Author: kannadanewsnow09

ಬೆಂಗಳೂರು: ಕುಮಾರಸ್ವಾಮಿ ಫ್ಯಾಕ್ಟರಿ ಕಟ್ಟಲಿ, ಅನುಮತಿ ಕೊಡ್ತೀವಿ ಎಂದು ಡಿಸಿಎಂ ಡಿಕೆಶಿ ಹೇಳಿಕೆ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವರು; ನಾನು ಸಿಎಂ ಆಗಿದ್ದಾಗ ಏನೆಲ್ಲ ಸುಧಾರಣೆಗಳನ್ನು ತಂದಿದ್ದೇನೆ ಎಂಬುದನ್ನು ಅವರು ತಿಳಿದುಕೊಳ್ಳಲಿ. ಇವರ ಯೋಗ್ಯತೆಗೆ ರಸ್ತೆ ಗುಂಡಿ ಮುಚ್ಚೋಕೆ ಆಗಿಲ್ಲ ಎಂಬುದಾಗಿ ಹೇಳುವ ಮೂಲಕ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ನಾನು ಕಾಂಪಿಟ್ ವಿತ್ ಚೈನಾ ಎನ್ನುವ ಯೋಜನೆ ಮಾಡಿದೆ. 9 ಕ್ಲಸ್ಟರ್ ಗಳಲ್ಲಿ‌ ಕೈಗಾರಿಕೆ ಮಾಡಿದ್ದೆ. ಲಕ್ಷಾಂತರ ಜನರಿಗೆ ಉದ್ಯೋಗ ಮಾಡಿಕೊಡಲು ಯೋಜನೆ ಅದಾಗಿತ್ತು. ಕೈಗಾರಿಕೆ‌‌ ಕ್ಷೇತ್ರಕ್ಕೆ 25 ಸಾವಿರ ಕೋಟಿ ಸಬ್ಸಿಡಿ ನೀಡುವ ಯೋಜನೆ ಇತ್ತು. ಆದರೆ ಇವರು ಸೇರಿ ನನ್ನ ಸರ್ಕಾರ ತೆಗೆದರು. ಇವರ ಯೋಗ್ಯತೆಗೆ ಗುಂಡಿ ಮುಚ್ಚೋಕೆ ಆಗಿಲ್ಲ. ಯಾಕ್ಕೆ ಆಗಿಲ್ಲ ಇವರಿಂದ? ಎಂದು ಡಿಕೆಶಿಗೆ ತಿರುಗೇಟು ಕೊಟ್ಟರು. ಚರ್ಚೆ ಮಾಡುವಷ್ಟು ಯೋಗ್ಯತೆ ಉಳಿಸಿಕೊಂಡಿಲ್ಲ: ಬಹಿರಂಗ…

Read More

ಬೆಂಗಳೂರು: ಆರ್ ಎಸ್ ಎಸ್ ಪಥ ಸಂಚಲನ ಇವತ್ತು ನಿನ್ನೆಯಿಂದ ಮಾಡುತ್ತಿಲ್ಲ. ದಶಕಗಳಿಂದ ಮಾಡಿಕೊಂಡು ಬರುತ್ತಿದೆ. ಆದರೆ, ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಆರ್ ಎಸ್ ಎಸ್ ವಿಷಯ ಮುನ್ನೆಲೆಗೆ ತಂದಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು; ಆರ್ ಎಸ್ ಎಸ್ ಅನ್ನು ನಿಷೇಧ ಮಾಡೋದಕ್ಕೆ ಸಾಧ್ಯವಿಲ್ಲ. ನಿತ್ಯ ಯಾಕೆ ಅವರ ಬಗ್ಗೆ ಮಾತಾಡ್ತೀರ? ಅವರ ಪಾಡಿಗೆ ಅವರು ಏನು ಮಾಡಿಕೊಂಡು ಹೋಗ್ತಾ ಇದ್ದಾರೆ. ಆರ್ ಎಸ್ ಎಸ್ ಬಗ್ಗೆ ಮಾತಾಡಿ ಸಮಯ ಯಾಕೆ ವೇಸ್ಟ್ ಮಾಡ್ತೀರಾ ಎಂದು ಹರಿಹಾಯ್ದರು ಸ್ವಲ್ಪ ದಿನ ಧರ್ಮಸ್ಥಳದ ಮೇಲೆ ಬಿದ್ದಿರಿ. ಎಸ್ ಐಟಿ ಅಂತ ಮಾಡಿ ಕಾಲಹರಣ ಮಾಡಿದಿರಿ. ಈಗ ಮಹೇಶ್ ಶೆಟ್ಟಿ ತಿಮರೋಡಿಗೆ ಒಂದು ಕೇಸಿನಲ್ಲಿ ರಿಲೀಫ್ ಸಿಕ್ಕಿದೆ. ಈ ಸರ್ಕಾರದ ಕಾಲದಲ್ಲಿ ಯಾವುದು ತಾರ್ಕಿಕ ಅಂತ್ಯಕ್ಕೆ ಹೋಗಲ್ಲ. ಸುಖಾ ಸುಮ್ಮನೆ ಕಾಲಹರಣ ಮಾಡಿಕೊಂಡು ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು…

Read More

ಬೆಂಗಳೂರು: ಕಾಂಗ್ರೆಸ್ಸಿಗರು ಕೆಂಪೇಗೌಡರ ಕನಸನ್ನು 5 ತುಂಡು ಮಾಡಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಕ್ಷೇಪಿಸಿದ್ದಾರೆ. ಈಗ ಇದು ಒಂದು ಬೆಂಗಳೂರಲ್ಲ; 5 ಬೆಂಗಳೂರು ಎಂದು ಟೀಕಿಸಿದರು. ಜಿಬಿಎ (ಗ್ರೇಟರ್ ಬೆಂಗಳೂರು) ಚುನಾವಣೆ ತಯಾರಿ ಸಂಬಂಧ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಜಕ್ಕೂರಿನ ಅಮರ್ ಕನ್ವೆನ್ಷನ್ ಸಭಾಂಗಣದಲ್ಲಿ ಇಂದು ಪ್ರಮುಖರ ‘ಸಂಕಲ್ಪ’ ಸಭೆ ನಡೆಯಿತು. ಈ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಜನಮನದಿಂದ ಈಗ ಕಾಂಗ್ರೆಸ್ ಹೊರಟು ಹೋಗಿದೆ. ಹೆಣ್ಮಕ್ಕಳು ಹಿಡಿಶಾಪ ಹಾಕುತ್ತಿದ್ದಾರೆ. ಇನ್ನೂ ಎರಡೂವರೆ ವರ್ಷ ಈ ಸರಕಾರವನ್ನು ಸಹಿಸಿಕೊಳ್ಳಬೇಕಾದ ನೋವು ನಮಗಿದೆ ಎಂದು ತಿಳಿಸಿದರು. ಈ ಕ್ಷೇತ್ರದಲ್ಲಿ ಸುಮಾರು 400 ಬೂತ್‍ಗಳಿದ್ದು, 4 ಲಕ್ಷ ಮತದಾರರಿದ್ದಾರೆ. ಬೂತ್ ಮಟ್ಟದ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಬೇಕೆಂದು ವಿನಂತಿಸಿದರು. ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಮಾಡಿದ ಕೆಲವು ಕುತಂತ್ರಗಳಿಗೆ ನಾವು ಸಮರ್ಥ ಉತ್ತರ ಕೊಡಲಾಗಲಿಲ್ಲ ಎಂದು ವಿಶ್ಲೇಷಿಸಿದರು. ನಾನು ಕಳೆದ 46-47 ವರ್ಷಗಳಿಂದ ರಾಜಕಾರಣದಲ್ಲಿದ್ದೇನೆ. ಚುನಾವಣೆ ಹತ್ತಿರ ಬಂದಾಗ ಕಾಂಗ್ರೆಸ್ಸಿನಲ್ಲಿ ಹತ್ತಾರು ಜನರು…

Read More

ನವದೆಹಲಿ: ಹಿರಿಯ ಬಾಲಿವುಡ್ ಮತ್ತು ಟಿವಿ ನಟ ಸತೀಶ್ ಶಾ ನಿಧನರಾಗಿದ್ದಾರೆ. ನಿರ್ದೇಶಕ ಅಶೋಕ್ ಪಂಡಿತ್ ವೀಡಿಯೊ ಹಂಚಿಕೊಳ್ಳುವ ಮೂಲಕ ಇದನ್ನು ದೃಢಪಡಿಸಿದ್ದಾರೆ. ಅವರು ತಮ್ಮ ನಟನಾ ವೃತ್ತಿಜೀವನದುದ್ದಕ್ಕೂ ಹಲವಾರು ಅಪ್ರತಿಮ ಪ್ರದರ್ಶನಗಳನ್ನು ನೀಡಿದ್ದಾರೆ. ಅವರ ಗಮನಾರ್ಹ ಪಾತ್ರಗಳಲ್ಲಿ ಕಲ್ ಹೋ ನಾ ಹೋ, ಜಾನೆ ಭಿ ದೋ ಯಾರೋ, ಸಾರಾಭಾಯ್ ವರ್ಸಸ್ ಸಾರಾಭಾಯ್, ಮೈ ಹೂ ನಾ ಸೇರಿವೆ. https://kannadanewsnow.com/kannada/mlc-ramesh-babu-gave-this-response-to-justice-santosh-hegdes-statement/ https://kannadanewsnow.com/kannada/australian-womens-world-cup-players-allegedly-molested-in-indore-accused-arrested/

Read More

ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರ ಹೇಳಿಕೆಗೆ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷರಾದಂತ ರಮೇಶ್ ಬಾಬು ಈ ಕೆಳಕಂಡಂತೆ ತಿರುಗೇಟು ನೀಡಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಆರ್ ಎಸ್ ಎಸ್ ಬ್ಯಾನ್ ಗೆ ಸಂಬಂಧಪಟ್ಟಂತೆ ಖಾಸಗಿ ಚಾನೆಲ್ ಗೆ ಸಂದರ್ಶನ ನೀಡಿರುವ ನ್ಯಾಯಮೂರ್ತಿ ಸಂತೋಷ ಹೆಗ್ಡೆರವರು ಹಲವಾರು ವಿಷಯಗಳನ್ನು ಪ್ರಸ್ತಾಪ ಮಾಡುವುದರ ಮೂಲಕ ಒಂದು ಹೊಸ ಚರ್ಚೆಯನ್ನು ಹುಟ್ಟು ಹಾಕಿದ್ದಾರೆ. ಆರ್ ಎಸ್ ಎಸ್ ಬ್ಯಾನ್ ಮಾಡುವುದಾದರೆ ಕಾಂಗ್ರೆಸ್ ಪಕ್ಷವನ್ನು ಬ್ಯಾನ್ ಮಾಡಬಹುದಲ್ಲವೇ ಎಂದು ಹೇಳುವ ಮೂಲಕ ತಮ್ಮ ದ್ವಂದ್ವ ವ್ಯಕ್ತಿತ್ವವನ್ನು ಜನರ ಮುಂದೆ ಬಿಚ್ಚಿಟ್ಟಿದ್ದಾರೆ. ಸ್ವತಂತ್ರ ಪೂರ್ವದಲ್ಲಿ ಎರಡು ಬಾರಿ ಮತ್ತು ಸ್ವತಂತ್ರಾ ನಂತರ ಮೂರು ಬಾರಿ ಬ್ಯಾನ್ ಗೆ ಒಳಗಾಗಿದ್ದ ಸಂಘ ಪರಿವಾರದ ಪರವಾಗಿ ಸಮರ್ಥ ವಕ್ತಾರರಾಗಿ ಕೆಲಸ ಮಾಡುವ ಜವಾಬ್ದಾರಿಯನ್ನು ಹೆಗಲಿಗೆ ಹೇರಿಸಿಕೊಂಡಿದ್ದಾರೆ ಎಂದಿದ್ದಾರೆ. ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಹಲ್ಲೆಗೆ ಯತ್ನಿಸಿದ ಸನಾತನಿಗಳ…

Read More

ಬೆಂಗಳೂರು: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಎನ್ನುವುದೇ ಬೋಗಸ್. ದುಡ್ಡು ಹೊಡೆಯುವುದಕ್ಕೆ ಮಾಡಿರುವ ಸುಲಿಗೆ ಕಾರ್ಯಕ್ರಮ ಇದಾಗಿದೆ. ಯಾರೂ ಖಾತಾ ಬದಲಾವಣೆ ಮಾಡಿಸಿಕೊಳ್ಳಲು ಹಣ ಕಟ್ಟಬೇಡಿ. ಎರಡು ವರ್ಷಗಳಲ್ಲಿ ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಕಡಿಮೆ ದರದಲ್ಲಿ ನಿಮಗೆ ಖಾತೆ ಮಾಡಿಕೊಡುತ್ತೇವೆ. ಈ ಸರ್ಕಾರದ ಬೋಗಸ್ ಆಮಿಷಕ್ಕೆ ಮರುಳಾಗಬೇಡಿ. ಇದು ನಾನು ಬೆಂಗಳೂರು ಜನತೆಗೆ ನೀಡುತ್ತಿರುವ ಮುಕ್ತ ಕರೆ ಎಂಬುದಾಗಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಬಿ ಖಾತಾವನ್ನು ಬಿ ಖಾತೆಗೆ ಪರಿವರ್ತನೆ ಮಾಡಿಕೊಳ್ಳಲು ರಾಜ್ಯ ಕಾಂಗ್ರೆಸ್ ಸರಕಾರ ರೂಪಿಸಿರುವ ಕಾರ್ಯಕ್ರಮದ ಕುರಿತು ಕೇಂದ್ರ ಸರಕಾರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದ ಮಾತುಗಳಿವು. ಕಾಂಗ್ರೆಸ್ ಸರ್ಕಾರ ಹಗಲು ದರೋಡೆ ಮಾಡುತ್ತಿದೆ. ಜನರನ್ನು ಸುಲಿಗೆ ಸರಕನ್ನಾಗಿ ಮಾಡಿಕೊಂಡಿದೆ. ಬೆಂಗಳೂರು ಜನರಿಗೆ ನಾನು ಹೇಳಲು ಬಯಸುತ್ತೇನೆ. ಯಾವುದೇ ಕಾರಣಕ್ಕೂ ಒಂದು ನಯಾಪೈಸೆ ಕಟ್ಟಬೇಡಿ. ಯಾವುದೇ ಕಾರಣಕ್ಕೂ ಎರಡು ವರ್ಷ ಖಾತೆ ಮಾಡಿಸಿಕೊಳ್ಳಬೇಡಿ.…

Read More

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಬಂಗಾರಪ್ಪ ಅವರ ಹುಟ್ಟಿದ ಹಬ್ಬ ನಾಳೆಯಾಗಿದೆ. ಈ ಹಿನ್ನಲೆಯಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಸಾಗರ ಉಪವಿಭಾಗೀಯ ಆಸ್ಪತ್ರೆಯ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸುವ ಮೂಲಕ, ಅವರ ಹುಟ್ಟಿದ ಹಬ್ಬವನ್ನು ಆಚರಿಸಲಿದ್ದಾರೆ. ಈ ಬಗ್ಗೆ ಶಾಸಕರ ಕಚೇರಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಕರ್ನಾಟಕದ ರಾಜಕಾರಣದ ಧ್ರುವತಾರೆ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ಬಂಗಾರಪ್ಪ ನವರ ಹುಟ್ಟುಹಬ್ಬ ದ ಪ್ರಯುಕ್ತ ದಿನಾಂಕ:-26-10-2025 ರಂದು ಬೆಳಗ್ಗೆ 10:30 ಕ್ಕೆ ಸಾಗರದ ಉಪವಿಭಾಗೀಯ ಆಸ್ಪತ್ರೆಯ ರೋಗಿಗಳಿಗೆ ಹಣ್ಣು-ಹಂಪಲು ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದಿದೆ. ಇನ್ನೂ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಅವರು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂಬುದಾಗಿ ತಿಳಿಸಿದೆ. ನಾಳೆ ಸೊರಬದ ಬಂಗಾರ ದಾಮದಲ್ಲಿ ನಮನ-ಚಿಂತನ ಸನ್ಮಾನ ಕಾರ್ಯಕ್ರಮ ಆಯೋಜನೆ ದಿನಾಂಕ: 26-10-2025ರ ಭಾನುವಾರದ ನಾಳೆ ರಾಜ್ಯ ಕಂಡ ದೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ’ನವರ 93ನೇ…

Read More

ಬೆಂಗಳೂರು : ವೈದ್ಯಕೀಯ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು, ಸಮಾಜಮುಖಿಯಾಗಿ ಸೇವೆ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಾಳಿದಾಸ ಹೆಲ್ತ್ ಎಜುಕೇಶನ್ ಮತ್ತು ಅಹಿಲ್ಯಾ ಟ್ರಸ್ಟ್ ಬೆಂಗಳೂರು ಇವರ ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ 2025ರ ಶೈಕ್ಷಣಿಕ ಸಾಲಿನ ನೀಟ್ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಸರ್ಕಾರಿ ಖೋಟ ಮೊದಲನೇ ವರ್ಷದ MBBS ಶಿಕ್ಷಣಕ್ಕೆ ಪ್ರವೇಶ ಪಡೆದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರೇರಣಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಕಾಳಿದಾಸ ಹೆಲ್ತ್ ಎಜುಕೇಶನ್ ಮತ್ತು ಅಹಿಲ್ಯಾ ಟ್ರಸ್ಟ್ ಸಂಸ್ಥೆಯು ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಪಡೆದ ಪ್ರತಿಭಾವಂತ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುತ್ತಿರುವುದು ಪ್ರಶಂಸಾರ್ಹ ಕಾರ್ಯ. ಎಂಬಿಬಿಎಸ್ ಶಿಕ್ಷಣಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ನೀಡಿ ಪ್ರೋತ್ಸಾಹ ನೀಡಲಾಗುತ್ತಿದೆ. ಸಂಸ್ಥೆಯ ರೂವಾರಿಗಳು, ಉತ್ತಮ ಸಾಮಾಜಿಕ ಕೆಲಸದಲ್ಲಿ ತೊಡಗಿಕೊಂಡಿರುವುದು ಅನುಕರಣೀಯವಾದುದು ಎಂದು ಪ್ರಶಂಸಿದರು. ಗಳಿಸಿದ ಸಂಪತ್ತಿನ ಅಲ್ಪಮೊತ್ತ ಸಮಾಜದ ಒಳಿತಿಗೆ ಬಳಸಿ ವಿದ್ಯಾರ್ಥಿವೇತನ ಪಡೆಯುವ ವೈದ್ಯಕೀಯ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು,…

Read More

ಮಂಡ್ಯ: ನಮಗೆ RSS ಮಾತ್ರ ಅಲ್ಲ ಶತ್ರು ಅಸಮಾನತೆಯ ವ್ಯವಸ್ಥೆ ಶತ್ರು. ಪ್ರತಿಯೊಬ್ಬರಿಗೂ ಹೋರಾಟ, ಪಥಸಂಚಲನ, ರ್ಯಾಲಿ ಮಾಡುವ ಹಕ್ಕು ಇದೆ. RSS ಗೆ ಅನುಮತಿ ಇದೆ ಅಂದ್ರೆ ಭೀಮ್ ಆರ್ಮಿ ಗೂ ಇದೆ ಎಂಬುದಾಗಿ ನಟ ಚೇತನ್ ಅಹಿಂಸಾ ಹೇಳಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮನುವಾದಿ ಪಕ್ಷಗಳು ಕಾಂಗ್ರೆಸ್ ನ ಕೆಲವು ಮಿನಿಸ್ಟರ್ ಗಳು ದಲಿತ ಸಂಘಟನೆಗಳನ್ನ ಅವರ ವಯಕ್ತಿಕ ರಾಜಕೀಯ ಲಾಭಕ್ಕೆ ಬಳಿಸಿಕೊಂಡಿದ್ದಾರೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಲ್ಲಿ ಅವರು ಬಾಬಾ ಸಾಹೇಬ್ ತರನೇ ದಲಿತರಾಗಿ ಹುಟ್ಟಿರಬಹುದು. ಆದ್ರೆ ಕುವೆಂಪು ಅವರ ಸಿದ್ದಾಂತ ಉಳಿಸುತ್ತಿರುವವರು ನಾವು ಸಮಾನತವಾದಿಗಳು. ಜಾತಿ ರಾಜಕೀಯ ಮಾಡ್ತಾರೆ ಅಷ್ಟೆ. ಪಕ್ಷದವರಿಗೆ ಶತ್ರು ಯಾರು? ಬೇರೆ ಪಕ್ಷದವರು ಎಂದರು. ದಲಿತ ಸಂಘಟನೆಗೆ ಶತ್ರು ಯಾರು? ಇಡೀ ಅಸಮಾನತೆಯ ಅನ್ಯಾಯದ ವ್ಯವಸ್ಥೆ. ಪ್ರತಿಯೊಬ್ಬರೂ ಅವರದೇ ಹಕ್ಕು ಇದೆ. ನಮಗೆ RSS ಮಾತ್ರ ಅಲ್ಲ ಶತ್ರು ಅಸಮಾನತೆಯ ವ್ಯವಸ್ಥೆ ಶತ್ರು. ನಾವು ಕುವೆಂಪು ಅನುಯಾಯಿಗಳು. ಯಾರು ಸಹ…

Read More

ಬೆಂಗಳೂರು: ನಗರದ ಪರಪ್ಪನ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯದ ಬಗ್ಗೆ ಸುದ್ದಿಯಾಗಿ ಕೆಲ ದಿನಗಳವರೆಗೆ ಅಷ್ಟೇ ಬಂದ್ ಆದರೇ, ಮತ್ತೆ ಅದೇ ಪ್ರಕ್ರಿಯೆ ನಡೆಯುತ್ತಿದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ. ಸಜಾ ಬಂಧಿಯೊಬ್ಬರ ಕೈದಿಯ ಪತ್ನಿ, ಜೈಲಿನೊಳಗೆ ಭೇಟಿ ನೀಡಿ, ಅವರೊಂದಿಗೆ ಪೋಟೋ ತೆಗೆಸಿಕೊಂಡಿರುವಂತ ಪೋಟೋಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್ ಬಳಕೆ ನಿಷೇಧಿಸಲಾಗಿದೆ. ಆಗಾಗ ಹಿರಿಯ ಅಧಿಕಾರಿಗಳು ಜೈಲಿನ ಮೇಲೆ ದಾಳಿ ನಡೆಸಿ ಇದಕ್ಕೆ ಬ್ರೇಕ್ ಹಾಕಲಾಗಿತ್ತು. ಇದರ ನಡುವೆಯೂ ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ರಾಜಾತಿಥ್ಯ ಮುಂದುವರೆದಿದೆ. ಹೌದು ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥಅಯ ಮುಂದುವರೆದಿದೆ. ಸಜಾ ಕೈದಿಯೊಬ್ಬನ ಪತ್ನಿ ರಾಜಾರೋಷವಾಗಿ ಜೈಲಿನೊಳಗೆ ಎಂಟ್ರಿಕೊಟ್ಟಿದ್ದಾರೆ. ಇದಷ್ಟೇ ಅಲ್ಲದೇ ಜೈಲಿನಲ್ಲಿ ಭೇಟಿ ಮಾಡಿ ಪೋಟೋವನ್ನು ಸಜಾಬಂಧಿಯೊಂದಿಗೆ ತೆಗೆಸಿಕೊಂಡು ಶೇರ್ ಮಾಡಿದ್ದಾರೆ. ಮಾರಪ್ಪ ಎಂಬಾತನ ಕೊಲೆ ಕೇಸ್ ನಲ್ಲಿ ಜೈಲನ್ನು ಸೇರಿರುವಂತ ಸಜಾಬಂಧಿ ಇವರಾಗಿದ್ದಾರೆ. ರಫೀಕ್ ಮತ್ತು ಸಾದಿಕ್ ಅಹಮ್ಮದ್ ಎಂಬುವರು ಜೈಲು…

Read More