Author: kannadanewsnow09

ಮೈಸೂರು : ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಮೂಲಕ ಜಿಲ್ಲೆಯ ಇತಿಹಾಸವನ್ನು ತಿರುಚಲಾಗುತ್ತಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿಯವರು ಟೀಕೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅಲ್ಲಿನ ಜನರ ಜನಾಭಿಪ್ರಾಯವನ್ನು ಪಡೆದೇ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ. ಕುಮಾರಸ್ವಾಮಿಯವರು ರಾಮನಗರ ಜಿಲ್ಲೆ ಸೃಜಿಸುವಾಗ, ಅಲ್ಲಿನ ಇತಿಹಾಸದ ಬಗ್ಗೆ ಯೋಚಿಸಿರಲಿಲ್ಲವೇ ಎಂದು ಮರುಪ್ರಶ್ನಿಸಿದರು. ಇ.ಡಿ ಹಾಗೂ ಐ.ಟಿ ದಾಳಿಗಳು ರಾಜಕೀಯ ಪ್ರೇರಿತವಾಗಬಾರದು ಜಾರಿನಿರ್ದೇಶನಾಲಯ ತನ್ನ ಎಲ್ಲೆಯನ್ನು ಮೀರುತ್ತಿರುವ ಬಗ್ಗೆ ಸರ್ವೋಚ್ಛ ನ್ಯಾಯಾಲಯ ಗಮನಿಸಿರುವ ಕುರಿತು ಪತ್ರರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಇ.ಡಿ ಯವರು, ಐ.ಟಿ.ಯವರು ತನಿಖೆ ಮಾಡುವುದನ್ನೇ ಆಗಲಿ ಅಥವಾ ಕಪ್ಪು ಹಣ ವ್ಯವಹಾರವನ್ನು ಪತ್ತೆ ಹಚ್ಚುವುದನ್ನೇ ಆಗಲಿ ಆಕ್ಷೇಪಿಸುವುದಿಲ್ಲ. ಆದರೆ ಇ.ಡಿ ಮತ್ತು ಐ.ಟಿ ದಾಳಿಗಳು ರಾಜಕೀಯ ದುರುದ್ದೇಶದಿಂದ ನಡೆಯಕೂಡದು. ಪ್ರಸ್ತುತ ಗೃಹ ಸಚಿವ…

Read More

ವಿಜಯಪುರ : “ಸುಳ್ಳಿಗೆ ಮತ್ತೊಂದು ಹೆಸರು ಕುಮಾರಸ್ವಾಮಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕಿಡಿಕಾರಿದರು. ವಿಜಯಪುರ ಜಿಲ್ಲೆ ಕೊಲ್ಹಾರದಲ್ಲಿ ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಚಿನ್ನ ಕಳ್ಳಸಾಗಣೆಯ ರನ್ಯಾ ರಾವ್ ಪ್ರಕರಣದ ಮಾಹಿತಿಯನ್ನು ನೀವೇ ನೀಡಿದ್ದೀರ ಎನ್ನುವ ಕುಮಾರಸ್ವಾಮಿ ಆರೋಪದ ಬಗ್ಗೆ ಕೇಳಿದಾಗ, “ಕುಮಾರಸ್ವಾಮಿ ಒಬ್ಬ ಮೆಂಟಲ್. ಅವರ ಮಾನಸಿಕ ಆರೋಗ್ಯ ಹದಗೆಟ್ಟಿರ ಬೇಕು. ತಲೆ ಕೆಟ್ಟು ಹೋಗಿದೆ” ಎಂದು ಜರಿದರು. ರಾಮನಗರದ ನಾಮಫಲಕಕ್ಕೆ ಚಿನ್ನದ ತಗಡು ಹೊಡೆಯಲಾಗುತ್ತದೆಯೇ ಎನ್ನುವ ಕುಮಾರಸ್ವಾಮಿ ಅವರ ಸರಣಿ ಟೀಕೆಗಳ ಕುರಿತು ಕೇಳಿದಾಗ, “ಕುಮಾರಸ್ವಾಮಿ ರಾಜಕೀಯ ಮಾಡಲು ರಾಮನಗರಕ್ಕೆ ಏಕೆ ಬಂದರು? ಹಾಸನದಲ್ಲಿಯೇ ಏಕೆ ರಾಜಕೀಯ ಮಾಡಲಿಲ್ಲ. ಮೊದಲು ಎಚ್.ಡಿ.ಕುಮಾರಸ್ವಾಮಿ ಎನ್ನುವ ಹೆಸರಿನಲ್ಲಿರುವ ಅವರ ಊರಿನ ಹೆಸರು ಹಾಗೂ ತಂದೆಯ ಹೆಸರನ್ನು ಏಕೆ ಇನ್ನು ಇಟ್ಟುಕೊಂಡಿದ್ದಾರೆ. ಮೊದಲು ಅದನ್ನು ಬದಲಾವಣೆ ಮಾಡಿಕೊಳ್ಳಲಿ” ಎಂದು ತಿರುಗೇಟು ನೀಡಿದರು. “ನಾವು ಬೆಂಗಳೂರು ಜಿಲ್ಲೆಯವರು. ಒಂದೊಂದು ಊರಿನ ಹೆಸರಿಗೆ ತನ್ನದೇ ಆದ ಇತಿಹಾಸವಿರುತ್ತದೆ. ಮದ್ರಾಸ್ ಅನ್ನು ಮತ್ತೆ ಏಕೆ ಚೆನ್ನೈ…

Read More

ಆಸ್ಟ್ರೇಲಿಯಾ: ಇಲ್ಲಿನ ಆಗ್ನೇಯದಲ್ಲಿ ಶುಕ್ರವಾರ ಪ್ರವಾಹದ ನೀರಿನಲ್ಲಿ ಸಿಲುಕಿದ್ದ ಕಾರಿನಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದ್ದು, ಮೂರು ದಿನಗಳ ಕಾಲ ನಿರಂತರ ಮಳೆಯಿಂದಾಗಿ ಇಡೀ ಪಟ್ಟಣಗಳು ​​ಜಲಾವೃತಗೊಂಡು, ಜಾನುವಾರುಗಳು ಕೊಚ್ಚಿಹೋಗಿ, ಮನೆಗಳು ನಾಶವಾದ ನಂತರ ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿದೆ. ಸಿಡ್ನಿಯ ಉತ್ತರಕ್ಕೆ ಸುಮಾರು 550 ಕಿ.ಮೀ (342 ಮೈಲುಗಳು) ದೂರದಲ್ಲಿರುವ ಕಾಫ್ಸ್ ಬಂದರಿನ ಬಳಿ ಆ ವ್ಯಕ್ತಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ವಾರದ ಆರಂಭದಲ್ಲಿ ಪ್ರವಾಹ ಪ್ರಾರಂಭವಾದಾಗಿನಿಂದ ಕಾಣೆಯಾದ ವ್ಯಕ್ತಿಗಾಗಿ ಹುಡುಕಾಟ ಮುಂದುವರೆದಿದೆ. ಹವಾಮಾನ ಪರಿಸ್ಥಿತಿಗಳು ಕಡಿಮೆಯಾದ ನಂತರ ಅಗತ್ಯ ಸಾಮಗ್ರಿಗಳನ್ನು ಪೂರೈಸುವ ಪ್ರಯತ್ನಗಳನ್ನು ಚುರುಕುಗೊಳಿಸಲು ತುರ್ತು ಸೇವೆಗಳ ಸಿಬ್ಬಂದಿ ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದರು. ಆದರೆ ಅಧಿಕಾರಿಗಳು ತಮ್ಮ ಪ್ರವಾಹಕ್ಕೆ ಸಿಲುಕಿದ ಮನೆಗಳಿಗೆ ಮರಳುತ್ತಿರುವ ನಿವಾಸಿಗಳಿಗೆ ಅಪಾಯಗಳ ಬಗ್ಗೆ ಎಚ್ಚರದಿಂದಿರಲು ಎಚ್ಚರಿಕೆ ನೀಡಿದರು. ನಿಮ್ಮ ಮನೆ ಅಥವಾ ಆವರಣವು ಮುಳುಗಿದ್ದರೆ, ಪ್ರವಾಹದ ನೀರಿನಲ್ಲಿ ಮಾಲಿನ್ಯಕಾರಕಗಳಿವೆ. ಕ್ರಿಮಿಕೀಟಗಳು, ಹಾವುಗಳು ಇರಬಹುದುಯ. ಆದ್ದರಿಂದ ನೀವು ಆ ಅಪಾಯಗಳನ್ನು ನಿರ್ಣಯಿಸಬೇಕು. ವಿದ್ಯುತ್ ಕೂಡ…

Read More

ಪ್ರತಿನಿತ್ಯ ಮುಂಜಾನೆ ಈ ಒಂದು ಶಕ್ತಿಶಾಲಿಯಾದ ಅಂತಹ ನರಸಿಂಹ ಸ್ವಾಮಿಯ ಒಂದು ಮಂತ್ರವನ್ನು ಹೇಳಿಕೊಂಡು ದೈನದಿನ ಕೆಲಸಗಳಿಗೆ ಹೋಗುವುದರಿಂದ ಯಾವುದೇ ರೀತಿಯಾದಂತಹ ನಷ್ಟ, ತೋಂದರೆ,ವ್ಯವಾಹರದ ಅಡೆತಡೆ,ಹಾಗೂ ಆರೋಗ್ಯ ಸಮಸ್ಯೆಗಳು ಕಾಡುವುದಿಲ್ಲ. ನಿಮ್ಮ ಜೀವನದಲ್ಲಿ ಅತಿ ಹೆಚ್ಚು ಕಷ್ಟಗಳನ್ನು ಅನುಭವಿಸುತ್ತಿದ್ದರೆ. ಜೀವನದಲ್ಲಿ ಏಳಿಗೆಯನ್ನು ಕಾಣಲು ಸಾಧ್ಯವಾಗುತ್ತಿಲ್ಲ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564 ನಾವು ಸೋತಿದ್ದೇವೆ…

Read More

ನವದೆಹಲಿ: ಕೇಂದ್ರ ಸರ್ಕಾರದಿಂದ ದಿವ್ಯಾಂಗರಿಗೆ ವಸತಿ ಹಂಚಿಕೆಯಲ್ಲಿ ಭರ್ಜರಿ ಗುಡ್ ನ್ಯೂಸ್ ನೀಡಲಾಗಿದೆ. ಅದೇ ವಸತಿ ಹಂಚಿಕೆಯಲ್ಲಿ ಅಂಗವಿಕಲರಿಗೆ ಶೇ.4ರಷ್ಟು ಮೀಸಲಾತಿಯನ್ನು ಕಲ್ಪಿಸುವಂತ ನಿರ್ಧಾರವನ್ನು ಘೋಷಿಸಿದೆ. ಈ ಸಂಬಂಧ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಅಧಿಸೂಚನೆ ಹೊರಡಿಸಿದ್ದು, ಕೇಂದ್ರ ಸರ್ಕಾರದ ವಸತಿ ಹಂಚಿಕೆಯಲ್ಲಿ ಅಂಗವಿಕಲರಿಗೆ ಶೇ. 4 ರಷ್ಟು ಮೀಸಲಾತಿ ನೀಡಲಾಗುವುದು ಎಂದಿದೆ. ಈ ಉಪಕ್ರಮವು ಪ್ರತಿಯೊಬ್ಬ ನಾಗರಿಕನ ಸಬಲೀಕರಣಕ್ಕೆ ಸರ್ಕಾರದ ಸಮರ್ಪಣೆಯನ್ನು ಪ್ರತಿಬಿಂಬಿಸುತ್ತದೆ ಮತ್ತು ಎಲ್ಲರನ್ನೂ ಒಳಗೊಂಡ ಮತ್ತು ಪ್ರವೇಶಿಸಬಹುದಾದ ಭಾರತದ ಅಡಿಪಾಯವನ್ನು ಬಲಪಡಿಸುತ್ತದೆ ಎಂಬುದಾಗಿ ತಿಳಿಸಿದೆ. https://twitter.com/ANI/status/1925510588773376163

Read More

ಬೆಂಗಳೂರು: ರಾಜ್ಯದಲ್ಲಿ ಸಂಪೂರ್ಣವಾಗಿ ಜನೌಷಧಿ ಕೇಂದ್ರಗಳನ್ನ ಸ್ಥಗಿತಗೊಳಿಸಿಲ್ಲ. ಒಟ್ಟು 1400 ಜನೌಷಧಿ ಕೇಂದ್ರಗಳಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿರುವ 180 ಕೇಂದ್ರಗಳನ್ನ ಮಾತ್ರ ತೆರವುಗೊಳಿಸಲು ಬಗ್ಗೆ ಚರ್ಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಮಾರಾಟಕ್ಕೆ ಅವಕಾಶ ಕೊಡುವುದು ಸರಿಯಲ್ಲ. ಸರ್ಕಾರವೇ ಉಚಿತವಾಗಿ ಔಷಧಿಗಳನ್ನ ನೀಡುವಾಗ, ಆಸ್ಪತ್ರೆಗಳಲ್ಲಿ ಔಷಧಿಗಳ ಮಾರಾಟ ಮಾಡುವ ಮೆಡಿಕಲ್ ಶಾಪ್ ಗಳು ಏಕೆ ಬೇಕು ಎಂದರು. ಜನೌಷಧಿ ಕೇಂದ್ರಗಳ ವಿಚಾರದಲ್ಲಿ ಬಿಜೆಪಿ ನಾಯಕರು ರಾಜಕೀಯ ಬೇರಸುವುದು ಸರಿಯಲ್ಲಿ. ಸರ್ಕಾರಿ ಆಸ್ಪತ್ರೆಗಳಲ್ಲಿರುವ 180 ಕೇಂದ್ರಗಳ ಹೊರತಾಗಿ ರಾಜ್ಯದಲ್ಲಿ ಇನ್ನು 1220 ಜನೌಷಧಿ ಕೇಂದ್ರಗಳಿವೆ. ಅಲ್ಲದೇ ತಕ್ಷಣಕ್ಕೆ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಎಲ್ಲ ಜನೌಷಧಿ ಕೇಂದ್ರಗಳನ್ನ ಮುಚ್ಚಿಸಿ ಎಂದು ಹೇಳಿಲ್ಲ.. ಹೊಸದಾಗಿ ಸಲ್ಲಿಕೆಯಾಗಿದ್ದ 31 ಪ್ರಸ್ತಾವನೆಗಳನ್ನ ತಿರಸ್ಕರಿಸಲಾಗಿದೆ.. ಹಾಲಿ ಆಸ್ಪತ್ರೆಗಳ ಆವರಣದಲ್ಲಿರುವ ಕೇಂದ್ರಗಳು ಇಲಾಖೆ, ಆಸ್ಪತ್ರೆಗಳೊಂದಿಗೆ ಮಾಡಿಕೊಂಡಿರುವ ಒಪ್ಪಂದಗಳನ್ನ ಪರಿಶೀಲಿಸಿ ಕ್ರಮ ಜರುಗಿಸಲು ಸೂಚಿಸಲಾಗಿದೆ.‌ ಹಲವು ಜನೌಷಧಿ ಕೇಂದ್ರಗಳದ್ದು ಒಪ್ಪಂದಗಳು ನವೀಕರಣವಾಗಿಲ್ಲ.…

Read More

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಬಗ್ಗೆ ಭಯ ಪಡಬೇಕಾದಂತ ಪರಿಸ್ಥಿತಿ ಇಲ್ಲ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಮೂಲಕ ಕೋವಿಡ್ ಆತಂಕದಲ್ಲಿದ್ದಂತ ಜನರಿಗೆ ನೆಮ್ಮದಿಯ ಸುದ್ದಿ ನೀಡಿದ್ದಾರೆ. ಬೇರೆ ದೇಶಗಳಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ. ಆದರೆ ನಮ್ಮಲ್ಲಿ ಅಂತಹ ಯಾವುದೇ ಲಕ್ಷಣಗಳು ಪತ್ತೆಯಾಗಿಲ್ಲ. ಹೀಗಾಗಿ ಅನಗತ್ಯವಾಗಿ ಆತಂಕಪಡುವುದು ಬೇಡ. ಕೋವಿಡ್‌ಗೆ ಸಂಬಂಧಿಸಿದಂತೆ ಕೆಂದ್ರ ಸರ್ಕಾರದ ಜತೆಗೆ ಸಂಪರ್ಕದಲ್ಲಿದ್ದೇವೆ ಎಂದು ಹೇಳಿದ್ದಾರೆ. ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು ಕೂಡ ಚರ್ಚೆ ಮಾಡುತ್ತಿದ್ದಾರೆ. ಈ ಋತುವಿನಲ್ಲಿ ಜ್ವರ ಸಂಬಂಧಿ ಅನಾರೋಗ್ಯ ಸಮಸ್ಯೆಗಳು ಸಹಜವಾಗಿ ಕಾಣಿಸಿಕೊಳ್ಳುತ್ತವೆ. ಇಂತಹ ಸಂದರ್ಭದಲ್ಲಿ ಮಾಸ್ಕ್‌ ಧರಿಸುವಿಕೆಯಂತಹ ಮುನ್ನೆಚ್ಚರಿಕೆ ವಹಿಸುವುದು ಉತ್ತಮ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ. https://twitter.com/KarnatakaVarthe/status/1925512416143511571 https://kannadanewsnow.com/kannada/i-will-not-tolerate-the-system-that-brings-a-bad-name-to-the-taluk-gopalakrishna-belors-warning-to-the-authorities/ https://kannadanewsnow.com/kannada/good-news-for-cancer-patients-in-the-state-chemotherapy-centers-started-in-16-district-hospitals/

Read More

ಶಿವಮೊಗ್ಗ: ನಾನು ಸಾಗರ ತಾಲ್ಲೂಕಿಗೆ ಕೆಟ್ಟ ಹೆಸರು ತರುವ ವ್ಯವಸ್ಥೆಯನ್ನು ಸಹಿಸುವುದಿಲ್ಲ. ಕೆಲಸ ಮಾಡೋದಕ್ಕೆ ಆಗಲ್ಲ ಅಂದ್ರೆ ವರ್ಗಾವಣೆ ಮಾಡಿಸಿಕೊಂಡು ಹೋಗಿ ಎಂಬುದಾಗಿ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಖಡಕ್ ವಾರ್ನಿಂಗ್ ನೀಡಿದ್ದಾರೆ. ಇಂದು ಸಾಗರ ನಗರದ ಪ್ರವಾಸಿ ಮಂದಿರದಲ್ಲಿ ಮುಂಗಾರು ಪೂರ್ವವಾಗಿ ಪಿಡಿಓಗಳ ಜೊತೆಗೆ ಸಭೆ ನಡೆಸಿದರು. ಅಲ್ಲದೇ ಗ್ರಾಮ ಲೆಕ್ಕಾಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಇನ್ನೇನು ಜೂನ್ ಸಮೀಪಿಸುತ್ತಿದೆ. ಶಾಲಾ-ಕಾಲೇಜು ಆರಂಭವಾಗುತ್ತಿವೆ. ಮಕ್ಕಳಿಗೆ ಆದಾಯ ಮತ್ತು ಜಾತಿ ಪ್ರಮಾಣ ಪತ್ರದ ತುರ್ತು ಅವಶ್ಯಕತೆ ಇರುತ್ತದೆ. ಅವರಿಗೆ ಸತಾಯಿಸಬೇಡಿ ಎಂಬುದಾಗಿ ಎಚ್ಚರಿಸಿದರು. ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಜನರು ನನ್ನ ಮೇಲೆ ನಿರೀಕ್ಷೆಯಿಟ್ಟು ನನ್ನನ್ನು ಗೆಲ್ಲಿಸಿದ್ದಾರೆ. ಆದರೇ ಅದನ್ನು ವ್ಯವಸ್ಥಿತವಾಗಿ ನಿರ್ವಹಿಸಬೇಕಾದದ್ದೂ ನನ್ನ ಜವಾಬ್ದಾರಿಯಾಗಿದೆ. ತಾಲ್ಲೂಕು ಕಚೇರಿಯ ವ್ಯವಸ್ಥೆ ಸರಿಯಾಗಿಲ್ಲ ಎನ್ನುವ ಬಗ್ಗೆ ಸಾರ್ವಜನಿಕರಿಂದ ಪದೇ ಪದೇ ದೂರು ಕೇಳಿ ಬರುತ್ತಿದೆ. ಸರ್ಕಾರಿ ಸೇವೆಯಲ್ಲಿ ವ್ಯವಸ್ಥಿತವಾಗಿ ತೊಡಗಿಸಿಕೊಳ್ಳಿ ಎಂದರು. ಸಾಗರ ತಾಲ್ಲೂಕಿನಲ್ಲಿ ಭೂಮಿ ಒತ್ತುವರಿ…

Read More

ಶಿವಮೊಗ್ಗ: ಜಿಲ್ಲೆಯ ಸೊರಬದಲ್ಲಿ ಕಳೆದ ನಾಲ್ಕು ದಶಕಗಳ ನಂತರ ಇಸ್ಪೀಟ್ ಕ್ಲಬ್ ಪ್ರಾರಂಭವಾಗಿದೆ. ಊರಿಗೆ ಬುದ್ಧಿ ಹೇಳುವ ಜಾಗದಲ್ಲಿರುವ ಶಿಕ್ಷಣ ಸಚಿವರ ಕ್ಷೇತ್ರದಲ್ಲಿಯೇ ಇಸ್ಪೀಟ್ ಕ್ಲಬ್ ನಡೆಯುತ್ತಿದೆ. ತಮ್ಮ ತಂದೆ ಎಸ್.ಬಂಗಾರಪ್ಪ ಹೆಸರು ಉಳಿಸುವ ಉದ್ದೇಶವಿದ್ದರೇ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮೊದಲು ಇಸ್ಪೀಟ್ ಕ್ಲಬ್ ಬಂದ್ ಮಾಡಿಸಲಿ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ವಾಗ್ಧಾಳಿ ನಡೆಸಿದ್ದಾರೆ. ಇಂದು ಸಾಗರದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ರಾಜ್ಯದ ಮುಖ್ಯಮಂತ್ರಿಯಾಗಿದ್ದ ಎಸ್.ಬಂಗಾರಪ್ಪ ಅವರ ಕಾಲದಲ್ಲಿ, ಅವರ ಅಣ್ಣ ಕುಮಾರ ಬಂಗಾರಪ್ಪ ಸಚಿವರಾಗಿದ್ದ ಸಂದರ್ಭದಲ್ಲಿ ಸೊರಬದಲ್ಲಿ ಇಸ್ಪೀಟ್ ಕ್ಲಬ್‌ನಂತಹ ಜೂಜಾಟಕ್ಕೆ ಅವಕಾಶ ಇರಲಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಿಲ್ಲೆಯ ಸಮಗ್ರ ಅಭಿವೃದ್ದಿ ಬಗ್ಗೆ ಕಿಂಚಿತ್ ಗಮನ ಹರಿಸದೆ ಇರುವುದೇ ಸಚಿವರ ಎರಡು ವರ್ಷದ ಸಚಿವರ ಸಾಧನೆಯಾಗಿದೆ ಎಂದು ಹೇಳಿದರು. ಸಾಗರ ಕ್ಷೇತ್ರವ್ಯಾಪ್ತಿಯಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಎರಡು ವರ್ಷದಲ್ಲಿ ರೈತರ ಮೇಲಿನ ಶೋಷಣೆ ಹೊರತುಪಡಿಸಿದರೆ…

Read More

ಬೆಂಗಳೂರು: ಮೇ.26ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-2 ಆರಂಭಗೊಳ್ಳಲಿದೆ. ಈ ಪರೀಕ್ಷೆಗೆ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಆದೇಶ ಹೊರಡಿಸಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದಿನಾಂಕ: 26.05.2025 ರಿಂದ ಕರ್ನಾಟಕದ ಎಸ್‌ಎಸ್ಎಲ್‌ಸಿ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗಳು ಪ್ರಾರಂಭವಾಗಲಿವೆ. ಈ ಸಂಬಂಧ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ, ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸುವಂತೆ ಉಲ್ಲೇಖಿತ-1 ರ ಪತ್ರದಲ್ಲಿ ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ರವರು ಕೋರಿರುತ್ತಾರೆ ಎಂದಿದ್ದಾರೆ. ಅದರನ್ವಯ ಕ.ರಾ.ರ.ಸಾ.ನಿಗಮವು, ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ನಡೆಯುವ ದಿನಾಂಕಗಳಂದು ಅಂದರೆ, ದಿನಾಂಕ 26.05.2025 ರಿಂದ 02.06.2025 ರವರೆಗೆ, ಪರೀಕ್ಷೆಗೆ ಹಾಜರಾಗುವ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ…

Read More