Author: kannadanewsnow09

ಬೆಂಗಳೂರು : ಕಲಬುರಗಿಯ ಜಿಲ್ಲಾಧಿಕಾರಿಯನ್ನು ಪಾಕಿಸ್ತಾನದವರು ಎಂದು ಬಿಜೆಪಿಯ ವಿಧಾನಪರಿಷತ್ ಬಿಜೆಪಿ ಸದಸ್ಯ ಎನ್ ರವಿ ಕುಮಾರ್ ವಿರುದ್ಧ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ವಾಗ್ದಾಳಿ ನಡೆಸಿದರು. ವಿಕಾಸೌಧದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಸಚಿವರು, ಬಿಜೆಪಿಯವರೆಗೆ ಬುದ್ದಿ ಭ್ರಮಣೆಯಾಗಿದೆ. ಐಎಎಸ್‌ ಅಧಿಕಾರಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದು, ವಿಷಾದನೀಯ. ಶಾಲಾ ಮಕ್ಕಳು ಕೂಡ ಹೀಗೆ ಮಾತನಾಡಲ್ಲ. ಸಾರ್ವಜನಿಕ ಜೀವನದಲ್ಲಿ ಇರಲು ಇಂಥವರು ಅನರ್ಹ’ ಎಂದು ಕಿಡಿಕಾರಿದರು. ಐಎಎಸ್‌ ಅಧಿಕಾರಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವದನ್ನು ಐಎಎಸ್‌ ಅಧಿಕಾರಿಗಳ ಒಕ್ಕೂಟ ಈಗಾಗಲೇ ರವಿಕುಮಾರ್‌ ವಿರುದ್ಧ ಪತ್ರ ಬರೆದು, ಕ್ಷಮೆ ಕೋರಬೇಕು ಎಂದು ಆಗ್ರಹಿಸಿದರು. ವಿಧಾನ ಪರಿಷತ್‌ ನಾಯಕರೊಬ್ಬರು ಈ ರೀತಿ ಮಾತನಾಡಿದ್ದು ಅಪ್ರಬುದ್ಧತೆ ತೋರುತ್ತದೆ ಎಂದು ಸಚಿವರು ತಿಳಿಸಿದರು. ಹೇಳಿಕೆ ನೀಡುವಾಗ ಸರಿ, ತಪ್ಪು ಎಂಬುದರ ಬಗ್ಗೆ ಜ್ಞಾನ ಕಳೆದುಕೊಂಡಿದ್ದಾರೆ. ಅಧಿಕಾರ ಕಳೆದುಕೊಂಡು ನೀರಿನಿಂದ‌ ಹೊರಬಿದ್ದ ಮೀನಿನಂತಾಗಿದ್ದಾರೆ ಎಂದು ಶರಣ್‌…

Read More

ಬೆಂಗಳೂರು: ನಗರದ ಹೆಸರಘಟ್ಟದಲ್ಲಿ ಅಪರೂಪದ ಹುಲ್ಲುಗಾವಲಿದೆ. ಇದು ನೂರಾರು ಪ್ರಭೇದದ ಪಕ್ಷಿಗಳ ಸಂತಾನೋತ್ಪತ್ತಿಯ ತಾಣವಾಗದ್ದು, ಇಷ್ಟು ಸುಂದರ ಪರಿಸರ ಉಳಿಸಲು ದಶಕಗಳಿಂದ ಹೋರಾಟ ನಡೆದಿತ್ತು. ತಾವು ಸಚಿವನಾದ ಬಳಿಕ, ಹಲವು ಒತ್ತಡದ ನಡುವೆಯೂ ಹೆಸರುಘಟ್ಟ ಕೆರೆ ಸುತ್ತಮುತ್ತಲ್ಲಿರುವ ಅಪರೂಪದ ಹುಲ್ಲುಗಾವಲು ರಕ್ಷಣೆಗಾಗಿ 5678 ಎಕರೆ ಪ್ರದೇಶವನ್ನು ಗ್ರೇಟರ್ ಹೆಸರುಘಟ್ಟ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿದ್ದಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು. 6251.31 ಎಕರೆ ಅರಣ್ಯ ತೆರವು  ಕಳೆದ 2 ವರ್ಷಗಳಲ್ಲಿ 1205 ಒತ್ತುವರಿ ಪ್ರಕರಣಗಳಲ್ಲಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ 6251.31 ಎಕರೆ ಅರಣ್ಯ ತೆರವು ಮಾಡಿಸಲಾಗಿದೆ. ಒತ್ತುವರಿ ತೆರವು ನಿರಂತರ ಪ್ರಕ್ರಿಯೆಯಾಗಿದೆ ಎಂದು ಹೇಳಿದರು. ಚಿರತೆ ಸಫಾರಿಗೆ ಉತ್ತಮ ಸ್ಪಂದನೆ ಬೆಂಗಳೂರಿಗೆ ಸಮೀಪದಲ್ಲೇ ಇರುವ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಚಿರತೆ ಸಫಾರಿ ಆರಂಭಿಸಬೇಕೆಂಬ ಬೇಡಿಕೆ ಇತ್ತು, ತಾವು ಸಚಿವನಾದ ತರುವಾಯ ಇದಕ್ಕೆ ಚಾಲನೆ ನೀಡಿದ್ದು, ಇದು ಜನಾಕರ್ಷಣೆಯ ಕೇಂದ್ರವಾಗಿದೆ. ಉದ್ಯಾನಕ್ಕೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ ಎಂದರು.…

Read More

ಬೆಂಗಳೂರು : ಖ್ಯಾತ ಕ್ರೀಡಾಪಟು, ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನಾಮ ನಿರ್ದೇಶನ ಮಾಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ತಾವು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿ 2 ವರ್ಷ ತುಂಬಿದ ಸಂದರ್ಭದಲ್ಲಿಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಇರುವ ಅನಿಲ್ ಕುಂಬ್ಳೆ ವಿಶ್ವದ್ಯಂತ ಖ್ಯಾತಿ ಹೊಂದಿದ್ದು, ಅರಣ್ಯ ಸಂರಕ್ಷಣೆ, ಅರಣ್ಯ ಸಂವರ್ಧನೆ, ವೃಕ್ಷ ಸಂರಕ್ಷಣೆ, ವನ್ಯಜೀವಿ ಸಂರಕ್ಷಣೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಿದ್ದಾರೆ ಎಂದರು. ಯಾವುದೇ ಸಂಭಾವನೆ ಇಲ್ಲ: ಅನಿಲ್ ಕುಂಬ್ಳೆ ಅವರಿಗೆ ವನ್ಯಜೀವಿಗಳ ಬಗ್ಗೆ ಅಪಾರ ಕಾಳಜಿ ಇದೆ. ಅರಣ್ಯದ ಬಗ್ಗೆ ಪ್ರೀತಿ ಇದೆ. ಹೀಗಾಗಿ ಅವರು ಯಾವುದೇ ಸಂಭಾವನೆ ಪಡೆಯದೆ ರಾಯಭಾರಿ ಆಗಲು ಸಮ್ಮತಿಸಿದ್ದಾರೆ ಎಂದು ಈಶ್ವರ ಖಂಡ್ರೆ ಸ್ಪಷ್ಟಪಡಿಸಿದರು. ಮಾನವ-ವನ್ಯಜೀವಿ ಸಂಘರ್ಷ ತಡೆಗೆ ಕ್ರಮ: ಮಾನವ…

Read More

ಬೆಂಗಳೂರು: ಬೆಂಗಳೂರು ಮಹಾನಗರದಲ್ಲಿ ಭೂಮಿಗೆ ಬಂಗಾರದ ಬೆಲೆ ಇದೆ. ಇಲ್ಲಿ ಹಲವು ದಶಕದಿಂದ ಅರಣ್ಯ ಭೂಮಿ ಒತ್ತುವರಿ ಆಗಿದ್ದು, ತಾವು ಸಚಿವನಾದ ತರುವಾಯ 2 ವರ್ಷದಲ್ಲಿ ಸುಮಾರು 4000 ಕೋಟಿ ರೂ. ಮಾರುಕಟ್ಟೆ ಮೌಲ್ಯದ 128 ಎಕರೆ ಅರಣ್ಯ ಒತ್ತುವರಿಯನ್ನು ತೆರವು ಮಾಡಿಸಿರುವುದಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು. ಕೇಂದ್ರ ಸರ್ಕಾರಿ ಸ್ವಾಮ್ಯದ ಎಚ್.ಎಂ.ಟಿ. ತನ್ನ ವಶದಲ್ಲಿರುವ ಸುಮಾರು 14,300 ಕೋಟಿ ರೂ. ಮೌಲ್ಯದ 444 ಎಕರೆ ಅರಣ್ಯ ಭೂಮಿಯನ್ನು ರಿಯಲ್ ಎಸ್ಟೇಟ್ ಸಂಸ್ಥೆಗಳು ಸೇರಿದಂತೆ ಹಲವು ಸಂಸ್ಥೆಗಳಿಗೆ ಮಾರಾಟ ಮಾಡುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಈ ಅರಣ್ಯ ಜಮೀನು ಹಿಂಪಡೆದು, ಉದ್ಯಾನವಾಗಿ ಉಳಿಸಿಕೊಳ್ಳಲು ತೀರ್ಮಾನಿಸಲಾಗಿದ್ದು, ಇದಕ್ಕಾಗಿ ಕಾನೂನು ಹೋರಾಟ ನಡೆದಿದೆ ಎಂದು ಅರಣ್ಯ ಸಚಿವರು ತಿಳಿಸಿದರು. ಹಳೆ ಮೈಸೂರು ಭಾಗದಲ್ಲಿ ಬ್ರಿಟಿಷರ ಕಾಲದಲ್ಲಿ ವಿವಿಧ ವ್ಯಕ್ತಿ, ಸಂಸ್ಥೆಗಳಿಗೆ ಸುಮಾರು 5050 ಎಕರೆ ಅರಣ್ಯ ಭೂಮಿಯನ್ನು ದೀರ್ಘಕಾಲದ (999 ವರ್ಷ) ಗುತ್ತಿಗೆ ನೀಡಲಾಗಿತ್ತು. ಈ 999 ವರ್ಷದ ಗುತ್ತಿಗೆ ಅವಧಿಯನ್ನು ಸರ್ಕಾರ…

Read More

ಬೆಂಗಳೂರು: ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಆದರೆ ಅದಕ್ಕೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗುತ್ತಿಲ್ಲ. ಇದನ್ನು ಮನಗಂಡು, ನಾನು ಅರಣ್ಯ ಸಚಿವನಾದ ಬಳಿಕ ಅರಣ್ಯ ವಿಸ್ತರಣೆಗೆ ಕ್ರಮ ವಹಿಸಿದ್ದು, 2 ವರ್ಷದಲ್ಲಿ 15000 ಎಕರೆಗೂ ಹೆಚ್ಚು ಭೂಮಿಯನ್ನು ಅರಣ್ಯ ಎಂದು ಅಧಿಸೂಚನೆ ಮಾಡಲಾಗಿದೆ ಎಂಬುದಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಕಾಡಿನಿಂದ ನಾಡಿಗೆ ಕಾಡಾನೆಗಳು ಬಾರದಂತೆ ತಡೆಯಲು ಆನೆ ಕಂದಕ, ಸೌರ ತಂತಿ ಬೇಲಿ ಮತ್ತು ರೈಲ್ವೆ ಬ್ಯಾರಿಕೇಡ್ ಅಳವಡಿಸಲಾಗುತ್ತಿದೆ. ನಾನು ಅರಣ್ಯ ಸಚಿವನಾಗುವವರೆಗೆ ಅಂದರೆ 2023ರ ಜೂನ್ ವರೆಗೆ ರಾಜ್ಯದಲ್ಲಿ 312.918 ಕಿ.ಮೀ ಮಾತ್ರ ರೈಲ್ವೆ ಬ್ಯಾರಿಕೇಡ್ ಅಳವಡಿಸಲಾಗಿತ್ತು. ಆದರೆ ಕಳೆದ 2 ವರ್ಷದಲ್ಲಿ 115.085 ಕಿ.ಮೀ ರೈಲ್ವೆ ಬ್ಯಾರಿಕೇಡ್ ಕಾಮಗಾರಿ ಪೂರ್ಣಗೊಳಿಸಲಾಗಿದ್ದು, ಇನ್ನೂ 193 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ ಅನುಮೋದನೆ ನೀಡಲಾಗಿದೆ ಎಂದು ವಿವರ ನೀಡಿದರು. ಅರಣ್ಯದಂಚಿನಲ್ಲಿ ಅಳವಡಿಸಲಾಗಿರುವ ರೈಲ್ವೆ ಬ್ಯಾರಿಕೇಡ್ ಗೆ ಹೊಂದಿಕೊಂಡಂತೆ ಬಿದಿರು ಮತ್ತು ಕತ್ತಾಳೆ ಬೆಳೆಸಿದರೆ ಅದು ಜೈವಿಕ ಮತ್ತು ಸ್ವಾಭಾವಿಕ…

Read More

ಬೆಂಗಳೂರು: ಬೆಂಗಳೂರಲ್ಲಿ ಶ್ವಾಸತಾಣಗಳನ್ನು ಉಳಿಸಲು, ಬೆಳೆಸಲು ಸರ್ಕಾರ ನಿರ್ಧರಿಸಿದ್ದು, ಯಲಹಂಕ ಬಳಿಯ ಮಾದಪ್ಪನಹಳ್ಳಿಯ 153 ಎಕರೆ ಪ್ರದೇಶದಲ್ಲಿ ಮತ್ತೊಂದು ಬೃಹತ್ ಉದ್ಯಾನ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಬೆಂಗಳೂರಿನಲ್ಲಿ ಲಾಲ್ ಬಾಗ್ ಹೈದರಾಲಿಯ ಕಾಲದಲ್ಲಿ ನಿರ್ಮಾಣವಾಗಿತ್ತು, ಕಬ್ಬನ್ ಪಾರ್ಕ್ ಬ್ರಿಟಿಷರ ಕಾಲದಲ್ಲಿ ರೂಪುಗೊಂಡಿತು. ಶತಮಾನವೇ ಕಳೆದರೂ ಮತ್ತೊಂದು ಬೃಹತ್ ಉದ್ಯಾನ ಬೆಂಗಳೂರಿನಲ್ಲಿ ಆಗಲಿಲ್ಲ. ಹೀಗಾಗಿ ತಾವು ಅರಣ್ಯ ಸಚಿವನಾದ ತರುವಾಯ ನೀಲಗಿರಿ ಬೆಳೆಸಲು ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮಕ್ಕೆ ನೀಡಿದ್ದ 153 ಎಕರೆ ಜಮೀನನ್ನು ಜೂ.2ರಂದು ಮರಳಿ ಅರಣ್ಯ ಇಲಾಖೆಗೆ ಪಡೆದು ಅಲ್ಲಿ ಉದ್ಯಾನ ನಿರ್ಮಿಸಲಾಗುವುದು ಎಂದರು. 8,848 ವನಮಹೋತ್ಸವ ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಪರಿಣಾಮವನ್ನು ಜಗತ್ತೇ ಎದುರಿಸುತ್ತಿದ್ದು, ಈ ಕಾಲಘಟ್ಟದಲ್ಲಿ ಹಸಿರು ಹೊದಿಕೆಯ ಹೆಚ್ಚಳ, ಅರಣ್ಯ ಸಂರಕ್ಷಣೆ ಮತ್ತು ನಿರ್ವಹಣೆ ಇಲಾಖೆಯ ಜವಾಬ್ದಾರಿಯಾಗಿದ್ದು, ಕಳೆದ 2 ವರ್ಷಗಳಲ್ಲಿ ಸುಮಾರು 8848 ವನಮಹೋತ್ಸವ ನಡೆಸಲಾಗಿದ್ದು, ಅರಣ್ಯ…

Read More

ವಸಂತ ಬಿ ಈಶ್ವರಗೆರೆ.., ಸಂಪಾದಕರು ಶಿವಮೊಗ್ಗ: ಜಿಲ್ಲೆಯ ಸಾಗರ ಹಾಗೂ ಸೊರಬ ಮಾರ್ಗದ ಭದ್ರಾಪುರ-ಹೊಳೆಕೊಪ್ಪ ಮಾರ್ಗದ ರಸ್ತೆ ಮಧ್ಯೆ ಅಕೇಶಿಯ ಮರ ಬಿದ್ದು ಸಂಚಾರ ಬಂದ್ ಆಗಿದೆ. ಮಳೆಗಾಲ ಆರಂಭಕ್ಕೆ ಮುನ್ನವೇ ಬೀಳುವಂತಿರುವ ಅಕೇಶಿಯ ಮರ ಕಡಿತಲೆ ಮಾಡಬೇಕಿದ್ದಂತ ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂಬುದಾಗಿ ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ – ಸೊರಬ ಮಾರ್ಗದ ಭದ್ರಾಪುರ-ಹೊಳೆಕೊಪ್ಪದ ಮಧ್ಯದಲ್ಲಿ ಅಕೇಶಿಯ ಮರಗಳ ಸಾಲಿದೆ. ಕಳೆದ ಒಂದು ವರ್ಷಗಳ ಹಿಂದೆ ರಸ್ತೆಗೆ ಬಾಗಿರುವ, ಕೆಲವು ಒಣಗಿರುವಂತ ಅಕೇಶಿಯ ಮರಗಳನ್ನು ಕಡಿತಲೆ ಮಾಡಿ, ಮುಂದಾಗಲಿರುವಂತ ಅನಾಹುತ ತಪ್ಪಿಸುವಂತೆ ದೂಗೂರು ಗ್ರಾಮ ಪಂಚಾಯ್ತಿ ಪಿಡಿಓ ಪತ್ರ ಬರೆದು ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು. ಆದರೇ ಇಲ್ಲಿಯವರೆಗೆ ತೆರವನ್ನೇ ಮಾಡಿಲ್ಲ. ರಸ್ತೆಗೆ ಬಿದ್ದ ಮರ, ವಾಹನ ಸಂಚಾರ ಅರ್ಧಗಂಟೆ ಬಂದ್ ಇಂದು ಭದ್ರಾಪುರ-ಹೊಳೆಕೊಪ್ಪ ಮಾರ್ಗದಲ್ಲಿ ಅಕೇಶಿಯ ಮರವೊಂದು ಭಾರೀ ಗಾಳಿ ಸಹಿಯ ಮಳೆಯಿಂದಾಗಿ ರಸ್ತೆಗೆ ಉರುಳಿ ಬಿದ್ದು ಸಂಚಾರ ಅಸ್ತವ್ಯಸ್ತಗೊಂಡಿತ್ತು. ಕಿಲೋಮೀಟರ್…

Read More

ಬೆಂಗಳೂರು: ಪದೇಪದೇ ಮೂರ್ಛೆರೋಗಕ್ಕೆ ತುತ್ತಾಗುತ್ತಿದ್ದ 21 ವರ್ಷದ ಯುವಕನಿಗೆ ಫೋರ್ಟಿಸ್‌ ಆಸ್ಪತ್ರೆಯಲ್ಲಿ ರಾಜ್ಯದಲ್ಲೇ ಮೊದಲ ಉದ್ದೇಶಿತ ಡೀಪ್ ಬ್ರೈನ್ ಸ್ಟಿಮ್ಯುಲೇಶನ್ (ಡಿಬಿಎಸ್) ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ಫೋರ್ಟಿಸ್‌ ಆಸ್ಪತ್ರೆಯ ನರಶಸ್ತ್ರಚಿಕಿತ್ಸೆಯ ಹೆಚ್ಚುವರಿ ನಿರ್ದೇಶಕ ಡಾ. ರಘುರಾಮ್ ಜಿ ಮತ್ತು ನರವಿಜ್ಞಾನದ ಹೆಚ್ಚುವರಿ ನಿರ್ದೇಶಕ ಡಾ. ಗುರುಪ್ರಸಾದ್ ಹೊಸೂರ್ಕರ್ ವೈದ್ಯರ ತಂಡ ಈ ಚಿಕಿತ್ಸೆ ನಡೆಸಿದೆ. ಈ ಕುರಿತು ಮಾತನಾಡಿದ ಡಾ. ರಘುರಾಮ್ ಜಿ, ಯೆಮನ್‌ ಮೂಲದ 21 ವರ್ಷದ ಮೊಹಮದ್ ಎಂಬ ಯುವಕ ಕಳೆದ 12 ವರ್ಷಗಳಿಂದ ಅನಿಯಂತ್ರಿತ ಮೂರ್ಛೆರೋಗದಿಂದ ಬಳಲುತ್ತಿದ್ದನು. ಕೆಲವರಲ್ಲಿ ಮೂರ್ಛೆರೋಗ ಸಾಮಾನ್ಯವಾಗಿದ್ದರೂ, ಈ ಯುವಕನಿಗೆ ಅನಿಯಂತ್ರಿತವಾಗಿ ಮೂರ್ಛೆರೋಗ ಕಾಡುತ್ತಿತ್ತು, ಸಾಕಷ್ಟು ಬಾರಿ ನಡುಕದಿಂದ ತಲೆಸುತ್ತಿ ಬೀಳುವ ಸ್ಥಿತಿಗೆ ತಲುಪಿದ್ದನು. ಈಗಾಗಲೇ ಸಾಕಷ್ಟು ಬಾರಿ ಔಷಧಿ ಪಡೆದುಕೊಂಡು, ಹಲವು ಆಸ್ಪತ್ರೆಗಳಿಗೆ ತೆರಳಿದ್ದರೂ ಆ ಕ್ಷಣಕ್ಕೆ ಮಾತ್ರ ಪರಿಹಾರ ತೊರೆಯುತ್ತಿತ್ತು. ದೀರ್ಘಕಾಲದ ಪರಿಹಾರ ಸಿಗದೇ ಈ ಕಾಯಿಲೆಯಿಂದ ಯುವಕ ಬಳಲುತ್ತಿದ್ದನು. ಈ ಕಾಯಿಲೆಗೆ ಕಾರಣವೂ ಸಹ ತಿಳಿದಿರಲಿಲ್ಲ. ಬಳಿಕ ಫೋರ್ಟಿಸ್‌…

Read More

ಬೆಂಗಳೂರು: “ನೂತನ ಜೈವಿಕ ಇಂಧನ ನೀತಿ”ಯ ಕಾರ್ಯಯೋಜನೆ ರೂಪಿಸುತ್ತಿದ್ದು, ಶೀಘ್ರವೇ ಈ ನೀತಿಯನ್ನು ಅನುಷ್ಠಾನಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದು ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಎಸ್.ಈ ಸುಧೀಂದ್ರ ತಿಳಿಸಿದರು. ಮಂಡಳಿಯ 42 ನೇ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಉದ್ದೇಶಿತ ಜೈವಿಕ ಇಂಧನ ನೀತಿ ಕುರಿತು ಸುಧೀರ್ಘವಾಗಿ ಚರ್ಚೆ ನಡೆಸಿದರು. ರಾಜ್ಯದಲ್ಲಿ ಪರಿಸರ ಸ್ನೇಹಿ ವಾತಾವರಣ ನಿರ್ಮಾಣಕ್ಕೆ ಜೈವಿಕ ಇಂಧನ ಬಳಕೆಯನ್ನು ಹೆಚ್ಚು ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದ್ದು, ಈ ಸಂಬಂಧ ನೂತನ ಜೈವಿಕ ಇಂಧನ ನೀತಿಯನ್ನೂ ಜಾರಿಗೊಳಿಸುವ ನಿಟ್ಟಿನಲ್ಲಿ ಕಾರ್ಯಯೋಜನೆ ಸಿದ್ಧವಾಗುತ್ತಿದೆ. ಮುಂದಿನ ದಿನಗಳಲ್ಲಿ ಈ ನೀತಿಯನ್ನು ಅನುಷ್ಠಾನಗೊಳಿಸುವ ಮೂಲಕ ಜೈವಿಕ ಇಂಧನಕ್ಕೆ ಪ್ರತಿಯೊಬ್ಬರೂ ಆದ್ಯತೆ ನೀಡುವಂತೆ ಮಾಡಲಾಗುವುದು ಎಂದು ಹೇಳಿದರು. ಇದೇ ವೇಳೆ 2024-25ನೇ ಸಾಲಿನ ವಾರ್ಷಿಕ ವರದಿಯನ್ನು ಮಂಡಿಸಲಾಯಿತು. ಕಾರ್ಯಕಾರಿ ಸಮಿತಿಯ ಸದಸ್ಯರಾದ ಶ್ರೀ ಕೃಷ್ಣನ್‌, ಜಾಗತಿಕ ಮಟ್ಟದಲ್ಲಿ ಜೈವಿಕ ಇಂಧನಗಳ ಕುರಿತ ಸ್ಥಿತಿಗತಿ, ಉತ್ಪಾದನೆ, ಪೂರೈಕೆ ಹಾಗೂ ಬೇಡಿಕೆಯ ಕುರಿತು ವಿಷಯ…

Read More

ಸಂಸ್ಕಾರವೆಂದರೇನು ?. ಕೈಯಲ್ಲಿ ಕೋಟಿ ಇದ್ದರು ಹಿರಿಯರು ಕಂಡೊಡನೆ ಕಾಲಿಗೆ ಬೀಳೋದು ಸಂಸ್ಕಾರ. ರಾತ್ರಿಯಲ್ಲಾ ಗಂಡನ ಜೊತೆ ಇದ್ದರೂ ಹಗಲೊತ್ತು ಗ೦ಡ ಕಂಡೊಡನೆ ತಲೆ ಮೇಲೆ ಸೆರಗಾಕಿಕೊಳ್ಳೋದು ಸಂಸ್ಕಾರ. ಎಷ್ಟೇ ಆಧುನಿಕತೆ ಬಂದರೂ ಹಣೆಯ ಮೇಲಿನ ಬೊಟ್ಟು ಸಂಸ್ಕಾರ.! ಡಿಗ್ರಿ ಮೇಲೆ ಡಿಗ್ರಿ ಪಡೆದರು ಗುರು ಕಂಡೊಡನೆ ತೋರಿಸುವ ಭಯ ಭಕ್ತಿ ಸಂಸ್ಕಾರ.! ಯಜಮಾನಿಕೆ ದೊಡ್ಡಸ್ತಿಕೆಯಲ್ಲಿದ್ದರೂ ಚಿಕ್ಕವರಿಗಾಗಿ ತೋರಿಸುವ ಪ್ರೀತಿ ವಿಶ್ವಾಸ ಕಳಕಳಿ ನಿಜವಾದ ಸಂಸ್ಕಾರ. ನಮ್ಮ ನಡವಳಿಕೆಯಲ್ಲಿರುವ ನಯ ವಿನಯ ನಾಜೂಕು ನಿಜವಾದ ಸಂಸ್ಕಾರ.! ಓದು ಬರಹ ಉದ್ಯೋಗದ ಹೊರತಾಗಿಯೂ ಹೋರುವ ಆ  ಜವಾಬ್ದಾರಿ ಸಂಸ್ಕಾರ.! ಖಾಯಿಲೆ ಬಿದ್ದ ತಂದೆ ತಾಯಿಯ ಮಗುವಿನ ಹಾಗೆ ನೋಡಿಕೊಳ್ಳುವುದು ಸಂಸ್ಕಾರ.  ಸದಾ ಕುಟುಂಬದ ಕಣ್ಣಾದ ತಾಯಿಯ ಬೇಕು ಬೇಡ ಕೇಳಿ ಈಡೇರಿಸುವುದು ಸಂಸ್ಕಾರ.  ಮುದ್ದಿನ ಮಗ ಮಗಳು ತಪ್ಪು ಮಾಡಿದಾಗಮಾಡಿದಾಗ ಮ್ರುದು ಮಾತಿನಿಂದ ದಾರಿಗೆ ತರೋದು ಸಂಸ್ಕಾರ.!  ಅಡ್ಡ ದಾರಿ ತುಳಿತಾ ಇರೋ ಮಗಳಿಗೆ ಮಗನಿಗೆ ನಲ್ಮೆಯ ಮಾತುಗಳಿಂದ ಮನವೊಲಿಸುವುದು ಸಂಸ್ಕಾರ !.…

Read More