Author: kannadanewsnow09

ಬೆಂಗಳೂರು : ತಮಿಳುನಾಡಿಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಲಾಗುವುದು ಹಾಗೂ ರಾಜ್ಯದ ಮುಂದಿನ ನಡೆ ಏನು ಎಂಬ ಕುರಿತು ಜುಲೈ 14 ರಂದು ಸರ್ವಪಕ್ಷ ಸಭೆ ನಡೆಸಿ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಈ ಕುರಿತು ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು. ಈ ಬಾರಿ ವಾಡಿಕೆ ಮಳೆ ಆಗುವುದೆಂಬ ಹವಾಮಾನ ಮುನ್ಸೂಚನೆ ಇದ್ದರೂ ಈ ವರೆಗೆ ಶೇ. 28 ರಷ್ಟು ಒಳಹರಿವಿನ ಕೊರತೆ ಇದೆ. ಇದನ್ನು CWRC ಸ್ಪಷ್ಟವಾಗಿ ನಮ್ಮ ನಿಲುವನ್ನು ಹೇಳಿದ್ದೆವು. ಜೊತೆಗೆ ಜುಲೈ ಅಂತ್ಯದ ವರೆಗೆ ಯಾವುದೇ ತೀರ್ಮಾನ ಮಾಡದಂತೆ ಮನವಿ ಮಾಡಿದ್ದೆವು. ಆದರೂ CWRC ಅವರು ಜುಲೈ 12 ರಿಂದ ಪ್ರತಿ ದಿನ ಒಂದು ಟಿಎಂಸಿ…

Read More

ಶಿವಮೊಗ್ಗ : ಶಿವಮೊಗ್ಗ ಅಪರ ಜಿಲ್ಲಾಧಿಕಾರಿಗಳ ಕಚೇರಿಯಿಂದ ಅಪರ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ನೇಮಕ ಮಾಡಲು 10 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿದ ಅನುಭವ ಹೊಂದಿರುವ ನ್ಯಾಯವಾದಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ತಮ್ಮ ವೈಯಕ್ತಿಕ ಮಾಹಿತಿಯೊಂದಿಗೆ (ಹೆಸರು, ವಯಸ್ಸು, ಹುಟ್ಟಿದ ದಿನಾಂಕ, ವಿದ್ಯಾರ್ಹತೆ, ನ್ಯಾಯವಾದಿಯಾಗಿ ನೋಂದಣಿ ಆಗಿರುವ ಬಗ್ಗೆ ನೋಂದಣಿ ಸಂಖ್ಯೆಯೊಂದಿಗೆ ವಿವರ, ಇತ್ಯಾದಿ) ಅರ್ಜಿ ಸಿದ್ದಪಡಿಸಿ ಜುಲೈ 23 ರ ಸಂಜೆ 05 ಗಂಟೆಯೊಳಗೆ ಜಿಲ್ಲಾಧಿಕಾರಿಗಳ ನ್ಯಾಯಾಂಗ ಶಾಖೆಯಲ್ಲಿ ಅರ್ಜಿ ಸಲ್ಲಿಸತಕ್ಕದ್ದು. ಹೆಚ್ಚಿನ ಮಾಹಿತಿಯನ್ನು ಕಚೇರಿಯ ಸಮಯದಲ್ಲಿ ನ್ಯಾಯಾಂಗ ಶಾಖೆಯನ್ನು ಖುದ್ದಾಗಿ ಹಾಗೂ ದೂರವಾಣಿ ಸಂಖ್ಯೆ: 08182-221100/221010 -9110642146 ರಲ್ಲಿ ಪಡೆಯಬಹುದು ಎಂದು ಅಪರ ಜಿಲ್ಲಾಧಿಕಾರಿಗಳು ಶಿವಮೊಗ್ಗ ತಿಳಿಸಿದ್ದಾರೆ. https://kannadanewsnow.com/kannada/steps-will-be-taken-to-remove-encroachments-on-hmt-land-across-the-country-union-minister-hd-kumaraswamy/ https://kannadanewsnow.com/kannada/dont-rename-ramanagara-district-mp-dr-cn-manjunath-to-cm/

Read More

ಹೈದರಾಬಾದ್: ತೀವ್ರ ಸಂಕಷ್ಟದ ಸ್ಥಿತಿಯಲ್ಲಿರುವ ಇಲ್ಲಿನ HMT- ಮಶೀನ್ & ಟೂಲ್ಸ್ (HMT MTL) ಘಟಕವೂ ಸೇರಿದಂತೆ ನಗರದಲ್ಲಿರುವ ಕಂಪನಿ ವ್ಯಾಪ್ತಿಯ ಎಲ್ಲಾ ಭೂಮಿಯ ರಕ್ಷಣೆಗೆ ಕ್ರಮ ವಹಿಸಲಾಗುವುದು ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಭರವಸೆ ನೀಡಿದ್ದಾರೆ. ಕಾರ್ಖಾನೆಗೆ ಭೇಟಿ ನೀಡಿದ ನಂತರ ಆಡಳಿತ ಮಂಡಳಿ ಹಾಗೂ ಕಾರ್ಮಿಕರ ಜತೆ ಮಾತುಕತೆ ನಡೆಸಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ನಾನು ಭಾರೀ ಕೈಗಾರಿಕೆ ಸಚಿವನಾಗಿ ಅಧಿಕಾರ ವಹಿಸಿಕೊಂಡ ಮೇಲೆ ಹೆಚ್ ಎಂಟಿ ಬಗ್ಗೆಯೇ ಸರಣಿ ಸಭೆಗಳನ್ನು ನಡೆಸಿದ್ದೇನೆ. ಕರ್ನಾಟಕದ ಬೆಂಗಳೂರು, ಹರಿಯಾಣದ ಪಿಂಜೋರ್ ನಲ್ಲಿರುವ ಘಟಕಗಳಿಗೆ ಭೇಟಿ ನೀಡಿದ್ದೇನೆ. ದೇಶದ ಎಲ್ಲಾ ಕಡೆಯಲ್ಲೂ ಹೆಚ್ ಎಂಟಿ ಘಟಕಗಳು ಒಂದೇ ರೀತಿಯ ಸಂಕಷ್ಟ ಎದುರಿಸುತ್ತಿವೆ ಎಂದು ಕುಮಾರಸ್ವಾಮಿ ಅವರು ಹೇಳಿದರು. ಅನೇಕ ಕಡೆ ಕಂಪನಿಗೆ ದೊಡ್ಡ ಪ್ರಮಾಣದಲ್ಲಿ ಭೂಮಿ ಇದೆ. ಕೆಲವಡೆ ಅಕ್ರಮ ಒತ್ತುವರಿ ಆಗಿದೆ. ಕಾನೂನು ಕ್ರಮದ ಮೂಲಕ ಒತ್ತುವರಿ ಭೂಮಿಯನ್ನು…

Read More

ಬೆಂಗಳೂರು: ರಾಮನಗರ ಜಿಲ್ಲೆಯನ್ನು ಮರುನಾಮಕರಣಗೊಳಿಸುವ ಸಂಬಂಧ ಸಿಎಂ ಸಿದ್ಧರಾಮಯ್ಯಗೆ ಪ್ರಸ್ತಾವನೆ ಸಲ್ಲಿಕೆಯಾಗಿತ್ತು. ಈ ಬೆನ್ನಲ್ಲೇ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡದಂತೆ ಸಿಎಂ ಸಿದ್ಧರಾಮಯ್ಯಗೆ ಸಂಸದ ಡಾ.ಸಿಎನ್ ಮಂಜುನಾಥ್ ಪತ್ರ ಬರೆದು ಆಗ್ರಹಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಪತ್ರ ಬರೆದಿರುವಂತ ಅವರು, ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಯೆ ಸಮಂಜಸವಾಗಿರುವುದಿಲ್ಲ. ರಾಮನಗರಕ್ಕೆ ಭಾವನಾತ್ಮಕ, ಧಾರ್ಮಿಕ, ಐತಿಹಾಸಿಕ ಹಾಗೂ ಪೌರಾಣಿಕ ಇತಿಹಾಸವಿದೆ. ಕ್ಲೋಸ್‌ಪೇಟೆಗೆ ರಾಮನಗರವೆಂದು ಮರುನಾಮಕರಣ ಮಾಡಿದವರು ರಾಜ್ಯದ ಹೆಸರಾಂತ ಮಾಜಿ ಮುಖ್ಯ ಮಂತ್ರಿಯವರಾದ ದಿವಂಗತ ಕೆಂಗಲ್ ಹನುಮಂತಯ್ಯನವರು ಎಂದಿದ್ದಾರೆ. ಧಾರ್ಮಿಕ ಗುರುಗಳಾದ ಅವಿ ಚುಂಚನಲಲಯ ಶ್ರೀ ಶ್ರೀ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮಿಜೀಯವರು ಹಾಗೂ ನಡೆದಾಡುವ ದೇವರೆಂದೇ ಪ್ರಸಿದ್ಧಿಯಾದ ಸಿದ್ದಗಂಗಾ ಮಠದ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಜೀಯವರು ರಾಮನಗರ ಜಿಲ್ಲೆಯವರು ಎಂದು ಹೇಳಿದ್ದಾರೆ. ಬೆಂಗಳೂರು ನಿರ್ಮಾತೃಗಳಾದ ನಾಡಪ್ರಭು ಕೆಂಪೆಗೌಡರು ಸಹ ಈ ಜಿಲ್ಲೆಗೆ ಸೇಲದವರು. ರಾಮನಗರ ಜಿಲ್ಲೆಯು ರಾಜ್ಯಕ್ಕೆ ಐದುಬಾಲ ಮುಖ್ಯಮಂತ್ರಿ ಪದವಿಯನ್ನು…

Read More

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಈಗಾಗಲೇ ಖುದ್ದು ಹಾಜರಾತಿಗೆ ವಿನಾಯ್ತಿ ನೀಡಲಾಗಿತ್ತು. ಈಗ ಮತ್ತೆ ಹೈಕೋರ್ಟ್ ಖುದ್ದು ಹಾಜರಾತಿಯಿಂದ ಬಿಎಸ್ ವೈಗೆ ವಿನಾಯ್ತಿ ನೀಡಿ ಮಧ್ಯಂತರ ಆದೇಶ ಹೊರಡಿಸಿದೆ. ಈ ಕುರಿತಂತೆ ಇಂದು ಹೈಕೋರ್ಟ್ ನ ಏಕಸದಸ್ಯ ಪೀಠವು ವಿಚಾರಣೆ ನಡೆಸಿತು. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ಪ್ರಕರಣದ ವಿಚಾರಣೆಯನ್ನು ಜುಲೈ.26ಕ್ಕೆ ನಿಗದಿ ಪಡಿಸಿದೆ. ಈ ಹಿನ್ನಲೆಯಲ್ಲಿ ಜುಲೈ.25ರವರೆಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ಇತರೆ ಆರೋಪಿಗಳಿಗೆ ಖುದ್ದು ಹಾಜರಾತಿಯಿಂದ ವಿನಾಯ್ತಿ ನೀಡಿ ಮಧ್ಯಂತರ ಆದೇಶವನ್ನು ನೀಡಿದೆ. ಇನ್ನೂ ಬಿಎಸ್ ಯಡಿಯೂರಪ್ಪ ಸೇರಿದಂತೆ ಇತರೆ ಆರೋಪಿಗಳ ಬದಲಿಗೆ ವಕೀಲರು ಹಾಜರಾಗಿ ವಿನಾಯ್ತಿ ಕೋರಲು ಅವಕಾಶ ಮಾಡಿಕೊಟ್ಟಿದೆ. ಜುಲೈ.25ರವರೆಗೆ ಬಿಎಸ್ ಯಡಿಯೂರಪ್ಪಗೆ ಖುದ್ದು ಹಾಜರಾತಿಯಿಂದ ವಿನಾಯ್ತಿ ನೀಡಿದೆ. ಅಂದಹಾಗೇ ಜುಲೈ.15ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಬೆಂಗಳೂರಿನ 1ನೇ ತ್ವರಿತ ನ್ಯಾಯಾಲಯವು ಸಮನ್ಸ್ ಜಾರಿಗೊಳಿಸಿತ್ತು. ಈ ಸಮನ್ಸ್ ಪ್ರಶ್ನಿಸಿ ಹೈಕೋರ್ಟ್ ಗೆ…

Read More

ಶಿವಮೊಗ್ಗ : ವಿವಿಧ ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ ಜುಲೈ.13ರ ನಾಳೆ ಶಿವಮೊಗ್ಗ ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ ಅಂತ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ನೀಡಿದೆ. ಈ ಕುರಿತಂತೆ ಮಾಹಿತಿ ನೀಡಿರುವಂತ ಮೆಸ್ಕಾಂ, ಶಿವಮೊಗ್ಗ ತಾಲ್ಲೂಕು ನಗರ ಉಪ ವಿಭಾಗ 1 ರಲ್ಲಿ ವಿದ್ಯಾನಗರ ಮುಖ್ಯ ರಸ್ತೆಯಲ್ಲಿನ ಹಳೆಯ ಕಮಬಗಳನ್ನು ಬದಲಿಸುವ ಕಾಮಗಾಗಿ ಕೈಗೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ನಾಳೆ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ ಅಂತ ತಿಳಿಸಿದೆ. ನಾಳೆ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ ಮಂಡ್ಲಿ ಘಟಕ-06ರ ವ್ಯಾಪ್ತಿಯಲ್ಲಿ 11 ಕೆವಿ ಮಾರ್ಗದ ನಿರ್ವಹಣೆ ಇರುವುದರಿಂದ ವಿದ್ಯಾನಗರ, ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶನಗರ, ಶಂಕರಮಠ ರಸ್ತೆ, ಹಳೆ ಹೊನ್ನಾಳಿ ರಸ್ತೆ, ಬಾಲ್‍ರಾಜ್ ಅರಸ್ ರಸ್ತೆ, ಮೆಹದಿನಗರ, ಬಾಪೂಜಿನಗರ, ಬಸವನಗುಡಿ, ವಿನಾಯಕನಗರ, ಅಮೀರ್ ಅಹ್ಮದ್ ಕಾಲೋನಿ, ಸೋಮಯ್ಯ ಬಡಾವಣೆ, ಟ್ಯಾಂಕ್ ಬಂಡ್ ರಸ್ತೆ, ಟ್ಯಾಂಕ್ ಮೊಹಲ್ಲಾ,…

Read More

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಹೈಕೋರ್ಟ್ ಗೆ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಲಾಗಿದ್ದಂತ ಅರ್ಜಿಯನ್ನು, ಪ್ರಜ್ವಲ್ ರೇವಣ್ಣ ಅವರು ಹಿಂಪಡೆದಿದ್ದಾರೆ. ಇಂದು ಹೈಕೋರ್ಟ್ ನಲ್ಲಿ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಪೀಠವು, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪರ ವಕೀಲರಿಗೆ ಸೆಷನ್ಸ್ ಕೋರ್ಟ್ ನಲ್ಲೇ ಅರ್ಜಿ ಸಲ್ಲಿಸುವುದಕ್ಕೆ ಅವಕಾಶ ನೀಡಿತು. ಈ ಹಿನ್ನಲೆಯಲ್ಲಿ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಗೆ ಸಲ್ಲಿಸಿದ್ದಂತ ಅರ್ಜಿಯನ್ನು ಪ್ರಜ್ವಲ್ ರೇವಣ್ಣ ಪರ ವಕೀಲರು ಹಿಂಪಡೆದರು. ಈ ಬಳಿಕ ಸೆಷನ್ಸ್ ಕೋರ್ಟ್ ನಲ್ಲಿ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸೋ ಸಾಧ್ಯತೆ ಇದೆ. ಅಂದಹಾಗೇ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವಂತ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ಇದ್ದಾರೆ. https://kannadanewsnow.com/kannada/request-for-separate-ministry-to-address-the-problems-of-nris-vice-president-dr-arathi-krishna/ https://kannadanewsnow.com/kannada/big-relief-for-kannada-power-tv-supreme-court-stays-order-to-stop-telecast/

Read More

ಶಿವಮೊಗ್ಗ : ಅನಿವಾಸಿ ಕನ್ನಡಿಗರ ಅವಶ್ಯಕತೆಗಳು-ಸಮಸ್ಯೆಗಳಿಗೆ ಸ್ಪಂದಿಸಲು ಪ್ರತ್ಯೇಕವಾದ ಒಂದು ಸಚಿವಾಲಯ ಪ್ರಾರಂಭಿಸಲು ಸರ್ಕಾರಕ್ಕೆ ಪ್ರಣಾಳಿಕೆ ಸಲ್ಲಿಸಲಾಗಿದ್ದು, ಈ ಕುರಿತು ನೀತಿ-ನಿಯಮಾವಳಿಗಳನ್ನು ರೂಪಿಸಲಾಗುತ್ತಿದೆ ಎಂದು ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ತಿಳಿಸಿದರು. ಜು.12 ರಂದು ಜಿಲ್ಲೆಯ ಅನಿವಾಸಿ ಕನ್ನಡಿಗರು ಹಾಗೂ ಕುಟುಂಬದವರಿಂದ ಅಹವಾಲು/ದೂರುಗಳನ್ನು ಸ್ವೀಕರಿಸಲು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅನಿವಾಸಿ ಭಾರತೀಯ ಸಮಿತಿಯನ್ನು ರಾಜ್ಯದ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ 2008 ರಲ್ಲಿ ಸ್ಥಾಪಿಸಲಾಗಿದೆ. ವಿಶ್ವದೆಲ್ಲೆಡೆ ನೆಲೆಸಿರುವ ಅನಿವಾಸಿ ಕನ್ನಡಿಗರ ಆಕಾಂಕ್ಷೆ, ಅವಶ್ಯಕತೆ ಮತ್ತು ನಿರೀಕ್ಷೆಗಳನ್ನು ಗಮನದಲ್ಲಿ ಇಟ್ಟುಕೊಂಡು 2016-17 ನೇ ಸಾಲಿನಲ್ಲಿ ಅನಿವಾಸಿ ಭಾರತೀಯ ನೀತಿಯನ್ನು ಹೊರತರಲಾಗಿದೆ. ಅನಿವಾಸಿ ಕನ್ನಡಿಗರು ಹಲವಾರು ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ವಿಶೇಷವಾಗಿ ದುಡಿಯುವ ವರ್ಗ ಹೆಚ್ಚಿನ ತೊಂದರೆ ಎದುರಿಸುತ್ತಾರೆ. ಗಲ್ಫ್ ದೇಶಗಳಿಗೆ ತೆರಳಿದ ಅನಿವಾಸಿ ಕನ್ನಡಿಗರಿಂದ ಪ್ರತಿನಿತ್ಯ ಒಂದಲ್ಲ ಒಂದು ಸಮಸ್ಯೆ ಹೊತ್ತ ಕರೆಗಳು ಬರುತ್ತಿರುತ್ತವೆ. ನಕಲಿ ಏಜೆನ್ಸಿ ಮೂಲಕ ತೆರಳಿದ ದುಡಿಯುವ ವರ್ಗ ಅಲ್ಲಿ ತೊಂದರೆಗಳೊಳಗಾಗಿ,…

Read More

ಬೆಂಗಳೂರು: ಕರ್ನಾಟಕ ಹೈಕೋರ್ಟ್ ನಿಂದ ಕನ್ನಡದ ಪವರ್ ಟಿವಿ ಪ್ರಸಾರ ಸ್ಥಗಿತಕ್ಕೆ ಆದೇಶಿಸಲಾಗಿತ್ತು. ಈ ಆದೇಶವನ್ನು ಪ್ರಶ್ನಿಸಿ ಪವರ್ ಟಿವಿ ಆಡಳಿತ ಮಂಡಳಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಇದೀಗ ಸುಪ್ರೀಂ ಕೋರ್ಟ್ ನಿಂದ ಹೈಕೋರ್ಟ್ ನೀಡಿದ್ದಂತ ಪ್ರಸಾರ ಸ್ಥಗಿತದ ಆದೇಶಕ್ಕೆ ತಡೆ ನೀಡಿ, ಬಿಗ್ ರಿಲೀಫ್ ನೀಡಿದೆ. ಈ ಹಿಂದೆ ಪವರ್ ಟೀವಿ ಮೇಲೆ ಹೈಕೋರ್ಟ್ ಚಾಟಿ ಬೀಸಿತ್ತು. ಲೈಸೆನ್ಸ್ ರಿನಿವಲ್ ಮಾಡದ ಗಂಭೀರ ಆರೋಪದ ಹಿನ್ನಲೆಯಲ್ಲಿ ಪವರ್‌ ಟಿ ವಿ ಕಾರ್ಯ ಪ್ರಸಾರ ಚಟುವಟಿಕೆ ಸ್ಥಗಿತಕ್ಕೆ ಹೈಕೋರ್ಟ್‌ ಆದೇಶ ಮಾಡಿತ್ತು. ಕೇಬಲ್ ಟೆಲಿವಿಷನ್ ನೆಟ್‌ವರ್ಕ್‌ಗಳ (ನಿಯಂತ್ರಣ) ಕಾಯಿದೆ ಉಲ್ಲಂಘನೆ ಮಾಡಲಾಗಿದೆ. ತಕ್ಷಣದಿಂದಲೇ ಚಾನೆಲ್‌ನಲ್ಲಿ ಸುದ್ದಿಗಳು ಸೇರಿ ಯಾವುದೇ ಪ್ರಸಾರ ಮಾಡಬಾರದು ಅಂತ ಹೈಕೋರ್ಟ್ ನ್ಯಾಯಮೂರ್ತಿ. ಎಸ್‌ ಆರ್‌ ಕೃಷ್ಣಕುಮಾರ್‌ ರ ಏಕಸದಸ್ಯ ಪೀಠ ಆದೇಶ ಮಾಡಿದ್ದರು. ಜೆಡಿಎಸ್‌ ವಿಧಾನ ಪರಿಷತ್‌ ಮಾಜಿ ಸದಸ್ಯ ಎಚ್‌ ಎಂ ರಮೇಶ್‌ ಗೌಡರ ಪತ್ನಿ ಡಾ.ಎ ರಮ್ಯಾ ರಮೇಶ್‌ & ಹಿರಿಯ ಐಪಿಎಸ್‌ ಅಧಿಕಾರಿ ಬಿ ಆರ್‌ ರವಿಕಾಂತೇಗೌಡ ಅರ್ಜಿಯನ್ನು ಹೈಕೋರ್ಟ್…

Read More

ಬೆಂಗಳೂರು: ರಾಜ್ಯದ ಕೆಲ ಕಚೇರಿಗಳಲ್ಲಿ ಇ-ಆಫೀಸ್ ಅನುಷ್ಠಾನಗೊಳಿಸಿಲ್ಲ. ರಾಜ್ಯಾಧ್ಯಂತ ಸರ್ಕಾರಿ ಕಚೇರಿಗಳಲ್ಲಿ ಇ-ಆಫೀಸ್ ಕಡ್ಡಾಯಗೊಳಿಸಿದ್ದರೂ, ಕೆಲ ಅಧಿಕಾರಿಗಳು ಜಾರಿಗೊಳಿಸುವಲ್ಲಿ ನಿರ್ಲಕ್ಷ್ಯ ತೋರಿದ್ದರು. ಇವರಿಗೆ ಬಿಗ್ ಶಾಕ್ ಎನ್ನುವಂತೆ ಕಂದಾಯ ಇಲಾಖೆಯು ಇ-ಆಫೀಸ್ ಅನುಷ್ಠಾನಗೊಳಿಸದಂತ ಅಧಿಕಾರಿಗಳಿಗೆ ನೋಟಿಸ್ ನೀಡೋದಕ್ಕೆ ಮುಂದಾಗಿದೆ. ಹೌದು ಈ ಸಂಬಂಧ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು, ಕಂದಾಯ ಇಲಾಖೆಯ ಉನ್ನತ ಅಧಿಕಾರಿಗಳ ಜೊತೆಗೆ ಮಹತ್ವದ ಸಭೆ ನಡೆಸಿ, ಚರ್ಚಿಸಿದ್ದಾರೆ. ಇ- ಆಫೀಸ್ ಅನ್ನು ನಾಡಕಚೇರಿಗೂ ವಿಸ್ತರಿಸುವ ಹಾಗೂ ತಾಲೂಕು ಮಟ್ಟದಲ್ಲಿ ಈವರೆಗೆ ಇ-ಆಫೀಸನ್ನು ಅನುಷ್ಠಾನಗೊಳಿಸದ ಅಧಿಕಾರಿಗಳಿಗೆ ನೊಟೀಸ್ ಜಾರಿಗೊಳಿಸುವ ಸಂಬಂಧ ಇಂದು ಅಧಿಕಾರಿಗಳ ಜೊತೆ ಚರ್ಚಿಸಲಾಯಿತು. https://kannadanewsnow.com/kannada/will-discuss-cauvery-water-release-to-tamil-nadu-with-legal-experts-dk-shivakumar/ https://kannadanewsnow.com/kannada/aparnas-departed-aparna-immersed-in-panchabhutas-still-only-a-memory-of-acha-kannada-narrator/

Read More