Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಂಗಳೂರು: ನಗರದಲ್ಲಿನ ಬಿಎಂಟಿಸಿ ಬಸ್ಸುಗಳಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದಂತ ಪ್ರಯಾಣಿಕರಿಗೆ ದಂಡದ ಬಿಸಿಯನ್ನು ಮುಟ್ಟಿಸಲಾಗಿದೆ. ಬಿಎಂಟಿಸಿಯಿಂದ ಬರೋಬ್ಬರಿ 1101 ಪ್ರಕರಣ ದಾಖಲಿಸಿ, ಬರೋಬ್ಬರಿ 7,65,090 ರೂ ದಂಡವನ್ನು ವಸೂಲಿ ಮಾಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಬಿಎಂಟಿಸಿಯು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವಾಹನಗಳಲ್ಲಿ ಸಂಚರಿಸುವ ಪ್ರಯಾಣಿಕರು ಟಿಕೇಟನ್ನು ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡುವವರನ್ನು ಮತ್ತು ಸಂಸ್ಥೆಯ ಸಾರಿಗೆ ಆದಾಯದ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ, ನಗರದಾದ್ಯಂತ ಸಂಚರಿಸುವ ವಾಹನಗಳನ್ನು ನಮ್ಮ ಸಂಸ್ಥೆಯ ತನಿಖಾ ತಂಡಗಳು ಮಾರ್ಚ್-2024 ರ ಮಾಹೆಯಲ್ಲಿ ಒಟ್ಟು 17,900 ಟ್ರಿಪ್‌ಗಳನ್ನು ತಪಾಸಿಸಿ 3840 ಟಿಕೇಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ, ಅವರಿಂದ ಒಟ್ಟು ರೂ. 7,65,090/- ದಂಡ ವಸೂಲಿ ಮಾಡಿ ಸಂಸ್ಥೆಯ ನಿರ್ವಾಹಕರ ವಿರುದ್ಧ 1101 ಪ್ರಕರಣಗಳನ್ನು ದಾಖಲಿಸಿರುತ್ತಾರೆ ಎಂದಿದೆ. ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 530 ಪುರುಷ ಪ್ರಯಾಣಿಕರಿಂದ ಒಟ್ಟು ರೂ. 53,000/- ಅನ್ನು ಮೋಟಾರು ವಾಹನ ಕಾಯ್ದೆ 1988ರ ಕಾಲಂ…
ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏ.19 ರಂದು ಒಟ್ಟು 14 ನಾಮಪತ್ರಗಳು ಸಲ್ಲಿಕೆ ಆಗಿವೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್‍ಕುಮಾರ್, ಅಖಿಲ ಭಾರತ ಹಿಂದೂ ಮಹಾಸಭಾ ಪಕ್ಷದ ಅಭ್ಯರ್ಥಿ ಚಂದ್ರಶೇಖರ್ ಹೆಚ್ ಸಿ, ಪಕ್ಷೇತರ ಅಭ್ಯರ್ಥಿಗಳಾಗಿ ಕೆ.ಎಸ್.ಈಶ್ವರಪ್ಪ, ಡಿ.ಎಸ್.ಈಶ್ವರಪ್ಪ, ಪಿ.ಶ್ರೀಪತಿ, ಎಸ್.ಬಾಲಕೃಷ್ಣ ಭಟ್, ರವಿಕುಮಾರ್ ಎನ್, ಪೂಜಾ ಅಣ್ಣಯ್ಯ, ಇಂತಿಯಾಜ್ ಎ.ಅತ್ತಾರ್, ಸಂದೇಶ್ ಶೆಟ್ಟಿ ಎ, ಬಂಡಿ ರಂಗನಾಥ ವೈ.ಆರ್, ಶೇಖರಪ್ಪ ಹೆಚ್, ಹನುಮಂತಪ್ಪ, ಜಿ.ಜಯದೇವ ಸೇರಿದಂತೆ ಇಂದು ಒಟ್ಟು 14 ನಾಮಪತ್ರಗಳ ಸಲ್ಲಿಕೆಯಾಗಿದೆ. ಒಟ್ಟು 38 ನಾಮಪತ್ರ ಸಲ್ಲಿಕೆ : ಏ.12 ರಿಂದ 19 ರವರೆಗೆ ಒಟ್ಟು 27 ಅಭ್ಯರ್ಥಿಗಳಿಂದ 38 ನಾಮಪತ್ರಗಳ ಸಲ್ಲಿಕೆಯಾಗಿದೆ. ಏ.20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏ.22 ರಂದು ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದ್ದು ಮೇ 7 ರಂದು ಮತದಾನ ನಡೆಯಲಿದೆ. https://kannadanewsnow.com/kannada/shivamogga-power-outage-in-these-areas-of-the-district-on-april-21/ https://kannadanewsnow.com/kannada/watch-video-video-of-russian-supersonic-bomber-crashing-flight-turning-into-fireball-goes-viral/
ಮೈಸೂರು: ಬೆಂಗಳೂರಲ್ಲಿ ಶ್ರೀರಾಮನವಮಿ ಮುಗಿಸಿ ಕಾರಿನಲ್ಲಿ ಹೋಗುತ್ತಿದ್ದಂತ ಯುವಕರನ್ನು ಅಡ್ಡಗಟ್ಟಿದ್ದಂತ ಮುಸ್ಲೀಂ ಯುವಕರು, ಜೈ ಶ್ರೀರಾಂ ಅಲ್ಲ, ಅಲ್ಲಾ ಹು ಅಕ್ಬರ್ ಎಂಬುದಾಗಿ ಕೂಗುವಂತೆ ಒತ್ತಾಯಿಸಿದ್ದರು. ಈ ಬೆನ್ನಲ್ಲೇ ಮೋದಿ ಪರ ಹಾಡು ಬರೆದಿದ್ದಕ್ಕೆ ಯುವಕನೊಬ್ಬನನ್ನು ಮುಸ್ಲೀಂ ಯುವಕರು ಹಲ್ಲೆ ನಡೆಸಿರುವಂತ ಘಟನೆ ಮೈಸೂರಲ್ಲಿ ನಡೆದಿದೆ. ಮೈಸೂರಿನ ಸರ್ಕಾರಿ ಅತಿಥಿ ಗೃಹದ ಬಳಿ ರೋಹಿತ್ ಎಂಬಾತನ ಮೇಲೆ ಪ್ರಧಾನಿ ಮೋದಿ ಪರ ಹಾಡು ಬರೆದಿದ್ದಕ್ಕೆ ಯುವಕನ ಮೇಲೆ ಮುಸ್ಲೀಂ ಯುವಕರು ಹಲ್ಲೆ ಮಾಡಿರುವಂತ ಘಟನೆ ನಡೆದಿದೆ. ಮೈಸೂರಿನ ಸರ್ಕಾರಿ ಅತಿಥಿ ಗೃಹದ ಬಳಿಯಲ್ಲಿ ರೋಹಿತ್ ಎಂಬಾತನ ಮೇಲೆ ಮುಸ್ಲೀಂ ಯುವಕರು ನರೇಂದ್ರ ಮೋದಿ ಹಾಡು ಮಾಡಿದ್ದೀಯ. ನಿನ್ನ ಸಾಯಿಸುತ್ತೇನೆ. ಅಲ್ಲಾಹು ಅಕ್ಬರ್ ಘೋಷಣೆ ಕೂಗುವಂತೆ ಒತ್ತಾಯಿಸಿದ್ದಾಗಿ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ಸಲ್ಲಿಸಿರೋ ದೂರಿನಲ್ಲಿ ತಿಳಿಸಿದ್ದಾರೆ. ಇನ್ನೂ ರೋಹಿತನ ಬಟ್ಟೆ ಹರಿದು ದೈಹಿಕವಾಗಿ ಹಲ್ಲೆ ನಡೆಸಿ, ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಹಲ್ಲೆಗೆ ಒಳಗಾದ ಯುವಕ ನೇರವಾಗಿ ಮೈಸೂರು ಲಕ್ಷ್ಮೀ ಪುರಂ ಠಾಣೆಗೆ ತೆರಳಿ…
ಶಿವಮೊಗ್ಗ : ಜಿಲ್ಲೆಯಲ್ಲಿ ವಿವಿಧ ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ಏಪ್ರಿಲ್.21ರಂದು ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಮೆಸ್ಕಾಂ, ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ಫೀಡರ್ ಎ.ಎಫ್-3ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏ.21 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00 ರವರೆಗೆ ಎಸ್.ವಿ.ಬಡಾವಣೆ ಎ ಯಿಂದ ಎಫ್ ಬ್ಲಾಕ್, ಮಹಿಳಾ ಪಾಲಿಟೆಕ್ನಿಕ್ ಕಾಲೇಜ್, ಅಮೃತ ಲೇಔಟ್, ಗಾಡಿಕೊಪ್ಪ, ಸಾಗರ ರಸ್ತೆ, ಪೊಲೀಸ್ ಲೇಔಟ್, ಹರ್ಷ ಫರ್ನ್ ಸುತ್ತಮುತ್ತ, ಡಾ|| ಶಶಿಭೂಷಣ್ ಲೇಔಟ್, ಡೆಂಟಲ್ ಕಾಲೇಜ್, ಗೋಲ್ಡನ್ ಸಿಟಿ ಲೇಔಟ್, ಮ್ಯಾಕ್ಸ್ ವರ್ಥ್ ಲೇಔಟ್, ಎ.ಬಿ.ವಿ.ಪಿ. ಬಡಾವಣೆ, ಗಾಯತ್ರಿದೇವಿ ಲೇಔಟ್, ಮಲ್ಲಿಗೇನಹಳ್ಳಿ, ಗೋಪಾಳಗೌಡ ಬಡಾವಣೆ ಎಫ್ ಬ್ಲಾಕ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತ ತಿಳಿಸಿದೆ. https://kannadanewsnow.com/kannada/breaking-breaking-big-relief-for-former-cm-hd-kumaraswamy-hc-stays-state-womens-commissions-notice/ https://kannadanewsnow.com/kannada/the-law-and-order-situation-in-the-state-is-good-bjp-planning-to-impose-governors-rule-dk-shivakumar/
ಬೆಂಗಳೂರು: ಕನ್ನಡ ಮತ್ತು ಇಂಗ್ಲಿಷ್ ದೈನಂದಿನ ಎಲ್ಲ ಪತ್ರಿಕೆಗಳ ಮುಖಪುಟದಲ್ಲಿ ಬಿಜೆಪಿ ಬಗ್ಗೆ ಅವಹೇಳನಕಾರಿಯಾಗಿ ಜಾಹೀರಾತು ನೀಡಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಬಿಜೆಪಿ ನಿಯೋಗ ದೂರು ನೀಡಿದೆ. ನಿಯೋಗವು ಇಂದು ಈ ಕುರಿತು ನೃಪತುಂಗ ರಸ್ತೆಯಲ್ಲಿರುವ ಚುನಾವಣಾ ಆಯೋಗ ಕಚೇರಿಗೆ ಭೇಟಿ ನೀಡಿ ದೂರು ನೀಡಿದೆ. ಕನ್ನಡ ಮತ್ತು ಇಂಗ್ಲಿಷ್ ದೈನಂದಿನ ಪತ್ರಿಕೆಗಳಲ್ಲಿ ಮಾನಹಾನಿ ಮಾಡುವ ಜಾಹೀರಾತನ್ನು ಕೊಟ್ಟಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಭಾರತ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಮೇಲೆ ತಕ್ಷಣವೇ ಎಫ್‍ಐಆರ್ ದಾಖಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಈ ಕೂಡಲೇ ಸೂಕ್ತ ನಿರ್ದೇಶನ ಕೊಡುವಂತೆ ಮನವಿ ಆಗ್ರಹಿಸಿದೆ. ಮನವಿ ಸಲ್ಲಿಸುವ ನಿಯೋಗದಲ್ಲಿ ಶಾಸಕ ರವಿ ಸುಬ್ರಹ್ಮಣ್ಯ, ಕಾನೂನು ಪ್ರಕೋಷ್ಟದ ರಾಜ್ಯ ಸಂಚಾಲಕ ವಸಂತ್ ಕುಮಾರ್ ಮತ್ತು ಪಕ್ಷದ ಪ್ರಮುಖ ನಾಯಕರು ಇದ್ದರು. https://kannadanewsnow.com/kannada/breaking-breaking-big-relief-for-former-cm-hd-kumaraswamy-hc-stays-state-womens-commissions-notice/ https://kannadanewsnow.com/kannada/the-law-and-order-situation-in-the-state-is-good-bjp-planning-to-impose-governors-rule-dk-shivakumar/
ರಾಯಚೂರು: ಜಿಲ್ಲೆಯ ಹಚ್ಚಿ ಚಿನ್ನದ ಗಣಿಯಲ್ಲಿ ಏಕಾಏಕಿ ಏರ್ ಬ್ಲಾಸ್ಟ್ ಆದ ಪರಿಣಾಮ, 6 ಕಾರ್ಮಿಕರು ಗಾಯಗೊಂಡಿರೋ ಘಟನೆ ನಡೆದಿದೆ. ಈ ಘಟನೆಯಲ್ಲಿ ಓರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರೋದಾಗಿ ಹೇಳಲಾಗುತ್ತಿದೆ. ರಾಯಚೂರು ಜಿಲ್ಲೆಯ ಲಿಂಗಸೂರು ತಾಲೂಕಿನ ಹಟ್ಟಿ ಚಿನ್ನದ ಗಣಿಯಲ್ಲಿ ಸುರಂಗ ಮಾರ್ಗದ ಕೆಲಸ ನಡೆಯುತ್ತಿದ್ದಂತ ಸಂದರ್ಭದಲ್ಲಿ ಏಕಾಏಕಿ ಏರ್ ಬ್ಲಾಸ್ಟ್ ಆಗಿದೆ. ಈ ಪರಿಣಾಮ ಒಂದು ಬದಿಯಲ್ಲಿ ಮಣ್ಣು ಕುಸಿತಗೊಂಡಿದೆ. ಇದರಿಂದಾಗಿ ಕಾರ್ಮಿಕರು ಉಸಿರಾಟದ ಸಮಸ್ಯೆಗೆ ಸಿಲುಕಿದ್ದಾರೆ ಎಂದು ತಿಳಿದು ಬಂದಿದೆ. ಚಿನ್ನದ ಗಣಿಯಲ್ಲಿ ಮಣ್ಣು ಕುಸಿತಗೊಂಡು ಅಸ್ವಸ್ಥಗೊಂಡಂತ ಕಾರ್ಮಿಕರನ್ನು ಕೂಡಲೇ ರಕ್ಷಿಸಲಾಗಿದೆ. ಈ ಘಟನೆಯಲ್ಲಿ ಐವರು ಗಾಯಗೊಂಡಿದ್ದು, ಅವರಲ್ಲಿ ಓರ್ವ ಕಾರ್ಮಿಕನ ಸ್ಥಿತಿ ಗಂಭೀರವಾಗಿರೋದಾಗಿ ಹೇಳಲಾಗುತ್ತಿದೆ. https://kannadanewsnow.com/kannada/breaking-breaking-big-relief-for-former-cm-hd-kumaraswamy-hc-stays-state-womens-commissions-notice/ https://kannadanewsnow.com/kannada/the-law-and-order-situation-in-the-state-is-good-bjp-planning-to-impose-governors-rule-dk-shivakumar/
ಬೆಂಗಳೂರು: ಸಿಎಂ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಬಂದ ನಂತರ ಜಿಹಾದಿ ಕರ್ನಾಟಕ ಸೃಷ್ಟಿಯಾಗಿದೆ. ಹಿಂದೂಗಳ ರಕ್ತಕ್ಕೆ ಬೆಲೆಯೇ ಇಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಕಚೇರಿಯಲ್ಲಿ ಕಾಂಗ್ರೆಸ್ ದುರಾಡಳಿತದ ಆರೋಪ ಪಟ್ಟಿಯನ್ನು ಆರ್.ಅಶೋಕ ಬಿಡುಗಡೆ ಮಾಡಿದರು. ನಂತರ ಮಾತನಾಡಿ, ರಾಜ್ಯದಲ್ಲಿ ಹಿಂದೂಗಳ ಕಗ್ಗೊಲೆ, ಲವ್ ಜಿಹಾದ್, ಹಿಂದೂಗಳ ಮೇಲೆ ದಾಳಿ ನಡೆಯುತ್ತಿದೆ. ಲವ್ ಜಿಹಾದ್‌ಗೆ ಕಾಂಗ್ರೆಸ್‌ನವರು ಕೂಡ ಒಳಗಾಗಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಲವ್ ಜಿಹಾದ್‌ನಲ್ಲಿ ಹಿಂದೂ ಯುವತಿ ಬರ್ಬರ ಕೊಲೆಗೀಡಾಗಿರುವುದನ್ನು ಬಿಜೆಪಿ ಉಗ್ರವಾಗಿ ವಿರೋಧಿಸುತ್ತದೆ. ಕರ್ನಾಟಕವನ್ನು ಡಾನ್‌ಗಳು ನಡೆಸುತ್ತಿರುವಂತಹ ಪರಿಸ್ಥಿತಿ ಇದ್ದು, ಸರ್ಕಾರ ಕಾನೂನನ್ನು ಗೂಂಡಾಗಳಿಗೆ ನೀಡಿದೆ ಎಂದರು. ಇದನ್ನು ಲವ್ ಪ್ರಕರಣ, ಕುಟುಂಬದ ಸಮಸ್ಯೆ ಎಂದು ಹೇಳುವ ಕಾಂಗ್ರೆಸ್ ನಾಯಕರಿಗೆ ನಾಚಿಕೆಯಾಗಬೇಕು. ಇದು ಲವ್ ಜಿಹಾದ್ ಎಂದು ಯುವತಿಯ ತಂದೆ, ಕಾಂಗ್ರೆಸ್ ಕಾರ್ಪೊರೇಟರ್ ಹೇಳುತ್ತಿದ್ದಾರೆ. ಕುಟುಂಬದವರು ಕಣ್ಣೀರು ಹರಿಸುವಾಗ ಕೊಲೆಯಾದ ಯುವತಿಯ ಬಗ್ಗೆ ಹೀನಾಯವಾಗಿ ಮಾತಾಡುತ್ತಿದ್ದಾರೆ. ಚುನಾವಣೆಯಲ್ಲಿ ಇದು ಚರ್ಚೆಯಾದರೆ ಕಾಂಗ್ರೆಸ್ ಮುಖಕ್ಕೆ ಮಂಗಳಾರತಿಯಾಗಲಿದೆ ಎಂಬ…
ರಾಮನಗರ: ಸಂಸದ ಡಿ.ಕೆ ಸುರೇಶ್ ಅವರು ಪ್ರಚಾರದ ವೇಳೆಯಲ್ಲೇ ಕಾಂಗ್ರೆಸ್ ಕಾರ್ಯಕರ್ತರಿಂದ ಪಾಕಿಸ್ತಾನ್ ಕೀ ಜೈ ಘೋಷಣೆ ಕೂಗಿರೋದಾಗಿ ಹೇಳಲಾಗುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ಈ ವೀಡಿಯೋ ವೈರಲ್ ಕೂಡ ಆಗಿದೆ. ರಾಮನಗರ ಜಿಲ್ಲೆಯ ಕುಣಿಗಲ್ ತಾಲೂಕಿನ ಕುದೂರಿನಲ್ಲಿ ಇಂದು ಸಂಸದ ಡಿ.ಕೆ ಸುರೇಶ್ ಅವರು ಮತಯಾಚನೆಯಲ್ಲಿ ತೊಡಗಿದ್ದರು. ತಮಗೆ ಮತ ನೀಡುವಂತೆ ಪ್ರಚಾರ ಕಾರ್ಯದಲ್ಲಿ ತೊಡಗಿದರು. ಸಂಸದ ಡಿ.ಕೆ ಸುರೇಶ್ ಅವರು ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಂತ ಸಂದರ್ಭದಲ್ಲಿ, ಕಾಂಗ್ರೆಸ್ ಕಾರ್ಯಕರ್ತರು ಬಾಲಕೃಷ್ಣ ಕೀ ಜೈ ಜೊತೆಗೆ ಪಾಕಿಸ್ತಾನ್ ಕೀ ಜೈ ಎಂಬುದಾಗಿಯೂ ಘೋಷಣೆ ಕೂಗಿದ್ದಾರೆ ಎನ್ನಲಾಗುತ್ತಿದೆ. ಈ ಗಂಭೀರ ಆರೋಪವನ್ನು ಮಾಡಿರುವಂತ ಮೈತ್ರಿ ಪಕ್ಷದ ನಾಯಕರು, ವೀಡಿಯೋ ಕೂಡ ವೈರಲ್ ಮಾಡುತ್ತಿದ್ದಾರೆ ಎಂಬುದಾಗಿ ಕಿಡಿಕಾರಿರುವಂತ ಕಾಂಗ್ರೆಸ್ ನಾಯಕರು, ಕೈ ಕಾರ್ಯಕರ್ತರು ಪಾಕ್ ಪರ ಘೋಷಣೆ ಕೂಗಿಲ್ಲ. ಬಾಲಕೃಷ್ಣ ಕೀ ಜೈ ಅಂತ ಕೂಗಿದ್ದಾರೆ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ. https://kannadanewsnow.com/kannada/breaking-breaking-big-relief-for-former-cm-hd-kumaraswamy-hc-stays-state-womens-commissions-notice/ https://kannadanewsnow.com/kannada/the-law-and-order-situation-in-the-state-is-good-bjp-planning-to-impose-governors-rule-dk-shivakumar/
ರಾಮನಗರ: ರಾಜ್ಯಸಭಾ ಚುನಾವಣೆಯ ವೇಳೆಯಲ್ಲಿ ರಾಜ್ಯದ ಶಕ್ತಿ ಸೌಧ ವಿಧಾನಸೌಧದಲ್ಲೇ ಪಾಕಿಸ್ತಾನ ಪರ ಘೋಷಣೆ ಕೂಗಲಾಗಿತ್ತು. ಇದು ಎಫ್ಎಸ್ಎಲ್ ವರದಿಯಲ್ಲೂ ದೃಢಪಟ್ಟಿತ್ತು. ಈ ಬಳಿಕ ರಾಜ್ಯದಲ್ಲಿ ಮತ್ತೆ ಪಾಕಿಸ್ತಾನ್ ಕೀ ಜೈ ಘೋಷಣೆ ಮೊಳಗಿದೆ. ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕುದೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಂಸದ ಡಿ.ಕೆ ಸುರೇಶ್ ಮತಯಾಚನೆಯ ವೇಳೆಯಲ್ಲೇ ಪಾಕಿಸ್ತಾನ್ ಕೀ ಜೈ ಘೋಷಣೆ ಕೂಗಿಲೋದಾಗಿ ಕೇಳಿ ಬಂದಿದೆ. ಈ ವೀಡಿಯೋವನ್ನು ಇಟ್ಕೊಂಡು ಬಿಜೆಪಿ-ಜೆಡಿಎಸ್ ಪಕ್ಷದ ಮೈತ್ರಿ ನಾಯಕರು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಮಾಡುತ್ತಿರೋದಾಗಿ ಹೇಳಲಾಗುತ್ತಿದೆ. ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕುದೂರಲ್ಲಿ ಮತಯಾಚನೆ ವೇಳೆಯಲ್ಲಿ ಪಾಕಿಸ್ತಾನ್ ಕೀ ಜೈ ಎಂಬುದಾಗಿ ಘೋಷಣೆ ಕೂಗಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಆದ್ರೇ ಕಾಂಗ್ರೆಸ್ ಪಕ್ಷದವರು ಮಾತ್ರ ಅದು ಪಾಕಿಸ್ತಾನ್ ಕೀ ಜೈ ಅಲ್ಲ. ಬಾಲಕೃಷ್ಣ ಕೀ ಜೈ ಎಂದಿದ್ದಾರೆ ಅಂತ ಸ್ಪಷ್ಟ ಪಡಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/bjp-announces-rs-10-lakh-ex-gratia-for-family-of-worker-who-died-during-election-campaign/ https://kannadanewsnow.com/kannada/breaking-breaking-big-relief-for-former-cm-hd-kumaraswamy-hc-stays-state-womens-commissions-notice/
ಕೊಡಗು: ಲೋಕಸಭಾ ಚುನಾವಣಾ ಪ್ರಚಾರದ ವೇಳೆಯಲ್ಲಿ ಸಾವನ್ನಪ್ಪಿದಂತ ಕಾರ್ಯಕರ್ತನ ಕುಟುಂಬಕ್ಕೆ ಬಿಜೆಪಿ ಪಕ್ಷದಿಂದ 10 ಲಕ್ಷ ಪರಿಹಾರವನ್ನು ಘೋಷಣೆ ಮಾಡಲಾಗಿದೆ. ಈ ಬಗ್ಗೆ ಬಿಜೆಪಿಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಸಿದ್ಧಾಪುರದ ಬಳಿಯಲ್ಲಿ ಲೋಕಸಭಾ ಚುನಾವಣಾ ಪ್ರಚಾರದ ವೇಳೆಯಲ್ಲಿ ಕಾರ್ಯಕರ್ತ ರಾಮಪ್ಪ ಎಂಬುವರು ಸಾವನ್ನಪ್ಪಿದ್ದಾರೆ. ಅಲ್ಲದೇ ಚಂದ್ರರಾಜು, ರತೀಶ್ ಎಂಬುವರು ಗಾಯಗೊಂಡಿದ್ದಾರೆ ಎಂದಿದ್ದಾರೆ. ಮೃತ ಬಿಜೆಪಿ ಕಾರ್ಯಕರ್ತ ರಾಮಪ್ಪ ಅವರ ಕುಟುಂಬಕ್ಕೆ 10 ಲಕ್ಷ ಪರಿಹಾರವನ್ನು ನೀಡಲಾಗುತ್ತದೆ. ಗಾಯಾಳುಗಳಾದಂತ ಚಂದ್ರರಾಜು, ರತೀಶ್ ಅವರಿಗೆ ತಲಾ 2 ಲಕ್ಷ ಪರಿಹಾರವನ್ನು ನೀಡಲಾಗುತ್ತದೆ ಎಂದಿದೆ. ನಾಳೆ ಮೃತ ರಾಮಪ್ಪ ಅವರ ಕುಟುಂಬವನ್ನು ಭೇಟಿ ಮಾಡಲಿರುವಂತ ಬಿಜೆಪಿ ನಾಯಕರು, ಪರಿಹಾರದ ಚೆಕ್ ವಿತರಣೆ ಮಾಡಲಿದ್ದಾರೆ. ಅಲ್ಲಗೇ ಗಾಯಾಳುಗಳಿಗೂ ಅಂದೇ ಪರಿಹಾರದ ಚೆಕ್ ವಿತರಣೆ ಮಾಡಲಾಗುತ್ತಿದೆ ಎಂಬುದಾಗಿ ಮಾಹಿತಿ ನೀಡಿದೆ. https://kannadanewsnow.com/kannada/breaking-breaking-big-relief-for-former-cm-hd-kumaraswamy-hc-stays-state-womens-commissions-notice/ https://kannadanewsnow.com/kannada/the-law-and-order-situation-in-the-state-is-good-bjp-planning-to-impose-governors-rule-dk-shivakumar/













