಿತಿ ಈಗಾಗಲೇ ಅಕ್ಟೋಬರ್ 1 ರಿಂದ ಜಾರಿಗೆ ಬರುತ್ತಿದ್ದು, ಒಂದು ವರ್ಷದ ಅವಧಿಗೆ ಜಾರಿಯಲ್ಲಿರುತ್ತದೆ. ಅಸ್ತಿತ್ವದಲ್ಲಿರುವ ನಿಯಮಗಳ ಪ್ರಕಾರ, ಐದು ವರ್ಷ ವಯಸ್ಸಿನ ನಂತರ ಮಕ್ಕಳ ಬೆರಳಚ್ಚುಗಳು, ಐರಿಸ್ ಮತ್ತು ಫೋಟೋವನ್ನು ಕಡ್ಡಾಯವಾಗಿ ಆಧಾರ್ನಲ್ಲಿ ನವೀಕರಿಸಬೇಕಾಗುತ್ತದೆ ಮತ್ತು ಎರಡನೇ ನವೀಕರಣವನ್ನು 15-17 ವರ್ಷ ವಯಸ್ಸಿನ ನಡುವೆ ಮಾಡಬೇಕಾಗುತ್ತದೆ. ಈ ನವೀಕರಣಗಳನ್ನು 5-7 ವರ್ಷ ವಯಸ್ಸಿನ ಮಕ್ಕಳಿಗೆ ಮತ್ತು 15-17 ವರ್ಷ ವಯಸ್ಸಿನವರಿಗೆ ಯಾವುದೇ ಶುಲ್ಕವಿಲ್ಲದೆ ಅನುಮತಿಸಲಾಗಿದೆ. ಮಗುವಿಗೆ ಐದು ವರ್ಷ ತುಂಬಿದಾಗ, ಫಿಂಗರ್ಪ್ರಿಂಟ್ಗಳು, ಐರಿಸ್ ಮತ್ತು ಹೊಸ ಛಾಯಾಚಿತ್ರವನ್ನು ಕಡ್ಡಾಯವಾಗಿ ನವೀಕರಿಸಬೇಕು – ಇದನ್ನು ಮೊದಲ ಕಡ್ಡಾಯ ಬಯೋಮೆಟ್ರಿಕ್ ನವೀಕರಣ (MBU) ಎಂದು ಕರೆಯಲಾಗುತ್ತದೆ. 15 ನೇ ವಯಸ್ಸಿನಲ್ಲಿ ಎರಡನೇ ನವೀಕರಣದ ಅಗತ್ಯವಿದೆ, ಇದನ್ನು MBU-2…
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸರ್ಕಾರಿ ಸಂಸ್ಥೆ, ನಿಗಮ, ಸಂಸ್ಥೆಗಳಲ್ಲಿ ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವಂತ ವಿವಿಧ ವೃಂದದ ಹುದ್ದೆಗಳ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಈ ಕುರಿತಂತೆ ಕೆಇಎ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಖಾಲಿ ಇರುವಂತ 18 ಹುದ್ದೆ, ಕರ್ನಾಟಕ ಸೋಪ್ಸ್ ಆಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತ 14 ಸೇರಿದಂತೆ 394 ಹುದ್ದೆಗಳ ನೇಮಕಾತಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ನೇಮಕಾತಿ ಹುದ್ದೆಗಳ ವಿವರ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ- 18 ಹುದ್ದೆಗಳು ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ – 14 ಹುದ್ದೆಗಳು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ, ಬೆಂಗಳೂರು – 40 ಹುದ್ದೆಗಳು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ- 63 ಹುದ್ದೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ- 19 ಹುದ್ದೆ ಕೃಷಿ ಮಾರಾಟ ಇಲಾಖೆ- 180 ಹುದ್ದೆಗಳು ತಾಂತ್ರಿಕ ಶಿಕ್ಷಣ ಇಲಾಖೆ – 50 ಹುದ್ದೆಗಳು ಶಾಲಾ ಶಿಕ್ಷಣ…
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿ-ಗತಿ ಸಮೀಕ್ಷೆಯನ್ನು ಇಂದಿನಿಂದ ಪ್ರಾರಂಭಿಸಲಾಗಿದ್ದು, ಮೊದಲ ದಿನ 5 ನಗರ ಪಾಲಿಕೆಗಳಲ್ಲಿ 22,141 ಮನೆಗಳನ್ನು ಸಮೀಕ್ಷೆ ನಡೆಸಲಾಗಿದೆ. ಸಮೀಕ್ಷಾದಾರರು ನಿಮ್ಮ ಮನೆಗಳಿಗೆ ಬರುವ ವೇಳೆ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಸಹಕರಿಸಲು ಮತ್ತು ಭಾಗವಹಿಸಲು ಎಲ್ಲಾ ನಾಗರಿಕರಲ್ಲಿ ವಿನಂತಿಸಿದೆ. ನೀವು ಸಹ ಸ್ವತಃ ಆನ್ಲೈನ್ ಮೂಲಕವೂ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬಹುದು: ವೆಬ್ ಸೈಟ್ ಲಿಂಕ್ https://kscbcselfdeclaration.karnataka.gov.in/ 1. ಕೇಂದ್ರ ನಗರ ಪಾಲಿಕೆ : 2,822 2. ಪೂರ್ವ ನಗರ ಪಾಲಿಕೆ : 3,105 3. ಉತ್ತರ ನಗರ ಪಾಲಿಕೆ : 5,987 4. ದಕ್ಷಿಣ ನಗರ ಪಾಲಿಕೆ : 3,145 5. ಪಶ್ಚಿಮ ನಗರ ಪಾಲಿಕೆ : 7,082 ಒಟ್ಟು ಮನೆಗಳು: 22,141 https://kannadanewsnow.com/kannada/note-do-you-know-how-many-days-you-can-store-water-in-your-home/ https://kannadanewsnow.com/kannada/suicide-attempt-by-jumping-onto-namma-metro-train-tracks-in-bengaluru-train-services-resume/