Author: kannadanewsnow09

ಬೀದರ್: ರಾಜ್ಯದಲ್ಲಿ ಬೆಚ್ಚಿ ಬೀಳುಸುವಂತ ಘಟನೆ ಎಂಬಂತೆ ಹಾಡಹಗಲೇ ತಹಶೀಲ್ದಾರ್ ಕಚೇರಿಯಲ್ಲೇ ಶಿರಸ್ತೆದಾರ್ ಮೇಲೆ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಹಲ್ಲೆ ನಡೆಸಿ, ಪರಾರಿಯಾಗಿರುವಂತ ಘಟನೆ ಬೀದರ್ ನಲ್ಲಿ ನಡೆದಿದೆ. ಬೀದರ್ ನ ತಹಶೀಲ್ದಾರ್ ಕಚೇರಿಯಲ್ಲೇ ಕರ್ತವ್ಯ ನಿರತ ಶಿರಸ್ತೆದಾರ್​ ಮೇಲೆ ಹಾಡಹಗಲೇ ಮಾರಣಾಂತಿಕವಾಗಿ ಚಾಕುವಿನಿಂದ ಇರಿದು ವ್ಯಕ್ತಿಯೊಬ್ಬ ಹಲ್ಲೆ ನಡೆಸಿರುವಂತ ಘಟನೆ ನಡೆದಿರುವುದಾಗಿ ತಿಳಿದು ಬಂದಿದೆ. ಬೀದರ್​ ತಹಶಿಲ್ದಾರ್​ ಕಚೇರಿಯಲ್ಲಿ ಆಹಾರ ಶಾಖೆಯ ಶಿರಸ್ತೇದಾರ ಆಗಿರುವ ಅನಿಲ್‌ಕುಮಾರ್ ವ್ಯಾಸ್, ಎಂಬುವವರ ಮೇಲೆ  ಅಮನ್ ಜುಬೇರ್ ಎಂಬಾತ ಚಾಕು ಇರಿದು ಪರಾರಿಯಾಗಿದ್ದಾನೆ. ಅಮನ್ ಜುಬೇದ್ ಚಾಕುವಿನಿಂದ ಶಿರಸ್ತೆದಾರ್ ಮೇಲೆ ಹಲ್ಲೆ ನಡೆಸೋದಕ್ಕೆ ಕಾರಣ ಏನು ಅಂತ ತಿಳಿದು ಬಂದಿಲ್ಲ. ಚಾಕು ಇರಿತಕ್ಕೆ ಒಳಗಾದಂತ ಶಿರಸ್ತೆದಾರ್ ಅನಿಲ್ ಕುಮಾರ್ ವ್ಯಾಸ್ ಅವರನ್ನು ಕೂಡಲೇ ಕಚೇರಿಯ ಸಿಬ್ಬಂದಿ ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಚಾಕು ಇರಿತದಿಂದ ಅನಿಲ್ ಕುಮಾರ್ ವ್ಯಾಸ ಅವರ ಎಡಗೈ, ಭಜಕ್ಕೆ ಗಂಭೀರ ಗಾಯವಾಗಿದೆ. ಇದೀಗ ಶಿರಸ್ತೆದಾರ್ ಅನಿಲ್ ಕುಮಾರ್ ವ್ಯಾಸ್ ಅವರನ್ನು…

Read More

ಬೆಂಗಳೂರು: ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಎಸ್.ಐ. ಟಿ ಖಜಾನೆ ಇಲಾಖೆಯಿಂದಲೇ 180 ಕೋಟಿ ವರ್ಗಾವಣೆ ಆಗಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಖಜಾನೆಯಿಂದ ವರ್ಗಾವಣೆಯಾಗಲು ಸಾಧ್ಯವಿಲ್ಲ. ಖಜಾನೆಯಿಂದ ಇಲಾಖೆಗೆ ಹಣ ಹೋಗಿರುತ್ತದೆ. ಅಲ್ಲಿ ಅವ್ಯವಹಾರವಾಗಿರುವ ಬಗ್ಗೆ ಎಸ್.ಐ. ಟಿ ತನಿಖೆ ಮಾಡುತ್ತಿದೆ. ಸಿಬಿಐ, ಎಸ್.ಐ ಟಿ ಮತ್ತು ಇ. ಡಿ. ವತಿಯಿಂದ ಮೂರು ತನಿಖೆಗಳಾಗುತ್ತಿವೆ. ತನಿಖೆ ವರದಿ ಇನ್ನೂ ಬಂದಿಲ್ಲ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ವಾಲ್ಮೀಕಿ ನಿಗಮ ಅವ್ಯವಹಾರ: ವರದಿ ಬಂದ ನಂತರ ಕ್ರಮ ಆರ್ಥಿಕ ಇಲಾಖೆ ಸಚಿವರಾಗಿರುವ ಮುಖ್ಯಮಂತ್ರಿಗಳು ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಬೇಕೆಂದು ಜಿ. ಟಿ .ದೇವೇಗೌಡರು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಬ್ಯಾಂಕುಗಳಲ್ಲಿ ಆಗುವ ಅವ್ಯವಹಾರಗಳಿಗೆಲ್ಲಾ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಪ್ರಧಾನಿಗಳು ರಾಜಿನಾಮೆ ನೀಡಬೇಕಲ್ಲ ಎಂದರು. ತನಿಖೆ ನಡೆಯುತ್ತಿದ್ದು, ಪ್ರಾಥಮಿಕ ವರದಿಯಾಗಲಿ ಅಂತಿಮ ವರದಿಯಾಗಲಿ ಬಂದಿಲ್ಲ. ಆರೋಪಪಟ್ಟಿ ಹಾಕಿದ ಮೇಲೆ ವರದಿ ಬರುತ್ತದೆ ಎಂದರು. ಖಜಾನೆಯಿಂದ ಹಣ ವರ್ಗಾವಣೆಯಾಗಿರುವುದು ಇಲಾಖೆಯ ಗಮನಕ್ಕೆ…

Read More

ಮೈಸೂರು : ಬಿಜೆಪಿಯವರು ರಾಜಕೀಯವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಅವರಿಗೆ ಮಾತ್ರ ರಾಜಕೀಯ ಮಾಡಲು ಬರುತ್ತದೆಯೇ? ನಮಗೂ ರಾಜಕೀಯವಾಗಿ ಪ್ರತಿರೋಧ ನೀಡಲು ತಿಳಿದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೂಡಾ ಹಗರಣದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ವಿ.ವೈ.ವಿಜಯೇಂದ್ರ ಅವರು ಮೈಸೂರಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳುತ್ತಿರುವ ಬಗ್ಗೆ ಮೇಲಿನಂತೆ ಪ್ರತಿಕ್ರಿಯೆ ನೀಡಿದ ಅವರು ಜೆ.ಪಿ. ನಡ್ಡಾ ಅವರ ಅಧ್ಯಕ್ಷತೆಯಲ್ಲಿಯೇ ಪ್ರತಿಭಟನೆ ಮಾಡಲಿ. ಮೂಡಾ ಬಗ್ಗೆ ತನಿಖೆ ಈಗಾಗಲೇ ನಡೆಯುತ್ತಿದೆ ಎಂದರು. ಕಾನೂನುಬಾಹಿರ ಎಂದಾದರೆ ದಾಖಲೆ ನೀಡಲಿ ಬದಲಿ ನಿವೇಶನ ನೀಡಿರುವುದು ಕಾನೂನುಬದ್ಧವಾಗಿದೆ ಎನ್ನುವುದು ನಮ್ಮ ವಾದ. ಅವರು ಕಾನೂನುಬಾಹಿರವಾಗಿದೆ ಎಂದು ಹೇಳುತ್ತಾರೆ. ಹಾಗಿದ್ದರೆ ತೋರಿಸಲಿ ಎಂದು ಹೇಳಿದರು. ಅಕ್ರಮವೇನಾಗಿದೆ ಜಿಲ್ಲಾಧಿಕಾರಿಗಳು 2005 ರಲ್ಲಿ ಭೂ ಪರಿವರ್ತನೆ ಮಾಡಿದ್ದು ನಿವೇಶನ ಮಾಡುವ ಮುನ್ನ ಜಮೀನು ಕೃಷಿ ಭೂಮಿಯೇ. ಮಲ್ಲಿಕಾರ್ಜುನ ಸ್ವಾಮಿ ನನ್ನ ಭಾವಮೈದುನ. 2010 ರಲ್ಲಿ ದಾನಪತ್ರ ಕೊಟ್ಟಿದ್ದಾರೆ. ಇದರಲ್ಲಿ ಅಕ್ರಮವೇನಾಗಿದೆ ಎಂದರು. ಮೂಡಾ ಸದಸ್ಯರೆಲ್ಲಾ ಏನು ಮಾಡುತ್ತಿದ್ದರು…

Read More

ನವದೆಹಲಿ: ಕರ್ನಾಟಕಕ್ಕೆ ಕಾವೇರಿ ನದಿ ನೀರು ವಿಚಾರದಲ್ಲಿ ಮತ್ತೆ ಶಾಕ್ ಅನ್ನು ಸಿಡಬ್ಲ್ಯೂಆರ್ ಸಿ ನೀಡಿದೆ. ಮತ್ತೆ ತಮಿಳುನಾಡಿಗೆ 1 ಟಿಎಂಸಿ ನೀರನ್ನು ಜುಲೈ.31ರವರೆಗೆ ಹರಿಸುವಂತೆ ಶಿಫಾರಸ್ಸು ಮಾಡಿ, ಶಾಕ್ ಮೇಲೆ ಶಾಕ್ ನೀಡಿದೆ. ಇಂದು ದೆಹಲಿಯ ಕಚೇರಿಯಲ್ಲಿ ನಡೆದಂತ ಸಭೆಯಲ್ಲಿ ಕರ್ನಾಟಕದ ವಾದ ಆಲಿಸಿ, ಕರ್ನಾಟಕದ ವಾದವನ್ನು ಕಾವೇರಿ ನದಿ ನೀರು ವಿಚಾರದಲ್ಲಿ ಪುರಸ್ಕರಿಸಿದಂತ CWRC ಮತ್ತೆ 1 ಟಿಎಂಸಿ ನೀರನ್ನು ಹರಿಸುವಂತೆ ಶಿಫಾರಸ್ಸು ಮಾಡಿದೆ. ಈ ಮೂಲಕ ಕರ್ನಾಟಕಕ್ಕೆ ಮತ್ತೆ ಶಾಕ್ ನೀಡಿದೆ. ಹೌದು ಕರ್ನಾಟಕ ಸರ್ಕಾರವು ತಮಿಳುನಾಡಿಗೆ ಜುಲೈ 31ರವರೆಗೆ ಪ್ರತಿದಿನ ಒಂದು ಟಿಎಂಸಿ ಅಡಿ ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ (CWRC)  ಶಿಫಾರಸು ಮಾಡಿದೆ. ದೆಹಲಿಯಲ್ಲಿ ಇಂದು ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ ಸಮಿತಿಯ 98ನೇ ಸಭೆಯಲ್ಲಿ ಈ ಶಿಫಾರಸು ಮಾಡಲಾಯಿತು. ಈಗಾಗಲೇ ಕಾವೇರಿ ಕೊಳ್ಳದಲ್ಲಿ ಮಳೆಯ ಕಾರಣ ಒಳ ಹರಿವಿನ ಪ್ರಮಾಣ ಹೆಚ್ಚಾಗುತ್ತಿದ್ದು, ಸ್ವಲ್ಪ ಮಟ್ಟಿಗೆ ನೀರು ಕೆ ಆರ್ ಎಸ್ ಡ್ಯಾಂಗೆ…

Read More

ಬೆಂಗಳೂರು: ರಾಜ್ಯಾಧ್ಯಂತ ದಿನೇ ದಿನೇ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ಎನ್ ವಿ ಬಿಡಿಸಿಪಿ, ಡೆಂಗ್ಯೂ ಜ್ವರ ಮುಂಜಾಗ್ರತೆ ಹಾಗೂ ನಿಯಂತ್ರಣಕ್ಕೆ ಹೆಚ್ಚುವರಿಯಾಗಿ ಈ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಖಡಕ್ ಸೂಚನೆ ನೀಡಿದೆ. ಈ ಸಂಬಂಧ ರಾಜ್ಯ ಆರೋಗ್ಯ ಇಲಾಖೆಯಿಂದ ಸುತ್ತೋಲೆ ಹೊರಡಿಸಿದ್ದು, ಪ್ರಸ್ತುತ ರಾಜ್ಯದ ಡೆಂಗಿ ಜ್ವರ ಪರಿಸ್ಥಿತಿ ಹಾಗೂ ಮಳೆಗಾಲದ ಹಿನ್ನೆಲೆಯಲ್ಲಿ, ಡೆಂಗಿ ಜ್ವರ ಪಕರಣಗಳ ಚಿಕಿತ್ಸೆ ಹಾಗೂ ಸಮರ್ಪಕ ನಿರ್ವಹಣೆಯು ಪ್ರಮುಖವಾಗಿದ್ದು, ಫಲಿತಾಂಶ ಆಧಾರಿತವಾಗಿರುವುದು ಅಗತ್ಯವಾಗಿದೆ. ಅದರಂತೆ, ಸಂಬಂಧಪಟ್ಟವರು ಈ ಕೆಳಕಂಡ ಹೆಚ್ಚುವರಿ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಿದೆ. 1. ರಾಜ್ಯದ ದೈನಂದಿನ ಡೆಂಗಿ ಜ್ವರ ಪರಿಸ್ಥಿತಿಯ ಸೂಕ್ಷ್ಮ ಮೇಲ್ವಿಚಾರಣೆ ಹಾಗೂ ಉಸ್ತುವಾರಿಗಾಗಿ, ಎನ್ ವಿ ಬಿ ಡಿಸಿ ಪಿ ವಿಭಾಗದಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ, ಆರೋಗ್ಯಸೌಧ, ಬೆಂಗಳೂರು, ಇಲ್ಲಿ ‘ಡೆಂಗಿ ವಾರ್ ರೂಮ್ ‘ಅನ್ನು ಸಕ್ರಿಯಗೊಳಿಸುವುದು. 2. ಎಲ್ಲಾ ಜಿಲ್ಲೆಗಳು / ಬಿಬಿಎಂಪಿ ವ್ಯಾಪ್ತಿಯ ಡೆಂಗಿ…

Read More

ಬೆಂಗಳೂರು: ರಾಜ್ಯದ ನೂರಾರು ಜನರು BPL ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆಗೆ ಅವಕಾಶ ಮಾಡಿಕೊಡಲಾಗಿದೆ ಅಂತ ನಾಮುಂದು, ತಾಮುಂದು ಅಂತ ಸೇವಾ ಕೇಂದ್ರಗಳಲ್ಲಿ ಮುಗಿ ಬಿದ್ದಿದ್ದರು. ಆದ್ರೇ ಇವರಿಗೆ ಶಾಕಿಂಗ್ ನ್ಯೂಸ್ ಎನ್ನುವಂತೆ ಹೊಸದಾಗಿ BPL ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿಲ್ಲ. ಆರಂಭವೂ ಆಗಿಲ್ಲ ಅಂತ ರಾಜ್ಯ ಆಹಾರ ಇಲಾಖೆ ಸ್ಪಷ್ಟ ಪಡಿಸಿದೆ. ವಿವಿಧ ಮಾಧ್ಯಮಗಳಲ್ಲಿ ಒಂದು ವರ್ಷದ ಬಳಿಕ ಆಹಾರ ಇಲಾಖೆಯಿಂದ ಹೊಸದಾಗಿ ಬಿಪಿಎಲ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಒಪ್ಪಿಗೆ ನೀಡಿದೆ. ಇಂದಿನಿಂದಲೇ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭಗೊಳ್ಳುತ್ತಿದೆ ಅನ್ನೋ ಸುದ್ದಿಗಳು ವೈರಲ್ ಆಗಿದ್ದವು. ಈ ಬಗ್ಗೆ ಆಹಾರ ಇಲಾಖೆಯಿಂದ ಸ್ಪಷ್ಟನೆಯ ಮಾಹಿತಿ ಬಿಡುಗಡೆ ಮಾಡಿದ್ದು, ಹೊಸದಾಗಿ ಬಿಪಿಎಲ್ ಕಾರ್ಡ್ ಗೆ ( BPL Ration Card ) ಅರ್ಜಿ ಸಲ್ಲಿಸೋದಕ್ಕೆ ಅವಕಾಶ ಮಾಡಿಕೊಟ್ಟಿಲ್ಲ. ಅರ್ಜಿ ಸಲ್ಲಿಕೆಯೂ ಆರಂಭಗೊಂಡಿಲ್ಲ ಅಂತ ಸ್ಪಷ್ಟ ಪಡಿಸಿದೆ. ಇನ್ನೂ ಇಂದಿನಿಂದ ಕೇವಲ ಬಡ ರೋಗಿಗಳು…

Read More

ಬೆಂಗಳೂರು: ಯಾರೂ ನಟ ದರ್ಶನ್ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ಅವರು ಜೈಲಿನಲ್ಲಿಯೂ ಮಂಕಾಗಿಲ್ಲ. ಈ ಮೊದಲು ಇದ್ದಂತ ಜೋಶ್ ನಲ್ಲಿಯೇ ನಟ ದರ್ಶನ್ ಇದ್ದಾರೆ ಅಂತ ನಟ ಧನ್ವೀರ್ ತಿಳಿಸಿದ್ದಾರೆ. ಇಂದು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಟ ದರ್ಶನ್ ನ್ಯಾಯಾಂಗ ಬಂಧನದಲ್ಲಿ ಇರುವುದರಿಂದ ಮಾತನಾಡುತ್ತಿಲ್ಲ. ಪೊಲೀಸರು, ಕಾನೂನು ತನ್ನ ಕೆಲಸ ಮಾಡುತ್ತಿದೆ ಎನ್ನುವಂತ ನಿಲುವನ್ನು ಹೊಂದಿದ್ದಾರೆ ಎಂದರು. ನಾನು ಮಾತನಾಡುವುದರಿಂದ ಸಮಸ್ಯೆ ಬಗೆ ಹರಿಯುವುದಿಲ್ಲ ಅಂತ ಹೇಳಿದ್ದಾರೆ. ನಟ ದರ್ಶನ್ ತಪ್ಪು ಮಾಡಿದ್ದರೇ ಶಿಕ್ಷೆಯಾಗಲೀ, ತಲೆ ಕೆಡಿಸಿಕೊಳ್ಳಲ್ಲ ಎಂದು ನಟ ಧನ್ವೀರ್ ಹೇಳಿದರು. ಸಿನಿಮಾ ಮತ್ತಿತರ ವಿಚಾರಗಳ ಬಗ್ಗೆ ದರ್ಶನ್ ಜೊತೆಗೆ ಚರ್ಚೆಯಾಗಿಲ್ಲ. ಆದರೇ ಕೆಲವೊಂದು ವಿಚಾರ ಇರುತ್ತೆ ಹೇಳಲು ಆಗುವುದಿಲ್ಲ. ಅಭಿಮಾನಿಗಳ ಬಗ್ಗೆ ನಟ ದರ್ಶನ್ ಗೆ ಸ್ವಲ್ಪವೂ ಕಾಳಜಿ ಕಡಿಮೆಯಾಗಿಲ್ಲ. ಯಾರು ಕುಗ್ಗುವಂತ ಪ್ರಶ್ನೇ ಇಲ್ಲ. ಜೈಲಿನಲ್ಲಿ ನಟ ದರ್ಶನ್ ಅದೇ ಜೋಶ್ ನಲ್ಲಿ ಇದ್ದಾರೆ ಎಂಬುದಾಗಿ ತಿಳಿಸಿದರು. https://kannadanewsnow.com/kannada/valmiki-scam-ed-takes-corporation-chairman-basanagouda-daddal-former-pa-pampanna-into-custody/…

Read More

ಬೆಂಗಳೂರು: ಇಂದಿನಿಂದ ಚಿಕಿತ್ಸೆಗಾಗಿ ಹೊಸ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭಗೊಂಡಿದೆ. ಈ ಮೂಲಕ ಚಿಕಿತ್ಸೆಗಾಗಿ ಹೊಸ ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ರಾಜ್ಯ ಆಹಾರ ಇಲಾಖೆಯಿಂದ ಮಾಹಿತಿ ನೀಡಿದ್ದು, ಬಡವರಿಗಾಗಿ ನೀಡಲಾಗುವಂತ ಬಿಪಿಎಲ್ ಪಡಿತರ ಚೀಟಿಗಾಗಿ ಹೊಸದಾಗಿ ಅರ್ಜಿಯನ್ನು ಕರೆಯಲಾಗಿದೆ ಎಂಬುದು ವದಂತಿಯಾಗಿದೆ. ಈಗ ಕೇವಲ ಚಿಕಿತ್ಸೆಗಾಗಿ ಮಾತ್ರವೇ ಬಿಪಿಎಲ್ ಕಾರ್ಡ್ ಅವಶ್ಯಕವಿದ್ದಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅಂತ ತಿಳಿಸಿದೆ. ಜುಲೈ.11ರ ಇಂದಿನಿಂದ ಆರೋಗ್ಯ ಸಮಸ್ಯೆಗಳ ಚಿಕಿತ್ಸೆಗಾಗಿ ಬೇಕಾಗುವ ಬಿಪಿಎಲ್ ಕಾರ್ಡ್ ಗಳಿಗೆ ಅರ್ಜಿಯನ್ನು ಕರೆಯಲಾಗಿದೆ. ಅಲ್ಲದೇ ಬಿಪಿಎಲ್ ಕಾರ್ಡ್ ಗಳಲ್ಲಿನ ಹೆಸರು, ವಿಳಾಸ ಹಾಗೂ ಇತರೆ ತಿದ್ದುಪಡಿಗೂ ಅವಕಾಶ ನೀಡಲಾಗಿದೆ ಅಂತ ಮಾಹಿತಿ ನೀಡಿದ್ದಾರೆ. https://kannadanewsnow.com/kannada/valmiki-scam-ed-takes-corporation-chairman-basanagouda-daddal-former-pa-pampanna-into-custody/ https://kannadanewsnow.com/kannada/breaking-silver-statue-worth-rs-20-lakh-stolen-from-muruga-mutt-in-chitradurga/

Read More

ಚಿತ್ರದುರ್ಗ: ರಾಜ್ಯದಲ್ಲಿ ಕ್ರೈಂ ತಡೆಗೆ ಪೊಲೀಸರು ಎಷ್ಟೇ ಕ್ರಮವಹಿಸಿದ್ರೂ, ಮರುಕಳಿಸುತ್ತಲೇ ಇದ್ದಾವೆ. ಹೀಗಿರುವಾಗ, ಸಾರ್ವಜನಿಕರನ್ನು ಜಾಗೃತಿಗೊಳಿಸುವಂತ ಕೆಲಸವನ್ನು ಹಿರಿಯೂರು ತಾಲ್ಲೂಕಿನ ಅಬ್ಬಿನಹೊಳೆ ಠಾಣೆಯ ಪೊಲೀಸರು ಕೈಗೊಂಡಿದ್ದಾರೆ. ಆ ಬಗ್ಗೆ ಮುಂದೆ ಓದಿ. ಈ ಕುರಿತಂತೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಧರ್ಮಪುರ ಹೋಬಳಿಯ ಅಬ್ಬಿನಹೊಳೆ ಠಾಣೆಯ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅದರಲ್ಲಿ ಅಬ್ಬಿನಹೊಳೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಗ್ರಾಮಗಳಲ್ಲಿ ಮನೆ ಕಳ್ಳತನ, ದೇವಸ್ಥಾನ ಕಳ್ಳತನ ಹಾಗೂ ಸರ ಕಳ್ಳತನ ಮತ್ತು ಕುರಿ-ದನಕರುಗಳ ಕಳ್ಳಕಾಕರ ಬಗ್ಗೆ, ಕಡ್ಡಾಯವಾಗಿ ಈ ಕೆಳಕಂಡ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವಂತೆ ಮನವಿ ಮಾಡಿದ್ದಾರೆ. ಅಬ್ಬಿನಹೊಳೆ ಪೊಲೀಸ್ ಠಾಣಾ ಭಾಗಗಳಲ್ಲಿ ಬೀಗ ಹಾಕಿರುವ ಮನೆಗಳು, ದೇವಸ್ಥಾನಗಳ ಕಳ್ಳತನ ಹೆಚ್ಚಾಗಿದ್ದು ನೀವು ಬೇರೆ ಊರಿಗೆ ಹೋಗುವ ಸಂದರ್ಭದಲ್ಲಿ ಅಕ್ಕ-ಪಕ್ಕದ ಮನೆಯವರಿಗೆ ತಿಳಿಸಿ, ರಾತ್ರಿ ವೇಳೆಯಲ್ಲಿ ಹೊರಗಡೆ ಲೈಟ್ ಗಳನ್ನು ಹಾಕಬೇಕು ಮತ್ತು ಇಂಟರ್ ಲಾಕ್ ಹಾಗೂ ಬಗರ್ ಅಲರಾಂ ಮತ್ತು ಸಿ.ಸಿ ಕ್ಯಾಮರ ಅಳವಡಿಸಿಕೊಳ್ಳಿ. ದೇವಸ್ಥಾನಗಳಲ್ಲಿ ದೇವಸ್ಥಾನದ ಕಮಿಟಿಯವರು…

Read More

ತುಮಕೂರು : “ರಾಜ್ಯ ಸರ್ಕಾರ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ತನಿಖೆ ನಡೆಸಲು ಎಸ್ಐಟಿ ರಚನೆ ಮಾಡಿದೆ. ಹೀಗಾಗಿ ಇ.ಡಿ ( ಜಾರಿ ನಿರ್ದೇಶನಾಲಯ) ದಾಳಿ ಮಾಡುವ ಅವಶ್ಯಕತೆ ಇರಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಮಾಜಿ ಸಚಿವ ನಾಗೇಂದ್ರ ಮನೆ ಸೇರಿ ಹಲವು ಕಡೆ ಇ.ಡಿ ದಾಳಿ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗಳಿಗೆ ನೊಣವಿನಕೆರೆ ಕಾಡಸಿದ್ದೇಶ್ವರ ಮಠದಲ್ಲಿ ಉತ್ತರಿಸಿದ ಅವರು “ಇಷ್ಟು ದೊಡ್ಡ ಮೊತ್ತದ ಹಗರಣ ಎಂದ ಮೇಲೆ ಬ್ಯಾಂಕ್ ನವರು ತನಿಖೆ ನಡೆಸುವ ಅಧಿಕಾರವಿದೆ. ಇ.ಡಿ ಅವರು ಅವಶ್ಯಕತೆ ಇರದಿದ್ದರೂ ಬಂದಿದ್ದಾರೆ” ಎಂದು ಹೇಳಿದರು. ಎಸ್ ಐಟಿ ರಚನೆ ಮಾಡಿದರೂ ಇ.ಡಿ ತನಿಖೆ ನಡೆಸಲು ಮುಂದುವರೆಯುತ್ತಿದೆ ಎಂದು ಕೇಳಿದಾಗ “ಇದರ ಬಗ್ಗೆ ಮಾತನಾಡಲು ಹೋಗುವುದಿಲ್ಲ. ನಾಗೇಂದ್ರ ಅವರದ್ದು ಯಾವುದೇ ತರದ ತಪ್ಪಿಲ್ಲ. ಕಳಂಕರಹಿತರಾಗಿ ಪ್ರಕರಣದಿಂದ ಹೊರಗಡೆ ಬರುತ್ತಾರೆ ಎನ್ನುವ ನಂಬಿಕೆ ಇದೆ” ಎಂದು ಹೇಳಿದರು. “ಈ ಹಿಂದೆ ಬಿಜೆಪಿ ಕಾಲದಲ್ಲಿಯೂ ಇಂತಹ ಪ್ರಕರಣ ನಡೆದಿರುವ ಉದಾಹರಣೆಗಳಿವೆ. ಬಹಳ ವ್ಯವಸ್ಥಿತವಾಗಿ ವಂಚನೆ ಮಾಡಿದ್ದಾರೆ.…

Read More