Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ರಾಜ್ಯದ ಆಸ್ತಿ ಮಾಲೀಕರಿಗೆ ನೂತನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಗುಡ್ ನ್ಯೂಸ್ ನೀಡಿದ್ದಾರೆ. ಅದೇ ಬೆಂಗಳೂರಿಗೆ ಮಾತ್ರವೇ ಸೀಮಿತವಾಗಿದ್ದಂತ ಬಿ-ಖಾತಾದಿಂದ ಎ-ಖಾತಾ ಯೋಜನೆಯನ್ನು ಇಡೀ ರಾಜ್ಯಕ್ಕೆ ವಿಸ್ತರಣೆ ಮಾಡುವುದಾಗಿ ಘೋಷಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರದ ಈ ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದರು. ಅದರ ಪ್ರಮುಖ ಮುಖ್ಯಾಂಶಗಳು ಕೆಳಗಿನಂತಿವೆ: 3 ಅಂತಸ್ತಿನ ಮನೆಗಳಿಗೆ ಒಸಿ (OC) ವಿನಾಯ್ತಿ! ರಾಜಧಾನಿ ಸೇರಿದಂತೆ ರಾಜ್ಯದಾದ್ಯಂತ ಸ್ವಂತ ಮನೆ ಕಟ್ಟಿಕೊಳ್ಳುವ ಜನರಿಗೆ ಸರ್ಕಾರ ಅತಿ ದೊಡ್ಡ ರಿಲೀಫ್ ನೀಡಿದೆ. 3 ಅಂತಸ್ತಿನ ವರೆಗಿನ ಕಟ್ಟಡಗಳಿಗೆ ಹಾಗೂ 2,500 ಚದರ ಅಡಿ ವಿಸ್ತೀರ್ಣದವರೆಗೆ ಮನೆ ನಿರ್ಮಿಸಿ ಅರ್ಜಿ ಹಾಕಿದವರಿಗೆ ಆಕ್ಯುಪೆನ್ಸಿ ಸರ್ಟಿಫಿಕೇಟ್ (OC – Occupancy Certificate) ನಿಯಮದಿಂದ ಸಂಪೂರ್ಣ ವಿನಾಯ್ತಿ ನೀಡುವುದಾಗಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಘೋಷಿಸಿದ್ದಾರೆ. ಇದರಿಂದಾಗಿ ಸಾವಿರಾರು ಮಧ್ಯಮ ವರ್ಗದ ಮನೆ ಮಾಲೀಕರಿಗೆ ದೊಡ್ಡ ನೆಮ್ಮದಿ ಸಿಕ್ಕಂತಾಗಿದೆ. ಬಿ-ಖಾತಾದಿಂದ ಎ-ಖಾತಾ: ಇಡೀ ರಾಜ್ಯಕ್ಕೆ ವಿಸ್ತರಣೆ ಇದುವರೆಗೆ ಕೇವಲ…

Read More

ಬೆಂಗಳೂರು: ರಾಜ್ಯದಲ್ಲಿ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಆಡಳಿತ ವ್ಯವಸ್ಥೆಯಲ್ಲಿ ಪ್ರಮುಖ ಬದಲಾವಣೆಗಳು ಆರಂಭವಾಗಿವೆ. ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರ ಸಚಿವಾಲಯಕ್ಕೆ ಅತ್ಯಂತ ದಕ್ಷ ಹಾಗೂ ಹಿರಿಯ ಐಎಎಸ್ ಅಧಿಕಾರಿಗಳನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಇಂದು ಮಹತ್ವದ ಆದೇಶ ಹೊರಡಿಸಿದೆ. ಬೆಂಗಳೂರಿನ ವಿಧಾನಸೌಧದಿಂದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು (ಸೇವೆಗಳು-1) ಜೂನ್ 3, 2026 ರಂದು ಈ ಅಧಿಕೃತ ವರ್ಗಾವಣೆ ಮತ್ತು ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿಯಾಗಿ ತುಷಾರ್ ಗಿರಿನಾಥ್ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ತುಷಾರ್ ಗಿರಿನಾಥ್, ಐಎಎಸ್ (KN: 1993) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿಯಾಗಿ (Additional Chief Secretary to Chief Minister) ವರ್ಗಾವಣೆ ಮಾಡಿ ಜವಾಬ್ದಾರಿ ನೀಡಲಾಗಿದೆ. ಇವರು ಈ ಹಿಂದೆ ಈ ಹುದ್ದೆಯಲ್ಲಿದ್ದ ಅಂಜುಮ್ ಪರ್ವೇಜ್, ಐಎಎಸ್ ಅವರ ಜಾಗಕ್ಕೆ ನಿಯುಕ್ತಿಗೊಂಡಿದ್ದಾರೆ.…

Read More

ರಾಮಾಯಣ ಯುದ್ಧ ಮುಗಿದು, ಧರ್ಮ ಪುನಃ ಸ್ಥಾಪಿತವಾದ ನಂತರ… ಶ್ರೀರಾಮನು ತನ್ನ ಅವತಾರ ಕಾರ್ಯವನ್ನು ಪೂರ್ಣಗೊಳಿಸಿ ವೈಕುಂಠಕ್ಕೆ ಮರಳಿದಾಗ, ಆಂಜನೇಯನು ಏಕೆ ಅವರೊಂದಿಗೆ ಹೋಗಲಿಲ್ಲ? ಅವನು ಎಲ್ಲಿಗೆ ಹೋದನು? ಅನೇಕ ಭಕ್ತರಲ್ಲಿ ಮೂಡುವ ಈ ಕುತೂಹಲಕರ ಪ್ರಶ್ನೆಗೆ ಪುರಾಣಗಳು ನೀಡುವ ಉತ್ತರ ಹೀಗಿದೆ! ಶ್ರೀರಾಮನು ವೈಕುಂಠಕ್ಕೆ ತೆರಳುವ ಸಮಯದಲ್ಲಿ ಹನುಮಂತನನ್ನೂ ತನ್ನೊಂದಿಗೆ ಕರೆದುಕೊಂಡು ಹೋಗಲು ಇಚ್ಛಿಸಿದನು. ಆದರೆ ಹನುಮಂತನು ವಿನಯದಿಂದ, “ರಾಮಾ! ನಿನ್ನ ಪವಿತ್ರ ನಾಮವು ಈ ಭೂಮಿಯ ಮೇಲೆ ಕೇಳಿಬರುತ್ತಿರುವವರೆಗೆ ನನಗೆ ವೈಕುಂಠದ ಸುಖಗಳು ಬೇಡ. ನಾನು ಇಲ್ಲಿಯೇ ಉಳಿದು ನಿನ್ನ ನಾಮಸ್ಮರಣೆ ಮತ್ತು ಧ್ಯಾನ ಮಾಡುತ್ತೇನೆ” ಎಂದು ಪ್ರಾರ್ಥಿಸಿದನು. ಅದರಂತೆ, ಇಂದಿಗೂ ಹಿಮಾಲಯದಲ್ಲಿರುವ ಗಂಧಮಾದನ ಪರ್ವತದ ಮೇಲೆ ಹನುಮಂತನು ರಾಮನಾಮ ಜಪ ಮಾಡುತ್ತಾ ತಪಸ್ಸಿನಲ್ಲಿ ನಿರತನಾಗಿದ್ದಾನೆ ಎಂದು ನಂಬಲಾಗುತ್ತದೆ. ತ್ರೇತಾಯುಗದ ರಾಮಾಯಣ ಕಾಲ ಮುಗಿದ ನಂತರವೂ, ದ್ವಾಪರಯುಗದ ಮಹಾಭಾರತ ಕಾಲದಲ್ಲಿ ಹನುಮಂತನು ಜೀವಂತನಾಗಿದ್ದನು. ತನ್ನ ಸಹೋದರನಾದ ಭೀಮನ ಅಹಂಕಾರವನ್ನು ತಗ್ಗಿಸಲು, ವೃದ್ಧ ವಾನರನ ರೂಪದಲ್ಲಿ ಅವನಿಗೆ ಜ್ಞಾನೋಪದೇಶ ನೀಡಿದನು. ಅದೇ…

Read More

ನವದೆಹಲಿ: ಭಾರತದ ಅತಿ ದೊಡ್ಡ ದೈನಂದಿನ ಬಳಕೆಯ ವಸ್ತುಗಳ (FMCG) ದೈತ್ಯ ಕಂಪನಿಯಾದ ಹಿಂದುಸ್ತಾನ್ ಯೂನಿಲಿವರ್ ಲಿಮಿಟೆಡ್ (HUL), 2025-26ರ ಹಣಕಾಸು ವರ್ಷದಲ್ಲಿ (FY26) ತನ್ನ ಕಾಯಂ ಉದ್ಯೋಗಿಗಳು ಹಾಗೂ ಕಾರ್ಮಿಕರ ಸಂಖ್ಯೆಯನ್ನು ಗಣನೀಯವಾಗಿ ಕಡಿತಗೊಳಿಸಿದೆ. ದೇಶದ ಮಾರುಕಟ್ಟೆಯಲ್ಲಿ ಕಂಡುಬಂದಿರುವ ಗ್ರಾಹಕರ ಮಂದಗತಿಯ ಬೇಡಿಕೆ ಮತ್ತು ಸವಾಲಿನ ವಾತಾವರಣವನ್ನು ನಿಭಾಯಿಸಲು ಕಂಪನಿಯು ಈ ಕಠಿಣ ನಿರ್ಧಾರ ಕೈಗೊಂಡಿದೆ. ಕಂಪನಿಯು ಬಿಡುಗಡೆ ಮಾಡಿರುವ ಇತ್ತೀಚಿನ ವಾರ್ಷಿಕ ವರದಿಯ ಪ್ರಕಾರ, ಉತ್ಪಾದಕತೆ ಹೆಚ್ಚಿಸಲು ಹಾಗೂ ವೆಚ್ಚ ನಿಯಂತ್ರಣದ ಮೂಲಕ ಲಾಭದ ಪ್ರಮಾಣವನ್ನು (Margins) ಕಾಯ್ದುಕೊಳ್ಳಲು ಈ ಕ್ರಮ ಅನಿವಾರ್ಯವಾಗಿದೆ ಎಂದು ತಿಳಿಸಿದೆ. ಉದ್ಯೋಗಿಗಳ ಸಂಖ್ಯೆಯಲ್ಲಿ ಶೇ. 8.6 ಕುಸಿತ ಹೆಚ್‌ಯುಎಲ್ ವಾರ್ಷಿಕ ವರದಿಯ ಪ್ರಮುಖ ಮುಖ್ಯಾಂಶಗಳು ಹೀಗಿವೆ: ಕಾಯಂ ಉದ್ಯೋಗಿಗಳು: ಮಾರ್ಚ್ 31, 2026ರ ಅಂತ್ಯಕ್ಕೆ ಕಂಪನಿಯ ಕಾಯಂ ಉದ್ಯೋಗಿಗಳ ಸಂಖ್ಯೆ ಶೇಕಡಾ 8.6 ರಷ್ಟು ಕುಸಿದಿದ್ದು, 7,499 ಕ್ಕೆ ತಲುಪಿದೆ. ಕಳೆದ ವರ್ಷ ಈ ಸಂಖ್ಯೆ 8,202 ಇತ್ತು. ಕಾರ್ಮಿಕರ ಸಂಖ್ಯೆ: ಇದೇ…

Read More

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್‌ನ ದ್ವೈವಾರ್ಷಿಕ ಚುನಾವಣೆಗೆ (Legislative Council of Karnataka) ಕಾಂಗ್ರೆಸ್ ಪಕ್ಷವು ತನ್ನ ಅಧಿಕೃತ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಶಾಸಕರಿಂದ (MLAs) ಆಯ್ಕೆಯಾಗುವ ಈ ಸ್ಥಾನಗಳಿಗೆ ಒಟ್ಟು ನಾಲ್ಕು ಮಂದಿ ಪ್ರಮುಖ ನಾಯಕರ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಈ ಅಭ್ಯರ್ಥಿಗಳ ನಾಮನಿರ್ದೇಶನದ ಪ್ರಸ್ತಾವನೆಗೆ ಅಧಿಕೃತ ಅನುಮೋದನೆ ನೀಡಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಜೂನ್ 3, 2026 ರಂದು ಈ ಕುರಿತು ಪ್ರಕಟಣೆ ಹೊರಡಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ ಅಧಿಕೃತ ಪಟ್ಟಿ ಇಲ್ಲಿದೆ: ವಿಧಾನ ಪರಿಷತ್ ಚುನಾವಣಾ ಕಣಕ್ಕಿಳಿಯಲಿರುವ ಕೈ ಪಡೆಯ ನಾಲ್ಕು ಪ್ರಮುಖ ನಾಯಕರು: ಬಿ.ಕೆ. ಹರಿಪ್ರಸಾದ್ (Shri B.K. Hariprasad) ತಿಪ್ಪಣ್ಣಪ್ಪ ಕಮಕನೂರ್ (Shri Tippannappa Kamaknoor) ಪಿ.ವಿ. ಮೋಹನ್ (Shri P.V. Mohan) ಶಿವಣ್ಣ ಮಳವಳ್ಳಿ (Shri Shivanna Mallvalli) ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರೊಂದಿಗೆ ವಿವಿಧ ವಲಯಗಳ ಪ್ರಮುಖ ನಾಯಕರಿಗೆ ಈ…

Read More

ಬೆಂಗಳೂರು: “ಜನರಿಂದ, ಜನರಿಗಾಗಿ, ಜನರಿಗೋಸ್ಕರ” ಎಂಬ ಪ್ರಜಾಪ್ರಭುತ್ವದ ಆಶಯದೊಂದಿಗೆ ಆಡಳಿತದ ಸಾರಥ್ಯ ವಹಿಸಿಕೊಂಡಿರುವ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಲೋಕಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದ ನಂತರ ನಾಡಿನ ಜನತೆಯನ್ನುದ್ದೇಶಿಸಿ ಅತ್ಯಂತ ಆಪ್ತ ಹಾಗೂ ಭಾವುಕ ನುಡಿಗಳನ್ನಾಡಿದ್ದಾರೆ. ತಮ್ಮ ರಾಜಕೀಯ ಏಳುಬೀಳುಗಳಲ್ಲಿ ಜೊತೆಯಾಗಿ ನಿಂತ ಕೋಟ್ಯಂತರ ಕನ್ನಡಿಗರಿಗೆ ಮತ್ತು ಕಾರ್ಯಕರ್ತರಿಗೆ ಅವರು ತಲೆಬಾಗಿ ಧನ್ಯವಾದ ಅರ್ಪಿಸಿದ್ದಾರೆ. ನನ್ನನ್ನು ಹೆಗಲ ಮೇಲೆ ಹೊತ್ತು ಮುನ್ನಡೆಸಿದ ಜನತೆಗೆ ಧನ್ಯವಾದ ತಮ್ಮ ರಾಜಕೀಯ ಪಯಣದ ಹಾದಿಯನ್ನು ಸ್ಮರಿಸಿರುವ ಡಿ.ಕೆ. ಶಿವಕುಮಾರ್, “ನನ್ನ ಬದುಕಿನ ಪ್ರತಿಯೊಂದು ಏಳುಬೀಳುಗಳಲ್ಲೂ ಧೈರ್ಯ ತುಂಬಿ, ನನ್ನನ್ನು ಹೆಗಲ ಮೇಲೆ ಹೊತ್ತು ಮುನ್ನಡೆಸಿದ ನನ್ನ ಪ್ರೀತಿಯ ಕರ್ನಾಟಕದ ಕೋಟ್ಯಂತರ ಜನತೆ ಹಾಗೂ ಕಾರ್ಯಕರ್ತ ಬಂಧುಗಳ ಆಶೀರ್ವಾದದಿಂದ ಲೋಕಭವನದಲ್ಲಿ ಇಂದು ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದೆ. ಈ ಕ್ಷಣದಲ್ಲಿ ನಾನು ನಿಮ್ಮೆಲ್ಲರ ಪ್ರೀತಿ ಹಾಗೂ ವಿಶ್ವಾಸಕ್ಕೆ ತಲೆಬಾಗುತ್ತೇನೆ” ಎಂದು ವಿನೀತರಾಗಿದ್ದಾರೆ. https://twitter.com/DKShivakumar/status/2062160140514803981 ಇದು ಕನ್ನಡಿಗರ ಕನಸುಗಳನ್ನು ನನಸು ಮಾಡುವ ಪವಿತ್ರ ಕರ್ತವ್ಯ ಮುಖ್ಯಮಂತ್ರಿ ಹುದ್ದೆಯನ್ನು ಕೇವಲ…

Read More

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಪ್ರಮುಖ ಪ್ರಕ್ರಿಯೆಗಳು ಆರಂಭವಾಗಿವೆ. ಇದರ ಮೊದಲ ಭಾಗವಾಗಿ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿ (Financial Adviser to Chief Minister) ರಾಜ್ಯದ ಹಿರಿಯ ನಿವೃತ್ತ ಐಎಎಸ್ ಅಧಿಕಾರಿ ಎಲ್.ಕೆ. ಅತೀಕ್ (Sri. Atheeq L K) ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (DPAR) ಈ ಕುರಿತು ಪ್ರಕಟಣೆ ಹೊರಡಿಸಿದ್ದು, ಈ ನೇಮಕಾತಿಯು ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ತಿಳಿಸಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ದರ್ಜೆಯ ಸ್ಥಾನಮಾನ ಆಡಳಿತದಲ್ಲಿ ಅಪಾರ ಅನುಭವ ಹೊಂದಿರುವ ಎಲ್.ಕೆ. ಅತೀಕ್ ಅವರಿಗೆ ಈ ಹೊಸ ಜವಾಬ್ದಾರಿಯಲ್ಲಿ ಅತ್ಯುನ್ನತ ಸ್ಥಾನಮಾನ ನೀಡಲಾಗಿದೆ. ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರ ಹುದ್ದೆಯಲ್ಲಿ ಇವರು ಪಡೆಯುವ ವೇತನ ಮತ್ತು ಇತರೆ ಭತ್ಯೆಗಳು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ (Chief Secretary to Government) ಹುದ್ದೆಗೆ…

Read More

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಡಿ.ಕೆ. ಶಿವಕುಮಾರ್ ಅವರಿಗೆ ಹಾರ್ದಿಕ ಅಭಿನಂದನೆಗಳು ಹಾಗೂ ಅವರ ಅಧಿಕಾರಾವಧಿಗೆ ಶುಭಾಶಯಗಳು. ಅವರು ರಾಜ್ಯದ ಸಮಗ್ರ ಅಭಿವೃದ್ಧಿ ಮತ್ತು ಜನಸಾಮಾನ್ಯರ ಹಿತಕ್ಕಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಲಿ ಎಂದು ಆಶಿಸುತ್ತೇನೆ. ಆದರೆ, ಈ ನಾಯಕತ್ವ ಬದಲಾವಣೆಯಿಂದ ರಾಜ್ಯದ ಜನರಲ್ಲಿ ಯಾವುದೇ ಹೊಸ ಭರವಸೆ ಅಥವಾ ನಿರೀಕ್ಷೆ ಮೂಡಿಲ್ಲ ಎನ್ನುವುದೇ ಇಂದಿನ ಕಹಿ ಸತ್ಯವಾಗಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಲೇವಡಿ ಮಾಡಿದ್ದಾರೆ. ನೂತನ ಸರ್ಕಾರದ ಪ್ರಮಾಣವಚನ ಮುಗಿಯುತ್ತಿದ್ದಂತೆ ಪ್ರಕಟಣೆ ಹೊರಡಿಸಿರುವ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅವರ ಪ್ರಕಟಣೆಯ ಮುಖ್ಯಾಂಶಗಳು ಈ ಕೆಳಗಿನಂತಿವೆ: ಕೇವಲ ಮುಖ್ಯಸ್ಥರು ಬದಲಾಗಿದ್ದಾರೆ, ವ್ಯವಸ್ಥೆಯಲ್ಲ! “ಕಳೆದ ಮೂರು ವರ್ಷಗಳಲ್ಲಿ ಭ್ರಷ್ಟಾಚಾರ, ತಾರತಮ್ಯದ ವರ್ಗಾವಣೆ ದಂಧೆ, ಕಮಿಷನ್ ಸಂಸ್ಕೃತಿ ಮತ್ತು ಸಾಲು ಸಾಲು ಆಡಳಿತ ವೈಫಲ್ಯಗಳಿಂದ ಈ ಸರ್ಕಾರ ಇಡೀ ರಾಜ್ಯವನ್ನು ತೀವ್ರ ಸಂಕಷ್ಟಕ್ಕೆ ತಳ್ಳಿತ್ತು. ಇಂದು ನಡೆದಿರುವ ಪ್ರಕ್ರಿಯೆಯಲ್ಲಿ ಸರ್ಕಾರದ ಮುಖ್ಯಸ್ಥರು…

Read More

ಬೆಂಗಳೂರು: ನಾನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಸರ್ಕಾರದಲ್ಲಿ ಸಚಿವನಾಗುತ್ತಿರುವುದಕ್ಕೆ ಅತೀವ ಸಂತಸವಾಗುತ್ತಿದೆ ಎಂದು ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬೈರತಿ ಸುರೇಶ್ ಹೇಳಿದ್ದಾರೆ. ಪ್ರಮಾಣವಚನ ಸ್ವೀಕರಿಸಿದ ನಂತರ ಪ್ರತಿಕ್ರಿಯೆ ನೀಡಿರುವ ಅವರು, ಎಐಸಿಸಿ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಣದೀಪ್ ಸುರ್ಜೇವಾಲ, ಕೆ.ಸಿ.ವೇಣುಗೋಪಾಲ್, ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಎಲ್ಲಾ ಇತರ ನಾಯಕರು ನನ್ನ ಮೇಲೆ ನಂಬಿಕೆ, ವಿಶ್ವಾಸವಿಟ್ಟು ಸಚಿವನನ್ನಾಗಿ ಆಯ್ಕೆ ಮಾಡಿರುವುದಕ್ಕೆ ಧನ್ಯವಾದಗಳನ್ನು ತಿಳಿಸುತ್ತಿದ್ದೇನೆ ಎಂದರು. ಈ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ. ಈ ಹೊಣೆಗಾರಿಕೆ ಮೂಲಕ ರಾಜ್ಯದ ಜನರ ಸೇವೆಯನ್ನು ಮಾಡುತ್ತೇನೆ. ವಿಶೇಷವಾಗಿ ನನ್ನನ್ನು ಎರಡು ಬಾರಿ ವಿಧಾನಸಭೆಗೆ ಆಯ್ಕೆ ಮಾಡಿರುವ ಹೆಬ್ಬಾಳ ಕ್ಷೇತ್ರದ ಜನತೆಗೆ ಧನ್ಯವಾದಗಳನ್ನು ಅರ್ಪಿಸುತ್ತಿದ್ದೇನೆ ಎಂದು ಹೇಳಿದರು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಖುದ್ದು ದೂರವಾಣಿ ಕರೆ ಮಾಡಿ ಮಂತ್ರಿಯಾಗಿ ಆಯ್ಕೆ ಮಾಡಲಾಗಿದ್ದು, ಪ್ರಮಾಣ ವಚನ ಸ್ವೀಕರಿಸುವಂತೆ ತಿಳಿಸಿದರು. ನಾನು…

Read More

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಅಧಿಕೃತವಾಗಿ ಗದ್ದುಗೆಗೇರಿದ ಶ್ರೀ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಜನತೆಗೆ ವಿನಯಪೂರ್ವಕ ವಾಗ್ದಾನವೊಂದನ್ನು ನೀಡಿದ್ದಾರೆ. ಅಧಿಕಾರ ಸ್ವೀಕರಿಸಿದ ತಕ್ಷಣವೇ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣದ ಮೂಲಕ ನಾಡಿನ ಜನತೆಯನ್ನುದ್ದೇಶಿಸಿ ಭಾವುಕ ನುಡಿಗಳನ್ನಾಡಿರುವ ಅವರು, ತಮಗೆ ಸಿಕ್ಕಿರುವ ಈ ಜವಾಬ್ದಾರಿಯನ್ನು ಅತ್ಯಂತ ವಿನೀತನಾಗಿ ಸ್ವೀಕರಿಸುವುದಾಗಿ ಹೇಳಿದ್ದಾರೆ. 7 ಕೋಟಿ ಜನತೆಯ ಸೇವೆ ನನ್ನ ಬದುಕಿನ ಭಾಗ್ಯ! ಮುಖ್ಯಮಂತ್ರಿಯಾಗಿ ಜವಾಬ್ದಾರಿ ವಹಿಸಿಕೊಂಡಿರುವ ಕುರಿತು ಹರ್ಷ ವ್ಯಕ್ತಪಡಿಸಿರುವ ಡಿ.ಕೆ. ಶಿವಕುಮಾರ್, “ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ನಾನು ಇಂದು ಪ್ರಮಾಣ ವಚನ ಸ್ವೀಕರಿಸಿದ್ದೇನೆ. ಮುಖ್ಯಮಂತ್ರಿಯಾಗಿ ರಾಜ್ಯದ ಏಳುಕೋಟಿ ಜನತೆಯ ಸೇವೆ ಮಾಡಲು ಒದಗಿ ಬಂದಿರುವ ಈ ಅವಕಾಶ ನನ್ನ ಬದುಕಿನ ಭಾಗ್ಯ ಎಂದು ವಿನೀತನಾಗಿ ಸ್ವೀಕರಿಸಿದ್ದೇನೆ” ಎಂದು ತಿಳಿಸಿದ್ದಾರೆ. ‘ಮನೆ ಮಗನಂತೆ ಕಾಯಾ ವಾಚಾ ಮನಸಾ ಅರ್ಪಿಸಿಕೊಳ್ಳುವೆ’ ತಮ್ಮನ್ನು ರಾಜಕೀಯವಾಗಿ ಈ ಮಟ್ಟಕ್ಕೆ ಬೆಳೆಸಿದ ಜನತೆಗೆ ಧನ್ಯವಾದ ಅರ್ಪಿಸಿರುವ ಅವರು, “ಮನೆ ಮಗನಂತೆ ಹರಸಿ, ಹಾರೈಸಿ ರಾಜಕೀಯ ಕ್ಷೇತ್ರದಲ್ಲಿ ಈ…

Read More