Author: kannadanewsnow09

ಬೆಂಗಳೂರು: ಹಲವರಿಗೆ ಚಿನ್ನ ವಂಚನೆ ಪ್ರಕರಣದ ಐಶ್ವರ್ಯ ಗೌಡ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಈ ಕೇಸಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಕಾರು ಚಾಲಕನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಐಶ್ವರ್ಯ ಗೌಡ ಚಿನ್ನ ವಂಚನೆ ಕೇಸ್ ಸಂಬಂಧ ಎಸಿಪಿ ಭರತ್ ರೆಡ್ಡಿ ಅವರ ಕಾರು ಚಾಲಕ ವೀರೇಶ್ ದಳವಾಯಿಯನ್ನು ವಿಚಾರಣೆ ನಡೆಸುತ್ತಿದ್ದಾರೆ. ಐಶ್ವರ್ಯ ಗೌಡಗೆ ಸೇರಿದ್ದಂತ ಕಾರು ವಿನಯ್ ಕುಲಕರ್ಣಿ ಮನೆಯಲ್ಲಿ ಪತ್ತೆಯಾಗಿದ್ದರಿಂದ ಕಾರು ಚಾಲಕ ವೀರೇಶ್ ದಳವಾಯಿಯನ್ನು ವಿಚಾರಣೆ ನಡೆಸುತ್ತಿದ್ದಾರೆ. ಅಂದಹಾಗೇ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಐಶ್ವರ್ಯ ಗೌಡ ಅವರ ಪರಿಚಯವಿತ್ತು. ಮಹಾರಾಷ್ಟ್ರಕ್ಕೆ ಹೋಗುವಾಗ ವಿನಯ್ ಕುಲಕರ್ಣಿ ಮನೆಗೆ ಐಶ್ವರ್ಯ ಗೌಡ ಬಂದಿದ್ದರು. ವಾಪಾಸ್ ಹೋಗುವಾಗ ಕಾರು ಬಿಟ್ಟು ವಿಮಾನದಲ್ಲಿ ಹೋಗಿದ್ದರು. ಅವರ ಬೆನ್ಜ್ ಕಾರು ವಿನಯ್ ಕುಲಕರ್ಣಿ ಮನೆ ಬಳಿಯೇ ಇತ್ತು ಎಂಬುದಾಗಿ ತಿಳಿದು ಬಂದಿದೆ. https://kannadanewsnow.com/kannada/bjp-to-protest-against-inadequate-power-supply-in-sagar-stage-protest-in-front-of-mescom-office-tomorrow/ https://kannadanewsnow.com/kannada/big-news-temperatures-rise-across-the-country-harmful-to-the-heart-lungs-and-brain/

Read More

ಕೊಪ್ಪಳ: ಮಕ್ಕಳ ಕ್ರಿಯಾಶೀಲತೆ, ಸೃಜನಶೀಲತೆ ಇರುವುದು ಮಣ್ಣಿನಲ್ಲೇ ಹೊರತು ಮೊಬೈಲ್ ನಲ್ಲಿ ಅಲ್ಲ. ಬಾಲ ಭವನ ನಿಮ್ಮೊಳಗಿನ ಪ್ರತಿಭೆ ಹೊರಗೆ ತರುವ ವೇದಿಕೆಯಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಗೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು. ಬಾಲಭವನ‌ ಮಕ್ಕಳಿಗಾಗಿ ಹಮ್ಮಿಕೊಂಡಿದ್ದ ಹಾಗೂ ಶಾಸಕರಾದ ರಾಘವೇಂದ್ರ ಹಿಟ್ನಾಳ್ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳನ್ನು ಉದ್ಘಾಟಿಸಿ ಮಾತನಾಡಿದರು. ಮಗುವಿಗೆ ಊಟ ಮಾಡಿಸುವಾಗಲೂ ತಾಯಂದಿರು ಮೊಬೈಲ್ ನಲ್ಲಿ ತೋರಿಸುವುದರಿಂದ ಬೆಳೆಯುತ್ತಾ ಬೆಳೆಯುತ್ತಾ ಮಕ್ಕಳು ಮೊಬೈಲ್ ಗೇ ಅಂಟಿಕೊಳ್ಳುತ್ತಾರೆ. ಇದು ಆರೋಗ್ಯಕರ ಬೆಳವಣಿಗೆಯಲ್ಲ ಎಂದರು. ಮಕ್ಕಳು ಸ್ವತಂತ್ರವಾಗಿ ಆಲೋಚಿಸುವುದನ್ನು ಕಲಿತಾಗ ಅವರಲ್ಲಿ ಸೃಜನಶೀಲತೆ ಅರಳುತ್ತದೆ. ಸ್ವಂತಕ್ಕೆ ಆಟದ ಸಾಮಾನುಗಳನ್ನು ಸೃಷ್ಟಿಸಿಕೊಳ್ಳುವುದು ಮಕ್ಕಳ ಮೊದಲ ಸೃಜನಶೀಲ ಕ್ರಿಯೆ. ಮನೆಯಿಂದ ಹೊರಗೆ ಮಕ್ಕಳು ಆಟಕ್ಕೆ ಇಳಿದಾಗ ಕೈಗೆ ಸಿಕ್ಕ ಸಾಮಾಗ್ರಿಗಳೇ ಅವರ ಆಟದ ವಸ್ತುಗಳಾಗುತ್ತವೆ. ಕೇವಲ ನಾಲ್ಕು ಗೋಡೆ ಮಧ್ಯೆ ಕುಳ್ಳಿರಿಸಿ ಪ್ಲಾಸ್ಟಿಕ್ ಆಟದ ವಸ್ತುಗಳು, ಮೊಬೈಲ್ ಗಳ ಗೀಳು ಹಚ್ಚಿಕೊಳ್ಳುವುದರಿಂದ ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಕುಂಟಿತಗೊಳ್ಳುತ್ತದೆ. ನಾವೆಲ್ಲಾ…

Read More

ಹಾಸನ: ಜಿಲ್ಲೆಯ ಬೇಲೂರಿನಲ್ಲಿ ಕಟ್ಟಡವೊಂದು ಕುಸಿತಗೊಂಡ ಪರಿಣಾಮ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಬೇಲೂರಿನಲ್ಲಿ ಪಾಳುಬಿದ್ದಂತ ಕಟ್ಟಡದ ಕೆಳಗೆ ಮಹಿಳೆಯರು ವ್ಯಾಪರ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಕಟ್ಟಡ ಏಕಾಏಕಿ ಕುಸಿದು ಬಿದ್ದಿದೆ. ಈ ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಗಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಮೃತರನ್ನು ಬೀದಿ ಬದಿಯ ವ್ಯಾಪಾರಿ ಆಶಾ, ದೀಪಾ ಎಂದು ಗುರುತಿಸಲಾಗಿದೆ. ಇನ್ನಿಬ್ಬರ ಗುರುತು ಪತ್ತೆಯಾಗಬೇಕಿದೆ. ಇನ್ನೂ ಕಟ್ಟಡದ ಅವಶೇಷಗಳ ಅಡಿಯಲ್ಲಿ ಹಲವರು ಸಿಲುಕಿರುವಂತ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಆಗಮಿಸಿರುವಂತ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. https://kannadanewsnow.com/kannada/isro-to-get-two-new-launchpads-in-two-states-chandrayaan-4-getting-ready/ https://kannadanewsnow.com/kannada/big-news-temperatures-rise-across-the-country-harmful-to-the-heart-lungs-and-brain/

Read More

ಕೆಎನ್ಎನ್ ಡಿಜಿಟಲ್ ಡೆಸ್ಕ್: ಶ್ರೀ ಮಂಜುನಾಥನಿಗೆ ಅರ್ಪಿತವಾದ ಪುಣ್ಯಕ್ಷೇತ್ರ ಧರ್ಮಸ್ಥಳ ಹಿಂದೂ ದೇವಾಲಯನಾ? ಅಥವಾ ಜೈನ ದೇವಾಲಯನಾ? ಎನ್ನುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಪೋಟೋ ಒಂದು ಹರಿದಾಡುತ್ತಿದೆ. ಅದರಲ್ಲಿ ಏನಿದೆ ಎನ್ನುಬ ಬಗ್ಗೆ ಮುಂದೆ ಓದಿ. ದಕ್ಷಿಣ ಕನ್ನಡ ಜಿಲ್ಲೆಯ ಪ್ರಧಾನ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಧರ್ಮಸ್ಥಳ. ಸುಮಾರು ಏಳರಿಂದ ಎಂಟು ನೂರು ವರುಷಗಳ ಇತಿಹಾಸ ಹೊಂದಿರುವ ಪವಿತ್ರ ಕ್ಷೇತ್ರ. ಜೈನ ಬಂಟ ಸಮುದಾಯ ಆರಂಭಿಸಿರುವ ಈ ದೇವಾಲಯ. Dharmasthala Governing Religion: ದಕ್ಷಿಣ ಕನ್ನಡ ಜಿಲ್ಲೆಯ ಪ್ರಧಾನ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯನ್ನು ಆರಾಧನೆ ಮಾಡಲಾಗುತ್ತದೆ. ಪ್ರತಿನಿತ್ಯ ಸಾವಿರಾರು ಮಂದಿ, ಇನ್ನೂ ಕೆಲವೊಮ್ಮೆ ಲಕ್ಷಾಂತರ ಜನ ಸಮೂಹವೇ ಸೇರುವ ಈ ಪುಣ್ಯಕ್ಷೇತ್ರ ಒಂದಲ್ಲ, ಎರಡಲ್ಲ ಅದೆಷ್ಟೋ ದಾನ ಧರ್ಮಗಳನ್ನು ಮಾಡುತ್ತಾ ಸಮಾಜಕ್ಕೆ ಕೊಡುಗೆ ನೀಡುತ್ತಿದೆ. ಸುಮಾರು ಏಳರಿಂದ ಎಂಟು ನೂರು ವರುಷಗಳ ಇತಿಹಾಸ ಹೊಂದಿರುವ ಈ ಪವಿತ್ರ ಕ್ಷೇತ್ರ ನೇತ್ರಾವತಿ ನದಿಯ ದಡದಲ್ಲಿದೆ. ಇಲ್ಲಿಯ…

Read More

ಬೆಂಗಳೂರು: ವಿಶ್ವ ಮಹಿಳಾ ದಿನ ಅಂಗವಾಗಿ ಬನಶಂಕರಿಯ ಫಿಡಲಿಟಸ್​ ಸಂಸ್ಥೆಯಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉದ್ಯೋಗಿಗಳು ಕೇಕ್​ ಕತ್ತರಿಸುವ ಮೂಲಕ ಮಹಿಳಾ ದಿನ ಆಚರಿಸಿದರು. ಬಣ್ಣದ ಬಣ್ಣದ ಉಡುಗೆ ಧರಿಸಿ ಸಮಾನತೆಯ ಜೊತೆಗೆ ಒಗ್ಗಟ್ಟಿನಲ್ಲಿ ಮಹಿಳೆಯರು ಮುಂದಿರುವುದು ದೇಶದ ಆರ್ಥಿಕತೆ ಅಭಿವೃದ್ಧಿಗೆ ನಮ್ಮ ಕೊಡುಗೆ ಸಾಕಷ್ಟಿದೆ ಎಂದು ಘೋಷಿಸಿ ಸಂಭ್ರಮಿಸಿದರು. ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಅಚ್ಯುತ್​ಗೌಡ ಮಾತನಾಡಿ, ಒಬ್ಬ ವ್ಯಕ್ತಿಯ ಜೀವನದಲ್ಲಿ ಮಹಿಳೆಯರ ಪಾತ್ರ ದೊಡ್ಡದಿದೆ. ಆಕೆ ತಾಯಿಯಾಗಿ, ಸೋದರಿಯಾಗಿ, ಪತ್ನಿಯಾಗಿ ಬಾಳಿಗೆ ಬೆಳಕಾಗುತ್ತಾಳೆ. ವೈಯುಕ್ತಿಕವಾಗಿ ಮನೆಯ ಜವಾಬ್ದಾರಿಯನ್ನು ಹೊರುವ ಜೊತೆಗೆ ಒಬ್ಬ ಶಿಕ್ಷಕಿಯಾಗಿ, ಇಂಜಿನಿಯರ್​ ಮತ್ತು ಪೈಲೆಟ್​ ಆಗಿ ಕೂಡ ತನ್ನ ಕೆಲಸಗಳನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಾಳೆ. ಸಮಾಜದ ಕಟ್ಟುಪಾಡುಗಳ ಹೊರತಾಗಿಯೂ ಕೂಡ ಈಗಿನ ಆಧುನಿಕ ದಿನಗಳಲ್ಲಿ ಆಕೆ ಸಾಧನೆಯ ಶಿಖರವನ್ನು ಮುಟ್ಟುತ್ತಿದ್ದಾಳೆ ಎಂದು ಮಹಿಳೆಯರ ಬಗ್ಗೆ ಗುಣಗಾನ ಮಾಡಿದರು. ಮಹಿಳಾ ದಿನಾಚರಣೆಯ ಇತಿಹಾಸವನ್ನು ನೋಡುವುದಾದರೆ ಇಂದು ಮಹಿಳೆಯರ ಸಾಧನೆ ಎಲ್ಲ ಕ್ಷೇತ್ರಗಳಲ್ಲಿಯೂ ಇದೆ. ಪ್ರಮುಖವಾಗಿ ತಾಂತ್ರಿಕ, ಸಂಶೋಧನಾ ಹಾಗೂ ಐಟಿ-ಬಿಟಿ…

Read More

ಬೆಂಗಳೂರು: ರಾಜ್ಯದಲ್ಲಿ ಭೂ ಪರಿವರ್ತನೆ ಮಾಡುವ ಸಂದರ್ಭದಲ್ಲಿ ತಹಶೀಲ್ದಾರರು, ಕಂದಾಯ ನಿರೀಕ್ಷಕರು ಯಾವೆಲ್ಲ ಅಂಶ ಪರಿಗಣನೆ ಮಾಡಬೇಕು ಎನ್ನುವಂತ ಸಂಪೂರ್ಣ ಮಾಹಿತಿ ಮುಂದಿದೆ ಓದಿ. ರಾಜ್ಯದಲ್ಲಿ ಕೃಷಿ ಭೂಮಿಯನ್ನು ಕೃಷಿಯೇತರಕ್ಕೆ ಬಳಕೆ ಮಾಡುವ ಸಂದರ್ಭದಲ್ಲಿ ಭೂ ಪರಿವರ್ತನೆಗೆ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಆಗ ತಹಶೀಲ್ದಾಳರು, ಕಂದಾಯ ನಿರೀಕ್ಷಕರು ಕೆಲ ಅಂಶಗಳನ್ನು ಪರಿಗಣಿಸಿ ಅದಕ್ಕೆ ಅನುಮತಿಯನ್ನು ನೀಡಲಾಗುತ್ತದೆ. ಅವು ಯಾವುವು ಅಂತ ಈ ಕೆಳಗಿವೆ. ಭೂಪರಿವರ್ತನೆ ಕೋರಿ ಸಲ್ಲಿಸಿದ ಅರ್ಜಿಗಳ ಕುರಿತು ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸುವಾಗ ತಹಶೀಲದಾರರು/ಕಂದಾಯ ನಿರೀಕ್ಷಕರು ಈ ಕೆಳ ಕಾಣಿಸಿದ ಅಂಶಗಳನ್ನು ಪರಿಶೀಲಿಸುವುದು. 1. ಸರ್ಕಾರದ ಸುತ್ತೋಲೆ ದಿನಾಂಕ:7-6-1999ಕ್ಕೆ ಲಗತ್ತಿಸಿದ ಅನುಬಂಧ-1ರಲ್ಲಿ ಅರ್ಜಿಗಳನ್ನು ತಹಶೀಲದಾರರು ದ್ವಿಪ್ರತಿಗಳಲ್ಲಿ ಸ್ವೀಕರಿಸುವುದು. 2. ತಹಶೀಲದಾರರು ಮಂಜೂರಾತಿ ಪ್ರಾಧಿಕಾರಿಗೆ ಕೂಡಲೇ ಅರ್ಜಿಯ ಒಂದು ಪ್ರತಿಯನ್ನು ಕಳುಹಿಸುವುದು. 3. ಹೆಚ್ಚಿನ ಮಾಹಿತಿ ಅವಶ್ಯವಿದ್ದಲ್ಲಿ ಅದನ್ನು ಸಲ್ಲಿಸಲು ಅರ್ಜಿ ಸ್ವೀಕರಿಸಿದ ಒಂದು ವಾರದೊಳಗಾಗಿ ಅರ್ಜಿದಾರರಿಗೆ ತಿಳಿಸುವುದು. 4. ಜಮೀನಿನ ಒಡೆತನ ಹೊಂದಿದ ವ್ಯಕ್ತಿಯು ಮಾತ್ರ ಅರ್ಜಿ ಸಲ್ಲಿಸಿರುವ ಬಗ್ಗೆ…

Read More

ಬೆಂಗಳೂರು: ಶೀಘ್ರವೇ ಆಹಾರ ಇಲಾಖೆಯಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಿದೆ ಎನ್ನಲಾಗುತ್ತಿದೆ. ನೀವು ಹೊಸದಾಗಿ BPL, APL ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವ ನಿರೀಕ್ಷೆಯಲ್ಲಿದ್ದರೇ, ಅರ್ಹತೆ ಏನು? ದಾಖಲೆಗಳು ಏನು ಅಂತ ಮುಂದೆ ಓದಿ. ರಾಜ್ಯದ ನಾಗರೀಕರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ www.ahara.kar.nic.in ಜಾಲತಾಣದ ಮೂಲಕ, ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕರ್ನಾಟಕ ಪಡಿತರ ಚೀಟಿ ( New Ration Card ) ಪಟ್ಟಿ ಯಲ್ಲಿ ಹೆಸರು ಇಲ್ಲದ ಎಲ್ಲಾ ಜನರು ಈಗ ಅಗತ್ಯವಿರುವ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು, ಜೊತೆಗೆ ಅರ್ಜಿಯ ಸ್ಥಿತಿಗತಿಯನ್ನು ಪರಿಶೀಲಿಸಬಹುದು. ಕರ್ನಾಟಕದಲ್ಲಿ ಹೊಸ ಎಪಿಎಲ್ / ಬಿಪಿಎಲ್ ಪಡಿತರ ಚೀಟಿಗೆ ( BPL, APL Ration Card ) ಹೇಗೆ ಅರ್ಜಿ ಸಲ್ಲಿಸಬಹುದು.? ಅದಕ್ಕೆ ಬೇಕಿರುವಂತ ದಾಖಲೆಗಳು ಯಾವುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಮುಂದೆ ಓದಿ.. ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಬೇಕಿರುವ ಅಗತ್ಯ…

Read More

ಪೋಷಕರು ತಮ್ಮ ಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಬೆಳವಣಿಗೆಗೆ ಬೇಕಾದ ಎಲ್ಲಾ ಸೌಕರ್ಯಗಳನ್ನು ಮಾಡುತ್ತಿರುತ್ತಾರೆ, ಭವಿಷ್ಯದಲ್ಲಿ ಉನ್ನತಿ ಹೊಂದಲಿ ಎಂದು ಬಯಸುತ್ತಿರುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವ ಮಕ್ಕಳು ಪದೇಪದೇ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಇದರಿಂದ ಮಕ್ಕಳು ದೈಹಿಕ ಮತ್ತು ಮಾನಸಿಕವಾಗಿ ಕುಗ್ಗುತ್ತಿದ್ದಾರೆ. ಇದಕ್ಕಾಗಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಆಯುರ್ವೇದದಲ್ಲಿ ತಿಳಿಸಿರುವ ಸ್ವರ್ಣ ಪ್ರಾಶನ ಸಂಸ್ಕಾರ ಉತ್ತಮ ಆಯ್ಕೆಯಾಗಿದೆ. ಸ್ವರ್ಣಪ್ರಾಶನ ಎಂದರೇನು? ಸ್ವರ್ಣಪ್ರಾಶನವು ಆಯುರ್ವೇದದಲ್ಲಿ ವಿವರಿಸಲಾದ 16 ಸಂಸ್ಕಾರಗಳಲ್ಲಿ ಒಂದಾಗಿದೆ. ಅದು ಮಕ್ಕಳ ಸರ್ವತೋಮುಖವಾದ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಶುದ್ಧೀಕರಿಸಿದ ಸ್ವರ್ಣವನ್ನು(ಚಿನ್ನ) ಇತರೆ ಔಷದ ದ್ರವ್ಯಗಳೊಂದಿಗೆ ಸೇವನೆಯೋಗ್ಯವಾದ ರೂಪದಲ್ಲಿ ತಯಾರಿಸಿ, ನಿರ್ದಿಷ್ಟ ದಿನದಂದು (ಪುಷ್ಯ ನಕ್ಷತ್ರ) ಅಥವಾ ನಿತ್ಯವೂ ಸೇವಿಸುವುದರಿಂದ ಮಕ್ಕಳ ದೈಹಿಕ ಮಾನಸಿಕ ಮತ್ತು ಬೌದ್ಧಿಕ ಆರೋಗ್ಯವನ್ನು ಉತ್ತಮಗೊಳಿಸಬಹುದಾಗಿದೆ. ಸ್ವರ್ಣ ಪ್ರಾಶನದಿಂದ ಆಗುವ ಪ್ರಯೋಜನಗಳು ‌ಮಕ್ಕಳ ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ. ‌ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ‌ಸೋಂಕುಗಳನ್ನು ತಡೆಗಟ್ಟುತ್ತದೆ – ಪದೇ ಪದೇ…

Read More

ಬೆಂಗಳೂರು: ಕೇಂದ್ರ ಪುರಸ್ಕೃತ ಪ್ರಾಯೋಜಕತ್ವ ಯೋಜನೆಯು ಎಲ್ಲಾ ತಂದೆ ಇಲ್ಲದ ಮಕ್ಕಳಿಗೆ ಸ್ಕಾಲರ್‌ಶಿಪ್ ಅನ್ವಯವಾಗುವುದಿಲ್ಲ. ಈ ಯೋಜನೆಯಲ್ಲಿ ಫಲಾನುಭವಿಯಾಗಲು ನಿರ್ದಿಷ್ಟ ಮಾನದಂಡಗಳ ಮೂಲಕ ಮಾತ್ರ ಸಾಧ್ಯವಾಗುತ್ತದೆ. ಹಾಗಾದ್ರೆ ಯಾರಿಗೆಲ್ಲ ಸಿಗಲಿದೆ? ಮಾನದಂಡಗಳೇನು ಎನ್ನುವ ಸಂಪೂರ್ಣ ಮಾಹಿತಿ ಮುಂದಿದೆ ಓದಿ. ತಂದೆಯಿಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ 24000/- ಸ್ಕಾಲರ್‌ಶಿಪ್ ಸೌಲಭ್ಯವಿದ್ದು, ಜನಸಾಮಾನ್ಯರಿಗೆ ಈ ವಿಚಾರ ತಿಳಿದೆ ಇಲ್ಲ. ಆದುದರಿಂದ ತಮಗೆ ಗೊತ್ತಿರುವ ಯಾರಾದರೂ ತಂದೆ ಇಲ್ಲದ ಮಕ್ಕಳಿದ್ದಲ್ಲಿ ಅವರ ಪೋಷಕರಿಗೆ ಕೂಡಲೇ ಅರ್ಜಿ ಸಲ್ಲಿಸಲು ತಿಳಿಸಿ ಎಂದು ಅಧಿಕೃತ ಸಹಿ ಇಲ್ಲದ ಅರ್ಜಿಯು ಸಾಮಾಜಿಕ ಜಾಲತಾಣಗಳ ಮುಖಾಂತರ ಹರಿದಾಡುತ್ತಿದ್ದು, ಈ ಸುದ್ದಿಯು “ಸುಳ್ಳುಸುದ್ದಿ”ಯಾಗಿದೆ. ಈ ಯೋಜನೆಯಲ್ಲಿ ನಿರ್ದಿಷ್ಟ ಮಾನದಂಡಗಳು ಅನ್ವಯವಾಗುವ ಮಕ್ಕಳಿಗೆ ಮಾತ್ರ ಸ್ಕಾಲರ್‌ಶಿಪ್ ಲಭಿಸುತ್ತದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಈ ಯೋಜನೆಯಲ್ಲಿ ಮಕ್ಕಳ ಪಾಲನಾ ಸಂಸ್ಥೆಗಳಿಂದ (ಬಾಲಕರ/ಬಾಲಕಿಯರ ಬಾಲಮಂದಿರ ಮತ್ತು ವೀಕ್ಷಣಾಲಯ) ಹೊರಹೋಗಿ ವಿದ್ಯಾಭ್ಯಾಸ ಮುಂದುವರೆಸುತ್ತಿರುವ ಮಕ್ಕಳು, ಇಬ್ಬರೂ ಪೋಷಕರನ್ನು ಕಳೆದುಕೊಂಡ…

Read More

ಜೇವರ್ಗಿ: “ಕಲ್ಯಾಣ ಕರ್ನಾಟಕ ಭಾಗದ ಜನ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ನಮಗೆ ಶಕ್ತಿ ತುಂಬಿದ್ದು, ಈ ಭಾಗದ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ನಿಮ್ಮೆಲ್ಲರ ಋಣ ತೀರಿಸಲಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಜೇವರ್ಗಿಯಲ್ಲಿ ನಡೆದ ಕಲ್ಯಾಣ ಕರ್ನಾಟಕದ 38 ಗ್ರಾಮೀಣ ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು 1150 ಕಿ.ಮೀ ಉದ್ದದ ರಸ್ತೆ ಅಭಿವೃದ್ಧಿಯ “ಕಲ್ಯಾಣ ಪಥ” ಯೋಜನೆ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಶನಿವಾರ ಮಾತನಾಡಿದರು. “ದೇಶಕ್ಕೆ ಮಹಾತ್ಮಾ ಗಾಂಧಿ, ಜವಾಹರ್ ಲಾಲ್ ನೆಹರೂ, ಸರ್ದಾರ್ ಪಟೇಲ್ ಸೇರಿದಂತೆ ಅನೇಕರು ಸ್ವಾತಂತ್ರ್ಯ ತಂದುಕೊಟ್ಟರು. ಆದರೆ ಈ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಆರ್ಥಿಕ ಸ್ವಾತಂತ್ರ್ಯವನ್ನು ತಂದುಕೊಟ್ಟವರು ಮಲ್ಲಿಕಾರ್ಜುನ ಖರ್ಗೆ ಅವರು. ಖರ್ಗೆ ಅವರು ಹಾಗೂ ಧರ್ಮಸಿಂಗ್ ಅವರು ಸೋನಿಯಾ ಗಾಂಧಿ ಹಾಗೂ ಮನಮೋಹನ್ ಸಿಂಗ್ ಅವರಿಗೆ ಮನದಟ್ಟು ಮಾಡಿ ಈ ಭಾಗದ ಅಭಿವೃದ್ಧಿಗೆ ಆರ್ಟಿಕಲ್ 371ಜೆ ಜಾರಿಗೆ ತಂದಿದ್ದಾರೆ. ಅಂದು ಲಾಲಕೃಷ್ಣ ಆಡ್ವಾಣಿ ಅವರು ಈ ಭಾಗಕ್ಕೆ ವಿಶೇಷ…

Read More