Subscribe to Updates
Get the latest creative news from FooBar about art, design and business.
Author: kannadanewsnow09
ಮಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿದ್ದಾಗಿ ತಪ್ಪೊಪ್ಪಿಗೆ ಹೇಳಿಕೆ ಪ್ರಕರಣದಲ್ಲಿ ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ. ಇಂದು ಎಸ್ಐಟಿ ವಶಕ್ಕೆ ನೀಡಿದ್ದಂತ ಅವಧಿ ಮುಕ್ತಾಯಗೊಂಡ ಹಿನ್ನಲೆಯಲ್ಲಿ ಅವರನ್ನು ಬೆಳ್ತಂಗಡಿಯ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದಂತ ಕೋರ್ಟ್, ಮಾಸ್ಕ್ ಮ್ಯಾನ್ ಚಿನ್ನಯ್ಯ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಈ ಹಿನ್ನಲೆಯಲ್ಲಿ ಧರ್ಮಸ್ಥಳ ಪ್ರಕರಣದಲ್ಲಿ ಬುರುಡೆ ಚಿನ್ನಯ್ಯಗೆ 14 ದಿನ ನ್ಯಾಯಾಂಗ ಬಂಧನವಾಗಿದೆ. ಹೀಗಾಗಿ ಅವರನ್ನು ಶಿವಮೊಗ್ಗ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ.
ವರದಹಳ್ಳಿಯ ಶ್ರೀಧರ ಸ್ವಾಮಿಗಳು ಅಪಾರಮಹಿಮೆಯುಳ್ಳ ಅವತಾರ ಪುರುಷರು. ವರದ ಹಳ್ಳಿಯು ಇವರು ತಪಸ್ಸು ಮಾಡಿದ ಪುಣ್ಯಭೂಮಿ. ಪ್ರತಿನಿತ್ಯ ಸಾವಿರಾರು ಭಕ್ತರು ವರದಹಳ್ಳಿಗೆ ಭೇಟಿಕೊಟ್ಟು ಗುರುಗಳ ಆಶೀರ್ವಾದ ಪಡೆಯುತ್ತಾರೆ. ಹಿಂದೂ ಧರ್ಮದ ಪ್ರವರ್ತಕರು ಆಗಿದ್ದು, ಶ್ರೀರಾಮನ ಭಕ್ತರು ಹಾಗೂ ಸಮರ್ಥ ರಾಮದಾಸರ ಶಿಷ್ಯರು ಆಗಿದ್ದರು. ಶ್ರೀಧರ ಸ್ವಾಮಿಗಳನ್ನು ದತ್ತಾತ್ರೇಯ ಅವತಾರವೆಂದು ಹೇಳುತ್ತಾರೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ…
ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ಗಳ ಎರಡನೇ ಮುಂದುವರಿದ ಸುತ್ತು ಹಾಗೂ ಎಂಜಿನಿಯರಿಂಗ್ ಇತ್ಯಾದಿ ಯುಜಿಸಿಇಟಿ ಕೋರ್ಸ್‌ಗಳ 3ನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಶನಿವಾರದಿಂದ ಆರಂಭವಾಗಿದ್ದು, ಕಾಷನ್ ಡೆಪಾಸಿಟ್ ಪಾವತಿಸಿ, ಇಚ್ಛೆ/ಆಯ್ಕೆಗಳನ್ನು ಅದಲು/ಬದಲು ಮಾಡಿಕೊಳ್ಳಲು ಹಾಗೂ ಹೊಸದಾಗಿ ಸೇರಿಸುವುದಕ್ಕೆ ಸೆ.8ರವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಸಮಯದ ಅಭಾವ ಇರುವ ಕಾರಣ, ನಿಗದಿತ ಕಾಲ ಮಿತಿಯಲ್ಲೇ ಎಲ್ಲ ಪೋಷಕರು/ವಿದ್ಯಾರ್ಥಿಗಳು ಮುಂಗಡ ಹಣ ಪಾವತಿಸಿ, ಇಚ್ಛೆ/ಆಯ್ಕೆಗಳನ್ನು ದಾಖಲಿಸುವ/ಅದಲು-ಬದಲು ಮಾಡುವ ಕೆಲಸವನ್ನು ಮಾಡಬೇಕು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಸಲಹೆ ನೀಡಿದ್ದಾರೆ. ಸೀಟ್ ಮ್ಯಾಟ್ರಿಕ್ಸ್‌ಗೆ ಹೊಸದಾಗಿ ಸೇರ್ಪಡೆಯಾದ ಬೆಳಗಾವಿಯ ಜೆಎನ್‌ಎಂಸಿ ಕಾಲೇಜಿನ 12 ವೈದ್ಯಕೀಯ ಸೀಟು ಹಾಗೂ ಮೈಸೂರಿನ ಫರೂಕಿಯ ದಂತ ವೈದ್ಯಕೀಯ ಕಾಲೇಜಿನ 40 ಸೀಟು ಹಾಗೂ ಬಿಜಿಎಸ್ ಗ್ಲೋಬಲ್ ದಂತ ವೈದ್ಯಕೀಯ ಕಾಲೇಜಿನ 50 ಸೀಟುಗಳನ್ನು ಆಸಕ್ತರು ತಮ್ಮ ಇಚ್ಛೆ/ಆಯ್ಕೆಗಳ ಪಟ್ಟಿಗೆ ಹೊಸದಾಗಿ ಸೇರಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಇದಲ್ಲದೆ, ಹಾಲಿ ಇರುವ…
ಬೆಂಗಳೂರು: ಸೀಟ್ ಬೆಲ್ಟ್ ಧರಿಸದ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಸಂಚಾರ ನಿಮಯ ಉಲ್ಲಂಘನೆಯ ಪ್ರಕರಣದ ಬೆನ್ನಲ್ಲೇ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಾರಿನ ಮೇಲೆಯೂ ಸಂಚಾರ ನಿಯಮ ಉಲ್ಲಂಘನೆಯ 10 ಕೇಸ್ ಗಳಿರುವುದಾಗಿ ತಿಳಿದು ಬಂದಿದೆ. ಅಲ್ಲದೇ ಈ ಕೇಸ್ ಗಳ ದಂಡವನ್ನು ಅವರು ಶೇ.50ರ ರಿಯಾಯಿತಿಯಲ್ಲಿ ಪಾವತಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಕೆಎ 03, ಎಂವೈ 4545 ಕಾರನ್ನು ತಮ್ಮ ಸಂಚಾರಕ್ಕೆ ಬಳಸುತ್ತಿದ್ದಾರೆ. ಹೀಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಬಳಸುವಂತ ಕಾರಿನ ಮೇಲೆ ಸೀಟ್ ಬೆಲ್ಟ್ ಹಾಕಿರದೇ ಇರೋದು, ಓವರ್ ಸ್ಪೀಡ್, ಟ್ರಾಫಿಕ್ ಸಿಗ್ನಲ್ ಜಂಪಿಂಗ್, ಜೀಬ್ರಾ ಕ್ರಾಸಿಂಗ್ ಮಾಡಿದ್ದಕ್ಕೆ 10 ಸಂಚಾರ ನಿಯಮ ಉಲ್ಲಂಘನೆಯ ಪ್ರಕರಣಗಳು ದಾಖಲಾಗಿವೆ. ಶೇ.50ರಷ್ಟು ರಿಯಾಯಿತಿಯಂತೆ ರೂ.3250 ದಂಡವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪಾವತಿಸಿದ್ದಾರೆ. 2020ರಿಂದಲೂ ದಂಡ ಪಾವತಿಸದೇ ಬಾಕಿಯನ್ನು ಬಿವೈ ವಿಜಯೇಂದ್ರ ಉಳಿಸಿಕೊಂಡಿದ್ದರು. ಈ ದಂಡವನ್ನು ಪಾವತಿಸುವಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹಿನ್ನಲೆಯಲ್ಲಿ ಇದೀಗ ಬಿವೈ ವಿಜಯೇಂದ್ರ…
ಬೆಂಗಳೂರು: ಸಂಸದ ಸಸಿಕಾಂತ್ ಸೆಂಥಿಲ್ ಅವರ ಕೈವಾಡವು ಧರ್ಮಸ್ಥಳ ವಿರುದ್ಧದ ಪಿತೂರಿ, ಷಡ್ಯಂತ್ರದ ಹಿಂದೆ ಇದೆ ಎಂಬುದಾಗಿ ಶಾಸಕ ಜನಾರ್ಧನ ರೆಡ್ಡಿ ಆರೋಪಿಸಿದ್ದರು. ಇಂತಹ ಆರೋಪದ ವಿರುದ್ಧ ಸಂಸದ ಸಸಿಕಾಂತ್ ಸೆಂಥಿಲ್ ಕಾನೂನು ಹೋರಾಟಕ್ಕೆ ಇಳಿದಿದ್ದಾರೆ. ಶಾಸಕ ಜನಾರ್ಧನ ರೆಡ್ಡಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಇಂದು ಶಾಸಕ ಜನಾರ್ಧನ ರೆಡ್ಡಿ ವಿರುದ್ಧ ಸಂಸದ ಸಸಿಕಾಂತ್ ಸೆಂಥಿಲ್ ದಾಖಲಿಸಿದ್ದಂತ ಮಾನನಷ್ಟ ಮೊಕದ್ದಮೆ ಅರ್ಜಿಯನ್ನು ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಈ ವೇಳೆ ಕೋರ್ಟ್ ಗೆ ವಕೀಲರ ಮೂಲಕ ಖುದ್ಧು ಸಂಸದ ಸಸಿಕಾಂತ್ ಸೆಂಥಿಲ್ ಹಾಜರಾಗಿದ್ದರು. ಈ ಅರ್ಜಿಯ ವಿಚಾರಣೆಯನ್ನು ಕೋರ್ಟ್ ಸೆಪ್ಟೆಂಬರ್ 11ಕ್ಕೆ ವಿಚಾರಣೆ ನಿಗದಿ ಪಡಿಸಿದೆ. https://kannadanewsnow.com/kannada/letter-from-mla-gopalakrishna-belur-to-cm-siddaramaiah-to-make-sagara-taluk-a-new-district/ https://kannadanewsnow.com/kannada/an-infant-born-to-actress-bhavana-ramanna-has-passed-away/
ಶಿವಮೊಗ್ಗ: ಸಾಗರ ತಾಲ್ಲೂಕನ್ನು ಜಿಲ್ಲೆಯಾಗಿ ಮಾಡೋದಕ್ಕೆ ಒತ್ತಾಯ ಹೆಚ್ಚಾಗಿದೆ. ನಿನ್ನೆಯಷ್ಟೇ ಸಾಗರ ನಾಗರೀಕರು ಈ ಸಂಬಂಧ ಸಭೆ ನಡೆಸಿ, ಮಹತ್ವದ ಚರ್ಚೆಯನ್ನು ನಡೆಸಲಾಗಿದೆ. ಮತ್ತೊಂದೆಡೆ ಸಾಗರ ತಾಲ್ಲೂಕನ್ನು ನೂತನ ಜಿಲ್ಲೆಯಾಗಿ ಪರಿವರ್ತನೆ ಮಾಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಶಾಸಕ ಗೋಪಾಲಕೃಷ್ಣ ಬೇಳೂರು ಪತ್ರ ಬರೆದು ಮನವಿ ಮಾಡಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ದಿನಾಂಕ 16-08-2025ರಂದು ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಪತ್ರ ಬರೆದಿದ್ದು, ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಕೆಳದಿ ಸಂಸ್ಥಾತನವು ಕ್ರಿ.ಶ. 1499 ರಿಂದ 1763 ವರೆಗೆ ಸುಮಾರು 265 ವರ್ಷಗಳ ಕಾಲ ಕಳದಿ ಅರಸರಾದ ಕೆಳದಿ ಶಿವಪ್ಪನಾಯಕ ಹಾಗೂ ರಾಣಿ ಚನ್ನಮ್ಮ ಮುಂತಾದ ಮಹಾರಾಜರು ಆಡಳಿತ ನಡೆಸಿದ ಐತಿಹಾಸಿಕ ಪಟ್ಟಣವಾಗಿರುತ್ತದೆ. ಸಾಗರ ನಗರವು ಅತೀವೇಗವಾಗಿ ಬೆಳೆಯುತ್ತಿರುವ ಮಲೆನಾಡಿನ ಒಂದು ಸುಂದರ ನಗರ. ಸರ್ವೋತ್ತೋಮುಖ ಅಭಿವೃದ್ಧಿಯ ಜೊತೆಗೆ “ಉಳುವವನ ಹೊಲದೊಡೆಯ”ದಂತಹ ಕ್ರಾಂತಿಕಾರಕ ಕಾಗೋಡು ಸತ್ಯಗ್ರಹ ಮೂಲಕ ರೈತರಿಗೆ ಭೂಮಿ ಕೊಟ್ಟಂತಹ ನಗರವಾಗಿದೆ. ರಾಜ್ಯಕ್ಕೆ ವಿದ್ಯುತ್ ನ್ನು ನೀಡುತ್ತಿರುವ ಲಿಂಗನಮಕ್ಕಿ…
ಮಂಡ್ಯ: ಮದುವೆ ಮುರಿದು ಬಿದ್ದ ಕಾರಣದಿಂದಾಗಿ ಯುವತಿಯೊಬ್ಬಳು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯದ ಕಿಕ್ಕೇರಿಯ ಗ್ರಾಮದಲ್ಲಿ 15 ದಿನಗಳ ಹಿಂದಷ್ಟೇ ಕಾವ್ಯಾಗೆ ಮದುವೆ ನಿಶ್ಚಯವಾಗಿತ್ತು. ಆದರೇ ಆ ಬಳಿಕ ಮದುವೆ ಕ್ಯಾನ್ಸಲ್ ಆಗಿತ್ತು. ಇದರಿಂದ ಬೇಸರಗೊಂಡು 26 ವರ್ಷದ ಯುವತಿ ಕಾವ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಂಗಳೂರು: ಐವಿಎಫ್ ಮೂಲಕ ನಟಿ ಭಾವನಾ ರಾಮಣ್ಣ ಗರ್ಭವತಿಯಾಗಿದ್ದರು. ಅವರಿಗೆ ಅವಳಿ ಮಕ್ಕಳು ಜನಿಸಿದ್ದವು. ಹೀಗೆ ಜನಿಸಿದ್ದರಲ್ಲಿ ಒಂದು ಮಗು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಐವಿಎಫ್ ಮೂಲಕ ನಟಿ ಭಾವನಾ ರಾಮಣ್ಣ ಅವರು ತಾಯಿಯಾಗಿದ್ದರು. 2 ವಾರಗಳ ಹಿಂದಷ್ಟೇ ನಟಿ ಭಾವನಾಗೆ ಹೆರಿಗೆ ಕೂಡ ಆಗಿತ್ತು. ಅವಳಿ ಹೆಣ್ಣು ಮಗುವಿಗೆ ನಟಿ ಭಾವನ ಜನ್ಮ ನೀಡಿದ್ದರು. ಅವಳಿ ಮಕ್ಕಳು ಹುಟ್ಟಿದಂತ ಸಂದರ್ಭದಲ್ಲಿ ಆರೋಗ್ಯವಾಗೇ ಇದ್ದವು. ಆದರೇ ಇದೀಗ ಅವಳಿ ಹೆಣ್ಣುಮಕ್ಕಳಲ್ಲಿ ಒಂದು ಮಗು ನಿಧನವಾಗಿದ್ದು, ಮತ್ತೊಂದು ಮಗು ಕ್ಷೇಮವಾಗಿದೆ.
ಬೆಂಗಳೂರು: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಪ್ರಶ್ನಿಸಿ ಹೈಕೋರ್ಟ್ ಗೆ ಪ್ರತಾಪ್ ಸಿಂಹ ಹೋಗಿದ್ದು ಸಂತೋಷ. ನಾವು ಕಾನೂನು ಪ್ರಕಾರ ಹೋರಾಟ ಮಾಡುತ್ತೇವೆ ಎಂಬುದಾಗಿ ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ದಸರಾವನ್ನು ನಿಸಾರ್ ಅಹ್ಮದ್ ಉದ್ಘಾಟಿಸಿದಾಗ ಏಕೆ ಹೋಗಿಲ್ಲ? ಟಿಪ್ಪು, ಹೈದರಾಲಿ ದಸರಾ ಮಾಡಿದಾಗ ಪ್ರಶ್ನಿಸಲಿಲ್ಲ. ಮಿರ್ಜಾ ಇಸ್ಮಾಯಿಲ್ ಅಂಬಾರಿ ಮೇಲೆ ಮೆರವಣಿಗೆ ಮಾಡಲಾಯಿತು. ಆಗ ಯಾಕೆ ವಿರೋಧಿಸಿಲ್ಲ ಎಂಬುದಾಗಿ ಕಿಡಿಕಾರಿದರು. ಅಂದಹಾಗೇ ದಸರಾ ಉದ್ಘಾಟನೆಗೆ ರಾಜ್ಯ ಸರ್ಕಾರದಿಂದ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿತ್ತು. ಇಂತಹ ರಾಜ್ಯ ಸರ್ಕಾರದ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಭರ್ತಿಯಾಗಿರುವ ಆಲಮಟ್ಟಿ ಜಲಾಶಯಕ್ಕೆ ಶನಿವಾರ ಪೂಜೆ ನೆರವೇರಿಸಿ, ಬಾಗಿನ ಸಮರ್ಪಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಎಂ ಬಿ ಪಾಟೀಲ್, ಶಿವಾನಂದ ಪಾಟೀಲ್, ಆರ್ ಬಿ ತಿಮ್ಮಾಪುರ, ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಕಾರ್ಯದರ್ಶಿ ಕೃಷ್ಣಮೂರ್ತಿ ಕುಲಕರ್ಣಿ, ಕೆಬಿಜೆಎನ್ಎಲ್ ಎಂ.ಡಿ. ಮೋಹನ್ ರಾಜ್ ಮತ್ತಿತರರು ಉಪಸ್ಥಿತರಿದ್ದರು. https://kannadanewsnow.com/kannada/coastal-talguppa-railway-route-inspection-temporary-diversion-route-for-vehicle-movement/













