Subscribe to Updates
Get the latest creative news from FooBar about art, design and business.
Author: kannadanewsnow09
ಹೈದರಾಬಾದ್: ಕೇಂದ್ರೀಯ ತನಿಖಾ ದಳ (CBI) ನಿರ್ದೇಶಕ ಪ್ರವೀಣ್ ಸೂದ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೂಡಲೇ ಅವರನ್ನು ಹೈದರಾಬಾದ್ ನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಸಿಬಿಐ ನಿರ್ದೇಶಕರಾಗಿರುವಂತ ಪ್ರವೀಣ್ ಸೂದ್ ಅವರು ಆಂಧ್ರಪ್ರದೇಶದ ದೇವಸ್ಥಾನ ನಗರಿಯಾದ ಶ್ರೀಕಾಕುಳಂಗೆ ಭೇಟಿ ನೀಡಿದ್ದರು. ಆ ಬಳಿಕ ಹೈದರಾಬಾದ್ ಗೆ ವಾಪಾಸ್ ಆಗುತ್ತಿದ್ದರು. ಈ ಸಂದರ್ಭದಲ್ಲಿ ಪ್ರವೀಣ್ ಸೂದ್ ಇಂದು ಮಧ್ಯಾಹ್ನ ಮಾರ್ಗಮಧ್ಯದಲ್ಲಿ ಅಸ್ವಸ್ಥತೆಗೊಂಡಿದ್ದಾರೆ. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರವೀಣ್ ಸೂದ್ ಅವರಿಗೆ ಹೈದರಾಬಾದಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರಿಗೆ ತೀವ್ರ ನಿಗಾ ಘಟದಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂಬುದಾಗಿ ತಿಳಿದು ಬಂದಿದೆ. https://kannadanewsnow.com/kannada/these-trains-are-partially-canceled-due-to-traffic-control-and-rescheduling/ https://kannadanewsnow.com/kannada/letter-from-mla-gopalakrishna-belur-to-cm-siddaramaiah-to-make-sagara-taluk-a-new-district/
ಬೆಳಗಾವಿ: ಬೆಳಗಾವಿ ರೈಲು ನಿಲ್ದಾಣದಲ್ಲಿ ನಡೆಯುತ್ತಿರುವ ಯಾರ್ಡ್ ಮಾರ್ಪಾಡು ಕಾಮಗಾರಿ ಹಿನ್ನಲೆಯಲ್ಲಿ, ಈ ಕೆಳಗಿನ ರೈಲುಗಳ ಸಂಚಾರದಲ್ಲಿ ಭಾಗಶಃ ರದ್ದು, ನಿಯಂತ್ರಣ ಹಾಗೂ ತಡವಾಗಿ ಸಂಚರಿಸಲಿದೆ. ಭಾಗಶಃ ರದ್ದು: 1. ರೈಲು ಸಂಖ್ಯೆ 07302 ಮೀರಜ್– ಬೆಳಗಾವಿ ವಿಶೇಷ ರೈಲು ಸೆ. 7ರಿಂದ 10ರವರೆಗೆ ಘಟಪ್ರಭಾದಲ್ಲಿ ತನ್ನ ಪ್ರಯಾಣ ಕೊನೆಗೊಳಿಸಲಿದೆ. ಈ ರೈಲಿನ ಸಂಚಾರ ಘಟಪ್ರಭಾ ಮತ್ತು ಬೆಳಗಾವಿ ನಡುವೆ ರದ್ದುಗೊಳಿಸಲಾಗಿದೆ. 2. ರೈಲು ಸಂಖ್ಯೆ 07303 ಬೆಳಗಾವಿ – ಮೀರಜ್ ವಿಶೇಷ ರೈಲು ಸೆ. 7ರಿಂದ 10ರವರೆಗೆ ಬೆಳಗಾವಿಯಿಂದ ಹೊರಡುವ ಬದಲು ಘಟಪ್ರಭಾದಿಂದ ಹೊರಡಲಿದೆ. ಈ ರೈಲಿನ ಸಂಚಾರ ಬೆಳಗಾವಿ ಮತ್ತು ಘಟಪ್ರಭಾ ನಡುವೆ ರದ್ದಾಗಿದೆ. ನಿಯಂತ್ರಣ ಮತ್ತು ಮರುನಿಗದಿ: 1. ಸೆ. 7ರಂದು ಹೊರಡುವ ರೈಲು ಸಂಖ್ಯೆ 16534 ಕೆಎಸ್ಆರ್ ಬೆಂಗಳೂರು – ಭಗತ್ ಕಿ ಕೋಠಿ ಎಕ್ಸ್‌ಪ್ರೆಸ್ ರೈಲು ಮಾರ್ಗದಲ್ಲಿ 30 ನಿಮಿಷಗಳ ಕಾಲ ನಿಯಂತ್ರಿಸಲ್ಪಡಲಿದೆ. 2. ಸೆ. 8ರಂದು ಹೊರಡುವ ಮೂರು ರೈಲುಗಳಾದ ಸಂಖ್ಯೆ 06529…
ಹಾವೇರಿ: ಜಿಲ್ಲೆಯ ಕಳ್ಳಿಹಾಳದ ಎಸ್ಸಿ, ಎಸ್ಟಿ ವಸತಿಯುತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ಸಹ ಪ್ರಾಧ್ಯಾಪಕ ಡಾ.ಆನಂದ ಭೈರಾಪುರ ಅವರಿಗೆ ಪ್ರಾಧ್ಯಾಪಕರ ಹುದ್ದೆಗೆ ಪದೋನ್ನತಿ ನೀಡಿ ಸರ್ಕಾರ ಆದೇಶಿಸಿದೆ. ಹಾವೇರಿ ಜಿಲ್ಲೆಯ ಕಳ್ಳಿಹಾಳದ SC/ST ವಸತಿಯುತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತಿಹಾಸ ವಿಷಯದ ಸಹ ಪ್ರಾದ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಡಾ.ಆನಂದ ಭೈರಾಪುರ ಅವರಿಗೆ ಸಹ ಪ್ರಾದ್ಯಾಪಕ ಹುದ್ದೆಯಿಂದ ಪ್ರಾದ್ಯಾಪಕ (Associate Professor to Professor) ಹುದ್ದೆಗೆ ಪದೋನ್ನತಿ (Promotion) ನೀಡಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಮೂಲತಃ ಇವರು ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಅರಸನಾಳು ಗ್ರಾಮದ ದಿ.ಭೈರಾಪುರದ ಬಸಪ್ಪ ದಿ.ಸೋಮಮ್ಮ- ಪಕ್ಕಿರಮ್ಮ ಇವರ ಪುತ್ರರಾಗಿದ್ದು, ಪ್ರಾಥಮಿಕ ಶಿಕ್ಷಣವನ್ನು ಸ್ವಗ್ರಾಮದಲ್ಲಿ, High School, PUC ಶಿಕ್ಷಣವನ್ನು ಧಾರವಾಡದಲ್ಲಿ BA, MA, M.Phill, ಹಾಗೂ Ph.D ಪದವಿಯನ್ನು ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದಲ್ಲಿ, B.Ed ಪದವಿಯನ್ನು ಚಿತ್ರದುರ್ಗದಲ್ಲಿ ಹಾಗೂ M.Ed ಪದವಿಯನ್ನು ಮೈಸೂರಿನಲ್ಲಿ ಪೂರೈಸಿದ್ದಾರೆ. ಡಾ.ವಾರಿಜಾ ಆರ್ ಬೋಳಾರ್ ಇವರ ಮಾರ್ಗದರ್ಶನದಲ್ಲಿ…
ಬೆಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್ ಸಿಕ್ಕಿದೆ. ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಬುರುಡೆಯನ್ನು ತಂದುಕೊಟ್ಟಿದ್ದೇ ಸೌಜನ್ಯ ಮಾವ ಎಂಬುದಾಗಿ ತಿಳಿದು ಬಂದಿದೆ. ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಬುರುಡೆ ತಂದು ಕೊಟ್ಟಿದ್ದೇ ಸೌಜನ್ಯ ಮಾವ ವಿಠಲ್ ಗೌಡ ಎಂಬುದಾಗಿ ಎಸ್ಐಟಿ ವಿಚಾರಣೆ ವೇಳೆಯಲ್ಲಿ ತಿಳಿದು ಬಂದಿದೆ. ಹೀಗಾಗಿ ಯಾವುದೇ ಕ್ಷಣದಲ್ಲಿ ಎಸ್ಐಟಿಯಿಂದ ವಿಠಲ್ ಗೌಡ ಅರೆಸ್ಟ್ ಆಗುವ ಸಾಧ್ಯತೆ ಇದೆ. ಅಂದಹಾಗೇ ಚಿನ್ನಯ್ಯ ಹಾಗೂ ವಿಠಲ್ ಗೌಡ ಜೊತೆಗೆ ಹಳೆಯ ಸ್ನೇಹ ಸಂಬಂಧವಿತ್ತಂತೆ. ನೇತ್ರಾವತಿ ನದಿ ತೀರದಲ್ಲಿ ಚಿಕ್ಕ ಹೋಟೆಲ್ ಅನ್ನು ವಿಠಲ್ ಗೌಡ ನಡೆಸುತ್ತಿದ್ದಾರೆ. ಇಂತಹ ವಿಠಲ್ ಗೌಡ ಅವರ ಅಂಗಡಿಯಲ್ಲೇ ಚಿನ್ನಯ್ಯ ತಂಗುತ್ತಿದ್ದರಂತೆ. https://kannadanewsnow.com/kannada/truck-car-and-two-wheeler-chain-accident-one-dead-three-in-serious-condition/ https://kannadanewsnow.com/kannada/eat-badami-every-day-enjoy-these-health-benefits/
ಪ್ರತಿದಿನ ಬಾದಾಮಿಯನ್ನು ನಿಮ್ಮ ಆಹಾರದ ಜೊತೆಗೆ ತಿನ್ನೋದಕ್ಕೆ ಶುರು ಮಾಡಿದ್ರೇ, ಅನೇಕ ಆರೋಗ್ಯ ಪ್ರಯೋಜನಗಳಿದ್ದಾವೆ. ಅವುಗಳ ಬಗ್ಗೆ ಮುಂದೆ ಓದಿ. ಮೆದುಳಿಗೆ ಒಳ್ಳೆಯದು ಬಾದಾಮಿಯಲ್ಲಿ ವಿಟಮಿನ್ ಇ ಮತ್ತು ಆರೋಗ್ಯಕರ ಕೊಬ್ಬುಗಳು ಇರುತ್ತವೆ. ಇದು ಸ್ಮರಣಶಕ್ತಿ ಮತ್ತು ಗಮನವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಪ್ರತಿದಿನ ಕೆಲವು ಬಾದಾಮಿಗಳನ್ನು ತಿನ್ನುವುದು ಮೆದುಳಿನ ಕಾರ್ಯವನ್ನು ಉತ್ತಮಗೊಳಿಸಲು ಸಹಾಯ ಮಾಡುತ್ತದೆ, ವಿಶೇಷವಾಗಿ ನೀವು ವಯಸ್ಸಾದಂತೆ. ಹೃದಯದ ಆರೋಗ್ಯವನ್ನು ಬೆಂಬಲಿಸುತ್ತದೆ ಬಾದಾಮಿಯಲ್ಲಿ ಆರೋಗ್ಯಕರ ಕೊಬ್ಬುಗಳು ಮತ್ತು ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ. ಇದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ನಿಯಮಿತ ಸೇವನೆಯು ಹೃದಯ ಕಾಯಿಲೆಯ ಅಪಾಯವನ್ನು ಕಡಿಮೆ ಮಾಡುತ್ತದೆ ಮತ್ತು ನಿಮ್ಮ ಹೃದಯವನ್ನು ಬಲಪಡಿಸುತ್ತದೆ. ತೂಕ ನಿರ್ವಹಣೆಯಲ್ಲಿ ಸಹಾಯ ಮಾಡುತ್ತದೆ ಬಾದಾಮಿ ಫೈಬರ್ ಮತ್ತು ಪ್ರೋಟೀನ್‌ನಿಂದ ತುಂಬಿರುತ್ತದೆ, ಇದು ನಿಮಗೆ ಹೆಚ್ಚು ಸಮಯದವರೆಗೆ ಹೊಟ್ಟೆ ತುಂಬಿದ ಅನುಭವವನ್ನು ನೀಡುತ್ತದೆ. ಅವುಗಳನ್ನು ತಿಂಡಿಯಾಗಿ ತಿನ್ನುವುದು ಹಸಿವನ್ನು ನಿಯಂತ್ರಿಸಲು ಮತ್ತು ಅತಿಯಾಗಿ ತಿನ್ನುವುದನ್ನು ತಡೆಯಲು ಸಹಾಯ ಮಾಡುತ್ತದೆ.…
ಚಾಮರಾಜನಗರ: ಜಿಲ್ಲೆಯಲ್ಲಿ ಲಾರಿ, ಕಾರು, ದ್ವಿಚಕ್ರ ವಾಹನದ ನಡುವೆ ಸರಣಿ ಅಪಘಾತ ಸಂಭವಿಸಿದೆ. ಈ ಅಪಘಾತದಿಂದಾಗಿ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಚಾಮರಾಜನಗರದ ಗಾಳಿಪುರ ಬೈಪಾಸ್ ನಲ್ಲಿ ಸರಣಿ ಅಪಘಾತ ಸಂಭವಿಸಿದೆ. ಲಾರಿ, ಕಾರು, ದ್ವಿಚಕ್ರವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ದ್ವಿಚಕ್ರ ವಾಹನದಲ್ಲಿದ್ದಂತ 10 ವರ್ಷದ ಮೆರಾನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಟಿವಿಎಸ್ ಎಕ್ಸ್ ಎಲ್ ನಲ್ಲಿ ನಾಲ್ವರು ಅಪ್ರಾಪ್ತ ಸಹೋದರರು ತೆರಳುತ್ತಿದ್ದರು. ನಿಯಂತ್ರಣ ತಪ್ಪಿ ಲಾರಿಗೆ ಟಿವಿಎಸ್ ಎಕ್ ಎಲ್ ಡಿಕ್ಕಿಯಾಗಿದೆ. ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಮೆರಾನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸಹೋದರರಾದ ಆದಾನ್ ಪಾಷ, ಫೈಸಲ್, ರಿಯಾಜ್ ಸ್ಥಿತಿ ಗಂಭೀರವಾಗಿದೆ. ಅವರನ್ನು ಚಾಮರಾಜನಗರ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. https://kannadanewsnow.com/kannada/dharmasthala-case-court-orders-to-remand-mask-man-chinnayya-to-judicial-custody/ https://kannadanewsnow.com/kannada/the-chief-secretary-of-the-state-government-shalini-rajanish-met-with-the-imf-team-to-discuss-financial-stability/
ಬೆಂಗಳೂರು: ಭಾರತಕ್ಕೆ ಭೇಟಿ ನೀಡಿರುವ ವಾಷಿಂಗ್ಟನ್ ಡಿಸಿ ಯ ಅಂತರರಾಷ್ಟ್ರೀಯ ಹಣಕಾಸು ನಿಧಿ (IMF) ನಿಯೋಗದ ತಂಡವು ವಾರ್ಷಿಕ ಆರ್ಟಿಕಲ್ IV ಸಮಾಲೋಚನೆಯ ಭಾಗವಾಗಿ ಇಂದು ಸರ್ಕಾರದ ಮುಖ್ಯಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರನ್ನು ಭೇಟಿ ಮಾಡಿತು. ಈ ಅಂತರರಾಷ್ಟ್ರೀಯ ಹಣಕಾಸು ನಿಧಿ ನಿಯೋಗ ತಂಡವು ಸ್ಥೂಲ ಆರ್ಥಿಕ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುವುದರೊಂದಿಗೆ ಹಣಕಾಸು ಸಚಿವಾಲಯ, ಭಾರತೀಯ ರಿಸರ್ವ್ ಬ್ಯಾಂಕ್ ಮತ್ತು ಇತರ ಸರ್ಕಾರಿ ಅಧಿಕಾರಿಗಳಿಗೆ ನೀತಿ ಸಲಹೆಗಳನ್ನು ನೀಡುತ್ತದೆ. ರಾಜ್ಯದಲ್ಲಿ ಹೂಡಿಕೆಗೆ ಹೆಚ್ಚಿನ ಆದ್ಯತೆ ನೀಡುವುದು, ಹಣಕಾಸಿನ ಸುಸ್ಥಿರತೆಯನ್ನು ಕಾಪಾಡಿಕೊಳ್ಳುವುದು ಮತ್ತು ಮಾನವ ಬಂಡವಾಳವನ್ನು ಬಲಪಡಿಸುವುದರೊಂದಿಗೆ, ಹವಾಮಾನ ಕೇಂದ್ರಿತ ನೀತಿಗಳನ್ನು ಮುಂದುವರಿಸುವ ಕುರಿತು ರಚನಾತ್ಮಕ ಸವಾಲುಗಳನ್ನು ಗುರಿಯಾಗಿರಿಸಿಕೊಂಡು ರಾಜ್ಯ ಮಟ್ಟದ ಉಪಕ್ರಮಗಳ ಬಗ್ಗೆ ಮುಖ್ಯ ಕಾರ್ಯದರ್ಶಿಯವರೊಂದಿಗೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರಾದ ಉಮಾ ಮಹದೇವನ್ ಸಹ ಹಾಜರಿದ್ದರು. ಅಂತರರಾಷ್ಟ್ರೀಯ ಹಣಕಾಸು ನಿಧಿ ನಿಯೋಗ ತಂಡದಲ್ಲಿ ಸಹಾಯಕ ನಿರ್ದೇಶಕ ಮತ್ತು ಮಿಷನ್ ಮುಖ್ಯಸ್ಥರಾದ…
ಮಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿದ್ದಾಗಿ ತಪ್ಪೊಪ್ಪಿಗೆ ಹೇಳಿಕೆ ಪ್ರಕರಣದಲ್ಲಿ ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ. ಇಂದು ಎಸ್ಐಟಿ ವಶಕ್ಕೆ ನೀಡಿದ್ದಂತ ಅವಧಿ ಮುಕ್ತಾಯಗೊಂಡ ಹಿನ್ನಲೆಯಲ್ಲಿ ಅವರನ್ನು ಬೆಳ್ತಂಗಡಿಯ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದಂತ ಕೋರ್ಟ್, ಮಾಸ್ಕ್ ಮ್ಯಾನ್ ಚಿನ್ನಯ್ಯ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಈ ಹಿನ್ನಲೆಯಲ್ಲಿ ಧರ್ಮಸ್ಥಳ ಪ್ರಕರಣದಲ್ಲಿ ಬುರುಡೆ ಚಿನ್ನಯ್ಯಗೆ 14 ದಿನ ನ್ಯಾಯಾಂಗ ಬಂಧನವಾಗಿದೆ. ಹೀಗಾಗಿ ಅವರನ್ನು ಶಿವಮೊಗ್ಗ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ.
ವರದಹಳ್ಳಿಯ ಶ್ರೀಧರ ಸ್ವಾಮಿಗಳು ಅಪಾರಮಹಿಮೆಯುಳ್ಳ ಅವತಾರ ಪುರುಷರು. ವರದ ಹಳ್ಳಿಯು ಇವರು ತಪಸ್ಸು ಮಾಡಿದ ಪುಣ್ಯಭೂಮಿ. ಪ್ರತಿನಿತ್ಯ ಸಾವಿರಾರು ಭಕ್ತರು ವರದಹಳ್ಳಿಗೆ ಭೇಟಿಕೊಟ್ಟು ಗುರುಗಳ ಆಶೀರ್ವಾದ ಪಡೆಯುತ್ತಾರೆ. ಹಿಂದೂ ಧರ್ಮದ ಪ್ರವರ್ತಕರು ಆಗಿದ್ದು, ಶ್ರೀರಾಮನ ಭಕ್ತರು ಹಾಗೂ ಸಮರ್ಥ ರಾಮದಾಸರ ಶಿಷ್ಯರು ಆಗಿದ್ದರು. ಶ್ರೀಧರ ಸ್ವಾಮಿಗಳನ್ನು ದತ್ತಾತ್ರೇಯ ಅವತಾರವೆಂದು ಹೇಳುತ್ತಾರೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ…
ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ಗಳ ಎರಡನೇ ಮುಂದುವರಿದ ಸುತ್ತು ಹಾಗೂ ಎಂಜಿನಿಯರಿಂಗ್ ಇತ್ಯಾದಿ ಯುಜಿಸಿಇಟಿ ಕೋರ್ಸ್‌ಗಳ 3ನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಶನಿವಾರದಿಂದ ಆರಂಭವಾಗಿದ್ದು, ಕಾಷನ್ ಡೆಪಾಸಿಟ್ ಪಾವತಿಸಿ, ಇಚ್ಛೆ/ಆಯ್ಕೆಗಳನ್ನು ಅದಲು/ಬದಲು ಮಾಡಿಕೊಳ್ಳಲು ಹಾಗೂ ಹೊಸದಾಗಿ ಸೇರಿಸುವುದಕ್ಕೆ ಸೆ.8ರವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಸಮಯದ ಅಭಾವ ಇರುವ ಕಾರಣ, ನಿಗದಿತ ಕಾಲ ಮಿತಿಯಲ್ಲೇ ಎಲ್ಲ ಪೋಷಕರು/ವಿದ್ಯಾರ್ಥಿಗಳು ಮುಂಗಡ ಹಣ ಪಾವತಿಸಿ, ಇಚ್ಛೆ/ಆಯ್ಕೆಗಳನ್ನು ದಾಖಲಿಸುವ/ಅದಲು-ಬದಲು ಮಾಡುವ ಕೆಲಸವನ್ನು ಮಾಡಬೇಕು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಸಲಹೆ ನೀಡಿದ್ದಾರೆ. ಸೀಟ್ ಮ್ಯಾಟ್ರಿಕ್ಸ್‌ಗೆ ಹೊಸದಾಗಿ ಸೇರ್ಪಡೆಯಾದ ಬೆಳಗಾವಿಯ ಜೆಎನ್‌ಎಂಸಿ ಕಾಲೇಜಿನ 12 ವೈದ್ಯಕೀಯ ಸೀಟು ಹಾಗೂ ಮೈಸೂರಿನ ಫರೂಕಿಯ ದಂತ ವೈದ್ಯಕೀಯ ಕಾಲೇಜಿನ 40 ಸೀಟು ಹಾಗೂ ಬಿಜಿಎಸ್ ಗ್ಲೋಬಲ್ ದಂತ ವೈದ್ಯಕೀಯ ಕಾಲೇಜಿನ 50 ಸೀಟುಗಳನ್ನು ಆಸಕ್ತರು ತಮ್ಮ ಇಚ್ಛೆ/ಆಯ್ಕೆಗಳ ಪಟ್ಟಿಗೆ ಹೊಸದಾಗಿ ಸೇರಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಇದಲ್ಲದೆ, ಹಾಲಿ ಇರುವ…













