Author: kannadanewsnow09

ಮಂಡ್ಯ : ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ಚಿರತೆ ಉಪಟಳ ಮುಂದುವರೆದಿದ್ದು, ಚಿರತೆ ದಾಳಿಗೆ ಬರೋಬ್ಬರಿ 4 ಕುರಿಗಳು ಸಾವನ್ನಪ್ಪಿದ್ದು, ಮತ್ತೆರಡು ಕುರಿಗಳು ಗಂಭೀರ ಗಾಯಗೊಂಡಿರುವ ಘಟನೆ ಜರುಗಿದೆ. ಮದ್ದೂರು ತಾಲೂಕಿನ ವಳಗೆರೆಹಳ್ಳಿ ಶ್ರೀನಿವಾಸ್ ಎಂಬುವವರ ಮನೆಯ ಹಿಂಭಾಗದ ಕೊಟ್ಟಿಗೆಗೆ ಭಾನುವಾರ ರಾತ್ರಿ 8.30 ರ ಸುಮಾರಿಗೆ ನುಗ್ಗಿರುವ ಚಿರತೆಯೊಂದು 18 ಕುರಿಗಳ ಪೈಕಿ 6 ಕುರಿಗಳ ಮೇಲೆ ದಾಳಿ ಮಾಡಿದೆ. ಕುರಿಗಳ ಚೀರಾಟದಿಂದ ಕೊಟ್ಟಿಗೆಗೆ ಬಂದ ಶ್ರೀನಿವಾಸ್ ಚಿರತೆ ದಾಳಿ ಮಾಡುತ್ತಿರುವುದು ಕಂಡು ಬಂದಿದೆ. ಕೂಗಾಟ ಚೀರಾಟ ನಡೆಸಿದ ಪರಿಣಾಮ ಚಿರತೆ ಅಲ್ಲಿಂದ ಪರಾರಿಯಾಗಿದೆ. ಆದರೆ, ಅಷ್ಟರಲ್ಲಿ 4 ಕುರಿಗಳು ಸಾವನ್ನಪ್ಪಿ 2 ಕುರಿಗಳು ಗಾಯಗೊಂಡಿದ್ದು, ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿವೆ. ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ಗವಿಯಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿ, ಚಿರತೆ ಸೆರೆಗೆ ಅಗತ್ಯವಿರುವ ಕಡೆಗಳಲ್ಲಿ ಈಗಾಗಲೆ ಹಲವಾರು ಗ್ರಾಮಗಳಲ್ಲಿ ಬೋನನ್ನು ಇರಿಸಲಾಗಿದ್ದು, ಹಲವಾರು ಚಿರತೆಗಳನ್ನು ಸೆರೆಹಿಡಿದು ಮೇಲಾಧಿಕಾರಿಗಳ ಆದೇಶದ ಮೇರೆಗೆ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ.…

Read More

ಬೆಳಗಾವಿ ಸುವರ್ಣಸೌಧ : 2025-26ನೇ ಸಾಲಿನಲ್ಲಿ 900 ಸರ್ಕಾರಿ ಶಾಲೆಗಳನ್ನು ಕೆ.ಪಿ.ಎಸ್. ಶಾಲೆಗಳನ್ನಾಗಿ ಉನ್ನತೀಕರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಒಂದು ಕೆ.ಪಿ.ಎಸ್. ಶಾಲೆಯನ್ನು ಹಂತ ಹಂತವಾಗಿ ಪ್ರಾರಂಭಿಸಲು ಕ್ರಮವಹಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ತಿಳಿಸಿದರು. ಪರಿಷತನಲ್ಲಿ ಡಿ.8ರಂದು ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಚಿದಾನಂದ್ ಎಂ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಮ್ಮ ರಕ್ತದಲ್ಲಿ ಕನ್ನಡವಿದೆ. ಹಾಗಾಗಿ ಕನ್ನಡ ಮಾಧ್ಯಮದ ಯಾವುದೇ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಸ್ಪಷ್ಟಪಡಿಸಿದರು. ನಾವು ಬಜೆಟನಲ್ಲಿ 500 ಕೆಪಿಎಸ್ ಶಾಲೆಗಳನ್ನು ಆರಂಭಿಸುವ ಘೋಷಣೆ ಮಾಡಿದ್ದೇವೆ ಎಂದ ಸಚಿವರು, 2025-26ನೇ ಸಾಲಿನಲ್ಲಿ ಈಗಾಗಲೇ ಕಾರ್ಯಾಚರಣೆಯಲ್ಲಿರುವ 309 ಕೆಪಿಎಸ್ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕದಿಂದ ಪದವಿ ಪೂರ್ವ ತರಗತಿವರೆಗೆ ಒಟ್ಟು 2,72,464 ವಿದ್ಯಾರ್ಥಿಗಳು ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಈ ಕೆ.ಪಿ.ಎಸ್. ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ.…

Read More

ಬೆಳಗಾವಿ: ಬಿಜೆಪಿ ಆರೋಪಗಳ ಕುರಿತು ಮಾತನಾಡುತ್ತ ಸಮಸ್ಯೆಗಳು ಯಾವಾಗಲೂ ಇರುತ್ತದೆ. ಯಾವ ರೀತಿಯಲ್ಲಿ, ಹೇಗೆ, ಎಷ್ಟು ಪರಿಹಾರ ಮಾಡಲು ಪ್ರಯತ್ನ ಮಾಡಿದ್ದೇವೆ ಎನ್ನುವುದು ಮುಖ್ಯ. ಸಮಸ್ಯೆ ಬಗೆಹರಿಸುತ್ತಾರೆ ಅಂತಲೇ ರಾಜ್ಯ ಜನ ನಮಗೆ ಅಧಿಕಾರ ಕೊಟ್ಟಿದ್ದಾರೆ. ಕಾಂಗ್ರೆಸ್ ಸರ್ಕಾರ ಕಬ್ಬು, ಮೆಕ್ಕೆಜೋಳ ಬೆಳೆಗಾರರ ಸಮಸ್ಯೆಗೆ ಸ್ಪಂದಿಸಿದೆ. ಯುಕೆಪಿ ಪ್ರಾಜೆಕ್ಟ್ ಕಾರ್ಯರೂಪಕ್ಕೆ ಮುಂದಾಗಿದ್ದೇವೆ. ಹೀಗೆ ನಮ್ಮಸ ರ್ಕಾರ ಎಲ್ಲ ಜಾತಿ ಧರ್ಮ ಹಾಗೂ ರೈತರು, ದಿನ ದಲಿತರ ಏಳಿಗೆಗೆ ಬದ್ಧವಾಗಿ ಕೆಲಸ ಮಾಡುತ್ತಿದೆ. ಬಿಜೆಪಿಯ ಎಂಪಿಗಳು, ಮುಖಂಡರು, ಕೇಂದ್ರ ಮಂತ್ರಿಗಳು ಏನು ಮಾಡುತ್ತಿದ್ದಾರೆ?. ಕೇಂದ್ರದಿಂದ ಆಗುತ್ತಿರುವ ಮಲತಾಯಿ ಧೋರಣೆ ಬಗ್ಗೆ ಮಾತೇ ಆಡುತ್ತಿಲ್ಲ. ಮೆಕ್ಕೆಜೋಳ ಬೆಳೆದ ರೈತರ ಕುರಿತು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿ ಬೆಂಬಲ ಬೆಲೆ ಕೊಡಿಸಲು ಪ್ರಯತ್ನವೇ ಮಾಡುತ್ತಿಲ್ಲ. ಕೇಂದ್ರ ಸರ್ಕಾರ ಖರೀದಿಗೆ ಒಪ್ಪಿಗೆ ಕೊಡುತ್ತಿಲ್ಲ. ಖರೀದಿಸಿದರೆ ನೀವೇ ಉಪಯೋಗಿಸಕೊಳ್ಳಬೇಕು ಎನ್ನುತ್ತಿದೆ. ಖರೀದಿ ಮಾಡಿದರೆ ನೀವೇ ಜವಾಬ್ದಾರಿ ಎನ್ನಿತ್ತಿದೆ. ಇವುಗಳ ಕುರಿತು ಬಿಜೆಪಿ ಮಾತನ್ನೇ ಆಡುತ್ತಿಲ್ಲ. ಸರ್ಕಾರ ಈಗ ನಮ್ಮ…

Read More

ವಿಜಯನಗರ: ಜಿಲ್ಲೆಯಲ್ಲಿ ಗ್ರಾಮ ಪಂಚಾಯ್ತಿ ಸದಸ್ಯನ ಮೇಲೆ ನಾಯಿಗಳು ಭೀಕರವಾಗಿ ದಾಳಿ ನಡೆಸಿದ್ದಾವೆ. ಈ ದಾಳಿಯಿಂದಾಗಿ ಎರಡು ಬೆರಳುಗಳೇ ಕಟ್ ಆಗಿರೋದಾಗಿ ತಿಳಿದು ಬಂದಿದೆ. ವಿಜಯನಗರದ ಹರಪನಹಳ್ಳಿ ತಾಲ್ಲೂಕಿನ ಉಚ್ಚಂಗಿದುರ್ಗ ಹಾಲಮ್ಮನ ತೋಪಿನಲ್ಲಿ ನಾಯಿಗಳು ಗ್ರಾಮ ಪಂಚಾಯ್ತಿ ಸದಸ್ಯ ಮಂಜುನಾಥ್ ಎಂಬಾತನ ಮೇಲೆ ದಾಳಿ ಮಾಡಿದ್ದಾವೆ. ವಿಜಯನಗರದ ಹರಪನಹಳ್ಳಿ ತಾಲ್ಲೂಕಿನ ಹಾಲಮ್ಮನ ತೋಪಿನಲ್ಲಿ ಈ ಘಟನೆ ನಡೆದಿದೆ. ಗ್ರಾಮ ಪಂಚಾಯ್ತಿ ಸದಸ್ಯ ಮಂಜುನಾಥ್ ವಾಕಿಂಗ್ ಹೋಗಿದ್ದಂತ ಸಂದರ್ಭದಲ್ಲಿ ನಾಯಿಗಳು ದಾಳಿ ನಡೆಸಿ ಭೀಕರವಾಗಿ ಗಾಯಗೊಳಿಸಿದ್ದಾವೆ. ನಾಯಿಗಳ ಕಡಿತದಿಂದಾಗಿ ಮಂಜುನಾಥ್ ಎರಡು ಬೆರಳುಗಳೇ ಕಟ್ ಆಗಿರುವುದಾಗಿ ತಿಳಿದು ಬಂದಿದೆ. ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಮಂಜುನಾಥ್ ಚಿಕಿತ್ಸೆ ಪಡೆಯುತ್ತಿದ್ದಾರೆ. https://kannadanewsnow.com/kannada/progress-review-in-every-district-lok-adalat-state-sc-st-commission-chairman-dr-l-murthy/ https://kannadanewsnow.com/kannada/is-teaching-bhagavad-gita-to-children-a-great-crime-h-d-kumaraswamy-hits-back/

Read More

ಮಂಡ್ಯ : ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಪ್ರಗತಿ ಪರಿಶೀಲನೆ ಜೊತೆಗೆ ಲೋಕ್ ಅದಾಲತ್ ಮಾದರಿಯಲ್ಲಿ ಸಣ್ಣ ಪುಟ್ಟ ವ್ಯಾಜ್ಯಗಳನ್ನು ಜಿಲ್ಲಾ ಹಂತದಲ್ಲಿಯೇ ಬಗೆಹರಿಸಲಾಗುವುದೆಂದು ರಾಜ್ಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ಡಾ.ಎಲ್. ಮೂರ್ತಿ ಸೋಮವಾರ ಹೇಳಿದರು. ಮದ್ದೂರು ನಗರದ ಪ್ರವಾಸಿ ಮಂದಿರದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಮತ್ತು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು. ತಿಂಗಳಿಗೆ ರಾಜ್ಯದ 3 ಜಿಲ್ಲೆಗಳಲ್ಲಿ ಪ್ರಗತಿ ಪರಿಶೀಲನೆ ಮಾಡಲಾಗುವುದು. ಅದಾಲತ್ ಮಾದರಿಯಲ್ಲಿ ಸಣ್ಣ ಪುಟ್ಟ ವ್ಯಾಜ್ಯಗಳನ್ನು ಜಿಲ್ಲಾ ಹಂತದಲ್ಲಿಯೇ ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತದೆ. ಹೀಗಾಗಿ ಆಯೋಗಕ್ಕೆ ಬಂದು ಅರ್ಜಿ ಸಲ್ಲಿಸಿರುವವರು ಮತ್ತೆ ಭೇಟಿ ನೀಡುವ ಅಗತ್ಯವಿಲ್ಲ. ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲೆ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು. ರಾಜ್ಯದಲ್ಲಿ ದೌರ್ಜನ್ಯಕ್ಕೆ ಒಳಗಾದವರು ಯಾರೇ ಆಗಿರಲಿ ಆಯೋಗಕ್ಕೆ ಬಂದು ಪ್ರಕರಣ ದಾಖಲಿಸಬಹುದು. ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಅಯೋಗ ಸದಾ ನಿಮ್ಮೊಂದಿಗೆ ಇರಲಿದ್ದು, ನೊಂದವರಿಗೆ ತ್ವರಿತವಾಗಿ…

Read More

ಬೆಳಗಾವಿ ಸುವರ್ಣಸೌಧ: ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಯುವನಿಧಿ’ಯಡಿ ಇದುವರೆಗೆ 2,84,802 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಅವರಿಗೆ 757 ಕೋಟಿ 92 ಲಕ್ಷ ರೂಪಾಯಿ ಆರ್ಥಿಕ ನೆರವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. 2024ರ ನವೆಂಬರ್ 28ರ ಅಂತ್ಯದವರೆಗೆ ಈ ಮೊತ್ತವನ್ನು ಫಲಾನುಭವಿಗಳಿಗೆ ವಿತರಿಸಲಾಗಿದೆ ಎಂದು ವಿಧಾನ ಪರಿಷತ್ತಿನಲ್ಲಿ ಡಿ. 8ರ ಸೋಮವಾರ ಸರ್ಕಾರ ಮಾಹಿತಿ ನೀಡಿದೆ. ವಿಧಾನಪರಿಷತ್ ಸದಸ್ಯರು, ಗ್ಯಾರಂಟಿ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷರಾದ ದಿನೇಶ್‌ ಗೂಳಿಗೌಡ ಅವರು ಕೇಳಿದ ಚುಕ್ಕೆ ಗುರಿತನದ ಪ್ರಶ್ನೆಗೆ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರು ಉತ್ತರ ನೀಡಿದ್ದು, ಯೋಜನೆಯ ಪ್ರಗತಿ ವಿವರಗಳನ್ನು ವಿವರಿಸಿದ್ದಾರೆ. ಒಟ್ಟು 2.84 ಲಕ್ಷ ನೋಂದಾಯಿತ ನಿರುದ್ಯೋಗಿ ಫಲಾನುಭವಿಗಳಲ್ಲಿ ಉದ್ಯೋಗ ಪಡೆದವರ ಸಂಖ್ಯೆ ಬಹಳ ಕಡಿಮೆ ಇರುವುದು ಸರ್ಕಾರದ ಉತ್ತರದ ಮೂಲಕ ದೃಢಪಟ್ಟಿದೆ. ಸರ್ಕಾರದ ಮಾಹಿತಿಯ ಪ್ರಕಾರ, ಯುವನಿಧಿ ಯೋಜನೆ ಪ್ರಾರಂಭವಾದ ನಂತರ ಈವರೆಗೆ ಕೇವಲ 2,327 ಫಲಾನುಭವಿಗಳು ಉದ್ಯೋಗ ಅಥವಾ…

Read More

ಬೆಳಗಾವಿ ಸುವರ್ಣಸೌಧ : ರಾಜ್ಯದಲ್ಲಿನ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ಶೂ ಸಾಕ್ಸ್ ವಿತರಣೆ ಮಾಡಲು ರೂ. 111.88 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ಜಗದೇವ್ ಗುತ್ತೇದಾರ್ ಮತ್ತು ಕೇಶವ ಪ್ರಸಾದ್ ಅವರ ಚುಕ್ಕೆ ಗುರುತಿನ ಪ್ರಶ್ನೆ ಗೆ ಉತ್ತರಿಸಿ ಮಾತನಾಡಿದರು. ರಾಜ್ಯದಲ್ಲಿನ ಎಲ್ಲಾ ಜಿಲ್ಲೆಗಳ 44525 ಶಾಲೆಗಳಿಗೆ ಶೂ ಸಾಕ್ಸ್ ವಿತರಣೆ ಮಾಡಲು ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು. https://kannadanewsnow.com/kannada/decision-taken-in-the-working-committee-meeting-to-discuss-the-north-karnataka-issue-in-the-belgaum-house-from-tomorrow/ https://kannadanewsnow.com/kannada/alert-do-you-use-an-inverter-in-your-home-dont-make-these-mistakes-even-if-you-make-a-mistake/

Read More

ಬೆಳಗಾವಿ: ಇಲ್ಲಿನ ಸುವರ್ಣಸೌಧದಲ್ಲಿ ನಡೆಯುತ್ತಿರುವಂತ ವಿಧಾನಮಂಡಲದ ಅಧಿವೇಶನದಲ್ಲಿ ನಾಳೆಯಿಂದ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಒಮ್ಮತದಿಂದ ತೀರ್ಮಾನಿಸಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಕಲಾಪ ಸಲಹಾ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ನಾಳೆಯಿಂದ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಒಮ್ಮತದಿಂದ ತೀರ್ಮಾನಿಸಲಾಯಿತು. ಶಾಲಾ ಮಕ್ಕಳ ಶೂ ಸಾಕ್ಸ್ ವಿತರಣೆ ಗೆ ರೂ.111.88 ಕೋಟಿ : ಸಚಿವ ಎಸ್. ಮಧು ಬಂಗಾರಪ್ಪ ರಾಜ್ಯದಲ್ಲಿನ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ಶೂ ಸಾಕ್ಸ್ ವಿತರಣೆ ಮಾಡಲು ರೂ. 111.88 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ಜಗದೇವ್ ಗುತ್ತೇದಾರ್ ಮತ್ತು ಕೇಶವ ಪ್ರಸಾದ್ ಅವರ ಚುಕ್ಕೆ ಗುರುತಿನ ಪ್ರಶ್ನೆ ಗೆ ಉತ್ತರಿಸಿ ಮಾತನಾಡಿದರು. ರಾಜ್ಯದಲ್ಲಿನ ಎಲ್ಲಾ ಜಿಲ್ಲೆಗಳ…

Read More

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಮಂಡಲದ ಅಧಿವೇಶನದಲ್ಲಿ ಇತ್ತೀಚೆಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿದರು. ಮಾಜಿ ಸಚಿವರು, ಹಾಲಿ ಸಂಸದರಾಗಿದ್ದ ಉತ್ತರ ಕರ್ನಾಟಕ ಭಾಗದ ಹಿರಿಯ ನಾಯಕರಾದ ಹೆಚ್.ವೈ.ಮೇಟಿ ಅವರ ಕುರಿತು ಮಾತನಾಡಿ ದೀರ್ಘ ಕಾಲ ಸಾರ್ವಜನಿಕ ಬದುಕಿನಲ್ಲಿದ್ದ ಮೇಟಿಯವರು ಜನಪರವಾಗಿ, ಕ್ಷೇತ್ರದ ಅಭಿವೃದ್ಧಿಯ ಬಗ್ಗೆಯಷ್ಟೇ ಚಿಂತಿಸುತ್ತಿದ್ದ ಮುತ್ಸದ್ದಿ ನಾಯಕ. ನನ್ನ ಅನುಯಾಯಿಗಳಲ್ಲಿ ಮೇಟಿ ಅಗ್ರಗಣ್ಯರು. ವೃತ್ತಿಯಲ್ಲಿ ಕೃಷಿಕರಾಗಿದ್ದ ಮೇಟಿಯವರು ಬಿಲ್‌ಕೆರೂರು ಮಂಡಳ ಪಂಚಾಯಿತಿ ಅಧ್ಯಕ್ಷರಾಗುವ ಮೂಲಕ ರಾಜಕೀಯ ಪ್ರವೇಶಿಸಿದ್ದರು. ಬಾಗಲಕೋಟೆ ತಾಲ್ಲೂಕು ಕೃಷಿ ಹುಟ್ಟುವಳಿ ಮಾರಾಟ ಸಮಿತಿ, ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ, ಮತ್ತು ಎಂ.ಎಸ್.ಐ.ಎಲ್.ನ ಅಧ್ಯಕ್ಷರಾಗಿ ಡಿ.ಸಿ.ಸಿ ಬ್ಯಾಂಕ್ ಹಾಗೂ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. 1983 ರಿಂದಲೂ ಹೆಚ್.ವೈ. ಮೇಟಿಯವರೊಂದಿಗೆ ಒಡನಾಡವಿತ್ತು. ನಾನು ಜನತಾ ಪಕ್ಷ, ಜನತಾ ದಳ ಹಾಗೂ ಕಾಂಗ್ರೆಸ್ ಪಕ್ಷದಲ್ಲಿದ್ದರೂ ನಾನು ಕೈಗೊಳ್ಳುವ ತೀರ್ಮಾನಗಳಿಗೆ ಬದ್ಧರಾಗಿದ್ದರು. ಅಹಿಂದ ಸಂಘಟನೆಯಲ್ಲಿ ನನ್ನೊಂದಿಗೆ ಹೆಗಲು ಕೊಟ್ಟು ದುಡಿದವರು. ಶಾಸಕರಾಗಿ, ಸಂಸದರಾಗಿ, ಸಚಿವರಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಮೇಟಿಯವರು…

Read More

ನವದೆಹಲಿ: ಕುಮಾರಸ್ವಾಮಿ ಮಂಡ್ಯಕ್ಕೆ ಏನು ಕೊಟ್ಟಿದ್ದಾರೆ ಎಂದು ಕೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀಕ್ಷ್ಣವಾಗಿ ತಿರುಗೇಟು ಕೊಟ್ಟಿರುವ ಕೇಂದ್ರ ಸಚಿವರು; ನಾನು ಕೊಟ್ಟಿದ್ದನ್ನು ಪಟ್ಟಿ ಮಾಡಿ ಹೇಳುತ್ತೇನೆ, ಮೊದಲು ಐದು ವರ್ಷ ಮುಖ್ಯಮಂತ್ರಿ ಆಗಿದ್ದಾಗ, ಈಗ ಏನೇನು ಕೊಟ್ಟಿದ್ದೀರಿ ಎಂಬುದನ್ನು ಹೇಳಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಒತ್ತಾಯಿಸಿದರು. ನವದೆಹಲಿಯ ತಮ್ಮ ಗೃಹ ಕಚೇರಿಯಲ್ಲಿ ಸೋಮವಾರ ಬೆಳಗ್ಗೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಚಿವರು; ನಾನು ಕೊಟ್ಟಿದ್ದನ್ನು ಹೇಳುತ್ತೇನೆ. ಸಿದ್ದರಾಮಯ್ಯ ಅವರೇ.. ನೀವು ರೈತರಿಗೆ ಏನು ಕೊಡುಗೆ ಕೊಟ್ಟಿದ್ದೀರಿ ಎಂಬುದನ್ನು ಹೇಳಿ. ಮಂಡ್ಯಕ್ಕೆ ನಿಮ್ಮ ಕೊಡುಗೆ ಏನು? ಹಿಂದಿನ ಐದು ವರ್ಷ ಆಡಳಿತದಲ್ಲಿ 200ಕ್ಕೂ ಹೆಚ್ಚು ರೈತರು ಮಂಡ್ಯದಲ್ಲಿ ಸರಣಿ ಆತ್ಮಹತ್ಯೆ ಮಾಡಿಕೊಂಡಿದ್ದೇ ನಿಮ್ಮ ಕೊಡುಗೆ. ಅಂಥ ಕಷ್ಟಕಾಲದಲ್ಲಿ ನಾನು ಅಧಿಕಾರಕ್ಕೆ ಬಂದ ಮೇಲೆ ಅದೇ ಜಿಲ್ಲೆಯ ರೈತರ 900 ಕೋಟಿ ಸಾಲ ಮನ್ನಾ ಮಾಡಿದೆ. ಇದಕ್ಕಿಂತ ಕೊಡುಗೆ ಬೇಕಾ? ನಿಮ್ಮ ಕಾಲದಲ್ಲಿ ರೈತರ ಜೀವ ಹೋಯಿತು, ನನ್ನ ಕಾಲದಲ್ಲಿ ಜೀವ…

Read More