Subscribe to Updates
Get the latest creative news from FooBar about art, design and business.
Author: kannadanewsnow09
ಅಮೆರಿಕ-ಭಾರತ ಸಂಬಂಧ ಇತ್ತೀಚಿನ ತಿಂಗಳುಗಳಲ್ಲಿ ತೀವ್ರ ವಿಶ್ವಾಸ ಬಿಕ್ಕಟ್ಟಿನಲ್ಲಿ ಸಿಲುಕಿವೆ. ಸುಂಕ ನೀತಿ, ರಷ್ಯಾದೊಂದಿಗಿನ ಭಾರತದ ವಿಶೇಷ ಬಾಂಧವ್ಯ ಹಾಗೂ ಪಾಕಿಸ್ತಾನದೊಂದಿಗಿನ ಭಾರತದ ಗಡಿ ಘರ್ಷಣೆಗಳಲ್ಲಿ ಅಮೆರಿಕದ ಆಡಳಿತಾತ್ಮಕ ವಿಧಾನಗಳಲ್ಲಿ ಅಪಾರ ವಿವಾದಗಳು ಈ ಬಿಕ್ಕಟ್ಟಿಗೆ ಕಾರಣವಾಗಿವೆ. ಅಮೆರಿಕದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಭಾರತ ಹೆಚ್ಚಿನ ಪ್ರಮಾಣದ ಸುಂಕ ವಿಧಿಸುತ್ತಿದೆ ಎಂದು ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ ಅವರು ಪದೇ ಪದೇ ತಮ್ಮ ಅಸಮಾಧಾನವನ್ನು ಹೊರಹಾಕಿದ್ದರು. ಭಾರತವು ವಿಧಿಸುತ್ತಿರುವ ಸುಂಕದ ದರವು “ವಿಶ್ವದ ಅತ್ಯಧಿಕ” ಸುಂಕ ಪ್ರಮಾಣವಾಗಿದೆ ಎಂದು ಹೇಳಿದ ಅವರು, ತಮ್ಮ ರಾಷ್ಟ್ರದಿಂದ ವಿಧಿಸಲ್ಪಡುವ ಸುಂಕ ಪ್ರಮಾಣವನ್ನು ಶೇಕಡ 50 ರಷ್ಟು ಹೆಚ್ಚಿಸುವ ಮೂಲಕ ಪ್ರತಿಕ್ರಿಯೆ ನೀಡಿದ್ದರು. ಆದಾಗ್ಯೂ, ಇದು ಕೇವಲ ಒಂದೆಡೆಯ ದೃಷ್ಟಿಕೋನವಾಗಿದೆ. ರಷ್ಯಾದೊಂದಿಗೆ ನಿಕಟ ಬಾಂಧವ್ಯವನ್ನು ಹೊಂದಿರುವ ಮತ್ತು ರಷ್ಯಾದ ಕಚ್ಚಾ ತೈಲದ ಅತಿದೊಡ್ಡ ಗ್ರಾಹಕ ಎಂದು ಪರಿಗಣಿಸಲ್ಪಟ್ಟಿರುವ ಭಾರತವು ಟ್ರಂಪ್ ಅವರ ಕಠಿಣ ವಾಗ್ದಾಳಿಗೆ ಒಳಗಾಯಿತು. ಟ್ರಂಪ್ ಅವರು ರಷ್ಯಾ ಮತ್ತು ಭಾರತದ ಆರ್ಥಿಕತೆಗಳನ್ನು “ಮೃತ…
ಮೈಸೂರು: ದಕ್ಷಿಣ ಮಧ್ಯ ರೈಲ್ವೆ ಕೆಳಗಿನ ರೈಲುಗಳ ತಾತ್ಕಾಲಿಕ ನಿಲುಗಡೆಯನ್ನು ಮುಂದುವರಿಸಿರುವ ಬಗ್ಗೆ ತಿಳಿಸಿದೆ. ರೈಲು ಸಂಖ್ಯೆ 17415/17416 ತಿರುಪತಿ – ಕೊಲ್ಲಾಪುರ ಶ್ರೀ ಛತ್ರಪತಿ ಸಾಹು ಮಹಾರಾಜ್ ಟರ್ಮಿನಸ್ – ತಿರುಪತಿ ಎಕ್ಸ್ಪ್ರೆಸ್ ಈ ರೈಲು 08.09.2025 ರಿಂದ ಒಂದು ವಾರದವರೆಗೆ, ಇರುವ ವೇಳಾಪಟ್ಟಿಯಂತೆಯೇ, ನಂದಲೂರು ನಿಲ್ದಾಣದಲ್ಲಿ ನಿಲ್ಲುತ್ತದೆ. ರೈಲು ಸಂಖ್ಯೆ 16591/16592 ಎಸ್ಎಸ್ಎಸ್ ಹುಬ್ಬಳ್ಳಿ – ಮೈಸೂರು – ಎಸ್ಎಸ್ಎಸ್ ಹುಬ್ಬಳ್ಳಿ ಎಕ್ಸ್ಪ್ರೆಸ್ ಈ ರೈಲು 13.09.2025 ರಿಂದ ಒಂದು ವಾರದವರೆಗೆ, ಇರುವ ವೇಳಾಪಟ್ಟಿಯಂತೆಯೇ, ಅನಂತಪುರ್ ನಿಲ್ದಾಣದಲ್ಲಿ ನಿಲ್ಲುತ್ತದೆ. https://kannadanewsnow.com/kannada/high-court-shock-to-hdk-stay-order-on-the-single-member-benchs-order-in-the-kethaganahalli-case/ https://kannadanewsnow.com/kannada/breaking-violence-breaks-out-in-massive-protest-against-social-media-ban-in-nepal-one-dead/
ಬೆಂಗಳೂರು; ಕೇತಗಾನಹಳ್ಳಿ ಬಳಿ ಸರ್ಕಾರಿ ಜಮೀನು ಒತ್ತುವರಿ ಆರೋಪದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದೆ. ಕೇತಗಾನಹಳ್ಳಿ ಕೇಸಿನಲ್ಲಿ ಏಕಸದಸ್ಯ ಪೀಠ ನೀಡಿದ್ದಂತ ಮಧ್ಯಂತರ ಆದೇಶಕ್ಕೆ ತಡೆಯಾಜ್ಞೆ ನೀಡಿದೆ. ಈ ಮೂಲಕ ಎಸ್ಐಟಿ ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದಂತೆ ಆಗಿದೆ. ಇಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಸಂಬಂಧಿಸಿದಂತ ಕೇತಗಾನಹಳ್ಳಿ ಬಳಿ ಸರ್ಕಾರಿ ಜಮೀನು ಒತ್ತುವರಿ ಆರೋಪದಲ್ಲಿ ಹೈಕೋರ್ಟ್ ಶಾಕ್ ನೀಡಿದೆ. ಏಕಸದಸ್ಯ ಪೀಠ ನೀಡಿದ್ದ ಮಧ್ಯಂತರ ಆದೇಶಕ್ಕೆ ತಡೆಯಾಜ್ಞೆ ನೀಡಲಾಗಿದೆ. ಸಿಜೆ ವಿಭು ಜಖ್ರು, ನ್ಯಾಯಮೂರ್ತಿ ಸಿಎಂ ಜೋಶಿ ಅವರಿದ್ದಂತ ನ್ಯಾಯಪೀಠವು ಈ ಆದೇಶ ಮಾಡಿದೆ. ನವೆಂಬರ್ 26ರವರೆಗೆ ಏಕಸದಸ್ಯ ಪೀಠದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಎಸ್ಐಟಿ ರಚನೆಗೆ ಏಕಸದಸ್ಯ ಪೀಠ ತಡೆಯಾಜ್ಞೆ ನೀಡಿತ್ತು. ಈ ಆದೇಶವನ್ನು ರಾಜ್ಯ ಸರ್ಕಾರ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿತ್ತು. ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಮೇಲ್ಮನವಿ ಸಲ್ಲಿಸಿತ್ತು. 6 ಎಕರೆ ಒತ್ತುವರಿ ತೆರವಿಗೆ ಸರ್ಕಾರ…
ಬೆಂಗಳೂರು: ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26 ನೇ ಸಾಲಿನ 2 ನೇ ತಂಡಕ್ಕಾಗಿ (ಬಾಲಕರಿಗೆ ಮಾತ್ರ) ಆಯ್ಕೆ ಪೂರ್ವ ಸಿದ್ದತೆ ಬಗ್ಗೆ ಉಚಿತ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಭ್ಯರ್ಥಿಗಳು ನಿಗದಿತ ನಮೂನೆ ಅರ್ಜಿಯನ್ನು ಆಯಾ ಜಿಲ್ಲೆಯ ಜಿಲ್ಲಾ/ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೊಂದಾಯಿತ ಅಂಚೆಯ ಮೂಲಕ ಜಿಲ್ಲಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಉತ್ತರ ಕನ್ನಡ ಜಿಲ್ಲೆ, ಉತ್ತರ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ ನೆಲಮಹಡಿ ಕೊಠಡಿ ಸಂಖ್ಯೆ-1, ಕಾರವಾರ 581301 ಇಲ್ಲಿಗೆ ಅ.03 ರೊಳಗಾಗಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ಗರಿಷ್ಟ ವಾರ್ಷಿಕ ಆದಾಯ ಮಿತಿ ಪ್ರವರ್ಗ-1ಕ್ಕೆ ರೂ.2.50 ಲಕ್ಷ ಹಾಗೂ ಪ್ರವರ್ಗ-2(ಎ), 3(ಎ)…
ಬೆಂಗಳೂರು: ಮದ್ದೂರಿನಲ್ಲಿ ಕಲ್ಲು ಎಸೆದವರು, ದೊಣ್ಣೆಯಿಂದ ಹೊಡದಿರುವವರು, ಮೆರವಣಿಗೆಗೆ ಅವಕಾಶ ನೀಡುವುದಿಲ್ಲ ಎನ್ನುವವರು ಎಲ್ಲರನ್ನೂ ಸರ್ಕಾರ ಬಂಧಿಸಬೇಕು ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಎನ್. ರವಿಕುಮಾರ್ ಅವರು ಆಗ್ರಹಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮದ್ದೂರಿನಲ್ಲಿ ಗಣಪತಿ ಮೆರವಣಿಗೆ ಮಾಡುವ ಸಂದರ್ಭದಲ್ಲಿ ಡಿಜೆ ಹಾಕಿಕೊಂಡು ಹೋಗುತ್ತಿದ್ದರು, ಅದನ್ನು ನಿಲ್ಲಿಸಿದ್ದಾರೆ ಎಂದು ಆಕ್ಷೇಪಿಸಿದರು. ಗಣಪತಿ ಮೆರವಣಿಗೆಯನ್ನು ಮಾಡಬಾರದು ಎಂದು ಅಲ್ಲಿನ ಕೆಲವು ಅಲ್ಪಸಂಖ್ಯಾತ ಗೂಂಡಾಗಳು ಮೆರವಣಿಗೆಯ ಮೇಲೆ ಸುಮಾರು 5ಕೆಜಿ ಗಾತ್ರದ ಕಲ್ಲುಗಳನ್ನು ಎಸೆದಿರುವುದು ಮಾಧ್ಯಮಗಳಲ್ಲಿ ಬರುತ್ತಿದೆ. ಮೊದಲೇ ಅವರು ಪೂರ್ವಯೋಜನೆ ಮಾಡಿಕೊಂಡು ಕಲ್ಲುಗಳನ್ನು ಮತ್ತು ದೊಣ್ಣೆಗಳನ್ನು ಮಹಡಿಯ ಮೇಲೆ ಇಟ್ಟುಕೊಂಡು ಮೆರವಣಿಗೆಯ ಮೇಲೆ ಅಕ್ರಮಣ ಮಾಡುವುದು ಎಲ್ಲವೂ ಮಾಧ್ಯಮಗಳ ಮೂಲಕ ಗೊತ್ತಾಗುತ್ತಿದೆ ಎಂದು ವಿವರಿಸಿದರು. ನಮ್ಮ ರಾಜ್ಯದಲ್ಲಿ ಗಣಪತಿ ಮೆರವಣಿಗೆ ಮಾಡಲು ವಿರೋಧವಿದೆ. ಕೆಲವು ಮುಸಲ್ಮಾನ ಗೂಂಡಾಗಳು ಗಣಪತಿಯ ಮೆರವಣಿಗೆ ಮೇಲೆ ಕಲ್ಲನ್ನು ಎಸೆದಿದ್ದಾರೆ. ಅ ಗೂಂಡಗಳು ಯಾರು…
ನವದೆಹಲಿ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಕೆಟ್ಟ ಆಡಳಿತ, ನಡವಳಿಕೆಯಿಂದಲೇ ಮದ್ದೂರಿನಲ್ಲಿ ಗಣಪತಿ ಮೆರವಣಿಗೆ ಮೇಲೆ ಕಲ್ಲು ಎಸೆಯುವಂಥ ಪರಿಸ್ಥಿತಿ ಸೃಷ್ಟಿಯಾಗಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಆರೋಪಿಸಿದರು. ಘಟನೆಯ ವಿಷಯ ತಿಳಿಯುತ್ತಿದ್ದಂತೆಯೇ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳ ಜತೆ ಮಾತನಾಡಿ ಮಾಹಿತಿ ಪಡೆದುಕೊಂಡ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು; ಮಂಡ್ಯ ಜಿಲ್ಲೆಯಲ್ಲಿ ಇಷ್ಟು ದೊಡ್ಡಮಟ್ಟದಲ್ಲಿ ಇಂಥ ಕೆಟ್ಟ ಘಟನೆಗಳು ನಡೆಯಲು ಕಾಂಗ್ರೆಸ್ ಸರಕಾರವೇ ಕಾರಣ ಎಂದು ದೂರಿದರು. ಶಾಂತಿ ನೆಮ್ಮದಿಗೆ ಹೆಸರಾಗಿದ್ದ ಮಂಡ್ಯ ಜಿಲ್ಲೆಗೆ ಬೆಂಕಿ ಹಚ್ಚುವ ಕೆಲಸವಾಗುತ್ತಿದೆ. ಹಿಂದೆಂದೂ ಈ ಜಿಲ್ಲೆಯಲ್ಲಿ ಇಂಥ ಘಟನೆಗಳು ಆಗಿಲ್ಲ. ನಾಗಮಂಗಲದಲ್ಲಿ ಕೆಲ ದುಷ್ಟಶಕ್ತಿಗಳು ಬೆಂಕಿ ಹಾಕುವ ಕೆಲಸ ಮಾಡಿದವು. ಈಗ ಮದ್ದೂರಿನಲ್ಲಿಯೂ ಅಂಥ ಶಕ್ತಿಗಳೇ ಜನರ ನೆಮ್ಮದಿ ಕೆಡಿಸುವ ಹುನ್ನಾರ ನಡೆಸಿವೆ ಎಂದು ಅವರು ಆಪಾದಿಸಿದರು. ಮಂಡ್ಯ ಜಿಲ್ಲೆ ಯಾವಾಗಲೂ ಶಾಂತಿ ಸೌಹಾರ್ದತೆಗೆ ಹೆಸರಾಗಿದೆ. ಜನರು ಕಷ್ಟಪಟ್ಟು ಕೆಲಸ ಮಾಡುತ್ತಾ ನೆಮ್ಮದಿ ಜೀವನ ಮಾಡುತ್ತಿದ್ದಾರೆ. ಕುವೆಂಪು ಅವರ ಆಶಯದ…
ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ವಿರುದ್ಧ ಅಕ್ರಮ ಆನ್ ಲೈನ್ ಬೆಟ್ಟಿಂಗ್ ಪ್ರಕರಣದಲ್ಲಿ ಇಡಿ ದಾಳಿ ನಡೆಸಿ ಬಂಧಿಸಲಾಗಿತ್ತು. ಅವರಿಗೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಅಕ್ರಮ ಆನ್ ಲೈನ್ ಬೆಟ್ಟಿಂಗ್ ಪ್ರಕರಣದಲ್ಲಿ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಇಡಿ ಬಂಧಿಸಿತ್ತು. ತಮ್ಮ ವಶಕ್ಕೂ ಪಡೆದಿತ್ತು. ಇಂದು ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಅವರಿಗೆ ಕೋರ್ಟ್ ಸೆಪ್ಟೆಂಬರ್ 22ರವರೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ.
ಬೆಂಗಳೂರು: ಮಳೆಯಿಂದಾಗಿ 683 ಕಿಮೀ ರಾಜ್ಯ ಹೆದ್ದಾರಿ, 1383 ಜಿಲ್ಲಾ ಪ್ರಮುಖ ಹೆದ್ದಾರಿ, 5558 ಗ್ರಾಮೀಣ ರಸ್ತೆಗಳು, 656 ಸೇತುವೆ/ಕಲ್ವರ್ಟ್ಗಳು, 1877ಶಾಲಾ ಕಟ್ಟಡಗಳು, 160 ಪ್ರಾಥಮಿಕ ಆರೋಗ್ಯ ಕೇಂದ್ರಗಳು, 1018 ಅಂಗನವಾಡಿಗಳು, 25279 ವಿದ್ಯುತ್ ಕಂಬಗಳು, 819 ಟ್ರಾನ್ಸ್ಫಾರ್ಮರ್ಗಳು, 31 ಸಣ್ಣ ನೀರಾವರಿ ಕೆರೆಗಳಿಗೆ ಹಾನಿ ಸಂಭವಿಸಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು ಡಿಸಿ, ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದಂತ ಅವರು, ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಜೂನ್ 1ರಿಂದ ಸೆಪ್ಟಂಬರ್ ಮೊದಲ ವಾರದವರೆಗೆ ವಾಡಿಕೆಗಿಂತ ಶೇ.4ರಷ್ಟು ಹೆಚ್ಚು ಮಳೆಯಾಗಿದೆ. ಈ ಅವಧಿಯಲ್ಲಿ ವಾಡಿಕೆ ಮಳೆ 721ಮಿ.ಮೀ ಇದ್ದು, 753 ಮಿ.ಮೀ ಮಳೆ ದಾಖಲಾಗಿದೆ. ಕಳೆದ ವರ್ಷ ಶೇ.23ರಷ್ಟು ಹೆಚ್ಚುವರಿ ಮಳೆ ದಾಖಲಾಗಿತ್ತು ಎಂದಿದ್ದಾರೆ. ಈ ಅವಧಿಯಲ್ಲಿ ಚಾಮರಾಜನಗರದಲ್ಲಿ ಶೇ.24ರಷ್ಟು ಕಡಿಮೆ ಮಳೆಯಾಗಿದೆ. ವಿಜಯಪುರ, ಗದಗ, ಬಾಗಲಕೋಟೆ, ದಾವಣಗೆರೆ, ತುಮಕೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಶೇ.20ಕ್ಕಿಂತ ಹೆಚ್ಚು ಮಳೆ ದಾಖಲಾಗಿದೆ. ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ…
ನೇಪಾಳ: ಇಲ್ಲಿನ ಕಠ್ಮಂಡುವಿನಲ್ಲಿ ಭ್ರಷ್ಟಾಚಾರ ಮತ್ತು ಸರ್ಕಾರವು ಹಲವಾರು ಮಾಧ್ಯಮ ಅಪ್ಲಿಕೇಶನ್ಗಳ ಮೇಲಿನ ನಿಷೇಧವನ್ನು ವಿರೋಧಿಸಿ ಜನರಲ್-ಝಡ್ ಪ್ರತಿಭಟನಾಕಾರರು ಬೀದಿಗಿಳಿದು ನಡೆಸಿದ ಹಿಂಸಾತ್ಮಕ ಘರ್ಷಣೆಯಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದರು ಮತ್ತು ನೂರಕ್ಕೂ ಹೆಚ್ಚು ಜನರು ಗಾಯಗೊಂಡರು. ಕರ್ಫ್ಯೂ ನಿರ್ಬಂಧಗಳನ್ನು ಉಲ್ಲಂಘಿಸಿ ಸಂಸತ್ತಿನ ಬಳಿಯ ನಿರ್ಬಂಧಿತ ವಲಯಗಳನ್ನು ಪ್ರವೇಶಿಸಿದ ನಂತರ ಕೋಪಗೊಂಡ ಪ್ರತಿಭಟನಾಕಾರರು ನೇಪಾಳ ರಾಜಧಾನಿಯಲ್ಲಿ ಸೈನ್ಯವನ್ನು ನಿಯೋಜಿಸಲಾಯಿತು. ಪ್ರತಿಭಟನಾಕಾರರು ಮರದ ಕೊಂಬೆಗಳು ಮತ್ತು ನೀರಿನ ಬಾಟಲಿಗಳನ್ನು ಎಸೆದು ಸರ್ಕಾರದ ವಿರೋಧಿ ಘೋಷಣೆಗಳನ್ನು ಕೂಗಿದ ನಂತರ ಪೊಲೀಸರು ಜಲಫಿರಂಗಿ, ಅಶ್ರುವಾಯು ಮತ್ತು ರಬ್ಬರ್ ಗುಂಡುಗಳೊಂದಿಗೆ ಪ್ರತಿಕ್ರಿಯಿಸಿದರು. ದಿ ಕಠ್ಮಂಡು ಪೋಸ್ಟ್ ವರದಿಯ ಪ್ರಕಾರ, ಕೆಲವು ಪ್ರತಿಭಟನಾಕಾರರು ಸಂಸತ್ತಿನ ಆವರಣವನ್ನು ಪ್ರವೇಶಿಸುವಲ್ಲಿ ಯಶಸ್ವಿಯಾದರು, ಇದು ಪರಿಸ್ಥಿತಿಯನ್ನು ತೀವ್ರಗೊಳಿಸಿತು. ಅಶಾಂತಿಗೆ ಪ್ರತಿಕ್ರಿಯೆಯಾಗಿ, ಕಠ್ಮಂಡು ಜಿಲ್ಲಾಡಳಿತ ಕಚೇರಿ ಕರ್ಫ್ಯೂ ಅನ್ನು ವಿಸ್ತರಿಸಿತು – ಆರಂಭದಲ್ಲಿ ರಾಜಧಾನಿಯ ಬನೇಶ್ವರ ಪ್ರದೇಶದಲ್ಲಿ ವಿಧಿಸಲಾಗಿತ್ತು. ಹೊಸ ನಿರ್ಬಂಧಗಳಲ್ಲಿ ಈಗ ಹಲವಾರು ಉನ್ನತ-ಭದ್ರತಾ ವಲಯಗಳು ಸೇರಿವೆ, ಉದಾಹರಣೆಗೆ ಅಧ್ಯಕ್ಷರ ನಿವಾಸ (ಶೀತಲ್…
ಬೆಂಗಳೂರು: ರಾಜ್ಯದಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಹಾಗೂ ಪರಿಹಾರ ಕ್ರಮಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದ ಮುಖ್ಯಾಂಶಗಳು… • ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಜೂನ್ 1ರಿಂದ ಸೆಪ್ಟಂಬರ್ ಮೊದಲ ವಾರದವರೆಗೆ ವಾಡಿಕೆಗಿಂತ ಶೇ.4ರಷ್ಟು ಹೆಚ್ಚು ಮಳೆಯಾಗಿದೆ. ಈ ಅವಧಿಯಲ್ಲಿ ವಾಡಿಕೆ ಮಳೆ 721ಮಿ.ಮೀ ಇದ್ದು, 753 ಮಿ.ಮೀ ಮಳೆ ದಾಖಲಾಗಿದೆ. ಕಳೆದ ವರ್ಷ ಶೇ.23ರಷ್ಟು ಹೆಚ್ಚುವರಿ ಮಳೆ ದಾಖಲಾಗಿತ್ತು. • ಈ ಅವಧಿಯಲ್ಲಿ ಚಾಮರಾಜನಗರದಲ್ಲಿ ಶೇ.24ರಷ್ಟು ಕಡಿಮೆ ಮಳೆಯಾಗಿದೆ. ವಿಜಯಪುರ, ಗದಗ, ಬಾಗಲಕೋಟೆ, ದಾವಣಗೆರೆ, ತುಮಕೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಶೇ.20ಕ್ಕಿಂತ ಹೆಚ್ಚು ಮಳೆ ದಾಖಲಾಗಿದೆ. • ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಕಳೆದ ವರ್ಷಕ್ಕೆ ಹೋಲಿಸಿದರೆ ಈಗ ಸ್ವಲ್ಪ ಕಡಿಮೆಯಿದೆ. ಪ್ರಮುಖ ಜಲಾಶಯಗಳ ಗರಿಷ್ಟ ಸಾಮರ್ಥ್ಯ 895.62 ಟಿಎಂಸಿ ಇದ್ದು, ಪ್ರಸ್ತುತ 840.52 ಟಿಎಂಸಿ ಸಂಗ್ರಹವಿದೆ. ಕಳೆದ ವರ್ಷ ಈ ಅವಧಿಯಲ್ಲಿ 856.17 ಟಿಎಂಸಿ…














