Author: kannadanewsnow09

ಹಾವೇರಿ: ಫಸಲ್ ಬಿಮಾ ಯೋಜನೆಯನ್ನು ಇನ್ನಷ್ಟು ರೈತಸ್ನೇಹಿಯನ್ನಾಗಿ ಮಾಡಲು ಬೆಳೆ ಹಾನಿಗೊಳಗಾದ ಪ್ರತಿ ರೈತರ ಜಮೀನಿನ ಸರ್ವೆನಂಬ‌ರ್ ಆಧಾರದಲ್ಲಿ ಸಟಲೈಟ್ ಮೂಲಕ ಬೆಳೆ ಹಾನಿ ಸಮೀಕ್ಷೆ ನಡೆಸುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬವರಾಜ ಬೊಮ್ಮಾಯಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹ್ವಾಣ್ ಅವರಿಗೆ ಮನವಿ ಮಾಡಿದ್ದಾರೆ. ಈ ಕುರಿತು ಪತ್ರ ಬರೆದಿರುವ ಅವರು, ಫಸಲ್ ಬಿಮಾ ಯೋಜನೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ ರೈತ ಪರವಾದ ಯೋಜನೆಯಾಗಿದ್ದು, ಈ ಯೋಜನೆಯನ್ನು ಇನ್ನಷ್ಟು ರೈತ ಪರ ಹಾಗೂ ಪಾರದರ್ಶಕವಾಗಿ ಜಾರಿ ಮಾಡುವುದರಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ. ಬರ, ಪ್ರವಾಹದಂತಹ ಅನೇಕ ಕಾರಣಗಳಿಂದ ಬೆಳೆ ಹಾನಿಗೊಳಗಾದಾಗ ಗ್ರಾಮ ಪಂಚಾಯತಿ ಮಟ್ಟದಲ್ಲಿ ಬೆಳೆ ಹಾನಿ ಸಮೀಕ್ಷೆ ನಡೆಸಲಾಗುತ್ತಿದೆ. ಅದರ ಬದಲು ಪ್ರತಿ ರೈತರ ಜಮೀನಿನ ಸರ್ವೆ ನಂಬರ್ ಆಧಾರದಲ್ಲಿ ಬೆಳೆ ಹಾನಿ ಸಮೀಕ್ಷೆ ನಡೆಸಿದರೆ ನಿಜವಾಗಲೂ ಬೆಳೆಹಾನಿಗೊಳಗಾದ ಎಲ್ಲ ರೈತರೂ ವಿಮಾ ಪರಿಹಾರ ಪಡೆಯಲು ಅನುಕೂಲವಾಗುತ್ತದೆ. ಅಲ್ಲದೇ…

Read More

ಬೆಂಗಳೂರು: ರಾಜ್ಯ ಬಜೆಟ್ ನಲ್ಲಿ ತಸ್ತೀಕ್ ಮೊತ್ತವನ್ನು ರೂ.60,000 ದಿಂದ ರೂ.72,000 ಹೆಚ್ಚಳ ಮಾಡಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಾರಿಗೆ, ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಅರ್ಚಕ ಸಮುದಾಯವು ಧನ್ಯವಾದ ಅರ್ಪಿಸಿದೆ. ಈ ಮೊದಲು ಕೂಡ ಅಂದರೆ 2013, 2015 ಮತ್ತು 2017 ಹಾಗೂ ಪ್ರಸ್ತುತ 2025 ರಲ್ಲಿ ಒಟ್ಟು 4 ಬಾರಿ ರೂ.48,000 ತಸ್ತೀಕ್ ಮೊತ್ತವನ್ನು ಹೆಚ್ಚಿಸಿದ್ದು ಮುಖ್ಯಮಂತ್ರಿ ಸಿದ್ಧರಾಮಯ್ಯರವರೇ ಎಂಬುದು ಗಮನಾರ್ಹವಾದ್ದದ್ದು. ಅರ್ಚಕರ, ಆಗಮಿಕರ ಹಾಗೂ ಉಪಾಧಿವಂತರುಗಳ ಕಷ್ಟ ಕಾರ್ಪಣ್ಯಗಳಿಗಾಗಿ ಅವರ ದುಃಖ, ದುಮ್ಮಾನಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಧಾರ್ಮಿಕ, ಸಾಂಸ್ಕೃತಿಕ ಸಾಮಾಜಿಕ ನೆಲೆಯಲ್ಲಿ, ಇತ್ತೀಚಿನ ದಿನಗಳಲ್ಲಿ ಮುಜರಾಯಿ ಇಲಾಖೆಯಲ್ಲಿ ಅಭಿವೃದ್ಧಿಯ ಪ್ರವಾಹವೇ ಜರುಗಿದೆ‌. ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಈಗಾಗಲೇ ಅರ್ಚಕರ ಕಣ್ಮಣಿ, ಕರ್ನಾಟಕದ ಬಂಗಾರದ ಮನುಷ್ಯ ಎಂದು ಅರ್ಚಕ ಸಮೂಹದಿಂದ ಮನೆಮಾತಾಗಿದ್ದಾರೆ. ಮುಜರಾಯಿ ಇಲಾಖೆಯಲ್ಲಿ ಧಾರ್ಮಿಕ ಸ್ನೇಹಿ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ರೂಪಿಸಿ, ಐತಿಹಾಸಿಕ ನಿರ್ಣಯಗಳನ್ನು ಕೈಗೊಂಡು ಇತಿಹಾಸ ಸೃಷ್ಟಿಸಿರುವ ಏಕೈಕ ಮುಜರಾಯಿ…

Read More

ನವದೆಹಲಿ: ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನಲ್ಲಿ ಟಿ.ಕಾಗೇಪುರ ಗ್ರಾಮದ ಖಾಸಗಿ ವಸತಿ ಶಾಲೆ ಕಲುಷಿತ ಆಹಾರ ಸೇವನೆಯಿಂದ ಓರ್ವ ವಿದ್ಯಾರ್ಥಿ ಸಾವನ್ನಪ್ಪಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಮಂಡ್ಯ ಸಂಸದರು ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು, ಅಸ್ವಸ್ಥ ಮಕ್ಕಳ ಆರೋಗ್ಯದ ಬಗ್ಗೆ ತುರ್ತು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಮಳವಳ್ಳಿ ತಹಶೀಲ್ದಾರ್ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳಿಂದ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡಿರುವ ಸಚಿವರು; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳ ಆರೋಗ್ಯ ಪರಿಸ್ಥಿತಿಯನ್ನು ವಿಚಾರಿಸಿಕೊಂಡರು. ಬೇಸಿಗೆಯಲ್ಲಿ ಕುಡಿಯುವ ನೀರು ಹಾಗೂ ಆಹಾರದ ಬಗ್ಗೆ ಜಾಗ್ರತೆಯಿಂದ ಇರಬೇಕು. ಮಕ್ಕಳಿಗೆ ನೀಡಲಾಗುವು ಆಹಾರದ ಬಗ್ಗೆ ಕಟ್ಟೆಚ್ಚರ ವಹಿಸಬೇಕು ಎಂದು ಸ್ಪಷ್ಟ ನೀಡಿರುವ ಸಚಿವರು; ಮೃತಪಟ್ಟಿರುವ ವಿದ್ಯಾರ್ಥಿ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಸರ್ಕಾರಿ ಅಥವಾ ಖಾಸಗಿ ವಸತಿ ಶಾಲೆಗಳಲ್ಲಿ ಆಹಾರದ ಬಗ್ಗೆ ಅಧಿಕಾರಿಗಳು, ಸಂಬಂಧಪಟ್ಟ ಸಿಬ್ಬಂದಿ ಎಚ್ಚರಿಕೆ ವಹಿಸಬೇಕು. ಈ ಬಗ್ಗೆ ಕಠಿಣ ನಿಗಾ ಇಡಬೇಕು ಎಂದು ತಹಶೀಲ್ದಾರ್ ಅವರಿಗೆ ಸಚಿವರು…

Read More

ಗದಗ : “ಸಮಬಾಳು ಸಮಪಾಲು ಎನ್ನುವ ವಿಜೆಯೇಂದ್ರ ಅವರು ಅಲ್ಪಸಂಖ್ಯಾತರಲ್ಲಿ ಯಾರದರೊಬ್ಬರನ್ನು ಎಂಎಲ್‌ಸಿ, ರಾಜ್ಯಸಭಾ ಸದ್ಯಸರನ್ನಾಗಿ, ಕೇಂದ್ರ ಸಂಪುಟದಲ್ಲಿ ಮಂತ್ರಿ ಮಾಡಿಕೊಳ್ಳಲಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದರು. ಗದಗದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಎಕ್ಸ್ (ಟ್ವೀಟ್) ಬಗ್ಗೆ ಕೇಳಿದಾಗ, “ಅವರ ಪಕ್ಷದಲ್ಲಿ ಇಬ್ಬರು ಕ್ರಿಶ್ಚಿಯನ್ಸ್, ಮೂರು ಜನ ಮುಸ್ಲಿಮರಿಗೆ ಅವಕಾಶ ಮಾಡಿಕೊಡಲಿ. ಹೀಗೆ ಮಾಡಿದಾಗ ಮಾತ್ರ ವಿಜಯೇಂದ್ರ ಅವರಿಗೆ ಸಮಬಾಳು ಸಮಪಾಲು ಎಂದು ಮಾತನಾಡಲು ಒಂದು ಅವಕಾಶ ಸಿಗುತ್ತದೆ” ಎಂದರು. ವಿಜಯೇಂದ್ರ ಕುವೆಂಪು ಅವರು ಬರೆದಿರುವ ನಾಡಗೀತೆಯನ್ನು ವಿಜಯೇಂದ್ರ ಸರಿಯಾಗಿ ಓದಲಿ. ಯಾರು, ಯಾರು ಸೇರಿದರೆ ಶಾಂತಿಯ ತೋಟ ಆಗುತ್ತದೆ ಎನ್ನುವುದನ್ನು ತಿಳಿದುಕೊಳ್ಳಲಿ. ಇನ್ನು ಪಾಪ ಈಗ ಪಕ್ಷದ ಅಧ್ಯಕ್ಷರಾಗಿದ್ದಾರೆ. ಅವರ ಲೆವೆಲ್ ನಲ್ಲಿ ಇರಲಿ” ಎಂದರು. “ಮುಸ್ಲಿಂ, ಸಿಕ್, ಜೈನ, ಪಾರ್ಸಿ, ಬೌದ್ದರು ಇವರೆಲ್ಲಾ ನಮ್ಮ‌ ದೇಶದ ಹಾಗೂ ಕರ್ನಾಟಕದ ಪ್ರಜೆಗಳು. ನಾವು ಎಲ್ಲಾ ಅಲ್ಪಸಂಖ್ಯಾತರು, ಹಿಂದುಳಿದವರ…

Read More

ಮ್ಯಾಸಿಡೋನಿಯಾ: ಉತ್ತರ ಮ್ಯಾಸಿಡೋನಿಯಾದ ನೈಟ್‌ಕ್ಲಬ್‌ನಲ್ಲಿ ಸಂಗೀತ ಕಚೇರಿಯ ಸಂದರ್ಭದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಸುಮಾರು 51 ಜನರು ಸಾವನ್ನಪ್ಪಿದ್ದಾರೆ ಮತ್ತು 100 ಜನರು ಗಾಯಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ. ವರದಿಯ ಪ್ರಕಾರ, ಕೊಕಾನಿಯ ಡಿಸ್ಕೋಥೆಕ್‌ನಲ್ಲಿ ಸುಮಾರು 1,500 ಜನರು ಸಂಗೀತ ಕಚೇರಿಯನ್ನು ವೀಕ್ಷಿಸಲು ಸೇರಿದ್ದರು. ದೇಶದ ಪ್ರಸಿದ್ಧ ಹಿಪ್-ಹಾಪ್ ಜೋಡಿಯಾದ ಡಿಎನ್‌ಕೆ ಅವರ ಪ್ರದರ್ಶನದ ಸಮಯದಲ್ಲಿ ಕೊಕಾನಿಯ ‘”ಪಲ್ಸ್” ಎಂಬ ನೈಟ್‌ಕ್ಲಬ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಭಾನುವಾರ ಮಧ್ಯರಾತ್ರಿ ಸಂಗೀತ ಕಚೇರಿ ಪ್ರಾರಂಭವಾಯಿತು. “ಇದು ಮ್ಯಾಸಿಡೋನಿಯಾಗೆ ಕಷ್ಟಕರ ಮತ್ತು ಅತ್ಯಂತ ದುಃಖದ ದಿನ. ಹಲವಾರು ಯುವ ಜೀವಗಳ ನಷ್ಟವನ್ನು ಸರಿಪಡಿಸಲಾಗದು, ಮತ್ತು ಕುಟುಂಬಗಳು, ಪ್ರೀತಿಪಾತ್ರರು ಮತ್ತು ಸ್ನೇಹಿತರ ನೋವು ಅಳೆಯಲಾಗದು” ಎಂದು ಉತ್ತರ ಮ್ಯಾಸಿಡೋನಿಯಾದ ಪ್ರಧಾನಿ ಕ್ರಿಸ್ಟಿಜನ್ ಮಿಕೊಸ್ಕಿ ‘X’ ನಲ್ಲಿ ಪೋಸ್ಟ್‌ನಲ್ಲಿ ಬರೆದಿದ್ದಾರೆ. ಸಂತ್ರಸ್ತರಿಗೆ ಸಹಾಯ ಮಾಡಲು ಸರ್ಕಾರ ಎಲ್ಲವನ್ನೂ ಮಾಡುತ್ತದೆ ಎಂದು ಪ್ರಧಾನಿ ಭರವಸೆ ನೀಡಿದರು. “ಜನರು ಮತ್ತು ಸರ್ಕಾರವು ಅವರ ನೋವನ್ನು ಸ್ವಲ್ಪವಾದರೂ ಕಡಿಮೆ ಮಾಡಲು…

Read More

ಬೆಂಗಳೂರು: ರಾಜ್ಯಾದ್ಯಂತ ಹಬ್ಬಿರುವ ಡ್ರಗ್ಸ್ ಜಾಲವನ್ನು ಬೇರುಸಹಿತ ಕಿತ್ತೊಗೆಯುವುದು ನಮ್ಮ ಸರ್ಕಾರದ ಗುರಿಯಾಗಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಪ್ರಮಾಣದ ಮಾದಕ ದ್ರವ್ಯವನ್ನು ಪತ್ತೆಹಚ್ಚಿ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಮಂಗಳೂರು ಸಿಟಿ ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ. ಸುಮಾರು ₹75 ಕೋಟಿಗೂ ಅಧಿಕ ಮೌಲ್ಯದ 37 ಕೆ.ಜಿ ಎಂಡಿಎಂಎ ಮಾದಕ ದ್ರವ್ಯವನ್ನು ವಶಕ್ಕೆ ಪಡೆದು, ಸಾವಿರಾರು ಯುವ ಜನರ ಬದುಕಿಗೆ ಎದುರಾಗಲಿದ್ದ ಬಹುದೊಡ್ಡ ಅಪಾಯವೊಂದನ್ನು ನಮ್ಮ ಪೊಲೀಸರು ನಿವಾರಿಸಿದ್ದಾರೆ ಎಂದಿದ್ದಾರೆ. ನಾವು ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೇ ಮಾದಕದ್ರವ್ಯ ವ್ಯಸನಮುಕ್ತ ಸಮಾಜ ನಿರ್ಮಾಣದ ಪಣತೊಟ್ಟು, ಡ್ರಗ್ಸ್ ಮಾರಾಟ ಮತ್ತು ಸೇವನೆಯ ವಿರುದ್ಧ ಸಮರ ಸಾರಿದ್ದೇವೆ. ಕೆಲವು ತಿಂಗಳುಗಳ ಹಿಂದೆ ನಾನು ಮಂಗಳೂರಿಗೆ ಭೇಟಿನೀಡಿದ್ದ ವೇಳೆ ಜಿಲ್ಲೆಯಲ್ಲಿ ಡ್ರಗ್ಸ್ ಹಾವಳಿ ತಡೆಗಟ್ಟಿ ಸ್ವಸ್ಥ ಪರಿಸರ ಕಟ್ಟಿಕೊಡುವ ವಾಗ್ದಾನವನ್ನು ಜಿಲ್ಲೆಯ ಜನರಿಗೆ ನೀಡಿದ್ದೆ. ನಮ್ಮ ಈ ಪ್ರಯತ್ನದ ಭಾಗವಾಗಿ ಈಗ ಬಹುದೊಡ್ಡ…

Read More

ಬೆಂಗಳೂರು : ವಯೋವೃದ್ಧ ಅತ್ತೆ ಮಾವನ ಮೇಲೆ ಅಮಾನಮೀಯವಾಗಿ ಹಲ್ಲೆ ಮಾಡಿ, ಮಕ್ಕಳ ಜೊತೆಗೂಡಿ ಕಿರುಕುಳ ಕೊಟ್ಟಿದ್ದ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯೆಗೆ ವಿರುದ್ಧ ವೈದ್ಯಕೀಯ ಶಿಕ್ಷಣ ಇಲಾಖೆ ಷೋಕಾಸ್‌ ನೋಟಿಸ್‌ ಜಾರಿ ಮಾಡಿದ್ದು ಕೂಡಲೇ ಇದಕ್ಕೆ ಉತ್ತರ ನೀಡಬೇಕೆಂದು ಸೂಚನೆ ನೀಡಲಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್‌ ಮೋಶಿನ್‌ ನಿರ್ದೇಶನದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯ ವೈದ್ಯೆ ಡಾ. ಪ್ರಿಯದರ್ಶಿನಿ ಅವರಿಗೆ ಲಿಖಿತ ಸಮಾಜಾಯಿಷಿ ನೀಡಲು ಸೂಚಿಸಲಾಗಿದೆ. ತಪ್ಪಿದ್ದಲ್ಲಿ ಮುಂದಿನ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ. ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಡಾ. ಪ್ರಿಯದರ್ಶಿನಿ ಎನ್‌. ಇತ್ತೀಚೆಗೆ ತಮ್ಮ ಮಕ್ಕಳ ಜೊತೆಗೂಡಿ ವಯೋವೃದ್ಧ ಅತ್ತೆ, ಮಾವಂದಿರನ್ನು ಥಳಿಸಿದ ವೀಡಿಯೋ ಭಾರಿ ವೈರಲ್‌ ಆಗಿತ್ತು. ಕಳೆದ ಹತ್ತು ವರ್ಷದಿಂದಲೂ ಡಾ. ಪ್ರಿಯದರ್ಶಿನಿ ಕಿರುಕುಳ ನೀಡುತ್ತಿರುವುದು ಗಮನಕ್ಕೆ ಬಂದಿದೆ. ಪ್ರಿಯದರ್ಶಿನಿ ಈಗಾಗಲೇ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಆದರೂ ಅತ್ತೆ ಮಾವನ…

Read More

ಚಾಮರಾಜನಗರ: ತಲೆಯಲ್ಲಿ ಕೂದಲಿಲ್ಲ. ಹೊರಗೆ ತಲೆಯಲ್ಲಿ ಕೂದಲಿಲ್ಲದ ಗಂಡನ ಜೊತೆಗೆ ಹೋದ್ರೆ ನಾಚಿಕೆ ಆಗುತ್ತೆ ಎಂಬುದಾಗಿ ಕಿರುಕುಳ ನೀಡುತ್ತಿದ್ದಂತ ಪತ್ನಿಯ ಕಾಟಕ್ಕೆ ಬೇಸತ್ತು, ಪತಿಯೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ನಡೆದಿದೆ. ಚಾಮರಾಜನಗರ ಉಡಿಗಾಲದ ಪರಶಿವಮೂರ್ತಿ(32) ಎಂಬುವರೇ ಪತ್ನಿಯ ಕಿರುಕುಳಕ್ಕೆ ಬೇಸತ್ತು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವಂತ ವ್ಯಕ್ತಿಯಾಗಿದ್ದಾರೆ. 2 ವರ್ಷಗಳ ಹಿಂದೆ ಪರಶಿವಮೂರ್ತಿ ಅವರು ಕೆಳಕಿಪುರದ ಮಮತಾ ಎಂಬುವರೊಂದಿಗೆ ವಿವಾಹವಾಗಿದ್ದರು. ಪರಶಿವಮೂರ್ತಿಯ ತಲೆ ಕೂದಲು ಮದುವೆ ನಂತ್ರ ಉದುರಿತ್ತು. ಇದರಿಂದಾಗಿ ಪತ್ನಿ ಮಮತಾ ದಿನಾಲೂ ತಲೆಯಲ್ಲಿ ಕೂದಲಿಲ್ಲ ಎಂಬುದಾಗಿ ಕಿರುಕುಳ ನೀಡುತ್ತಿದ್ದಳಂತೆ. ಇನ್ನೂ ತಲೆಯಲ್ಲಿ ಕೂದಲಿಲ್ಲದ ಪರಶಿವಮೂರ್ತಿಯನ್ನು ಗಂಡ ಅನ್ನುವುದಕ್ಕೂ ಅವಮಾನ ಆಗುತ್ತದೆ. ಹೊರಗೆ ಹೋಗೋದಕ್ಕೂ ನನಗೆ ನಾಚಿಕೆ ಆಗುತ್ತದೆ ಎಂಬುದಾಗಿ ಅಪಹಾಸ್ಯ ಮಾಡುತ್ತಿದ್ದಳಂತೆ. ಇದಲ್ಲದೇ ತಾಳಿಯನ್ನು ತೆಗೆದಿಟ್ಟಿರುವಂತ ಪೋಟೋವನ್ನು ವಾಟ್ಸ್ ಆಪ್ ಸ್ಟೇಟಸ್ ಹಾಕಿದ್ದಳಂತೆ. ಈ ವಿಚಾರಕ್ಕಾಗಿ ಪರಶಿವಮೂರ್ತಿ ಹಾಗೂ ಮಮತಾ ನಡುವೆ ಜಗಳ ಕೂಡ ಆಗಿತ್ತಂತೆ. ಇದಷ್ಟೇ ಅಲ್ಲದೇ ಪರಶಿವಮೂರ್ತಿ ವಿರುದ್ಧ ಮಮತಾ…

Read More

ರಾಮನಗರ: ಜಿಲ್ಲೆಯ ಬಿಡದಿ ಬಳಿಯಿರುವಂತ ಟೊಯೋಟೋ ಕಂಪನಿಯ ಟಾಯ್ಲೆಟ್ಟಿನಲ್ಲಿ ಪಾಕ್ ಪರ ಬರವನ್ನು, ಕನ್ನಡಿಗರ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿ ಕಿಡಿಗೇಡಿಗಳು ಬರೆದಿರುವ ವಿಚಾರ ತಿಳಿದು ಬಂದಿದೆ. ರಾಮನಗರದ ಬಿಡದಿಯಲ್ಲಿರುವ ಟೊಯೋಟೋ ಕಂಪನಿಯ ಶೌಚಾಲಯದಲ್ಲಿ ಪಾಕಿಸ್ತಾನ ಜೈ, ಕನ್ನಡಿಗರು ಸೂ* ಮಕ್ಕಳು ಎಂಬುದಾಗಿ ಕಿಡಿಗೇಡಿಗಳು ಅವಹೇಳನಕಾರಿ ಬರಹವನ್ನು ಬರೆದಿದ್ದಾರೆ. ಇದು ಕನ್ನಡಪರ ಸಂಘಟನೆಗಳ ಆಕ್ರೋಶಕ್ಕೂ ಕಾರಣವಾಗಿ, ಕಂಪನಿಯ ಬಳಿಯಲ್ಲಿ ಪ್ರತಿಭಟನೆಗೂ ಕಾರಣವಾಯ್ತು. ಈ ರೀತಿಯ ಅವಹೇಳನಕಾರಿ ಬರಹ ಬರೆದಂತ ಸಿಬ್ಬಂದಿಗೆ ಟೊಯೋಟೋ ಕಾನೂನು ಕ್ರಮ ಜರುಗಿಸುವುದಾಗಿಯೂ ಸುತ್ತೋಲೆ ಹೊರಡಿಸಿ ಎಚ್ಚರಿಕೆ ನೀಡಿದೆ. ಅಂದಹಾಗೇ ಟೊಯೋಟೋ ಕಂಪನಿಯ ಶೌಚಾಲಯದ ಗೋಡೆಯ ಮೇಲೆ ಪಾಕಿಸ್ತಾನ ಜೈ, ಕನ್ನಡಗಿರು ಸೂ* ಮಕ್ಕಳು ಎಂಬುದಾಗಿ ಬರೆಯಲಾಗಿದೆ. ಈ ರೀತಿಯಾಗಿ ಬರೆದಿದ್ದು ಯಾರು ಎನ್ನುವುದು ಈವರೆಗೆ ತಿಳಿದು ಬಂದಿಲ್ಲ. ಈ ರೀತಿಯಾಗಿ ಬರೆದಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ದೇಶದ್ರೋಹ ಅಪರಾಧದ ಅಡಿಯಲ್ಲಿ ಅವರ ವಿರುದ್ಧ ಕೇಸ್ ದಾಖಲಿಸಬೇಕು ಅಂತ ಕನ್ನಡಪರ ಸಂಘಟನೆಯ ಮುಖಂಡರು ಆಗ್ರಹಿಸಿದ್ದಾರೆ. https://kannadanewsnow.com/kannada/fight-over-water-food-wedding-scheduled-for-today-cancelled/…

Read More

ಚಿತ್ರದುರ್ಗ: ಆ ವರ ನಿಗದಿತ ಸಮಯಕ್ಕೆ ಬಾರದೇ ರಾತ್ರಿ 9.30ಕ್ಕೆ ಚೌಟರಿಗೆ ಆಗಮಿಸಿದ್ದರು. ಹೀಗಾಗಿ ರಾತ್ರಿ ನಡೆಯಬೇಕಿದ್ದಂತ ಆರತಕ್ಷತೆಯೇ ನಡೆದಿರಲಿಲ್ಲ. ಈ ಬಳಿಕ ವರನ ಕೊಠಡಿಗೆ ನೀರಿಟ್ಟಿಲ್ಲ. ನೀರು ಕೊಟ್ಟಿಲ್ಲ, ರಾತ್ರಿ ಊಟವೂ ವರನ ಕಡೆಯ ಸಂಬಂಧಿಕರಿಗೆ ಸಿಕ್ಕಿಲ್ಲ ಅಂತ ಜಗಳ ಉಂಟಾಗಿದೆ. ಈ ಜಗಳ ತಾರಕಕ್ಕೇರಿ ಇಂದು ನಡೆಯಬೇಕಿದ್ದಂತ ಮದುವೆಯೇ ಮುರಿದು ಬಿದ್ದಿರುವಂತ ಘಟನೆ ಹಿರಿಯೂರು ಪಟ್ಟಣದಲ್ಲಿ ನಡೆದಿದೆ. ನೀರು, ಊಟದ ವಿಚಾರಕ್ಕೆ ಜಗಳ, ಮದುವೆ ಕ್ಯಾನ್ಸಲ್ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಬಲಿಜ ಸಮುದಾಯ ಭವನದಲ್ಲಿ ಜಗಳೂರು ಮೂಲದ ವರ ಹಾಗೂ ಶಿರಾ ಮೂಲದ ವಧುವಿನ ಮದುವೆ ನಿಗದಿಯಾಗಿತ್ತು. ನಿನ್ನೆ ರಾತ್ರಿ ವರ ಆರತಕ್ಷತೆಯ ಸಮಯಕ್ಕೆ ಬಾರದೇ ರಾತ್ರಿ 9.30ಕ್ಕೆ ಆಗಮಿಸಿದ್ದರಿಂದ ರಿಸೆಪ್ಷನ್ ಕೂಡ ನಡೆಯದೇ ರದ್ದುಗೊಂಡಿತ್ತು. ಆ ನಂತ್ರ ಊಟಕ್ಕೆ ತೆರಳಿದಂತ ವರನ ಕಡೆಯ ಕೆಲವರಿಗೆ ಊಟ ಮುಗಿದಿದ್ದರಿಂದ ಖಾಲಿಯಾಗಿದ್ದಕ್ಕೆ ಗಲಾಟೆ ಕೂಡ ಮಾಡಲಾಗಿತ್ತಂತೆ. ಈ ಗಲಾಟೆ ತಾರಕಕ್ಕೇರಿದ್ದರಿಂದ ವರನ ರೂಮಿನಲ್ಲಿ ನೀರು ಇಟ್ಟಿಲ್ಲ ಎಂಬುದಕ್ಕೂ ಕಿರಿಕ್…

Read More