Subscribe to Updates
Get the latest creative news from FooBar about art, design and business.
Author: kannadanewsnow09
ತೆಲಂಗಾಣ: ತೆಲಂಗಾಣದಲ್ಲಿ ಕುಸಿದ ಸುರಂಗದಲ್ಲಿ ಸಿಲುಕಿರುವ ಎಂಟು ಜನರಿಗಾಗಿ ಶೋಧದ 16 ನೇ ದಿನವಾದ ಭಾನುವಾರ ರಕ್ಷಣಾ ಸಿಬ್ಬಂದಿಗಳು ಓರ್ವ ವ್ಯಕ್ತಿಯ ಶವವನ್ನು ಹೊರತೆಗೆದಿದ್ದಾರೆ. ಅದನ್ನು ಇನ್ನೂ ಗುರುತಿಸಲಾಗಿಲ್ಲ. ಫೆಬ್ರವರಿ 22 ರಂದು ನಾಗರ್ ಕರ್ನೂಲ್ನ ಶ್ರೀಶೈಲಂ ಎಡದಂಡೆ ಕಾಲುವೆ (ಎಸ್ಎಲ್ಬಿಸಿ) ಸುರಂಗ ಭಾಗಶಃ ಕುಸಿದಾಗಿನಿಂದ ಎಂಟು ಜನರು ಸಿಕ್ಕಿಬಿದ್ದಿದ್ದರು. ಭಾನುವಾರ, ಸುರಂಗವನ್ನು ಅಗೆಯಲು ಬಳಸಲಾಗುತ್ತಿದ್ದ ಮುರಿದ ಸುರಂಗ ಬೋರಿಂಗ್ ಯಂತ್ರದ ಬಳಿ ಓರ್ವ ವ್ಯಕ್ತಿಯ ಶವ ಪತ್ತೆಯಾಗಿದೆ. ಸುರಂಗದ ಮೇಲ್ಛಾವಣಿ ಕುಸಿದಾಗ ಇಬ್ಬರು ಯಂತ್ರವನ್ನು ನಿರ್ವಹಿಸುತ್ತಿದ್ದರು ಮತ್ತು ಆರು ಜನರು ಅವರಿಗೆ ಸಹಾಯ ಮಾಡುತ್ತಿದ್ದರು. ಸ್ಥಳದಲ್ಲಿದ್ದ ರಕ್ಷಕರ ಪ್ರಕಾರ, ದೇಹವು “ಗುರುತಿಸಬಹುದಾದ ಸ್ಥಿತಿಯಲ್ಲಿದೆ. https://twitter.com/sudhirjourno/status/1898736559085519259 “ಕಾಣೆಯಾದ ಜನರ ವೈಯಕ್ತಿಕ ಪರಿಣಾಮಗಳ ಆಧಾರದ ಮೇಲೆ, ಆ ವ್ಯಕ್ತಿ ಯಾರೆಂದು ಕಂಡುಹಿಡಿಯಲು ನಾವು ಪ್ರಯತ್ನಿಸುತ್ತಿದ್ದೇವೆ” ಎಂದು ಉನ್ನತ ರಕ್ಷಣಾ ಅಧಿಕಾರಿಯೊಬ್ಬರು ಇಂಡಿಯನ್ ಎಕ್ಸ್ಪ್ರೆಸ್ಗೆ ತಿಳಿಸಿದ್ದಾರೆ. ಸುರಂಗ ಕುಸಿದ ದಿನದಿಂದ, ರಕ್ಷಣಾ ಸಿಬ್ಬಂದಿಯ 11 ತಂಡಗಳು ಸಿಕ್ಕಿಬಿದ್ದ ಪುರುಷರನ್ನು ಹುಡುಕಲು ಪ್ರಯತ್ನಿಸುತ್ತಿವೆ. ರಾಷ್ಟ್ರೀಯ ವಿಪತ್ತು…
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣದರ ಖಂಡಿಸಿ ಪ್ರಯಾಣಿಕರು ಪ್ರಯಾಣಿಸುತ್ತಲೇ ಮೆಟ್ರೋ ಒಳಗಡೆ ಪ್ರತಿಭಟನೆ ನಡೆಸಿದಂತ ಘಟನೆ ಇಂದು ನಡೆದಿದೆ. ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣದ ದರ ಏರಿಕೆ ಖಂಡಿಸಿ, ಇಂದು ಮೆಟ್ರೋ ಪ್ರಯಾಣಿಕರು, ಬೆಂಗಳೂರು ನಾಗರೀಕರ ವೇದಿಕೆಯಿಂದ ಮೆಟ್ರೋ ಒಳಗಡೆಯೇ ಪ್ರತಿಭಟನೆ ನಡೆಸಲಾಗಿದೆ. ಬೆಂಗಳೂರಿನ ಜ್ಞಾನ ಭಾರತಿ ಮೆಟ್ರೋ ನಿಲ್ದಾಣದಿಂದ ಎಂ.ಜಿ ರಸ್ತೆಯವರೆಗೆ ನಮ್ಮ ಮೆಟ್ರೋ ಪ್ರಯಾಣಿಕರು, ಬೆಂಗಳೂರು ನಾಗರೀಕರ ಸಂಘವು ಮೆಟ್ರೋ ದರ ಹೆಚ್ಚಳ ವಿರೋಧಿಸಿ ಭಿತ್ತಿ ಪತ್ರವನ್ನು ಪ್ರದರ್ಶಿಸುವ ಮೂಲಕ ಪ್ರತಿಭಟನೆ ನಡೆಸಿತು. ನಮ್ಮ ಮೆಟ್ರೋ ಪ್ರಯಾಣದ ದರವನ್ನು ಈ ಮೊದಲು ಎಷ್ಟು ಇತ್ತೋ ಅಷ್ಟೇ ದರವನ್ನು ಪರಿಷ್ಕರಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು. ಮುಂದಿನ ದಿನಗಳಲ್ಲಿ ಪ್ರಯಾಣ ದರ ಇಳಿಕೆ ಮಾಡದೇ ಇದ್ದರೇ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ. https://kannadanewsnow.com/kannada/women-who-give-birth-to-their-third-child-get-rs-50000-for-giving-birth-to-a-girl-a-cow-for-a-boy/ https://kannadanewsnow.com/kannada/big-news-temperatures-rise-across-the-country-harmful-to-the-heart-lungs-and-brain/ https://kannadanewsnow.com/kannada/isro-to-get-two-new-launchpads-in-two-states-chandrayaan-4-getting-ready/
ಕನಕಪುರ : “ಕಾಯಕದಲ್ಲಿಯೇ ದೇವರನ್ನು ಕಾಣಬೇಕು. ನಮಗೆ ಅಭಿವೃದ್ಧಿಯೇ ತಾಯಿ ತಂದೆ, ಗ್ಯಾರಂಟಿಗಳೇ ಬಂಧು ಬಳಗ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕನಕಪುರ ತಾಲ್ಲೂಕಿನ ಭೂಹಳ್ಳಿ ಹೊಸಕೆರೆ ಬಳಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, “ನನ್ನ ಕ್ಷೇತ್ರಕ್ಕೆ ಸುಮಾರು ರೂ.400 ಕೋಟಿಗಳಷ್ಟು ಅನುದಾನ ತಂದಿದ್ದೇನೆ. ಒಂದೇ ಸಲ ಅನುದಾನ ತಂದರೆ ಬೇರೆ ಕ್ಷೇತ್ರದವರು ಪ್ರಶ್ನೆ ಮಾಡುತ್ತಾರೆ. ಹಂತ, ಹಂತವಾಗಿ ಅನುದಾನ ತಂದು ಅಭಿವೃದ್ಧಿ ಕೆಲಸದ ಮೂಲಕ ಜನರ ಋಣ ತೀರಿಸಲಾಗುವುದು. ರೂ.250 ಕೋಟಿ ಮೊತ್ತದ ಕಾಮಗಾರಿಗಳು ನೀರಾವರಿ ಇಲಾಖೆಯಿಂದಲೇ ನಡೆಯುತ್ತಿದೆ” ಎಂದರು. “ಪಾದ್ದರೆಯಿಂದ ಭೂಹಳ್ಳಿ ಅರಣ್ಯ ತಪಾಸಣಾ ಕೇಂದ್ರದ ವರೆಗೆ ಸುಮಾರು ರೂ.13 ಕೋಟಿ ವೆಚ್ಚದಲ್ಲಿ ರಸ್ತೆ, ದೊಡ್ಡಆಲಹಳ್ಳಿಯಿಂದ ಕಬ್ಬಾಳಿನ ತನಕ 40 ಕೋಟಿ ವೆಚ್ಚದಲ್ಲಿ ರೂ.14.5 ಕಿಮೀ ಉದ್ದದ ರಸ್ತೆ ಅಗಲೀಕರಣ ಮಾಡಲಾಗುತ್ತಿದೆ. ಇದರಿಂದ ನಮ್ಮ ಜನರ ಆಸ್ತಿ ಮೌಲ್ಯ ಹೆಚ್ಚಾಗಲಿದೆ” ಎಂದು ಹೇಳಿದರು. “ಕನಕಪುರ, ಸಾತನೂರು, ದೊಡ್ಡ ಆಲಹಳ್ಳಿ ರಸ್ತೆಗಳನ್ನು ಅಗಲೀಕರಣ ಮಾಡಲು ಸಾಧ್ಯವಿಲ್ಲ…
ಬೆಂಗಳೂರು: ನಗರದ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಸಂಜೆ ಕಾಲೇಜು ದ್ವಿತೀಯ ದರ್ಜೆ ಸಹಾಯಕನ ವಿರುದ್ಧ ಕಾಲೇಜಿನ ಶುಲ್ಕ ದುರುಪಯೋಗ ಆರೋಪ ಕೇಳಿ ಬಂದಿದೆ. ಈ ಹಿನ್ನಲೆಯಲ್ಲಿ ಎಸ್ ಡಿ ಎ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಕರ್ನಾಟಕ ಚಿತ್ರಕಲಾ ಪರಿಷತ್ ಸಂಜೆ ಕಾಲೇಜಿನ ಶುಲ್ಕದಲ್ಲಿ 20 ಲಕ್ಷ ದುರುಪಯೋಗ ಮಾಡಿದಂತ ಆರೋಪ ಎಸ್ ಡಿ ಎ ರಾಘವೇಂದ್ರ ಶೆಟ್ಟಿ ವಿರುದ್ಧ ಕೇಳಿ ಬಂದಿದೆ. ಈ ಸಂಬಂಧ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಹೈಗ್ರೌಂಡ್ ಠಾಣೆಯ ಪೊಲೀಸರಿದೆ ದೂರು ನೀಡಲಾಗಿದೆ. ಕಾಲೇಜಿನ ಆಡಳಿತ ಮಂಡಳಿ ನೀಡಿದಂತ ದೂರಿನ ಹಿನ್ನಲೆಯಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಸಂಜೆ ಕಾಲೇಜಿನ ಎಸ್ ಡಿ ಎ ರಾಘವೇಂದ್ರ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಹಾವೇರಿ: ಬೆಳಗಾವಿಯಲ್ಲಿ ನಡೆದಿದ್ದಂತ ಗಾಂಧಿ ಭಾರತ ಸಮಾವೇಶದಲ್ಲಿ ಭಾಗಿಯಾಗಿದ್ದಂತ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಸಾವನ್ನಪ್ಪಿದ್ದನು. ಇಂತಹ ಕೈ ಕಾರ್ಯಕರ್ತನಿಗೆ ಕೆಪಿಸಿಸಿ ವತಿಯಿದಂ 5 ಲಕ್ಷ ಪರಿಹಾರ ವಿತರಣೆ ಮಾಡಲಾಗಿದೆ. ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲ್ಲೂಕಿನ ನದಿಹರಳಹಳ್ಳಿ ಗ್ರಾಮ ಬಸಪ್ಪ ಕೆಂಚಪ್ಪ ಪಾಮೇನಹಳ್ಳಿ ಎಂಬುವರು ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಆಯೋಜಿಸಿದ್ದಂತ ಗಾಂಧಿ ಭಾರತ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಈ ಸಮಾವೇಶದ ಸಂದರ್ಭದಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಶಾಸಕ ಪ್ರಕಾಶ್ ಕೋಳಿವಾಡಗೆ ಮೃತ ಕುಟುಂಬಸ್ಥರು ಪರಿಹಾರಕ್ಕಾಗಿ ಮನವಿ ಮಾಡಿದ್ದರು. ಅವರ ಮನವಿಗೆ ಸ್ಪಂದಿಸಿರುವಂತ ಶಾಸಕ ಪ್ರಕಾಶ್ ಕೋಳಿವಾಡ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಗಮನಕ್ಕೆ ತಂದಿದ್ದರು. ಇಂದು ಕೆಪಿಸಿಸಿಯಿಂದ 5 ಲಕ್ಷ ಪರಿಹಾರದ ಚೆಕ್ ಅನ್ನು ಕುಟುಂಬಸ್ಥರಿಗೆ ವಿತರಿಸಲಾಯಿತು. https://kannadanewsnow.com/kannada/notorious-thief-arrested-for-stealing-autos-bikes/ https://kannadanewsnow.com/kannada/big-news-temperatures-rise-across-the-country-harmful-to-the-heart-lungs-and-brain/
ಮಳವಳ್ಳಿ : ಶಿಕ್ಷಣ ಸಂಸ್ಥೆಯ ಒಳಗೆ ರಾಜಕೀಯದವರನ್ನು ಸೇರಿಸಬೇಡಿ. ಆಗ ಮಾತ್ರ ಆ ಶಿಕ್ಷಣ ಸಂಸ್ಥೆಗಳು ಉನ್ನತ ಮಟ್ಟಕ್ಕೆ ಬೆಳೆಯುತ್ತವೆ. ಇಲ್ಲದಿದ್ದರೇ ಶಿಕ್ಷಣದ ಗುಣಮಟ್ಟ ಹಾಳಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕಿವಿಮಾತು ಹೇಳಿದರು. ಮಳವಳ್ಳಿಯಲ್ಲಿ ಬಿಎಂ ಎಜುಕೇಶನ್ ಟ್ರಸ್ಟ್ ವತಿಯಿಂದ ನಿರ್ಮಾಣವಾಗಿರುವ ಬಿಎಂ ಪಬ್ಲಿಕ್ ಶಾಲಾ ಕಟ್ಟಡ, ಆಡಳಿತ ಕಟ್ಟಡ ಹಾಗೂ ಸಾಯಿಬಾಬಾ ಮಂದಿರವನ್ನು ಭಾನುವಾರದಂದು ಲೋಕಾರ್ಪಣೆ ಮಾಡಿ ಡಿಸಿಎಂ ಮಾತನಾಡಿದರು. “ದಳ, ಬಿಜೆಪಿ,ಕಾಂಗ್ರೆಸ್, ರೈತ ಸಂಘ – ಹೀಗೆ ಯಾವುದೇ ಪಕ್ಷದ ರಾಜಕಾರಣಿಗಳನ್ನು ನಿಮ್ಮ ಶಿಕ್ಷಣ ಸಂಸ್ಥೆಯ ಒಳಗೆ ಸೇರಿಸಬೇಡಿ. ಶಾಲಾ ಶುಲ್ಕ ಕಡಿಮೆ ಮಾಡಿ ಎನ್ನುವ ಶಿಫಾರಸ್ಸು ತರುವುದರಿಂದ ಶಾಲೆಗಳನ್ನು ನಡೆಸಲು ಆಗುವುದಿಲ್ಲ. ಪೋಷಕರು ಸಹಕರಿಸಿದರೆ ಮಾತ್ರ ಸಂಸ್ಥೆ ಬೆಳೆಯುತ್ತದೆ. ಇಲ್ಲದಿದ್ದರೆ ಶಿಕ್ಷಣದ ಗುಣಮಟ್ಟ ಹಾಳಾಗುತ್ತದೆ” ಎಂದರು. “ಮಕ್ಕಳು ಗ್ಲೋಬಲ್ ಮಟ್ಟಕ್ಕೆ ಸ್ಪರ್ಧಿಸಬೇಕು. ನೀವು ಎಲ್ಲಿ ಓದಿದ್ದೀರಿ ಎಂದು ಯಾರೂ ಕೇಳುವುದಿಲ್ಲ. ಆದರೆ ನಿಮ್ಮ ಅಂಕ ಮತ್ತು ಕೌಶಲಗಳನ್ನು ಕೇಳುತ್ತಾರೆ. ಅದಕ್ಕೆ ಶಿಕ್ಷಣವು ಮಕ್ಕಳಲ್ಲಿ ಭವಿಷ್ಯದ ಬಗ್ಗೆ…
ಬೆಂಗಳೂರು: ಆಟೋ ಹಾಗೂ ಬೈಕ್ ಗಳನ್ನೇ ಕದಿಯುವಂತ ವೃತ್ತಿಯಲ್ಲಿ ತೊಡಗಿದ್ದಂತ, ವೃತ್ತಿಯನ್ನಾಗಿಸಿಕೊಂಡಿದ್ದಂತ ಕುಖ್ಯಾತ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟ ಠಾಣೆಯ ಪೊಲೀಸರು ತಮ್ಮ ಠಾಣೆ ವ್ಯಾಪ್ತಿ ಹಾಗೂ ಅತ್ತಿಬೆಲೆ, ಆನೇಕಲ್ ನಲ್ಲಿ ಆಟೋ, ಬೈಕ್ ಕದ್ದಿದ್ದಂತ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದರು. ಈ ಸಂಬಂಧ ತನಿಖೆಗೆ ಇಳಿದು ಆಟೋ, ಬೈಕ್ ಕದಿಯೋದನ್ನೇ ವೃತ್ತಿಯನ್ನಾಗಿಸಿಕೊಂಡಿದ್ದಂತ ಕುಖ್ಯಾತ ಕಳ್ಳ ಅರ್ಬಾಜ್ ನನ್ನು ಬಂಧಿಸಿದ್ದಾರೆ. ಶಾನುಭೋಗರಹಳ್ಳಿಯ ನಿವಾಸಿಯಾಗಿದ್ದ ಕುಖ್ಯಾತ ಕಳ್ಳ ಅರ್ಬಾಜ್ ನನ್ನು ಬಂಧಿಸಿದ್ದಾರೆ. ಈ ಹಿಂದೆಯೂ ಹಲವು ಬಾರಿ ಕಳ್ಳತನ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದಿದ್ದನು. ಆ ಬಳಿಕವೂ ಬದಲಾಗದೇ ಮತ್ತೆ ಆಟೋ, ಬೈಕ್ ಕದಿಯೋದನ್ನೇ ತನ್ನ ಕೆಲಸವಾಗಿಸಿಕೊಂಡಿದ್ದನು. ಕೆಲ ದಿನಗಳ ಹಿಂದೆ ನಡೆದಿದ್ದಂತ ಕಳ್ಳತನ ಪ್ರಕರಣದ ತನಿಖೆ ನಡೆಸಿದ ವೇಳೆಯಲ್ಲಿ ಅರ್ಬಾಜ್ ಕೈಚಳಕ ಪತ್ತೆಯಾಗಿತ್ತು. ಇದೀಗ ಖಚಿತ ಮಾಹಿತಿ ಮೇರೆಗೆ ಬನ್ನೇರುಘಟ್ಟ ಠಾಣೆ ಪೊಲೀಸರು ದಾಳಿ ಮಾಡಿ, ಕುಖ್ಯಾತ ಕಳ್ಳ ಅರ್ಬಾಜ್ ನನ್ನು ಬಂಧಿಸಿದ್ದಾರೆ. https://kannadanewsnow.com/kannada/man-attempts-suicide-by-consuming-poison-after-girlfriends-abandonment-dies/ https://kannadanewsnow.com/kannada/big-news-temperatures-rise-across-the-country-harmful-to-the-heart-lungs-and-brain/
ಶಿವಮೊಗ್ಗ: ಪ್ರಿಯತಮೆ ಕೈಕೊಟ್ಟಿದ್ದ ಕಾರಣಕ್ಕೆ ವಿಷ ಸೇವಿಸಿ ಪ್ರಿಯಕರನೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದನು. ಕಳೆದ ನಾಲ್ಕು ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಂತ ಪ್ರಿಯಕರ ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಶಿವಮೊಗ್ಗ ತಾಲ್ಲೂಕಿನ ಕಲ್ಲಾಪುರ ಗ್ರಾಮದ ಸಂಜಯ್(21) ಎಂಬಾತ ಹುಡುಗಿ ಕೈಕೊಟ್ಟಿದ್ದಕ್ಕೆ ನಾಲ್ಕು ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದನು. ಸಾವು ಬದುಕಿನ ನಡುವೆ ಹೋರಾಟುತ್ತಿದ್ದಂತ ಸಂಜಯ್ ನನ್ನು ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಇಂದು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಸಂಜಯ್(21) ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಹೀಗಾಗಿ ಮೆಗ್ಗಾನ್ ಆಸ್ಪತ್ರೆಯ ಬಳಿಯಲ್ಲಿ ಸಂಜಯ್ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/four-labourers-die-of-suffocation-while-cleaning-water-tank-in-mumbai/ https://kannadanewsnow.com/kannada/big-news-temperatures-rise-across-the-country-harmful-to-the-heart-lungs-and-brain/
ಮುಂಬೈ: ಮುಂಬೈನ ನಾಗಪಾಡಾದಲ್ಲಿ ನಿರ್ಮಾಣ ಹಂತದಲ್ಲಿದ್ದ ಸ್ಥಳದಲ್ಲಿದ್ದಂತ ನೆಲದಡಿಯ ನೀರಿನ ಟ್ಯಾಂಕ್ ಗೆ ಪ್ರವೇಶಿಸಿದ ಕನಿಷ್ಠ ನಾಲ್ವರು ಕಾರ್ಮಿಕರು ಭಾನುವಾರ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಭಾನುವಾರ ಬೆಳಿಗ್ಗೆ 11:30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಐವರು ಗುತ್ತಿಗೆ ಕಾರ್ಮಿಕರು ಬಿಸ್ಮಿಲ್ಲಾ ಸ್ಪೇಸ್ ಎಂಬ ನಿರ್ಮಾಣ ಹಂತದ ಕಟ್ಟಡದ ಟ್ಯಾಂಕ್ ಅನ್ನು ಸ್ವಚ್ಛಗೊಳಿಸಲು ಪ್ರವೇಶಿಸಿ ಪ್ರಜ್ಞೆ ಕಳೆದುಕೊಂಡರು. ಘಟನೆಯ ನಂತರ, ಸ್ಥಳದಲ್ಲಿದ್ದ ಇತರರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು. ಸಿಕ್ಕಿಬಿದ್ದ ಕಾರ್ಮಿಕರನ್ನು ರಕ್ಷಿಸಿದ ನಂತರ, ಅವರನ್ನು ಹತ್ತಿರದ ಜೆಜೆ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ಅವರಲ್ಲಿ ನಾಲ್ವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ಇತರರೊಂದಿಗೆ ಸಿಕ್ಕಿಬಿದ್ದ ಇನ್ನೊಬ್ಬ ಕಾರ್ಮಿಕನ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. https://kannadanewsnow.com/kannada/pune-bmw-driver-apologises-for-urinating-in-public/ https://kannadanewsnow.com/kannada/big-news-temperatures-rise-across-the-country-harmful-to-the-heart-lungs-and-brain/
ಪುಣೆ: ಬಿಎಂಡಬ್ಲ್ಯು ಕಾರು ಚಾಲಕ ಗೌರವ್ ಅಹುಜಾ ಸಾರ್ವಜನಿಕವಾಗಿ ಮೂತ್ರ ವಿಸರ್ಜನೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ಈ ಕೃತ್ಯಕ್ಕೆ ಕ್ಷಮೆಯಾಚಿಸಿದ್ದಾರೆ. ಕೋಪಗೊಂಡ ಸಾರ್ವಜನಿಕರು ತಮ್ಮ ಕುಟುಂಬಕ್ಕೆ ತೊಂದರೆ ನೀಡದಂತೆ ಅವರು ವಿನಂತಿಸಿದರು. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ, ಅಹುಜಾ ತಾನು ಮಾಡಿದ್ದು ತಪ್ಪು ಎಂದು ಒಪ್ಪಿಕೊಂಡಿದ್ದಾರೆ. ಘಟನೆ ನಡೆದ ಮಹಾರಾಷ್ಟ್ರದ ಪುಣೆಯಲ್ಲಿ ಪೊಲೀಸರ ಮುಂದೆ ಶರಣಾಗುವುದಾಗಿ ಅವರು ಭರವಸೆ ನೀಡಿದರು. “ನಾನು ಗೌರವ್ ಅಹುಜಾ, ನಾನು ಸಾರ್ವಜನಿಕವಾಗಿ ಮಾಡಿದ್ದು ತುಂಬಾ ತಪ್ಪು. ನಾನು ಸಾರ್ವಜನಿಕರಿಗೆ, ಪೊಲೀಸ್ ಇಲಾಖೆಗೆ ಮತ್ತು ಶಿಂಧೆ ಸಾಹೇಬರಿಗೆ ಕ್ಷಮೆಯಾಚಿಸುತ್ತೇನೆ. ನನಗೆ ಒಂದು ಅವಕಾಶ ನೀಡಿ, ಕ್ಷಮಿಸಿ. ನನ್ನ ಕುಟುಂಬದ ಯಾವುದೇ ಸದಸ್ಯರಿಗೆ ತೊಂದರೆ ನೀಡಬೇಡಿ. ಮುಂದಿನ ಎಂಟು ಗಂಟೆಗಳಲ್ಲಿ ನಾನು ಯೆರವಾಡಾ ಪೊಲೀಸ್ ಠಾಣೆಯಲ್ಲಿ ಶರಣಾಗುತ್ತೇನೆ” ಎಂದು ಅವರು ಕೈಮುಗಿದು ವೀಡಿಯೊದಲ್ಲಿ ಹೇಳಿದ್ದಾರೆ. https://twitter.com/VijayKumbhar62/status/1898554935866016062 ವೀಡಿಯೊದಲ್ಲಿ ಉಲ್ಲೇಖಿಸಲಾದ ‘ಶಿಂಧೆ ಸಾಹೇಬ್’ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಉಲ್ಲೇಖಿಸಬಹುದು. ನಂತರ ಅಹುಜಾ ಪುಣೆ ಪೊಲೀಸರ…