Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಭಾರತದ ಒಳಗೆ ಬರೋದಕ್ಕೆ, ದೇಶದಿಂದ ಹೊರ ಹೋಗೋದಕ್ಕೆ ಇಲ್ಲವೇ ಇಲ್ಲಿ ನೆಲೆಸಲು ನಕಲಿ ಪಾಸ್ ಪೋರ್ಟ್ ಮತ್ತು ವೀಸಾ ಬಳಸಿದರೇ 7 ವರ್ಷ ಅಂತವರಿಗೆ ಜೈಲು ಶಿಕ್ಷೆ ಮತ್ತು 10 ಲಕ್ಷ ದಂಡ ವಿಧಿಸುವಂತ ಮಹತ್ವದ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಂಡಿದೆ. ಈ ಸಂಬಂಧ ಕೇಂದ್ರ ಸರ್ಕಾರ ವಿದೇಶಿಯರು ಮತ್ತು ವಲಸೆ ಸಂಬಂಧ ಪ್ರಸ್ತುತ ಇರುವಂತ ಹಲವು ಕಾಯ್ದೆಗಳನ್ನು ಒಟ್ಟುಗೂಡಿಸಿ, ವಲಸೆ ಮತ್ತು ವಿದೇಶಿಯರ ಮಸೂದೆ 2025 ಅನ್ನು ಸಂಸತ್ತಿನಲ್ಲಿ ಮಂಡಿಸಿದೆ. ಈ ಮಸೂದೆಗೆ ಲೋಕಸಭೆ ಹಾಗೂ ರಾಜ್ಯಸಭೆಗಳೆರಡರಲ್ಲೂ ಅನುಮೋದನೆ ದೊರೆತಿದೆ. ಈ ಹೊಸ ಮಸೂದೆಯ ಅನ್ವಯ ಹೋಟೆಲ್ ಗಳು, ವಿಶ್ವವಿದ್ಯಾಲಯಗಳು ಮತ್ತು ಇತರೆ ವಿದ್ಯಾ ಸಂಸ್ಥೆಗಳು, ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಂಗಳು ತಮ್ಮಲ್ಲಿರುವ ವಿದೇಶಿಯರ ಸಂಪೂರ್ಣ ಮಾಹಿತಿಯನ್ನು ಗೃಹ ಸಚಿವಾಲಯಕ್ಕೆ ಒದಗಿಸುವುದು ಕಡ್ಡಾಯವಾಗಿದೆ. ಈ ಮೂಲಕ ವೀಸಾ ಅವಧಇ ಮುಗಿದರೂ ಭಾರತದಲ್ಲೇ ವಾಸಿಸುತ್ತಿರುವ ವಿದೇಶಿಗರನ್ನು ಪತ್ತೆ ಹಚ್ಚಲು ಸಾಧ್ಯವಾಗಲಿದೆ. ಇನ್ನೂ ವಿದೇಶಿಗರು ಆಗಾಗ್ಗೆ ಭೇಟಿ ನೀಡುವ ಸ್ಥಳಗಳ ಮೇಲೆ…
ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಪ್ರಖರತೆ ಹೆಚ್ಚಾಗಿದೆ. ಕರ್ನಾಟಕ ದಿನೇ ದಿನೇ ಕುದಿಯಲಾರಂಭಿಸಿದೆ. ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನ ವಾಡಿಕೆಗಿಂತ 2-4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಏರಿಕೆ ಆಗಲಿದೆ ಅಂತ ಹವಾಮಾನ ಇಲಾಖೆ ಎಚ್ಚರಿಸಿದೆ. ರಾಜ್ಯದ ಶೇ.75ರಷ್ಟು ಭೌಗೋಳಿಕ ಪ್ರದೇಶಗಳಲ್ಲಿ 38 ಡಿಗ್ರಿ ಸೆಲ್ಸಿಯಸ್ ನಿಂದ 42.8 ಡಿಗ್ರಿ ಸೆಲ್ಸಿಯಸ್ ವರೆಗೂ ಉಷ್ಣಾಂಶ ದಾಖಲಾಗುತ್ತಿದೆ. ಇದರಿಂದ ಬಿಸಿಗಾಳಿ ಹೆಚ್ಚಾಗಿದೆ. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಉಷ್ಣಾಂಶ ತೀವ್ರಗೊಂಡಿದೆ. ಬೀದರ್, ಕಲಬುರ್ಗಿ, ವಿಜಯಪುರ, ಬಳ್ಳಾರಿ, ಕೊಪ್ಪಳ, ಯಾದಗಿರಿ, ರಾಯಚೂರಿನಲ್ಲಿ 40 ರಿಂದ 42 ಡಿಗ್ರಿ ಸೆಲ್ಸಿಯಸ್ ತಾಪಮಾನ ವರದಿಯಾಗಿದೆ. ರಾಜ್ಯದ ಅತೀ ಹೆಚ್ಚು ಮಳೆ ಬೀಳುವ ಆಗುಂಬೆಯಲ್ಲೂ ಈ ಬಾರಿ ಗರಿಷ್ಠ ತಾಪಮಾನ ದಾಖಲಾಗಿದೆ. ಭಾರತದ ಅತೀ ಹೆಚ್ಚು ಮಳೆ ಬೀಳುವ ಪ್ರದೇಶಗಳಲ್ಲಿ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆಯೂ ಒಂದು. ಪಶ್ಚಿಮ ಘಟ್ಟದ ಸಹ್ಯಾದ್ರಿ ತಪ್ಪಲಿನಲ್ಲಿರುವ ಆಗುಂಬೆ ಸದಾ ಹಸಿರಿನಿಂದ ಕೂಡಿರುತ್ತದೆ. ಆದರೇ ಈಗ ಗರಿಷ್ಠ ತಾಪಮಾನ 36…
ನವದೆಹಲಿ: ಮತಾದರರ ಪಟ್ಟಿ ತಯಾರಿಸುವಲ್ಲಿ ಭಾರೀ ಅಕ್ರಮ ನಡೆದಿದೆ ಎಂಬ ತೃಣಮೂಲ ಕಾಂಗ್ರೆಸ್, ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳ ಟೀಕೆಯ ನಡುವೆ ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಜೋಡಣೆ ಕುರಿತು ಚರ್ಚಿಸಲು ನಾಳೆ ಕೇಂದ್ರ ಚುನಾವಣಾ ಆಯೋಗವು ಮಹತ್ವದ ಸಭೆ ನಡೆಸಲಿದೆ. ಮುಖ್ಯ ಚುನಾವಣಾ ಆಯುಕ್ತರ ನೇತೃತ್ವದಲ್ಲಿ ನಡೆಯಲಿರುವ ಈ ಸಭಎಯಲ್ಲಿ ಗೃಹ ಇಲಾಖೆ ಕಾರ್ಯದರ್ಶಿ, ಶಾಸಕಾಂಗ ಇಲಾಖೆಯ ಕಾರ್ಯದರ್ಶಿ ಮತ್ತು ಯುಐಡಿಎಂ ಸಿಇಓ ಮೊದಲಾದವರು ಭಾಗಿಯಾಗಲಿದ್ದಾರೆ. ನಾಳೆ ನಡೆಯಲಿರುವಂತ ಸಿಇಸಿ ಸಭೆಯಲ್ಲಿ ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಜೋಡಣೆ ಸೇರಿದಂತೆ ನಕಲಿ ಮತದಾರರ ಪಟ್ಟಿ ತಡೆಯ ಮಹತ್ವದ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಅಂತಿಮವಾಗಿ ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದು ಕಡ್ಡಾಯಗೊಳಿಸಿದರೂ ಗೊಳಿಸಬಹುದಾಗಿದೆ. https://kannadanewsnow.com/kannada/heat-wave-conditions-rise-in-state-govt-asks-people-to-follow-this-health-advisory/ https://kannadanewsnow.com/kannada/no-property-registration-without-e-khata-state-govt/
ಬೆಂಗಳೂರು: : ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದ್ದು, ಜನರ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದ್ದು, ಸಾರ್ವಜನಿಕ ಆರೋಗ್ಯ ಸಲಹೆಯನ್ನು ಅನುಸರಿಸುವ ಮೂಲಕ ತಮ್ಮ ಆರೋಗ್ಯದ ಕಾಳಜಿ ವಹಿಸುವಂತೆ ರಾಜ್ಯ ಸರ್ಕಾರ ಸಲಹೆ ಮಾಡಿದೆ. ಈ ಬಾರಿ ಬಿಸಿಲಿನ ತಾಪಮಾನ ಹೆಚ್ಚಾಗಿದೆ. ಅಲ್ಲದೆ ಮಾರ್ಚ್ ಯಿಂದ ಮೇ ವರೆಗೆ ವಾತಾರವಣದಲ್ಲಿ ಬಿಸಿಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ನೀಡಿದೆ. ಇದರಿಂದಾಗಿ ವಾತಾವರಣದಲ್ಲಿ ಅನೇಕ ರೀತಿಯ ಬದಲಾವಣೆ ಉಂಟಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದ್ದು, ಜನರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಅಂತ ತಿಳಿಸಿದೆ. ರಾಜ್ಯದ ವಿವಿಧ ಜಿಲ್ಲೆಯಲ್ಲಿ ಬಿಸಿಲು ಹೆಚ್ಚಾಗಿದೆ. ದಿನೇ ದಿನೇ ಸಾರ್ವಜನಿಕರು ಕೆಲಸದ ಒತ್ತಡದ ಜೊತೆಗೆ ಬಿಸಿಲಿನ ಬೇಗೆಯನ್ನು ಸಹಿಸಿಕೊಳ್ಳದ ಸ್ಥಿತಿಗೆ ತಲುಪಿದ್ದಾರೆ. ಇದರಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಕುಗ್ಗುತ್ತಿದ್ದಾರೆ. ಈ ಸಂದರ್ಭದಲ್ಲಿ ಸಾಮಾನ್ಯವಾಗಿ ಮನುಷ್ಯನ ದೇಹದ ಉಷ್ಣತೆಯು 36.4 ಡಿಗ್ರಿ ಸೆ ನಿಂದ 37.2 ಡಿಗ್ರಿ ಸೆ( 97.5…
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ವಿಳಂಬ ನೇಮಕಾತಿ ಪ್ರಕ್ರಿಯೆಗೆ ಹೆಸರುವಾಸಿ. ಇದಕ್ಕೆ ಉದಾಹರಣೆ ಎನ್ನುವಂತೆ ಕೋರ್ಟ್ ಆದೇಶದ ಮೇರೆಗೆ ಬರೋಬ್ಬರಿ 19 ವರ್ಷಗಳ ಹಿಂದಿನ ಮೋಟಾರು ವಾಹನ ನಿರೀಕ್ಷೆಕರ ಹುದ್ದೆಯ ನೇಮಕಾತಿಗೆ ಮರು ಚಾಲನೆ ನೀಡಿದೆ. ಹೌದು ಬಹುತೇಕ 2 ದಶಕಗಳ ಬಳಿಕ ಕರ್ನಾಟಕ ಲೋಕಸೇವಾ ಆಯೋಗವು ಮೋಟಾರು ವಾಹನ ನಿರೀಕ್ಷಕರ ಹುದ್ದೆಗೆ ಮರು ಚಾಲನೆಯನ್ನು ಕೋರ್ಟ್ ಆದೇಶದ ಮೇಲೆ ನೀಡಿದೆ. ಈಗ ಈ ಹುದ್ದೆಗೆ ಅರ್ಜಿ ಸಲ್ಲಿಸಿದ್ದಂತ ಅಭ್ಯರ್ಥಿಗಳಿಗೆ ಆಸಕ್ತಿ ಇದೆಯೋ ಇಲ್ಲವೋ ಅಥವಾ ನಿವೃತ್ತರಾಗಿದ್ದಾರೋ ಬದುಕಿದ್ದಾರೋ ಎಂಬುದೇ ತಿಳಯದು. 2006ರ ಆಗಸ್ಟ್ ನಲ್ಲಿ ಸಾರಿಗೆ ಇಲಾಖೆಯಲ್ಲಿನ ಮೋಟಾರು ವಾಹನ ನಿರೀಕ್ಷಕರ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಶೈಕ್ಷಣಿಕ ಅರ್ಹತೆ ವಿಚಾರವಾಗಿ ಅಸ್ಪಷ್ಟತೆ ಕಾರಣ ಅಭ್ಯರ್ಥಿಗಳು ಆಡಳಿತ ನ್ಯಾಯಮಂಡಳಿ ಮೊರೆ ಹೋಗಿದ್ದರು. ಆ ಬಳಿಕ ಪ್ರಕರಣ ತಾರ್ಕಿಕ ಅಂತ್ಯಕಾರಣದೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಈಗ ಸುಧೀರ್ಘ ವಿಚಾರಣೆಯ ಬಳಿಕ ಇದೇ ಫೆಬ್ರವರಿಯಲ್ಲಿ ಮಧ್ಯಂತರ ಆದೇಶ ನೀಡಿದ್ದು, ನೇಮಕಾತಿ ಪ್ರಕ್ರಿಯೆ ಪ್ರಶ್ಸಿರುವ…
ಬೆಂಗಳೂರು: ನಗರದಲ್ಲಿ ಪುಂಡರ ಅಟ್ಟಹಾಸ ಮುಂದುವರೆದಿದೆ. ಇಬ್ಬರು ಯುವಕ ಮೇಲೆ ಹಲ್ಲೆ ಮಾಡಿರುವಂತ ಘಟನೆ ಬ್ಯಾಟರಾಯನಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನ ಮೈಸೂರು ರಸ್ತೆಯ ಪೆಟ್ರೋಲ್ ಬಂಕ್ ಬಳಿಯಲ್ಲಿ ಈ ಘಟನೆ ನಡೆದಿದೆ. ಪೆಟ್ರೋಲ್ ಹಾಕಿಸಿಕೊಳ್ಳುತ್ತಿದ್ದಂತ ಇಬ್ಬರು ಯುವಕ ಮೇಲೆ ಪುಂಡರಿಂದ ಹಲ್ಲೆ ಮಾಡಲಾಗಿದೆ. ಕಾರಿಗೆ ಪೆಟ್ರೋಲ್ ಹಾಕಿಸುತ್ತಿದ್ದಂತ ಯುವಕರಿಬ್ಬರ ಮೇಲೆ ಪುಂಡರು ಹಲ್ಲೆ ಮಾಡಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕೆ ಬ್ಯಾಟರಾಯನಪುರ ಠಾಣೆಯ ಪೊಲೀಸರು ಆಗಮಿಸಿದ್ದರು. ಓರ್ವ ಪುಂಡನನ್ನು ಹಿಡಿದು, ವಿಚಾರಣೆ ನಡೆಸುತ್ತಿದ್ದಾರೆ. ಹಲ್ಲೆಗೊಳಗಾದಂತ ಯುವಕರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. https://kannadanewsnow.com/kannada/another-hit-and-run-case-in-bengaluru-auto-drivers-leg-chopped-off/ https://kannadanewsnow.com/kannada/no-property-registration-without-e-khata-state-govt/
ಬೆಂಗಳೂರು: ನಗರದಲ್ಲಿ ಮತ್ತೊಂದು ಹಿಟ್ ಅಂಡ್ ರನ್ ಪ್ರಕರಣ ವರದಿಯಾಗಿದೆ. ಆಟೋಗೋ ಕಾರೊಂದು ಗುದ್ದಿ ಪರಾರಿಯಾದ ಪರಿಣಾಮ, ಚಾಲಕನ ಕಾಲು ಮುರಿದು ಆಸ್ಪತ್ರೆಗೆ ದಾಖಲಾಗಿರುವಂತ ಘಟನೆ ನಡೆದಿದೆ. ಬೆಂಗಳೂರಿನ ಚಾಮರಾಜಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಕೆ ಆರ್ ಮಾರ್ಕೆಟ್ ಫ್ಲೈ ಓವರ್ ಮೇಲೆ ಆಟೋ ಒಂದಕ್ಕೆ ಇನ್ನೋವಾ ಕಾರೊಂದು ಗುದ್ದಿದೆ. ಈ ಪರಿಣಾಮ ಆಟೋ ಚಾಲಕ ವಸೀಂ ಪಾಷಾ ಎಂಬುವರ ಕಾಲು ಮುರಿತಗೊಂಡಿದೆ. ಈ ಹಿಟ್ ಅಂಡ್ ರನ್ ಬಳಿಕ ಇನ್ನೋವಾ ಕಾರು ಚಾಲಕ ವಾಹನ ಸಹಿತ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಘಟನೆಯಲ್ಲಿ ಆಟೋ ಸಂಪೂರ್ಣ ಜಖಂ ಗೊಂಡಿದೆ. ಗಾಯಾಳು ಆಟೋ ಚಾಲಕ ವಸೀಂ ಪಾಷಾನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಚಾಮರಾಜಪೇಟೆ ಠಾಣೆಯ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಪರಾರಿಯಾಗಿರುವಂತ ಇನ್ನೋವ ಕಾರು ಚಾಲಕನ ಪತ್ತೆಗೆ ಬಲೆ ಬೀಸಿದ್ದಾರೆ. https://kannadanewsnow.com/kannada/mammoottys-cancer-is-a-fake-news-friends/ https://kannadanewsnow.com/kannada/no-property-registration-without-e-khata-state-govt/
ಬೆಂಗಳೂರು: ರಾಜ್ಯದಲ್ಲಿ ಮಾ.21ರಿಂದ ಏ.4ರವರೆಗೆ 2818 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದೆ. ಈ ಬಾರಿ ಪರೀಕ್ಷೆಗೆ ಒಟ್ಟು 896,447 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ. 8,42,817 ಹೊಸಬರು, 38,091 ಪುನರಾವರ್ತಿತರು ಹಾಗೂ 15,539 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ರಾಜ್ಯವ್ಯಾಪಿ ಪರೀಕ್ಷೆಗೆ 15881 ಶಿಕ್ಷಣ ಸಂಸ್ಥೆಗಳು ನೋಂದಾಯಿಸಿಕೊಂಡಿವೆ. ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ಹಾಗೂ ನಕಲು ತಡೆಯಲು ಎಲ್ಲ 2818 ಕೇಂದ್ರಗಳಲ್ಲಿ ವೆಬ್ ಕ್ಯಾಸ್ಟಿಂಗ್ ಅಳವಡಿಸಲಾಗಿದೆ. ಇಡೀ ಕೇಂದ್ರದಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. ಇದನ್ನು ಜಿಲ್ಲಾ ಪಂಚಾಯಿತಿ ಸಿಇಒ ಕಚೇರಿಯಲ್ಲಿ ನಿಯಂತ್ರಣ ಕೊಠಡಿಯಿಂದ ನಿಯಂತ್ರಿಸಲಾಗುತ್ತದೆ. ಎಲ್ಲ ಅಕ್ರಮಗಳು ಕಂಪ್ಯೂಟರ್ ಪರದೆಯಲ್ಲಿ ಗೋಚರವಾಗುವಂತೆ ವ್ಯವಸ್ಥೆ ಮಾಡಲಾಗಿದೆ. ಮಾ.21 ರಿಂದ ಏ.04 ರವರೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಎಸ್ಎಸ್ಎಲ್ಸಿ ಪರೀಕ್ಷೆ-1 ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣವನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023 ರ ಕಲಂ 163 ಮೇರೆಗೆ ನಿರ್ಬಂಧಿತ ಪ್ರದೇಶವೆಂದು ಘೋಷಿಸಲಾಗಿದೆ. ವಿದ್ಯಾರ್ಥಿಗಳಿಗೆ ಈ ನಿಯಮಗಳ…
ಕೇರಳ: ನಟ ಮಮ್ಮುಟ್ಟಿ ಅವರ ಆರೋಗ್ಯದ ಬಗ್ಗೆ ವದಂತಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಂಡ ನಂತರ ಅಭಿಮಾನಿಗಳು ಆಘಾತಕ್ಕೊಳಗಾಗಿದ್ದಾರೆ. ಅವರ ಕ್ಯಾನ್ಸರ್ ರೋಗನಿರ್ಣಯದ ಅನಾಮಧೇಯ ಹೇಳಿಕೆಗಳನ್ನು ತಳ್ಳಿಹಾಕಿದ ಹಿರಿಯ ನಟನ ತಂಡವು ಪವಿತ್ರ ರಂಜಾನ್ ತಿಂಗಳ ಕಾರಣ ಅವರು ಕೆಲಸದಿಂದ ವಿರಾಮ ತೆಗೆದುಕೊಂಡಿದ್ದಾರೆ ಎಂದು ಸ್ಪಷ್ಟಪಡಿಸಿದೆ. ಅವರ ಪಿಆರ್ಒ ಮಿಡ್ಡೇಗೆ ಹೇಳಿಕೆ ನೀಡಿ, “ಇದು ನಕಲಿ ಸುದ್ದಿ. ಅವರು ರಂಜಾನ್ ಉಪವಾಸ ಮಾಡುತ್ತಿರುವುದರಿಂದ ಅವರು ರಜೆಯಲ್ಲಿದ್ದಾರೆ. ಆ ಕಾರಣದಿಂದಾಗಿ ಅವರು ತಮ್ಮ ಶೂಟಿಂಗ್ ವೇಳಾಪಟ್ಟಿಯಿಂದ ವಿರಾಮದಲ್ಲಿದ್ದಾರೆ. ವಾಸ್ತವವಾಗಿ, ವಿರಾಮದ ನಂತರ, ಅವರು ಮೋಹನ್ ಲಾಲ್ ಅವರೊಂದಿಗೆ ಮಹೇಶ್ ನಾರಾಯಣನ್ ಅವರ ಚಿತ್ರದ ಚಿತ್ರೀಕರಣಕ್ಕೆ ಮರಳಲಿದ್ದಾರೆ ಎಂದಿದೆ. ಮಲಯಾಳಂ ಸೂಪರ್ ಸ್ಟಾರ್ ಮಮ್ಮುಟ್ಟಿ ಅವರ ಮುಂಬರುವ ಚಿತ್ರಗಳಿವು ಕೆಲಸದ ಪ್ರಕಾರ, ಮಮ್ಮುಟ್ಟಿ ಮುಂದಿನ ಬಜೂಕಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರವು ಏಪ್ರಿಲ್ 10ರಂದು ಬಿಡುಗಡೆಯಾಯಿತು. ಇದು ಆಕ್ಷನ್-ಥ್ರಿಲ್ಲರ್ ಆಗಿದ್ದು, ಬಾಬು ಆಂಟನಿ, ಐಶ್ವರ್ಯಾ ಮೆನನ್, ನೀತಾ ಪಿಳ್ಳೈ ಮತ್ತು ಗಾಯತ್ರಿ ಅಯ್ಯರ್ ಅವರೊಂದಿಗೆ ನಟಿಸಿದ್ದಾರೆ. ಅವರು ಕೊನೆಯ…
ಬೆಂಗಳೂರು : ವಯೋವೃದ್ಧ ಅತ್ತೆ ಮಾವನ ಮೇಲೆ ಅಮಾನಮೀಯವಾಗಿ ಹಲ್ಲೆ ಮಾಡಿ, ಮಕ್ಕಳ ಜೊತೆಗೂಡಿ ಕಿರುಕುಳ ಕೊಟ್ಟಿದ್ದ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯೆಗೆ ವಿರುದ್ಧ ವೈದ್ಯಕೀಯ ಶಿಕ್ಷಣ ಇಲಾಖೆ ಷೋಕಾಸ್ ನೋಟಿಸ್ ಜಾರಿ ಮಾಡಿದ್ದು ಕೂಡಲೇ ಇದಕ್ಕೆ ಉತ್ತರ ನೀಡಬೇಕೆಂದು ಸೂಚನೆ ನೀಡಲಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೋಶಿನ್ ನಿರ್ದೇಶನದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯ ವೈದ್ಯೆ ಡಾ. ಪ್ರಿಯದರ್ಶಿನಿ ಅವರಿಗೆ ಲಿಖಿತ ಸಮಾಜಾಯಿಷಿ ನೀಡಲು ಸೂಚಿಸಲಾಗಿದೆ. ತಪ್ಪಿದ್ದಲ್ಲಿ ಮುಂದಿನ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ. ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಡಾ. ಪ್ರಿಯದರ್ಶಿನಿ ಎನ್. ಇತ್ತೀಚೆಗೆ ತಮ್ಮ ಮಕ್ಕಳ ಜೊತೆಗೂಡಿ ವಯೋವೃದ್ಧ ಅತ್ತೆ, ಮಾವಂದಿರನ್ನು ಥಳಿಸಿದ ವೀಡಿಯೋ ಭಾರಿ ವೈರಲ್ ಆಗಿತ್ತು. ಕಳೆದ ಹತ್ತು ವರ್ಷದಿಂದಲೂ ಡಾ. ಪ್ರಿಯದರ್ಶಿನಿ ಕಿರುಕುಳ ನೀಡುತ್ತಿರುವುದು ಗಮನಕ್ಕೆ ಬಂದಿದೆ. ಪ್ರಿಯದರ್ಶಿನಿ ಈಗಾಗಲೇ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಆದರೂ ಅತ್ತೆ ಮಾವನ…