Author: kannadanewsnow09

ಹಾಸನ: ಜಿಲ್ಲೆಯಲ್ಲಿ ಕಾಡಾನೆ ದಾಳಿಯಿಂದಾಗಿ ಮತ್ತೊಂದು ಬಲಿಯಾಗಿದೆ. ಕಾಡಾನೆಯೊಂದು ಸೊಂಡಿಲಿನಿಂದ ತಿವಿದು, ಎತ್ತಿ ಬಿಸಾಕಿ ತುಳಿದ ಪರಿಣಾಮ ಸ್ಥಳದಲ್ಲೇ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಹಾಸನದ ಬೇಲೂರು ತಾಲ್ಲೂಕಿನ ಕೋಗೋಡು ಗ್ರಾಮದಲ್ಲಿ ಕಾಡಾನೆ ದಾಳಿಯಿಂದಾಗಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಕಾಫಿ ತೋಟದಲ್ಲಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ದಿಢೀರ್ ಕಾಡಾನೆಯೊಂದು ದಾಳಿ ಮಾಡಿದೆ. ಈ ವೇಳೆಯಲ್ಲಿ ಸುಶೀಲಮ್ಮ ಕಾಡಾನೆ ದಾಳಿಗೆ ಸಿಕ್ಕಿದ್ದಾರೆ. ಕೋಪಗೊಂಡ ಕಾಡಾನೆ ಸೊಂಡಿನಿಂದ ಎತ್ತಿ ಬಿಸಾಡಿ, ತಲೆ ಭಾಗವನ್ನು ತುಳಿದು ಸಾಯಿಸಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಅರಣ್ಯ ಇಲಾಖೆ ಅಧಿಕಾರಿಗಳು, ಅರೇಹಳ್ಳಿ ಠಾಣೆಯ ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಘಟನೆಯನ್ನು ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಇದು ಕಳೆದ 2 ತಿಂಗಳಿನಲ್ಲಿ ನಾಲ್ಕನೇ ಸಾವಾಗಿದ್ದು, ಕಾಡಾನೆ ಹಿಡಿದು, ಸುರಕ್ಷಿತ ಸ್ಥಳಕ್ಕೆ ಬಿಡುವಂತೆ ಆಗ್ರಹಿಸಿದರು. https://kannadanewsnow.com/kannada/mark-carney-sworn-in-as-canadas-new-prime-minister/ https://kannadanewsnow.com/kannada/good-news-for-those-who-were-expecting-e-khata-illegal-plots-houses-to-be-regularised-soon/

Read More

ಬೆಂಗಳೂರು: ಇ-ಖಾತಾ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿಯೊಂದು ಹೊರಬಿದ್ದಿದೆ. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ವಿಧೇಯಕಕ್ಕೆ ಅನುಮೋದನೆ ನೀಡಲಾಗಿದ್ದು, ಸದನದಲ್ಲಿ ವಿಧೇಯಕಕ್ಕೆ ಅಂಗೀಕಾರ ದೊರೆತಿದ್ದೇ ಆದರೇ ಗ್ರಾಮೀಣ ಭಾಗದ ಸಮಸ್ಯೆಯೇ ತೀರಿದಂತೆ ಆಗಲಿದೆ. ರಾಜ್ಯದ ಅಕ್ರಮ ನಿವೇಶನ, ಮನೆಗಳಿಗೆ ಇ-ಖಾತಾ ನೀಡುವ ಸಂಬಂಧ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ ನೀಡಲಾಗಿದೆ. ಈ ತಿದ್ದುಪಡಿ ಮಸೂದೆಯನ್ನು ರಾಜ್ಯ ವಿಧಾನ ಮಂಡಲದ ಉಭಯ ಸದನಗಳಲ್ಲಿ ಕಾಂಗ್ರೆಸ್ ಸರ್ಕಾರ ಮಂಡಿಸಲಿದೆ. ಅಕ್ರಮ ಮನೆ, ನಿವೇಶನಗಗಳಿಗೆ ಸಕ್ರಮ ಮಾಡುವ ಸಂಬಂಧದ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆ, ವಿಧಾನ ಪರಿಷತ್ತಿನಲ್ಲಿ ಅಂಗೀಕಾರ ದೊರೆತಿದ್ದೇ ಆದರೇ, ಗ್ರಾಮೀಣ ಹಾಗೂ ನಗರ ಭಾಗದ ಅಕ್ರಮ ನಿವೇಶನ, ಮನೆ ಮಾಲೀಕರಿಗೆ ಸಿಹಿಸುದ್ದಿ ಸಿಗಲಿದೆ. ಗ್ರಾಮೀಣ ಭಾಗದ ಕಂದಾಯ ಬಡಾವಣೆ, ಗ್ರಾಮ ಠಾಣೆ ವ್ಯಾಪ್ತಿಯ ಮನೆ, ನಿವೇಶನ ಸಕ್ರಮಕ್ಕೆ ಅವಕಾಶ ದೊರೆಯುವಂತಾಗಲಿದ್ದು, ಇ-ಖಾತಾ ಲಭ್ಯವಾಗಲಿದೆ. https://kannadanewsnow.com/kannada/mark-carney-sworn-in-as-canadas-new-prime-minister/ https://kannadanewsnow.com/kannada/worlds-most-dangerous-terrorist-isis-leader-abu-khadija-killed/

Read More

ಕೆನಡಾ: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಧಿಕಾರಕ್ಕೆ ಮರಳಿದ ನಂತರ ಅಮೆರಿಕದ ಸಂಬಂಧಗಳಲ್ಲಿನ ಕುಸಿತದಿಂದ ನಲುಗಿಹೋಗಿದ್ದ ದೇಶದ ಉಸ್ತುವಾರಿಯನ್ನು ಮಾರ್ಕ್ ಕಾರ್ನಿ ಶುಕ್ರವಾರ ಕೆನಡಾದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. 2015 ರಿಂದ ಕೆನಡಾವನ್ನು ಮುನ್ನಡೆಸುತ್ತಿದ್ದ ಜಸ್ಟಿನ್ ಟ್ರುಡೊ ಅವರ ಬದಲಿಗೆ ಕಾರ್ನಿ ಒಟ್ಟಾವಾದಲ್ಲಿ ನಡೆದ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಕೆನಡಾದ ಆಡಳಿತಾರೂಢ ಲಿಬರಲ್ ಪಕ್ಷದ ನಾಯಕರಾಗಿ ಆಯ್ಕೆಯಾದ ಕೆಲವೇ ದಿನಗಳ ನಂತರ ಅರ್ಥಶಾಸ್ತ್ರಜ್ಞ ಮತ್ತು ರಾಜಕೀಯ ಹೊಸಬ ಮಾರ್ಕ್ ಕಾರ್ನೆ ಶುಕ್ರವಾರ ಕೆನಡಾದ ಹೊಸ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ದೇಶದ ಕೇಂದ್ರ ಬ್ಯಾಂಕ್ ಬ್ಯಾಂಕ್ ಆಫ್ ಕೆನಡಾ ಮತ್ತು ಬ್ಯಾಂಕ್ ಆಫ್ ಇಂಗ್ಲೆಂಡ್ನ ಗವರ್ನರ್ ಆಗಿ ಕಾರ್ನೆ ಈ ಹಿಂದೆ ಎರಡೂ ದೇಶಗಳಿಗೆ ಪ್ರಮುಖ ಆರ್ಥಿಕ ಅಡಚಣೆಯನ್ನು ಎದುರಿಸಲು ಸಹಾಯ ಮಾಡಿದ್ದರು. ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ನಡೆಯುತ್ತಿರುವ ವ್ಯಾಪಾರ ಯುದ್ಧದ ಬಗ್ಗೆ ಕಾರ್ನೆ ಮಾತುಕತೆ ನಡೆಸುತ್ತಿರುವಾಗ ಆ ಅನುಭವವು ಉಪಯುಕ್ತವಾಗುವ ನಿರೀಕ್ಷೆಯಿದೆ. ಕಳೆದ ವಾರ ನಡೆದ…

Read More

ನವದೆಹಲಿ: ಇರಾಕ್ ಮತ್ತು ಸಿರಿಯಾದಲ್ಲಿ ಇಸ್ಲಾಮಿಕ್ ಸ್ಟೇಟ್ (ISIS) ನ ನಾಯಕ, ಅಬು ಖದೀಜಾ ಎಂದೂ ಕರೆಯಲ್ಪಡುವ ಅಬ್ದುಲ್ಲಾ ಮಕಿ ಮುಸ್ಲೆಹ್ ಅಲ್-ರಿಫಾಯಿ, ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇರಾಕಿ ಪ್ರಧಾನಿ ಮೊಹಮ್ಮದ್ ಶಿಯಾ ಅಲ್-ಸುಡಾನಿ ಶುಕ್ರವಾರ ದೃಢಪಡಿಸಿದ್ದಾರೆ. “ಇರಾಕ್ ಮತ್ತು ವಿಶ್ವದ ಅತ್ಯಂತ ಅಪಾಯಕಾರಿ ಭಯೋತ್ಪಾದಕರಲ್ಲಿ ಒಬ್ಬರು” ಎಂದು ಬಣ್ಣಿಸಲಾದ ಅಬು ಖದೀಜಾ ಅವರನ್ನು ಇರಾಕಿ ಭದ್ರತಾ ಪಡೆಗಳು ISIS ವಿರುದ್ಧ ಹೋರಾಡುವ ಅಮೆರಿಕ ನೇತೃತ್ವದ ಒಕ್ಕೂಟದ ಸಮನ್ವಯದೊಂದಿಗೆ ಹೊಡೆದುರುಳಿಸಿದವು. https://twitter.com/RealZoya1/status/1900550101380063706?ref_src=twsrc%5Etfw%7Ctwcamp%5Etweetembed%7Ctwterm%5E1900550101380063706%7Ctwgr%5E03cd8d0607d3c9df7f424c6ea02f876a8a1c65ac%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fenglish%2Fasianetnewsable-epaper-dh45a668314cf54d1db4076a42953091e8%2Fbreakingoneofworldsmostdangerousterroristsisisleaderabukhadijakillediniraqiusoperation-newsid-n655963871 ಈ ಕಾರ್ಯಾಚರಣೆಯು ಉಗ್ರಗಾಮಿ ಗುಂಪಿನ ವಿರುದ್ಧ ನಡೆಯುತ್ತಿರುವ ಇರಾಕ್ನ ಯುದ್ಧದಲ್ಲಿ ಮಹತ್ವದ ವಿಜಯವನ್ನು ಸೂಚಿಸುತ್ತದೆ. ಇದು ತನ್ನ ಪ್ರಾದೇಶಿಕ ನಿಯಂತ್ರಣವನ್ನು ಕಳೆದುಕೊಂಡರೂ ಭದ್ರತಾ ಬೆದರಿಕೆಯನ್ನು ಒಡ್ಡುತ್ತಲೇ ಇದೆ. ದಾಳಿಗಳನ್ನು ಸಂಘಟಿಸುವಲ್ಲಿ ಮತ್ತು ಐಸಿಸ್ಗೆ ಹೋರಾಟಗಾರರನ್ನು ನೇಮಕ ಮಾಡುವಲ್ಲಿ ಅಬು ಖದೀಜಾ ಪ್ರಮುಖ ಪಾತ್ರ ವಹಿಸಿದ್ದಾನೆ ಎಂದು ನಂಬಲಾಗಿದೆ. ಅವರ ಸಾವು ಇರಾಕ್ ಮತ್ತು ಸಿರಿಯಾದಲ್ಲಿ ಗುಂಪಿನ ನಾಯಕತ್ವ ಮತ್ತು ಕಾರ್ಯಾಚರಣೆಯ ಸಾಮರ್ಥ್ಯಗಳಿಗೆ ದೊಡ್ಡ ಹೊಡೆತವನ್ನು ನೀಡುವ…

Read More

ಬೆಂಗಳೂರು: ಹವಾಮಾನ ಇಲಾಖೆ ಹಾಗೂ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಜಿಲ್ಲೆಗೆ ಬಿಸಿಗಾಳಿ ಎಚ್ಚರಿಕೆ (ಹೀಟ್ ವೇವ್) ನೀಡಿದೆ. ಹೀಟ್ ವೇವ್ ಸ್ಟ್ರೋಕ್ (ಶಾಖದ ಅಲೆ) ನಿಂದಾಗಿ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಾರ್ವಜನಿಕರ ಹಿತದೃಷ್ಟಿಯಿಂದ ಮನ್ನೆಚ್ಚರಿಕೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಹೀಟ್ ವೇವ್ ಸ್ಟ್ರೋಕ್ ತಪ್ಪಿಸಲು ಅನುಸರಿಸಬೇಕಾದ ಕ್ರಮಗಳು: ಸಾರ್ವಜನಿಕರು ಹೀಟ್ ವೇವ್ ಕುರಿತು ಸದಾ ಎಚ್ಚರಿಕೆಯಿಂದ ಇರಬೇಕು. ರೇಡಿಯೋ,ಟಿವಿ,ದಿನ ಪತ್ರಿಕೆಗಳಲ್ಲಿ ಬರುವ ಮುನ್ಸೂಚನೆಗಳನ್ನು ತಿಳಿದುಕೊಂಡು ಅವುಗಳನ್ನು ಪಾಲಿಸಬೇಕು. ಬಾಯಾರಿಕೆಯಿಲ್ಲದಿದ್ದರೂ ಹೆಚ್ಚಾಗಿ ನೀರನ್ನು ಕುಡಿಯುಬೇಕು. ಹಗುರ, ತಿಳಿ-ಬಣ್ಣದ, ಸಡಿಲವಾದ ಮತ್ತು ರಂಧ್ರವುಳ್ಳ ಹತ್ತಿ ಬಟ್ಟೆಗಳನ್ನು ರಕ್ಷಣಾತ್ಮಕ ಕನ್ನಡಕಗಳು, ಛತ್ರಿ,ಟೋಪಿ, ಬೂಟುಗಳು ಅಥವಾ ಚಪ್ಪಲಿಗಳನ್ನು ಧರಿಸಿಬೇಕು. ರಾತ್ರಿ ವೇಳೆ ಬಸ್ಸಿನಲ್ಲಿ ದೂರದ ಪ್ರಯಾಣ ಉತ್ತಮ, ಒಂದು ವೇಳೆ ಹಗಲಿನಲ್ಲಿ ಪ್ರಯಾಣ ಮಾಡುವ ಸಂದರ್ಭ ಬಂದರೆ, ನಿಮ್ಮೊಂದಿಗೆ ನೀರನ್ನು ತೆಗೆದುಕೊಂಡು ಹೋಗಿ ಕುಡಿಯಬೇಕು. ಬಿಸಿನಲ್ಲಿ ಹೊರಗೆ ಕೆಲಸ ಮಾಡುವವರು,…

Read More

ಚಿತ್ರದುರ್ಗ :  ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರೆಯ ದೊಡ್ಡ ರಥೋತ್ಸವ ಇದೇ ಮಾರ್ಚ್ 16 ರಂದು ಭಾನುವಾರ ನಡೆಯಲಿದ್ದು, ಜಾತ್ರೆಗೆ ಅಂತಿಮ ಹಂತದ ಸಿದ್ಧತೆಗಳು ಪೂರ್ಣಗೊಂಡಿದ್ದು, ಹಟ್ಟಿ ತಿಪ್ಪೇಶನ ಜಾತ್ರೆಗೆ ಕ್ಷಣಗಣನೆ ಆರಂಭವಾಗಿದೆ. ಮಧ್ಯ ಕರ್ನಾಟಕದ ಐತಿಹಾಸಿಕ ನಾಯಕನಹಟ್ಟಿ ಜಾತ್ರೆಗೆ ನಾಡಿನ ಹಲವು ಭಾಗಗಳಿಂದ ಲಕ್ಷಾಂತರ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಭಕ್ತಾಧಿಕಾರಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ವಹಿಸಲಾಗಿದೆ. ಜಾತ್ರೆ ಪ್ರಯುಕ್ತ ನಾಯಕನಹಟ್ಟಿ ಪಟ್ಟಣ ನೂತನ ವಧುವಿನಂತೆ ಸಿಂಗಾರಗೊಂಡಿದೆ. ತಿಪ್ಪೇರುದ್ರಸ್ವಾಮಿ ದೇವಾಲಯದ ಒಳಮಠ ಮತ್ತು ಹೊರಮಠದ ಆವರಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿಟ್ಟಿನಲ್ಲಿ ಎರಡೂ ದೇವಾಲಯದ ಆವರಣ ಸ್ವಚ್ಛಗೊಳಿಸಲಾಗಿದೆ. ಬಿಸಿಲಿನ ತಾಪ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಎರಡೂ ದೇವಾಲಯಗಳ ಆವರಣದಲ್ಲಿ ಬೃಹತ್ ಚಪ್ಪರದ ವ್ಯವಸ್ಥೆ ಮಾಡಲಾಗಿದೆ. ಇದರ ಜೊತೆಗೆ ಹೊರಮಠ ದೇವಾಲಯದ ಆವರಣದ ಸುತ್ತಲೂ ಶಾಶ್ವತವಾಗಿ ನೆರಳಿನ ವ್ಯವಸ್ಥೆಗಾಗಿ ಶೆಡ್ ನಿರ್ಮಾಣ ಮಾಡಲಾಗಿದೆ. ಪಟ್ಟಣದ ಎಲ್ಲಾ ವಾರ್ಡ್ ಮತ್ತು ರಸ್ತೆಯ ಇಕ್ಕೆಲಗಳಲ್ಲಿ ವಿದ್ಯುತ್ ದೀಪಾಲಂಕಾರ…

Read More

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವಗೊಂಡನಹಳ್ಳಿ ಬಳಿಯಲ್ಲಿ ಅಪಘಾತದಲ್ಲಿ ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯ ಎಸ್ ಎಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಬೆಂಗಳೂರಿನಿಂದ ಕುಮಾರ ಪಟ್ಟಣ ಸಮೀಪದ ಸ್ವಗ್ರಾಮಕ್ಕೆ ತೆರಳುತ್ತಿದ್ದಂತ ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಅವರು ಮಾರ್ಗ ಮಧ್ಯೆ ಮೂತ್ರ ವಿಸರ್ಜನೆಗೆ ಕಾರಿನಿಂದ ಇಳಿಯುತ್ತಿದ್ದರು. ಈ ವೇಳೆಯಲ್ಲಿ ಹಿಂಬದಿಯಿಂದ ಸ್ಕೂಟರ್ ಒಂದು ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ತಲೆ, ಕೈ-ಕಾಲುಗಳಿಗೆ ಪೆಟ್ಟು ಬಿದ್ದಿರುವುದಾಗಿ ತಿಳಿದು ಬಂದಿದೆ. ಬೈಕ್ ಗುದ್ದಿದ ಕಾರಣ ಗಾಯಗೊಂಡ ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಅವರನ್ನು ಹಿರಿಯೂರು ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು, ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯ ಎಸ್ ಎಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಇದೀಗ ರುದ್ರಪ್ಪ ಲಮಾಣಿ ಅವರು ಪ್ರಾಣಾಪಾಯದಿಂದ ಪಾರಾಗಿರುವುದಾಗಿ ತಿಳಿದು ಬಂದಿದೆ. ವರದಿ: ವಸಂತ ಬಿ ಈಶ್ವರಗೆರೆ https://kannadanewsnow.com/kannada/woman-killed-in-elephant-attack-in-hassans-belur-minister-ishwar-khandre-condoles-death/ https://kannadanewsnow.com/kannada/india-57-corporation-vitaminb12/

Read More

ಬೆಂಗಳೂರು : ಬೇಲೂರು ತಾಲೂಕಿನ ಕೋಗೋಡು ಗ್ರಾಮದಲ್ಲಿ 45 ವರ್ಷದ ಮಹಿಳೆಯೊಬ್ಬರು ಕಾಡಾನೆ ದಾಳಿಯಿಂದ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ, ಈ ದುಃಖದ ಸಂದರ್ಭದಲ್ಲಿ ಸರ್ಕಾರ ಅವರ ಕುಟುಂಬದ ಜೊತೆ ನಿಲ್ಲುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸಂತಾಪ ಸೂಚಿಸಿದ್ದಾರೆ. ಮೃತ ಮಹಿಳೆಯ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬಕ್ಕೆ ಈ ನೋವು ತಾಳಿಕೊಳ್ಳುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿರುವ ಅವರು, ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಿಸಲು ಸರ್ವ ಪ್ರಯತ್ನ ಮಾಡುತ್ತಿದ್ದು, ಸರ್ಕಾರ ಸಂವೇದನಾತ್ಮಕವಾಗಿದೆ. ಜನರು ಮಳೆಗಾಲ ಆರಂಭವಾಗುವವರೆಗೆ ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಿದ್ದಾರೆ. ಎಪಿಸಿಸಿಎಫ್ ದರ್ಜೆಯ ಅಧಿಕಾರಿ ನೇತೃತ್ವದ ತಂಡವನ್ನು ಹಾಸನ ಜಿಲ್ಲೆಗೆ ಕಳುಹಿಸಿ, ಅಧ್ಯಯನ ಮಾಡಿ ಮಾನವ-ಆನೆ ಸಂಘರ್ಷಕ್ಕೆ ಶಾಶ್ವತ ಪರಿಹಾರ ಹುಡುಕಲು ಸೂಚಿಸುವುದಾಗಿ ಅವರು ಹೇಳಿದ್ದಾರೆ. ಇತ್ತೀಚೆಗೆ ಬೇಲೂರು ತಾಲೂಕಿನಲ್ಲಿ ಆನೆ ದಾಳಿಯಿಂದ ಮೃತಪಟ್ಟ ಯುವಕನ ಮನೆಗೆ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದ ತರುವಾಯ, ಬೇಲೂರು ಪಟ್ಟಣದಲ್ಲಿ…

Read More

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ಬಳಿಯಲ್ಲಿ ವಿಧಾನಸಭೆ ಉಪಸಭಾಪತಿ ರುದ್ರಪ್ಪ ಲಮಾಣಿ ಪ್ರಯಾಣಿಸುತ್ತಿದ್ದಂತ ಕಾರು ಅಪಘಾತವಾಗಿದೆ. ಈ ಅಪಘಾತದಲ್ಲಿ ಅವರು ಗಾಯಗೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವಗೊಂಡನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ವಿಧಾನಸಭೆ ಉಪ ಸಭಾಪತಿ ರುದ್ರಪ್ಪ ಲಮಾಣಿ ಪ್ರಯಾಣಿಸುತ್ತಿದ್ದಂತ ಕಾರು ಅಪಘಾತವಾಗಿದೆ. ಈ ಅಪಘಾತದಲ್ಲಿ ಉಪ ಸಭಾಪತಿ ರುದ್ರಪ್ಪ ಲಮಾಣಿ ಗಾಯಗೊಂಡಿದ್ದಾರೆ. ಅವರಿಗೆ ಹಿರಿಯೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯ ಎಸ್ ಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ ಚಿಕಿತ್ಸೆಯ ಬಳಿಕ ಉಪ ಸಭಾಪತಿ ರುದ್ರಪ್ಪ ಲಮಾಣಿ ಅವರು ಪ್ರಾಣಾಪಾಯದಿಂದ ಪಾರಾಗಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ವರದಿ: ವಸಂತ ಬಿ ಈಶ್ವರಗೆರೆ https://kannadanewsnow.com/kannada/gujarat-one-woman-killed-three-injured-in-drunken-driving-accident/ https://kannadanewsnow.com/kannada/kiocl-to-get-permission-if-rules-are-complied-with-minister-ishwar-khandre/

Read More

ಬೆಂಗಳೂರು: ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ (ಕೆ.ಐ.ಎ.ಸಿ.ಎಲ್) ನಿಬಂಧನೆಗಳನ್ನು ಸಂಪೂರ್ಣವಾಗಿ ಅನುಪಾಲನೆ ಮಾಡಿದಲ್ಲಿ ಸಂಡೂರು, ದೇವದರಿಯಲ್ಲಿ ಗಣಿಗಾರಿಕೆಗೆ ಅನುಮತಿ ನೀಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಧಾನಸಭೆಯಲ್ಲಿಂದು ನಿಯಮ 73ರಡಿ ಡಾ. ಭರತ್ ಶೆಟ್ಟಿ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಅವರು, 2022ರ ಡಿಸೆಂಬರ್ 16ರಂದು ಉಪಯೋಗಿ ಸಂಸ್ಥೆ ಉನ್ನತಾಧಿಕಾರ ಸಮಿತಿಯ ಶಿಫಾರಸು ಮತ್ತು ಸೂಚನೆಗಳನ್ನು ಪಾಲನೆ ಮಾಡಬೇಕು ಎಂಬ ಷರತ್ತುಗೊಳಪಟ್ಟು ದೇವದರಿಯಲ್ಲಿ ಗಣಿಗಾರಿಕೆ ನಡೆಸಲು ಅನುಮೋದನೆ ನೀಡಲಾಗಿದೆ. ಈ ಹಿಂದೆ ಕೆಐಓಸಿಎಲ್ ರಾಜ್ಯದಲ್ಲಿ ಗಣಿಗಾರಿಕೆ ನಡೆಸುವಾಗ ಹಲವು ನಿಯಮಗಳ ಉಲ್ಲಂಘನೆ ಮಾಡಿದ್ದು, ನೋಟಿಸ್ ನೀಡಲಾಗಿದೆ. ಲಕ್ಯಾ ಅಣೆಕಟ್ಟೆ ಎತ್ತರಿಸಿ 340 ಹೆಕ್ಟೇರ್ ಅರಣ್ಯಕ್ಕೆ ಹಾನಿ ಮಾಡಿದ್ದಾರೆ. ಕುದುರೆಮುಖ ರಾಷ್ಟ್ರೀಯ ಉದ್ಯಾನದೊಳಗೆ ಕೊಳವೆ ಮಾರ್ಗ ಅಳವಡಿಸುವುದೂ ಸೇರಿ 465.73ಹೆಕ್ಟೇರ್ ಪ್ರದೇಶದಲ್ಲಿ ಅನುಮತಿ ಇಲ್ಲದೆ ಅರಣ್ಯೇತರ ಉದ್ದೇಶಕ್ಕೆ ಬಳಕೆ ಮಾಡಿದ್ದಾರೆ. ಈ ಪರಿಸರ ಹಾನಿಗೆ 142 ಕೋಟಿ ರೂ. ಕಟ್ಟಬೇಕಿದೆ. ಇದರ…

Read More