Subscribe to Updates
Get the latest creative news from FooBar about art, design and business.
Author: kannadanewsnow09
ಕೋಲಾರ: ಶಾಸಕ ಕೊತ್ತನೂರು ಮಂಜುನಾಥ್ ಆಪ್ತ, ಮುಳುಬಾಗಿಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಸಿ ನೀಲಕಂಠೇಗೌಡ ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಮೂಲಕ ಮುಳಬಾಗಿಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಸಿ ನೀಲಕಂಠೇಗೌಡ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಳೆದ ರಾತ್ರಿ ತೀವ್ರ ಹೃದಯಾಘಾತಕ್ಕೆ ಒಳಗಾಗಿದಂತ ಶಾಸಕ ಕೊತ್ತನೂರು ಮಂಜುನಾಥ್ ಆಪ್ತ ಹಾಗೂ ಮುಳಬಾಗಿಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಸಿ ನೀಲಕಂಠೇಗೌಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಈ ಹಿಂದೆ ಮುಳಬಾಗಿಲು ತಾಲ್ಲೂಕು ಪಂಚಾಯ್ತಿ ಅಧ್ಯಕ್ಷರಾಗಿಯೂ ಆಡಳಿತ ನಡೆಸಿದ್ದರು. ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷರಾಗಿ, ಡಿಸಿಸಿ ಬ್ಯಾಂಕ್ ನಿರ್ದೇಶಕಾಗಿಯೂ ಕಾರ್ಯನಿರ್ವಹಿಸುತ್ತಿದ್ದರು. ಮುಳುಬಾಗಿಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದಂತ ನೀಲಕಂಠೇಗೌಡ ಅವರು, ಇದೀಗ ಹೃದಯಾಘಾತದಿಂದ ನಿಧನರಾಗಿದ್ದಾರೆ. https://kannadanewsnow.com/kannada/hd-deve-gowda-discusses-railways-amendment-bill-in-rajya-sabha/ https://kannadanewsnow.com/kannada/xdown-across-the-world-including-india-for-the-2nd-time/
ನವದೆಹಲಿ: ಇಂದು ಮಧ್ಯಾಹ್ನ ಭಾರತ ಸೇರಿದಂತೆ ವಿಶ್ವದಾದ್ಯಂತ ಈ ಮೊದಲು ಟ್ವಿಟ್ಟರ್ ಎಂದು ಕರೆಯಲಾಗುತ್ತಿದ್ದಂತ ಎಕ್ಸ್ ಸೇವೆಯಲ್ಲಿ ಸಮಸ್ಯೆ ಉಂಟಾಗಿ ಡೌನ್ ಆಗಿತ್ತು. ಈಗ ಮತ್ತೆ ಭಾರತ ಸೇರಿದಂತೆ ವಿಶ್ವದಾದ್ಯಂತ ಎಕ್ಸ್ ಮತ್ತೆ ಡೌನ್ ಆಗಿದೆ. ಹೀಗಾಗಿ ಬಳಕೆದಾರರು ಪರದಾಡುವಂತೆ ಆಗಿದೆ. ಸಾಮಾಜಿಕ ಮಾಧ್ಯಮ ವೇದಿಕೆ X (ಹಿಂದೆ ಟ್ವಿಟರ್) ಒಂದೇ ದಿನದೊಳಗೆ ಎರಡನೇ ಪ್ರಮುಖ ಸ್ಥಗಿತವನ್ನು ಎದುರಿಸಿತು. ಇದರಿಂದಾಗಿ ಸಾವಿರಾರು ಬಳಕೆದಾರರು ವೇದಿಕೆಯನ್ನು ಪ್ರವೇಶಿಸಲು ಸಾಧ್ಯವಾಗಲಿಲ್ಲ. ಮಾರ್ಚ್ 10, 2025 ರ ಹೊತ್ತಿಗೆ, ಸೇವಾ ಅಡಚಣೆಗಳ ಬಗ್ಗೆ 40,000 ಕ್ಕೂ ಹೆಚ್ಚು ವರದಿಗಳು ದಾಖಲಾಗಿವೆ, ಇದು ಯುಎಸ್, ಭಾರತ, ಯುಕೆ, ಆಸ್ಟ್ರೇಲಿಯಾ ಮತ್ತು ಕೆನಡಾದಲ್ಲಿ ವೆಬ್ ಮತ್ತು ಮೊಬೈಲ್ ಅಪ್ಲಿಕೇಶನ್‌ಗಳ ಮೇಲೆ ಪರಿಣಾಮ ಬೀರಿದೆ. ಸ್ಥಗಿತದ ಜಾಗತಿಕ ಪರಿಣಾಮ ಡೌನ್ಡೆಟೆಕ್ಟರ್ ಪ್ರಕಾರ, ಸಂಜೆ 7:00 ರ ಸುಮಾರಿಗೆ ವಿದ್ಯುತ್ ಕಡಿತವು ಮತ್ತೆ ಉತ್ತುಂಗಕ್ಕೇರಿತು, ಇದು ದಿನದ ಎರಡನೇ ಪ್ರಮುಖ ಅಡಚಣೆಯನ್ನು ಸೂಚಿಸುತ್ತದೆ. ವರದಿಗಳು ಸೂಚಿಸುತ್ತವೆ: 56 ರಷ್ಟು ಬಳಕೆದಾರರು ಅಪ್ಲಿಕೇಶನ್ನಲ್ಲಿ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಅನರ್ಹರ ರೇಷನ್ ಕಾರ್ಡ್ ಈಗಾಗಲೇ ಒಂದಷ್ಟು ರದ್ದುಗೊಳಿಸಲಾಗಿದೆ. ಈಗ ಮುಂದುವರೆದು ಅನರ್ಹ ಬಿಪಿಎಲ್ ಕಾರ್ಡ್ ಪತ್ತೆ ಹಚ್ಚೋದಕ್ಕೆ ಸಮಿತಿ ರಚನೆ ಮಾಡಿದೆ. ಅನರ್ಹ ಬಿಪಿಎಲ್ ಕಾರ್ಡ್ ಫಲಾನುಭವಿಗಳನ್ನು ಪತ್ತೆ ಹಚ್ಚಿ, ಅವರಿಗೆ ಸಿಗುತ್ತಿರುವ ಸೌಲಭ್ಯವನ್ನು ಅರ್ಹರಿಗೆ ದೊರಕಿಸಿಕೊಡುವ ಸದುದ್ದೇಶದಿಂದ ಗ್ರಾಮ ಮಟ್ಟದಲ್ಲಿ ಸಮಿತಿಯನ್ನು ರಚಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು. https://twitter.com/KarnatakaVarthe/status/1899105555387474346 https://kannadanewsnow.com/kannada/hd-deve-gowda-discusses-railways-amendment-bill-in-rajya-sabha/ https://kannadanewsnow.com/kannada/it-is-mandatory-for-doctors-to-perform-duties-in-government-hospitals-from-9-am-to-4-pm-minister-dr-sharanprakash-patil/
ನವದೆಹಲಿ: ಭಾರತೀಯ ರೈಲ್ವೆ ಕ್ಷೇತ್ರದ ಅಭಿವೃದ್ಧಿಗಾಗಿ ರೇಲ್ವೆ ತಿದ್ದುಪಡಿ ಮಸೂದೆ 2024 ಅನ್ನು ಬೆಂಬಲಿಸಿದ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರು, ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು; ಕಳೆದ ಹತ್ತು ವರ್ಷಗಳ ಅವಧಿಯಲಿ ನರೇಂದ್ರ ಮೋದಿ ಅವರ ಸರಕಾರ ರೇಲ್ವೆ ವಲಯದಲ್ಲಿ ಕ್ರಾಂತಿಕಾರಕ ಅಭಿವೃದ್ಧಿಯನ್ನು ಮಾಡಿದೆ ಎಂದು ಶ್ಲಾಘಿಸಿದರು. ರಾಜ್ಯಸಭೆಯಲ್ಲಿ ಸೋಮವಾರ ಈ ಬಗ್ಗೆಮಾತನಾಡಿದ ಮಾಜಿ ಪ್ರಧಾನಿಗಳು; ಕರ್ನಾಟಕದಲ್ಲಿ ಮೈಸೂರು ಮಹಾರಾಜರ ಆಳ್ವಿಕೆ ವೇಳೆ ಮೈಸೂರು – ಹರಿಹರವರೆಗೂ ಮೀಟರ್ ಗೇಜ್ ರೇಲು ಮಾರ್ಗ ನಿರ್ಮಿಸಿದ್ದನ್ನು ಸ್ಮರಿಸಿದರಲ್ಲದೆ, ಆಗಿನ ತಮ್ಮ ರೇಲು ಪ್ರಯಾಣದ ಅನುಭವವನ್ನು ನೆನೆದರು. ಅದೇ ರೇಲು ಮಾರ್ಗ ಮುಂಬಯಿ- ಚೆನ್ನೈ ರೇಲು ಮಾರ್ಗವಾಗಿದ್ದು, ಅದಕ್ಕೆ ಹರಿಹರ-ದಾವಣಗೆರೆ-ಶೃಂಗೇರಿ-ಬೇಲೂರು ಮೂಲಕ ಚನ್ನೈಗೆ ಸಂಪರ್ಕ ಕಲ್ಪಿಸಬೇಕು. ಇದು ಬಹಳ ಉಪಯುಕ್ತವಾಗಿದ್ದು, ಜನರಿಗೆ ಸಾಕಷ್ಟು ಅನುಕೂಲವಾಗಲಿದೆ. ಈ ಯೋಜನೆಯನ್ನು ಆದಷ್ಟು ಬೇಗ ಕಾರ್ಯಗತ ಮಾಡಬೇಕು ಎಂದು ಅವರು ಮನವಿ ಮಾಡಿದರು. ಕಳೆದ 10 ವರ್ಷಗಳಲ್ಲಿ ದೇಶಾದ್ಯಂತ ನಿರೀಕ್ಷೆಗೂ ಮೀರಿ ರೈಲ್ವೆ ಜಾಲ ಮತ್ತು ಮಾರ್ಗಗಳು ಸಾಕಷ್ಟು ಪ್ರಗತಿ ಸಾಧಿಸಿದೆ.…
ಬೆಂಗಳೂರು : “ಮರೆಗುದ್ದಿ ಏತ ನೀರಾವರಿ ಯೋಜನೆಯನ್ನು ಹಂತ ಹಂತವಾಗಿ ಜಾರಿಗೊಳಿಸಲಾಗುವುದು” ಎಂದು ಜಲಸಂಪನ್ಮೂಲ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಸೋಮವಾರ ಭರವಸೆ ನೀಡಿದರು. ಗಮನ ಸೆಳೆಯುವ ಸೂಚನೆ ಮೇಲೆ ಮಾತನಾಡಿದ ಶಾಸಕ ಜಗದೀಶ್ ಗುಡಗುಂಟಿ ಅವರು, ಜಮಖಂಡಿ, ಮುಧೋಳ ತಾಲೂಕಿನ 2035 ಎಕರೆ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಒದಗಿಸುವ ಮರೆಗುದ್ದಿ ಏತ ನೀರಾವರಿ ಯೋಜನೆಯ ಮೊದಲ ಹಂತ ಆರಂಭಿಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ಉತ್ತರಿಸಿದ ಶಿವಕುಮಾರ್ ಅವರು, “31 ಚೆಕ್ ಡ್ಯಾಂ, 4 ಕೆರೆಗಳನ್ನು ತುಂಬಿಸುವ ಮರೆಗುದ್ದಿ ಏತ ನೀರಾವರಿ ಯೋಜನೆಗೆ ₹214 ಕೋಟಿ ರೂಪಾಯಿ ಅನುಮೋದನೆ ನೀಡಿದ್ದೇವೆ. ವೆಂಕಟೇಶ್ವರ ಏತ ನೀರಾವರಿ ಯೋಜನೆ ಮೂಲಕ ಸುಮಾರು 1648 ಹೆಕ್ಟೇರ್ ಪ್ರದೇಶಕ್ಕೆ ನೀರುಣಿಸಲಾಗುತ್ತಿದೆ. 387 ಎಕರೆ ಅಚ್ಚುಕಟ್ಟು ಪ್ರದೇಶ ಮಾತ್ರ ಬಾಕಿ ಉಳಿದಿದೆ. ಇದಕ್ಕೆ ಅಗತ್ಯವಾದ ಅಚ್ಚುಕಟ್ಟು ಪ್ರದೇಶಗಳನ್ನು ಉಲ್ಲಾಳ, ಹುಣಸಿಕಟ್ಟಿ ಮತ್ತು ಬಿಎಂ ಗುದ್ದಿ ಗ್ರಾಮಗಳಲ್ಲಿ ಗುರುತಿಸಿ, ಹಂತ ಹಂತವಾಗಿ ಜಾರಿಗೊಳಿಸಲಾಗುವುದು” ಎಂದು…
ಶಿವಮೊಗ್ಗ: ಜಿಲ್ಲೆಯ ಸಾಗರ ಅರಣ್ಯ ವಲಯದಲ್ಲಿನ ತಾಳಗುಪ್ಪ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಸಂತೋಷ್ ಕುಮಾರ್.ಎನ್, ಉಳ್ಳೂರು ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಸುಂದರಮೂರ್ತಿ.ಎನ್.ಜಿ ಹಾಗೂ ಗಸ್ತು ಅರಣ್ಯ ಪಾಲಕ ಪ್ರವೀಣ್ ಕುಮಾರ್.ಈ ಅವರ ಅಮಾನತು ಆದೇಶವನ್ನು ತೆರವುಗೊಳಿಸಲಾಗಿದೆ. ಈ ಕುರಿತಂತೆ ಶಿವಮೊಗ್ಗದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಶಿಸ್ತು ಪ್ರಾಧಿಕಾರಿಗಳು ಆದೇಶ ಹೊರಡಿಸಿದ್ದು, ಸಾಗರ ವಲಯದ ತಾಳಗುಪ್ಪ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಸಂತೋಷ್ ಕುಮಾರ್.ಎನ್, ಉಳ್ಳೂರು ಶಾಖೆಯ ಸುಂದರಮೂರ್ತಿ ಎನ್.ಜಿ ಹಾಗೂ ಗಸ್ತು ಅರಣ್ಯ ಪಾಲಕ ಉಳ್ಳೂರು ಗಸ್ತು(ಪ್ರಭಾರ) ಇವರನ್ನು ಕರ್ತವ್ಯ ನಿರ್ಲಕ್ಷತನ ಹಾಗೂ ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಅಮಾನತ್ತು ಮಾಡಿ ಆದೇಶಿಸಲಾಗಿತ್ತು ಎಂದಿದ್ದಾರೆ. ಈ ಮೂವರು ಅರಣ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳ ಅಮಾನತು ಆದೇಶವನ್ನು ಹಿಂಪಡೆದು, ಕರ್ನಾಟಕ ನಾಗರೀಕ ಸೇವಾ ನಿಯಮಾವಳಿ (ವರ್ಗೀಕರಣ, ನಿಯಂತ್ರಣ, ಅಪೀಲು) 1957ರ ನಿಯಮ 10(5) (ಸಿ) ಅನ್ವಯ ಸೇವೆಗೆ ಪುನರ್ ನೇಮಕ ಮಾಡಿ ಆದೇಶಿಸಲಾಗಿದೆ ಎಂದಿದ್ದಾರೆ. ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ…
ಬೆಂಗಳೂರು: ಆಡಳಿತ ವೀಕೆಂದ್ರಿಕರಣ ದೃಷ್ಟಿಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಂಖ್ಯೆಯನ್ನು ಹೆಚ್ಚು ಮಾಡುವ ಉದ್ದೇಶದ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ವನ್ನು ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ಸಭಾತ್ಯಾಗದ ನಡುವೆ ಸೋಮವಾರ ಅಂಗೀಕರಿಸಲಾಯಿತು. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರು 20 ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024 ಅನ್ನು ಸದನದಲ್ಲಿ ಮಂಡಿಸಿ, ಅದರ ಉದ್ದೇಶವನ್ನು ವಿವರಿಸಿದರು. ನಂತರ ಪ್ರತಿಪಕ್ಷಗಳ ಸದಸ್ಯರು ತಮ್ಮ ಅಭಿಪ್ರಾಯ, ಆಕ್ಷೇಪ ಕಾರಣಗಳನ್ನು ತಿಳಿಸಿದರು. ಇದಕ್ಕೆ ಪ್ರತಿಕ್ರಿಯೆ ಕೊಟ್ಟ ಡಿ ಕೆ ಶಿವಕುಮಾರ್ ಅವರು, “ಚರ್ಚೆಯಲ್ಲಿ ಭಾಗವಹಿಸಿದ ಎಲ್ಲಾ ಶಾಸಕರನ್ನು ಅಭಿನಂದಿಸುತ್ತೇನೆ. ವಿರೋಧ ಪಕ್ಷಗಳ ನಾಯಕರು ತಮ್ಮದೇ ಆದ ಅಭಿಪ್ರಾಯ ತಿಳಿಸಿದ್ದಾರೆ. ಅವರು ಅಭಿಪ್ರಾಯವನ್ನು ನಾನು ವಿರೋಧಿಸುವುದಿಲ್ಲ. ಅವರಲ್ಲಿ ಕೆಲವರಿಗೆ ರಾಜಕೀಯ ಇಚ್ಚಾಶಕ್ತಿಯೂ ಇದೆ. ಅದರಲ್ಲಿ ತಪ್ಪಿಲ್ಲ. ಈಗಿರುವ ವ್ಯವಸ್ಥೆಯಲ್ಲಿಯೇ ಬೆಂಗಳೂರು ನಗರವನ್ನು ಮುನ್ನಡೆಸುವುದು ಅಸಾಧ್ಯ ಎಂದು ಅವರು ಆತ್ಮಸಾಕ್ಷಿ ಮೂಲಕ ಒಪ್ಪಿದ್ದಾರೆ. ತ್ಯಾಜ್ಯ ನಿರ್ವಹಣೆ, ಕುಡಿಯುವ ನೀರು ಆಡಳಿತಕ್ಕೆ ದೊಡ್ಡ ಸಮಸ್ಯೆ ಎಂಬ…
ಬೆಂಗಳೂರು: ಮಾರ್ಚ್, ಏಪ್ರಿಲ್ 2025ರಲ್ಲಿ ನಡೆಯುತ್ತಿರುವಂತ ಎಸ್ ಎಸ್ ಎಲ್ ಸಿ ಪರೀಕ್ಷೆ-1ಕ್ಕೆ ಹಾಜರಾಗುತ್ತಿರುವಂತ ವಿದ್ಯಾರ್ಥಿಗಳಿಗೆ ಅಂತಿಮ ಪ್ರವೇಶ ಪತ್ರವನ್ನು ವಿತರಣೆ ಮಾಡುತ್ತಿರುವುದಾಗಿ ಶಾಲಾ ಶಿಕ್ಷಣ ಇಲಾಖೆ ತಿಳಿಸಿದೆ. ಈ ಬಗ್ಗೆ ಸುತ್ತೋಲೆಯಲ್ಲಿ ಮಾಹಿತಿ ನೀಡಿದ್ದು, 2025ರ ಮಾರ್ಚ್/ಏಪ್ರಿಲ್ ಮಾಹೆಯಲ್ಲಿ ನಡೆಯುವ ಎಸ್ ಎಸ್ ಎಲ್ ಸಿ ಪರೀಕ್ಷೆ-1ಕ್ಕೆ ಹಾಜರಾಗುತ್ತಿರುವ ವಿದ್ಯಾರ್ಥಿಗಳ ಅಂತಿಮ ಪ್ರವೇಶ ಪತ್ರಗಳನ್ನು ದಿನಾಂಕ: 10.03.2025 ರಂದು ಮಂಡಳಿಯ ಜಾಲತಾಣದ ಶಾಲಾ ಲಾಗಿನ್‌ನಲ್ಲಿ ಅಪ್ ಲೋಡ್ ಮಾಡಲಾಗುವುದು. ಶಾಲಾ ಮುಖ್ಯೋಪಾಧ್ಯಾಯರು ವಿದ್ಯಾರ್ಥಿಗಳ ಪ್ರವೇಶ ಪತ್ರಗಳನ್ನು ಮಂಡಲಿಯ ಜಾಲತಾಣದ ಶಾಲಾ ಲಾಗಿನ್ ಮೂಲಕ ಡೌನ್‌ಲೋಡ್ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ವಿತರಿಸುವುದು. 1. ತಮ್ಮ ಶಾಲೆಯ ಮುಖಾಂತರ ನೋಂದಾಯಿಸಿದ ವಿದ್ಯಾರ್ಥಿಗಳ ಸಂಖ್ಯೆ, ಡೌನ್‌ಲೋಡ್ ಮಾಡಿಕೊಂಡ ಪ್ರವೇಶ ಪತ್ರಗಳ ಸಂಖ್ಯೆಗೆ ಸರಿ ಹೊಂದುತ್ತಿದೆಯೇ ಎಂದು ಪರಿಶೀಲಿಸಿಕೊಳ್ಳುವುದು. ಒಂದು ವೇಳೆ ಯಾವುದಾದರು ವಿದ್ಯಾರ್ಥಿಯ ಪ್ರವೇಶ ಪತ್ರ ಬಂದಿಲ್ಲದಿದ್ದರೆ, ಸದರಿ ವಿದ್ಯಾರ್ಥಿಯ ವಿವರವನ್ನು ಸಮರ್ಥನೆಯೊಂದಿಗೆ / ದಾಖಲೆಗಳೊಂದಿಗೆ ಕೂಡಲೇ ಮಂಡಲಿಗೆ ಕಳುಹಿಸಿಕೊಡುವುದು. 2. ಒಂದು ವೇಳೆ…
ಬೆಂಗಳೂರು: ಸಾರಿಗೆ ಇಲಾಖೆಯಲ್ಲಿನ ಯಾವುದೇ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ. ಭ್ರಷ್ಟಾಚಾರ ರಹಿತವಾಗಿ ಕೆಲಸ ನಿರ್ವಹಿಸುವಂತೆ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಆರ್ ಟಿ ಓ ಗಳಿಗೆ ಖಡರ್ ವಾರ್ನಿಂಗ್ ನೀಡಿದ್ದಾರೆ. ಇಂದು ಸಾರಿಗೆ ಸಚಿವರು ಕನ್ನಡ ಸುದ್ದಿ ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣದಲ್ಲಿ ದಿನಾಂಕ: 05-03-2025 ರಂದು ಬಿತ್ತರವಾಗಿದ್ದ ದೃಶ್ಯಾವಳಿಯಲ್ಲಿ ವಾಣಿಶ್ರೀ ಎಂ.ಎನ್ ಮೋಟಾರು ವಾಹನ ನಿರೀಕ್ಷಕರು ಸರ್ಕಾರಿ ವಾಹನದಲ್ಲಿ ಕುಳಿತು ಹಣ ಪಡೆದಿದ್ದಾರೆ ಎಂಬ ಸುದ್ದಿಗೆ ಸಂಬಂಧಪಟ್ಟಂತೆ ಸೂಕ್ತ ತನಿಖೆ ನಡೆಸುವಂತೆ ಆದೇಶಿಸಿದ್ದರು. ಆ ಸಂಬಂಧ ತನಿಖೆ ನಡೆಸಿದ್ದು, ಪ್ರಾದೇಶಿಕ ಸಾರಿಗೆ ಅಧಿಕಾರಿ, ಮಂಡ್ಯ ಇವರು ವಾಣಿಶ್ರೀ ಎಂ.ಎನ್. ಮೋಟಾರು ವಾಹನ ನಿರೀಕ್ಷಕರು ಇವರಿಗೆ ಕಾರಣ ಕೇಳಿ ನೋಟಿಸ್ ಅನ್ನು ಜಾರಿ ಮಾಡಿರುತ್ತಾರೆ. ಸದರಿ ನೌಕರರು ಕರ್ತವ್ಯ ಲೋಪ ಎಸಗಿರುವುದು ಮೇಲ್ನೋಟಕ್ಕೆ ಕಂಡುಬರುವುದರಿಂದ ಸಾರಿಗೆ ಆಯುಕ್ತರು ಮತ್ತು ಸಕ್ಷಮ ಪ್ರಾಧಿಕಾರಿಯು ವಾಣಿಶ್ರೀ ಎಂ.ಎನ್ ಮೋಟಾರು ವಾಹನ ನಿರೀಕ್ಷಕರು, ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ, ಮಂಡ್ಯ ಇವರ ವಿರುದ್ಧದ ಇಲಾಖಾ ವಿಚಾರಣೆಯನ್ನು…
ಲಕ್ಷ್ಮೀ ದೇವಿಯ ಅನುಗ್ರಹವನ್ನು ಸಂಪೂರ್ಣವಾಗಿ ಪಡೆದವರಿಗೆ ಮಾತ್ರ ಸಂಪತ್ತಿನ ಶುಭವು ದೊರೆಯುತ್ತದೆ ಎಂದು ನಮಗೆಲ್ಲರಿಗೂ ತಿಳಿದಿದೆ. ಸಂಪತ್ತಿನ ಶಕುನವಿದ್ದಾಗ ಮಾತ್ರ ಮನೆ ಎಲ್ಲಾ ರೀತಿಯ ಸಂಪತ್ತಿನಿಂದ ತುಂಬಿರುತ್ತದೆ. ಆ ಮೂಲಕ ನಾವು ಸಾರ್ಥಕ ಜೀವನವನ್ನು ಹೊಂದಬಹುದು. ಈ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ, ಅಂತಹ ಸಂಪತ್ತನ್ನು ಪಡೆಯಲು ಸರಳವಾದ ಪರಿಹಾರವನ್ನು ನಾವು ನೋಡಲಿದ್ದೇವೆ . ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,…