Author: kannadanewsnow09

ಬೆಂಗಳೂರು: 20 ವರ್ಷಗಳಿಂದ ತಲೆ ಮರೆಸಿಕೊಂಡಿದ್ದಂತ ಇಬ್ಬರು ಖತರ್ನಾಕ್ ಕಳ್ಳರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆ ಮೂಲಕ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯ ವ್ಯಾಪ್ತಿಯ ಕೈಗಾರಿಕಾ ಪ್ರದೇಶದಲ್ಲಿ ಕಳ್ಳತನ ಮಾಡಿ ನಾಗರಾಜು ಹಾಗೂ ಶ್ರೀನಿವಾಸಲು ಎಂಬುವರು ಸಿಕ್ಕಿ ಬಿದ್ದಿದ್ದರು. ಅವರನ್ನು ಬಂಧಿಸಿ ಪೊಲೀಸರು ಜೈಲಿಗಟ್ಟಿದ್ದರು. ಜಾಮೀನಿನ ಮೇಲೆ ಹೊರಬಂದಿದ್ದಂತ ಇಬ್ಬರು, ಆ ಬಳಿಕ ನಾಪತ್ತೆಯಾಗಿದ್ದರು. ಉನ್ನತ ವ್ಯಾಸಂಗ ಮಾಡಿದ್ದಂತ ಆರೋಪಿಗಳಿಬ್ಬರು, ಪೊಲೀಸರಿಗೆ ಸಿಕ್ಕೇ ಇರಲಿಲ್ಲ. ಆಂಧ್ರಪ್ರದೇಶದಲ್ಲಿ ಹೋಂ ಗಾರ್ಡ್ ಕೆಲಸವನ್ನು ಶ್ರೀನಿವಾಸಲು ಮಾಡುತ್ತಿದ್ದರೇ, ಮತ್ತೋರ್ವ ಆರೋಪಿ ನಾಗರಾಜು ಬ್ಯಾಂಕ್ ಒಂದರಲ್ಲಿ ಕೆಲಸಕ್ಕೆ ಸೇರಿದ್ದನು. ಸಮನ್ಸ್ ನೀಡಿದರೂ ಆರೋಪಿಗಳು ಸಿಗದೇ ಪೊಲೀಸರು ಕನ್ ಫ್ಯೂಸ್ ಗೆ ಒಳಗಾಗಿದ್ದರು. ಇದೀಗ ಇಬ್ಬರು ಆರೋಪಿಗಳ ಸುಳಿವು ಪಡೆದು, ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯ ಪೊಲೀಸರು ಖತರ್ನಾಕ್ ಕಳ್ಳರನ್ನು ಬಂಧಿಸಿದ್ದಾರೆ. https://kannadanewsnow.com/kannada/man-attempts-suicide-by-jumping-off-building-in-bengaluru-after-being-harassed-by-company/ https://kannadanewsnow.com/kannada/women-mutual-fund-investment/

Read More

ಕಲಬುರಗಿ: “ಸಿಎಂ ಸಿದ್ದರಾಮಯ್ಯ ಅವರು 4 ಲಕ್ಷ ಕೋಟಿಗೂ ಹೆಚ್ಚಿನ ಮೊತ್ತದ ಐತಿಹಾಸಿಕ ಬಜೆಟ್ ಮಂಡನೆ ಮಾಡಿದ್ದಾರೆ. ಎಲ್ಲ ವರ್ಗದ ಜನರಿಗೂ ಸಮತೋಲನವಾಗಿ ಅನುದಾನ ಕೊಟ್ಟಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕಲಬುರಗಿಯಲ್ಲಿ ಶಿವಕುಮಾರ್ ಅವರು ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಶನಿವಾರ ಮಾತನಾಡಿದರು. ಈ ವೇಳೆ ಗ್ರಾಮೀಣಾಭಿವೃದ್ಧಿ ಸಚಿವರಾದ ಪ್ರಿಯಾಂಕ್ ಖರ್ಗೆ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಡಾ. ಅಜಯ್ ಸಿಂಗ್ ಅವರು ಉಪಸ್ಥಿತರಿದ್ದರು. “ಹೆಣ್ಣು ಕುಟುಂಬದ ಕಣ್ಣು ಎಂದು ಭಾವಿಸಿ ಮಹಿಳೆಯರಿಗೆ ಹೆಚ್ಚು ಶಕ್ತಿ ತುಂಬಬೇಕು ಎಂಬ ಉದ್ದೇಶದಿಂದ ನಾವು ಅನೇಕ ಕಾರ್ಯಕ್ರಮಗಳನ್ನು ನೋಡಿದ್ದೇವೆ. ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತರ ಬದುಕಿನಲ್ಲಿ ಪ್ರೋತ್ಸಾಹ ನೀಡುವ ಪ್ರಯತ್ನ ಮಾಡಿದ್ದೇವೆ. ಚುನಾವಣೆಗೂ ಮುನ್ನ ನಾವು ಕೊಟ್ಟ ಮಾತಿನಂತೆ ಪ್ರತಿ ವರ್ಷ 5 ಸಾವಿರ ಕೋಟಿ ಕೊಡುತ್ತಿದ್ದೇವೆ. ಕಳೆದ ವರ್ಷವೂ ಕೊಟ್ಟಿದ್ದೆವು. ಈ ವರ್ಷವೂ ಕೊಟ್ಟಿದ್ದೇವೆ. ಇಂದು ಜೇವರ್ಗಿಯಲ್ಲಿ 1 ಸಾವಿರ ಕೋಟಿ ಮೊತ್ತದ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಗುವುದು. ನೀರಾವರಿ ಯೋಜನೆ…

Read More

ಬೆಂಗಳೂರು: ನಗರದಲ್ಲಿ ಕಂಪನಿಯೊಂದರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೊಬ್ಬ ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ಜೆಪಿ ನಗರದ 7ನೇ ಹಂತದಲ್ಲಿ ನಡೆದಿದೆ. ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದಂತ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನ ಜೆಪಿ ನಗರದ 7ನೇ ಹಂತದಲ್ಲಿರುವಂತ ಖಾಸಗಿ ಕಂಪನಿಯೊಂದರಲ್ಲಿ ನಂದೀಶ್ ಎಂಬಾತ ಕೆಲಸ ಮಾಡುತ್ತಿದ್ದರು. ಅವರನ್ನು ದೇವನಹಳ್ಳಿಗೆ ವರ್ಗಾವಣೆ ಮಾಡಲಾಗಿತ್ತು. ಅಲ್ಲದೇ ಕಳೆದ ಒಂದು ತಿಂಗಳಿನಿಂದ ಸ್ಯಾಲರಿ ಕೂಡ ನೀಡದೇ ಕಿರುಕುಳ ನೀಡುತ್ತಿತ್ತಂತೆ. ಇದೇ ಕಾರಣಕ್ಕೆ ಕಂಪನಿಯ ಕಿರುಕುಳಕ್ಕೆ ಬೇಸತ್ತು ಇಂದು ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ನಂದೀಶ್ ಯತ್ನಿಸಿದ್ದಾನೆ. ಕಂಪನಿಯ ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದಂತ ನಂದೀಶ್ ನ ಬೆನ್ನು ಮೂಳೆ ಮುರಿತಗೊಂಡಿದೆ. ಹೀಗಾಗಿ ಅವರನ್ನು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಈಗ ನಂದೀಶ್ ಸ್ಥಿತಿ ಗಂಭೀರವಾಗಿರೋದಾಗಿ ಹೇಳಲಾಗುತ್ತಿದೆ. https://kannadanewsnow.com/kannada/chitradurga-three-farmers-fall-ill-after-hunger-strike-demanding-filling-of-all-tanks-including-gayatri-dam/ https://kannadanewsnow.com/kannada/women-mutual-fund-investment/

Read More

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿ ಗಾಯತ್ರಿ ಡ್ಯಾಂ ಸೇರಿದಂತೆ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವಂತ ರೈತರು ನಡೆಸುತ್ತಿರುವಂತ ಉಪವಾಸ ಸತ್ಯಾಗ್ರಹ ತೀವ್ರಗೊಂಡಿದೆ. ಈವರೆಗೆ ಮೂವರು ರೈತರು ಅಸ್ವಸ್ಥಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿ ಗಾಯತ್ರಿ ಡ್ಯಾಂ ಸೇರಿದಂತೆ ಎಲ್ಲಾ ಕೆರೆಗಳಿಗೆ ನೀರು ಹರಿಸುವಂತೆ ರೈತರು ಅಮರಣಾಂತರ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಇಂದಿಗೆ ಐದನೇ ದಿನಕ್ಕೆ ಅಮರಾಣಂತರ ಉಪವಾಸ ಸತ್ಯಾಗ್ರಹ ಕಾಲಿಟ್ಟಿದೆ. ಎರಡನೇ ದಿನಕ್ಕೆ ಕಾಲಿಟ್ಟಿದ್ದಂತ ಉಪವಾಸ ಸತ್ಯಾಗ್ರಹದ ಸಂದರ್ಭದಲ್ಲಿ 70 ವರ್ಷದ ರೈತ ಈರಣ್ಯ ಎಂಬುವರು ತೀವ್ರವಾಗಿ ಅಸ್ವಸ್ಥಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬಿಪಿ, ಶುಗರ್, ಆಯಾಸದಿಂದ ಅಸ್ವಸ್ಥಗೊಂಡಿದ್ದಂತ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ನಿನ್ನೆ ಹಿರಿಯೂರು ತಾಲ್ಲೂಕು ಕಚೇರಿ ಮುಂಭಾಗದಲ್ಲಿನ ರೈತರ ಅಮರಣಾಂತರ ಉಪವಾಸ ಸತ್ಯಾಗ್ರಹದ ವೇಳಎಯಲ್ಲಿ ರೈತ ಸಂಘದ ಅಧ್ಯಕ್ಷ ಕೆ.ಟಿ ತಿಪ್ಪೇಸ್ವಾಮಿ(48) ಅವರು ಅಸ್ವಸ್ಥಗೊಂಡಿದ್ದರು. ಆದರೂ ಪಟ್ಟು ಬಿಡದೇ ರೈತರು ಉಪವಾಸ…

Read More

ಕೊಪ್ಪಳ: ಜಿಲ್ಲೆಯಲ್ಲಿ ಪ್ರವಾಸಿಗರ ಮೇಲೆ ಹಲ್ಲೆ ನಡೆಸಿ, ಇಬ್ಬರು ಮಹಿಳೆಯರ ಮೇಲೆ ಗ್ಯಾಂಗ್ ರೇಪ್ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕೊಪ್ಪಳದ ಗಂಗಾವತಿಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಪ್ರವಾಸಿಗರ ಮೇಲೆ ಹಲ್ಲೆ ಹಾಗೂ ಇಬ್ಬರು ಮಹಿಳೆಯರ ಮೇಲೆ ಗ್ಯಾಂಗ್ ರೇಪ್ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದರು. ಮಾರ್ಚ್.6, 2025ರ ರಾತ್ರಿ 11 ಗಂಟೆಗೆ ನಡೆದಿದ್ದಂತ ಈ ಘಟನೆ ಸಂಬಂಧ ಇಂದು ಇಬ್ಬರು ಆರೋಪಿಗಳನ್ನು ಬಂದಿಸಿದ್ದಾರೆ. ಪ್ರವಾಸಿಗರ ಮೇಲೆ ಹಲ್ಲೆ, ಇಬ್ಬರು ಮಹಿಳೆಯರ ಮೇಲೆ ಗ್ಯಾಂಗ್ ರೇಪ್ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಿರುವಂತ ಪೊಲೀಸರು, ಪರಾರಿಯಾಗಿರುವಂತ ಮತ್ತೊಬ್ಬ ಆರೋಪಿಯ ಪತ್ತೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ. https://kannadanewsnow.com/kannada/court-issues-notice-to-three-bollywood-stars-for-calling-them-saffron-in-the-arena/ https://kannadanewsnow.com/kannada/women-mutual-fund-investment/

Read More

ಜೈಪುರ: ವಿಮಲ್ ಪಾನ್ ಮಸಾಲಾ ಕುರಿತು ತಪ್ಪು ಮಾಹಿತಿ ನೀಡಿದ ಆರೋಪದ ಮೇಲೆ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್ ಮತ್ತು ಜೆಬಿ ಇಂಡಸ್ಟ್ರೀಸ್ ಅಧ್ಯಕ್ಷರಿಗೆ ಜೈಪುರ-2 ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ವೇದಿಕೆ ನೋಟಿಸ್ ನೀಡಿದೆ. ಪಾನ್ ಮಸಾಲಾದ ಪ್ರತಿಯೊಂದು ಕಾಳು ಕೇಸರಿಯನ್ನು ಹೊಂದಿದೆ ಎಂದು ಜಾಹೀರಾತಿನಲ್ಲಿ ಮಾಡಿದ ಹೇಳಿಕೆಗಳಿಗೆ ಸಂಬಂಧಿಸಿದಂತೆ ಮಾರ್ಚ್ 19 ರಂದು ಹಾಜರಾಗುವಂತೆ ವೇದಿಕೆ ಅವರಿಗೆ ನೋಟಿಸ್ ನಲ್ಲಿ ಸೂಚಿಸಿದೆ ಎಂಬುದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಜಾಹೀರಾತಿನ ವಿರುದ್ಧ ನೀಡಿದ ದೂರಿನಲ್ಲಿ ಏನಿದೆ.? ಜೈಪುರ ನಿವಾಸಿ ಯೋಗೇಂದ್ರ ಸಿಂಗ್ ಬಡಿಯಾಲ್ ಸಲ್ಲಿಸಿದ ದೂರನ್ನು ಆಲಿಸಿದ ನಂತರ ಗ್ಯಾರ್ಸಿಲಾಲ್ ಮೀನಾ ಅವರ ಅಧ್ಯಕ್ಷತೆಯಲ್ಲಿ ಸದಸ್ಯರಾದ ಹೆಮ್ಲತಾ ಅಗರ್ವಾಲ್ ಅವರ ವೇದಿಕೆಯು ನೋಟಿಸ್ ನೀಡಿದೆ. ವಿಮಲ್ ಪಾನ್ ಮಸಾಲಾ ತಯಾರಿಸುವ ಜೆಬಿ ಇಂಡಸ್ಟ್ರೀಸ್ ತನ್ನ ಉತ್ಪನ್ನವನ್ನು ರಾಷ್ಟ್ರವ್ಯಾಪಿ ಪ್ರಚಾರ ಮಾಡುತ್ತದೆ ಎಂದು ದೂರುದಾರರು ಹೇಳಿದ್ದಾರೆ. “ಶಾರುಖ್ ಖಾನ್, ಅಜಯ್ ದೇವಗನ್ ಮತ್ತು…

Read More

ಬೆಂಗಳೂರು: 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಂದರ್ಭದಲ್ಲಿ ನೀಡುವಂತ ಜೀವಮಾನ ಸಾಧನೆ ಪ್ರಶಸ್ತಿ ಪ್ರಕಟವಾಗಿದೆ. ಈ ಬಾರಿ ಭಾರತೀಯ ಖ್ಯಾತ ಹೆಸರಾಂತ ಚನಚಿತ್ರ ನಟಿ ಶಬಾನಾ ಅಜ್ಮಿಗೆ ಈ ಪ್ರಶಸ್ತಿ ಸಂದಿದೆ. ಈ ಕುರಿತಂತೆ ನಡವಳಿಯನ್ನು ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಹೊರಡಿಸಿದ್ದಾರೆ. 2024-25ನೇ ಸಾಲಿನಲ್ಲಿ ಆಯೋಜಿಸಿರುವ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ “ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ ಸಮಿತಿಯನ್ನು ರಚಿಸಿ ಆದೇಶಿಸಲಾಗಿದ್ದ ಮೇರೆಗೆ ಈ ಆಯ್ಕೆ ಸಮಿತಿಯು ದಿನಾಂಕ:28/02/2025ರಂದು ಸಭೆ ಸೇರಿ ಅವಿರೋಧವಾಗಿ ಆಯ್ಕೆ ಮಾಡಿರುವ ಮೂವರು (03) ಸಂಭಾವ್ಯ ಗಣ್ಯರ ಪಟ್ಟಿಯನ್ನು ಲಗತ್ತಿಸುತ್ತಾ, ಸಭಾ ನಡವಳಿಯನ್ವಯ ಈ ಪೈಕಿ ಒಬ್ಬರನ್ನು 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ “ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ ಮಾಡಿ ಆದೇಶ ಹೊರಡಿಸುವಂತೆ ಮೇಲೆ ಓದಲಾದ ಕ್ರಮ ಸಂಖ್ಯೆ (2)ರ ಏಕಕಡತದಲ್ಲಿ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ಇವರು ಕೋರಿರುತ್ತಾರೆ. ಪುಸ್ತಾವನೆಯನ್ನು ಪರಿಶೀಲಿಸಿ ಈ ಕೆಳಕಂಡಂತೆ…

Read More

ಬೆಂಗಳೂರು: ತುಮಕೂರಿನಲ್ಲಿ ನಡೆದ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ನೀಡಿದ್ದ ಭರವಸೆಯಂತೆ ಬಜೆಟ್ ನಲ್ಲಿ ಪತ್ರಕರ್ತರಿಗೆ ಮುಖ್ಯಮಂತ್ರಿ ಮಾಧ್ಯಮ ಸಂಜೀವಿನಿ ಆರೋಗ್ಯ ಯೋಜನೆ‌ ಘೊಷಿಸಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಧನ್ಯವಾದ ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ನಿವೃತ್ತ ಪತ್ರಕರ್ತರ ಮಾಸಾಶನವನ್ನು 12 ಸಾವಿರದಿಂದ 15 ಸಾವಿರಕ್ಕೆ ಮತ್ತು ಅವಲಂಬಿತರಿಗೆ 6ಸಾವಿರದಿಂದ 7500ಕ್ಕೆ ಹೆಚ್ಚಳ ಮಾಡಿರುವುದಕ್ಕೂ ಧನ್ಯವಾದ ತಿಳಿಸಿದ್ದಾರೆ. ಸಂಘದ ಹಕ್ಕೊತ್ತಾಯಕ್ಕೆ ಸ್ಪಂದಿಸಿ ಈ ನಿಟ್ಟಿನಲ್ಲಿ ಬೇಡಿಕೆ ಈಡೇರಿಸಲು ಸಹಕರ ನೀಡಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರಾದ ಕೆ.ವಿ.ಪ್ರಭಾಕರ್ ಮತ್ತು ವಾರ್ತಾ ಇಲಾಖೆ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಅವರಿಗೂ ತಗಡೂರು ಧನ್ಯವಾದ ತಿಳಿಸಿದ್ದಾರೆ. ಆರೋಗ್ಯ ಯೋಜನೆಯನ್ನು ಮಾಧ್ಯಮ ಮಾನ್ಯತೆ ಪಡೆದ ಪತ್ರಕರ್ತರಿಗೆ ಮಾತ್ರ ಸೀಮಿತ ಮಾಡದೆ, ಮುಂದೆ ಎಲ್ಲಾ ಪತ್ರಕರ್ತರಿಗೆ ವಿಸ್ತರಿಸಲಿ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರು ಒತ್ತಾಯಿಸಿದ್ದಾರೆ.

Read More

ಬೆಂಗಳೂರು: ರಾಜ್ಯದ ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಎಂ ಸಿದ್ಧರಾಮಯ್ಯ ಸಿಹಿಸುದ್ದಿ ನೀಡಿದ್ದಾರೆ. ಬಿಸಿಯೂಟ ಕಾರ್ಯಕರ್ತೆಯರ ಗೌರವಧನವನ್ನು 1000 ಹೆಚ್ಚಳ ಮಾಡುವುದಾಗಿ ಘೋಷಿಸಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ 2025-26 ಅನ್ನು ಮಂಡಿಸುತ್ತಿದ್ದಾರೆ. ಈ ಬಜೆಟ್ ಭಾಷಣದ ವೇಳೆಯಲ್ಲಿ ರಾಜ್ಯದ ಸರ್ಕಾರಿ ಶಾಲಾ ಅತಿಥಿ ಶಿಕ್ಷಕರ ಗೌರವಧನವನ್ನು 2000 ಹೆಚ್ಚಳ ಮಾಡುತ್ತಿರುವುದಾಗಿ ಘೋಷಣೆ ಮಾಡಿದ್ದಾರೆ. ರಾಜ್ಯದ ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್ ಎನ್ನುವಂತೆ ಸಿಎಂ ಸಿದ್ಧರಾಮಯ್ಯ ಅವರು ಮಾಸಿಕ ಗೌರವಧನ 2000 ರೂಪಾಯಿಗಳನ್ನು ಹೆಚ್ಚಳ ಮಾಡುತ್ತಿರುವುದಾಗಿ ಬಜೆಟ್ ಭಾಷಣದಲ್ಲಿ ಘೋಷಣೆ ಮಾಡಿದರು.

Read More

ಬೆಂಗಳೂರು: ರಾಜ್ಯದ ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್ ಎನ್ನುವಂತೆ ಸಿಎಂ ಸಿದ್ಧರಾಮಯ್ಯ ಅವರು ಮಾಸಿಕ ಗೌರವಧನ 2000 ರೂಪಾಯಿಗಳನ್ನು ಹೆಚ್ಚಳ ಮಾಡುತ್ತಿರುವುದಾಗಿ ಬಜೆಟ್ ಭಾಷಣದಲ್ಲಿ ಘೋಷಣೆ ಮಾಡಿದರು. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ 2025-26 ಅನ್ನು ಮಂಡಿಸುತ್ತಿದ್ದಾರೆ. ಈ ಬಜೆಟ್ ಭಾಷಣದ ವೇಳೆಯಲ್ಲಿ ರಾಜ್ಯದ ಸರ್ಕಾರಿ ಶಾಲಾ ಅತಿಥಿ ಶಿಕ್ಷಕರ ಗೌರವಧನವನ್ನು 2000 ಹೆಚ್ಚಳ ಮಾಡುತ್ತಿರುವುದಾಗಿ ಘೋಷಣೆ ಮಾಡಿದ್ದಾರೆ.

Read More