Author: kannadanewsnow09

ಬೆಂಗಳೂರು: ರಾಜ್ಯ ಸರ್ಕಾರದಿಂದ ನೈರುತ್ಯ ಮುಂಗಾರು ಹಂಗಾಮು, ಈಶಾನ್ಯ ಮುಂಗಾರು ಹಂಗಾಮಿನಲ್ಲಿನ ಅತಿವೃಷ್ಟಿ, ಪ್ರವಾಹದಿಂದ ಹಾನಿಯಾಗುವ ಮನೆಗಳ ಪುನರ್ ನಿರ್ಮಾಣ, ದುರಸ್ಥಿ ಕಾರ್ಯ ಹಾಗೂ ಪ್ರವಾಹದಿಂದಾಗಿ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರ ಬಿಡುಗಡೆ ಮಾಡಿ ಆದೇಶಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಲಾಗಿದ್ದು, ನೈಸರ್ಗಿಕ ವಿಕೋಪಗಳಿಂದ ಉಂಟಾಗುವ ಹಾನಿಗಳಿಗೆ SDRF | NDRF ರಡಿ ನೀಡಬಹುದಾದ ಪರಿಹಾರಗಳ ಕುರಿತು ಭಾರತ ಸರ್ಕಾರದ ಗ್ರಹ ಮಂತ್ರಾಲಯವು ಮೇಲೆ ಓದಲಾದ (1) ರಂತೆ ಹೊರಡಿಸಿರುವ SDRF / NDRF Items and Norms of Assistance ರ ಮಾರ್ಗಸೂಚಿಗಳಲ್ಲಿ ನಿಗದಿಪಡಿಸಿರುವ ಪರಿಹಾರ ಮೊತ್ತದ ಜೊತೆಗೆ, 2024-25 ನೇ ಸಾಲಿನ ನೈಋತ್ಯ ಮುಂಗಾರು ಹಂಗಾಮಿನಲ್ಲಿ (01.06.2025 ರಿಂದ 30.09.2025) ಮತ್ತು ಈಶಾನ್ಯ ಮುಂಗಾರು ಹಂಗಾಮಿನಲ್ಲಿ (01.10.2025 ರಿಂದ 31.12.2025) ಅತಿವೃಷ್ಟಿ / ಪ್ರವಾಹದಿಂದ ಹಾನಿಯಾದ ಮನೆಗಳ ಪುನರ್ ನಿರ್ಮಾಣ / ದುರಸ್ತಿ ಕಾರ್ಯ ಹಾಗೂ ಪುವಾಹದಿಂದಾಗಿ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ…

Read More

ಬೆಂಗಳೂರು: ಕನ್ನಡಕ್ಕೆ ಅವಮಾನ ಮಾಡಿರುವಂತ ನಟ ಕಮಲ್ ಹಾಸನ್ ಕ್ಷಮೆಯಾಚಿಸಬೇಕು. ಅವರು ಕ್ಷಮೆ ಯಾಚಿಸದೇ ಅವರ ಥಗ್ ಲೈಫ್ ಸಿನಿಮಾ ಕರ್ನಾಟಕದಲ್ಲಿ ರಿಲೀಸ್ ಮಾಡಿದ್ರೇ ಸಿನಿಮಾ ಥಿಯೇಟರ್ ಗೆ ಬೆಂಕಿ ಹಚ್ಚುವುದಾಗಿ ಕರವೇ ರಾಜ್ಯಾಧ್ಯಕ್ಷ ನಾರಾಯಾಣಗೌಡ ಎಚ್ಚರಿಕೆ ನೀಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ಸಿನಿಮಾ ರಿಲೀಸ್ ಆಗಲ್ಲ. ರಾಜ್ಯದಲ್ಲಿ ಅವರ ಸಿನಿಮಾ ರಿಲೀಸ್ ಮಾಡುವುದಕ್ಕೆ ಬಿಡಲ್ಲ. ಒಂದು ವೇಳೆ ಕ್ಷಮೆ ಕೇಳದೇ ಸಿನಿಮಾ ರಿಲೀಸ್ ಮಾಡಿದ್ರೆ ಥಿಯೇಟರ್ ಗೆ ಬೆಂಕಿ ಹಾಕುವುದಾಗಿ ಎಚ್ಚರಿಕೆ ನೀಡಿದರು. ಅಂದಹಾಗೇ ನಟ ಕಮಲ್ ಹಾಸನ್ ಕನ್ನಡ ತಮಿಳಿನಿಂದ ಹುಟ್ಟಿರೋದು ಎಂಬುದಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಅವರ ಹೇಳಿಕೆ ವಿರುದ್ಧ ಕನ್ನಡಿಗರು ಆಕ್ರೋಶ ಹೊರಹಾಕಿದ್ದಾರೆ. ಈಗಾಗಲೇ ಫಿಲ್ಮಂ ಚೇಂಬರ್ ಕ್ಷಮೆ ಯಾಚನೆಗೆ ಡೆಡ್ ಲೈನ್ ನೀಡಿದೆ. ಇದರ ನಡುವೆ ನಾನು ಕ್ಷಮೆ ಯಾಚಿಸೋದಿಲ್ಲ ಎಂಬುದಾಗಿ ನಟ ಕಮಲ್ ಹಾಸನ್ ಉದ್ಧಟ ತನವನ್ನು ಮುಂದುವರೆಸಿದ್ದಾರೆ. https://kannadanewsnow.com/kannada/breaking-another-tragedy-due-to-rain-in-mangalore-a-country-boat-capsized-in-the-sea-two-drowned/ https://kannadanewsnow.com/kannada/breaking-illegal-ipl-ticket-selling-racket-case-by-police-two-constables-suspended/

Read More

ಬೆಂಗಳೂರು : ಹದಿನಾಲ್ಕು ಸಾವಿರ ಕೋಟಿ ರೂ.ಗೂ ಹೆಚ್ಚು ಮೌಲ್ಯದ ಎಚ್ಎಂಟಿ ಅರಣ್ಯಭೂಮಿಯ ಡಿನೋಟಿಫಿಕೇಷನ್ ಅನುಮತಿ ಕೋರಿ ಸುಪ್ರೀಂಕೋರ್ಟ್ ಗೆ ಐಎ ಹಾಕಿರುವ ಪ್ರಕರಣದಲ್ಲಿ ನಿವೃತ್ತ ಐ.ಎ.ಎಸ್, ಐಎಫ್.ಎಸ್ ಮತ್ತು ಇಬ್ಬರು ಹಾಲಿ ಐ.ಎಫ್.ಎಸ್. ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್.ಎಂ.ಟಿ. ವಶದಲ್ಲಿರುವ ಭೂಮಿ ಅರಣ್ಯೇತರ ಉದ್ದೇಶಕ್ಕೆ ಪರಿವರ್ತನೆ ಆಗಿಲ್ಲ. ಹೀಗಾಗಿ ಸುಪ್ರೀಂಕೋರ್ಟ್ ನೀಡಿರುವ ಹಲವು ತೀರ್ಪು ಮತ್ತು ಅರಣ್ಯ ಸಂರಕ್ಷಣಾ ಕಾಯಿದೆ 1980ರ ಪ್ರಕಾರ ಇಂದಿಗೂ ಇದು ಅರಣ್ಯವೇ ಆಗಿರುತ್ತದೆ. ಆದಾಗ್ಯೂ ಈ ಭೂಮಿ ಪರಭಾರೆ ಆಗಿದೆ, ರಿಯಲ್ ಎಸ್ಟೇಟ್ ಸಂಸ್ಥೆಗಳು ನೂರಾರು ಫ್ಲಾಟ್ ಕಟ್ಟಿದ್ದಾರೆ. ಧಾರಾವಾಹಿ, ಚಲನಚಿತ್ರಗಳ ಚಿತ್ರೀಕರಣ ನಡೆಯುತ್ತಿದೆ. ವಾಣಿಜ್ಯ ಉದ್ದೇಶಕ್ಕೆ ಭೂಮಿ ಬಳಕೆ ಆಗುತ್ತಿದೆ. ಇದಕ್ಕೆ ಹೇಗೆ ಅವಕಾಶ ನೀಡಲಾಗಿದೆ ಎಂಬುದೇ ಪ್ರಶ್ನಾರ್ಥಕವಾಗಿದೆ ಎಂದರು. ಸಚಿವ ಸಂಪುಟದ ಅನುಮತಿ ಇಲ್ಲದೆ,…

Read More

ಬೆಂಗಳೂರು: ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ 60 ವರ್ಷ ಪೂರೈಸಿದ ಮತ್ತು ಮರಣ ಹೊಂದಿದ ಅತಿಥಿ ಉಪನ್ಯಾಸಕರಿಗೆ 5 ಲಕ್ಷ ಇಡುಗಂಟು ನೀಡಲು ಸರ್ಕಾರ ಅಧಿಕೃತ ಆದೇಶ ಹೊರಡಿಸುವ ಮೂಲಕ ನುಡಿದಂತೆ ನಡೆದಿದೆ. ಇಡುಗಂಟು ಯೋಜನೆಯು 01-01- 2024 ರಿಂದ ಜಾರಿಗೆ ಬರಲಿದ್ದು ಕನಿಷ್ಠ ಒಂದು ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಅಥವಾ ಮರಣ ಹೊಂದಿರುವ ಎಲ್ಲಾ ಅತಿಥಿ ಉಪನ್ಯಾಸಕರಿಗೂ ಇಡು ಗಂಟು ಯೋಜನೆ ಅನ್ವಯಿಸಲಿದೆ. ಯೋಜನೆ ಅನುಷ್ಠಾನಕ್ಕೆ ಬಂದ ಹಿಂದಿನ ಐದು ವರ್ಷಗಳಲ್ಲಿ ಕನಿಷ್ಠ ಒಂದು ವರ್ಷ ಸೇವೆ ಸಲ್ಲಿಸಿ 60 ವರ್ಷ ಪೂರ್ಣಗೊಳಿಸಿರುವ ಅತಿಥಿ ಉಪನ್ಯಾಸಕರಿಗೂ ಈ ಯೋಜನೆ ಗೆ ಒಳಪಡಲಿದ್ದಾರೆ .ಈ ಯೋಜನೆಗೆ ಒಟ್ಟಾರೆ 44.15 ಕೋಟಿ ರೂಪಾಯಿಗಳನ್ನು ಸರ್ಕಾರ ಕಾಯ್ದಿರಿಸಿ ಆದೇಶ ಹೊರಡಿಸಿದೆ. https://kannadanewsnow.com/kannada/breaking-illegal-ipl-ticket-selling-racket-case-by-police-two-constables-suspended/ https://kannadanewsnow.com/kannada/breaking-another-tragedy-due-to-rain-in-mangalore-a-country-boat-capsized-in-the-sea-two-drowned/

Read More

ಬೆಂಗಳೂರು: ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದಂತ ನಟ ಕಮಲ್ ಹಾಸನ್ ಹೇಳಿಕೆ ಖಂಡಿಸಿ ನಗರದಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಹೀಗೆ ಪ್ರತಿಭಟಿಸಿದ್ದವರು ಪ್ರತಿಭಟನೆ ಅನುಮತಿ ಪಡೆದಿದ್ದ ಕಾರಣ, ಅಂತವರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಬೆಂಗಳೂರಿನ ಬಸವೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಟ ಕಮಲ್ ಹಾಸನ್ ಹೇಳಿಕೆ ಖಂಡಿಸಿ ನಮ್ಮ ಕರುನಾಡ ಯುವ ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ್ದರು. ಆದರೇ ಪ್ರತಿಭಟನೆ ನಡೆಸೋದಕ್ಕೆ ಪೊಲೀಸರಿಂದ ಅನುಮತಿ ಪಡೆಯಬೇಕಿದ್ದಂತ ಪ್ರತಿಭಟನಾಕಾರರು ಆ ಕೆಲಸವನ್ನೇ ಮಾಡಿರಲಿಲ್ಲ. ಈ ಹಿನ್ನಲೆಯಲ್ಲಿ ನಟ ಕಮಲ್ ಹಾಸನ್ ಕನ್ನಡದ ಬಗ್ಗೆ ವಿವಾದಾತ್ಮಕವಾಗಿ ನೀಡಿದಂತ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಿದಂತ ನಮ್ಮ ಕರುನಾಡು ಯುವ ಸೇನೆಯ ಕಾರ್ಯಕರ್ತರ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. https://kannadanewsnow.com/kannada/breaking-illegal-ipl-ticket-selling-racket-case-by-police-two-constables-suspended/ https://kannadanewsnow.com/kannada/breaking-another-tragedy-due-to-rain-in-mangalore-a-country-boat-capsized-in-the-sea-two-drowned/

Read More

ಬೆಂಗಳೂರು: ಕೋಮುಗಲಭೆಗಳಿಂದ ಕರಾವಳಿ ಭಾಗಕ್ಕೆ ಕೊಡಲಿ ಪೆಟ್ಟು ಬೀಳುತ್ತಿದೆ. ಇದರಿಂದ ನಷ್ಟವಾಗುತ್ತಿರುವುದು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕರ್ನಾಟಕ ರಾಜ್ಯಕ್ಕೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧ ಆವರಣ ಹಾಗೂ ಅರಮನೆ ಮೈದಾನದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯಿಸಿದರು. “ನಾವು ಎಲ್ಲಾ ಸಮಾಜ ರಕ್ಷಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಪಕ್ಷದ ವತಿಯಿಂದ ಒಂದು ತಂಡ ಕಳುಹಿಸಿ ವರದಿ ನೀಡಲು ಹೇಳಿದ್ದೇವೆ. ಅಧಿಕಾರಿಗಳು ನೀಡುವ ವರದಿ ಬೇರೆ, ಸಾರ್ವಜನಿಕರ ಜತೆ ಚರ್ಚೆ ಮಾಡಿ ವರದಿ ನೀಡಲು ನಮ್ಮ ಪಕ್ಷದವರಿಗೆ ತಿಳಿಸಿದ್ದೇನೆ. ಕರಾವಳಿ ಭಾಗದಲ್ಲಿ ಶಾಂತಿ ನೆಲೆಸಬೇಕು. ಇದು ಒಂದು ಸಾವು, ಎರಡು ಸಾವಿನ ವಿಚಾರ ಮಾತ್ರವಲ್ಲ. ಇದು ಇಡೀ ಕರಾವಳಿ ಭಾಗಕ್ಕೆ ಬಿದ್ದಿರುವ ಕೊಡಲಿಪೆಟ್ಟು. ಜನರು ಆಂತಕಕ್ಕೆ ಒಳಗಾಗುವುದು, ಬಂಡವಾಳ ಹೂಡಿಕೆದಾರರು ಅಲ್ಲಿ ಹೂಡಿಕೆ ಮಾಡಲು ಹಿಂಜರಿಯುತ್ತಿರುವುದನ್ನು ಎಲ್ಲರೂ ಅರಿತುಕೊಳ್ಳಬೇಕು. ಈ ಪರಿಸ್ಥಿತಿಯನ್ನು ಅರಿತುಕೊಳ್ಳಬೇಕು ಎಂದು ಬಿಜೆಪಿ ಸ್ನೇಹಿತರು ಹಾಗೂ ಬೇರೆ ಬೇರೆ ಸಂಘಟನೆಗಳಿಗೆ ಮನವಿ ಮಾಡುತ್ತೇನೆ”…

Read More

ನವದೆಹಲಿ: ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾನ್ಯತಾ ಟೆಕ್ ಪಾರ್ಕ್ ಬಳಿ ಭೇಟಿ ನೀಡಿದ್ದು ನೆರೆ ಮತ್ತು ಮಳೆ ಅನಾಹುತ ವೀಕ್ಷಿಸಲಿಕ್ಕಾ ಅಥವಾ ರಾಜಕಾಲುವೆ ಒತ್ತುವರಿದಾರನ್ನು ರಕ್ಷಣೆ ಮಾಡಲಿಕ್ಕಾ? ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು; ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾನ್ಯತಾ ಟೆಕ್ ಪಾರ್ಕ್ ಬಳಿಗೆ ಭೇಟಿ ಕೊಟ್ಟು ಮಳೆ, ನೆರೆ ಪರಿಸ್ಥಿತಿ ವೀಕ್ಷಣೆ ಮಾಡಿರುವುದೇನೋ ಸರಿ. ಆದರೆ, ಅವರ ಭೇಟಿ ಪ್ರವಾಹ ವೀಕ್ಷಣೆಗೋ ಅಥವಾ ರಾಜಕಾಲುವೆ ರಕ್ಕಸರ ರಕ್ಷಣೆಗೋ..? ಈ ಬಗ್ಗೆ ಬೆಂಗಳೂರು ಮಹಾಜನತೆಗೆ ಬೆಂಗಳೂರು ಉಸ್ತುವಾರಿ ಸಚಿವರು ಉತ್ತರಿಸಬೇಕು ಎಂದು ಒತ್ತಾಯಿಸಿದ್ದಾರೆ. ಡಿಸಿಎಂ ಅವರು ಪಾದಸ್ಪರ್ಶ ಮಾಡಿದ್ದ ರಾಜಕಾಲುವೆ ಪುನೀತವಾಗಿರಬೇಕು!! ಪಾಪ.. ಅದೇ ರಾಜಕಾಲುವೆ ಮೇಲೆ ಬೃಹದಾಕಾರವಾಗಿ ಎದ್ದು ನಿಂತಿರುವ ‘ಭಾರೀ ಆಸಾಮಿ’ಯೊಬ್ಬರ ಕಟ್ಟಡ ಅವರ ಕಣ್ಣಿಗೆ ಕಾಣಲಿಲ್ಲವೆ? ರಾಜಾರೋಷವಾಗಿ ರಾಜಕಾಲುವೆಯನ್ನು ಮುಕ್ಕಿ ತಿಂದಿರುವ ಆಸಾಮಿಯ ಬಗ್ಗೆ ಅವರು ಚಕಾರವನ್ನೇ ಎತ್ತಲಿಲ್ಲ!! ಕೊನೆಪಕ್ಷ ಅವರ…

Read More

ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ AC, DC, ತಹಶೀಲ್ದಾರ್ ಕೋರ್ಟ್ ಗಳಲ್ಲಿ ಬಾಕಿ ಕೇಸುಗಳು ಶೀರ್ಘ ವಿಲೇವಾರಿ ಆಗುತ್ತಿರುವುದಕ್ಕೆ ಮೆಚ್ಚುಗೆ ಸೂಚಿಸಿದ ಮುಖ್ಯಮಂತ್ರಿಗಳು ಬೆಂಗಳೂರು ಗ್ರಾಮಾಂತರ ಮತ್ತು ಎರಡು ಜಿಲ್ಲೆಗಳಲ್ಲಿ ಮಾತ್ರ AC ಮತ್ತು DC ಕೋರ್ಟ್ ಗಳಲ್ಲಿ ಐದು ವರ್ಷಕ್ಕೂ ಹಳೆಯದಾದ ಪ್ರಕರಣಗಳು ಬಾಕಿ ಇರುವುದಕ್ಕೆ ಅಸಮಾಧಾನಗೊಂಡ ಮುಖ್ಯಮಂತ್ರಿಗಳು ತರಾಟೆಗೆ ತೆಗೆದುಕೊಂಡರು. Justice delayed is justice denied ಎನ್ನುವ ಮಾತನ್ನು ನೆನಪಿಡಿ. ಇದನ್ನು ಸಹಿಸಲು ಸಾಧ್ಯವಿಲ್ಲ. ಉಳಿದ ಜಿಲ್ಲೆಗಳಲ್ಲಿ ಪ್ರಗತಿ ಕಾಣುವಾಗ ಕೆಲವು ಮಾತ್ರ ಆಗುತ್ತಿಲ್ಲ‌ ಎಂದರೆ ಸಹಿಸಲು ಸಾಧ್ಯವಿಲ್ಲ ಎಂದರು. ಈ ಬಗ್ಗೆ ನೋಟಿಸ್ ನೀಡಿ ಕ್ರಮ ಕೈಗೊಳ್ಳಿ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸಿಎಂ ಸೂಚಿಸಿದರು. ಅಗತ್ಯವಿದ್ದರೆ ಹೇಳಿ ಹಚ್ಚುವರಿ AC, DC ಗಳನ್ನು ಕೊಡಬಹುದು ಎಂದರು.

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಎನ್ ಹೆಚ್ ಎಂ ಕಾರ್ಯಕ್ರಮದಡಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಎಂಬಿಬಿಎಸ್ ವೈದ್ಯಾಧಿಕಾರಿಗಳು, ಎನ್ ಎಸ್ ಸಿಯು, ಐಸಿಯು ಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶುಶ್ರೂಷಕರು, ಪ್ರಮುಖ ಕ್ಲಿನಿಕಲ್ ತಜ್ಞರ ವೇತನ ಪರಿಷ್ಕರಿಸಿ ಆದೇಶಿಸಲಾಗಿದೆ. ಈ ಮೂಲಕ ರಾಜ್ಯ ಸರ್ಕಾರವು ಎನ್ ಹೆಚ್ ಎಂ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವಂತ ವೈದ್ಯರು, ಸ್ಟಾಫ್ ನರ್ಸ್ ಗಳಿಗೆ ಸಿಹಿಸುದ್ದಿ ನೀಡಿದೆ. ಇಂದು ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಭಿಯಾನ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ರಾಜ್ಯ / ಜಿಲ್ಲೆಗಳಲ್ಲಿ ವಿವಿಧ ಕಾರ್ಯಕ್ರಮದಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ MBBS ವೈದ್ಯಾಧಿಕಾರಿಗಳು, SNCU/ICU ಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶುಶೂಷಕರುಗಳಿಗೆ ಮತ್ತು ಪ್ರಮುಖ ಕ್ಲಿನಿಕಲ್ ತಜ್ಞರ (OBG, Paediatric, Anaesthesia, General Medicine, Ortho, Surgeon, Ophthalmologist) ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಪುಸ್ತಾವನೆಯನ್ನು ಸಲ್ಲಿಸಲಾಗಿದ್ದು, ಉಲ್ಲೇಖದನ್ವಯ 2024-26 ಅನುಮೋದನೆಗೊಂಡಿರುತ್ತದೆ. ವಿವರ ಈ ಕೆಳಕಂಡಂತಿದೆ ಎಂದು ತಿಳಿಸಿದೆ. ಮೇಜರ್ ಕ್ಲಿನಿಕಲ್ ಸ್ಪೆಷಲಿಸ್ಟ್ ಹುದ್ದೆಯ ನೇಮಕಾತಿಗೆ ಮಾನದಂಡಗಳು: 1.…

Read More

ಬೆಂಗಳೂರು: ರಾಜ್ಯದಲ್ಲಿ ಕೋಮು ಹಿಂಸೆಗೆ ಬ್ರೇಕ್ ಹಾಕುವಂತ ಮಹತ್ವದ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ಈ ಸಂಬಂಧ ಕೋಮು ಹಿಂಸೆ ನಿಗ್ರಹಕ್ಕಾಗಿ ವಿಶೇಷ ಕಾರ್ಯಪಡೆಯನ್ನು ರಚಿಸಿ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಿದ್ದು,ರಾಜ್ಯದಲ್ಲಿ ನಕ್ಸಲೈಟ್ ಚಟುವಟಿಕೆಗಳ ನಿಗ್ರಹಕ್ಕಾಗಿ Anti Naxal Force (ANF) ಅನ್ನು ಸೃಜಿಸಿ ಆದೇಶಿಸಲಾಗಿದೆ ಎಂದಿದ್ದಾರೆ. ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾನಿರೀಕ್ಷಕರು ಇವರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ತುಳು, ಕೊಂಕಣಿ ಮುಂತಾದ ವಿಶಿಷ್ಟ ಭಾಷೆಗಳು ಮತ್ತು ಅದರ ಸಾಂಸ್ಕೃತಿಕ ಪರಂಪರೆಯಿಂದ ಗುರುತನ್ನು ರೂಪಿಸಿದ್ದು, ಜನರಲ್ಲಿ ಆಳವಾದ ಸಮುದಾಯದ ಪ್ರಜ್ಞೆ ಮತ್ತು ಪ್ರಾದೇಶಿಕ ಹೆಮ್ಮೆಯನ್ನು ಬೆಳೆಸುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯು ಸಾಂಪ್ರದಾಯಿಕವಾಗಿ ಉನ್ನತ ಮಟ್ಟದ ಶಿಕ್ಷಣ ಮತ್ತು ಸಾಕ್ಷರತೆಯೊಂದಿಗೆ ಸ್ಥಿರವಾದ ಆರ್ಥಿಕ ಪುಗತಿಯನ್ನು ಕಂಡಿದ್ದು, ಇದರ ಹೊರತಾಗಿಯೂ ದಕ್ಷಿಣ ಕನ್‌ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪುಸ್ತುತ ಕೋಮು ಸಂವೇದನೆಗಳು ಹೆಚ್ಚಾಗುತ್ತಿದ್ದು, ಸಣ್ಣ ಘಟನೆಗಳು ಸಹ ಪುಮುಖ ಕಾನೂನು…

Read More