Author: kannadanewsnow09

ಅಡಿಕೆ ತೆಂಗು ಬಾಳೆ ಬೆಳೆಗಳ ವ್ಯವಸ್ಥೆಯಲ್ಲಿ ನಮ್ಮ ಆದಾಯವನ್ನು ದ್ವಿಗುಣಗೊಳಿಸುವ ಸುಲಭ ವಿಧಾನವೇ ಸಮಗ್ರ ಮತ್ತು ಸುಸ್ಥಿರ ಕೃಷಿ ಪದ್ಧತಿ. ಇದು ಒಂದು ವರ್ಷದ ಋತುವಿನಲ್ಲಿ ಒಂದೇ ಭೂಮಿಯಿಂದ ಬಹು ಕೊಯ್ಲುಗಳೊಂದಿಗೆ ಕೃಷಿಯ ಒಟ್ಟಾರೆ ದಕ್ಷತೆಯನ್ನು ಸುಧಾರಿಸುತ್ತದೆ. ಬೆಳೆ ವೈಫಲ್ಯ ಮತ್ತು ಬೆಲೆ ಏರಿಳಿತಗಳಿಗೆ ಸಂಬಂಧಿಸಿದ ಅಪಾಯಕಾರಿ ಅಂಶಗಳನ್ನು ಕಡಿಮೆ ಮಾಡಲು ರೈತರು ತಮ್ಮ ಬೆಳೆ ಉತ್ಪಾದನೆಯನ್ನು ವೈವಿಧ್ಯಗೊಳಿಸಲು ಸಹ ಇದು ಸಹಕಾರಿ. ಇದು ಒಂದು ಬೆಳವಣಿಗೆಯ ಋತುವಿನಲ್ಲಿ ವಿವಿಧ ಮೇಲಾವರಣ ಎತ್ತರವನ್ನು ಆಕ್ರಮಿಸುವ ಸಮಯದಲ್ಲಿ ಒಂದೇ ಕ್ಷೇತ್ರದಲ್ಲಿ ವಿವಿಧ ರೀತಿಯ ಸಸ್ಯಗಳನ್ನು ವಿವಿಧ ಸಮಯಗಳಲ್ಲಿ ನೆಡುವುದನ್ನು ಒಳಗೊಂಡಿರುತ್ತದೆ. ಉದಾಹರಣೆಗೆ, ಒಬ್ಬ ರೈತನು ತೆಂಗಿನ ತೋಟದಲ್ಲಿ ಬೆಂಡಿಯನ್ನು ಹಾಕಿದ ಮೇಲೆ ಎಲೆಗಳ ತರಕಾರಿಗಳನ್ನು ನೆಡಬಹುದು, ನಂತರ ಅವುಗಳನ್ನು ಮಿಶ್ರ ತರಕಾರಿಗಳಾಗಿ ಮಾರಾಟ ಮಾಡಲು ಒಂದೇ ಬಾರಿಗೆ ಕೊಯ್ಲು ಮಾಡಬಹುದು. ನಿರ್ದಿಷ್ಟ ಸಮಯದಲ್ಲಿ ಒಂದೇ ತುಂಡು ಭೂಮಿಯಿಂದ ಬೆಳೆಗಳನ್ನು ಉತ್ಪಾದಿಸುವ ಸುಸ್ಥಿರ ವಿಧಾನವಾಗಿದೆ. ಬಹು-ಪದರದ ಕೃಷಿ ವಿಧಾನದಲ್ಲಿ, ಒಬ್ಬ ರೈತ ಭೂಮಿಯ ಬಳಕೆಯನ್ನು…

Read More

ನವದೆಹಲಿ: ಪೊಲೀಸರು ಮತ್ತು ತನಿಖಾ ಸಂಸ್ಥೆಗಳು ಬಂಧಿತ ವ್ಯಕ್ತಿಗೆ ಸಾಧ್ಯವಾದಷ್ಟು ಬೇಗ ಬಂಧನದ ಲಿಖಿತ ಆಧಾರಗಳನ್ನು ಒದಗಿಸಬೇಕು ಎಂದು ತೀರ್ಪು ನೀಡಿದೆ, ಅವರು ಯಾವ ಅಪರಾಧ ಅಥವಾ ಕಾನೂನಿನ ಅಡಿಯಲ್ಲಿ ಬಂಧನ ಮಾಡಲಾಗಿದೆ ಎಂಬುದನ್ನು ಲೆಕ್ಕಿಸದೆ [ಮಿಹಿರ್ ರಾಜೇಶ್ ಶಾ vs. ಮಹಾರಾಷ್ಟ್ರ ರಾಜ್ಯ ಮತ್ತು ಉತ್ತರ ಪ್ರದೇಶ] ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಸೂಚಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಎ.ಜಿ. ಮಸಿಹ್ ಅವರ ಪೀಠವು, ಬಂಧನದ ಆಧಾರದ ಬಗ್ಗೆ ತಿಳಿಸುವ ಹಕ್ಕು ಸಂವಿಧಾನದ 22(1) ನೇ ವಿಧಿಯ ಅಡಿಯಲ್ಲಿ ಮೂಲಭೂತ ಮತ್ತು ಕಡ್ಡಾಯ ರಕ್ಷಣೆಯಾಗಿದೆ ಮತ್ತು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಅಡಿಯಲ್ಲಿನ ಅಪರಾಧಗಳು ಸೇರಿದಂತೆ ಎಲ್ಲಾ ಅಪರಾಧಗಳಿಗೆ ಅನ್ವಯಿಸುತ್ತದೆ ಎಂದು ಹೇಳಿದೆ. ಕೆಲವು ಅಸಾಧಾರಣ ಸಂದರ್ಭಗಳಲ್ಲಿ ತಕ್ಷಣ ಲಿಖಿತ ಆಧಾರಗಳನ್ನು ಒದಗಿಸಲು ಸಾಧ್ಯವಾಗದಿದ್ದಾಗ, ಆರೋಪಿಗೆ ಮೌಖಿಕವಾಗಿ ಆಧಾರಗಳನ್ನು ತಿಳಿಸಬೇಕು. ಅಂತಹ ಪ್ರಕರಣಗಳಲ್ಲಿಯೂ ಸಹ, ಆರೋಪಿಗೆ ಸಮಂಜಸವಾದ ಸಮಯದೊಳಗೆ ಮತ್ತು ಆರೋಪಿಯನ್ನು ರಿಮಾಂಡ್ ವಿಚಾರಣೆಗಾಗಿ ಮ್ಯಾಜಿಸ್ಟ್ರೇಟ್…

Read More

ಬೆಂಗಳೂರು: ಬೆಂಗಳೂರು ನಗರದ ತಲಾದಾಯ ಕುಸಿತಗೊಂಡಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರವು ಆರ್ಥಿಕ ದಿಕ್ಕು ತಪ್ಪಿಸುತ್ತಿದೆ ಎಂಬುದಾಗಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಾಗ್ಧಾಳಿ ನಡೆಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕರ್ನಾಟಕದ ಅಭಿವೃದ್ಧಿಯ ನಾಡಿಯಾದ ಬೆಂಗಳೂರು ನಗರ, ರಾಜ್ಯದ ಆರ್ಥಿಕ ಪ್ರಗತಿಯ “ಕೇಂದ್ರೀಯ ಶಕ್ತಿ” ಎಂದು ಪರಿಗಣಿಸಲಾಗಿದೆ. ಆದರೆ ಇತ್ತೀಚಿನ ಕರ್ನಾಟಕ ಆರ್ಥಿಕ ಸಮೀಕ್ಷೆ 2023-24 ಈ ವಾಸ್ತವವನ್ನು ಪ್ರಶ್ನಿಸುವಂತಾಗಿದೆ ಎಂದಿದ್ದಾರೆ. 📉 2021-22 ರಲ್ಲಿ ಬೆಂಗಳೂರು ನಗರ ಜಿಲ್ಲೆಯ ತಲಾಆದಾಯ ₹6,21,131, 📉 2022-23 ರಲ್ಲಿ ಬೆಂಗಳೂರು ನಗರ ಜಿಲ್ಲೆಯ ತಲಾಆದಾಯ ₹7,60,362 ಇದ್ದು, 📉 2023-24 ರಲ್ಲಿ ಅದು ₹7,38,910 ಕ್ಕೆ ಕುಸಿದಿದೆ! ಪ್ರಸಕ್ತ ವರ್ಷದಲ್ಲಿ ಜಿಲ್ಲಾ ತಲಾಆದಾಯ ಇನ್ನಷ್ಟು ಕುಸಿಯುವ ವಾತಾವರಣವನ್ನು ಕಾಂಗ್ರೆಸ್ ಸರ್ಕಾರವು ನಿರ್ಮಾಣ ಮಾಡಿರುವುದಂತೂ ಸತ್ಯ ಸಂಗತಿಯಾಗಿದೆ. ರಾಜ್ಯದ ಅತ್ಯಂತ ಶ್ರೀಮಂತ ಜಿಲ್ಲೆಯೇ ಆದಾಯ ಕುಸಿತ ಕಂಡರೆ, ಉಳಿದ ಜಿಲ್ಲೆಗಳ ಸ್ಥಿತಿ ಊಹಿಸಲು ಅಸಾಧ್ಯ. ಇದಕ್ಕಿಂತ ದುಃಖದ ಸಂಗತಿ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ 2025-26ನೇ ಹಂಗಾಮಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಹೆಚ್ಚುವರಿ ಕಬ್ಬು ಬೆಲೆ ನಿಗದಿಪಡಿಸಿದ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತಂತೆ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು,  2025-26ನೇ ಸಕ್ಕರೆ ಹಂಗಾಮಿನಲ್ಲಿ ದೇಶದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಸಕ್ಕರೆ ಕಾರ್ಖಾನೆಗಳು ಪಾವತಿಸಬೇಕಾದ ನ್ಯಾಯಯುತ ಮತ್ತು ಲಾಭದಾಯಕ ಬೆಲೆಯ (Fair and Remunerative Price) ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರದ ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯು ನಿಗದಿಗೊಳಿಸಲಾಗಿದ್ದು, ವಿವರಗಳು ಈ ಕೆಳಕಂಡಂತೆ ಇರುತ್ತವೆ. 1. ಶೇಕಡ 10.25 ರಷ್ಟು ಸಕ್ಕರೆ ಇಳುವರಿಗೆ ಪ್ರತಿ ಕ್ವಿಂಟಾಲ್ ಕಬ್ಬಿಗೆ ರೂ.3550.00 2. ಶೇಕಡ 10.25ಕ್ಕೆ ಮೇಲ್ಪಟ್ಟ ಇಳುವರಿಗೆ ತದನಂತರದ ಶೇಕಡ 0.1 ರಷ್ಟು ಇಳುವರಿಗೆ ಪ್ರತಿ ಕ್ವಿಂಟಾಲ್ ಕಬ್ಬಿಗೆ ರೂ.3.46 ರಂತೆ ಹೆಚ್ಚುವರಿ ಬೆಲೆ.. 3. ಶೇಕಡ 10.25ಕ್ಕಿಂತ ಕಡಿಮೆ ಹಾಗೂ ಶೇಕಡ 9.5ಕ್ಕಿಂತ…

Read More

ರಾಜಸ್ಥಾನ: ಅದೃಷ್ಟ ಅಂದ್ರೆ ಇದಪ್ಪಾ ಎನ್ನುವಂತೆ ತರಕಾರಿ ವ್ಯಾಪಾರಿಯೊಬ್ಬ ಸಾಲ ಮಾಡಿ ಖರೀದಿಸಿದ್ದಂತ ಲಾಟರಿ ಟಿಕೆಟ್ ನಲ್ಲಿ ಬರೋಬ್ಬರಿ 11 ಕೋಟಿ ಚಾಕ್ ಪಾಟ್ ಹೊಡೆದಿದೆ. ಆ ಮೂಲಕ ರಾತ್ರೋರಾತ್ರಿ ಕೋಟ್ಯಾಧೀಶ್ವರನಾಗಿದ್ದಾನೆ. ಹೌದು ರಾಜಸ್ಥಾನದ ವ್ಯಕ್ತಿಯೊಬ್ಬ ಲಾಟರಿಯಲ್ಲಿ ₹11 ಕೋಟಿ ಬಹುಮಾನ ಗೆದ್ದ ನಂತರ ರಾತ್ರೋರಾತ್ರಿ ಅವನ ಭವಿಷ್ಯ ಬದಲಾಯಿತು. ಅವನು ತನ್ನ ಸ್ನೇಹಿತನಿಂದ ಹಣವನ್ನು ಸಾಲಪಡೆದು ಲಾಟರಿ ಟಿಕೆಟ್ ಖರೀದಿಸಿದ್ದನು. ಇದೀಗ ಬಹುದೊಡ್ಡ ಮೊತ್ತವನ್ನು ಗೆದ್ದ ನಂತರ, ಅವನು ಆ ಹಣವನ್ನು ತನ್ನ ಮಕ್ಕಳ ಶಿಕ್ಷಣಕ್ಕಾಗಿ ಮತ್ತು ಮನೆ ಕಟ್ಟಲು ಬಳಸುವುದಾಗಿ ಬಹಿರಂಗಪಡಿಸಿದನು. ಈ ಬಗ್ಗೆ ಪ್ರತಿಕ್ರಿಯಿಸಿರುವಂತ ಅಮಿತ್, ನಾನು ಜೈಪುರ ಜಿಲ್ಲೆಯ ಕೋಟ್‌ಪುಟ್ಲಿ ಗ್ರಾಮದವನು. ನನ್ನ ಸಂತೋಷವನ್ನು ವ್ಯಕ್ತಪಡಿಸಲು ಸಾಧ್ಯವಿಲ್ಲ. ಪಂಜಾಬ್ ಸರ್ಕಾರ ಮತ್ತು ಲಾಟರಿ ಏಜೆನ್ಸಿಗೆ ನಾನು ಧನ್ಯವಾದ ಹೇಳುತ್ತೇನೆ. ನನ್ನ ಎಲ್ಲಾ ದುಃಖ ಮತ್ತು ದುಃಖಗಳು ಇಂದು ಮಾಯವಾಗಿವೆ. ನಾನು ₹11 ಕೋಟಿ ಗೆದ್ದಿದ್ದೇನೆ. ನಾನು ನನ್ನ ಸ್ನೇಹಿತನೊಂದಿಗೆ ಮೋಗಾಗೆ ಭೇಟಿ ನೀಡಲು ಬಂದು ಎರಡು ಟಿಕೆಟ್‌ಗಳನ್ನು…

Read More

ಬೆಂಗಳೂರು: ಅನಧಿಕೃತವಾಗಿ ಕರ್ತವ್ಯಕ್ಕೆ ಗೈರು ಹಾಜರಾದ ಹಿನ್ನಲೆಯಲ್ಲಿ ಕುಂದಾಪುರ ಉಪ ವಿಭಾಗದದ ಉಡುಪಿ ಜಿಲ್ಲೆ ಗ್ರೇಡ್-2 ತಹಶೀಲ್ದಾರ್ ಮಲ್ಲಿಕಾರ್ಜುನ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಸರ್ಕಾರ ಆದೇಶಿಸಿದೆ. ಈ ಸಂಬಂಧ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ಮಲ್ಲಿಕಾರ್ಜುನ, ತಹಶೀಲ್ದಾರ್ ಗ್ರೇಡ್-2 ಸಹಾಯಕ ಆಯುಕ್ತರ ಕಚೇರಿ, ಕುಂದಾಪುರ ಉಪ ವಿಭಾಗ, ಉಡುಪಿ ಜಿಲ್ಲೆ ಇವರು ದಿನಾಂಕ 10-10-2025ರಿಂದ ಇಲ್ಲಿಯವರೆಗೆ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯದೇ ಕರ್ತವ್ಯಕ್ಕೆ ಅನಧಿಕೃತ ಗೈರು ಹಾಜರಾಗಿ, ದುರ್ನಡತೆ ತೋರಿದ್ದಾರೆ ಎಂದಿದ್ದಾರೆ. ಈ ಹಿನ್ನಲೆಯಲ್ಲಿ ಇಲಾಖಾ ವಿಚಾರಣೆ ಕಾಯ್ದಿರಿಸಿ, ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು 1957ರ ನಿಯಮ 10(1)(ಡಿ) ಅಡಿಯಲ್ಲಿ ಅಮಾನತ್ತುಗೊಳಿಸಿ ಆದೇಶಿಸಿದ್ದಾರೆ.

Read More

ಕೋಲಾರ: ಕನಕದಾಸರು ಎಂದರೆ ಕೇವಲ ದಾಸಶ್ರೇಷ್ಠ ವ್ಯಕ್ತಿಯಲ್ಲ, ಒಂದು ಮಹೋನ್ನತ ಪರಂಪರೆ ಎನ್ನುವುದನ್ನು ನಾವು ಸ್ಮರಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ನುಡಿದರು. ಕೋಲಾರ ಕುರುಬರ ಸಂಘ ಆಯೋಜಿಸಿದ್ದ ಕನಕ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕನಕದಾಸರ ಹೆಸರನ್ನು ನಾವು ಕರೆಯುವಾಗ ಇವರ ಜೊತೆಗೆ ಬುದ್ದ, ಬಸವ, ಕನಕ ಎಂದು ಕರೆಯುತ್ತೇವೆ. ಅಂದರೆ ಬುದ್ದನಿಂದ ಶುರುವಾಗುವ ಮಹೋನ್ನತ ಪರಂಪರೆಯ ಭಾಗವಾಗಿ ಕನಕರನ್ನು ನಾವು ಆರಾಧಿಸುತ್ತೇವೆ. ಆದ್ದರಿಂದ ಕನಕ ಜಯಂತಿಯಂದು ನಾವು ನಮ್ಮ ಪರಂಪರೆಯ ಬೇರುಗಳಿಗೆ ಚೈತನ್ಯ ತುಂಬುವಂತಾಗಬೇಕು ಎಂದು ಕರೆ ನೀಡಿದರು. ದಾಸಶ್ರೇಷ್ಠ ಕನಕರು ನಮ್ಮ ಪರಂಪರೆಯ ನೈತಿಕ ಮತ್ತು ಅಧ್ಮಾತ್ಮಿಕ ಶಕ್ತಿಯಾಗಿದ್ದಾರೆ. ಆದರೆ, ಬಹಳ ಮಂದಿ ಕನಕದಾಸರಿಂದ ನಮ್ಮ ಪರಂಪರೆ ಆರಂಭವಾಗಿದೆ ಎನ್ನುವ ತಪ್ಪು ಕಲ್ಪನೆಯಲ್ಲಿದ್ದಾರೆ. ಅಲೆಮಾರಿಯಾಗಿದ್ದ ಮನುಷ್ಯ ಜನಾಂಗ ಕೃಷಿಗಿಂತ ಮೊದಲೇ ಪಶುಪಾಲನೆ ಕಂಡುಕೊಂಡಿತ್ತು. ಹಸು, ಕುರಿ, ಮೇಕೆ, ಕುದುರೆ ಸಾಕುತ್ತಿದ್ದವರೆಲ್ಲಾ ಕುರುಬರೇ ಅನ್ನಿಸಿಕೊಂಡ ಚರಿತ್ರೆ ಇದೆ. ನಾಣ್ಯ ಮತ್ತು ನೋಟುಗಳು ಬರುವ ಮೊದಲು ಕುರಿ…

Read More

ಬೆಂಗಳೂರು: ಚುನಾವಣಾ ಅಕ್ರಮದ ತನಿಖೆಗೆ ಪೂರಕ ದಾಖಲೆ ನೀಡಿ ಎಂದು ಮಾಹಿತಿ ಕೇಳಿದರೆ, ಆಯೋಗವೇ ನಮ್ಮ ಬಳಿ ಸಾಕ್ಷಿ ಕೇಳುತ್ತಿದೆ. ಹೀಗಾಗಿ ಪಾಲಿಕೆ ಚುನಾವಣೆಗಳನ್ನು ಮತಪತ್ರಗಳ ಮೂಲಕ ನಡೆಸಲು ಚಿಂತನೆ ನಡೆಸಿದ್ದೇವೆ. ಈ ಅಭಿಯಾನವನ್ನು ಯಶಸ್ವಿಯಾಗಿ ನಡೆಸಿರುವ ರಾಜ್ಯಗಳ ಪೈಕಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದು ಎಐಸಿಸಿ ಅವರು ತಿಳಿಸಿದ್ದು, ಇದರ ಯಶಸ್ಸು ಬಿಎಲ್ಎಗಳು, ಬ್ಲಾಕ್ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಶಾಸಕರು ಹಾಗೂ ಪರಾಜಿತ ಅಭ್ಯರ್ಥಿಗಳದ್ದಾಗಿದೆ. ಈ ಹೋರಾಟ ಹಮ್ಮಿಕೊಂಡಿರುವ ನಮ್ಮ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರಿಗೆ ಅಭಿನಂದಿಸುತ್ತೇನೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು. “ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ದೇಶದಾದ್ಯಂತ ಪ್ರಜಾಪ್ರಭುತ್ವ, ಸಂವಿಧಾನ ಉಳಿಸಿ, ಮತದಾನದ ಹಕ್ಕು ಕಾಪಾಡಲು ಸಹಿ ಸಂಗ್ರಹದ ಮೂಲಕ ಬೃಹತ್ ಆಂದೋಲನ ನಡೆಸಲಾಗುತ್ತಿದೆ. ಮಹದೇವಪುರ ವಿಧಾನಸಭೆ ಕ್ಷೇತ್ರದ ಮತದಾನದ ಅಧ್ಯಯನ ಮಾಡಿ ಅಲ್ಲಿ ನಡೆದಿರುವ 1 ಲಕ್ಷಕ್ಕೂ ಹೆಚ್ಚು ಮತಗಳ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಈ ಅಕ್ರಮದಲ್ಲಿ ಒಂದೇ…

Read More

ಬೆಂಗಳೂರು: ನಿಗಮ ಮಂಡಳಿ ಸದಸ್ಯ ಸ್ಥಾನ ನಿರೀಕ್ಷೆಯಲ್ಲಿ ಇದ್ದಂತ ಕಾರ್ಯಕರ್ತರಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಗುಡ್ ನ್ಯೂಸ್ ನೀಡಿದ್ದಾರೆ. ಅದೇ ಒಂದು ವಾರದಲ್ಲಿ ನಿಗಮ ಮಂಡಳಿ ಸದಸ್ಯರ ನೇಮಕ ಮಾಡುವುದಾಗಿ ತಿಳಿಸಿದ್ದಾರೆ. ಇಂದು ಸುದ್ದಿಗಾರರು ಕಾರ್ಯಕರ್ತರಿಗೆ ನಿಗಮ ಮಂಡಳಿ ಸದಸ್ಯತ್ವ ನೀಡಿಲ್ಲ ಯಾಕೆ ಎಂದು ಕೇಳಿದಾಗ, ಈಗಾಗಲೇ 3 ಸಾವಿರ ಕಾರ್ಯಕರ್ತರಿಗೆ ಅಧಿಕಾರ ನೀಡಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 15 ಜನರಿಗೆ ಗ್ಯಾರಂಟಿ ಸಮಿತಿ ಜವಾಬ್ದಾರಿ ನೀಡಿದ್ದೇವೆ. ಪ್ರತಿ ಕ್ಷೇತ್ರಗಳಲ್ಲಿ 60 ಜನರನ್ನು ನಾಮನಿರ್ದೇಶನ ಮಾಡಿದ್ದೇವೆ. ರಾಜ್ಯ ಮಟ್ಟದಲ್ಲಿ ನಿಗಮ ಮಂಡಳಿಗಳಲ್ಲಿ 600 ಸ್ಥಾನಗಳಿವೆ. ಇವುಗಳನ್ನು ಇನ್ನೊಂದು ವಾರದಲ್ಲಿ ಪ್ರಕಟಿಸುತ್ತೇವೆ ಎಂದು ತಿಳಿಸಿದರು. ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳು ಹಾಗೂ ನಮ್ಮ ಪಕ್ಷ ರಾಜಕೀಯವಾಗಿ ವಿಭಾಗಿಸಿಕೊಂಡಿರುವ 40 ಜಿಲ್ಲೆಗಳಿಂದ ಸಹಿ ಸಂಗ್ರಹ ಮಾಡಲಾಗಿದೆ. ನಮ್ಮ ಕಾರ್ಯಕರ್ತರು ಬಹಳ ಪ್ರಾಮಾಣಿಕವಾಗಿ ಈ ಅಭಿಯಾನದಲ್ಲಿ ಕೆಲಸ ಮಾಡಿದ್ದಾರೆ. 8-10 ಕಡೆ ಹೊರತು ಪಡಿಸಿ, ಉಳಿದ ಎಲ್ಲಾ ಕಡೆಗಳಲ್ಲಿ ಚೆನ್ನಾಗಿ ಸಹಿ ಸಂಗ್ರಹಿಸಲಾಗಿದೆ. ಬೂತ್…

Read More

ಬೆಂಗಳೂರು : ರಾಜ್ಯ ಹಾಗೂ ದೇಶದಲ್ಲಿ ನಡೆದಿರುವ ಮತಗಳ್ಳತನ ವಿರುದ್ಧ ಎಐಸಿಸಿ ನಾಯಕರು ಹಮ್ಮಿಕೊಂಡಿರುವ ಸಹಿಸಂಗ್ರಹ ಅಭಿಯಾನದಲ್ಲಿ ಕರ್ನಾಟಕದಿಂದ 1,12,40,000 ಸಹಿಗಳನ್ನು ಸಂಗ್ರಹಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕಾಂಗ್ರೆಸ್ ಕಚೇರಿಯ ಭಾರತ ಜೋಡೋ ಭವನದಲ್ಲಿ ಶನಿವಾರ ನಡೆದ ಜಂಟಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಅವರು ಮಾತನಾಡಿದರು. “ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳು ಹಾಗೂ ನಮ್ಮ ಪಕ್ಷ ರಾಜಕೀಯವಾಗಿ ವಿಭಾಗಿಸಿಕೊಂಡಿರುವ 40 ಜಿಲ್ಲೆಗಳಿಂದ ಸಹಿ ಸಂಗ್ರಹ ಮಾಡಲಾಗಿದೆ. ನಮ್ಮ ಕಾರ್ಯಕರ್ತರು ಬಹಳ ಪ್ರಾಮಾಣಿಕವಾಗಿ ಈ ಅಭಿಯಾನದಲ್ಲಿ ಕೆಲಸ ಮಾಡಿದ್ದಾರೆ. 8-10 ಕಡೆ ಹೊರತು ಪಡಿಸಿ, ಉಳಿದ ಎಲ್ಲಾ ಕಡೆಗಳಲ್ಲಿ ಚೆನ್ನಾಗಿ ಸಹಿ ಸಂಗ್ರಹಿಸಲಾಗಿದೆ. ಬೂತ್ ವಾರು ಸಹಿ ಸಂಗ್ರಹಿಸಲಾಗಿದ್ದು, ಜನರಲ್ಲಿ ಮತಗಳ್ಳತನದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ” ಎಂದು ತಿಳಿಸಿದರು. “ಈ ಸಹಿ ಸಂಗ್ರಹದ ಅರ್ಜಿಗಳನ್ನು ಇದೇ ತಿಂಗಳು 10ರಂದು ದೆಹಲಿಗೆ ರವಾನಿಸಲು ತೀರ್ಮಾನಿಸಲಾಗಿದೆ. ಈ ಅಭಿಯಾನದಲ್ಲಿ ಹೆಚ್ಚಿನ ಜವಾಬ್ದಾರಿಯಿಂದ ಕೆಲಸ ಮಾಡಿರುವ…

Read More