Author: kannadanewsnow09

ಬೆಂಗಳೂರು: ಬಳ್ಳಾರಿ ಯುವಕನ ಮೃತದೇಹವನ್ನು ಎರಡು ಬಾರಿ ಪೋಸ್ಟ್ ಮಾರ್ಟಂ ಮಾಡಿರುವ ಬಗ್ಗೆ ಅಲ್ಲಿನ ಬಿಮ್ಸ್ ಅಧಿಕ್ಷಕರನ್ನು ತಕ್ಷಣವೇ ಬ್ರೈನ್ ಮ್ಯಾಪಿಂಗ್ ಗೆ ಒಳಪಡಿಸಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಒತ್ತಾಯಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ಬಳ್ಳಾರಿಯಲ್ಲಿ ಗನ್ ಮ್ಯಾನ್ ಹಾರಿಸಿದ ಗುಂಡಿಗೆ ಬಲಿಯಾದ ಯುವಕನ ಮೃತದೇಹವನ್ನು ಎರಡು ಬಾರಿ ಪೋಸ್ಟ್ ಮಾರ್ಟಂ ಮಾಡಲಾಗಿದೆ ಎಂಬ ತಮ್ಮ ಆರೋಪವನ್ನು ಪುನರುಚ್ಚರಿಸಿದ್ದಾರೆ. ತಮ್ಮ ಹೇಳಿಕೆಯ ಬಗ್ಗೆ ಗೃಹ ಸಚಿವ ಪರಮೇಶ್ವರ ಅವರು ನೀಡಿದ್ದ ಪ್ರತಿಕ್ರಿಯೆ ಬಗ್ಗೆ ಖಾರವಾಗಿ ತಿರುಗೇಟು ನೀಡಿರುವ ಕೇಂದ್ರ ಸಚಿವರು; ಗೃಹ ಸಚಿವ ಪರಮೇಶ್ವರ ಅವರೇ, ಬಳ್ಳಾರಿಯಲ್ಲಿ ಕಗ್ಗೊಲೆಯಾದ ನಿಮ್ಮದೇ ಪಕ್ಷದ ನತದೃಷ್ಟ ಕಾರ್ಯಕರ್ತನ ಡಬಲ್ ಪೋಸ್ಟ್ ಮಾರ್ಟಂ ಕಥಾನಕದ ಬಗ್ಗೆ ನಾನು ಹೇಳಿದ್ದು ಸತ್ಯ. ಸತ್ತ ಶರೀರವನ್ನೂ ರಾಜಕೀಯ ಸ್ವಾರ್ಥಕ್ಕೆ ಬಳಸಿಕೊಳ್ಳುವ ನಿಮ್ಮ ಕೀಳು ನಡವಳಿಕೆ ಕುರಿತು ನಾನು ಹೇಳಿದ್ದು ಅಕ್ಷರಶಃ ನಿಜ ಎಂದಿದ್ದಾರೆ. ಡಬಲ್ ಪೋಸ್ಟ್ ಮಾರ್ಟಂ…

Read More

ಬೆಂಗಳೂರು : ಮಾಜಿ‌ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜು ಅರಸು ಅವರ 2792 ದಿನಗಳನ್ನು ಸರಿಗಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಅಭಿನಂದನೆ ಸಲ್ಲಿಸಿದರು. ಸದಾಶಿವನಗರದ ಗೃಹಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ದಾಖಲೆ ಮುರಿಯಲು ಸಿದ್ದರಾಮಯ್ಯನವರಿಗೆ ಅವಕಾಶ ಮಾಡಿಕೊಟ್ಟ ಕಾಂಗ್ರೆಸ್ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ, ಕೆ.ಸಿ.ವೇಣುಗೋಪಾಲ್, ಸುರ್ಜೇವಾಲಾ ಅವರಿಗೂ ಅಭಿನಂದನೆ ತಿಳಿಸಿದರು. ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ ಇಂತಹ ಅವಕಾಶಗಳು ಸಾಧ್ಯ. ದೇವರಾಜ ಅರಸು ಅವರಿಗೂ ಅವಕಾಶ ನೀಡಲಾಗಿತ್ತು. ಈಗ ಸಿದ್ದರಾಮಯ್ಯ ಅವರಿಗೂ ಅವಕಾಶ ಕೊಟ್ಟಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ ಇಂತಹ ಬೆಳವಣಿಗೆಗಳನ್ನು ನೋಡಬಹುದು. ಬಡವರು ಮತ್ತು ಅಭಿವೃದ್ಧಿಯ ಬಗ್ಗೆ ಕಾಂಗ್ರೆಸ್ ಪಕ್ಷಕ್ಕೆ ಇರುವ ದೂರದೃಷ್ಟಿಯ ಬದ್ಧತೆ ಮತ್ತು ಸಿದ್ಧಾಂತದಿಂದ ಇದೆಲ್ಲ ಸಾಧ್ಯವಾಗಿದೆ ಎಂದು ಹೇಳಿದರು. ಬಳ್ಳಾರಿ ಘಟನೆಯ ಕುರಿತು ಪ್ರತಿಕ್ರಿಯಿಸಿದ ಅವರು, ಯಾವುದೇ ವಿಚಾರವಾಗಲಿ ತಿಳಿದುಕೊಂಡು ಮಾತನಾಡಬೇಕು. ಇಲ್ಲವಾದರೆ ಬೇರೆ ರೀತಿಯ ಪರಿಣಾಮ ಆಗುತ್ತದೆ. ನನ್ನನ್ನು ಸೇರಿದಂತೆ ರಾಜಕೀಯ…

Read More

ನವದೆಹಲಿ: ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಯುಐಡಿಎಐ) ಆಧಾರ್ ಪಿವಿಸಿ ಕಾರ್ಡ್ ಪಡೆಯಲು ಸೇವಾ ಶುಲ್ಕವನ್ನು ಜನವರಿ 1, 2026 ರಿಂದ ಜಾರಿಗೆ ಬರುವಂತೆ ಅಧಿಕೃತವಾಗಿ ಹೆಚ್ಚಿಸಿದೆ. ತಮ್ಮ ಗುರುತಿನ ಚೀಟಿಯ ಬಾಳಿಕೆ ಬರುವ, ಪಾಕೆಟ್ ಗಾತ್ರದ ಆವೃತ್ತಿಯನ್ನು ಆರ್ಡರ್ ಮಾಡುವ ನಿವಾಸಿಗಳು ಈಗ ರೂ. 75 ಪಾವತಿಸಬೇಕಾಗುತ್ತದೆ, ಇದು ಹಿಂದಿನ ದೀರ್ಘಕಾಲದ ಶುಲ್ಕ ರೂ. 50 ರಿಂದ ಹೆಚ್ಚಾಗಿದೆ. ಈ ಪರಿಷ್ಕರಣೆಯು ಪಿವಿಸಿ ಕಾರ್ಡ್ ಸೇವೆಗೆ 2020 ರಲ್ಲಿ ರಾಷ್ಟ್ರವ್ಯಾಪಿ ಬಿಡುಗಡೆಯಾದ ನಂತರ ಮೊದಲ ಬೆಲೆ ಏರಿಕೆಯಾಗಿದೆ. ಪರಿಷ್ಕೃತ ಶುಲ್ಕಗಳು myAadhaar ವೆಬ್‌ಸೈಟ್ ಅಥವಾ mAadhaar ಮೊಬೈಲ್ ಅಪ್ಲಿಕೇಶನ್ ಮೂಲಕ ಸಲ್ಲಿಸಲಾದ ವಿನಂತಿಗಳಿಗೆ ಮತ್ತು ಆ ದಿನಾಂಕದಿಂದ ಹೊಸ ಆರ್ಡರ್‌ಗಳನ್ನು ಮಾಡುವ ಎಲ್ಲಾ ಬಳಕೆದಾರರಿಗೆ ಅನ್ವಯಿಸುತ್ತದೆ. ಆಧಾರ್ ಪಿವಿಸಿ ಕಾರ್ಡ್ ಬೆಲೆ ಪರಿಷ್ಕರಣೆ 75 ರೂ.ಗಳ ಪರಿಷ್ಕೃತ ಶುಲ್ಕವು ತೆರಿಗೆಗಳು ಮತ್ತು ವಿತರಣಾ ಶುಲ್ಕಗಳನ್ನು ಒಳಗೊಂಡಿದೆ. ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಯುಐಡಿಎಐ) ದ ಇತ್ತೀಚಿನ ಜ್ಞಾಪಕ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಬೀದರ್ ಜಿಲ್ಲೆಯಲ್ಲಿ ಡಾ.ಜಯದೇವಿತಾಯಿ ಲಿಗಾಡೆ ಹಾಗೂ ಶ್ರೀ ಪ್ರಭುರಾವ ಕಂಬಳಿವಾಲೆ ಟ್ರಸ್ಟ್‌ಗಳನ್ನು ರಚಿಸಿ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಈ ಕುರಿತಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಜಿಲ್ಲಾಧಿಕಾರಿ, ಬೀದರ್‌ ಇವರ ದಿನಾಂಕ:05.12.2023ರ ಪತ್ರದಲ್ಲಿ, ದಿನಾಂಕ:07.11.2023ರಂದು ನಡೆದ ಸಭೆಯಲ್ಲಿ ಚರ್ಚಿಸಿದಂತೆ ಕರ್ನಾಟಕ ಏಕೀಕರಣ ಚಳುವಳಿ ಮತ್ತು ಕನ್ನಡ ಸಾಹಿತ್ಯಕ್ಕೆ ತಮ್ಮದೇ ಆದ ಕೊಡುಗೆ ನೀಡಿದ ಬೀದರ್ ಜಿಲ್ಲೆಯ ಮಹಾನ್ ಸಾಧಕರಾದ ಜಯದೇವಿ ತಾಯಿ ಲಿಗಾಡೆ ಹಾಗೂ ಪ್ರಭುರಾವ ಕಂಬಳಿವಾಲೆ ಇವರ ಹೆಸರಿನಲ್ಲಿ ಟ್ರಸ್ಟ್ ರಚನೆಗಾಗಿ ಪ್ರಸ್ತಾವನೆಯನ್ನು ಸಿದ್ಧಪಡಿಸಿ ಸಲ್ಲಿಸಿದ್ದರು ಎಂದಿದ್ದಾರೆ. ಅದರನ್ವಯ, 2025-26ನೇ ಸಾಲಿನ ಕ್ರಿಯಾಯೋಜನೆಯಲ್ಲಿ ಹೊಸದಾಗಿ ರಚನೆಯಾಗುವ ಟ್ರಸ್ಟ್‌ಗಳಿಗೆ ರೂ.35.00 ಲಕ್ಷಗಳನ್ನು ಅವಕಾಶ ಮಾಡಿಕೊಳ್ಳಲಾಗಿದ್ದು, ಜಿಲ್ಲಾಧಿಕಾರಿ, ಬೀದರ್ ಜಿಲ್ಲೆ ಇವರ ಪುಸ್ತಾವನೆಯಂತೆ ಜಯದೇವಿ ತಾಯಿ ಲಿಗಾಡೆ ಹಾಗೂ ಪ್ರಭುರಾವ ಕಂಬಳಿವಾಲೆ ಇವರ ಹೆಸರಿನಲ್ಲಿ ಟ್ರಸ್ಟ್‌ಗಳನ್ನು ರಚಿಸುವ ಕುರಿತು ಸರ್ಕಾರದ ಹಂತದಲ್ಲಿ ತೀರ್ಮಾನಿಸುವಂತೆ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರು…

Read More

ಮೈಸೂರು : ಸಮಾಜದಲ್ಲಿ ಅಸಮಾನತೆ ಇನ್ನೂ ಜೀವಂತವಾಗಿದ್ದು, ಅಸಮಾನತೆ ಹೋಗುವವರೆಗೂ, ಎಲ್ಲರಿಗೂ ನ್ಯಾಯ ಸಿಗುವವರೆಗೂ ಹೋರಾಟ ಹಾಗೂ ಜನರ ಕೆಲಸ ಮಾಡುತ್ತಲೇ ಇರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದಂತ ಅವರು, ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ಅವರ ದಾಖಲೆಯನ್ನು ಸರಿಗಟ್ಟಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ. ಈ ದಾಖಲೆ ಕಾಕತಾಳೀಯವಾಗಿ ಆಗಿದೆ. ದೇವರಾಜ ಅರಸು ಅವರು ಎಷ್ಟು ವರ್ಷ ಆಡಳಿತ ಮಾಡಿದ್ದಾರೆಂದು ತಿಳಿದಿರಲಿಲ್ಲ. ಜನರ ಆಶೀರ್ವಾದದಿಂದ ದೇವರಾಜ ಅರಸು ಅವರ ದಾಖಲೆಯನ್ನು ಮುರಿಯಲು ಸಾಧ್ಯವಾಗಿದೆ ಎಂದರು. ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸುವ ವಿಶ್ವಾಸವಿದೆ ಮುಖ್ಯಮಂತ್ರಿಯಾಗಿ ಅವಧಿಯನ್ನು ಪರಿಪೂರ್ಣ ಮಾಡುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಆ ಕುರಿತು ಪಕ್ಷದ ವರಿಷ್ಠರು ತೀರ್ಮಾನಿಸಬೇಕಿದೆ ಎಂದರು. ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸುವ ವಿಶ್ವಾಸವಿದೆ ಎಂದರು. ಮುಖ್ಯಮಂತ್ರಿಗಳ ಅಭಿಮಾನಿಗಳು ನಾಟಿ ಕೋಳಿ ಪಲಾವ್ ಹಂಚಿರುವ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿ ನನಗೆ ಈ ಬಗ್ಗೆ ತಿಳಿದಿಲ್ಲ…

Read More

ಬೆಂಗಳೂರು : “ಸಿದ್ದರಾಮಯ್ಯ ಅವರಿಗೆ ಒಳ್ಳೆಯದಾಗಲಿ, ಐ ವಿಶ್ ಹಿಮ್ ಆಲ್ ದ ಬೆಸ್ಟ್. ಗುಡ್ ಲಕ್” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಸದಾಶಿವನಗರ ನಿವಾಸ ಹಾಗೂ ಬೆಂಗಳೂರು ವಿವಿಯ ಜ್ಞಾನಜ್ಯೋತಿ ಸಭಾಂಗಣದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ಪೂರ್ಣಾವಧಿಗೆ ನಾನೇ ಸಿಎಂ ಆಗಿ ಮುಂದುವರಿಯುವ ವಿಶ್ವಾಸವಿದೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಈ ರೀತಿ ಪ್ರತಿಕ್ರಿಯೆ ನೀಡಿದರು. ಈ ಹೇಳಿಕೆಯಿಂದ ಮತ್ತೆ ಗೊಂದಲವಾಗುವುದಿಲ್ಲವೇ ಎಂದು ಕೇಳಿದಾಗ, “ನೀವುಗಳು (ಮಾಧ್ಯಮಗಳು) ಗೊಂದಲ ಮಾಡಿಕೊಳ್ಳುತ್ತಿದ್ದೀರಿ. ನಮಲ್ಲಿ ಯಾರಿಗೂ ಗೊಂದಲವಿಲ್ಲ” ಎಂದು ತಿಳಿಸಿದರು. ಸಿಎಂ ಅವರು ದಾಖಲೆ ನಿರ್ಮಿಸುತ್ತಿರುವ ಬಗ್ಗೆ ಕೇಳಿದಾಗ, “ಅವರಿಗೆ ಯಶಸ್ಸಾಗಲಿ, ಒಳ್ಳೆಯದಾಗಲಿ. ಅವರಿಗೆ ಹೆಚ್ಚು ಆರೋಗ್ಯ ಸಿಗಲಿ, ಜನರ ಸೇವೆ ಮಾಡುವ ಅವಕಾಶವನ್ನು ಭಗವಂತ ಅವರಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ತಿಳಿಸಿದರು. ಕುಮಾರಸ್ವಾಮಿ ಜೇಬಲ್ಲೇ ಐಟಿ ಇಲಾಖೆ ಇದೆಯಲ್ಲಾ? ಮೃತ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ ನೀಡಿದ ಪರಿಹಾರ ಹಣ ಮೂಲ…

Read More

ಶಿವಮೊಗ್ಗ : ಜಿಲ್ಲೆಯ ಪ್ರಸಿದ್ಧ ಸಾಗರದ ಮಾರಿಜಾತ್ರೆಯನ್ನು ಯಶಸ್ವಿಗೊಳಿಸುವಂತೆ ಪ್ರತಿಯೊಬ್ಬ ಅಧಿಕಾರಿಗಳು ಶ್ರಮಿಸಲು ಶಾಸಕ ಗೋಪಾಲಕೃಷ್ಣ ಬೇಳೂರು ಕರೆ ನೀಡಿದರು. ಅಲ್ಲದೇ ಒಂದೊಂದು ಸಮಿತಿಗೆ ತಾಲ್ಲೂಕು ಮಟ್ಟದ ಒಬ್ಬೊಬ್ಬ ಅಧಿಕಾರಿಯನ್ನು ನೇಮಕ ಮಾಡಲಾಗುತ್ತದೆ. ಅಧಿಕಾರಿಗಳು ಜಾತ್ರೆ ಯಶಸ್ಸಿಗಾಗಿ ತಮಗೆ ವಹಿಸಿರುವ ಸಮಿತಿ ಜೊತೆ ಸೇರಿ ಕೆಲಸ ಮಾಡಬೇಕೆಂದು ಸೂಚಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಮಾರಿಕಾಂಬಾ ಜಾತ್ರೆ ಹಿನ್ನೆಲೆಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು,  ಮಾರಿಕಾಂಬ ಜಾತ್ರೆ ಯಶಸ್ಸಿಗೆ 20 ಉಪ ಸಮಿತಿಗಳನ್ನು ರಚಿಸಲಾಗಿದೆ. ಅಧಿಕಾರಿಗಳ ಜೊತೆ ಸಮಿತಿ ಸಂಚಾಲಕರು, 20 ಸದಸ್ಯರು ಇರುತ್ತಾರೆ. ಎಲ್ಲರೂ ಸೇರಿ ಜಾತ್ರೆ ಯಶಸ್ವಿಗೊಳಿಸುವತ್ತ ಗಮನ ಹರಿಸಬೇಕಾಗಿದೆ ಎಂದರು. ಸಾಗರದ ಮಾರಿಕಾಂಬ ದೇವಿ ಜಾತ್ರೆಗೆ ಕನಿಷ್ಟ 8 ಲಕ್ಷ ಜನರು ಸೇರುವ ನಿರೀಕ್ಷೆ ಇದೆ. ಮೂರು ದಿನಗಳ ಕಾಲ ಅಮ್ಮನವರ ದರ್ಶನಕ್ಕೆ ಲಕ್ಷಾಂತರ ಭಕ್ತರು ಆಗಮಿಸಲಿದ್ದು, ಸದರಿ ಸಾಲಿನಲ್ಲಿ ಬಿಸಿಲಿನಲ್ಲಿ ನಿಲ್ಲುತ್ತಾರೆ. ಅವರಿಗೆ ನೆರಳಿನ ವ್ಯವಸ್ಥೆ ಕಲ್ಪಿಸಲಾಗುತ್ತದೆ.…

Read More

ಬೆಂಗಳೂರು : ಮಲೇಷ್ಯಾದ ಪ್ರಮುಖ ಸೆಮಿಕಂಡಕ್ಟರ್ ಹಬ್ ಆಗಿರುವ ಪೆನಾಂಗ್ ರಾಜ್ಯದ ಉನ್ನತ ಮಟ್ಟದ ನಿಯೋಗವು, ಕರ್ನಾಟಕದೊಂದಿಗೆ ಕ್ವಾಂಟಮ್ ತಂತ್ರಜ್ಞಾನ ಅಭಿವೃದ್ಧಿಯಲ್ಲಿ ಸಹಭಾಗಿತ್ವಕ್ಕೆ ಆಸಕ್ತಿ ವ್ಯಕ್ತಪಡಿಸಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್. ಭೋಸರಾಜು ತಿಳಿಸಿದರು. ಇಂದು ವಿಕಾಸಸೌಧದಲ್ಲಿ ಪೆನಾಂಗ್ ರಾಜ್ಯದ ಉಪಮುಖ್ಯಮಂತ್ರಿಗಳಾದ ಶ್ರೀ ಜಗದೀಪ್ ಸಿಂಗ್ ದಿಯೋ ನೇತೃತ್ವದ ನಿಯೋಗದೊಂದಿಗೆ ಸಭೆ ನಡೆಸಿದ ನಂತರ ಸಚಿವರು ಈ ವಿಷಯ ತಿಳಿಸಿದರು. ಸಭೆಯಲ್ಲಿ ಮಾತನಾಡಿದ ಪೆನಾಂಗ್ ಉಪಮುಖ್ಯಮಂತ್ರಿ ಜಗದೀಪ್ ಸಿಂಗ್ ದಿಯೋ, ತಮ್ಮ ರಾಜ್ಯದ ಯಶಸ್ಸಿನ ಮಾದರಿಯನ್ನು ವಿವರಿಸಿದರು. “ಪೆನಾಂಗ್ ಭೌಗೋಳಿಕವಾಗಿ ಸಣ್ಣ ರಾಜ್ಯವಾಗಿದ್ದರೂ, ಇಂದು ಜಾಗತಿಕ ಮಟ್ಟದ ಸೆಮಿಕಂಡಕ್ಟರ್ ಶಕ್ತಿಯಾಗಿ ಹೊರಹೊಮ್ಮಿದೆ. ಇದಕ್ಕೆ ಮುಖ್ಯ ಕಾರಣ ನಮ್ಮಲ್ಲಿರುವ ಬಲವಾದ ‘ಉದ್ಯಮ ಮತ್ತು ಸಂಶೋಧನಾ ಸಹಭಾಗಿತ್ವ’ (Industry-Research Collaboration). ಇದರಲ್ಲಿ ಪೆನಾಂಗ್ ವಿಶ್ವವಿದ್ಯಾಲಯವು (Penang University) ನಿರ್ಣಾಯಕ ಪಾತ್ರ ವಹಿಸಿದೆ. ಉದ್ಯಮಗಳಿಗೆ ನೇರವಾಗಿ ಬೆಂಬಲ ನೀಡುವಂತಹ ಸಂಶೋಧನಾ ಪರಿಸರ ವ್ಯವಸ್ಥೆಯನ್ನು ವಿವಿ ನಿರ್ಮಿಸಿದೆ,” ಎಂದು ಅವರು ತಿಳಿಸಿದರು.…

Read More

ಬೆಂಗಳೂರು: ಸಾರಿಗೆ ( RTO) ಇಲಾಖೆಯಲ್ಲಿ ವಾಹನಗಳ Data Anomalies/ Duplicate Data ಗಳನ್ನು ಸರಿಪಡಿಸುವ ಸಂಬಂಧ ಅಧಿಕಾರ ವಿಕೇಂದ್ರೀಕರಣ ಮಾಡಿ ಆದೇಶ ಮಾಡಲಾಗಿದೆ. ಈ ಮೂಲಕ ವಾಹನ ಮಾಲೀಕರಿಗೆ ಗುಡ್ ನ್ಯೂಸ್ ನೀಡಲಾಗಿದೆ. ರಾಜ್ಯದ ಯಾವುದೇ ಸ್ಥಳದಲ್ಲಿ ವಾಹನಗಳ Data Anomalies ಗಳನ್ನು ಸರಿಪಡಿಸುವ ಅಥವಾ Duplicate Data ಸರಿಪಡಿಸಲು ಬೆಂಗಳೂರಿನ ಕೇಂದ್ರ‌ ಕಛೇರಿಗೆ ಬಂದು ಸರಿ ಮಾಡಿಸಬೇಕಾಗಿತ್ತು. ಈ‌ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು, ಈ‌ ಸಮಸ್ಯೆಯನ್ನು ಗಂಭೀರವಾಗಿ‌ ಪರಿಗಣಿಸಿದ ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ‌ ಅವರು, ತುರ್ತು ಕ್ರಮ ತೆಗೆದುಕೊಳ್ಳಲು ಸೂಚನೆ‌ ನೀಡಿದರು. ಸಾರಿಗೆ ಸಚಿವರ ಸೂಚನೆಯಂತೆ, ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ,ಅನುಮತಿ ಪಡೆದು, ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ, ವಿನಾಕಾರಣ ವಿಳಂಬ‌ ತಪ್ಪಿಸಲು ಅಧಿಕಾರ ವಿಕೇಂದ್ರೀಕರಣ‌ ಮಾಡಲಾಯಿತು. RTO ಕಛೇರಿಯ ಕೆಲಸಗಳು ಸಾರ್ವಜನಿಕರಿಗೆ ಇನ್ನು ಹತ್ತಿರವಾಗಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ‌ ಇರುವ 6 ವಿಭಾಗೀಯ ಕಛೇರಿಗಳಿಗೆ ( 6 Joint Commissioners Transport )…

Read More

ಬೆಂಗಳೂರು : ರಾಜ್ಯದ ದೀರ್ಘಾವಧಿ ಸಿಎಂ ಹೆಗ್ಗಳಿಕೆಗೆ ಸಿದ್ದರಾಮಯ್ಯ ಪಾತ್ರವಾಗಿದ್ದು, ಇಂದು ದೇವರಾಜ್ ಅರಸು ದಾಖಲೆಯನ್ನು ಸಿಎಂ ಸಿದ್ದರಾಮಯ್ಯ ಮುರಿದಿದ್ದಾರೆ. ಈ ಹಿಂದೆ 7 ವರ್ಷ 239 ದಿನಗಳ ಕಾಲ ಡಿ.ದೇವರಾಜ ಅರಸು ಸಿಎಂ ಆಗಿದ್ದರು. ಇಂದಿಗೆ 7 ವರ್ಷ 240 ದಿನ ಸಿಎಂ ಸಿದ್ದರಾಮಯ್ಯ ಪೂರೈಸಿದ್ದಾರೆ. ಇನ್ನು 3ನೇ ಸ್ಥಾನದಲ್ಲಿ ಎಸ್ ನಿಜಲಿಂಗಪ್ಪ 7 ವರ್ಷ 175 ದಿನ, 4 ನೇ ಸ್ಥಾನದಲ್ಲಿ ರಾಮಕೃಷ್ಣ ಹೆಗಡೆ 5 ವರ್ಷ 216 ದಿನ, 5ನೇ ಸ್ಥಾನದಲ್ಲಿ ಬಿಎಸ್ ಯಡಿಯೂರಪ್ಪ 5 ವರ್ಷ 82 ದಿನ ಸಿಎಂ ಆಗಿದ್ದಾರೆ. ರಾಜ್ಯ ಬಜೆಟ್ ಮಂಡನೆಯಲ್ಲಿ ಸಿಎಂ ಸಿದ್ದರಾಮಯ್ಯ ದಾಖಲೆ ಬರೆದಿದ್ದಾರೆ ಇದುವರೆಗೂ 16 ಬಜೆಟ್ ಮಂಡಿಸಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿ. ದೇವರಾಜ್ ಅರಸ್ ಅವರನ್ನು ಹಿಂದಿಕ್ಕಿ ರಾಜ್ಯದ ಅತ್ಯಂತ ದೀರ್ಘಾವಧಿಯ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಐತಿಹಾಸಿಕ ಮೈಲಿಗಲ್ಲು ಜನರ ಆಶೀರ್ವಾದಕ್ಕೆ ಸಲ್ಲುತ್ತದೆ ಎಂದು ಅವರು ಹೇಳಿದರು. ಸಿದ್ದರಾಮಯ್ಯ…

Read More